Tag: ಭದ್ರಾವತಿ

  • ಹಸುಗಳ ಮಾಂಸ ಬಳಕೆ ಆರೋಪ- ಸಾಕುಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆ ಮೇಲೆ ದಾಳಿ

    ಹಸುಗಳ ಮಾಂಸ ಬಳಕೆ ಆರೋಪ- ಸಾಕುಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆ ಮೇಲೆ ದಾಳಿ

    ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ (Bhadravathi) ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸಾಕು ಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆ ಮೇಲೆ ತುಂಗಾನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.

    ಕಾರ್ಖಾನೆಯಲ್ಲಿ ಸಾಕು ಪ್ರಾಣಿಗಳ ಆಹಾರ ತಯಾರಿಕೆಗೆ ಹಸುಗಳ ಮಾಂಸ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಮಲೇಶ್ ಎಂಬವರಿಗೆ ಮಲ್ನಾಡ್ ಪ್ರೋ ರಿಚ್ ((Malnad Pro Rich)  ಎಂಬ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ.

    ಈ ಕಾರ್ಖಾನೆಯಲ್ಲಿ ಪಾಲಿಕೆ ವ್ಯಾಪ್ತಿಯಿಂದ ಬರುವ ಕೋಳಿಯ ತ್ಯಾಜ್ಯ ಸಂಗ್ರಹಿಸಿ ಸಾಕು ಪ್ರಾಣಿಗಳಿಗೆ ಆಹಾರದ ಪ್ಯಾಕೇಟ್ ಗಳನ್ನು ಸಿದ್ಧಪಡಿಸಲಾಗುತ್ತದೆ. ಆದರೆ ಗುರುವಾರ ದಾಳಿ ವೇಳೆ ಕಾರ್ಖಾನೆಯಲ್ಲಿ ಕರುವಿನ ತಲೆಯು ಪತ್ತೆಯಾಗಿದೆ. ಹೀಗಾಗಿ ಈ ಸಾಕು ಪ್ರಾಣಿಗಳ ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಹಸುಗಳ ಮಾಂಸವನ್ನು ಬಳಸಲಾಗುತ್ತಿದೆ ಎಂಬ ಅನುಮಾನ ಪೊಲೀಸರದ್ದಾಗಿದೆ. ಇದನ್ನೂ ಓದಿ: 60 ಉಗ್ರರ ಕೊಂದು 250 ಒತ್ತೆಯಾಳುಗಳನ್ನು ಸುರಕ್ಷಿತವಾಗಿ ರಕ್ಷಿಸಿದ ಇಸ್ರೇಲ್ ಸೈನಿಕರು

    ಹೀಗಾಗಿ ದಾಳಿ ನಡೆಸಿರುವ ಪೊಲೀಸರು ಒಂದು ಕಾರಿ 12 ಫೀಡಿಂಗ್ ಪುಡ್ ಚೀಲಗಳನ್ನು ವಶಪಡಿಸಿಕೊಂಡು, ಆರೋಪಿ ಕಮಲೇಶ್ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು

    ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು

    ಶಿವಮೊಗ್ಗ: 2 ಬೈಕ್‌ಗಳ (Bike) ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು (Lorry) ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಮೃತರನ್ನು ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಕಾರು ಅಪಘಾತ: ನಟ ನಾಗಭೂಷಣ್ ಬಂಧನ

    ಶನಿವಾರ ರಾತ್ರಿ 2 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆ ಮೇಲೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದಿದೆ. ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗನಿಂದಲೇ ತಾಯಿಯ ಕೊಲೆ- ಹತ್ಯೆಯ ಬಳಿಕ ಜಮೀನಿನಲ್ಲಿ ಮಲಗಿದ್ದ ಪುತ್ರ

    ಮಗನಿಂದಲೇ ತಾಯಿಯ ಕೊಲೆ- ಹತ್ಯೆಯ ಬಳಿಕ ಜಮೀನಿನಲ್ಲಿ ಮಲಗಿದ್ದ ಪುತ್ರ

    ಶಿವಮೊಗ್ಗ: ಹೆತ್ತ ಮಗನೇ (Son) ತಾಯಿಯನ್ನು (Mother) ಕೊಲೆಗೈದ ದುರ್ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

