Tag: ಭದ್ರತಾ ಸಂಸ್ಥೆ

  • ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಶ್ರೀನಗರ: ಜುಲೈ 28ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವದಲ್ಲಿ (Operation Mahadev) ಮೃತಪಟ್ಟ ಮೂವರು ಉಗ್ರರು ಪಾಕಿಸ್ತಾನದವರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಭದ್ರತಾ ಸಂಸ್ಥೆ ತಿಳಿಸಿದೆ.

    ಭಾರತೀಯ ಭದ್ರತಾ ಏಜೆನ್ಸಿಗಳು ಕಲೆಹಾಕಿದ ಮಾಹಿತಿಗಳು ಸೇರಿದಂತೆ ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆ ಮತ್ತು ಬಯೋಮೆಟ್ರಿಕ್ ದಾಖಲೆಗಳನ್ನು ತನಿಖೆ ನಡೆಸಿದ ವೇಳೆ ಪಹಲ್ಗಾಮ್‌ನಲ್ಲಿ ದಾಳಿ (Pahalgam Terrorists) ನಡೆಸಿದ್ದ ಈ ಮೂವರು ಪಾಕಿಸ್ತಾನದವರು ಎಂಬುದು ತಿಳಿದುಬಂದಿದೆ. ಉಗ್ರರನ್ನು ಎಲ್‌ಇಟಿ ಹಿರಿಯ ಕಾರ್ಯಕರ್ತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

    ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಈ ಉಗ್ರರು ಡಚಿಗಮ್-ಹರ್ವಾನ್ ಅರಣ್ಯ ಪ್ರದೇಶದಲ್ಲಿ (Dachigam-Harwan Forest) ಅಡಗಿಕೊಂಡಿದ್ದರು. ಇದನ್ನೂ ಓದಿ: ಸಾರಿಗೆ ಮುಷ್ಕರ – ಸಿಎಂ ಸಭೆಯಲ್ಲಿ ಏನಾಯ್ತು? ಸಾರಿಗೆ ಮುಖಂಡರು ಸಂಧಾನ ತಿರಸ್ಕರಿಸಿದ್ದು ಯಾಕೆ?

    ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ಮತ್ತು ನೋಂದಣಿ ಪ್ರಾಧಿಕಾರದ ಬಯೋಮೆಟ್ರಿಕ್ ದಾಖಲು, ಮತದಾರರ ಗುರುತಿನ ಚೀಟಿಗಳು ಮತ್ತು ಡಿಜಿಟಲ್ ಸ್ಯಾಟಲೈಟ್ ಫೋನ್ ಮಾಹಿತಿ, ಲಾಗ್‌ಗಳು ಮತ್ತು ಜಿಪಿಎಸ್ ವೇ ಪಾಯಿಂಟ್‌ಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಗ್ರಹಿಸಿದ ಪ್ರಮುಖ ಪುರಾವೆಗಳಲ್ಲಿ ಮೂವರು ಭಯೋತ್ಪಾದಕರು ಪಾಕಿಸ್ತಾನದವರು ಎಂಬುದು ದೃಢಪಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರವೇ ನೀಡಿರುವ ದಾಖಲೆಗಳು ದೊರೆತಿದ್ದು, ಯಾವುದೇ ಸಂಶಯವಿಲ್ಲದೇ ಉಗ್ರರು ಪಾಕಿಸ್ತಾನಿಗಳು ಎಂಬುದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಸುಲೇಮಾನ್ ಶಾ ಅಲಿಯಾಸ್ ‘ಫೈಜಲ್ ಜತ್’ ಎ ಗ್ರೇಡ್ ಉಗ್ರನಾಗಿದ್ದು, ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದಾನೆ. ಈತನ ಆಪ್ತ ಅಬು ಹಮಾಜಿ ಅಲಿಯಾಸ್ ಅಫ್ಘಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದ. ಮತ್ತೋರ್ವ ಯಾಸಿರ್ ಅಲಿಯಾಸ್ ಜಿಬ್ರಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದು, ಮೂವರನ್ನು ಕೂಡ ಆಪರೇಷನ್ ಮಹಾದೇವ ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

  • Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ (Terrorists) ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

    ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ

    ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

  • ದಾಳಿಯ ಬಗ್ಗೆ ಭಾರತ ಮೊದಲೇ ಎಚ್ಚರಿಕೆ ನೀಡಿತ್ತು: ಶ್ರೀಲಂಕಾ ಅಧ್ಯಕ್ಷ

    ದಾಳಿಯ ಬಗ್ಗೆ ಭಾರತ ಮೊದಲೇ ಎಚ್ಚರಿಕೆ ನೀಡಿತ್ತು: ಶ್ರೀಲಂಕಾ ಅಧ್ಯಕ್ಷ

    ಕೊಲಂಬೋ: ದಾಳಿಯ ಬಗ್ಗೆ ಭಾರತ ಎಚ್ಚರಿಕೆ ನೀಡಿದ್ದರೂ ದೇಶದ ಭದ್ರತಾ ಸಂಸ್ಥೆ ನನ್ನ ಗಮನಕ್ಕೆ ತಂದಿರಲಿಲ್ಲ ಎಂದು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಗಂಭೀರ ಆರೋಪ ಮಾಡಿದ್ದಾರೆ.

    ಈಸ್ಟರ್ ಭಾನುವಾರದ ವೇಳೆ ನಡೆದ ಸರಣಿ ಬಾಂಬ್ ಸ್ಫೋಟದ ಕುರಿತು ದೇಶವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ ದೂರದರ್ಶದ ಮೂಲಕ ಮಾತನಾಡಿದ ಅಧ್ಯಕ್ಷರು, ಉಗ್ರರ ದಾಳಿ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ದಾಳಿಯ ಬಗ್ಗೆ ದೇಶದ ಭದ್ರತಾ ಸಂಸ್ಥೆಗೆ ಗುಪ್ತಚರ ಇಲಾಖೆ ಹಾಗೂ ಭಾರತದಿಂದ ಮೊದಲೇ ಮಾಹಿತಿ ಸಿಕ್ಕಿತ್ತು. ದರೆ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರದೇ ನಿಷ್ಕಾಳಜಿ ತೋರಿದ್ದಾರೆ ಎಂದರು.

    ಭದ್ರತಾ ಸಂಸ್ಥೆಯು ದಾಳಿಯ ಬಗ್ಗೆ ನನಗೆ ಮಾಹಿತಿ ನೀಡಿದ್ದರೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಸೂಚನೆ ನೀಡುತ್ತಿದ್ದೆ. ಆದರೆ ಅವರು ಹಾಗೇ ಮಾಡಲಿಲ್ಲ. ಹೀಗಾಗಿ ಮಾಹಿತಿ ರವಾನಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. 24 ಗಂಟೆಯ ಒಳಗಾಗಿ ದೇಶದ ಭದ್ರತಾ ಪಡೆಯನ್ನು ಪುನರಚಿಸಲಾಗುವುದು ಎಂದು ತಿಳಿಸಿದರು.

    ಭಾರತ ಏನು ಹೇಳಿತ್ತು?
    ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ದೇಶದ ಒಳಗಡೆ ಇರುವ ಕೆಲವು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿತ್ತು. ಇವರ ವಿಚಾರಣೆ ವೇಳೆ ಒಬ್ಬಾತ ಶ್ರೀಲಂಕಾದ ಝಾರಂ ಹಸೀಂ ಬಗ್ಗೆ ಬಾಯಿ ಬಿಟ್ಟಿದ್ದ. ಈತ ಶ್ರೀಲಂಕಾದ ಮುಸ್ಲಿಂ ಸಂಘಟನೆಯ ಬಗ್ಗೆ ಸಂಪರ್ಕದಲ್ಲಿದ್ದಾನೆ ಎಂದು ತಿಳಿಸಿದ್ದ. ಈ ಮಾಹಿತಿಯನ್ನು ಭಾರತ ಶ್ರೀಲಂಕಾದ ಅಧಿಕಾರಿಗಳಿಗೆ ಹಂಚಿಕೊಂಡಿತ್ತು.

    ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕನ್ನಡಿಗರು, ಭಾರತೀರು ಸೇರಿದಂತೆ 321 ಮಂದಿ ಸಾವನ್ನಪ್ಪಿದ್ದು, 500 ಜನರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ನಾವೇ ನಡೆಸಿದ್ದೇವೆ ಎಂದು ಐಸಿಸ್ ಉಗ್ರ ಸಂಘಟನೆ ಹೇಳಿಕೊಂಡಿದೆ. ಘಟನೆ ನಡೆದ 2 ದಿನಗಳ ನಂತರ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಶ್ರೀಲಂಕಾ ಕ್ರಿಶ್ಚಿಯನ್ ಹಾಗೂ ವಿದೇಶಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ತಿಳಿಸಿದೆ. ತನ್ನ `ಅಮಾಕ್’ ನ್ಯೂಸ್ ಮೂಲಕ ಐಸಿಸ್ ಈ ವಿಚಾರವನ್ನು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಒಟ್ಟಿನಲ್ಲಿ ಈಗ ಇರಾಕ್, ಸಿರಿಯಾ ಬಳಿಕ ಶ್ರೀಲಂಕಾದಲ್ಲೂ ಐಸಿಸ್ ತನ್ನ ಜಾಲವನ್ನು ಹಬ್ಬಿಸಿರುವುದು ದೃಢಪಟ್ಟಿದೆ.

    ಘಟನೆ ಸಂಬಂಧ ಶ್ರೀಲಂಕಾ ಪೊಲೀಸ್ ತನಿಖೆ ನಡೆಸಿ ವಶಕ್ಕೆ ಪಡೆದಿರುವ 40ಕ್ಕೂ ಹೆಚ್ಚು ಮಂದಿಯನ್ನು ಪ್ರಶ್ನಿಸಲಾಗಿದೆ. ಅಲ್ಲದೇ ಸ್ಥಳೀಯರು ನೀಡಿದ ಮಾಹಿತಿ ಅನ್ವಯ ಸಿರಿಯಾ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಕೊಲಂಬೋದಲ್ಲಿ ನಡೆದ ದಾಳಿಯಲ್ಲಿ ಮೊದಲ 6 ದಾಳಿಗಳಲ್ಲಿ ಮೂರು ಚರ್ಚ್‍ನಲ್ಲಿ ಹಾಗೂ 3 ಹೋಟೆಲ್ ಗಳಲ್ಲಿ ನಡೆಸಲಾಗಿತ್ತು. ಕೇವಲ 20 ನಿಮಿಷಗಳ ಅವಧಿಯಲ್ಲಿ ಈ ದಾಳಿ ನಡೆಸಲಾಗಿತ್ತು. ಆ ಬಳಿಕ ಮತ್ತೆರಡು ಬಾಂಬ್ ಸ್ಫೋಟಗಳು ನಡೆದಿತ್ತು. ಘಟನೆಯಲ್ಲಿ 38 ವಿದೇಶಿಯರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು ಶ್ರೀಲಂಕಾ ಸರ್ಕಾರ ತಿಳಿಸಿದ್ದು, ಇದರಲ್ಲಿ ಭಾರತ ಸೇರಿದಂತೆ ಇಂಗ್ಲೆಂಡ್, ಯುಎಸ್, ಆಸ್ಟ್ರೇಲಿಯಾ, ಟರ್ಕಿ, ಚೀನಾ, ಡ್ಯಾನಿಷ್, ಡಚ್ ಮತ್ತು ಪೋರ್ಚುಗಿಸ್ ಪ್ರಜೆಗಳು ಸೇರಿದ್ದಾರೆ.