Tag: ಭಯೋತ್ಪಾದಕರು

  • ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    – ಪ್ರಮುಖ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಶಂಕಿತ ಭಯೋತ್ಪಾದಕರು

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾದೊಂದಿಗೆ ಸಂಯೋಜಿತವಾಗಿರುವ ಭಯೋತ್ಪಾದಕ ಮಾಡ್ಯೂಲ್ ಅನ್ನು ದೆಹಲಿ ಪೊಲೀಸರು (Delhi Police) ಭೇದಿಸಿದ್ದಾರೆ. ಈ ಜಾಲದಲ್ಲಿದ್ದ ಇಬ್ಬರು ಶಂಕಿತರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳು ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿವೆ.

    ಬಂಧಿತರ ಪೈಕಿ ಓರ್ವ ಅದ್ನಾನ್ ಮಧ್ಯಪ್ರದೇಶದ ಭೋಪಾಲ್ ಮೂಲದವನಾಗಿದ್ದು, ಮತ್ತೊಬ್ಬ ಆರೋಪಿ ದೆಹಲಿಯವನು ಎಂದು ತಿಳಿದು ಬಂದಿದೆ. ದೆಹಲಿಯ ಸಾದಿಕ್ ನಗರ ಮತ್ತು ಭೋಪಾಲ್‌ನಲ್ಲಿ ನಡೆದ ಸಂಘಟಿತ ಕಾರ್ಯಾಚರಣೆಯಲ್ಲಿ ಮಾಹಿತಿ ಪಡೆದ ನಂತರ ಇಬ್ಬರನ್ನು ಬಂಧಿಸಲಾಗಿದೆ. ಶಂಕಿತರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ಆರೋಪಿಗಳು ಐಸಿಸ್ (ISIS) ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ದೆಹಲಿ ಪೊಲೀಸರು ಸೆಪ್ಟೆಂಬರ್‌ನಲ್ಲೂ ದೆಹಲಿ, ಜಾರ್ಖಂಡ್, ತೆಲಂಗಾಣ ಮತ್ತು ಮಧ್ಯಪ್ರದೇಶದಾದ್ಯಂತ ಹಲವಾರು ದಾಳಿಗಳನ್ನು ನಡೆಸಿ ಪಾಕಿಸ್ತಾನ ಮೂಲದ ಇದೇ ರೀತಿಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿದ್ದರು. ದಾಳಿಗಳ ನಂತರ, ಪೊಲೀಸರು ಐವರು ಭಯೋತ್ಪಾದಕರನ್ನು ಬಂಧಿಸಿದ್ದರು. ಅವರನ್ನು ಅಶರ್ ದಾನಿಶ್, ಅಫ್ತಾಬ್, ಸುಫಿಯಾನ್, ಮುಜಾಪಾ ಮತ್ತು ಕಮ್ರಾನ್ ಖುರೇಷಿ ಅಲಿಯಾಸ್ ಸಮರ್ ಖಾನ್ ಎಂದು ಗುರುತಿಸಲಾಗಿತ್ತು. ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

  • ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    – ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್‌ ಪ್ಯಾಡ್‌ಗಳು ಸಕ್ರಿಯ; ಗುಪ್ತಚರ ವರದಿ

    ಶ್ರೀನಗರ: ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.

    ಹೌದು. ಗುಪ್ತಚರ ವರದಿಗಳ ಪ್ರಕಾರ, ಎಲ್‌ಒಸಿ ಗಡಿಯುದ್ಧಕ್ಕೂ ಹಲವಾರು ಲಾಂಚ್‌ ಪ್ಯಾಡ್‌ಗಳಲ್ಲಿ ಭಯೋತ್ಪಾದಕರು (Terrorists) ಕಣಿವೆಯೊಳಗೆ ನುಸುಳಲು ಕಾಯುತ್ತಿದ್ದಾರೆ. ಚಳಿಗಾಲದ ಸಂದರ್ಭದಲ್ಲಿ ಇದು ನಡೆಯುತ್ತಿರುತ್ತದೆ. ಹಾಗಾಗಿ ಚಳಿಗಾಲಕ್ಕೂ ಮುನ್ನವೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಎಸ್‌ಎಫ್‌ ಮೂಲಗಳು ತಿಳಿಸಿವೆ.

    ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ʻವುಲರ್ 2.0ʼ ಮ್ಯಾರಥಾನ್ ವೇಳೆ ಈ ಕುರಿತು ಬಿಎಸ್‌ಎಫ್ ಹೆಚ್ಚುವರಿ ಮಹಾನಿರ್ದೇಶಕ (ADG) ಸತೀಶ್ ಎಸ್. ಖಂಡ್ರೆ ಮಾತನಾಡಿದರು.

    ಚಳಿಗಾಲ ಶುರುವಾಗುತ್ತಿದ್ದಂತೆ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಹಾಗಾಗಿ ಗಡಿಯಲ್ಲಿ ಕಣ್ಗಾವಲು ಬಲಪಡಿಸಿದ್ದೇವೆ. ನಮ್ಮ ಸೈನಿಕರು, ಅಧಿಕಾರಿಗಳನ್ನ ಅಲರ್ಟ್‌ ಮಾಡಿದ್ದೇವೆ. ಗುಪ್ತಚರ ಮಾಹಿತಿಯ ಪ್ರಕಾರ, ಈಗಾಗಲೇ ಗಡಿಯಲ್ಲಿ ಹಲವಾರು ಭಯೋತ್ಪಾದಕ ಲಾಂಚ್‌ ಪ್ಯಾಡ್‌ಗಳನ್ನ ಸಕ್ರಿಯಗೊಳಿಸಿದೆ. ಅಲ್ಲಿಂದ ಭಯೋತ್ಪಾದಕರು ಒಳನುಸುಳಲು ತಯಾರಿ ನಡೆಸುತ್ತಿದ್ದಾರೆ. ಸದ್ಯಕ್ಕೆ ಎಷ್ಟು ಉಗ್ರರು ಇದ್ದಾರೆ ಅನ್ನೋದು ಅಂದಾಜು ಮಾಡುವುದು ಕಷ್ಟ. ಆದ್ರೆ ಕೆಲ ಚಟುವಟಿಕೆಗಳು ಸಕ್ರಿಯಗೊಂಡಿರುವ ಬಗ್ಗೆ ವರದಿ ಬಂದಿದೆ. ಹಾಗಾಗಿ ನಾವು ಗಡಿಯ ಎಲ್ಲಾ ಭಾಗದಲ್ಲು ಸಕ್ರಿಯವಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಸೇನೆ, ಬಿಎಸ್‌ಎಫ್‌ ಜಂಟಿ ಕಣ್ಗಾವಲು
    ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್‌ಎಫ್‌ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ನಮ್ಮ ಸೈನಿಕರ ಕಣ್ತಪ್ಪಿಸಿ‌ ಬರಲು ಯಾರಿಂದಲೂ ಸಾಧ್ಯವಿಲ್ಲ ಎಂದಿದೆ ಬಿಎಸ್‌ಎಪ್.

    ಚಳಿಗಾಲದಲ್ಲಿ ಏಕೆ ನುಸುಳುವಿಕೆ ಹೆಚ್ಚಳ?
    ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್‌ಎಫ್‌ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್‌ಗಳನ್ನು ಸಹ ನಿಯೋಜನೆ ಮಾಡಲಾಗಿದೆ.

  • ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ

    ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ

    – ಉಗ್ರರ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ ಎಂದ ಮುತ್ತಕಿ

    ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್‌ (Taliban) ಸಲಹೆ ನೀಡಿದೆ.

