Tag: ಭರತ್ ಗೌಡ

  • ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

    ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

    ತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್.

    ಈ ಕುರಿತು ಮಾತನಾಡುವ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು, ಡಾ. ಶಿವರಾಮ ಕಾರಂತರಿಗೂ ಯಾವುದೇ ಸಂಬಂಧವಿಲ್ಲ. ಅವರಿಗೆ ಧಕ್ಕೆ ತರುವಂತಹ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗಾಗಲೇ ಚಿತ್ರವನ್ನು ಹಲವರಿಗೆ ತೋರಿಸಿದ್ದೇವೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ. ಶೀರ್ಷಿಕೆಗೆ ನ್ಯಾಯ ಸಲ್ಲಿಸಿದ್ದೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ’ ಎನ್ನುತ್ತಾರೆ ಪನ್ನಗ ಸೋಮಶೇಖರ್. ಇದನ್ನೂ ಓದಿ: ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

    ‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು. ‘ಚಿತ್ರದ ಟ್ರೇಲರ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ನೋಡಿದವರೆಲ್ಲ, ಬಹಳ ಗ್ರಿಪ್ಪಿಂಗ್ ಆಗಿದೆ, ಕಥೆ ಗೊತ್ತಾಗುತ್ತಿಲ್ಲ, ಹೊಸಬರೇ ಸೇರಿ ಈ ಚಿತ್ರ ಮಾಡಿದ್ದು ಎಂದನಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಾಳೆ ಚಿತ್ರ ನೋಡುವ ಪ್ರೇಕ್ಷಕರು ಸಹ ಇದೇ ಅಭಿಪ್ರಾಯಪಟ್ಟರೆ ನಮ್ಮ ಶ್ರಮ ಸಾರ್ಥಕ’ ಎನ್ನುತ್ತಾರೆ ವರುಣ್. ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಅವರ ಸಂಬಂಧಿಯೂ ಆದ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ.

    ‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

  • ‘ಕಡಲತೀರದ ಭಾರ್ಗವ’ ಸಿನಿಮಾದ ಮೊದಲ ಟಿಕೆಟ್ 2 ಲಕ್ಷಕ್ಕೆ ಮಾರಾಟ

    ‘ಕಡಲತೀರದ ಭಾರ್ಗವ’ ಸಿನಿಮಾದ ಮೊದಲ ಟಿಕೆಟ್ 2 ಲಕ್ಷಕ್ಕೆ ಮಾರಾಟ

    ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ ‘ಕಡಲ ತೀರದ ಭಾರ್ಗವ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು,  ‘ನೀರ್ ದೋಸೆ’ ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ ‘ಗಜಾನನ ಗ್ಯಾಂಗ್’ ಚಿತ್ರದ ನಿರ್ಮಾಪಕರಾದ ನಾಗೇಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಮಾರ್ಚ್ 3 ನೇ ತಾರೀಖು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಟಿಕೆಟ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಅತಿಥಿಯಾಗಿ ಆಗಮಿಸಿದ್ದ ಮೋಹನ್ ರಾಜು ಅವರು 2 ಲಕ್ಷ ರೂಪಾಯಿ ನೀಡಿ ಈ ಚಿತ್ರದ ಮೊದಲ ಟಿಕೆಟ್ ಪಡೆದುಕೊಂಡರು. ಭಾರೀ ಬೆಲೆಗೆ ಟಿಕೆಟ್ ಮಾರಾಟವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿರುವ ನಿರ್ಮಾಪಕರಾದ ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ಮೊದಲ ಟಿಕೆಟ್ ಮಾರಾಟದಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡುವುದಾಗಿ ತಿಳಿಸಿದ್ದಾರೆ.  ಇದನ್ನೂ ಓದಿ:ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಗೆಲ್ಲುತ್ತಿದೆ. ಅದರಲ್ಲೂ ‘ಕ’ ಹೆಸರಿನಿಂದ ಆರಂಭವಾಗುವ ‘ಕೆ.ಜಿ.ಎಫ್’, ‘ಕಾಂತಾರ’ ಚಿತ್ರಗಳು ಭರ್ಜರಿ ಯಶಸ್ಸು ಕಂಡಿದೆ. ಅದೇ ‘ಕ’ ಅಕ್ಷರದಿಂದ ಆರಂಭವಾಗುವ ‘ಕಡಲ ತೀರದ ಭಾರ್ಗವ’ ಕೂಡ ಪ್ರಚಂಡ ಯಶಸ್ಸು ಕಾಣಲಿ ಎಂದು ಮೋಹನ್ ರಾಜು ಹಾರೈಸಿದರು. ‌ ಚಿತ್ರದಲ್ಲಿ ಕಡಲ ತೀರದಲ್ಲಿ ವಾಸಿಸುವ ಭಾರ್ಗವನಾಗಿ ನಾನು ಅಭಿನಯಿಸಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ಅಧಿಕ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ ಮೋಹನ್ ರಾಜು ಅವರಿಗೆ ಹಾಗೂ ಚಿತ್ರಕ್ಕೆ ಸಹಕಾರ ‌ನೀಡಿದ್ದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಟ – ನಿರ್ಮಾಪಕ ಪಟೇಲ್ ವರುಣ್ ರಾಜು.

