ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಸರ್ವೇ ನಂ. 24 ಮತ್ತು 25ರಲ್ಲಿ ಒಟ್ಟು 8 ಎಕರೆಯಲ್ಲಿ ಭತ್ತ ಬೆಳೆಯಲು ರೈತ ಲಕ್ಷಂತರ ರೂ. ಖರ್ಚು ಮಾಡಿದ್ದಾರೆ. ಜೊತೆಗೆ ರೈತ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದಾನೆ. ಈ ನಡುವೆ ಸತತ ಮಳೆಯಿಂದ ಭತ್ತ ನೆಲಕಚ್ಚಿದ್ದು, ಕಟಾವು ಮಾಡುವುದು ಕಷ್ಟ ಸಾಧ್ಯವಾಗಿದೆ. ಇದರಿಂದ ನೊಂದ ರೈತ ಲಕ್ಷ್ಮಣ ಅವರು ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದಾರೆ. ವಿಷಯ ತಿಳಿದ ಪಕ್ಕದ ಜಮೀನಿನವರು ರೈತನಿಗೆ ಬುದ್ಧಿವಾದ ಹೇಳಿ, ಅವಘಡ ತಪ್ಪಿಸಿದ್ದಾರೆ.
ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ತಾಲೂಕಿನಲ್ಲಿ ಭತ್ತ ಬೆಳೆದ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ, ತೆನೆ ಬಂದ ವೇಳೆ ಮಳೆಯಾಗಿದ್ದರಿಂದ ಭತ್ತದ ಬೆಳೆ ಕಟಾವು ಮಾಡಲು ಸಮಸ್ಯೆಯಾಗಿದೆ. ನಾಲ್ಕೈದು ದಿನದಿಂದ ಗಾಳಿ ಸಹಿತ ಮಳೆ ಸುರಿದು, ಭತ್ತದ ಬೆಳೆ ನೆಲಕಚ್ಚಿದೆ. ಕೆಲವೆಡೆ ಅರ್ಧದಷ್ಟು ನೆಲ ಕಚ್ಚಿದ್ದರೆ ಮತ್ತಷ್ಟು ಕಡೆ ಸಂಪೂರ್ಣ ಬೆಳೆ ನೆಲಕ್ಕುರುಳಿದೆ. ತಾಲೂಕಾದ್ಯಂತ ಭತ್ತದ ಬೆಳೆ ನೆಲಕಚ್ಚಿದ್ದು, ರೈತರು ಸಮಸ್ಯೆ ಎದುರಿಸುವಂತಾಗಿದೆ. ದೀಪಾವಳಿ ನಂತರ ಭತ್ತದ ಬೆಳೆ ಕಟಾವು ಮಾಡಬೇಕು ಎಂದುಕೊಂಡಿದ್ದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಜಗತ್ತಿನಲ್ಲಿ ಅತಿ ದೊಡ್ಡ ಭತ್ತ ಉತ್ಪಾದನೆ ರಾಷ್ಟ್ರದಲ್ಲೊಂದು ಎಂಬ ಹೆಗ್ಗಳಿಕೆ ಹೊಂದಿರುವ ಫಿಲಿಪೈನ್ಸ್‌ನೊಂದಿಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಭತ್ತದ ತಳಿ ಸಂಶೋಧನೆಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಂದಿಗೆ ಕೃಷಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.
ರಾಜ್ಯದ ಭತ್ತ ಉತ್ಪಾದನಾ ಕ್ಷೇತ್ರದಲ್ಲಿ ಮಂಡ್ಯ ಜಿಲ್ಲೆಯೂ ಪ್ರಮುಖ ಸ್ಥಾನ ಹೊಂದಿದೆ. ಈ ನಡುವೆ ಭತ್ತ ಬೆಳೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆ ಜೊತೆಗೆ ಇಳುವರಿ ಕುಂಠಿತವಾಗುತ್ತಿರುವುದು ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಆದಾಗ್ಯೂ ಭತ್ತದ ಉತ್ಪಾದನೆಗೆ ಹೆಚ್ಚಿನ ರೈತರು ಒಲವು ತೋರುತ್ತಾರೆ. ಈ ಹಿನ್ನೆಲೆಯಲ್ಲಿ ಭತ್ತದಲ್ಲಿ ಹೊಸ ತಳಿ ಸಂಶೋಧನೆಗೆ ಮಂಡ್ಯ ಕೃಷಿ ವಿವಿ ಫಿಲಿಪೈನ್ಸ್‌ನ ಇಂಟರ್‌ನ್ಯಾಷನಲ್ ರೈಸ್ ರಿಸರ್ಚ್ ಇನ್ಶಿಟ್ಯೂಟ್(ಐಆರ್‌ಆರ್‌ಐ)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಕರ್ನಾಟಕದಲ್ಲಿ 1.2 ದಶಲಕ್ಷ ಹೆಕ್ಟೇರ್‌ನಲ್ಲಿ ಭತ್ತದ ಬೆಳೆ
ಸಚಿವ ಎನ್.ಚಲುವರಾಯಸ್ವಾಮಿ ಅವರ ಸೂಚನೆ ಮೇರೆಗೆ ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿಕುಮಾರ್ ವಿಸ್ತಾರವಾದ ಪ್ರಸ್ತಾವನೆ ಸಿದ್ಧಪಡಿಸಿ ಐಆರ್‌ಆರ್‌ಐಗೆ ಸಲ್ಲಿಸಿದ್ದಾರೆ. ಅದರಂತೆ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೃಷಿ ಅಭಿವೃದ್ಧಿ ಮತ್ತು ರೈತರನ್ನ ಉನ್ನತೀಕರಿಸಲು ವಿ.ಸಿ ಫಾರ್ಮ್‌ನಲ್ಲಿ ಕೃಷಿ ವಿವಿ ಸ್ಥಾಪಿಸಲಾಗಿದೆ. ಭಾರತ ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಜನರಿಗೆ ಅಕ್ಕಿ ಪ್ರಧಾನ ಆಹಾರ ಮತ್ತು ಪೋಷಣೆಯ ಪ್ರಾಥಮಿಕ ಮೂಲವಾಗಿದೆ. ಇದು ಆದಾಯ ಮತ್ತು ಉದ್ಯೋಗದ ಪ್ರಮುಖ ಮೂಲ. ಮಾತ್ರವಲ್ಲದೆ ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿದೆ. ಕರ್ನಾಟಕದಲ್ಲಿ ಸುಮಾರು 1.2 ದಶಲಕ್ಷ ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುತ್ತಿದ್ದು, ಪ್ರತಿ ಹೆಕ್ಟೇರ್‌ಗೆ ಸರಾಸರಿ 3 ಟನ್ ಇಳುವರಿ ನೀಡುತ್ತದೆ. ಇದರಲ್ಲಿ ಶೇ.44ರಷ್ಟು ನೀರಾವರಿ ಮತ್ತು ಶೇ.56ರಷ್ಟು ಮಳೆಯಾಶ್ರಿತವಾಗಿದೆ.
