Tag: ಭಯೋತ್ಪಾದಕ ದಾಳಿ

  • ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್‌ ಗೃಹ ಸಚಿವ

    ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್‌ ಗೃಹ ಸಚಿವ

    ಇಸ್ಲಾಮಾಬಾದ್‌: ಭಾರತ (India) ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದ್ರೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ ಎಂದು ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್ ನಖ್ವಿ (Mohsin Naqvi) ಬೆದರಿಕೆ ಹಾಕಿದ್ದಾರೆ.

    ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ವ್ಯಾಪಕವಾಗುತ್ತಿದೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಸರ್ಕಾರ ತೆಗೆದುಕೊಂಡ ಬಳಿಕ ಪಾಕಿಸ್ತಾನದ ಒಬ್ಬೊಬ್ಬರು ಸಚಿವರು ಬಾಲ ಬಿಚ್ಚುತ್ತಿದ್ದಾರೆ. ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ಹೇಳಿದ್ದರು. ಇದೀಗ ನಖ್ವಿ ಯುದ್ಧಕ್ಕೆ ಸಿದ್ಧ ಎಂದು ಬುಸುಗುಟ್ಟಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತವು ಸಿಂಧೂ ಜಲ ಒಪ್ಪಂದವನ್ನ ಏಕಪಕ್ಷೀಯವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ವಿಶ್ವಬ್ಯಾಂಕ್ (World Bank) ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದೆ. ಅಂತಹ ಯಾವುದೇ ಕ್ರಮ ಕೈಗೊಂಡರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಿದೆ ಎಂದು ನಖ್ವಿ ಎಚ್ಚರಿಕೆ ನೀಡಿದ್ದಾರೆ.

    bilawal bhutto

    ಇದಕ್ಕೂ ಮುನ್ನ ಮಾತನಾಡಿದ್ದ ಬಿಲಾವಲ್‌ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಹೇಳಿದ್ದರು.

  • ಪಹಲ್ಗಾಮ್ ದಾಳಿಯಲ್ಲಿ ಸಾವನ್ನಪ್ಪಿದ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

    ಪಹಲ್ಗಾಮ್ ದಾಳಿಯಲ್ಲಿ ಸಾವನ್ನಪ್ಪಿದ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahaglam) ನಡೆದ ಭಯೋತ್ಪಾದಕರ ಹಿಂದೂಗಳ ನರಮೇಧದಲ್ಲಿ ಮೂವರು ಕನ್ನಡಿಗರು ಸೇರಿ ಒಟ್ಟು 26 ಜನರು ಬಲಿಯಾಗಿದ್ದು, ಆ 26 ಮಂದಿ ಯಾರು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

    ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಮೆರಿಕ ಮೂಲದ ಟಿಸಿಎಸ್ ಟೆಕ್ಕಿ ಬಿತನ್, ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಸೇರಿದಂತೆ ಒಟ್ಟು 26 ಜನರ ಹೆಸರನ್ನು ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ.

    ದಾಳಿಯಲ್ಲಿ 26 ಜನರು ಸಾವನ್ನಪ್ಪಿರುವ ಕುರಿತು ಅಧಿಕಾರಿಗಳು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕ ಮೂಲದ ಕೋಲ್ಕತ್ತಾದ ಟೆಕ್ಕಿ, ಬಿಹಾರದ ಅಬಕಾರಿ ಇನ್ಸ್ಪೆಕ್ಟರ್, ಕರ್ನಾಟಕದ ರಿಯಲ್ ಎಸ್ಟೇಟ್ ಏಜೆಂಟ್, ಒಡಿಶಾದ ಅಕೌಂಟೆಂಟ್, ನೌಕಾಪಡೆಯ ಅಧಿಕಾರಿಯೊಬ್ಬರು ತಮ್ಮ ಕುಟುಂಬಗಳೊಂದಿಗೆ ಪಹಗ್ಲಾಮ್‌ನ ಸುಂದರ ದೃಶ್ಯವನ್ನು ಆನಂದಿಸುತ್ತಿದ್ದಾಗ ಪೈಶಾಚಿಕ ದಾಳಿಗೆ ಬಲಿಯಾಗಿದ್ದಾರೆ.

    ಮೃತರ ಪೈಕಿ ಮಹಾರಾಷ್ಟ್ರದ ಅತುಲ್, ಸಂಜಯ್, ಸಂತೋಷ್, ಕೌಸ್ತುಭ, ಮುಂಬೈನ ಹೆಮಂತ್‌ಮ ದಿಲೀಪ್, ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಿತಾನ್, ಸಮೀರ್, ಉತ್ತರಾಖಂಡದ ನೀರಜ್, ಹರಿಯಾಣದ ವಿನಯ್ ನಾರ್ವೆಲ್, ಉತ್ತರ ಪ್ರದೇಶದ ಶುಭಂ, ಬಿಹಾರದ ಮನೀಶ್, ಪಂಜಾಬ್‌ನ ದಿನೇಶ್, ಕೇರಳದ ರಾಮಚಂದ್ರ, ಗುಜರಾತ್‌ನ ಸುಮೀತ್, ಯತೀಶ್, ಶೈಲೇಶ್‌ಬಾಯ್, ಕರ್ನಾಟಕದ ಭರತ್ ಭೂಷಣ್, ಮಧುಸೂದನ್, ಮಂಜುನಾಥ್ ರಾವ್, ಒಡಿಶಾದ ಪ್ರಶಾಂತ್, ಪಹಲ್ಗಾಮ್‌ನ ಸೈಯದ್ ಆದಿಲ್ ಹಸೇನ್, ನೇಪಾಳದ ಸುದೀಪ್, ಆಂಧ್ರಪ್ರದೇಶ ವಿಶಾಖಪಟ್ಟಂನ ಸಚಂದ್ರ, ಅರುಣಾಚಲ ಪ್ರದೇಶದ ತೇಜ್ ಹೈಲ್ಯಾಂಗ್, ಮಧ್ಯಪ್ರದೇಶ ಇಂದೋರ್‌ನ ಸುಶೀಲ್ ಸಾವನ್ನಪ್ಪಿದ್ದಾರೆ.