    ನಾನು ಭರತ್ ಎಂಬ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ. ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ ಎಂದು ನಾಯಕ‌ ಭರತ್ ಗೌಡ ತಿಳಿಸಿದರು. ಚಿತ್ರದ ಒಂದು ಸನ್ನಿವೇಶದ ಮೂಲಕ ಮಾತು ಪ್ರಾರಂಭಿಸಿದ ನಿರ್ದೇಶಕ ಪನ್ನಗ ಸೋಮಶೇಖರ್, ಇದು ಹಿರಿಯ ಸಾಹಿತಿ ಶಿವರಾಮ ಕಾರಂತರ ಜೀವನ್ನಾಧಾರಿತ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಮ್ಮ ನಾಯಕನ ಹೆಸರು ಭಾರ್ಗವ ಎಂದರು. ಸಮಾರಂಭದಲ್ಲಿ ಹಾಜರಿದ್ದ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

    ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

    ಶೀರ್ಷಿಕೆಯ ಮೂಲಕವೇ ಮನೆಮಾತಾಗಿರುವ  ‘ಕಡಲ ತೀರದ ಭಾರ್ಗವ’ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಡಾ.ವಿ‌.ನಾಗೇಂದ್ರ ಪ್ರಸಾದ್ ಬರೆದಿರುವ ‘ಸಮಯವೇ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಕರಾವಳಿಯ ಅದ್ಭುತ ಪರಿಸರ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನೆರವೇರಿತು.

    “ಕಡಲ ತೀರದ ಭಾರ್ಗವ” ಎಂದು ಹಿರಿಯ ಸಾಹಿತಿ ಶಿವರಾಮ ಕಾರಂತರನ್ನು ಕರೆಯುತ್ತಾರೆ‌. ಅದರೆ ನಮ್ಮ ಚಿತ್ರದ ಕಥೆ ಅವರ ಬಗ್ಗೆ ಅಲ್ಲ. ಚಿತ್ರದಲ್ಲಿ ನಾಯಕನ ಹೆಸರು ಭಾರ್ಗವ ಎಂದು. ನಾನು ಕಡಲತೀರವನ್ನು  ಮನುಷ್ಯನ ಮನಸ್ಸಿಗೆ ಹೋಲಿಸುತ್ತೇನೆ. ಪಟೇಲ್ ವರುಣ್ ರಾಜು ಭಾರ್ಗವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭರತ್ ಗೌಡ ನಾಯಕನಾಗಿ, ಶೃತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್ ಸಿ.ಜೆ ಸಂಗೀತ ನೀಡಿರುವ ಆರು ಹಾಡುಗಳ ಪೈಕಿ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ, ಜನಪ್ರಿಯವಾಗಿದೆ. ಫೆಬ್ರವರಿ 13 ಟ್ರೇಲರ್ ಬರಲಿದೆ. ಅದೇ ದಿವಸ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ಪನ್ನಗ ಸೋಮಶೇಖರ್. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

    ಮದವೆ ಮಾಡಿ ನೋಡು. ಮನೆ ಕಟ್ಟಿ ನೋಡು ‌ಎಂದು ಹೇಳುತ್ತಾರೆ. ಹಾಗೆ ಸಿನಿಮಾ ಮಾಡುವುದು ಸಹ ಅಷ್ಟು ಸುಲಭವಲ್ಲ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ, ನಾನು ಹಾಗೂ ವರುಣ್ ಪಟೇಲ್ ರಾಜು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ – ನಾಯಕ ಭರತ್ ಗೌಡ.