ಪ್ರಸ್ತುತ ಕರ್ನಾಟಕದಲ್ಲಿ ಭತ್ತದ ಸಂಶೋಧನೆಯು ವಿ.ಸಿ ಫಾರ್ಮ್ ಹಾಗೂ ಗಂಗಾವತಿ ಕೇಂದ್ರದಲ್ಲಿ ನಡೆಯುತ್ತಿದೆ. 1969ರಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ವಿ.ಸಿ ಫಾರ್ಮ್‌ನಲ್ಲಿ ಅಖಿಲ ಭಾರತ ಸಂಯೋಜಿತ ಭತ್ತದ ಸುಧಾರಣಾ ಯೋಜನೆ ಪ್ರಾರಂಭಿಸಿತು. ಇದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿದೆ. ಗಮನಾರ್ಹ ವಿಷಯವೆಂದರೆ ಭಾರತದ ಮೊದಲ ಹೈಬ್ರಿಡ್ ಭತ್ತದ ವಿಧವಾದ ಕೆಆರ್‌ಎಚ್-2 ಅನ್ನು ಫಿಲಿಪೈನ್ಸ್‌ನ ಐಆರ್‌ಆರ್‌ಐನಿಂದ ಜರ್ಮ್‌ಪ್ಲಾಸಂ ಬಳಸಿ ವಿ.ಸಿ ಫಾರ್ಮ್‌ನಲ್ಲಿ ಅಭಿವೃದ್ಧಿಪಡಿಸಲಾಗಿತ್ತು.
ಹವಾಮಾನ ಬದಲಾವಣೆ, ನೀರಿನ ಕೊರತೆ, ಹೆಚ್ಚುತ್ತಿರುವ ಕೃಷಿ ವೆಚ್ಚ, ಕೀಟ ಮತ್ತು ರೋಗಗಳ ಒತ್ತಡ ಮತ್ತು ಕುಗ್ಗುತ್ತಿರುವ ಭತ್ತದ ವಿಸ್ತೀರ್ಣದಂತಹ ಸವಾಲು ಎದುರಿಸಲು ಹಾಗೂ ಉತ್ಪಾದಕತೆ ಹೆಚ್ಚಿಸಲು ವಿ.ಸಿ ಫಾರ್ಮ್ ವಿಜ್ಞಾನಿಗಳು 45 ಭತ್ತದ ಪ್ರಭೇದ, 2 ಮಿಶ್ರತಳಿ ಮತ್ತು 47 ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ಆದರೆ ಈ ಪ್ರಯತ್ನಗಳ ಹೊರತಾಗಿಯೂ ಕರ್ನಾಟಕದಲ್ಲಿ ಭತ್ತದ ಕೃಷಿ ನೀರಿನ ಕೊರತೆ, ಕೀಟ ಮತ್ತು ರೋಗಗಳ ಹರಡುವಿಕೆ, ಅಜೈವಿಕ ಒತ್ತಡ, ಕಾರ್ಮಿಕರ ಕೊರತೆಯಿಂದ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ಹೊಸ ತಳಿ ಸಂಶೋಧನೆಗೆ ಐಆರ್‌ಆರ್‌ಐ ನೆರವಿನ ಅವಶ್ಯಕತೆ ಇದೆ ಎಂದಿದ್ದಾರೆ.
ಗುಣಮಟ್ಟದ ಅಕ್ಕಿ ಪೂರೈಕೆ ಗುರಿ
ಕುಗ್ಗುತ್ತಿರುವ ಕೃಷಿ ಪ್ರದೇಶಗಳ ನಡುವೆಯೂ ಭತ್ತಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಹವಾಮಾನ, ಸ್ಮಾರ್ಟ್, ಹೆಚ್ಚಿನ ಇಳುವರಿ ನೀಡುವ, ಕೀಟ-ನಿರೋಧಕ ಮತ್ತು ಪೋಷಕಾಂಶ-ದಟ್ಟವಾದ ಭತ್ತದ ಪ್ರಭೇದಗಳು ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಫಿಲಿಪೈನ್ಸ್‌ನ ಐಆರ್‌ಆರ್‌ಐ ಜೊತೆ ಹೊಸ ಸಹಯೋಗದ ಸಂಶೋಧನಾ ಉಪಕ್ರಮದ ಅವಶ್ಯಕತೆ ಇದೆ. ಇದರಿಂದ ಉತ್ತಮ ಗುಣಮಟ್ಟದ ಸಂಶೋಧನೆಗೆ ಅನುವು ಮಾಡಿಕೊಡುವುದರ ಜೊತೆಗೆ ಭಾರತದ ಕೃಷಿ ವಲಯಕ್ಕೆ ವಿಶಾಲ ಅವಕಾಶ ತೆರೆಯುತ್ತದೆ.