    ಹರಿಯಾಣದ ನೌಕಾಪಡೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್:
    ಮೃತರಲ್ಲಿ ಹರಿಯಾಣದ ಕರ್ನಾಲ್‌ನ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಸಾವನ್ನಪ್ಪಿದ್ದಾರೆ. ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ತಮ್ಮ ಪತ್ನಿಯೊಂದಿಗೆ ಹನಿಮೂನ್‌ಗೆ ಹೋಗಿದ್ದಾಗ ಈ ದುರಂತ ನಡೆದಿದೆ. ಈ ಕುರಿತು ವಿನಯ್ ಪತ್ನಿ ಹಿಮಾಂಶಿ ಮಾತನಾಡಿ, ನಾವು ಭೇಲ್ಪುರಿ ತಿನ್ನುತ್ತಿದ್ದೆವು, ಆ ಸಮಯದಲ್ಲಿ ಬಂದೂಕುಧಾರಿಯೊಬ್ಬರು ಬಂದು, ನನ್ನ ಗಂಡ ಮುಸ್ಲಿಂ ಅಲ್ಲ ಎಂದು ತಿಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಿದರು ಎಂದು ಹೇಳಿದರು.

    ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್:
    ದಾಳಿಯಲ್ಲಿ ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಮತ್ತು ಬಂಗಾಳದ ಪುರುಲಿಯಾ ಜಿಲ್ಲೆಯ ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್ ಸಾವನ್ನಪ್ಪಿದ್ದಾರೆ. ಪ್ರಸ್ತುತ ಹೈದರಾಬಾದ್‌ಗೆ ನಿಯೋಜನೆಗೊಂಡಿರುವ ರಂಜನ್, ಕುಟುಂಬ ಸಮೇತ ಜಮ್ಮು ಮತ್ತು ಕಾಶ್ಮೀರದಲ್ಲಿ ರಜೆ ಕಳೆಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

    ಕರ್ನಾಟಕದ ಮೂವರು:
    ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ.

    ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಬಲಿಯಾಗಿದ್ದಾರೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು.

    ಮಂಜುನಾಥ್ ರಾವ್ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದವರು. ಅವರ ತಂದೆ ಶಿವಮೊಗ್ಗದ ಮ್ಯಾಮ್ ಕೋಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದರು. ಮೂರು ದಿನಗಳ ಹಿಂದೆ ಮಂಜುನಾಥ್ ರಾವ್ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಮಗನ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ 6 ದಿನಗಳ ಪ್ಯಾಕೇಜ್ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್ ಏ.24ರಂದು ವಾಪಸ್ ಬರುವುದಾಗಿ ಹೇಳಿದ್ದರು. ಆದ್ರೆ ದುರದೃಷ್ಟವಶಾತ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

    ಮಹಾರಾಷ್ಟ್ರದ ಸಂತೋಷ್ ಜಗದಾಳೆ & ಕೌಸ್ತುಭ್ ಗನ್ಬೋಟೆ:
    ಮಹಾರಾಷ್ಟ್ರದ ಪುಣೆಯ ಉದ್ಯಮಿಗಳಾದ ಸಂತೋಷ್ ಜಗದಾಳೆ ಮತ್ತು ಕೌಸ್ತುಭ್ ಗನ್ಬೋಟೆ ಕುಟುಂಬ ಸಮೇತ ಮಂಗಳವಾರ ಪಹಲ್ಗಾಮ್‌ಗೆ ತೆರಳಿದ್ದರು. ಅದೇ ದಿನ ವಿಧಿ ಅವರಿಬ್ಬರನ್ನು ಗುಂಡಿನ ದಾಳಿಯಲ್ಲಿ ಬಲಿ ಪಡೆದುಕೊಂಡಿದೆ.

    ಈ ಕುರಿತು ಸಂತೋಷ್ ಮಗಳು ಮಾತನಾಡಿ, ನಮ್ಮ ಸುತ್ತಲೂ ಹಲವಾರು ಪ್ರವಾಸಿಗರಿದ್ದರು. ಆದರೆ ಭಯೋತ್ಪಾದಕರು ಹಿಂದೂ ಅಥವಾ ಮುಸ್ಲಿಂ ಎಂದು ಕೇಳಿದ ನಂತರ ಪುರುಷನ್ನು ಗುರಿಯಾಗಿಸಿಕೊಂಡು ಬಲಿ ಪಡೆದಿದ್ದಾರೆ ಎಂದರು.

