Tag: ಭದ್ರಾ ಮೇಲ್ದಂಡೆ ಯೋಜನೆ

  • ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

    ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

    – 4 ತಿಂಗಳ ಅಂತರದಲ್ಲಿ 2ನೇ ಬಾರಿ ಪ್ರಧಾನಿ ಭೇಟಿ‌; ಮಹತ್ವದ ವಿಚಾರಗಳ ಚರ್ಚೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ.

    ಕಳೆದ 4 ತಿಂಗಳ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ (Upper Bhadra Project), ನರ್ಬಾಡ್ (NABARD) ಅಡಿ ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಮುಗಿದ ಬಳಿಕ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

    ಅನುದಾನ ಬಿಡುಗಡೆಗೆ ಮನವಿ:
    ಪ್ರಧಾನಿಗಳನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ನಬಾಡ್‌ ಸಾಲದ ಪ್ರಮಾಣದಲ್ಲಿ 58% ಕಡಿತಗೊಳಿಸಿದ್ದು, ಪೂರ್ಣ ಪ್ರಮಾಣದ ಸಾಲ ನೀಡಬೇಕು. ನಬಾರ್ಡ್ ನಿಂದ 2023-24ರಲ್ಲಿ 5,600 ಕೋಟಿ ರೂ. ಕೃಷಿ ಸಾಲ ನೀಡಿತ್ತು. ಆದ್ರೆ 2024-25ರಲ್ಲಿ 2,340 ಕೋಟಿ ರೂ. ಕೃಷಿ ಸಾಲ ಮಾತ್ರ ನೀಡಿದೆ ಎಂದು ಗಮನಕ್ಕೆ ತಂದರಲ್ಲದೇ ಜೊತೆಗೆ ಕಳಸಾ ಬಂಡೂರಿ ಯೋಜನೆ, ಮೇಕೆದಾಟು ಯೋಜನೆಗೆ ಕ್ಲಿಯರೆನ್ಸ್‌ಗೆ ಮನವಿ ಮಾಡಿದ್ದಾರೆ.

    ಸಿಎಂ ಮನವಿ ಪತ್ರದಲ್ಲಿ ಏನಿದೆ?
    ಆತ್ಮೀಯ ಪ್ರಧಾನಮಂತ್ರಿ‌ಗಳೇ ನಿಮ್ಮನ್ನು ಭೇಟಿಯಾಗಲು ಸಮಯ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ನಮ್ಮ ರಾಜ್ಯದ ನಿರ್ಣಾಯಕ ಸಮಸ್ಯೆಗಳನ್ನು ನಿಮ್ಮ ಮುಂದಿಡಲು ಬಯಸುತ್ತೇನೆ. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ

    ನಬಾರ್ಡ್‌ನಿಂದ ಕರ್ನಾಟಕಕ್ಕೆ ಅಲ್ಪಾವಧಿಯ ಕೃಷಿ ಸಾಲ ಮಿತಿಯನ್ನು ತೀವ್ರವಾಗಿ ಕಡಿತಗೊಳಿಸಿರುವುದು ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿಸಿದೆ. 2023-24ರಲ್ಲಿ ಮಂಜೂರಾದ 5,600 ಕೋಟಿ ರೂ. ಮಿತಿಯಂತೆ, ನಬಾರ್ಡ್ ಪ್ರಸಕ್ತ ವರ್ಷಕ್ಕೆ (2024-25) 2,340 ಕೋಟಿ ರೂ.ಗಳನ್ನು ಮಾತ್ರ ಮಂಜೂರು ಮಾಡಿದೆ. ಇದರಿಂದ 58% ಅನುದಾನ ಕಡಿತವಾಗಿದ್ದು, ರೈತರ ಹಣಕಾಸು ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚುವರಿ ಬಡ್ಡಿ ರಿಯಾಯಿತಿ ಒದಗಿಸಲು ಮುಂದಾಗದಿದ್ದರೆ ನಮ್ಮ ಹಣಕಾಸಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳ ಬಗ್ಗೆ ತಿಳಿಸಿದ್ದೇನೆ. ಕರ್ನಾಟಕದ ರೈತರು ಕೃಷಿ ಸಾಲ ಪಡೆಯುವುದಕ್ಕಾಗಿ ಈ ಸಮಸ್ಯೆ ಸರಿಪಡಿಸಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶಿಸಬೇಕೆಂದು ವಿನಂತಿಸುತ್ತೇನೆ.