ಒಪ್ಪಂದದ ಮೂಲಕ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಅಧ್ಯಯನ ಮಾಡುವುದು ಮತ್ತು ಹೆಚ್ಚಿಸುವುದು. ಹವಾಮಾನ-ನಿರೋಧಕ ಮತ್ತು ಪೋಷಕಾಂಶ-ಭರಿತ ಮಿಶ್ರತಳಿ ಅಭಿವೃದ್ಧಿಪಡಿಸುವುದು. ಉತ್ತಮ ಬೆಳೆ ನಿರ್ವಹಣೆ ಪದ್ಧತಿ ಉತ್ತೇಜಿಸುವುದು. ಭತ್ತದ ಸಂಶೋಧನೆ ಮತ್ತು ಕೃಷಿಯಲ್ಲಿ ವಿಜ್ಞಾನಿಗಳು ಮತ್ತು ರೈತರನ್ನ ಸಬಲೀಕರಣಗೊಳಿಸಬಹುದು. ಪರಿಣಾಮ ಫಿಲಿಪೈನ್ಸ್‌ಗೆ ಉತ್ತಮ ಗುಣಮಟ್ಟದ ಅಕ್ಕಿಯನ್ನು ರಫ್ತು ಮಾಡುವ ಗುರಿ ಹೊಂದಲಾಗಿದೆ. ರಾಜ್ಯದ ರೈತ ಸಮುದಾಯಗಳಲ್ಲಿ ಸುಧಾರಿತ ಜೀವನೋಪಾಯಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಿದ್ದಾರೆ.
ಜಿಲ್ಲೆಯ ಜನರ ಹಲವು ದಶಕದ ಬೇಡಿಕೆಯಂತೆ ವಿ.ಸಿ ಫಾರ್ಮ್‌ನಲ್ಲಿ ಕೃಷಿ ವಿಶ್ವವಿದ್ಯಾನಿಲಯ ಪ್ರಾರಂಭಿಸುವಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮಹತ್ವದ ಪಾತ್ರ ವಹಿಸಿದ್ದರು. ಇದರ ಮುಂದುವರೆದ ಭಾಗವಾಗಿ ಭತ್ತದ ತಳಿ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಫಿಲಿಪೈನ್ಸ್‌ನ ಐಆರ್‌ಆರ್‌ಐ ಜತೆ ಮಹತ್ವದ ಒಡಂಬಡಿಕೆಗೆ ಸಹಿ ಹಾಕಿದ್ದಾರೆ.
ಫಿಲಿಪೈನ್ಸ್‌ನ ಮನಿಲಾದಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತೆರಳಿದ್ದಾರೆ. ರಾಜ್ಯದಲ್ಲಿ ನೆರೆ ಹಾವಳಿ, ಬರ ಪರಿಸ್ಥಿತಿ, ಕರಾವಳಿ, ಮಲೆನಾಡು, ಬಯಲು ಸೀಮೆ ಹೀಗೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜತೆಗೆ ಪೌಷ್ಠಿಕಾಂಶವುಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮ ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ.
ಮನಿಲಾ: ರಾಜ್ಯದಲ್ಲಿ ಭತ್ತದ (Paddy) ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಪೈನ್ಸ್‌ನ (Philippines) ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಭತ್ತದ ಮಹತ್ವ, ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು, ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಭತ್ತದ ತಳಿಗಳ ಸಂರಕ್ಷಣೆ, ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತಪರ ಯೋಜನೆಗಳ ಬಗ್ಗೆ ಫಿಲಿಪೈನ್ಸ್‌ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. 1945ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ, ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ ಶ್ಲಾಘಿಸಲಾಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್ ಕಟ್ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ
ಅಂತರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾನಿರ್ದೇಶಕರಾದ ಜುನೆಲ್ ಸಯಾನೋ , ಡಾ ಸಂಕಲ್ಪ್ ಭೋಸ್ಲೆ, ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿಕುಮಾರ್, ಡಾ ವೇಣು ಪ್ರಸಾದ್, ಡಾ ಮಲ್ಲಿಕಾರ್ಜುನ ಸ್ವಾಮಿ, ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ.ಪಾಟೀಲ್ ವಿ.ಸಿ ಫಾರಂನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್ ಕೊಟ್ಟು ಕೊಂದ ಕಿಲ್ಲರ್ ಡಾಕ್ಟರ್
– ಕರ್ನಾಟಕದಲ್ಲಿರೋದು ದರಿದ್ರ ಸರ್ಕಾರ – ಕೃಷಿ ಸಚಿವರ ತವರು ಜಿಲ್ಲೆಯ ರೈತರಿಗೆ ಅನ್ಯಾಯ
ಬೆಂಗಳೂರು: ಮಂಡ್ಯದಲ್ಲಿ (Mandya) ಭತ್ತದ ಖರೀದಿ ಕೇಂದ್ರಗಳು ತೆರೆಯದ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಅಶೋಕ್ (Ashok) ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಸರ್ಕಾರದ ವಿರುದ್ದ ಕಿಡಿಕಾರಿದ ಅಶೋಕ್ ಕಾಂಗ್ರೆಸ್ (Congress) ಸರ್ಕಾರ ದರಿದ್ರ ಸರ್ಕಾರ ಅಂತ ವಾಗ್ದಾಳಿ ನಡೆಸಿದ್ದಾರೆ.
