Tag: ಭದ್ರತಾ ಪಡೆಗಳು

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

    ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

  • Manipur | ಭದ್ರತಾ ಪಡೆಗಳೊಂದಿಗೆ ಭಾರಿ ಗುಂಡಿನ ಚಕಮಕಿ – 11 ಶಂಕಿತ ಕುಕಿ ಬಂಡುಕೋರರು ಬಲಿ!

    Manipur | ಭದ್ರತಾ ಪಡೆಗಳೊಂದಿಗೆ ಭಾರಿ ಗುಂಡಿನ ಚಕಮಕಿ – 11 ಶಂಕಿತ ಕುಕಿ ಬಂಡುಕೋರರು ಬಲಿ!

    ಇಂಫಾಲ್‌: ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ (Manipur Gunfight) ಕನಿಷ್ಠ 11 ಶಂಕಿತ ಕುಕಿ ಬಂಡುಕೋರರನ್ನು (Kuki Militants) ಹೊಡೆದುರುಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಅಸ್ಸಾಂ ಗಡಿ ಜಿಲ್ಲೆ ಜಿರಿಬಾಮ್‌ನಲ್ಲಿ (Jiribam) ಸೋಮವಾರ (ಇಂದು) ಮಧ್ಯಾಹ್ನ 3.30ರ ಸುಮಾರಿಗೆ ಸಿಆರ್‌ಪಿಎಫ್ ಸೇನಾ ಶಿಬಿರದ ಮೇಲೆ ಕುಕಿ ಬಂಡುಕೋರರು ದಾಳಿ ನಡೆಸಿದ್ದರು. ಈ ವೇಳೆ ಸಿಆರ್‌ಪಿಎಫ್‌ (CRPF) ಯೋಧರು ಗಾಯಗೊಂಡಿದ್ದರು, ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು. ಈ ಹಿನ್ನೆಲೆ ಪ್ರತೀಕಾರವಾಗಿ ಎನ್‌ಕೌಂಟರ್‌ ನಡೆಸಿದ ಭದ್ರತಾ ಪಡೆ ಬಂಡುಕೋರರನ್ನು ಹೊಡೆದುರುಳಿಸಿದೆ. ಈ ವೇಳೆ ಸ್ಥಳದಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳನ್ನು ವಶಪಡಿಕೊಳ್ಳಲಾಗಿದೆ.

    ಕುಕಿ ಬಂಡುಕೋರರು ಜಿರಿಬಾಮ್‌ನಲ್ಲಿರುವ ಪೊಲೀಸ್ ಠಾಣೆಯ ಮೇಲೆ ಎರಡೂ ಕಡೆಯಿಂದ ದಾಳಿ ನಡೆಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ಜಿರಿಬಾಮ್‌ನ ಬೊರೊಬೆಕ್ರಾದಲ್ಲಿರುವ ಈ ಪೊಲೀಸ್ ಠಾಣೆಯ ಮೇಲೆ ಇತ್ತೀಚಿನ ತಿಂಗಳಲ್ಲಿ ಹಲವಾರು ಬಾರಿ ದಾಳಿ ನಡೆದಿದೆ. ಇದನ್ನೂ ಓದಿ: ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ನಂತರ, ಶಂಕಿತ ಕುಕಿ ಬಂಡುಕೋರರು ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿರುವ ಜಕುರಾಡೋರ್ ಕರೋಂಗ್‌ನಲ್ಲಿನ ಸಣ್ಣ ಶಿಬಿರದ ಕಡೆಗೆ ನುಗ್ಗಿದರು, ಹಲವು ಮನೆಗಳಿಗೆ ಬೆಂಕಿ ಹಚ್ಚಿದರು. ಈ ವೇಳೆ ಭದ್ರತಾ ಪಡೆಗಳು ಹಾಗೂ ಬಂಡುಕೋರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯಿತು.