    ಎರಡನೆಯದಾಗಿ, ನಾನು ಈ ಹಿಂದೆ ನಿಮ್ಮಲ್ಲಿ ವಿನಂತಿಸಿದಂತೆ, 2023-24 ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವುದಾಗಿ ಹಣಕಾಸು ಸಚಿವರು ನೀಡಿದ ಭರವಸೆಯನ್ನು ಈಡೇರಿಸಬೇಕಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

    ಮೂರನೆಯದಾಗಿ, ಕರ್ನಾಟಕವು ಶುಷ್ಕ ರಾಜ್ಯವಾಗಿದೆ ಮತ್ತು ನೀರಾವರಿ ಸಾಮರ್ಥ್ಯದ ಅಭಿವೃದ್ಧಿಯ ಅಗತ್ಯವಿದೆ. ಹಾಗಾಗಿ ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಬಾಕಿ ಉಳಿದಿರುವ ಯೋಜನೆಗಳ ಅನುಮತಿಗಳು ನಮ್ಮ ಯೋಜನೆಗಳನ್ನು ವಿಳಂಬಗೊಳಿಸುತ್ತಿವೆ. ಕಾವೇರಿ ನದಿಯ ಮೇಕೆದಾಟು ಸಮತೋಲನ ಜಲಾಶಯ ಮತ್ತು ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆಗಳ ಎರಡು ಯೋಜನೆಗಳು ನಿಮ್ಮ ತುರ್ತು ಗಮನದ ಅಗತ್ಯವಿದೆ. ಮೊದಲಿನವು ಜಲ ಶಕ್ತಿ ಸಚಿವಾಲಯದ ಅನುಮೋದನೆ ಮತ್ತು ಪರಿಸರ ಅನುಮತಿಯ ಅಗತ್ಯವಿದೆ. ಎರಡನೆಯದು ವನ್ಯಜೀವಿ ತೆರವಿಗೆ ಮುಂದುವರಿದ ಹಂತದಲ್ಲಿದೆ. ಈ ಯೋಜನೆಗಳಿಗೆ ಶೀಘ್ರವಾಗಿ ಅನುಮತಿ ನೀಡುವಂತೆ ಎರಡು ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡುತ್ತೇನೆ.

    ನಾಲ್ಕನೆಯದಾಗಿ, ಬೆಂಗಳೂರು ದೇಶದ ಟೆಕ್ ಮತ್ತು ಇನ್ನೋವೇಶನ್ ರಾಜಧಾನಿಯಾಗಿ ಹೊರಹೊಮ್ಮಿದೆ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹಾಗಾಗಿ ಬೆಂಗಳೂರಿಗೆ ನಗರ ಸಾರಿಗೆ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡಲು ವಿಶೇಷ ನೆರವು ನೀಡಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

  • ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

    ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

    ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Meldande Project) 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ (H K Patil) ಒತ್ತಾಯಿಸಿದ್ದಾರೆ.

    2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದಿದ್ದಾರೆ.ಇದನ್ನೂ ಓದಿ: ಕಾಶಿನಾಥ್ ಪುತ್ರನ ಸಿನಿಮಾದ ಟೀಸರ್ ರಿಲೀಸ್: ಕುತೂಹಲ ಮೂಡಿಸಿದ ಸ್ಟೋರಿ

    ಕಳೆದ ವರ್ಷ ಫೆ.01 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದು, ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುತ್ತವೆ ಎಂದು ತಿಳಿಸಿದ್ದರು.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ

    ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 2024ರ ಜು.19, ಆ.03 ಹಾಗೂ ಆ.06 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿಯವರು ಹಾರಿಕೆಯ ಉತ್ತರ ನೀಡಿದ್ದಾರೆ.