ಅಶೋಕ್ ಪೋಸ್ಟ್‌ನಲ್ಲಿ ಏನಿದೆ?
ಈ ದರಿದ್ರ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ.
ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದ ಕಾರಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಭತ್ತದ ದಲ್ಲಾಳಿಗಳಿಗೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ 3,000 ರೂ. ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳು ತೆರೆಯದ ಕಾರಣ ದಲ್ಲಾಳಿಗಳಿಗೆ 1,800 ರೂ. – 2,000 ರೂ. ಮಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿ ಆದರೆ ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನ ಹೇಳಬೇಕಿಲ್ಲ. ಇದನ್ನೂ ಓದಿ: ತಂದೆಯನ್ನೇ ಹತ್ಯೆಗೈದು ಹೃದಯಾಘಾತದ ಕತೆಕಟ್ಟಿದ್ದ ಮಗ ಅರೆಸ್ಟ್
ಈ ದರಿದ್ರ @INCKarnataka ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ… pic.twitter.com/1c8LTankFw
ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸರಕಾರ ಯಾವಾಗ ತೊಗರಿ ಖರೀದಿ ಕೇಂದ್ರ ತೆರೆಯಲಿದೆ ಎಂದು ರೈತರು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಈ ಬಾರಿ ತೇವಾಂಶ ಕಡಿಮೆಯಿಂದ 1.82 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ ಎಂದು ಸರಕಾರಿ ದಾಖಲೆಗಳೇ ಹೇಳುತ್ತವೆ. ಆದರೆ ಇದುವರೆಗೂ ರಾಜ್ಯ ಸರಕಾರ ಪರಿಹಾರದ ಮಾತೇ ಆಡಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಚಕಾರ ಎತ್ತುತ್ತಿಲ್ಲ. ಒಟ್ಟಿನಲ್ಲಿ ಈ ರೈತ ವಿರೋಧಿ ಸಿಎಂ ಸಿದ್ದರಾಮಯ್ಯ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ ಅಂತ ಅಶೋಕ್ ಕಿಡಿಕಾರಿದ್ದಾರೆ.
ರಾಯಚೂರು: ತೆಲಂಗಾಣದಲ್ಲಿ (Telangana) ರಾಜ್ಯದ ಭತ್ತಕ್ಕೆ (Paddy) ಏಕಾಏಕಿ ನಿರ್ಬಂಧ ಹೇರಿರುವ ಹಿನ್ನಲೆ ರಾಯಚೂರಿನ (Raichur) ಗಡಿಯಲ್ಲಿ ರೈತರು (Farmers) ಹೋರಾಟ ನಡೆಸಿದ್ದಾರೆ. ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ (Kalaburagi) ವಿಭಾಗೀಯ ಎಪಿಎಂಸಿ ಅಧಿಕಾರಿ ರಾಜೇಶ್ವರಿ ತೆಲಂಗಾಣದ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
ರೈತರಿಗೆ (Farmers) ಭತ್ತ ಮಾರಾಟಕ್ಕೆ ಯಾವುದೇ ನಿರ್ಬಂಧ ಇರಬಾರದು. ರೈತರ ವ್ಯವಹಾರ ಸುಗಮವಾಗಿ ನಡೆಯಬೇಕು. ರಾಯಚೂರಿನ ಎಲ್ಲಾ ಮಿಲ್ ನಲ್ಲೂ ತೆಲಂಗಾಣದ ಭತ್ತ ಬರುತ್ತದೆ. ರಾಯಚೂರಿನಲ್ಲಿ ತೆಲಂಗಾಣ, ಆಂಧ್ರಪ್ರದೇಶದ ಭತ್ತಕ್ಕೆ ಯಾವುದೇ ನಿರ್ಬಂಧವಿಲ್ಲ. ತೆಲಂಗಾಣದ ಅಡಿಷನಲ್ ಡೈರೆಕ್ಟರ್ ಜೊತೆ ಮಾತನಾಡಿದ್ದೇನೆ. ಯಾವುದೇ ಆದೇಶ ಮಾಡಿಲ್ಲ ಎಂದಿದ್ದಾರೆ. ಆದರೆ ಅಲ್ಲಿನ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆದೇಶ ಹಿನ್ನೆಲೆ ನಿರ್ಬಂಧ ಹೇರುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ – ಸರ್ಕಾರ ಅಂಕಿ-ಅಂಶ ಬಿಡುಗಡೆ
ನಾನು ನಮ್ಮ ಡೈರೆಕ್ಟರೇಟ್ ಗಮನಕ್ಕೆ ತಂದಿದ್ದು ತುರ್ತಾಗಿ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಮೌಖಿಕವಾಗಿ ವರದಿ ನೀಡಿದ್ದೇನೆ. ಈಗಲೇ ವರದಿ ಸಲ್ಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ತೆಲಂಗಾಣದ ರೈತರಿಗೆ ನಾವು ನಿರ್ಬಂಧ ಹಾಕಿಲ್ಲ. ಎಂಎಸ್‌ಪಿ ಮಾರಾಟ ಮಾಡುವಾಗಲು ರೈತರು ಎನ್ನುವುದನ್ನು ದೃಢೀಕರಿಸಿ ಮಾಡಿ ಅವಕಾಶ ಕೊಡುತ್ತೇವೆ. ರೈತರ ಭತ್ತ ಮಾರಾಟ ಸುಗಮವಾಗಿ ನಡೆಯಬೇಕು. ಅದಕ್ಕೆ ಕ್ರಮ ವಹಿಸುತ್ತೇವೆ ಎಂದು ಎಪಿಎಂಸಿ ವಿಭಾಗೀಯ ಅಧಿಕಾರಿ ರಾಜೇಶ್ವರಿ ರೈತರಿಗೆ ಭರವಸೆ ನೀಡಿದ್ದಾರೆ.
