ಹಾವೇರಿ: ಶಿವಮೊಗ್ಗದ ಭದ್ರಾವತಿಯಲ್ಲಿ (Bhadravathi) ಪಾಕ್ ಪರ ಘೋಷಣೆ ಕೂಗಿದ್ದು ಯಾರೇ ಆಗಿದ್ರು ಅವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವ ಶಿವಾನಂದ ಪಾಟೀಲ್ (Shivanand Patil) ಹೇಳಿದ್ದಾರೆ.
ಹಾವೇರಿಯಲ್ಲಿ (Haveri) ಮಾತನಾಡಿದ ಅವರು, ಸವಣೂರು ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜದ ಫೋಟೋ ಅಳವಡಿಸಿದ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ತಗೆದುಕೊಳ್ಳುತ್ತೇವೆ. ಪ್ಯಾಲೆಸ್ತೀನ್ ಧ್ವಜ ಹಾಕಿದ್ದು ತಪ್ಪು. ಈ ರೀತಿ ಮಾಡಬಾರದು ಎಂದಿದ್ದಾರೆ. ಇದನ್ನೂ ಓದಿ: ಭದ್ರಾವತಿ ಈದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ
ಮದ್ದೂರಿನಲ್ಲಿ (Maddur) ಗಣಪತಿ ವಿಸರ್ಜನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ದೇಶದ ಜನರನ್ನು ಒಗ್ಗೂಡಿಸೋಕೆ ಗಣೇಶ ಉತ್ಸವವನ್ನು ಬಾಲ ಗಂಗಾಧರ ತಿಲಕರು ಮಾಡಿದ್ರು. ಆದರೆ ದುರ್ದೈವ ಈ ರೀತಿಯಾಗಿದೆ. ಸಮಾಜದಲ್ಲಿ ಭಿನ್ನಾಭಿಪ್ರಾಯ ಆಗಬಾರದು. ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಯಾರು ಮಾಡಿದ್ದಾರೆ ಅಂತಾ ನಾವು ನೋಡಿಲ್ಲ, ನೀವೂ ನೋಡಿಲ್ಲ. ಈ ವಿಚಾರಗಳನ್ನು ಸಿಎಂ ಗಮನಕ್ಕೂ ತಂದಿದ್ದೇವೆ. ಶಾಂತಿ ಸಭೆ ಕರೆಯೋ ಮುಂಚೆಯೇ ಎಸ್‌ಒಪಿ ಕೂಡಾ ನಾವು ರಿಲೀಸ್ ಮಾಡಿದ್ದೆವು ಎಂದಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ಡಿಜೆ ಹಾಕಿಕೊಂಡೇ ವಿಸರ್ಜನೆ ಮಾಡಿದ್ದಾರೆ. ಕೋರ್ಟ್ ಆದೇಶ ಇದೆ. ಕೆಲವು ಜಿಲ್ಲೆಗಳಲ್ಲಿ ಅನುಮತಿ ಕೊಟ್ಟಿದ್ದಾರೆ. ಎಲ್ಲರೂ ಶಾಂತಿಯುತವಾಗಿ ಮಾಡಿ ಮುಗಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಇಂತಿಷ್ಟೇ ಡೆಸಿಬಲ್ ಅಂತ ಇದೆ. ಆ ಪ್ರಕಾರ ಅನುಮತಿ ಕೊಡಬಹುದು ಎಂದು ಹೇಳಿದ್ದಾರೆ.
ನವದೆಹಲಿ: ಬ್ರಿಟಿಷರು (British) ಇದ್ದಾಗಲೂ ಗಣೇಶ ಮೆರವಣಿಗೆಗೆ (Ganesha Procession) ಸ್ವಾತಂತ್ರ‍್ಯ ಇತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ ಎಂದು ಸಂಸದ ಡಾ.ಕೆ ಸುಧಾಕರ್ (K Sudhakar) ಕಿಡಿಕಾರಿದ್ದಾರೆ.
ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ (Stone Pelting) ವಿಚಾರವಾಗಿ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರಿಟಿಷ್ ಕಾಲದಲ್ಲಿ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು. ಇಂದು ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ವಿರ್ಸಜನೆಗೆ ಅನುಮತಿ ಕಷ್ಟವಾಗಿದೆ. ಒಂದು ಕೋಮಿಗೆ ಮಾತ್ರ ಎಲ್ಲದಕ್ಕೂ ಪರವಾನಿಗೆ ನೀಡಿದೆ. ಬಹುಸಂಖ್ಯಾತ ಹಿಂದೂಗಳನ್ನು ಟಾರ್ಗೆಟ್ ಮಾಡಿದೆ. ಹಿಂದೂಗಳ ಹಬ್ಬ ಮಾಡಿದರೆ ನೂರು ಪ್ರಶ್ನೆ ಕೇಳುತ್ತಾರೆ, ಅನುಮತಿ ಕೊಡಲ್ಲ. ಶಾಂತಿಯುತ ಮೆರವಣಿಗೆ ಮಾಡಿದರೂ ಗಲಭೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್
ಸ್ವಾತಂತ್ರ‍್ಯ ಹೋರಾಟದಲ್ಲಿ ಹಿಂದೂಗಳ ನಡುವೆ ಸಮನ್ವಯ ಬರಲು ಗಣೇಶ ಹಬ್ಬ ಕಾರಣ. ಹಿಂದೂಗಳ ಒಗ್ಗಟ್ಟಿನ ಪ್ರತೀಕ ಈ ಹಬ್ಬವಾಗಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ. ಹಿಂದೂಗಳ ಧಾರ್ಮಿಕ ಭಾವನೆಗೆ ಗೌರವ ಕೊಡುತ್ತಿಲ್ಲ. ನನ್ನ ಕ್ಷೇತ್ರದಲ್ಲೂ ಒಂದು ಸ್ಪೀಕರ್ ಹಾಕಿಕೊಳ್ಳಲು ಎಸ್ಪಿ ಅನುಮತಿ ಬೇಕು. ಕಾಂಗ್ರೆಸ್‌ಗೆ ಹಿಂದೂಗಳು ಮತ ಹಾಕಿಲ್ವ? ಇಂತಹ ಪರಿಸ್ಥಿತಿ ಯಾವ ಕಾಲದಲ್ಲೂ ನೋಡಿಲ್ಲ. ವರ್ಷಕ್ಕೊಂದು ಆಗುವ ಹಬ್ಬಕ್ಕೆ ಅನುಮತಿ ಬೇಕಾ? ಸ್ಪೀಕರ್ ಹಾಕಬೇಡಿ ಎಂದು ಬಿಜೆಪಿ ನಾಯಕರು ಹೇಳಿದ್ರಾ? ಕೋಮು ಗಲಭೆ ಹುಟ್ಟುಹಾಕಿದ್ದು ಕಾಂಗ್ರೆಸ್ ಸರ್ಕಾರ. ಮುಸ್ಲಿಮರನ್ನ 100% ಓಲೈಕೆ ಮಾಡಿದ್ದೀರಿ, ಇನ್ನೇಷ್ಟು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಭಾರತ ಜಿಂದಾಬಾದ್ ಅಂತಾರೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಅಂದಿದ್ದರು. ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಇದೆ. ಇಂತಹ ಹೇಳಿಕೆಗಳನ್ನು ದೇಶದ್ರೋಹಿಗಳು ಎಂದು ಕರೆಯಬೇಕು. ಬಹುಸಂಖ್ಯಾತ ಹಿಂದೂಗಳ ಮೇಲೆ ಗದಾಪ್ರಹಾರ ಮಾಡುತ್ತಿದ್ದಾರೆ. ಸರ್ಕಾರ ಇದಕ್ಕೆ ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಸರ್ಕಾರದ ಬೆಂಬಲದಿಂದ ಕಾನೂನಿನ ಭಯ ಇಲ್ಲದೇ ವರ್ತಿಸುತ್ತಿದ್ದಾರೆ. ಇಂತಹವರನ್ನು ಕಾಂಗ್ರೆಸ್ ನಾಯಕರು ಬ್ರದರ್ಸ್ ಅಂತಾರೆ. ಸಂವಿಧಾನ ಬರೀ ಬಾಯಿಮಾತಲ್ಲಿ ಇದೆ, ಕಾರ್ಯದಲ್ಲಿಲ್ಲ. ಬಹುಸಂಖ್ಯಾತ ಹಿಂದೂಗಳ ಭಾವನೆ, ಆಚಾರ ವಿಚಾರಗಳಿಗೆ ಧಕ್ಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