    ಕೇಂದ್ರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿದೆ. ಆದರೆ ಈ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ.

    ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿರಬೇಕು. ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿ.ಜೆ.ಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

    ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

  • ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಬಹಳ ಅನುಕೂಲಕರ: ಬೊಮ್ಮಾಯಿ

    ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಬಹಳ ಅನುಕೂಲಕರ: ಬೊಮ್ಮಾಯಿ

    ಹಾವೇರಿ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ (Union Budget 2023) ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) 5,300 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹರ್ಷ ವ್ಯಕ್ತಪಡಿಸಿದರು.

    ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿದೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ 5,300 ಕೋಟಿ ರೂ. ನೀಡಿದ್ದು ಸ್ವಾಗತಾರ್ಹ ಎಂದರು.

    ಕರ್ನಾಟಕದ (Karnataka) ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆಯಾಗಿದೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು, ಸಂತಸದ ಸಂಗತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

    ರೈತರ ಫಲವತ್ತಾದ ಭೂಮಿಯಲ್ಲಿ ಕಾರಿಡಾರ್ ಬೇಡ: ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂಸ್ವಾಧೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ. ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್‌ಗೆ ಭೂಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭದ್ರಾ ಮೇಲ್ದಂಡೆ ಭೂ ಸ್ವಾಧೀನಕ್ಕೆ ನಮ್ಮವರೇ ಅಡ್ಡಿಯಾಗಿದ್ದಾರೆ: ಎ.ನಾರಾಯಣಸ್ವಾಮಿ

    ಭದ್ರಾ ಮೇಲ್ದಂಡೆ ಭೂ ಸ್ವಾಧೀನಕ್ಕೆ ನಮ್ಮವರೇ ಅಡ್ಡಿಯಾಗಿದ್ದಾರೆ: ಎ.ನಾರಾಯಣಸ್ವಾಮಿ

    ಚಿತ್ರದುರ್ಗ: ಭದ್ರಾ ಮೇಲ್ದಂಡೆ ಭೂ ಸ್ವಾಧೀನಕ್ಕೆ ನಮ್ಮವರೇ ಅಡ್ಡಿಯಾಗಿದ್ದಾರೆ. ಹೀಗಾಗಿ ನೀರಾವರಿ ಹೋರಾಟ ಸಮಿತಿ ಹಾಗೂ ರೈತ ಸಂಘಟನೆಗಳು ಇಂತಹ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಸಬೇಕು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

    ನಗರದ ರೈತ ಭವನದಲ್ಲಿ ನೀರಾವರಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತರಿಕೆರೆ ತಾಲೂಕಿನ ಅಬ್ಬಿನಹೊಳಲು ಬಳಿ 1.9 ಕಿ.ಮೀ ಉದ್ದದ ಕಾಲುವೆ ನಿರ್ಮಾಣಕ್ಕೆ ಅಲ್ಲಿನ ರೈತರು ತಡೆ ಮಾಡುತ್ತಿದ್ದಾರೆ. ಇದಕ್ಕೆ ಚಿತ್ರದುರ್ಗ ಜಿಲ್ಲೆಯವರೇ ಬೆಂಬಲ ಸೂಚಿಸಿದ್ದಾರೆ. ಪೊಲೀಸರ ಮೂಲಕ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಆದರೆ ಈ ರೀತಿಯ ಪ್ರಯತ್ನಗಳು ಬೇಡ. ಸಂಘರ್ಷ ಒಳ್ಳೆಯದಲ್ಲ, ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದರು.