ರಾಜ್ಯದ ರೈತರ ಭತ್ತ ಮಾರಾಟಕ್ಕೆ ತೆಲಂಗಾಣದಲ್ಲಿ ಏಕಾಏಕಿ ನಿರ್ಬಂಧ ಹೇರಿರುವುದನ್ನ ಖಂಡಿಸಿ ರಾಯಚೂರಿನ ದೇವಸುಗೂರು ಬಳಿ ರಾಜ್ಯದ ಗಡಿಯಲ್ಲಿ ಅಂತರರಾಜ್ಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ಈಗ ತೆಲಂಗಾಣದಲ್ಲಿ ಉತ್ತಮ ಬೆಲೆ ಇರುವುದರಿಂದ ಭತ್ತ ಮಾರಾಟಕ್ಕೆ ಮುಂದಾಗಿರುವ ರಾಜ್ಯದ ರೈತರಿಗೆ ತೊಂದರೆಯಾಗಿದೆ. ಕ್ವಿಂಟಾಲ್‌ಗೆ 2,500 ರೂ. ಹಾಗೂ 500 ಪ್ರೋತ್ಸಾಹ ಧನ ನೀಡುತ್ತಿರುವ ತೆಲಂಗಾಣ ಸರ್ಕಾರ ಕರ್ನಾಟಕ ರೈತರು ಸೌಲಭ್ಯ ಪಡೆಯಬಾರದು ಅಂತ ನಿರ್ಬಂಧ ಹೇರಿದ್ದಾರೆ. ಆದ್ರೆ ಖರೀದಿ ಕೇಂದ್ರಗಳಲ್ಲಿ ನಾವು ಮಾರಾಟ ಮಾಡುವುದಿಲ್ಲ. ಮುಕ್ತ ಮಾರುಕಟ್ಟೆ ಮಾರಲು ಅವಕಾಶ ಕೊಡಿ ಅಂತ ರಾಜ್ಯದ ರೈತರು ಆಗ್ರಹಿಸಿದ್ದಾರೆ. ಹೆದ್ದಾರಿ ಬಂದ್ ಹಿನ್ನೆಲೆ ಭತ್ತ ತುಂಬಿದ ಲಾರಿ, ಟ್ರ್ಯಾಕ್ಟರ್ ,ಇತರ ವಾಹನಗಳು ಕಿಲೋಮೀಟರ್ ಗಟ್ಟಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.
ರಾಯಚೂರು: ಫೆಂಗಲ್ ಚಂಡಮಾರುತದ (Fengal Cyclone) ಪರಿಣಾಮ ಬಿಸಿಲನಾಡು ರಾಯಚೂರು (Raichuru) ಜಿಲ್ಲೆಗೂ ತಟ್ಟಿದೆ. ಜಿಲ್ಲೆಯಲ್ಲಿ ಜೋರಾಗಿ ಮಳೆಯಾಗದಿದ್ದರೂ ಕೂಡ ಜಿಟಿಜಿಟಿ ಮಳೆ, ಶೀತಗಾಳಿ ರೈತರನ್ನು ಕಂಗಾಲಾಗಿಸಿದೆ. ಕಣ್ಣುಮುಂದಿದ್ದ ಭತ್ತದ ಉತ್ತಮ ಫಸಲು ಕಟಾವಿಗೆ ಮುನ್ನವೇ ಸಂಪೂರ್ಣ ನೆಲಕ್ಕಚ್ಚಿದೆ.