    ಸುಲೋಚನಮ್ಮ (60) ಕೊಲೆಯಾದ ತಾಯಿ. ಸಂತೋಷ್ (40) ಕೊಲೆಗೈದ ಆರೋಪಿಯಾಗಿದ್ದು, ತಾಯಿಯನ್ನು ಹತ್ಯೆ ಮಾಡಿದ ಬಳಿಕ ಜಮೀನಿನಲ್ಲಿ ಮಲಗಿದ್ದ. ಪಕ್ಕದ ಮನೆಯವರು ಸುಲೋಚನಮ್ಮಗೆ ಊಟ ಕೊಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಾಲಕಿಯನ್ನು ಅಪಹರಿಸಿ, ಒಂದೂವರೆ ತಿಂಗಳು ನಿರಂತರವಾಗಿ ರೇಪ್-‌ ವ್ಯಕ್ತಿ ಅರೆಸ್ಟ್

    ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸಂತೋಷ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ BMTC ವೋಲ್ವೋ ಬಸ್ ಪಲ್ಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಶಿವಮೊಗ್ಗ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಯನ್ನು (Statue) ಕೆಡವಿ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹೊಳೆಹೊನ್ನೂರಿನಲ್ಲಿ (Holehonnur) ನಡೆದಿದೆ.

    ಹೊಳೆಹೊನ್ನೂರಿನ ಸರ್ಕಲ್‌ನಲ್ಲಿ ಸುಮಾರು 18 ವರ್ಷಗಳ ಹಿಂದೆ ಈ ಗಾಂಧಿ ಪ್ರತಿಮೆ ನಿರ್ಮಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು. ಮಧ್ಯರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಗಾಂಧೀಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ದಾರೆ. ಇದನ್ನೂ ಓದಿ: ಗೊಲ್ಲರದೊಡ್ಡಿ ಅಪಘಾತ ಪ್ರಕರಣ – ರಸ್ತೆಗೆ ಹಂಪ್ ಹಾಕುವಂತೆ ಮಗು ಶವ ಇಟ್ಟು ಪ್ರತಿಭಟನೆ

    ದುಷ್ಕರ್ಮಿಗಳ ಈ ದುಷ್ಕೃತ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಲೇ ಪ್ರತಿಮೆ ಬಳಿಯಲ್ಲಿ ನೂರಾರು ಮಂದಿ ಜಮಾಯಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗು ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅವಾಂತರದಿಂದ ಬೈಕ್‍ಗೆ ಟ್ರಕ್ ಡಿಕ್ಕಿ – ಇಬ್ಬರ ದುರ್ಮರಣ

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ‍್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕೃತ್ಯದ ಹಿಂದೆ ಯಾರೇ ಇರಲಿ, ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಬಾರದು. ಕಾನೂನು ಕೈಗೆತ್ತಿಕೊಳ್ಳದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಲ್ಲು, ಚೂರಿ ಹಿಡಿದು ನಡುರಸ್ತೆಯಲ್ಲಿ ದಾಂಧಲೆ – ಸಿನಿಮೀಯ ಶೈಲಿಯಲ್ಲಿ ಲಾಕ್ ಮಾಡಿದ ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾತ್ರಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್‌ನನ್ನು ಕೊಚ್ಚಿ ಕೊಲೆಗೈದ್ರು!

    ರಾತ್ರಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್‌ನನ್ನು ಕೊಚ್ಚಿ ಕೊಲೆಗೈದ್ರು!