    ರೈತರ ಮನವೊಲಿಸುವ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ತಾವು ರೈತರೊಂದಿಗೆ ಮಾತುಕತೆ ನಡೆಸಿದ್ದು, ಕೊನೆಯ ಘಳಿಗೆಯಲ್ಲಿ ಅಡ್ಡಗಾಲು ಹಾಕಲಾಯಿತು. ಅಬ್ಬಿನಹೊಳಲು ಹತ್ತಿರದ ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದರೆ ಇಷ್ಟೊತ್ತಿಗೆ ಎರಡು ಮೋಟಾರು ಪಂಪುಗಳ ಚಾಲನೆ ಮಾಡಿ, ವಿವಿ ಸಾಗರ ಜಲಾಶಯಕ್ಕೆ 125 ಅಡಿ ನೀರು ತುಂಬಿಸಬಹುದಿತ್ತು. ಇದು ಸಾಧ್ಯವಾಗದೇ ಹೋಗಿದೆ. ಈ ನೆಲದಲ್ಲಿ ಹುಟ್ಟಿದ ಎಲ್ಲರೂ ಈ ಬಗ್ಗೆ ಚಿಂತನೆ ನಡೆಸಬೇಕು. ಹೋರಾಟಗಳು ಮುಗಿದಿಲ್ಲ, ಇನ್ನೂ ಬಾಕಿ ಇದೆ ಎಂದು ಭಾವಿಸಬೇಕು. ನಮ್ಮವರಿಂದಲೇ ಎದುರಾಗುತ್ತಿರುವ ತೊಡರುಗಳ ಬಗ್ಗೆ ಎಚ್ಚರವಹಿಸಬೇಕೆಂದು ನಾರಾಯಣಸ್ವಾಮಿ ಹೇಳಿದರು. ಇದನ್ನೂ ಓದಿ: ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ

    ಜಿಲ್ಲೆಯ ಜನರ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾಗಿ ವಿವಿ ಸಾಗರಕ್ಕೆ ನೀರು ಹರಿದು ಬಂದಿದೆ. ಎಲ್ಲಿಯೂ ನಾನೇ ನೀರು ತಂದೆ ಎಂದು ಹೇಳಿಲ್ಲ. ಅದು ಮೂರ್ಖತನವಾಗುತ್ತದೆ. ಸ್ಥಗಿತಗೊಂಡಿದ್ದ ಅಜ್ಜಂಪುರ ಅಂಡರ್ ಪಾಸ್ ಕಾಮಗಾರಿ ಚುರುಕುಗೊಳಿಸಿ, ಪೂರ್ಣಗೊಳಿಸಲಾಯಿತು. ಇದಕ್ಕೆ ಹಿಂದಿನ ರೇಲ್ವೆ ಸಚಿವ ಸುರೇಶ್ ಅಂಗಡಿಯವರ ಶ್ರಮ ನೆನೆಯಬೇಕು. ಅವರು ಸಹಾಯ ಮಾಡದಿದ್ದರೆ ಅಂಡರ್ ಪಾಸ್ ಕಾಮಗಾರಿ ವಿಳಂಬವಾಗುತ್ತಿತ್ತು ಎಂದರು.

    ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವುದು ಸೇರಿದಂತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಗುರುವಾರ ಸಭೆ ಕರೆಯಲಾಗಿದೆ. ಚಿತ್ರದುರ್ಗ ಜಿಲ್ಲೆಯ ಜನ ತಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿ ಸಚಿವನನ್ನಾಗಿ ಮಾಡಿದ್ದಾರೆ. ಅವರ ಋಣ ತೀರಿಸುತ್ತೇನೆ. ರಾಷ್ಟ್ರೀಯ ಯೋಜನೆಯಾಗಲು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕುವುದಾಗಿ ನಾರಾಯಣಸ್ವಾಮಿ ಹೇಳಿದರು. ಇದನ್ನೂ ಓದಿ: ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ 

    ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ ಮಾತನಾಡಿ, ಅಜ್ಜಂಪುರ ರೇಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳಿಸಲು ನಾರಾಯಣಸ್ವಾಮಿ ಮಾಡಿದ ಹಠ ಹೋರಾಟಗಾರರಲ್ಲಿ ಸ್ಫೂರ್ತಿಗೆ ಕಾರಣವಾಗಿತ್ತು. ಜಿಲ್ಲೆಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ನೀರು ಬಂದಿಲ್ಲ. ಹಲವು ಕೆಲಸಗಳು ಬಾಕಿ ಉಳಿದಿವೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ವಿನಂತಿಸಿದರು.

    ನೀರಾವರಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಅವಾರ್ಡ್ ಆದ ಮೊತ್ತವನ್ನು ರೈತರು ಪಡೆದುಕೊಳ್ಳುತ್ತಿಲ್ಲ. ನ್ಯಾಯಾಲಯದಲ್ಲಿಯೂ ಡಿಪಾಜಿಟ್ ಮಾಡುವ ಕೆಲಸಗಳು ನಡೆಯುತ್ತಿಲ್ಲ. ಈ ಸಂಬಂಧ ಹೋರಾಟ ಸಮಿತಿ ವತಿಯಿಂದ ತರಿಕೆರೆ ಉಪ ವಿಭಾಗಾಧಿಕಾರಿ ಭೇಟಿ ಮಾಡಿ ಚರ್ಚಿಸಲಾಗಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಸಚಿವರು ಅಲ್ಲಿಯ ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಭೂ ಸ್ವಾಧೀನಕ್ಕೆ ಎದುರಾಗಿರುವ ಕಂಟಕಗಳ ನಿವಾರಣೆ ಮಾಡಬೇಕು. ಅಬ್ಬಿನಹೊಳಲು ಗ್ರಾಮದಲ್ಲಿ ಅಡ್ಡಿಯಾಗಿರುವ ಭೂ ಸ್ವಾಧೀನ ಪೂರ್ಣಗೊಳಿಸಲು ಹೋರಾಟ ಸಮಿತಿ ರೈತರೊಂದಿಗೆ ಚರ್ಚಿಸಲು ಸಿದ್ಧವಿದೆ ಎಂದರು.

    ಸಿಪಿಐ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು, ಹಮಾಲರ ಸಂಘದ ಅಧ್ಯಕ್ಷ ಬಸವರಾಜಪ್ಪ, ಕಾರ್ಯಧ್ಯಕ್ಷ ಹೊರಕೇರಪ್ಪ, ರಾಜ್ಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಲಕ್ಷ್ಮಿ, ಕಲ್ಪನ, ತಾಲೂಕು ಅಧ್ಯಕ್ಷ ಧನಂಜಯ ಇದ್ದರು.