ಇನ್ನು ಉಪರಾಷ್ಟ್ರಪತಿ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ನೂರಕ್ಕೆ ನೂರು ವಿಶ್ವಾಸ ಇದೆ. ಸಿಪಿ ರಾಧಾಕೃಷ್ಣನ್ ಅವರಿಗೆ ಅಪಾರ ಅನುಭವ ಇದೆ, ಪಕ್ಷದ ಆದರ್ಶ ಮೈಗೂಡಿಸಿಕೊಂಡಿದ್ದಾರೆ. ಎಲ್ಲ ಸಂಸದರೂ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ದೊಡ್ಡ ಅಂತರದಲ್ಲಿ ಸಿಪಿ ರಾಧಾಕೃಷ್ಣನ್ ಗೆಲವು ಸಾಧಿಸಲಿದ್ದಾರೆ. ಈ ದೇಶಕ್ಕೆ ಸಜ್ಜನ ಸರಳ ವ್ಯಕ್ತಿತ್ವದ, ಅಪಾರ ಅನುಭವ ಹೊಂದಿರುವ ವ್ಯಕ್ತಿ ಉಪರಾಷ್ಟ್ರಪತಿಯಾಗಲಿದ್ದಾರೆ ಎಂದರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ
ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ನಡೆದ ಈದ್ ಮಿಲಾದ್ ಮೆರವಣಿಗೆ (Eid Procession) ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್, ಇಂದು ಬೆಳಗ್ಗೆಯಿಂದ 12 ಸೆಕೆಂಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದೇವೆ ಎಂದರು. ಇದನ್ನೂಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? –ಇಲ್ಲಿದೆ ಇನ್‌ಸೈಡ್ ಸ್ಟೋರಿ
ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಈಗಾಗಲೇ ಕಳುಹಿಸಲಾಗಿದೆ. ಯಾವಾಗ, ಯಾರು, ಎಲ್ಲಿ ವಿಡಿಯೋ ಮಾಡಿದ್ದಾರೆ. ಅದರ ಪರಿಶೀಲನೆ ಆಗಲಿದೆ. ಪ್ರಕರಣದ ತನಿಖೆಗಾಗಿ 3 ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ 3 ಟೀಂ ರಚಿಸಿದ್ದೇವೆ. ವಿಡಿಯೋದಲ್ಲಿ ಇರುವವರನ್ನು ಗುರುತಿಸುತ್ತಿದ್ದೇವೆ. ವಿಡಿಯೋದಲ್ಲಿರುವವರ ಶೋಧಕ್ಕಾಗಿಯೇ ಒಂದು ಟೀಂ ಟೀಮ್ ಕೆಲಸ ಮಾಡಲಿದೆ. ಈದ್ ಮೆರವಣಿಗೆ ವೇಳೆ ವಿಡಿಯೋ ರೆಕಾರ್ಡಿಂಗ್ ಸಹ ಮಾಡಲಾಗಿತ್ತು. ಎಲ್ಲವನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದ್ದು, ಅನಾಹುತಗಳು ಬೆಳಕಿಗೆ ಬರುತ್ತಿವೆ.