    ಒಡಿಶಾದ ಪ್ರಶಾಂತ್ ಸತ್ಪತಿ:
    ಒಡಿಶಾದ ಬಾಲಸೋರ್‌ನ ಮೂಲದವರಾದ ಪ್ರಶಾಂತ್ ಸತ್ಪತಿ ಎಂಬುವವರು ತಮ್ಮ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದರು. ಈ ವೇಳೆ ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಸಹೋದರ ಮಾತನಾಡಿ. ನಾವು ಟೋಲ್-ಫ್ರೀ ಸಂಖ್ಯೆಗೆ ಕರೆ ಮಾಡಿದಾಗ, ಅವರು ನನ್ನ ಸಹೋದರ ಸಾವಿನ್ನಪ್ಪಿರುವ ಕುರಿತು ಮಾಹಿತಿ ನೀಡಿದರು. ಸದ್ಯ ನನ್ನ ಸಹೋದರ ಪತ್ನಿ ಹಾಗೂ ಮಗನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

    ಪಶ್ಚಿಮ ಬಂಗಾಳದ ಇಬ್ಬರು
    ಅಮೆರಿಕ ಮೂಲದ ಕೋಲ್ಕತ್ತಾದ ಬೈಷ್ಣಬ್ಘಾಟಾ ನಿವಾಸಿಯಾಗಿರುವ ಟಿಸಿಎಸ್ ಟೆಕ್ಕಿ ಬಿತನ್ ಅಧಿಕಾರಿ ತಮ್ಮ ಅಮೆರಿಕದಿಂದ ಹಿಂದಿರುಗಿ ತಮ್ಮ ಪತ್ನಿ ಸೋಹಿನಿ ಅಧಿಕಾರಿ (37) ಮತ್ತು ಅವರ ಮೂರುವರೆ ವರ್ಷದ ಮಗ ಹೃದಾನ್ ಅಧಿಕಾರಿಯೊಂದಿಗೆ ಪಹಲ್ಗಾಮ್ ತೆರಳಿದ್ದರು. ಈ ವೇಳೆ ದಾಳಿಯಲ್ಲಿ ಪ್ರಾಣ ಕಳೆದುಕೊಂಡರು. ಏ.16 ರಿಂದ ಏ.24ರವರೆಗೆ ಕಾಶ್ಮೀರ ಪ್ರವಾಸದ ಯೋಜನೆ ಹಾಕಿಕೊಂಡಿದ್ದರು.

    ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿತನ್ ಅಧಿಕಾರಿ ಪಶ್ಚಿಮ ಬಂಗಾಳದವರು. ನಾನು ಅವರ ಪತ್ನಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾಕ್ಕೆ ತರಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

    ಕೋಲ್ಕತ್ತಾ ನಿವಾಸಿ ಸಮೀರ್ ಗುಹಾ ಅವರು ಕೇಂದ್ರದ ಅಂಕಿಅಂಶ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಈ ದಾಳಿ ನಡೆದಿದೆ.

    ಉತ್ತರ ಪ್ರದೇಶದ ಶುಭಂ ದ್ವಿವೇದಿ:
    ಪಹಲ್ಗಾಮ್ ದಾಳಿಗೂ ಮುಂಚೆ ಶುಭಂ ಮತ್ತು ಅವರ ಪತ್ನಿ ಮ್ಯಾಗಿ ತಿನ್ನುತ್ತಿದ್ದರು. ಈ ವೇಳೆ ಸಮವಸ್ತ್ರದಲ್ಲಿದ್ದ ಇಬ್ಬರು ಪುರುಷರು ಅವರ ಬಳಿಗೆ ಬಂದು, ನೀವು ಮುಸ್ಲಿಮರಾ ಎಂದು ಕೇಳಿದರು. ಬಳಿಕ ಇಸ್ಲಾಮಿಕ್ ನಂಬಿಕೆಯ ಘೋಷಣೆಯಾದ ಕಲೀಮಾವನ್ನು ಪಠಿಸುವಂತೆ ಒತ್ತಾಯಿಸಿದರು. ಈ ಕುರಿತು ಶುಭಂ ತಂದೆ ಮಾತನಾಡಿ, ಎರಡು ತಿಂಗಳ ಹಿಂದೆ ಶುಭಂ ಮದುವೆಯಾಗಿತ್ತು. ಮಗ ಮತ್ತು ಸೊಸೆ ಕಾಶ್ಮೀರಕ್ಕೆ ಹೋಗಿದ್ದರು. ಇಂದು ವಾಪಸ್ಸಾಗಬೇಕಿತ್ತು. ಆದರೆ ಈ ಘೋರ ದುರಂತ ನಡೆದಿದೆ ಎಂದರು.

    ಗುಜರಾತ್‌ನ ಮೂವರು:
    ಭಯೋತ್ಪಾದಕ ದಾಳಿಯಲ್ಲಿ ಗುಜರಾತ್‌ನ ಭಾವನಗರದ ಯತೀಶ್‌ಭಾಯ್ ಮತ್ತು ಅವರ ಮಗ ಸ್ಮಿತ್ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿರುವುದಾಗಿ ಗುಜರಾತ್ ಸರ್ಕಾರ ತಿಳಿಸಿದ್ದು, ಶೀಘ್ರವೇ ಗಾಯಾಳುವನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಗುಜರಾತ್‌ನ ಸೂರತ್‌ನವರಾದ ಶೈಲೇಶ್ ಕಲ್ಥಿಯಾ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಕಾಶ್ಮೀರಕ್ಕೆ ತೆರಳಿದ್ದರು. ಕುದುರೆ ಸವಾರಿಮಾಡುತ್ತಿದ್ದಾಗ ಕುಟುಂಬದ ಮುಂದೆಯೇ ದಾಳಿಗೀಡಾದರು.