    ಅಫ್ಘಾನಿಸ್ತಾನದ ತಾಲಿಬಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿವೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ತಾಲಿಬಾನ್ ಎಲ್ಲಾ ಭಯೋತ್ಪಾದಕರನ್ನು ನಿರ್ನಾಮ ಮಾಡಿದೆ ಎಂದು ಮುತ್ತಕಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

    ಭಯೋತ್ಪಾದಕರಲ್ಲಿ ಒಬ್ಬರೂ ಅಫ್ಘಾನಿಸ್ತಾನದಲ್ಲಿಲ್ಲ. ಅಫ್ಘಾನಿಸ್ತಾನದಲ್ಲಿ ಒಂದು ಇಂಚು ಭೂಮಿಯೂ ಅವರ ನಿಯಂತ್ರಣದಲ್ಲಿಲ್ಲ. ನಾವು (2021 ರಲ್ಲಿ) ಕಾರ್ಯಾಚರಣೆ ನಡೆಸಿದ ಅಫ್ಘಾನಿಸ್ತಾನವು ಬದಲಾಗಿದೆ ಎಂದು ಪಾಕಿಸ್ತಾನಿ ಭಯೋತ್ಪಾದಕ ಗುಂಪುಗಳು ಈ ಹಿಂದೆ ಅಫ್ಘಾನ್ ಮಣ್ಣನ್ನು ಕಾರ್ಯಾಚರಣೆಗೆ ಬಳಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಮುತ್ತಕಿ ಪ್ರತಿಕ್ರಿಯಿಸಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಯ ಬಲಿಪಶುವಾಗಿರುವ ಭಾರತೀಯ ನೆಲದಿಂದ ಅವರು ಪಾಕಿಸ್ತಾನಕ್ಕೆ ಮುತ್ತಕಿ ಒಂದು ಸಂದೇಶವನ್ನು ನೀಡಿದ್ದಾರೆ. ‘ಶಾಂತಿಗಾಗಿ ಅಫ್ಘಾನಿಸ್ತಾನ ಮಾಡಿದಂತೆ ಇತರ ದೇಶಗಳು ಸಹ ಅಂತಹ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಕರೆ ನೀಡಿದ್ದಾರೆ.

    ಭಾರತಕ್ಕೆ ಮುತ್ತಕಿ ಅವರ ಭೇಟಿಯು ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳನ್ನು ಪುನಸ್ಥಾಪಿಸಲು ಸಹಕಾರಿಯಾಗಿದೆ. ಭಾರತವು ಕಾಬೂಲ್‌ನಲ್ಲಿರುವ ತನ್ನ ತಾಂತ್ರಿಕ ಮಿಷನ್‌ ಅನ್ನು ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸಲಿದೆ ಎಂದು ಮುತ್ತಕಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಜೈಶಂಕರ್‌ ತಿಳಿಸಿದ್ದಾರೆ.

  • ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ದಾಳಿ (Pahalgam Attack) ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬಂಧಿಸಿದ್ದಾರೆ.

    ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳ ಪತ್ತೆಗೆ ನೆರವಾಯ್ತು ಬುಲೆಟ್‌ ಶೆಲ್‌ ಟೆಸ್ಟಿಂಗ್‌ – ಬ್ಯಾಲಿಸ್ಟಿಕ್ಸ್‌ ಮ್ಯಾಚಿಂಗ್‌ ಹೇಗೆ ನಡೆಯುತ್ತೆ?

    ಕಟಾರಿಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಗೆ ಕಾರಣರಾದ ಎಲ್ಲರನ್ನು ಪತ್ತೆಹಚ್ಚುವಲ್ಲಿ ಸರ್ಕಾರ ನಿರಂತರ ಗಮನಹರಿಸುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ.

    ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಬಣವು ಪಹಲ್ಗಾಮ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಶ್ರೀನಗರ ಬಳಿಯ ಡಚಿಗಮ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮೇ 22 ರಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಅದರ ಬೆನ್ನಲ್ಲೇ ಆಪರೇಷನ್ ಮಹಾದೇವ್ ನಡೆಸಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

  • ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    – ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲೇ ಗಡಿಯಲ್ಲಿ ಒಳನುಸುಳಲು ಉಗ್ರರ ಯತ್ನ

    ಶ್ರೀನಗರ: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳ ನುಸುಳುಕೋರರನ್ನು ಬಂಧಿಸಲಾಗಿತ್ತು.