    ಕೊರೋನ ಪೂರ್ವದಲ್ಲಿ ಚಿತ್ರಗಳು ಬಿಡುಗಡೆಯಾಗುತ್ತಿದ್ದ ರೀತಿಗೂ ಹಾಗೂ ಈಗಿನ ರೀತಿಗೂ  ಬದಲಾವಣೆ ಇದೆ. ಈಗ ವಾರಕ್ಕೆ ಸಾಕಷ್ಟು ಚಿತ್ರಗಳು ಬರುತ್ತಿದೆ. ಅದರ ನಡುವೆ ನಮ್ಮ ಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುವ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಚಾರ ಆರಂಭಿಸಿದ್ದೇವೆ. ಉತ್ತಮ ಕಂಟೆಂಟ್ ವುಳ್ಳ ಚಿತ್ರ ಮಾಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲ ಬೇಕು ಎನ್ನುತ್ತಾರೆ ನಿರ್ಮಾಪಕ ಹಾಗೂ ಭಾರ್ಗವ ಪಾತ್ರಧಾರಿ ಪಟೇಲ್ ವರುಣ್ ರಾಜು. ಚಿತ್ರದ ಹಾಡುಗಳ ಬಗ್ಗೆ ಅನಿಲ್ ಸಿ ಜೆ ಮಾಹಿತಿ ನೀಡಿದರು. ಅನೇಕ ಕಲಾವಿದರು ಹಾಗೂ ತಂತ್ರಜ್ಞರು “ಕಡಲ ತೀರದ ಭಾರ್ಗವ” ಸಿನಿಮಾ ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೋಚಕ ಟೀಸರ್ ಹೊತ್ತು ಬಂದ ‘ಕಡಲ ತೀರದ ಭಾರ್ಗವ’ ಚಿತ್ರತಂಡ

    ರೋಚಕ ಟೀಸರ್ ಹೊತ್ತು ಬಂದ ‘ಕಡಲ ತೀರದ ಭಾರ್ಗವ’ ಚಿತ್ರತಂಡ

    ಡಲ ತೀರದ ಭಾರ್ಗವ ಎಂದಾಕ್ಷಣ ದುತ್ತನೆ ಕಣ್ಮುಂದೆ ಬರುವ ವ್ಯಕ್ತಿತ್ವ ಶಿವರಾಮ ಕಾರಂತರು. ಆ ಜನಪ್ರಿಯ ಹೆಸರನ್ನು ಸಿನಿಮಾ ಶೀರ್ಷಿಕೆಯಾಗಿಸಿಕೊಂಡು ಸಿನಿಮಾವೊಂದು ಸೆಟ್ಟೇರಿದ್ದು ಕೂಡ ನಿಮಗೆ ಗೊತ್ತಿರಬಹುದು. ಹಾಗಂತ ಇದು ಕಾರಂತರ ಜೀವನ ಕಥೆಯಾ? ಅಂದ್ರೆ ಖಂಡಿತ ಅಲ್ಲ. ಸಿನಿಮಾ ಕಥೆಗೆ ಈ ಹೆಸರು ಸೂಕ್ತ ಎನ್ನಿಸಿದ್ದರಿಂದ ಕಡಲ ತೀರದ ಭಾರ್ಗವ ಎಂದು ಟೈಟಲ್ ಫಿಕ್ಸ್ ಮಾಡಿದೆ ಚಿತ್ರತಂಡ. ಇದೀಗ ‘ಕಡಲ ತೀರದ ಭಾರ್ಗವ’ ಚಿತ್ರತಂಡ ಟೀಸರ್ ಮೂಲಕ ಪ್ರೇಕ್ಷಕರೆದುರು ಬಂದಿದೆ.

    ಹೊಸ ತಂಡವೊಂದು ಹೊಸ ಕನಸಿಟ್ಟುಕೊಂಡು ಹೊಸ ಹುರುಪಿನಿಂದ ಮಾಡಿರುವ ಸಿನಿಮಾ ‘ಕಡಲ ತೀರದ ಭಾರ್ಗವ’. ಟೀಸರ್ ಎಲ್ಲರ ಹುಬ್ಬೇರಿಸುವಂತಿದ್ದು, ಹೊಸಬರ ಸಿನಿಮಾ ಎನ್ನಲಾರದಷ್ಟು ಪ್ರಾಮಿಸಿಂಗ್ ಆಗಿ ಮೂಡಿಬಂದಿದೆ. ಒಂದಿಷ್ಟು ರೋಚಕತೆಯನ್ನು ಒಳಗೊಂಡಿರುವ ಟೀಸರ್ ತುಣುಕು ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುತ್ತೆ ಎಂಬ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅದಕ್ಕೆ ತಕ್ಕಂತೆ ಅನಿಲ್ ಸಿ.ಜೆ ಹಿನ್ನೆಲೆ ಸಂಗೀತದ ಜುಗಲ್ಬಂದಿಯಿದೆ. ಪ್ರೀತಿ, ಕೋಪ, ನೋವಿನ ಎಳೆ ಒಳಗೊಂಡ ಟೀಸರ್ ಖಂಡಿತ ಸಿನಿಮಾ ತಂಡ ಹೊಸದೇನನ್ನೋ ಹೇಳ ಹೊರಟಿದೆ ಎಂಬ ಫೀಲ್ ನೀಡದೇ ಇರದು. ಇದನ್ನೂ ಓದಿ: ಕತ್ರಿನಾ ಜೊತೆಗೆ ವಿಕ್ಕಿ ಕೌಶಲ್ ಎಂಗೇಜ್‍ಮೆಂಟ್?