    ನೇಪಾಳದ ಸುದೀಪ್:
    ಪಹಲ್ಗಾಮ್ ದಾಳಿಯಲ್ಲಿ ನೇಪಾಳ ಮೂಲದ ಸುದೀಪ್ ಎಂಬುವವರು ಸಾವನ್ನಪ್ಪಿದ್ದಾರೆ. ಈ ಕುರಿತು ಸುದೀಪ್ ಅವರ ಚಿಕ್ಕಪ್ಪ ದಾಧಿರಾಮ್ ನ್ಯೌಪಾನೆ ದೂರವಾಣಿ ಮೂಲಕ ಮಾತನಾಡಿ, ಸುದೀಪ್ (27) ಕುಟುಂಬದಲ್ಲಿ ಒಬ್ಬನೇ ಮಗ. ಬುತ್ವಾಲ್‌ನಲ್ಲಿರುವ ಮಾಡರ್ನ್ ಸೊಸೈಟಿ ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದರು.

    ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭಯೋತ್ಪಾದಕರು ಪ್ರವಾಸಿಗರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, ಮುಸ್ಲಿಮೇತರರೆಂದು ಗುರುತಿಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

     

  • ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

    ಗುರುವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರೂ ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

    ಇನ್ನೂ ಉಗ್ರರ ದಾಳಿ ಬಗ್ಗೆ ಮಾತನಾಡಿದ ಸಿಎಂ, ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ತಿಳಿಸಿದರು.

    ಅಲ್ಲದೇ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

  • ಸಾಲಾಗಿ ನಿಲ್ಲಿಸಿ ಹಿಂದೂನಾ ಅಂತ ಕೇಳಿ ಗುಂಡಿಟ್ಟು ಕೊಂದಿದ್ದಾರೆ – ಮೃತ ಭರತ್ ಭೂಷಣ್ ಸಂಬಂಧಿ

    ಸಾಲಾಗಿ ನಿಲ್ಲಿಸಿ ಹಿಂದೂನಾ ಅಂತ ಕೇಳಿ ಗುಂಡಿಟ್ಟು ಕೊಂದಿದ್ದಾರೆ – ಮೃತ ಭರತ್ ಭೂಷಣ್ ಸಂಬಂಧಿ

    ಬೆಂಗಳೂರು: ಪಹಲ್ಗಾಮ್‌ನಲ್ಲಿ (Palagham) ಸಾಲಾಗಿ ನಿಲ್ಲಿಸಿ ಹಿಂದೂನಾ ಅಂತ ಕೇಳಿ ಗುಂಡಿಟ್ಟು ಕೊಂದಿದ್ದಾರೆ ಎಂದು ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಅತ್ತೆ ನಿರ್ಮಲಾ ಕಣ್ಣೀರಿಟ್ಟಿದ್ದಾರೆ.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರುವ ಅವರು, ಕಾಶ್ಮೀರಕ್ಕೆ (Jammu Kashmir) ಏ.18ಕ್ಕೆ ಹೋಗಿದ್ದರು, ಇಂದು ಬೆಳಗ್ಗೆ 7 ಗಂಟೆಗೆ ಶ್ರೀನಗರದಿಂದ ಬೆಂಗಳೂರಿಗೆ (Bengaluru) ಬರಬೇಕಿತ್ತು. ಮದ್ವೆಯಾಗಿ 4 ವರ್ಷ ಆಗಿತ್ತು, ಮೂರು ವರ್ಷದ ಮಗು ಇತ್ತು. ಹಿಂದೂನಾ ಅಂತ ಕೇಳಿ ಸಾಲಾಗಿ ನಿಲ್ಲಿಸಿ ಗುಂಡಿಟ್ಟು ಕೊಂದಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಅಸ್ಸಾಂ ಪ್ರೊಫೆಸರ್ ದೇಬಶೀಶ್ ಭಟ್ಟಾಚಾರ್ಯ ಜೀವ ಉಳಿಸಿದ ಕಲಿಮಾ

    ಇವತ್ತು ಬೆಂಗಳೂರಿಗೆ ಬರಬೇಕಿತ್ತು. ಆದರೆ ನಿನ್ನೆ ಈ ರೀತಿಯಾಗಿದೆ. ಘಟನೆಯಾದಾಗ ಬಳಿಕ ಮಗಳು ಕರೆ ಮಾಡಿ ವಿಷಯ ತಿಳಿಸಿದಳು. ನಾವೆಲ್ಲ ನಿಂತಾಗ ಸಡನ್ ಆಗಿ ಬಂದು ಹಿಂದೂನಾ? ಮುಸ್ಲಿಮಾ? ಅಂತ ಕೇಳಿ ಗುಂಡು ಹಾರಿಸಿದ್ದಾರೆ. ಶೂಟ್ ಮಾಡಿದ ತಕ್ಷಣ ನನ್ನ ಮಗಳು ಭರತ್ ಪ್ಯಾಂಟ್‌ನಿಂದ ಮೊಬೈಲ್, ಆಧಾರ್ ಸೇರಿ ಇನ್ನಿತರ ಡಾಕ್ಯುಮೆಂಟ್‌ಗಳನ್ನು ಎತ್ತಿಕೊಂಡು ಮಗುವನ್ನು ಕರೆದುಕೊಂಡು ಕುದುರೆಯಲ್ಲಿ ಸ್ಥಳದಿಂದ ಬೇರೆ ಕಡೆಗೆ ಹೋಗಿದ್ದಾಳೆ. ಬಳಿಕ ಭರತ್ ಶವವನ್ನು ಶ್ರೀನಗರಕ್ಕೆ ಕೊಂಡೊಯ್ಯದಿದ್ದಾರೆ ಎಂದು ಮಾಹಿತಿ ನೀಡಿದರು.

