Tag: ಭದ್ರಾ ಮೇಲ್ದಂಡೆ

  • ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್

    ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್

    ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Bank Project) ಕೇಂದ್ರದಿಂದ ಬರುವ ಅನುದಾನ (Grant) ಪಡೆಯಲು ರಾಜ್ಯ ಸರ್ಕಾರ ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡಿ ರಾಜ್ಯದ ಜನತೆಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯ ಸರ್ಕಾರಕ್ಕೆ ಠಕ್ಕರ್ ನೀಡಿದ್ದಾರೆ.

    ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉತ್ತರ ನೀಡುತ್ತಿರುವಾಗ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ ಅವರು, ಬಜೆಟ್ (Budget) ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳಲ್ಲಿ ಬಂದಿರುವ ಹೊಗಳಿಕೆಗಳನ್ನು ಪ್ರಸ್ತಾಪ ಮಾಡಿ ಸಮರ್ಥನೆ ಮಾಡಿಕೊಂಡಿರುವುದಕ್ಕೆ ವ್ಯಂಗ್ಯವಾಡಿದರು. ನೀವು ಮುಖ್ಯಮಂತ್ರಿ ಆಗಿದ್ದೀರ, ಹಿಂದೆ ವಿಪಕ್ಷ ನಾಯಕರೂ ಆಗಿದ್ದೀರ. ಆದರೆ, ನಿಮ್ಮ ಸಾಮರ್ಥ್ಯ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳ ಸಹಾಯ ತೆಗೆದುಕೊಂಡು ಮಾತಾಡುವಷ್ಟರ ಮಟ್ಟಿಗೆ ಅಸಹಾಯಕರಾಗಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪರಿಷತ್ ಉಪಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು; ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ

    15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ, ಪೆರಿಫೆರಲ್ ರಸ್ತೆಗಳ 6,300 ಕೋಟಿ ರೂ. ಹಣ ಕೊಟ್ಟಿಲ್ಲ. ನಮ್ಮ ರಾಜ್ಯದಿಂದ ಗೆದ್ದು ಹೋದ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಅನುದಾನಗಳನ್ನು ನಿರಾಕರಿಸಿದರು ಎಂದು ಸಿಎಂ ಸತ್ಯ ಮರೆಮಾಚಿ ಕಾನೂನು ತಿರುಚಿ ಹೇಳುತ್ತಿದಾರೆ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ಶಿಫಾರಸು ಮಾಡಿದ್ದು ನಿಜ. ಆದರೆ ಅಂತಿಮ ವರದಿಯಲ್ಲಿ ಅದು ಇರಲಿಲ್ಲ. ಇರದ ಮೇಲೆ ಕೇಳುವುದು ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ

    ಇನ್ನು ಪೆರಿಫರಲ್ ರಸ್ತೆಗೆ 6,000 ಕೋಟಿ ಈಗಲೂ ಇದೆ. ಆದರೆ ಇಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯೇ ಶುರು ಮಾಡಿಲ್ಲ. ಭೂಸ್ವಾಧೀನವೇ ಆಗಿಲ್ಲ. ಯೋಜನೆ ಆರಂಭ ಮಾಡಿದರೆ ಕೇಂದ್ರದ ಅನುದಾನ ಬರುತ್ತದೆ. ಕೇಂದ್ರದಿಂದ ಅನುದಾನ ಕೇಳಬೇಕು ಅಂದರೆ ನಿರ್ದಿಷ್ಟ ರೀತಿಯಲ್ಲಿ ಪ್ರಸ್ತಾವನೆ ಕಳುಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆಯೂ ಸಿಗುತ್ತದೆ ಎಂದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ? – ಕಾಂಗ್ರೆಸ್ ನಿಯೋಗದಿಂದ ಕಮಿಷನರ್‌ಗೆ ದೂರು

    ಈ ವಿಚಾರದಲ್ಲಿ ನಮ್ಮ ಸರ್ಕಾರ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಟ್ಟಿತ್ತು. ಈಗಲೂ ಕೇಂದ್ರದಿಂದ ಹಣ ಬರುತ್ತದೆ. ಅದಕ್ಕೆ ಹೋಗಿ ಕೇಳಬೇಕು. ಸರಿಯಾದ ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಎನ್ನುವುದು ಸರಿಯಲ್ಲ. ಭದ್ರಾ ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದರಿಂದ ಎನ್ ಫಾರ್ಮ್‌ನಡಿ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನ ಕೇಳುವುದು ಹೇಗೆ ಎಂದು ಕಾಂಗ್ರೆಸ್‌ಗೆ ಗೊತ್ತಿಲ್ಲ ಆರೋಪಿಸಿದರು. ಇದನ್ನೂ ಓದಿ: ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ಈ ಸಂದರ್ಭದಲ್ಲಿ ಯಾವ ಮಾದರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತರಬೇತಿ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸಿದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

  • ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆಗೆ (Bhadra Irrigation Project) ಕೇಂದ್ರದ ಬಜೆಟ್‍ನಲ್ಲಿ (Union Budget 2023) ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದರ ಜೊತೆಗೆ 5,300 ಕೋಟಿಯನ್ನು ಬಂಪರ್ ಗಿಫ್ಟ್ ಕೊಟ್ಟಿದೆ ಮೋದಿ (Narendra Modi) ಸರ್ಕಾರ.