    ಮಣಿಪುರದಲ್ಲಿ ಮತ್ತೆ ಭುಗಿಲೆದ್ದಿರುವ ಹಿಂಸಾಚಾರ 3ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವು ಈವರೆಗೆ 200ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

  • Jammu Kashmir | ಪೂಂಛ್‌ನಲ್ಲಿದ್ದ ಉಗ್ರರ ತಾಣ ಧ್ವಂಸ

    Jammu Kashmir | ಪೂಂಛ್‌ನಲ್ಲಿದ್ದ ಉಗ್ರರ ತಾಣ ಧ್ವಂಸ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಛ್ (Poonch) ಜಿಲ್ಲೆಯಲ್ಲಿ ಉಗ್ರರು ಅಡಗಿದ್ದ ತಾಣ ಪತ್ತೆಯಾಗಿದ್ದು, ಭದ್ರತಾ ಪಡೆಗಳು ಇಂದು (ಅ.26) ರಂದು ಧ್ವಂಸಗೊಳಿಸಿವೆ.

    ಅಧಿಕಾರಿಗಳ ಮಾಹಿತಿ ಪ್ರಕಾರ, ಪೂಂಛ್ ಅಡುಗುದಾಣದಲ್ಲಿ ಗ್ರೆನೇಡ್‌ಗಳು ಹಾಗೂ ಸ್ಫೋಟಕಗಳು ಪತ್ತೆಯಗಿದ್ದು, ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ.ಇದನ್ನೂ ಓದಿ: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

    ಜಮ್ಮುವಿನ ಮೇಂಧರ್ ಉಪವಿಭಾಗದ ಬಲನೋಯ್ ಸೆಕ್ಟರ್‌ನಲ್ಲಿ ಶೋಧ ಕಾರ್ಯದ ವೇಳೆ ಈ ಅಡಗುದಾಣ ಪತ್ತೆಯಾಗಿದ್ದು, ಬಳಿಕ ಭದ್ರತಾ ಪಡೆಗಳು ಅದನ್ನು ಧ್ವಂಸಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡರು.

    ಇದೇ ವೇಳೆ ಭದ್ರತಾ ಸಿಬ್ಬಂದಿ ಮನ್‌ಕೋಡಿ ಸೆಕ್ಟರ್ ಸಮೀಪ ಗಸ್ತು ತಿರುಗುವ ವೇಳೆ ತುಕ್ಕು ಹಿಡಿರುವ ಮೋರ್ಟರ್ ಶೆಲ್ ಕೂಡ ಪತ್ತೆಯಾಗಿದೆ. ಧ್ವಂಸಗೊಳಿಸಿದ ಬಳಿಕ ಶೆಲ್‌ನ್ನು ಸುರಕ್ಷಿತ ಸ್ಥಳದಲ್ಲಿ ಸ್ಫೋಟಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಕಾರವಾರ | ದೇವಬಾಗ್ ಕಡಲ ತೀರದಲ್ಲಿ ನಟ ರಮೇಶ್ ಅರವಿಂದ್

  • ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ – ಇಬ್ಬರು ಉಗ್ರರು ಬಲಿ

    ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ – ಇಬ್ಬರು ಉಗ್ರರು ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉಗ್ರರ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಅವರ ಗುರುತು ಇನ್ನೂ ಪ್ತತೆಯಾಗಿಲ್ಲ. ಮೃತ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯನಡೆಯುತ್ತಿದೆ. ಅಲ್ಲದೇ ಉಗ್ರರ ಅಡಗುದಾಣದಲ್ಲಿ ಸೇನೆ ಕಾರ್ಯಾಚರಣೆ ಮುಂದುವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಮೇ 4 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‍ನಲ್ಲಿ ಭಾರತೀಯ ವಾಯುಪಡೆಯ (Indian Air Force) ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿ, ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಇದಾದ ಬಳಿಕ ಈ ಭಾಗಗಳಲ್ಲಿ ಸೇನೆ, ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು.