    ಭಯೋತ್ಪಾದಕರು ಒಬ್ಬರ ನಂತರ ಇನ್ನೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಒಬ್ಬೊಬ್ಬರ ಮೇಲೆ ಐದು ನಿಮಿಷಗಳ ಕಾಲ ಗುಂಡು ಹಾರಿಸಿದ್ದು, ಎಲ್ಲರ ತಲೆಗೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೇಳಿದರು.

    ಇನ್ನೂ ಈ ಕುರಿತು ಭೂಷಣ್ ಸೋದರ ಮಾವ ಮಾತನಾಡಿ, ಇಂದು ರಾತ್ರಿ 10:45ಕ್ಕೆ ಸುಂದರ ನಗರದ ನಿವಾಸಕ್ಕೆ ಪಾರ್ಥಿವ ಶರೀರ ಬರಲಿದೆ. ಗುಂಡು ಹಾರಿಸಿ ನಂತರ ಕೆಳಗೆ ಬಿದ್ದ ಗಂಡನನ್ನ ಹೆಂಡತಿ ಪರಿಶೀಲಿಸಿದ್ದಾರೆ. ಆಗ ಉಸಿರು ನಿಂತಿತ್ತು. ಕೂಡಲೇ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾಳೆ. ನಾಳೆ ಹೆಬ್ಬಾಳ (Hebbal) ಚಿತಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಇಂದು ಮನೆಗೆ ಮರಳಬೇಕಿದ್ದ ಉದ್ಯಮಿ ಉಗ್ರರ ಗುಂಡಿಗೆ ಬಲಿ – ಇಡೀ ಗ್ರಾಮದಲ್ಲಿ ಮಡುಗಟ್ಟಿದ ಮೌನ

  • ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ – ಪ್ರಹ್ಲಾದ್ ಜೋಶಿ

    ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ – ಪ್ರಹ್ಲಾದ್ ಜೋಶಿ

    -ಇನ್ನೆರೆಡು ದಿನದಲ್ಲಿ ಪ್ರವಾಸಿಗರು ಸ್ವಸ್ಥಾನಕ್ಕೆ ಮರಳಲಿದ್ದಾರೆ ಎಂದ ಕೇಂದ್ರ ಸಚಿವ

    ಹುಬ್ಬಳ್ಳಿ: ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ದೆಹಲಿಯಲ್ಲಿ (Delhi) ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಪಾಕಿಸ್ತಾನ ಅವನತಿ ಆರಂಭವಾಗಿದೆ – ಜಗದೀಶ್ ಶೆಟ್ಟರ್ ಎಚ್ಚರಿಕೆ

    ಕನ್ನಡಿಗರು ಸ್ವಸ್ಥಾನಕ್ಕೆ ಮರಳಲು ವ್ಯವಸ್ಥೆ:
    ಮಂಗಳವಾರ ರಾತ್ರಿಯೇ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯಕ್ಕೆ ಮುಂಬೈ ಮತ್ತು ದೆಹಲಿಗೆ ಪ್ರವಾಸಿಗರನ್ನು ರವಾನಿಸಲು ಸರ್ಕಾರ ವಿಮಾನ ವ್ಯವಸ್ಥೆ ಮಾಡಿದೆ. ಇನ್ನೆರೆಡು ದಿನಗಳಲ್ಲಿ ಎಲ್ಲ ಪ್ರವಾಸಿಗರನ್ನೂ ಅವರವರ ಸ್ವಸ್ಥಾನಗಳಿಗೆ ಸುರಕ್ಷಿತವಾಗಿ ಮರಳಿಸಲಾಗುತ್ತದೆ ಎಂದು ತಿಳಿಸಿದರು.

    ಮೂವರು ಕನ್ನಡಿಗರ ಪಾರ್ಥಿವ ಶರೀರ ಸಾಗಿಸಲು ಕ್ರಮ:
    ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಮೃತರ ಪಾರ್ಥಿವ ಶರೀರ, ಗಾಯಾಳುಗಳು, ಕುಟುಂಬಸ್ಥರು ಹಾಗೂ ಪ್ರವಾಸಿಗರನ್ನು ಸ್ವಂತ ಊರು-ಮನೆಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೆಚ್ಚಿನ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.

    ಕರ್ನಾಟಕದ ಅನೇಕರು ಪಹಲ್ಗಾಮ್ ಪ್ರವಾಸಿ ತಾಣದಲ್ಲಿದ್ದು, ರಾಜ್ಯಕ್ಕೆ ಮರಳಲು ಬಯಸಿದ್ದರಿಂದ ಅವರೆಲ್ಲರನ್ನು ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಗ್ರಾಹಕ ವ್ಯವಹಾರಗಳ ಸಚಿವನಾಗಿ ವಿಮಾನಯಾನ ಕಂಪನಿಗಳು ಹೆಚ್ಚಿನ ಟಿಕೆಟ್ ದರ ಕಲ್ಪಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ: ಇದು ರಾಜಕೀಯ ಮಾಡುವ ಸಮಯವಲ್ಲ, ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

    ಜಮ್ಮು-ಕಾಶ್ಮೀರದ ಶಾಂತಿ ಕೆಡಿಸಲು ಷಡ್ಯಂತ್ರ:
    ಜಮ್ಮು-ಕಾಶ್ಮೀರ ಭಾರತದ ಮುಕುಟದಂತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಬಹು ದೊಡ್ಡ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿದೆ. ಸ್ವಿಡ್ಜರ್‌ಲ್ಯಾಂಡ್‌ಗಿಂತಲೂ ಸುಂದರವಾಗಿದೆ ಎಂಬ ಭಾವನೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದರು. ಇದನ್ನು ಸಹಿಸದೇ ಅಲ್ಲಿ ಅಶಾಂತಿ ಸೃಷ್ಟಿಸಿ, ಪ್ರವಾಸೋದ್ಯಕ್ಕೆ ಪೆಟ್ಟು ನೀಡಲು ಭಯೋತ್ಪಾದಕ ಚಟುವಟಿಕೆ ನಡೆಸಲಾಗಿದೆ ಎಂದು ಅಭಿಪ್ರಾಯಪಟ್ಟರು.