    ಭದ್ರಾ ಮೇಲ್ಡಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ. ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯೂ ಇದರ ವ್ಯಾಪ್ತಿಯಲ್ಲಿ ಬರಲಿದೆ. ಅಂದಹಾಗೆ 29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಕಡೂರು ತಾಲೂಕು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲೂರು ತಾಲೂಕುಗಳು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು, ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕುಗಳು ಭದ್ರಾ ಮೇಲ್ದಂಡೆ ಯೋಜನೆಯ ವ್ಯಾಪ್ತಿಯಲ್ಲಿವೆ. ಒಟ್ಟು 787 ಗ್ರಾಮಗಳ 74,26,485 ಜನರಿಗೆ ಅನುಕೂಲ ಆಗಲಿದ್ದು, 2020-21ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗಳಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ಯೋಜನೆ ಬ್ಲೂ ಪ್ರಿಂಟ್ ಏನು?:
    ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದು. ಭದ್ರಾ ಜಲಾಶಯಕ್ಕೆ ನೀರು ಹರಿಸುವುದು, ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದಾಗಿದೆ. ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವುದು ಮತ್ತು ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ ಆಗಿದೆ. ಈ ಯೋಜನೆಗಾಗಿ ಒಟ್ಟು 4 ಸ್ಥಳದಲ್ಲಿ ನೀರನ್ನು ಲಿಫ್ಟ್ ಮಾಡಲಾಗುತ್ತದೆ. ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ಹೋಗುವ ಕಾಲುವೆ ಮಾರ್ಗದ 2 ಸ್ಥಳಗಳಲ್ಲಿ 80 ಮೀ. ಎತ್ತರಕ್ಕೆ (ಎನ್.ಆರ್.ಪುರ ತಾಲೂಕಿನ ಕಣಬೂರು ಮತ್ತು ಕುಸಬೂರು ಗ್ರಾಮಗಳ ಹತ್ತಿರ) ಹಾಗೂ ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗಕ್ಕೆ ಹೋಗುವ ಕಾಲುವೆಯ ಮಾರ್ಗದಲ್ಲಿ 2 ಸ್ಥಳಗಳಲ್ಲಿ, 7 ಮೀ. ಎತ್ತರಕ್ಕೆ (ತರೀಕೆರೆ ತಾಲೂಕಿನ ಶಾಂತಿಪುರ ಮತ್ತು ಬೆಟ್ಟತಾವರೆಕೆರೆ ಗ್ರಾಮಗಳ ಹತ್ತಿರ) ಲಿಫ್ಟ್ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಕೇಂದ್ರ ಬಜೆಟ್ ನವಭಾರತದ ದೃಷ್ಟಿಕೋನ: ಯೋಗಿ ಆದಿತ್ಯನಾಥ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

    Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

    ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2023) ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲಿಡುವ ಮೂಲಕ ಮಧ್ಯ ಕರ್ನಾಟಕದ 7, ಮಲೆನಾಡಿನ 2, ಹಳೇ ಮೈಸೂರು ಭಾಗದ ಮೂರು ತಾಲೂಕುಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

    ಕರ್ನಾಟಕ ಚುನಾವಣೆಯಲ್ಲಿ ಹಿಂದುತ್ವ + ಅಭಿವೃದ್ಧಿ ಅಸ್ತ್ರ ಪ್ರಯೋಗಿಸುತ್ತಿರುವ ಬಿಜೆಪಿ ಈಗ ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ವಿಚಾರವನ್ನು ಮುಂದಿಟ್ಟುಕೊಂಡು ಈ ಭಾಗದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.