    ಎನ್‍ಕೌಂಟರ್‌ನಲ್ಲಿ ಹತರಾದ ಉಗ್ರರು, ವಾಯುಪಡೆಯ ವಾಹನದ ಮೇಲೆ ದಾಳಿ ನಡೆಸಿದವರೇ ಎಂಬ ಅಧಿಕೃತ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ – ಹಲವರನ್ನು ವಶಕ್ಕೆ ಪಡೆದ ಸೇನೆ

  • ಗಡಿಯಲ್ಲಿ ಪಾಕಿಸ್ತಾನದ ನಿಗೂಢ ಬಲೂನ್ ಪತ್ತೆ – ಸೇನೆಯಿಂದ ಶೋಧ ಕಾರ್ಯ

    ಗಡಿಯಲ್ಲಿ ಪಾಕಿಸ್ತಾನದ ನಿಗೂಢ ಬಲೂನ್ ಪತ್ತೆ – ಸೇನೆಯಿಂದ ಶೋಧ ಕಾರ್ಯ

    ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ (Pakistan International Airlines) ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

    ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಭದ್ರತಾ ಪಡೆಗಳು (Border Security Forces) ಅದನ್ನು ವಶಪಡಿಸಿಕೊಂಡಿವೆ. ಬಲೂನ್ ಎಲ್ಲಿಂದ ಬಂದಿದೆ ಎಂದು ತನಿಖೆ ಮಾಡಲು ಪ್ರದೇಶದಲ್ಲಿ ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಇದನ್ನೂ ಓದಿ: ಗಡಿದಾಟಿ ಬಂದ ಬಾಂಗ್ಲಾ ಯೋಧರನ್ನು ಓಡಿಸಿದ ಮೇಘಾಲಯ ಗ್ರಾಮಸ್ಥರು

    ಕಳೆದ ಫೆಬ್ರವರಿಯಲ್ಲಿ ಇದೇ ರೀತಿಯ ವಿಮಾನದ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದಲ್ಲಿ ಪತ್ತೆಯಾಗಿತ್ತು. ಅದರ ಮೇಲೆ ಸಹ ಪಿಐಎ (PIA) ಲೋಗೋವನ್ನು ಮುದ್ರಿಸಲಾಗಿತ್ತು. ಮೇ 20 ರಂದು ಅಮೃತಸರದಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕಿಸ್ತಾನದ (Pakistan) ಡ್ರೋನ್‍ನ್ನು ಸೇನೆ ಹೊಡೆದುರುಳಿಸಿತ್ತು.

    ಅಲ್ಲದೇ ಇತ್ತೀಚೆಗೆ ಸೇನೆ ನಾಲ್ಕು ಪಾಕಿಸ್ತಾನಿ ಡ್ರೋನ್‍ಗಳನ್ನು ಗಡಯಲ್ಲಿ ತಡೆದಿತ್ತು. ಅವುಗಳಲ್ಲಿ ಮೂರನ್ನು ಪಂಜಾಬ್‍ನ (Punjab) ಅಂತರರಾಷ್ಟ್ರೀಯ ಗಡಿಯಲ್ಲಿ ಹೊಡೆದುರುಳಿಸಿತ್ತು.‌ ಇದನ್ನೂ ಓದಿ: ಪ್ರೇಯಸಿಯನ್ನು ಕೊಂದು ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಭೂಪ ಅಂಧರ್

  • ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ

    ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ

    ರಾಂಚಿ: ಐವರು ಮಾವೋವಾದಿಗಳು (Maoists) ಭದ್ರತಾ ಪಡೆಗಳ ಮುಂದೆ ಶರಣಾದ ಪ್ರಕರಣ ಜಾರ್ಖಡ್‍ನಲ್ಲಿ (Jharkhand) ನಡೆದಿದೆ. ಇದರಿಂದಾಗಿ 30 ವರ್ಷಗಳ ಕಾಲ ನಕ್ಸಲರ ಕಪಿಮುಷ್ಠಿಯಲ್ಲಿ ನಲುಗಿದ್ದ ಜಾರ್ಖಂಡ್‌ನ ಚತ್ರಾ ಜಿಲ್ಲೆಯ ಕೌಲೇಶ್ವರಿ (Kauleshwari) ವಲಯ ಮುಕ್ತಗೊಂಡಂತಾಗಿದೆ.

