Tag: ಭವಾನಿಪುರ

  • ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

    ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

    ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್‌ 26,320, ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್‌ 4,201 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಮಿನರಲ್ ವಾಟರ್ ಬಾಟಲ್ ಬ್ಯಾನ್

    ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ ಸ್ಪರ್ಧಿಸಿ ಜಯಗಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ 

    ಮಮತಾ ಬ್ಯಾನರ್ಜಿ ಜಯಗಳಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದೀದಿ ಜನರಿಗೆ ಕೆಲಸ ಮಾಡಿದ್ದು, ಈಗ ಮತ ನೀಡಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ರಚನೆಯಾಗಲಿದೆ ಎಂದು ಮಮತಾ ಸಹೋದರ ಕಾರ್ತಿಕ್‌ ಹೇಳಿದ್ದಾರೆ.  ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

  • ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ

    ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.

    ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿ ಸೋತಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೊಲ್ಕತ್ತಾದ ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಮತ್ತು ಸಿಪಿಐ(ಎಂ)ನ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ:  ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ

    ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು. ಆದರೆ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಆರು ತಿಂಗಳೊಳಗೆ ಚುನಾಯಿತರಾಗಬೇಕು. ಹೀಗಾಗಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.