    787 ಹಳ್ಳಿಗಳಿಗೆ ಅನುಕೂಲ ಆಗುವ ಯೋಜನೆಯನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ಮತಬೇಟೆಗೆ ಸಿದ್ಧವಾಗಿದೆ ಎಂಬ ಮಾತುಗಳು ಈಗ ಕೇಳಿ ಬಂದಿದೆ. ಈಗಾಗಲೇ ಮಧ್ಯಕರ್ನಾಟಕ ಭಾಗದಲ್ಲಿ ಜೆ.ಪಿ.ನಡ್ಡಾ ಮಠಯಾತ್ರೆ ನಡೆಸಿದರೆ, ಹಳೇ ಮೈಸೂರು ಭಾಗದಲ್ಲಿ ಅಮಿತ್ ಶಾ ಪ್ರವಾಸ ಮಾಡಿದ್ದಾರೆ. ಈಗ ನಾಲ್ಕು ಜಿಲ್ಲೆಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮೆಗಾ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ಧಾರವಾಡದ ಕಸೂತಿ ಕಲೆಯಿರುವ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ

    ಏನಿದು ಭದ್ರಾ ಮೇಲ್ದಂಡೆ ಯೋಜನೆ?
    ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯ 5,57,022 ಎಕರೆ ಪ್ರದೇಶದ ವ್ಯಾಪ್ತಿಯಲ್ಲಿರಯವ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ಇದಾಗಿದೆ.

    29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ಸಿಕ್ಕಿದ್ದು ಚಿಕ್ಕಮಗಳೂರಿನ ತರೀಕೆರೆ, ಕಡೂರು, ಚಿತ್ರದುರ್ಗದ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲ್ಮೂರು, ದಾವಣಗೆರೆಯ ಶಿರಾ, ಜಗಳೂರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕು ಸೇರಿದಂತೆ ಒಟ್ಟು 787 ಗ್ರಾಮಗಳ 74.26 ಲಕ್ಷ ಜನರಿಗೆ ಅನುಕೂಲವಾಗಲು ಈ ಯೋಜನೆ ರೂಪಿಸಲಾಗಿದೆ.

    2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗೆ ಏರಿಕೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭದ್ರಾ ಮೇಲ್ದಂಡೆ ಶೀಘ್ರದಲ್ಲಿ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ: ಗೋವಿಂದ ಕಾರಜೋಳ

    ಭದ್ರಾ ಮೇಲ್ದಂಡೆ ಶೀಘ್ರದಲ್ಲಿ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ: ಗೋವಿಂದ ಕಾರಜೋಳ

    ನವದೆಹಲಿ: ಭದ್ರಾ ಮೇಲ್ದಂಡೆ ಶೀಘ್ರದಲ್ಲಿಯೇ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆಗೆ ಈ ಬಗ್ಗೆ ಚರ್ಚಿಸಿದ್ದು ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗಲಿದೆ ಎಂದರು.

    ಭದ್ರಾ ಮೇಲ್ದಂಡೆ ಯೋಜನೆಯು ಬೃಹತ್ ನೀರಾವರಿ ಯೋಜನೆಯಾಗಿದ್ದು, 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮಥ್ರ್ಯದ ಶೇ.50 ರಷ್ಟನ್ನು ತುಂಬಿಸುವ ಯೋಜನೆಯಾಗಿದೆ.

    ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಎಲ್ಲಾ ಅರ್ಹತೆ ಹೊಂದಿದ್ದು, ಈಗಾಗಲೇ ಅವಶ್ಯವಿರುವ ಎಲ್ಲ ಪೂರಕ ಅನುಮೋದನೆಗಳನ್ನು ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಿಂದ ಪಡೆದುಕೊಂಡಿದೆ. ಕೇಂದ್ರದ ಜಲಶಕ್ತಿ ಮಂತ್ರಾಲಯವು 14ನೇ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ. ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ಚಿದಂಬರಂ

    ಅತಿ ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಂಬಂಧಿಸಿದ ಕೇಂದ್ರ ಸಚಿವರುಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಗೆ ಮನವಿ ಮಾಡಿದ್ದು, ಅವರೂ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಸಿಗಲಿದ್ದು, ಇದು ಕರ್ನಾಟಕದ ಮೊದಲನೆಯ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು.

    21,473.67 ಕೋಟಿಯ ಯೋಜನೆಯಾಗಿದ್ದು, ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾದ ನಂತರ ಕೇಂದ್ರ ಸರ್ಕಾರ ಈ ಯೋಜನೆಗೆ 16125.48 ( ಸೂಕ್ಷ್ಮ ನೀರಾವರಿ ಹೊರತುಪಡಿಸಿ) ಕೋಟಿ ವೆಚ್ಚದಲ್ಲಿ ಶೇ.60 ರಷ್ಟು ಅಂದರೆ ರೂ. 9675.29 ಕೋಟಿಗಳನ್ನು ಭರಿಸಲಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

    Live Tv

  • ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಬೆಂಗಳೂರು: ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

    ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅಲ್ಲದೆ ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದು ವಿವರಿಸಿದರು.

    ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    ಈ ಯೋಜನೆಯಡಿ ಕಳೆದೆರಡು ವರ್ಷಗಳಲ್ಲಿ 2362.62 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ಎಚ್ಚರಿಸಿದರು.

    ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.