    ಕಳೆದ ಐದಾರು ವರ್ಷಗಳಲ್ಲಿ ಜಮ್ಮು-ಕಾಶ್ಮೀರದ ಪ್ರವಾಸೋದ್ಯಮ ಅಭೂತಪೂರ್ವವಾಗಿ ಬೆಳೆದಿದೆ. ಇಲ್ಲಿನವರಿಗೆ ಪ್ರವಾಸೋದ್ಯಮದಿಂದ ಅತಿ ಹೆಚ್ಚು ಆದಾಯ ಬಂದಿದೆ. ಅಲ್ಲದೇ, ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಹ ಅತ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿ ನಡೆದಿವೆ. ಜೊತೆಗೆ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಸೇರಿ ಎಲ್ಲವೂ ಭಯೋತ್ಪಾದಕರ ಕಣ್ಣು ಕುಕ್ಕಿವೆ. ಅದರ ಪರಿಣಾಮವೇ ಭಯೋತ್ಪಾದನಾ ಕೃತ್ಯ ಎಂದು ಹೇಳಿದರು.

    ಭಯೋತ್ಪಾದನೆ ನಿಗ್ರಹಕ್ಕೆ ಇನ್ನಷ್ಟು ಕಠಿಣ ಕ್ರಮ:
    ಕಣಿವೆ ರಾಜ್ಯ ಸೇರಿದಂತೆ ದೇಶದ ಎಲ್ಲೆಡೆಯೂ ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಆದ್ದರಿಂದಲೇ ದೇಶದಲ್ಲಿ 2019ರಿಂದ ಈಚೆಗೆ ಭಯೋತ್ಪಾದಕ ಚಟುವಟಿಕೆ ಇಲ್ಲವಾಗಿತ್ತು. ಪಹಲ್ಗಾಮ್ ಭಯೋತ್ಪಾದಕರ ದಾಳಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇದರ ವಿರುದ್ಧ ಹೋರಾಡಲಿದೆ. ಭಾರತವನ್ನು ಶೂನ್ಯ ಭಯೋತ್ಪಾದನೆಯತ್ತ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ: ಅಸ್ಸಾಂ ಪ್ರೊಫೆಸರ್ ದೇಬಶೀಶ್ ಭಟ್ಟಾಚಾರ್ಯ ಜೀವ ಉಳಿಸಿದ ಕಲಿಮಾ

  • Pahalgam Terrorist Attack | ಕನ್ನಡಿಗರ ರಕ್ಷಣೆಗಾಗಿ ತಂಡ ರಚನೆ ಮಾಡಿದ್ದೇವೆ: ಹೆಚ್‌ಕೆ ಪಾಟೀಲ್

    Pahalgam Terrorist Attack | ಕನ್ನಡಿಗರ ರಕ್ಷಣೆಗಾಗಿ ತಂಡ ರಚನೆ ಮಾಡಿದ್ದೇವೆ: ಹೆಚ್‌ಕೆ ಪಾಟೀಲ್

    ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿಯಲ್ಲಿ (Terrorist Attack) ಗಾಯಗೊಂಡವರು ಹಾಗೂ ಅಲ್ಲಿರುವ ಕನ್ನಡಿಗರಿಗಾಗಿ ಒಂದು ತಂಡ ರಚನೆ ಮಾಡಿ, ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸುತ್ತಿದ್ದೇವೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್ (HK patil) ಮಾಹಿತಿ ನೀಡಿದರು.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ ಮಾಹಿತಿ ಹಂಚಿಕೊಂಡ ಅವರು, ನನಗೆ ಸಿಕ್ಕ ಮಾಹಿತಿ ಪ್ರಕಾರ ಮಂಜುನಾಥ್ ಎನ್ನುವ ಒಬ್ಬರು ಸಾವನ್ನಪ್ಪಿದ್ದಾರೆ. ಆದರೆ ಕೆಲವು ವರದಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆದರೆ ಆ ಕುರಿತು ಅಧಿಕೃತ ಮಾಹಿತಿ ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಒಟ್ಟು 12 ಜನ ಕನ್ನಡಿಗರಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಯವರ ಜೊತೆ ಮಾತನಾಡಿದ್ದೇನೆ. ಈಗಾಗಲೇ ಒಂದು ತಂಡ ರಚನೆ ಮಾಡಿ, ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸುತ್ತಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ – 27ಕ್ಕೂ ಹೆಚ್ಚು ಪ್ರವಾಸಿಗರು ಬಲಿ?

    ಕರ್ನಾಟಕ ಭವನದ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಹೊರಡಲು ಸಿದ್ಧರಾಗಿದ್ದಾರೆ. ಇನ್ನೂ ಕನ್ನಡಿಗರು ಯಾರೆಲ್ಲ ಇದ್ದಾರೆ ಎಂದು ಅವರ ಬಗ್ಗೆ ಪಟ್ಟಿ ಮಾಡಲು ಏಜೆನ್ಸಿಗಳಿಗೆ ತಿಳಿಸಲಾಗಿದೆ. ಗಾಯಗೊಂಡವರು ಮೂವರು, ಸಾವನ್ನಪ್ಪಿದವರು ಇಬ್ಬರು ಎನ್ನಲಾಗುತ್ತಿದ್ದು, ಒಬ್ಬರ ಬಗ್ಗೆ ಅಧಿಕೃತವಾಗಿ ತಿಳಿದು ಬಂದಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ ಎಂದು ತಿಳಿಸಿದರು.