    ಶಿವಮೊಗ್ಗ: ರೌಡಿಶೀಟರ್ ಒಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ (Bhadravathi) ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

    ಹತ್ಯೆಯಾದ ರೌಡಿಶೀಟರ್‌ನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ಭದ್ರಾವತಿಯಲ್ಲಿ ಈ ಹಿಂದೆ ನಡೆದಿದ್ದ ಹಲವು ಅಪರಾಧ ಪ್ರಕರಣದಲ್ಲಿ ಮುಜಾಯಿದ್ದೀನ್ ಭಾಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹತ್ಯೆಗೈದ ಆರೋಪಿಗಳು ತಲೆ ಮರೆಸಿಕೊಂಡಿದ್ದು ಈ ಬಗ್ಗೆ ಸುಳಿವು ಸಿಕ್ಕಿಲ್ಲ.

    ಈ ಸಂಬಂಧ ಘಟನಾ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • VISL ಮುಚ್ಚದಂತೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮನವಿ

    VISL ಮುಚ್ಚದಂತೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮನವಿ

    ನವದೆಹಲಿ: ಭದ್ರಾವತಿಯ (Bhadravati) ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (Visvesvaraya Iron and Steel Plant) ಮುಚ್ಚುವ ಕ್ರಮವನ್ನು ಸ್ಥಗಿತಗೊಳಿಸುವಂತೆ ಸಂಸದ ಬಿ.ವೈ ರಾಘವೇಂದ್ರ (BY Raghavendra) ನೇತೃತ್ವದ ನಿಯೋಗ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದೆ.

    ಉಕ್ಕುಸ್ಥಾವರವನ್ನು ಪುನಶ್ಚೇತನಗೊಳಿಸಲು ಅಗತ್ಯ ಬಂಡವಾಳ ಹೂಡುವಂತೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ವಿಐಎಸ್‍ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು. ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಸಾಕು, ಆಫೀಸಿಗೆ ಬನ್ನಿ ಎಂದಿದ್ದಕ್ಕೆ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ!

    ಕಳೆದ ಫೆಬ್ರವರಿಯಲ್ಲಿ ಭದ್ರಾವತಿಯ ಕಾರ್ಖಾನೆಯನ್ನು ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿತ್ತು. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಸರ್ಕಾರದಿಂದ ಈ ಪ್ರತಿಕ್ರಿಯೆ ಬಂದಿತ್ತು. ಇದಾದ ಬಳಿಕ ಕೇಂದ್ರದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

    ಮನವಿ ಸಲ್ಲಿಸುವ ವೇಳೆ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‍ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ

  • ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದ ಯುವಕನಿಗೆ ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯವು (District Court) 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷದ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

    2020ರಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ (Bhadravathi) ತಾಲೂಕಿನ 21 ವರ್ಷದ ಯುವಕನೋರ್ವ 17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

    ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆಯೊಂದಿಗೆ 1 ಲಕ್ಷದ 10 ಸಾವಿರ ರೂ. ದಂಡ (Penalty) ವಿಧಿಸಿ ನ್ಯಾಯಾಲಯ ತೀರ್ಪು (Judgement) ನೀಡಿದೆ. ಇದನ್ನೂ ಓದಿ: 10 ಜನ ದಲಿತರ ಹತ್ಯೆಗೈದಿದ್ದ ಅಪರಾಧಿಗೆ 42 ವರ್ಷಗಳ ಬಳಿಕ ಶಿಕ್ಷೆ ಕೊಟ್ಟ ಕೋರ್ಟ್

  • ಅನ್ಯಕೋಮಿನ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ

    ಅನ್ಯಕೋಮಿನ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ

    ಶಿವಮೊಗ್ಗ: ಮುಸ್ಲಿಂ (Muslim) ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ (Hindu) ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ (Attack) ನಡೆಸಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ನಡೆದಿದೆ.

    ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಇದನ್ನೂ ಓದಿ: ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು

    CRIME

    ಡ್ರಾಪ್ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಝಂಡಾಕಟ್ಟೆ ಬಳಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನನ್ನು ಅಡ್ಡ ಹಾಕಿದೆ. ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದು, ಆತ ಹೆಸರು ಹೇಳುತ್ತಿದ್ದ ಹಾಗೆಯೇ ನಮ್ಮ ಯುವತಿಯನ್ನು ನೀನು ಬೈಕ್‌ನಲ್ಲಿ ಏಕೆ ಕೂರಿಸಿಕೊಂಡು ಬಂದೆ ಎಂದು ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲೇ ನರಳಿ ನರಳಿ ಪ್ರಾಣಬಿಟ್ಟ ಮೂರ್ಛೆ ರೋಗಿ

    ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದು ಯುವಕನ ಇಬ್ಬರು ಸ್ನೇಹಿತರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ. ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ಗಲಾಟೆ ಬಿಡಿಸಿದ ಸ್ಥಳೀಯರಿಗೂ ಮುಸ್ಲಿಂ ಯುವಕರ ಗುಂಪು ಬೆದರಿಕೆ ಹಾಕಿದೆ ಎನ್ನಲಾಗಿದೆ. ಘಟನೆ ಕುರಿತು ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್

  • ಶಿವಮೊಗ್ಗದ ಕನಸಿನಕಟ್ಟೆ ಗ್ರಾಮದಲ್ಲಿ ಮತದಾನ ಸಂಪೂರ್ಣ ಬಹಿಷ್ಕಾರ

    ಶಿವಮೊಗ್ಗದ ಕನಸಿನಕಟ್ಟೆ ಗ್ರಾಮದಲ್ಲಿ ಮತದಾನ ಸಂಪೂರ್ಣ ಬಹಿಷ್ಕಾರ

    ಶಿವಮೊಗ್ಗ: ಗ್ರಾಮದಲ್ಲಿರುವ ಸಮಸ್ಯೆಗಳನ್ನು ಈಡೇರಿಸದ ಹಿನ್ನಲೆ ಗ್ರಾಮಸ್ಥರು ಮತದಾನ ಬಹಿಷ್ಕಾರ (Boycott) ಮಾಡಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಕನಸಿನಕಟ್ಟೆ (Kanasinakatte) ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿರುವ ಸ್ಮಶಾನ, ರಸ್ತೆ, ಬಸ್ ಸೌಕರ್ಯ ಹಾಗೂ ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಕಾರಣ ಮತದಾನ ಬಹಿಷ್ಕರಿಸಿದ್ದಾರೆ. ಬೆಳಗ್ಗೆಯಿಂದಲೂ ಚುನಾವಣಾ ಅಧಿಕಾರಿಗಳು ಮತದಾರು ಈಗ ಬರಬಹುದು ಎಂದು ಕಾದು ಕುಳಿತಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮತಕೇಂದ್ರದ ಮುಂದೆಯೇ ಕೇಸರಿ ಕಲಹ

    ಕನಸಿನಕಟ್ಟೆ ಗ್ರಾಮದಲ್ಲಿ ಒಟ್ಟು 1,081 ಮತಗಳಿದ್ದು, ಇಲ್ಲಿಯವರೆಗೆ ಕೇವಲ 3 ಮಂದಿ ಮಾತ್ರ ಮತದಾನ ಮಾಡಿದ್ದಾರೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಹಣಕಾಸಿನ ವಿಚಾರಕ್ಕೆ ಗಲಾಟೆ, ಯುವಕನ ಕೊಲೆಯಲ್ಲಿ ಅಂತ್ಯ

    ಹಣಕಾಸಿನ ವಿಚಾರಕ್ಕೆ ಗಲಾಟೆ, ಯುವಕನ ಕೊಲೆಯಲ್ಲಿ ಅಂತ್ಯ

    ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು.

    ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಯುವಕರ ಗುಂಪಿನ ನಡುವೆ ಗಲಾಟೆ ನಡೆದು, ಯುವಕನೋರ್ವನ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ಶುಕ್ರವಾರ ರಾತ್ರಿ ನಡೆದಿದೆ.