    ಶರಣಾದ ಮಾವೋವಾದಿಗಳನ್ನು ಕಮಾಂಡರ್ ಅಮರ್‌ಜಿತ್ ಯಾದವ್, ಶಾಹದೇವ್ ಯಾದವ್, ನಿರು ಯಾದವ್, ಸಂತೋಷ್ ಭುನಿಯನ್ ಹಾಗೂ ಅಶೋಕ್ ಬೈಗಾ ಎಂದು ಗುರುತಿಸಲಾಗಿದೆ. ಇದರಲ್ಲಿ ಅಮರ್‍ಜಿತ್ ಯಾದವ್ ಸುಳಿವಿಗೆ 10 ಲಕ್ಷ ರೂ. ಹಾಗೂ ಶಾಹದೇವ್ ಸುಳಿವಿಗೆ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ: ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

    ಈ ಐವರು ಮಾವೋವಾದಿಗಳು ಜಾರ್ಖಂಡ್ ಮತ್ತು ಬಿಹಾರದ‌ (Bihar) ವಿವಿಧ ಜಿಲ್ಲೆಗಳಲ್ಲಿನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಅಮರ್‌ಜಿತ್ 81 ಪ್ರಕರಣಗಳಲ್ಲಿ, ಶಾಹದೇವ್ 53 ಪ್ರಕರಣಗಳಲ್ಲಿ, ನಿರು 60 ಪ್ರಕರಣಗಳಲ್ಲಿ, ಸಂತೋಷ್ 27 ಪ್ರಕರಣಗಳಲ್ಲಿ ಮತ್ತು ಅಶೋಕ್ ಎರಡು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ಕಾರ್ಯಾಚರಣೆಯ ಮಹಾನಿರೀಕ್ಷಕ (Inspector General of Police) ಅಮೋಲ್ ವಿ ಹೋಮ್ಕರ್ ಹೇಳಿದ್ದಾರೆ.

    ಕಳೆದ 30 ವರ್ಷಗಳಿಂದ ಸಿಪಿಐ ಮಾವೋವಾದಿಗಳ ಭದ್ರಕೋಟೆಯಾಗಿರುವ ಜಾರ್ಖಂಡ್‌ನ ಚತ್ರಾ ಜಿಲ್ಲೆಯ ಕೌಲೇಶ್ವರಿ ಉಪವಲಯದಲ್ಲಿ ನಕ್ಸಲರು ಸಕ್ರಿಯರಾಗಿದ್ದರು. ಒಂದು ವರ್ಷದಿಂದ ಭದ್ರತಾ ಪಡೆಗಳು ಇವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿತ್ತು. ಇಂದಿನ ಶರಣಾಗತಿಯಿಂದ ಕೌಲೇಶ್ವರಿ ಉಪವಲಯವನ್ನು ನಿಷೇಧಿತ ಸಂಘಟನೆಯ ಮುಷ್ಠಿಯಿಂದ ಬಿಡಿಸಿದಂತೆ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಶರಣಾಗತರು ನೀಡಿದ ಮಾಹಿತಿಯಿಂದ ಎರಡು ಎಕೆ-56 ರೈಫಲ್‍ಗಳು, ಒಂದು ಎಸ್‍ಎಲ್‍ಆರ್ ರೈಫಲ್, ಒಂದು ಐಎನ್‍ಎಸ್‍ಎಎಸ್ ರೈಫಲ್, ಎರಡು 303 ರೈಫಲ್‍ಗಳು, ಒಂದು ಯುಎಸ್ ನಿರ್ಮಿತ ರೈಫಲ್, ಒಂದು ಏರ್ ಗನ್, ಎರಡು ದೇಶಿ ನಿರ್ಮಿತ ರೈಫಲ್‍ಗಳು, ಒಂದು ಪಿಸ್ತೂಲ್ (Pistol)‌ ಮತ್ತು 1,855 ಕ್ಯಾಲಿಬರ್‌ಗಳು ಮತ್ತು ಇತರ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರ ತಲೆಗೆ ಒಟ್ಟು 11 ಲಕ್ಷ ಘೋಷಣೆಯಾಗಿದ್ದ ನಕ್ಸಲರ ಎನ್‍ಕೌಂಟರ್

  • ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗಾಗಿ ಶೋಧಕಾರ್ಯ ನಡೆದಿದೆ. ಈ ವೇಳೆ 3 ಭಯೋತ್ಪಾದಕರಲ್ಲಿ ಒಬ್ಬ ಬದುಕುಳಿದ್ದಾನೆ ಎಂದು ಪೊಲೀಸರು ತಿಳಿಸಿದರು.

    ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಈ ಮಾರ್ಗದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಪೊಲೀಸರ ಇಂದಿನ ಎನ್‍ಕೌಂಟರ್ ದೊಡ್ಡ ಯಶಸ್ಸು ಎಂದು ಕರೆದುಕೊಂಡಿದ್ದಾರೆ. ಇದನ್ನೂ ಓದಿ:  ಉತ್ತರ ಕರ್ನಾಟಕದಲ್ಲಿ ನಾಲ್ಕು ದಿನ ಗುಡುಗು ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ 

    ಇಂದು ಗುಂಡಿಕ್ಕಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದಿದ್ದು, ಆತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಲ್ಲಿ ಒಬ್ಬ ಎಂದು ಪೊಲೀಸರು ತಿಳಿಸಿದ್ದಾರೆ.

    ಅಶ್ರಫ್ ಮೋಲ್ವಿ(ಎಚ್‍ಎಂ ಭಯೋತ್ಪಾದಕ ಸಂಘಟನೆಯ ಅತ್ಯಂತ ಹಳೆಯ ಭಯೋತ್ಪಾದಕರಲ್ಲಿ ಒಬ್ಬರು) ಜೊತೆಗೆ ಇಬ್ಬರು ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಲಾಯಿತು. ಯಾತ್ರಾ ಮಾರ್ಗದಲ್ಲಿ ಯಶಸ್ವಿ ಕಾರ್ಯಾಚರಣೆಯು ನಮಗೆ ದೊಡ್ಡ ಯಶಸ್ಸು ಎಂದು ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

    ಪಹಲ್ಗಾಮ್‍ನ ಕಾಡಿನಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ ಅಡಗಿರುವ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಈ ಕಾರ್ಯಾಚರಣೆಯು ಎನ್‍ಕೌಂಟರ್‍ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: WHO ಡೇಟಾ, ಕಾಂಗ್ರೆಸ್ ಬೇಟಾ ಎರಡೂ ತಪ್ಪು: ಬಿಜೆಪಿ ಆರೋಪ 

    ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ ಅಮರನಾಥ ಯಾತ್ರೆಯ ಮೂಲ ಶಿಬಿರಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತದೆ. ಇದು ಸುಮಾರು ಎರಡು ವರ್ಷಗಳ ನಂತರ ಮತ್ತೆ ಜೂನ್ 30 ರಿಂದ ಯಾತ್ರೆ ಪ್ರಾರಂಭವಾಗಲಿದೆ.

  • ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್

    ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್

    ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಲಷ್ಕರ್-ಇ-ತೊಯ್ಬಾ (ಎಲ್‍ಇಟಿ) ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೋಮವಾರ ತಿಳಿಸಿದ್ದಾರೆ.