    ಹಿರಾನಗರ ವಲಯದ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ 4 ಗಂಟೆ ಸುಮಾರಿಗೆ ಜಾಗೃತ ಪಡೆಗಳು ಒಳನುಗ್ಗುವವರನ್ನು ಗಮನಿಸಿದರು. ಅವರನ್ನು ನಿಲ್ಲಿಸಲು ಸವಾಲು ಹಾಕಲಾಯಿತು. ನುಸುಳುಕೋರರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೇಳದ ಹಿನ್ನಲೆ ಮುಂಭಾಗದ ಪೋಸ್ಟ್‌ಗಳನ್ನು ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಒಳನುಗ್ಗುವವರಲ್ಲಿ ಒಬ್ಬರಿಗೆ ಗಾಯವಾಯಿತು.

  • ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

    ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

    – ಆಪರೇಷನ್‌ ಸಿಂಧೂರ ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ; ಪ್ರಧಾನಿ
    – 15 ಸಾವಿರ ಮಹಿಳೆಯರಿಂದ ಪ್ರಧಾನಿಗಳಿಗೆ ಭೋಪಾಲ್‌ನಲ್ಲಿ ಸ್ವಾಗತ ‌
    – ಭೋಪಾಲ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

    ಭೋಪಾಲ್: ಪಾಕಿಸ್ತಾನದ (Pakistan) ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ನಾವು ಉತ್ತರಿಸುತ್ತೇವೆ ಎಂಬುದಕ್ಕೆ ಆಪರೇಷನ್‌ ಸಿಂಧೂರ ಸ್ಪಷ್ಟ ನಿರ್ದಶನವಾಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದರು.

    ಭೋಪಾಲ್‌ನಲ್ಲಿ (Bhopal) ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ ಮಹಾ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ (Operation Sindoor) ಭಯೋತ್ಪಾದನೆಯ ವಿರುದ್ಧದ ಅತಿದೊಡ್ಡ ದಾಳಿಯಾಗಿದೆ. ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ ಎಂಬುದಕ್ಕೆ ಸ್ಪಷ್ಟ ನಿರ್ದಶನ ಆಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಎಂದು ʻಆಪರೇಷನ್‌ ಸಿಂಧೂರʼವನ್ನ ಬಣ್ಣಿಸಿದರು. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    ಭಾರತದ ಪ್ರತಿಕ್ರಿಯೆಯು ದೇಶದ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುವ ಜೊತೆಗೆ 140 ಕೋಟಿ ಭಾರತೀಯರ ಧ್ವನಿಯಾಗಿದೆ. ನೀವು ಗುಂಡು ಹಾರಿಸಿದ್ರೆ ಅದರ ಪರಿಣಾಮಗಳನ್ನು ಎದುರಿಸಲು ಸಿದ್ಧವಾಗಿರಿ ಎಂದು ಪಾಕ್‌ ಮತ್ತು ಪಾಕ್‌ ಪ್ರಾಯೋಜಿತ ಭಯೋತ್ಪಾದಕರಿಗೆ (Terrorists) ಖಡಕ್‌ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಭಾರತೀಯರ ರಕ್ತ ಹರಿಸಿದ್ದಲ್ಲದೇ, ನಮ್ಮ ಸಂಸ್ಕೃತಿಯ ಮೇಲೂ ದಾಳಿ ಮಾಡಿದ್ದಾರೆ. ಉಗ್ರರು ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುವುದರ ಜೊತೆಗೆ ದೇಶದ ಮಹಿಳಾ ಶಕ್ತಿ (ನಾರಿ ಶಕ್ತಿಗೆ)ಗೆ ಸವಾಲು ಹಾಕುವ ಧೈರ್ಯ ಮಾಡಿದರು. ಇದೇ ಸವಾಲು ಉಗ್ರರು ಮತ್ತು ಅವರನ್ನು ಪೋಷಿಸುವವರಿಗೆ ಮರಣದಂಡನೆಯಾಗಿದೆ. ಪಾಕಿಸ್ತಾನ ಸೇನೆ ಊಹಿಸಲೂ ಸಾಧ್ಯವಾಗದಷ್ಟರ ಮಟ್ಟಿಗೆ ನಮ್ಮ ಸೇನೆಯು ಉಗ್ರರ ಅಡಗುತಾಣಗಳನ್ನು ನಾಶಪಡಿಸಿದೆ ಮೋದಿ ಸೇನಾ ಸಾಹಸವನ್ನ ಕೊಂಡಾಡಿದರು.