ಹಂಚಿನ ಸಿದ್ದಾಪುರ ಗ್ರಾಮದ ಸಮೀಪ ಭದ್ರಾ ನಾಲೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯು ಧಾರಾಕಾರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಸಂಪರ್ಕ ಕಡಿತಗೊಂಡಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಹಂಚಿನ ಸಿದ್ದಾಪುರ ಗ್ರಾಮದಿಂದ ಸಿದ್ದೇಶ್ವರ ದೇವಸ್ಥಾನ ಹಾಗೂ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಹೋಗಿದೆ. ಸಾರ್ವಜನಿಕರು ಪರದಾಡುವ ಸ್ಥಿತಿ ಉಂಟಾಗಿದೆ. ಸೇತುವೆಯನ್ನು ಶೀಘ್ರವೇ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ: ನಾಡಿನಲ್ಲೆಡೆ ಶನಿವಾರ ಸಂಭ್ರಮದಿಂದ ಗಣಪತಿ ಹಬ್ಬ (Ganesha festival) ಆಚರಿಸಲಾಗುತ್ತಿದೆ. ಆದರೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆಯೇ ಗಲಾಟೆ ನಡೆದಿದೆ.
ಗಣಪತಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕರೆತರುವ ವೇಳೆ ಡೊಳ್ಳು ಬಾರಿಸಲು ಎರಡು ಸಮುದಾಯದವರು ಒಂದೇ ತಂಡಕ್ಕೆ ಡೊಳ್ಳು ಬಾರಿಸಲು ಆರ್ಡರ್ ಕೊಟ್ಟಿದ್ದರು. ಆದರೆ ಎರಡು ಸಮುದಾಯದವರು ಒಂದೇ ಸಮಯದಲ್ಲಿ ಗಣಪತಿ ತರುತ್ತಿದ್ದರು. ಈ ವೇಳೆ ನಮ್ಮ ಸಮುದಾಯದ ಗಣಪತಿ ಮೆರವಣಿಗೆಗೆ ಡೊಳ್ಳು ಬಾರಿಸುವವರು ಹಣ ಪಡೆದು ಬಂದಿಲ್ಲ ಎಂದು ಗಲಾಟೆ ನಡೆದಿದೆ. ಡೊಳ್ಳುನವರ ಮೇಲೆ ಕಲ್ಲು ತೂರಾಟ ನಡೆಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಉಜ್ಜಯಿನಿ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ ಹರಿಬಿಟ್ಟಿದ್ದ ಆಟೋ ಚಾಲಕ ಅರೆಸ್ಟ್
ಈ ವೇಳೆ ಮೆರವಣಿಗೆಯಲ್ಲಿದ್ದ ಗ್ರಾಮಸ್ಥರಿಗೂ ಗಾಯವಾಗಿದೆ. ಇದಕ್ಕೆ ಪ್ರತಿಯಾಗಿ ಇನ್ನೊಂದು ಗುಂಪಿನವರು ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ನಡೆಯುತ್ತಿದ್ದ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 8-10 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್ ಅನರ್ಹ ಕುರಿತು ಟೀಕೆ – ದೇವರೇ ನಿಮಗೆ ಶಿಕ್ಷೆ ಕೊಟ್ಟಿದ್ದಾನೆ ಎಂದ ಬ್ರಿಜ್ ಭೂಷಣ್
ಇನ್ನೂ ಘಟನೆ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಯನ್ನು ಇಂದೇ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಶಾಂತಿಯುತವಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧಿಸಿದಂತೆ 2 ಗುಂಪಿನ 22 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಲ್ಲೆ ನಡೆಸಲು ಪವಿತ್ರಾಗೆ ದರ್ಶನ್ ಪ್ರಚೋದನೆ – ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೂ ಕರಗದ ನಟಿ; ಚಾರ್ಜ್‌ಶೀಟ್‌ನಲ್ಲಿ ರಹಸ್ಯ ಸ್ಫೋಟ
ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ (Job) ಹೋಗು ಎಂದಿದ್ದಕ್ಕೆ ಯುವಕ (Youth) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ: ಖಬರಸ್ಥಾನದಲ್ಲಿದ್ದ ಮರ ಕಡಿದಿದ್ದಕ್ಕೆ ಅನ್ಯಕೋಮಿನವರು, ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ (Bhadravathi) ಜಂಬರಗಟ್ಟಿ ಗ್ರಾಮದಲ್ಲಿ ನಡೆದಿದೆ.