    Kadalatheeradabhargava

    ಇಬ್ಬರು ಸ್ನೇಹಿತರು ಹಾಗೂ ನಾಯಕಿ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ ‘ಕಡಲ ತೀರದ ಭಾರ್ಗವ’. ಪನ್ನಗ ಸೋಮಶೇಖರ್ ಚಿತ್ರದ ಸೂತ್ರಧಾರ. ಮೊದಲ ಬಾರಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಇವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನವ ಪ್ರತಿಭೆಗಳಾದ ಭರತ್ ಗೌಡ, ವರುಣ್ ರಾಜು ಪಟೇಲ್ ನಾಯಕ ನಟರಾಗಿ ಗಾಂಧಿನಗರಕ್ಕೆ ಈ ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಕೇವಲ ನಾಯಕ ನಟರಾಗಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಈ ಇಬ್ಬರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್ ಖ್ಯಾತಿಯ ನಟಿ ಶ್ರುತಿ ಪ್ರಕಾಶ್ ಚಿತ್ರದ ನಾಯಕ ನಟಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಟಾಪ್‌ಲೆಸ್ ಅವತಾರದಲ್ಲಿ ಇಷಾ ಗುಪ್ತ – ಹೆಚ್ಚಾಯ್ತು ತುಂಡೈಕ್ಳ ಎದೆ ಬಡಿತ

    ಇವಕಲ ಸ್ಟುಡಿಯೋ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ಒಳಗೊಂಡ ಹಲವು ಕಲಾವಿದರ ತಾರಾಬಳಗವಿದೆ. ಬೆಂಗಳೂರು, ಕೊಡಗು, ಉಡುಪಿ, ಭಟ್ಕಳ, ಮುರುಡೇಶ್ವರದ ಕಡಲ ತೀರದಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಅನಿಲ್ ಸಿ.ಜೆ ಸಂಗೀತ ಸಂಯೋಜನೆ, ಕೀರ್ತನ್ ಪೂಜಾರ್ ಚೆಂದದ ಸಿನಿಮ್ಯಾಟೋಗ್ರಫಿ, ಆಶಿಕ್ ಕುಸುಗೊಳ್ಳಿ, ಉಮೇಶ್ ಬೋಸಗಿ ಸಂಕಲನ ಚಿತ್ರಕ್ಕಿದೆ. ಪ್ರಾಮಿಸಿಂಗ್ ಟೀಸರ್ ಮೂಲಕ ಸಿನಿಮಾದ ಝಲಕ್ ತೋರಿಸಿ ಕುತೂಹಲ ಹುಟ್ಟು ಹಾಕಿರುವ ಚಿತ್ರತಂಡ ಸದ್ಯದಲ್ಲೇ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊತ್ತು ತರಲಿದೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನ

  • ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಬೆಂಗಳೂರು: ಒಂದು ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸಿ, ಅದನ್ನು ನೋಡಲೇ ಬೇಕೆಂಬ ತುಡಿತ ಮೂಡಿಸುವಲ್ಲಿ ಟ್ರೇಲರ್ ಪಾತ್ರ ಮಹತ್ವದ್ದು. ಆದರೆ ಒಂದಿಡೀ ಸಿನಿಮಾ ಸಾರವನ್ನು ಸೆಕೆಂಡು, ನಿಮಿಷಗಳ ಬೊಗಸೆಯಲ್ಲಿ ಹಿಡಿದಿಡುವುದು ಬಲು ಕಷ್ಟದ ಕೆಲಸ. ಅದರಲ್ಲಿ ಗೆದ್ದವರು ಸಿನಿಮಾ ಮೂಲಕ ಗೆಲ್ಲುವುದೂ ನಿಶ್ಚಿತ ಎಂಬಂಥಾ ನಂಬಿಕೆ ಇದೆ. ಈ ಆಧಾರದಲ್ಲಿ ಹೇಳೋದಾದರೆ ಕಡಲ ತಡಿಯ ಭಾರ್ಗವ ಎಂಬ ಸಿನಿಮಾ ಗೆಲುವಿನ ಹಾದಿಯಲ್ಲಿದೆ. ಯಾಕೆಂದರೆ ಇದೀಗ ಲಾಂಚ್ ಆಗಿರೋ ಈ ಸಿನಿಮಾ ಟ್ರೇಲರ್ ಅಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