  • ಚೆಕ್ ಬೌನ್ಸ್, ಖಾತೆಗೆ ಜಮಾ ಆಗದ ಪರಿಹಾರದ ಹಣ – ವಿಕಲಚೇತನ ರೈತ ಕಂಗಾಲು

    ಚೆಕ್ ಬೌನ್ಸ್, ಖಾತೆಗೆ ಜಮಾ ಆಗದ ಪರಿಹಾರದ ಹಣ – ವಿಕಲಚೇತನ ರೈತ ಕಂಗಾಲು

    ಚಿತ್ರದುರ್ಗ: ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಬೇಗ ಮುಗಿದು ಜಿಲ್ಲೆಗೆ ನೀರು ಹರಿದು ಬರದನಾಡು ಬಂಗಾರವಾಗಲಿ ಅಂತ ರೈತರು ಉಳುಮೆ ಮಾಡುವ ಭೂಮಿಗಳನ್ನೇ ನೀಡಿದ್ದಾರೆ. ಆದರೆ ಯೋಜನೆ ತರುವುದನ್ನೇ ನೆಪವಾಗಿಸಿಕೊಂಡ ಅಧಿಕಾರಿಗಳು ರೈತರಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯೆ ತೋರಿದ್ದಾರೆ. ಮನಸಿಗೆ ಬಂದಷ್ಟು ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಿದ್ದಾರೆ. ಅಧಿಕಾರಿಗಳ ಈ ಎಡವಟ್ಟಿನಿಂದಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಕಳೆದ ಒಂದು ವರ್ಷದಿಂದಲೂ ಇಂದು, ನಾಳೆ ಭದ್ರೆ ಬರದನಾಡಿಗೆ ಬರುತ್ತಾಳೆ ಅಂತ ಕಾಲಾಹರಣ ಮಾಡುತ್ತಿದ್ದ ಸರ್ಕಾರ ಹಾಗೂ ಅಧಿಕಾರಿಗಳು 2019ರ ನವೆಂಬರ್ ತಿಂಗಳಿಂದ ವಾಣಿವಿಲಾಸ ಸಾಗರಕ್ಕೆ ಕಾಲುವೆ ಮೂಲಕ ಭದ್ರೆ ನೀರನ್ನು ಹರಿಸುತ್ತಿದ್ದಾರೆ. ಆದರೆ ಭದ್ರಾ ಕಾಮಗಾರಿಗಾಗಿ ವಶಕ್ಕೆ ಪಡೆದ ರೈತರ ಜಮೀನುಗಳಿಗೆ ಮಾತ್ರ ಈವರೆಗೆ ಸರಿಯಾದ ಪರಿಹಾರ ನೀಡಿಲ್ಲ. ಅಲ್ಲದೆ ಕಾಮಗಾರಿಯಲ್ಲಿ ಕಳಪೆ ಹಾಗೂ ಅಕ್ರಮದ ಆರೋಪ ಸಹ ಕೇಳಿ ಬಂದಿದ್ದು, ಉದ್ಘಾಟನೆಗೂ ಮುನ್ನವೇ ಕಾಲುವೆ ಕುಸಿತ ಸಹ ಆಗಿ ಆತಂಕಸೃಷ್ಟಿಸಿತ್ತು.

    ಕಾಮಗಾರಿಗಾಗಿ ವಶಕ್ಕೆ ಪಡೆದ ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸಹ ಅಧಿಕಾರಿಗಳು ವಿಫಲರಾಗಿದ್ದಾರೆಂಬ ಮಾತುಗಳು ಕೇಳಿಬಂದಿರುವುದು ಸರ್ಕಾರಕ್ಕೆ ಭಾರೀ ಮುಖಭಂಗ ಎನಿಸಿದೆ. ಅಧಿಕಾರಿಗಳ ಎಡವಟ್ಟಿನಿಂದಾಗಿ ಅನ್ನದಾತರಿಗೆ ಪರಿಹಾರ ತಲುಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಟೆನಾಡು ಚಿತ್ರದುರ್ಗದ ಅನ್ನದಾತರು ಬೀದಿಗಳಿದು ಪ್ರತಿಭಟನೆ ಮಾಡಿದರೂ ಈವರೆಗೆ ರೈತರಿಗೆ ಪರಿಹಾರ ಮಾತ್ರ ದೊರೆತಿಲ್ಲ. ಅಲ್ಲದೆ ಚಿತ್ರದುರ್ಗ ತಾಲೂಕಿನ ಚಿಕ್ಕಸಿದ್ದವನಹಳ್ಳಿ ಗ್ರಾಮದ ಅಂಗವಿಕಲ ರೈತ ವೀರಭದ್ರಪ್ಪ ಅವರಿಗೂ ಅಧಿಕಾರಿಗಳು ವಂಚಿಸಿದ್ದಾರೆ.