    ಇದೇ ವೇಳೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಮಹಿಳಾ ಅಧಿಕಾರಿಗಳ ಪಾತ್ರವನ್ನು ಒತ್ತಿ ಹೇಳಿದರು. ಗಡಿ ಭದ್ರತಾ ಪಡೆ (ಬಿಎಸ್‌ಎಫ್)‌ ಕೊಡುಗೆಯನ್ನು ಶ್ಲಾಘಿಸಿದರು. ಜೊತೆಗೆ ರಾಜಸ್ಥಾನದಿಂದ ಗುಜರಾತ್‌ವರೆಗೆ ನಮ್ಮ ಬಿಎಸ್‌ಎಫ್‌ ಹೆಣ್ಣುಮಕ್ಕಳು ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದರು. ಉಗ್ರರ ಗುಂಡಿ ದಾಳಿಗೆ ಸೂಕ್ತ ಉತ್ತರವನ್ನೂ ನೀಡಿದ್ರು ಅಂತ ಮಹಿಳಾ ಅಧಿಕಾರಿಗಳ ಶೌರ್ಯ, ಸಾಹಸವನ್ನು ಬಣ್ಣಿಸಿದರು. ಇದನ್ನೂ ಓದಿ: ಉಗ್ರರು ಮತ್ತೆ ಹೆಡೆ ಬಿಚ್ಚಿದರೆ, ಹುತ್ತದಿಂದ ಎಳೆದು ತುಳಿಯುತ್ತೇವೆ: ಮೋದಿ ಖಡಕ್‌ ಸಂದೇಶ

    ಮುಂದುವರಿದು.. ಇಂದು ಹೆಚ್ಚಿನ ಹೆಣ್ಣುಮಕ್ಕಳು ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ ಮತ್ತು ಪೈಲಟ್‌ಗಳಾಗುತ್ತಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲೂ ನಮ್ಮ ಅನೇಕ ಮಹಿಳಾ ವಿಜ್ಞಾನಿಗಳು ಮುಂಚೂಣಿಯಲ್ಲಿದ್ದಾರೆ. ಚಂದ್ರಯಾನ-3 ಯಶಸ್ಸಿಗೂ 100ಕ್ಕೂ ಹೆಚ್ಚು ಮಹಿಳೆಯರು ತಮ್ಮ ಕೊಡುಗೆ ನೀಡಿದ್ದಾರೆ. ಅಲ್ಲದೇ ಈ ಬಾರಿ 75 ಮಹಿಳೆಯರು ಸಂಸತ್ ಸದಸ್ಯರಾಗಿದ್ದಾರೆ. ಈ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಇದು ನಾರಿ ಶಕ್ತಿ ವಂದನ ಅಧಿನಿಯಮದ ಹಿಂದಿನ ಸ್ಫೂರ್ತಿ. ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

    ಅಲ್ಲದೇ ಭಾರತ ಸಂಸ್ಕೃತಿ ಮತ್ತು ಸಂಪ್ರದಾಯಗಳ ದೇಶವಾಗಿದೆ. ನಮ್ಮ ಸಂಪ್ರದಾಯದಲ್ಲಿ ‘ಸಿಂಧೂರ’ ಮಹಿಳಾ ಶಕ್ತಿಯ ಸಂಕೇತವಾಗಿದೆ. ರಾಮ ಭಕ್ತಿಯಲ್ಲಿ ಮುಳುಗಿರುವ ಹನುಮಾನ್ ಜಿ ಅವರು ಸಿಂಧೂರ ಹಚ್ಚಿಕೊಂಡಿರುವುದನ್ನು ನಾವು ನೋಡಬಹುದು. ಹಾಗೆಯೇ ಶಕ್ತಿ ಪೂಜೆಯಲ್ಲಿ ಸಿಂಧೂರ ನೀಡುತ್ತೇವೆ. ಇದೀಗ ‘ಸಿಂಧೂರ’ ಎಂಬುದು ಶೌರ್ಯದ ಸಂಕೇತವಾಗಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