ರವಿ ಎಂಬ ಯುವಕ ಮರ ಕಡಿದಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಇದೀಗ ಹಲ್ಲೆ ಖಂಡಿಸಿ ಹೊಳೆಹೊನ್ನೂರು ಪೊಲೀಸ್ (Police) ಠಾಣೆ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮರ ಕಡಿದಿದ್ದಕ್ಕೆ ಕ್ಷಮೆ ಕೇಳಿದ್ದೇವೆ. ಅಷ್ಟಾದರೂ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೋದಿ ಪೋಸ್ಟರ್ ವಿರೂಪ – ಮಹಾರಾಷ್ಟ್ರದ ಯುವ ಮೋರ್ಚಾ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್
ಪೋಸ್ಟ್‌ನಲ್ಲಿ ಏನಿದೆ?
ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ (Gokul Krishnan) ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ.
ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾವತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ.
ಶಿವಮೊಗ್ಗ: ಭದ್ರಾವತಿಯ (Bhadravathi) ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರ ಮೇಲೆ ಹಲ್ಲೆ ಹಾಗೂ ಕಾರು (Car) ಜಖಂಗೊಳಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗಣೇಶ್ (22), ಹರ್ಷ (23) ಮತ್ತು ನಂಜೇಗೌಡ (22) ಎಂದು ಗುರುತಿಸಲಾಗಿದೆ. ಆರೋಪಿಗಳು ವಿಶ್ವೇಶ್ವರ ನಗರದಲ್ಲಿ ಗೋಕುಲ್ ಕೃಷ್ಣನ್ ಅವರ ಕಾರನ್ನು ಜಖಂಗೊಳಿಸಿದ್ದರು. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದೃಶ್ಯಾವಳಿಗಳನ್ನು ಪರಿಶೀಲಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ
ಕಾರು ಜಖಂಗೊಳಿಸಿದ ಪ್ರಕರಣ ಮಾಸುವ ಮುನ್ನವೇ ಕಿಡಿಗೇಡಿಗಳು ಹೋಟೆಲ್‍ಗೆ ತೆರಳಿದ್ದ ಅವರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹಲ್ಲೆಗೊಳಗಾದ ಗೋಕುಲ್ ಕೃಷ್ಣನ್ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕ ಚನ್ನಬಸಪ್ಪ ಸೇರಿದಂತೆ ಬಿಜೆಪಿ ಮುಖಂಡರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಗೋಕುಲ್ ಕೃಷ್ಣನ್ ಭದ್ರಾವತಿಯಲ್ಲಿ ನಡೆಯುತ್ತಿರುವ ಇಸ್ಪೀಟ್, ಓಸಿ ದಂಧೆ ಸೇರಿದಂತೆ ಅಕ್ರಮ ದಂಧೆ ಕುರಿತು ಹಾಗೂ ಈ ದಂಧೆಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ಕೈವಾಡ ಇದೆ ಎಂಬುದಾಗಿ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದರು. ಇದರಿಂದ ಕೆಲವು ಕಿಡಿಗೇಡಿಗಳು ಮನೆಯ ಮುಂದೆ ನಿಲ್ಲಿಸಿದ್ದ ಅವರ ಕಾರನ್ನು ಜಖಂಗೊಳಿಸಿದ್ದರು.