    ವೀರಭದ್ರಪ್ಪ ಅವರ ಜಮೀನನ್ನು ಭದ್ರಾ ಕಾಮಗಾರಿಗಾಗಿ ವಶಪಡಿಸಿಕೊಂಡಿದ್ದು, 1.5 ಲಕ್ಷ ರೂ. ಪರಿಹಾರದ ಹಣವನ್ನು ಚೆಕ್ ರೂಪದಲ್ಲಿ ಅಧಿಕಾರಿಗಳು ನೀಡಿದ್ದಾರೆ. ಆದರೆ ವೀರಭದ್ರಪ್ಪ ಅವರ ಬ್ಯಾಂಕ್ ಖಾತೆಯಲ್ಲಿ ಒಂದು ಸಾವಿರ ರೂಪಾಯಿ ಮಾತ್ರ ಜಮಾ ಆಗಿದ್ದು, ಚೆಕ್ ಬೌನ್ಸ್ ಆರೋಪ ಸಹ ಕೇಳಿಬಂದಿದೆ. ಇದರಿಂದಾಗಿ ಆತಂಕಗೊಂಡ ರೈತ ಜಿಲ್ಲಾಧಿಕಾರಿ ಕಚೇರಿಗೆ ಅಲೆದಾಡಿ, ಅಲೆದಾಡಿ ಸುಸ್ತಾಗಿದ್ದಾರೆ. ಆದರೆ ಈವರೆಗೂ ಅತ್ತ ಜಮೀನು ಇಲ್ಲ, ಇತ್ತ ಪರಿಹಾರದ ಹಣವೂ ಸಿಗದೆ ವೀರಭದ್ರಪ್ಪ ಅವರು ಕಂಗಾಲಾಗಿದ್ದಾರೆ.

    ತನಗಾದ ಅನ್ಯಾಯ ಬೇರೆ ಯಾರಿಗೂ ಆಗುವುದು ಬೇಡ ಅಂತ ಕಣ್ಣೀರಿಟ್ಟಿರುವ ರೈತ ವೀರಭದ್ರಪ್ಪ ಅವರು ಆದಷ್ಟು ಬೇಗ ಸರ್ಕಾರ ನನಗೆ ಅಗತ್ಯ ಪರಿಹಾರ ನೀಡಲಿ ಅಂತ ಅಂಗಲಾಚಿದ್ದಾರೆ.

    ಭದ್ರಾ ಕಾಮಗಾರಿಯಿಂದ ಆಗುತ್ತಿರುವ ಅವಾಂತರ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಅನ್ನದಾತರು ಸಹ ಶುಕ್ರವಾರ ಧರಣಿ ನಡೆಸಿದರು. ಅಪರ ಜಿಲ್ಲಾಧಿಕಾರಿ ಸಂಗಪ್ಪ ಧರಣಿ ನಡೆಸಿದ್ದ ಸ್ಥಳಕ್ಕೆ ಆಗಮಿಸಿ, ರೈತರಿಗೆ ಆಗಿರುವ ಸಮಸ್ಯೆಯನ್ನು ಆಲಿಸಿದರು. ಅಲ್ಲದೆ 2020ರ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕಾರಿಗಳು ಹಾಗೂ ಭದ್ರಾ ಮೇಲ್ದಂಡೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಭದ್ರಾ ಯೋಜನೆಯಿಂದ ರೈತರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ.

  • ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಒಂದೇ ಮಳೆಗೆ ಕಾಲುವೆ ಕುಸಿತ

    ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಒಂದೇ ಮಳೆಗೆ ಕಾಲುವೆ ಕುಸಿತ

    ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಕಾಲುವೆ ಕುಸಿತವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ನಡೆದಿದೆ.

    ಬರದನಾಡು ಚಿತ್ರದುರ್ಗ ಜಿಲ್ಲೆಯ ಕನಸಿನ ಕೂಸು ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಈಗಾಗಲೇ ಪ್ರಾಯೋಗಿಕವಾಗಿ ವಾಣಿವಿಲಾಸ ಸಾಗರಕ್ಕೆ ಇದೇ ಕಾಲುವೆಯಿಂದ ನೀರು ಹರಿಸಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಈ ಕಾಲುವೆ ಕುಸಿತಗೊಂಡಿದೆ.

    ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕುಸಿದಿದ್ದು, ಒಂದೇ ಮಳೆಗೆ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ಕುಸಿದಿದ್ದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಅಲ್ಲದೆ, ಈ ಕುರಿತು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳಪೆ ಕಾಮಗಾರಿ ಮಾಡಿದ್ದಕ್ಕೆ ಈ ಭಾಗದ ಅನ್ನದಾತರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಯೋಜನಾಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.