ಜಿಲ್ಲೆಯ ರಾಯಚೂರು, ಸಿರವಾರ, ಮಾನ್ವಿ, ದೇವದುರ್ಗ, ಲಿಂಗಸುಗೂರು ತಾಲೂಕಿನಲ್ಲಿ ಹೆಚ್ಚು ಬೆಳೆಹಾನಿಯಾಗಿದ್ದು ರೈತರ ನಿರಾಸೆಗೆ ಕಾರಣವಾಗಿದೆ. ಜಿಟಿಜಿಟಿ ಮಳೆ, ಶೀತಗಾಳಿಗೆ ನೂರಾರು ಎಕರೆ ಭತ್ತದ ಬೆಳೆ ನೆಲಕ್ಕಚ್ಚಿದ್ದು, ರೈತರು ಕೋಟ್ಯಾಂತರ ರೂಪಾಯಿ ಹಾನಿಗೊಳಗಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಭತ್ತ ಕಟಾವು ಮಾಡಿ, ಮಾರುಕಟ್ಟೆಗೆ ಸಾಗಿಸುವ ಸಿದ್ಧತೆಯಲ್ಲಿದ್ದ ರೈತರಿಗೆ ಫೆಂಗಲ್ ಚಂಡಮಾರುತ ಆಘಾತವನ್ನುಂಟು ಮಾಡಿದೆ.ಇದನ್ನೂ ಓದಿ: ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರಲ್ಲಿ ಪ್ರತಿಭಟನೆ
ನೆಲಕ್ಕಚ್ಚಿದ ಭತ್ತವನ್ನು ಕಟಾವು ಮಾಡುವುದು ರೈತರಿಗೆ ಸಾಹಸದ ಕೆಲಸವಾಗಿದ್ದು, ಕಟಾವು ಮಾಡುವ ಯಂತ್ರಗಳು ಕೂಡ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ನೆಲಕ್ಕಚ್ಚಿದ ಭತ್ತವನ್ನ ಕಟಾವು ಮಾಡಲು ಯಂತ್ರಗಳ ಮಾಲೀಕರು ದುಪ್ಪಟ್ಟು ಹಣ ಕೇಳುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಈಗ ಬೆಳೆಗೆ ಖರ್ಚು ಮಾಡಿದ ಹಣವೇ ಮರಳಿ ಬಾರದ ಪರಸ್ಥಿತಿ ಉಂಟಾಗಿದ್ದು, ಕಟಾವಿಗೆ ಮತ್ತೇ ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಎಕರೆಗೆ 30 ರಿಂದ 40 ಸಾವಿರ ರೂ. ಖರ್ಚು ಮಾಡಿ ಬೆಳೆದಿದ್ದ ಭತ್ತದ ಬೆಳೆ ಈ ಬಾರಿ ಉತ್ತಮ ಫಸಲಿನೊಂದಿಗೆ ರೈತರಲ್ಲಿ ನಿರೀಕ್ಷೆ ಹುಟ್ಟಿಸಿತ್ತು. ಆದರೆ ಕಳೆದ ಎರಡು, ಮೂರು ದಿನಗಳಿಂದ ಬದಲಾದ ವಾತಾವರಣ ಬೆಳೆಯನ್ನ ನೆಲಕ್ಕಚ್ಚುವಂತೆ ಮಾಡಿದೆ. ನೆಲಕ್ಕೆ ಬಿದ್ದ ಭತ್ತವನ್ನ ಪುನಃ ಕಟ್ಟಿನಿಲ್ಲಿಸುವ ಸಾಹಸಕ್ಕೆ ಮುಂದಾಗಿರುವ ರೈತರು, ಇರುವ ಬೆಳೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.
ಭತ್ತ ನೆಲಕ್ಕಚ್ಚಿದ್ದರಿಂದ ಕಟಾವು ಮಾಡುವ ಯಂತ್ರಕ್ಕೆ ದಿನಕ್ಕೆ 8 ರಿಂದ 10 ಸಾವಿರ ರೂ. ಹೆಚ್ಚು ಹಣ ಕಟ್ಟಬೇಕಾಗಿದೆ. ಮಾರುಕಟ್ಟೆಯಲ್ಲೂ ಉತ್ತಮ ಬೆಲೆ ಇಲ್ಲದಿರುವುದರಿಂದ ಸರ್ಕಾರ ಕೂಡಲೇ ಸರ್ವೇ ಕಾರ್ಯ ಆರಂಭಿಸಿ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್
ನವದೆಹಲಿ: ಗ್ರಾಮೀಣ ಪ್ರದೇಶದ ರೈತರ (Farmers) ಆದಾಯವನ್ನು ಹೆಚ್ಚಿಸುವ ಹಾಗೂ ಬೆಳೆ ವೈವಿಧ್ಯತೆಯನ್ನು ಉತ್ತೇಜಿಸುವ ಉದ್ದೇಶದಿಂದ ಖಾರಿಫ್ ಕಾಲದ ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (Minimum Support Prices) ಹೆಚ್ಚಳ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 2023-24ರ ಮಾರುಕಟ್ಟೆಯ ಎಲ್ಲಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಕೇಂದ್ರ ಘೋಷಿಸಿದೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ
ಭಾರತದ ಅತ್ಯಂತ ವ್ಯಾಪಕವಾಗಿ ಬೆಳೆಯುವ ಬೆಳೆಯಾದ ಭತ್ತವು ಅದರ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ಕೆಜಿಗೆ (ಕ್ವಿಂಟಲ್) 2040 ರೂ. ರಿಂದ ಸಾಮಾನ್ಯ ತಳಿಗೆ 2183 ರೂ., ಗ್ರೇಡ್ ಎ ತಳಿಗೆ 2060 ರೂ. ನಿಂದ 2203 ರೂ. ಏರಿಕೆ ಮಾಡಲಾಗಿದೆ.
ಬೇಳೆಕಾಳುಗಳು, ಎಣ್ಣೆಕಾಳುಗಳು, ಹತ್ತಿ ಮತ್ತು ರಾಗಿಯಂತಹ ಇತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ 4% ರಿಂದ 12% ವರೆಗೆ ಹೆಚ್ಚಳ ಆಗಿದೆ. ಈ ಹೆಚ್ಚಳವು ರೈತರಿಗೆ ಅವರ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 50% ಲಾಭಾಂಶವನ್ನು ಖಾತರಿಪಡಿಸುವ ನೀತಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಸರ್ಕಾರ ಕೈಗೊಂಡಿರುವ ಈ ಕ್ರಮವು ರೈತರನ್ನು ತಮ್ಮ ಬೆಳೆಗಳನ್ನು ವೈವಿಧ್ಯಗೊಳಿಸಲು ಮತ್ತು ಹೆಚ್ಚಿನ ಇಳುವರಿ ನೀಡುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ. ಇದು ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಪೌಷ್ಠಿಕ-ಧಾನ್ಯಗಳಿಗೆ ಉತ್ತೇಜಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.