    ಇದಕ್ಕೂ ಮುನ್ನ ಇಂದು ಭೋಪಾಲ್‌ಗೆ ಭೇಟಿ ನೀಡಿದ್ದ ಮೋದಿ ಅವರಿಗೆ 15,000 ಮಹಿಳೆಯರು ಭವ್ಯಸ್ವಾಗತ ಕೋರಿದರು. 15,000ಕ್ಕೂ ಹೆಚ್ಚು ಮಹಿಳೆಯರು ಸಿಂಧೂರ ಬಣ್ಣದ ಸೀರೆ ಧರಿಸಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಬಳಿಕ ಪ್ರಧಾನಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಇಂದೋರ್ ಮೆಟ್ರೋದ ಹಳದಿ ಮಾರ್ಗದ ಸೂಪರ್ ಪ್ರಿಯಾರಿಟಿ ಕಾರಿಡಾರ್, ದಾಟಿಯಾ ಮತ್ತು ಸತ್ನಾ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಜೊತೆಗೆ 2028ರ ಸಿಂಹಸ್ತ ಮಹಾಕುಂಭಕ್ಕಾಗಿ ಕ್ಷಿಪ್ರಾ ನದಿಯಲ್ಲಿ 860 ಕೋಟಿ ಮೌಲ್ಯದ ಘಾಟ್ ನಿರ್ಮಾಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

  • ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

    ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

    ನವದೆಹಲಿ: ಜಮ್ಮು & ಕಾಶ್ಮೀರದಲ್ಲಿ (Jammu & Kashmir) ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ 6 ಉಗ್ರರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿತು. ಭಯೋತ್ಪಾದಕರನ್ನು ಮಟ್ಟ ಹಾಕಿದ್ದೇ ರಣರೋಚಕ.

    ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ 48 ಗಂಟೆಗಳ ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಭಯೋತ್ಪಾದಕರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

    ಮಾರ್ಚ್‌ನಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಸರ್ಪಚ್ ಹತ್ಯೆಯಲ್ಲಿ, ಎನ್‌ಕೌಂಟರ್‌ ಆದ ಭಯೋತ್ಪಾದಕರಲ್ಲಿ ಒಬ್ಬ ಭಾಗಿಯಾಗಿದ್ದ. ಭಯೋತ್ಪಾದಕರು ಎಲ್ಲೇ ಅಡಗಿಕೊಂಡರೂ, ನಾವು ಅವರನ್ನು ಪತ್ತೆಹಚ್ಚಿ ನಾಶಪಡಿಸುತ್ತೇವೆ ಎಂದು ಜಿಒಸಿ ವಿ ಫೋರ್ಸ್‌ನ ಮೇಜರ್ ಜನರಲ್ ಧನಂಜಯ್ ಜೋಶಿ ಹೇಳಿದ್ದಾರೆ.