    ಏನಿದು ಘಟನೆ?
    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

  • ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್‌

    ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್‌

    – ಧಾರ್ಮಿಕ ಸ್ಥಳಗಳು, ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿದ ಭದ್ರತೆ

    ಮುಂಬೈ: ಮುಂಬೈನಲ್ಲಿ (Mumbai) ಭಯೋತ್ಪಾದನಾ ಬೆದರಿಕೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

    ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’

    ನಗರದ ಡಿಸಿಪಿಗಳು (ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್) ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಕೇಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಜನನಿಬಿಡ ಕ್ರಾಫರ್ಡ್ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಪೊಲೀಸರು ಅಣಕು ಡ್ರಿಲ್ ನಡೆಸಿದರು. ಆದರೆ, ಇದು ಹಬ್ಬ-ಹರಿದಿನಗಳ ಮುನ್ನಾ ಭದ್ರತಾ ಕಸರತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ

    10 ದಿನಗಳ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ ಮುಂಬೈ ಈಗ ದುರ್ಗಾಪೂಜೆ, ದಸರಾ ಮತ್ತು ದೀಪಾವಳಿಗೆ ತಯಾರಿ ನಡೆಸುತ್ತಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ರಾಜ್ಯ ವಿಧಾನಸಭೆಗಳಿಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

  • ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ISIS) ಮಾಡ್ಯೂಲ್‌ನ ಪ್ರಮುಖ ಸದಸ್ಯ ರಿಜ್ವಾನ್ ಅಬ್ದುಲ್ ಹಾಜಿ ಅಲಿಯನ್ನು ದೆಹಲಿ ಪೊಲೀಸರ ವಿಶೇಷ ಸೆಲ್ (Delhi Police Speical Cell) ಶುಕ್ರವಾರ (ಆ.9) ಮುಂಜಾನೆ ಬಂಧಿಸಿದೆ.

    ಪುಣೆ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಲಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ದೆಹಲಿಯ ದರಿಯಾಗಂಜ್ ನಿವಾಸಿಯಾಗಿರುವ ಅಲಿ, ಪುಣೆ ಐಸಿಸ್ ಮಾಡ್ಯೂಲ್‌ನ (ISIS Module) ಇತರ ಸದಸ್ಯರೊಂದಿಗೆ ದೆಹಲಿ ಮತ್ತು ಮುಂಬೈನಲ್ಲಿ (Mumbai) ವಿಧ್ವಂಸಕ ಕೃತ್ಯ ಎಸಗಲು ಹಲವಾರು ಪ್ಲ್ಯಾನ್‌ ಮಾಡಿದ್ದನು ಎಂದು ಆರೋಪಿಸಲಾಗಿದೆ.

    ಬಂಧನದ ವೇಳೆ ಅಲಿ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಪುಣೆ ಐಸಿಸ್ ಮಾಡ್ಯೂಲ್‌ನ ಹಲವಾರು ಸದಸ್ಯರನ್ನು ಈ ಹಿಂದೆ ಪುಣೆ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿತ್ತು.

    ಈ ಹಿಂದೆಯೇ 11 ಆರೋಪಿಗಳ ಬಂಧನ:
    ಮಹಾರಾಷ್ಟ್ರದ ಪುಣೆಯಲ್ಲಿ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ರಾಸಾಯನಿಕಗಳು ಮತ್ತು ಐಸಿಸ್‌ಗೆ ಸಂಬಂಧಿಸಿದ ಪುಸ್ತಕಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2023 ರಲ್ಲಿ ಎನ್‌ಐಎ ಒಟ್ಟು 11 ಆರೋಪಿಗಳನ್ನು ಬಂಧಿಸಿದೆ. ಈ ವರ್ಷದ ಮಾರ್ಚ್‌ನಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆ ಸಲ್ಲಿಸಿದ ಪೂರಕ ಆರೋಪ ಪಟ್ಟಿಯಲ್ಲಿ ಇತರ ಮೂವರು ಆರೋಪಿಗಳೊಂದಿಗೆ ರಿಜ್ವಾನ್ ಅಲಿಯನ್ನು ಹೆಸರಿಸಲಾಗಿತ್ತು.

    ಎಲ್ಲಾ ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸದಸ್ಯರಾಗಿದ್ದರು. ಹಾಗೂ ಎನ್‌ಐಎ ಪ್ರಕಾರ, ಸಂಘಟನೆಯ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುವ ದೊಡ್ಡ ಪಿತೂರಿಯ ಭಾಗವಾಗಿ ಪುಣೆ ಮತ್ತು ಸುತ್ತಮುತ್ತ ಭಯೋತ್ಪಾದನೆಯ ಯೋಜನೆಗಳಲ್ಲಿ ಭಾಗಿಯಾಗಿದ್ದರು. ಈ ವ್ಯಕ್ತಿಗಳು ಪುಣೆಯ ಕೊಂಧ್ವಾದಲ್ಲಿ ಐಇಡಿ ಫ್ಯಾಬ್ರಿಕೇಶನ್ ತರಬೇತಿಯನ್ನು ಪಡೆದಿದ್ದರು ಮತ್ತು ನಿಯಂತ್ರಿತ ಸ್ಫೋಟವನ್ನು ಸಹ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.