2022-23 ರ ಒಟ್ಟು ಆಹಾರ ಧಾನ್ಯ ಉತ್ಪಾದನೆಯನ್ನು 330.5 ಮಿಲಿಯನ್ ಟನ್‍ಗಳಿಗೆ ನಿರೀಕ್ಷಿಸಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 14.9 ಮಿಲಿಯನ್ ಟನ್‍ಗಳ ಹೆಚ್ಚಳವಾಗಿದೆ. ಇದು ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಏರಿಕೆಯಾಗಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ರಾಯಚೂರು: ಈ ಬಾರಿಯ ಮುಂಗಾರು ಮಳೆ(Monsoon Rains) ಉತ್ತಮವಾಗಿದ್ದರಿಂದ ರಾಯಚೂರು(Raichuru) ಜಿಲ್ಲೆಯಾದ್ಯಂತ ಭತ್ತದ(Paddy) ಬೆಳೆ ಭರ್ಜರಿಯಾಗಿ ಬಂದಿದೆ. ಆದರೆ ಈ ರೈತರ(Farmers) ದುರಾದೃಷ್ಟವೆಂದರೆ ಅಕಾಲಿಕವಾಗಿ ಎರಡು ದಿನ ಸುರಿದ ಅಲ್ಪ ಮಳೆಗೆ ಭತ್ತ ಹಾನಿಯಾಗಿದೆ. ಮಾರುಕಟ್ಟೆಗೆ ಹೋಗಬೇಕಾದ ಭತ್ತವನ್ನು ಬಿಸಿಲಿಗೆ ಒಣಗಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಈ ವರ್ಷವೂ ಕೃಷ್ಣಾ(Krishna) ಹಾಗೂ ತುಂಗಭದ್ರಾ(Tungabhadra) ನೀರಾವರಿ ಆಶ್ರಿತ ಪ್ರದೇಶದಲ್ಲಿ ಭರ್ಜರಿಯಾಗಿ ಭತ್ತವನ್ನು ಬೆಳೆಯಲಾಗಿದೆ. 9.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿಮಾಡಿದ್ದು 49.82 ಲಕ್ಷ ಟನ್ ಭತ್ತದ ಉತ್ಪಾದನೆಯ ನಿರೀಕ್ಷೆಯಿದೆ. ಆದರೆ ರಾಯಚೂರು ಹಾಗೂ ಮಾನ್ವಿ ತಾಲೂಕಿನಲ್ಲಿ ಮೂರ್ನಾಲ್ಕು ದಿನಗಳ ಕೆಳಗೆ ಎರಡು ದಿನಕಾಲ ಸುರಿದ ಮಳೆ ಸಾವಿರಾರು ಎಕರೆ ಬೆಳೆಯನ್ನು ಹಾಳು ಮಾಡಿದೆ. ಇನ್ನೇನು ಒಂದೆರಡು ದಿನದಲ್ಲಿ ಕಟಾವಿಗೆ ಸಿದ್ದವಾದ ಬೆಳೆ ನೆಲಕ್ಕಚ್ಚಿದೆ. ಈಗಾಗಲೇ ಕಟಾವ್ ಆಗಿ ಬಯಲಿಗೆ ಒಣಗಲು ಹಾಕಿದ್ದ ಬೆಳೆ ಮಳೆಯಿಂದ ಪುನಃ ಒದ್ದೆಯಾಗಿದೆ. ಇದರಿಂದ ಬೆಳೆಹಾಳಾಗಿದ್ದು , ಉಳಿದ ಭತ್ತವೂ ಸಹ ಗುಣಮಟ್ಟ ಕಳೆದುಕೊಂಡಿದೆ.
ಭತ್ತ ಒದ್ದೆಯಾಗಿರುವುದರಿಂದ ನುಚ್ಚಾಗುವ ಸಾಧ್ಯತೆ ಹೆಚ್ಚಿರುವುದರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಅಲ್ಲದೆ ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ರೈತರು ಕೃಷಿ ಮಾರುಕಟ್ಟೆ ಲಗ್ಗೆಯಿಟ್ಟು ತಮ್ಮ ಭತ್ತ ಮಾರಾಟ ನಡೆಸಿರುವುದರದಿಂದ ಜಿಲ್ಲೆಯ ರೈತರು ಬೆಲೆ ಕುಸಿತದ ಭೀತಿಯನ್ನೂ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಐಪಿಎಲ್‍ಗೆ ನಿವೃತ್ತಿ ಘೋಷಿಸಿದ ಬ್ರಾವೋ – ಚೆನ್ನೈ ತಂಡದಲ್ಲಿ ಮುಂದುವರಿಕೆ
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಆರ್‌ಎನ್ಆರ್ ಭತ್ತಕ್ಕೆ ಕ್ವಿಂಟಾಲ್‌ಗೆ 2,300 ರೂ.ವರೆಗೆ ಬೆಲೆ ಸಿಗುತ್ತಿದೆ. ಇನ್ನೂ ಸೋನಾಮಸೂರಿ 1,600 ರೂಪಾಯಿ ಕ್ವಿಂಟಾಲ್ ಮಾರಾಟವಾಗುತ್ತಿದೆ. ಈ ಬಾರಿ ಬೆಲೆ ಉತ್ತಮವಾಗಿರುವುದರಿಂದ ರೈತರು ಲಾಭದ ನಿರೀಕ್ಷೆಯಲ್ಲಿದ್ದರು.