    ಉಗ್ರರ ಎನ್‌ಕೌಂಟರ್‌ ನಡೆದಿದ್ಹೇಗೆ?‌
    ಆಪರೇಷನ್‌ ಕೆಲ್ಲಾರ್‌
    ಕೆಲ್ಲಾರ್‌ನ ಎತ್ತರದ ಪ್ರದೇಶಗಳಲ್ಲಿ ಭಯೋತ್ಪಾದಕ ಗುಂಪು ಇರುವ ಬಗ್ಗೆ ಮೇ 12 ರಂದು ಸೇನೆಗೆ ಮಾಹಿತಿ ಸಿಕ್ಕಿತ್ತು. ಮರುದಿನ ಬೆಳಗ್ಗೆ, ಕೆಲವು ಚಲನವಲನಗಳನ್ನು ಕಂಡ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆದರೆ, ಉಗ್ರರು ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯಿಸಿದರು. ಟ್ರಾಲ್‌ನಲ್ಲಿ ಎರಡನೇ ಕಾರ್ಯಾಚರಣೆಯನ್ನು ಗಡಿ ಗ್ರಾಮದಲ್ಲಿ ನಡೆಸಲಾಯಿತು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    ನಾವು ಈ ಹಳ್ಳಿಯನ್ನು ಸುತ್ತುವರೆದಾಗ, ಭಯೋತ್ಪಾದಕರು ಬೇರೆ ಬೇರೆ ಮನೆಗಳಲ್ಲಿ ನೆಲೆಸಿ ನಮ್ಮ ಮೇಲೆ ಗುಂಡು ಹಾರಿಸಿದರು. ಈ ಸಮಯದಲ್ಲಿ ನಾಗರಿಕ ಗ್ರಾಮಸ್ಥರನ್ನು ರಕ್ಷಿಸುವುದು ನಮಗೆ ಸವಾಲಾಗಿತ್ತು. ಕೊನೆಗೂ ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದೆವು. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬ ಶಾಹಿದ್ ಕುಟ್ಟೆ, ಜರ್ಮನ್ ಪ್ರವಾಸಿಯ ಮೇಲಿನ ದಾಳಿ ಸೇರಿದಂತೆ ಎರಡು ಪ್ರಮುಖ ದಾಳಿಗಳಲ್ಲಿ ಭಾಗಿಯಾಗಿದ್ದ. ಹಣಕಾಸು ಚಟುವಟಿಕೆಗಳಲ್ಲಿಯೂ ಕೈಜೋಡಿಸಿದ್ದ ಎಂದು ಮೇಜರ್ ಜನರಲ್ ಜೋಶ್‌ಜಿ ಹೇಳಿದ್ದಾರೆ.

    ಆಪರೇಷನ್ ಟ್ರಾಲ್‌
    ಕಠಿಣ ಭೂಪ್ರದೇಶದಲ್ಲಿ ನಡೆದ ಟ್ರಾಲ್ ಕಾರ್ಯಾಚರಣೆಯಲ್ಲಿ ಸೇನೆಯು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಗಳು ಇಂದು ನಡೆದ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

    ಪುಲ್ವಾಮಾದಲ್ಲಿ ಒಂದು ಹಳ್ಳಿಯಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತು. ಸೇನೆಯು ಮೊದಲು ಎಲ್ಲಾ ನಾಗರಿಕರನ್ನು ಸ್ಥಳಾಂತರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಟ್ರಾಲ್ ಕಾರ್ಯಾಚರಣೆ ಅರಣ್ಯದ ಎತ್ತರದ ಪ್ರದೇಶದಲ್ಲಿ ನಡೆದರೆ, ಪುಲ್ವಾಮಾ ಕಾರ್ಯಾಚರಣೆ ಗ್ರಾಮದಲ್ಲಿ ತುಲನಾತ್ಮಕವಾಗಿ ಸಮತಟ್ಟಾದ ಭೂಪ್ರದೇಶದಲ್ಲಿ ನಡೆಯಿತು. ಪುಲ್ವಾಮಾ ಗ್ರಾಮದಲ್ಲಿ ಮೂವರು ಭಯೋತ್ಪಾದಕರನ್ನು ಸೇನೆ ಬಗ್ಗುಬಡಿಯಿತು. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

    ಪುಲ್ವಾಮಾದಲ್ಲಿ ಹತ್ಯೆಗೀಡಾದ ಮೂವರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು. ಉಗ್ರರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.

  • ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ ಸೇನೆ (Indian Army) ತಿಳಿಸಿದೆ.