    ಪಶ್ಚಿಮ ಘಟ್ಟದ ​​ಪ್ರದೇಶಗಳನ್ನು ಅಡಗುತಾಣ ಮಾಡಿಕೊಂಡಿದ್ದರು. ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಹಾರಾಷ್ಟ್ರ ಮತ್ತು ಗುಜರಾತ್‌ನಾದ್ಯಂತ ನಗರಗಳಲ್ಲಿ ಸ್ಥಳಗಳನ್ನು ಪರಿಶೀಲಿಸಿದ್ದರು. ಅಲ್ಲದೇ ಭಯೋತ್ಪಾದಕ ದಾಳಿಗೆ ಶೂಟಿಂಗ್‌ ತರಬೇತಿಯನ್ನೂ ಪಡೆದಿದ್ದರು ಎಂದು ಎನ್‌ಐಎ ತಿಳಿಸಿದೆ.

  • ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಶ್ರೀನಗರ: ಕಳೆದ ಮೂರು ವಾರಗಳ ಹಿಂದೆಯಷ್ಟೇ ರಿಯಾಸಿ ಭಯೋತ್ಪಾದಕ ದಾಳಿಗೆ (Reasi Terror Attack) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಾನುವಾರ (ಇಂದು) ಜಮ್ಮು ಮತ್ತು ಕಾಶ್ಮೀರದ ರಜೌರಿ (Rajouri) ಜಿಲ್ಲೆಯ ಅನೇಕ ಕಡೆದ ದಾಳಿ ನಡೆಸಿದೆ.

    ಇದೇ ತಿಂಗಳ ಜೂನ್‌ 9ರಂದು ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಭಯೋತ್ಪಾದಕರು ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಬಸ್‌ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದರು 33 ಮಂದಿ ಗಾಯಗೊಂಡಿದ್ದರು. ಆದ್ರೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಎನ್‌ಐಎ ಜೂನ್‌ 15ರಂದು ಪ್ರಕರಣ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ಹಲವೆಡೆ ದಾಳಿ ನಡೆಸಿದೆ.

    ರಿಯಾಸಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜೂನ್ 19 ರಂದು ಬಂಧಿಸಲಾದ ಶಂಕಿತ ಉಗ್ರ ಹಕಮ್ ಖಾನ್ ಅಕಾ ಹಕಿನ್ ದಿನ್ ನೀಡಿದ ಸುಳಿವು ಆಧರಿಸಿ ರಾಜೌರಿಯಲ್ಲಿ ದಾಳಿ ನಡೆಸಲಾಗಿದೆ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – ಉಗ್ರರಿಗೆ ಸಹಕಾರ ನೀಡಿದ್ದ ಓರ್ವ ವ್ಯಕ್ತಿ ಅರೆಸ್ಟ್‌

    ಪ್ರಾಥಮಿಕ ಮಾಹಿತಿ ಪ್ರಕಾರ ಬಂಧಿತನು ಭಯೋತ್ಪಾದಕರಿಗೆ ವ್ಯವಸ್ಥಿತವಾಗಿ ಬೆಂಬಲ ನೀಡುತ್ತಿದ್ದ ಜೊತೆಗೆ ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದ. ಉಗ್ರರ ದಾಳಿಗೆ ನೆರವಾಗುವ ಸ್ಥಳಗಳ ಬಗ್ಗೆಯೂ ಮಾಹಿತಿ ನೀಡಿದ್ದ, ಅನ್ನೋದು ತಿಳಿದುಬಂದಿದೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಮೋಹಿತಾ ಶರ್ಮಾ ಹೇಳಿದ್ದಾರೆ.

    ಅಲ್ಲದೇ ವಿಚಾರಣೆ ವೇಳೆ ತನ್ನ ಮನೆಯಲ್ಲಿ ಮೂವರು ಉಗ್ರರು ತಂಗಿದ್ದರು. ಅದಕ್ಕಾಗಿ ತನಗೆ 6,000 ರೂ. ನೀಡಿದ್ದರು ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

  • ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್‌

    ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್‌

    ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರ ಮಂತ್ರಾಲಯಕ್ಕೆ (Maharashtra Mantralaya) ಬೆದರಿಕೆ ಕರೆ ಮಾಡಿದ್ದ 61 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

    ಪ್ರಕಾಶ್ ಕಿಶನ್‌ಚಂದ್ ಖೇಮಾನಿ ಬಂಧಿತ ವ್ಯಕ್ತಿ. ಮಂತ್ರಾಲಯಕ್ಕೆ ಕರೆ ಮಾಡಿ ಎರಡು ದಿನದಲ್ಲಿ ಭಯೋತ್ಪಾದಕ ದಾಳಿ (Terror Attack) ನಡೆಯಲಿದೆ ಎಂದು ಹೇಳಿದ್ದ. ಇದನ್ನೂ ಓದಿ: ಮತ್ತೆ ವಿದೇಶ ಪ್ರವಾಸ- ಕಾಂಬೋಡಿಯಾಗೆ ತೆರಳಿದ ಮಾಜಿ ಸಿಎಂ ಹೆಚ್‍ಡಿಕೆ

    ಸೋಮವಾರ ರಾತ್ರಿ 10 ಗಂಟೆಗೆ ಫೋನ್ ಮೂಲಕ ಬೆದರಿಕೆ ಬಂದಿದೆ. ಈ ವಿಚಾರವನ್ನು ನಿಯಂತ್ರಣ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕರೆಯ ಜಾಡು ಹಿಡಿದ ಪೊಲೀಸರು ಈಗ ವ್ಯಕ್ತಿಯನ್ನು ಬಂಧಿಸಿ ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]