    ಪೊಲೀಸರು ಇತ್ತೀಚೆಗೆ ಸ್ಥಳೀಯರಲ್ಲದ ಕಾರ್ಮಿಕರ ಹತ್ಯೆಗಳು ಮತ್ತು ಅನೇಕ ಸ್ಥಳಗಳಲ್ಲಿ ಗ್ರೆನೇಡ್ ದಾಳಿಗಳ ಬಗ್ಗೆ ತನಿಖೆ ನಡೆಸಿದ್ದರು. ಈ ವೇಳೆ ವಿವಿಧ ಸ್ಥಳಗಳಿಂದ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಶಂಕಿತ ವ್ಯಕ್ತಿಗಳ ನಿರಂತರ ವಿಚಾರಣೆಯಿಂದ ಈ ಎಲ್ಲಾ ಹತ್ಯೆಗಳ ಹಿಂದೆ ಎಲ್‍ಇಟಿ ಸಂಘಟನೆಯ ಕೈವಾಡವಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತಿಯ ಕಿರುಕುಳ ತಾಳಲಾರದೇ ಪತ್ನಿ ನೇಣಿಗೆ ಶರಣು

    ಮೇ 2 ರಂದು ಹೈಗಮ್‍ನಲ್ಲಿ ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದರು. ಭದ್ರತಾ ಪಡೆಗಳು ಅವರನ್ನು ವಿಚಾರಣೆ ನಡೆಸಲು ಮುಂದಾದಾಗ ಅವರು ತೋಟದ ನಿರ್ಜನ ಪ್ರದೇಶಗಳಿಗೆ ಓಡಿ ಪರಾರಿಯಾಗಿದ್ದರು.

    ಈ ವೇಳೆ ಎಂವಿಸಿಪಿ (ಮೊಬೈಲ್ ವೆಹಿಕಲ್ ಚೆಕ್ ಪೋಸ್ಟ್) ಮೂವರು ವ್ಯಕ್ತಿಗಳನ್ನು ಬೆನ್ನಟ್ಟಿತ್ತು. ಪರಾರಿಯಾದ ಮೂವರು ಆ ಸ್ಥಳವನ್ನು ಬಿಟ್ಟು ತೆರಳದಂತೆ ಸೈನಿಕರು ನಿಗಾ ವಹಿಸಿದ್ದರು. ಅಂತಿಮವಾಗಿ ಭದ್ರತಾ ಪಡೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ಉಸ್ಮಾನ್-ಬಾದ್ ವಾರ್ಪೋರಾದ ತಫ್ಹೀಮ್ ರೆಯಾಜ್, ಬ್ರತ್ ಕಲಾನ್ ಸೋಪೋರ್‌ನ ಸೀರತ್ ಶಾಬಾಜ್ ಮಿರ್ ಮತ್ತು ಮಿರ್ಪೋರಾ ಬ್ರತ್‍ಕಲನ್‍ನ ರಮೀಜ್ ಅಹ್ಮದ್ ಖಾನ್ ಬಂಧಿತ ಉಗ್ರರು.

    ಬಂಧಿತ ಉಗ್ರರಿಂದ ಮೂರು ಚೀನೀ ಪಿಸ್ತೂಲ್‍ಗಳು, ಮದ್ದುಗುಂಡುಗಳು ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

    ಇದರ ಮಧ್ಯೆ, ಗಂದರ್‍ಬಾಲ್‍ನಲ್ಲಿ ಸ್ಕಾರ್ಪಿಯೋ ಕಾರಿನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಒಬ್ಬ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಹಚರನನ್ನು ಸಹ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