    ಹಿರಿಯ ಮಿಲಿಟರಿ ಅಧಿಕಾರಿಗಳು ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು. ಆಪರೇಷನ್ ಸಿಂಧೂರ ಅಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಟಾರ್ಗೆಟ್‌ ಮಾಡಿತು. ಮೇ 7 ರಂದು ದಾಳಿಗಳನ್ನು ನಡೆಸಿ, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತು ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ

    ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮೇಲೆ ಭಾರತ ನಡೆಸಿದ ಮಿಲಿಟರಿ ದಾಳಿಗಳು ಭಯೋತ್ಪಾದಕರನ್ನು ಕೊಲ್ಲುವ ಉದ್ದೇಶವನ್ನು ಹೊಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ಬಗ್ಗೆ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ, ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಮತ್ತು ಮೇಜರ್ ಜನರಲ್ ಸಂದೀಪ್ ಎಸ್ ಶಾರದಾ ವಿವರ ನೀಡಿದ್ದಾರೆ.

    ಪಾಕಿಸ್ತಾನ ನಡೆಸಿದ ಡ್ರೋನ್‌ ದಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಭಾರತದ ವಾಯು ರಕ್ಷಣಾ ಪಡೆ ಯಶಸ್ವಿಯಾಗಿದೆ. ಜೊತೆಗೆ ಪ್ರತಿದಾಳಿ ಕೂಡ ನಡೆಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿರುವ ರೆಡಾರ್‌ ಸ್ಥಾಪನೆಯನ್ನು ನಾಶಪಡಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

    ಪಾಕಿಸ್ತಾನದ ದಾಳಿಯನ್ನು ತಡೆಯಲು ಸೇನೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ವಿವರಿಸಿದ್ದಾರೆ.

  • ʻಆಪರೇಷನ್‌ ಸಿಂಧೂರʼ ಪಾಕ್‌ಗೆ ಎಚ್ಚರಿಕೆ ಗಂಟೆ, ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ: ಗುಡುಗಿದ ಸಿದ್ದರಾಮಯ್ಯ

    ʻಆಪರೇಷನ್‌ ಸಿಂಧೂರʼ ಪಾಕ್‌ಗೆ ಎಚ್ಚರಿಕೆ ಗಂಟೆ, ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ: ಗುಡುಗಿದ ಸಿದ್ದರಾಮಯ್ಯ

    – ಪಹಲ್ಗಾಮ್ ಹತ್ಯಾಕಾಂಡದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ನೆಮ್ಮದಿ ಸಿಕ್ಕಿದೆ ಎಂದ ಸಿಎಂ

    ಬೆಂಗಳೂರು: ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ʻಆಪರೇಷನ್‌ ಸಿಂಧೂರʼ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ (Pakistan) ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ.

    ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

    ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: I TOLD MODI – ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌ !

    ಕಾಶ್ಮೀರದ ಪಹಲ್ಗಾವ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ವಿವರಿಸಿದರು. ಇದನ್ನೂ ಓದಿ: ಎರಡನೇ ದೀಪಾವಳಿ, ಭಾರತೀಯರ ಸಿಂಧೂರಕ್ಕೆ ಕೈ ಹಾಕಿದ್ದಕ್ಕೆ ತಕ್ಕ ಶಾಸ್ತಿ: ಸಿ.ಟಿ ರವಿ

    ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ. ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: Operation Sindoor | ಶ್ರೀನಗರ ಏರ್‌ಪೋರ್ಟ್‌ ನಿಯಂತ್ರಣಕ್ಕೆ ಪಡೆದ IAF – ಜೆ&ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ. ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: Operation Sindoor | ಮೋಸ್ಟ್‌ ಡೇಂಜರಸ್‌ ಉಗ್ರರನ್ನ ತಯಾರು ಮಾಡ್ತಿದ್ದ ತಾಣಗಳು ಉಡೀಸ್‌

  • ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ (Poonch) ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು (Indian Army) ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

    ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್(Surankot) ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕದ ಹೊರಗಡೆ ತಯಾರಾದ ಸಿನಿಮಾಗಳಿಗೆ 100% ಸುಂಕ – ಟ್ರಂಪ್ ಘೋಷಣೆ

    ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    ಭಯೋತ್ಪಾದಕರ (Terrorists) ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.