    ಹತ್ಯೆಯಾದ ಯುವಕನನ್ನು ಕೋಡಿಹಳ್ಳಿ ಬಡಾವಣೆ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ.ಹತ್ಯೆಯಾದ ನವೀನ್ ಹಾಗೂ ಆತನ ಸ್ನೇಹಿತ ಅರುಣ್ ಕುಮಾರ್ ಇಬ್ಬರೂ ಸ್ನೇಹಿತರಾಗಿದ್ದು, ಮೊಬೈಲ್ ಕಳ್ಳತನ ಇವರ ಕಸುಬಾಗಿತ್ತು. ಕಳವು ಮಾಡಿದ ಮೊಬೈಲ್‌ಗಳನ್ನು ಸದಾತ್ ಎಂಬವನ ಬಳಿ ಮಾರಾಟ ಮಾಡುತ್ತಿದ್ದರು. ಸದಾತ್ ಮೊಬೈಲ್ ಖರೀದಿಸಿ ಬಾಕಿ ಹಣವನ್ನು ಉಳಿಸಿಕೊಂಡಿದ್ದ. ಬಾಕಿ ಹಣವನ್ನು ಕೇಳಲು ನವೀನ್ ಹಾಗೂ ಅರುಣ್ ಸತ್ಯಸಾಯಿನಗರಕ್ಕೆ ತೆರಳಿದ್ದರು.
    ಇದನ್ನೂ ಓದಿ: ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ 

    ಬಾಕಿ ಹಣ ವಸೂಲಿಗೆ ತೆರಳಿದ್ದ ವೇಳೆ ನವೀನ್, ಅರುಣ್ ಕುಮಾರ್ ಹಾಗೂ ಸದಾತ್ ಗುಂಪಿನ ನಡುವೆ ಗಲಾಟೆ ನಡೆದಿದೆ. ರಂಜಾನ್ (Ramzan) ಹಬ್ಬ ಇರುವ ಕಾರಣ ಹಣ ಇಲ್ಲ. ನಂತರ ಕೊಡುವುದಾಗಿ ಸದಾತ್ ತಿಳಿಸಿದ್ದಾನೆ. ಹಣ ಕೊಡುವುದಿಲ್ಲ ಎಂಬ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡಿದ್ದಾರೆ. ನಂತರ ಸದಾತ್ ತನ್ನ ಬಳಿಯಿದ್ದ ಚಾಕುವಿನಿಂದ ನವೀನ್‌ಗೆ ಇರಿದಿದ್ದಾನೆ. ಚಾಕು ಇರಿತಕ್ಕೊಳಗಾದ ನವೀನ್ ರಕ್ತದ ಮಡುವಿನಲ್ಲಿ‌ ಬಿದ್ದು ಒದ್ದಾಡುತ್ತಿದ್ದ. ಘಟನೆ ನಂತರ ಯುವಕರು ಸ್ಥಳದಿಂದ ಪರಾರಿಯಾಗಿದ್ದರು. ನಂತರ ಸ್ಥಳೀಯರು ನವೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ನವೀನ್ ಅಸುನೀಗಿದ್ದ. ಇದನ್ನೂ ಓದಿ: ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ 

    ಹಿಂದೂ ಯುವಕನನ್ನು ಮುಸ್ಲಿಂ ಯುವಕರು ಹತ್ಯೆ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಭಜರಂಗದಳ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆ ಮುಖಂಡರು ಆಸ್ಪತ್ರೆ ಬಳಿ ಜಮಾಯಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡರು. ಅಲ್ಲದೇ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು. ಬಳಿಕ ಭಜರಂಗದಳ (Bajarang Dal) ಕಾರ್ಯಕರ್ತರು, ಹಿಂದೂ ಸಂಘಟನೆಯ ಮುಖಂಡರು ಸ್ಥಳದಿಂದ ತೆರಳಿದರು. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ 

    ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಹೊಸಮನೆ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸದಾತ್ ಹಾಗೂ ಸುಹೈಲ್ ಎಂದು ಗುರುತಿಸಲಾಗಿದೆ. ಅಲ್ಲದೇ ಭದ್ರಾವತಿಯಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