  • ಕಾಶ್ಮೀರಕ್ಕೆ ನುಸುಳಿದ್ದಾರೆ ಐವರು ಉಗ್ರರು- ಹೈ ಅಲರ್ಟ್ ಘೋಷಣೆ

    ಕಾಶ್ಮೀರಕ್ಕೆ ನುಸುಳಿದ್ದಾರೆ ಐವರು ಉಗ್ರರು- ಹೈ ಅಲರ್ಟ್ ಘೋಷಣೆ

    ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಕಣಿವೆ ಪ್ರದೇಶಕ್ಕೆ ಐದು ಜನ ಉಗ್ರರು ನುಸುಳಿದ್ದಾರೆ. ಈ ಉಗ್ರರು ಕಣಿವೆಯಲ್ಲಿನ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಭಾರತಕ್ಕೆ ನುಸುಳಿರುವ ಭಯೋತ್ಪಾದಕರು ಹೆಚ್ಚು ತರಬೇತಿ ಪಡೆದವರು ಮತ್ತು ಅವರು ಭದ್ರತಾ ಪಡೆಗಳ ಮೇಲೆ ದಾಳಿ ಮಾಡಬಹುದು ಎಂದು ಮೂಲಗಳು ತಿಳಿಸಿರುವ ಕಾರಣ ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆ ಪ್ರದೇಶಕ್ಕೆ ಹೆಚ್ಚಿನ ಸೈನಿಕರು ಮತ್ತು ವಾಯು ಪಡೆಯನ್ನು ನಿಯೋಜನೆ ಮಾಡಿ ತೀವ್ರ ಎಚ್ಚರಿಕೆ ವಹಿಸಿದೆ.

    ಈ ವಿಷಯ ತಿಳಿಯುತ್ತಿದ್ದಂತೆ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಗುರುವಾರ ಸಂಜೆಯಿಂದ ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ತಿರುಗುತ್ತಿದೆ. ಹೆಚ್ಚಿನ ಭದ್ರತೆಗೆ ಸೇನೆಯನ್ನು ಸಿದ್ಧಗೊಳಿಸಲಾಗಿದೆ. ಕಾಶ್ಮೀರ ಕಣಿವೆಗಳಲ್ಲಿ ಭದ್ರತಾ ಪಡೆಗಳ 280 ಗುಂಪುಗಳನ್ನು ನಿಯೋಜನೆ ಮಾಡಲಾಗಿದೆ. ಕಾಶ್ಮೀರದ ನಗರ ಭಾಗದ ಕೆಲ ದುರ್ಬಲ ಸ್ಥಳಗಳಲ್ಲಿ ಸಿ.ಆರ್‍.ಪಿ.ಎಫ್ ಸಿಬ್ಬಂದಿಯನ್ನು ನೇಮಕ ಮಾಡಿದ್ದೇವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ನಗರದ ಎಲ್ಲಾ ಪ್ರಮುಖ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಂದ್ರ ಸಶಸ್ತ್ರ ಅರೆಸೈನಿಕ ಪಡೆ (ಸಿಎಪಿಎಫ್) ಮತ್ತು ಸ್ಥಳೀಯ ಪೊಲೀಸರನ್ನು ನೇಮಿಸಲಾಗಿದೆ. ಭಯೋತ್ಪಾದಕರು ದೇವಾಲಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿಯಿಂದಾಗಿ ಪ್ರಾರ್ಥನ ಮಂದಿರಕ್ಕೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ರಾಜ್ಯದ ಶಾಲೆಗಳಿಗೆ 10 ದಿನಗಳವರೆಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಘಟನೆಯಿಂದ ಅಮರನಾಥ ಯಾತ್ರೆಯ ಕೆಲವು ಊಟದ ಗೃಹಗಳನ್ನು ಸಹ ಮುಚ್ಚಲಾಗಿದೆ. ಈ ಕಾರ್ಯಾಚರಣೆ ನಡೆಸಲು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯಗಳನ್ನು ಬಲಪಡಿಸುವ ಸಲುವಾಗಿ ಸುಮಾರು 10,000 ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಕಾಶ್ಮೀರಕ್ಕೆ ನಿಯೋಜಿಸಿತ್ತು. ಈ ನಿರ್ಧಾರದ ಬೆನ್ನಲ್ಲೇ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 25,000 ಅರೆಸೈನಿಕ ಸಿಬ್ಬಂದಿಯನ್ನು ಕಾಶ್ಮೀರಕ್ಕೆ ಕಳುಹಿಸಿದೆ.