    ಅಷ್ಟಕ್ಕೂ ಕಡಲ ತೀರದ ಭಾರ್ಗವ ಅಂದಾಕ್ಷಣವೇ ಕನ್ನಡಿಗರೆಲ್ಲರ ಮನಸಲ್ಲಿ ಮೇರು ಸಾಹಿತಿ ಶಿವರಾಮ ಕಾರಂತರ ಚಿತ್ರ ಮೂಡಿಕೊಳ್ಳುತ್ತದೆ. ಈ ಸಿನಿಮಾ ಆರಂಭಿಕವಾಗಿ ಗಮನ ಸೆಳೆದದ್ದರ ಹಿಂದೆಯೂ ಶಿವರಾಮ ಕಾರಂತರೆಂಬ ಮಾಯೆಯಿದ್ದದ್ದು ಸುಳ್ಳಲ್ಲ. ಪ್ರತಿಭೆಯ ವಿರಾಟ್ ರೂಪದಂತಿದ್ದ ವರ್ಣರಂಜಿತ ವ್ಯಕ್ತಿತ್ವದ ಕಾರಂತರಿಗೂ ಈ ಸಿನಿಮಾಗೂ ಸಂಬಂಧವಿದೆಯಾ ಎಂಬ ಪ್ರಶ್ನೆಗೆ ಚಿತ್ರತಂಡ ಇಲ್ಲ ಎಂಬ ನಿಖರ ಉತ್ತರವನ್ನೇ ರವಾನಿಸಿತ್ತು. ಇದೀಗ ಟ್ರೇಲರ್ ಮೂಲಕ ಬೇರೆಯದ್ದೇ ಕಥೆಯ ದಿಕ್ಕು ತೋರಿಸೋ ಮೂಲಕ ಚಿತ್ರತಂಡ ಕಾರಂತರ ವಿಚಾರವಾಗಿ ಹುಟ್ಟಿಕೊಂಡಿದ್ದ ಕೌತುಕಕ್ಕೆ ನಿಖರವಾದ ಉತ್ತರವನ್ನೇ ಕೊಟ್ಟಿದೆ.

    https://www.youtube.com/watch?v=2freW2IGokw

    ಈ ಟ್ರೇಲರ್ ನೋಡಿದವರ್ಯಾರೂ ಕಡಲ ತೀರದ ಭಾರ್ಗವ ಚಿತ್ರದತ್ತ ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಪ್ರೀತಿ ಪ್ರೇಮ, ನಶೆ, ದ್ವೇಷ ಸೇರಿದಂತೆ ಬೇರೆಯದ್ದೇ ಛಾಯೆಗಳಿಂದ ಈ ಟ್ರೇಲರ್ ಹೊರ ಬಂದಿದೆ. ಅದುವೇ ಈ ಸಿನಿಮಾದ ದೃಶ್ಯ ವೈಭವಕ್ಕೆ, ಭಿನ್ನ ಬಗೆಯ ಕಥಾನಕಕ್ಕೆ ಕನ್ನಡಿ ಹಿಡಿದಂತಿದೆ. ಇದು ಪನ್ನಗ ಸೋಮಶೇಖರ್ ನಿರ್ದೇಶನ ಮಾಡಿರೋ ಚಿತ್ರ. ಈಗಾಗಲೇ ಹಲವಾರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರೋ ಪನ್ನಗ ಕಿರುತೆರೆ ಕ್ಷೇತ್ರದಲ್ಲಿಯೂ ಒಂದಷ್ಟು ಅನುಭವ ಹೊಂದಿದ್ದಾರೆ. ಭರತ್ ಗೌಡ ಮತ್ತು ವರುಣ್ ರಾಜ್ ಜೋಡಿಯಾಗಿ ನಟಿಸಿರೋ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಇಷ್ಟರಲ್ಲಿಯೇ ಈ ಸಿನಿಮಾದ ಬಿಡುಗಡೆ ದಿನಾಂಕ ಹೊರಬೀಳಲಿದೆ.