ಭತ್ತಕ್ಕೆ ವೈಜ್ಞಾನಿಕ ಬೆಲೆಯಿಲ್ಲ, ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ. ಕಷ್ಟಪಟ್ಟು ಬೆಳೆ ಬೆಳೆಯುವ ರೈತರಿಗೆ ಲಾಭದ ಯಾವುದೇ ಗ್ಯಾರಂಟಿಯಿಲ್ಲ ಹೀಗಾಗಿ ಸರ್ಕಾರ ರೈತರ ಕಡೆ ಗಮನಹರಿಸಬೇಕು ಅಂತ ರೈತ ಮುಖಂಡರು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಅನುಭವಿಸಿದ ನಷ್ಟವನ್ನು ಈ ಬಾರಿ ತುಂಬಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದ ರೈತರಿಗೆ ಪುನಃ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಭತ್ತ ರೈತರ ಕೈಹಿಡಿಯುವ ನೀರಿಕ್ಷೆ ಮತ್ತೆ ಹುಸಿಯಾಗಿದೆ. ಅಕಾಲಿಕ ಮಳೆಯ ಹೊಡೆತದಿಂದ ತಪ್ಪಿಸಿಕೊಂಡ ರೈತರು ಮಾತ್ರ ನಿಟ್ಟುಸಿರುಬಿಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
ಯಾದಗಿರಿ: ಭತ್ತದ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ನಡು ರಸ್ತೆಯಲ್ಲಿ ಟ್ರ‍್ಯಾಕ್ಟರ್ ಧಗ ಧಗನೇ ಹೊತ್ತಿ ಉರಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಪ್ರಮುಖ ವಾಲ್ಮೀಕಿ ಸರ್ಕಲ್ ನಲ್ಲಿ ಈ ಅವಘಡ ನಡೆದಿದೆ. ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ, ಮುಳ್ಳು, ಕಸಕ್ಕೆ ಬೆಂಕಿ ಹಚ್ಚಲಾಗಿತ್ತು. ಟ್ರಾಕ್ಟರ್ ತುಂಬೆಲ್ಲ ಭತ್ತದ ಹುಲ್ಲು ಇದ್ದ ಕಾರಣ ರಸ್ತೆಯಲ್ಲಿ ಟ್ರಾಕ್ಟರ್ ಚಲಿಸುವಾಗ ಬೆಂಕಿ ಹತ್ತಿರಬಹುದೆಂದು ಶಂಕಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
ಕಾರವಾರ: ಕಾಡಾನೆಗಳ ಹಿಂಡು ಭತ್ತ, ಕಬ್ಬು ಹಾಗೂ ಗೋವಿನ ಜೋಳದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು, ತುಳಿದು ನಾಶ ಪಡಿಸಿದ ಘಟನೆ ಮುಂಡಗೋಡು ತಾಲೂಕಿನ ಬ್ಯಾನಳ್ಳಿ ಅರಣ್ಯದ ಅಂಚಿನ ಗದ್ದೆಗಳಲ್ಲಿ ನಡೆದಿದೆ.
ಬ್ಯಾನಳ್ಳಿ ಗ್ರಾಮದ ಸೋನು ವರಕ್ ಎಂಬುವರ ಗದ್ದೆಯಲ್ಲಿ 3 ಎಕರೆಯಲ್ಲಿ ಬೆಳೆದ ಭತ್ತ ಮತ್ತು ಕಟಾವು ಮಾಡಿದ ಗೋವಿನ ಜೋಳದ ತೆನೆಯನ್ನು ಕಾಡಾನೆಗಳು ಹಾನಿ ಮಾಡಿವೆ. ಅಲ್ಲದೇ, ಅಕ್ಕಪಕ್ಕದ ಭತ್ತದ ಗದ್ದೆಗಳಿಗೂ ದಾಳಿ ನಡೆಸಿ, ಹಾನಿ ಮಾಡಿದ ಬಗ್ಗೆ ರೈತರು ತಿಳಿಸಿದ್ದಾರೆ. ಕಾಡಾನೆಗಳ ಹಿಂಡು ಮುಂಡಗೋಡು ತಾಲೂಕಿನ ಕಾತೂರ ವಲಯದ ಮರಗಡಿ, ಕಾತೂರ, ಸಿಂಗನಳ್ಳಿ, ಆಲಳ್ಳಿ ಗ್ರಾಮಗಳ ಭಾಗದ ರೈತರ ತೋಟ, ಗದ್ದೆಗಳಲ್ಲಿ ಬೆಳೆದ ಬೆಳೆಗಳನ್ನು ತಿಂದು ತುಳಿದು ಹಾನಿ ಮಾಡಿದ್ದವು. ಇದನ್ನೂ ಓದಿ: ಮುರುಡೇಶ್ವರಕ್ಕೆ ಐಸಿಸ್ ಕಣ್ಣು- ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ವ್ಯವಸ್ಥೆ
ಈಗ ಮುಂಡಗೋಡ ವಲಯದ ಬ್ಯಾನಳ್ಳಿಯಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡುತ್ತಿವೆ. ಈಗಾಗಲೇ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾನಿಯಾಗಿದೆ. ಮತ್ತೊಂದೆಡೆ ಕಾಡು ಪ್ರಾಣಿಗಳ ದಾಳಿಯಿಂದ ರೈತ ಬೆಳೆದ ಬೆಳೆ ಹಾನಿಯಾಗುತ್ತಿರುವುದರಿಂದ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