Tag: ಭಸ್ಮ

  • ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ಧಾರವಾಡ: ಹೈವೋಲ್ಟೇಜ್ ವಿದ್ಯುತ್ ಹರಿದ ಪರಿಣಾಮ ಗ್ರಾಮದ ಹಲವು ಮನೆಗಳ ಎಲೆಕ್ಟ್ರಾನಿಕ್ಸ್ ಉಪಕರಣಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಕ್ಯಾರಕೊಪ್ಪ ಗ್ರಾಮದಲ್ಲಿ ಬುಧವಾರ ತಡರಾತ್ರಿ ಹೈವೋಲ್ಟೇಜ್ ವಿದ್ಯುತ್‍ನಿಂದ ಹಲವು ಮನೆಗಳ ಟಿವಿ, ಫ್ರಿಡ್ಜ್, ಚಾರ್ಜ್ ಹಾಕಿದ್ದ ಮೊಬೈಲ್ ಫೋನ್‍ಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹೋಗಿದೆ. ಸುಮಾರು 8 ಮನೆಗಳಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹಾಳಾಗಿದೆ. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಬೆಳ್ಳಂಬೆಳಗ್ಗೆ ಗ್ರಾಮದ ಬಿಲ್ ಕಲೆಕ್ಟರ್‍ಗೆ ಕರೆ ಮಾಡಿ ಅವಘಡದ ಬಗ್ಗೆ ತಿಳಿದ್ದಾರೆ. ಅಲ್ಲದೆ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ.

    ಗ್ರಾಮಸ್ಥರ ಒತ್ತಾಯದ ಮೇಲೆ ಸ್ಥಳಕ್ಕೆ ಬಂದ ಬಿಲ್ ಕಲೆಕ್ಟರ್ ನನ್ನು ತರಾಟೆಗೆ ತೆರೆದುಕೊಂಡು, ನಂತರ ಮೇಲಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಿನ್ನನ್ನು ಬಿಡಲ್ಲ ಎಂದು ಗ್ರಾಮ ಪಂಚಾಯ್ತಿಯಲ್ಲಿದ್ದ ಕೋಣೆಯಲ್ಲಿ ಗ್ರಾಮಸ್ಥರು ಕೂಡಿ ಹಾಕಿದ್ದಾರೆ. ಹಾಗೆಯೇ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ – ಸುಟ್ಟು ಕರಕಲಾಯ್ತು ಸಾಮಾಗ್ರಿಗಳು

    ದಾವಣಗೆರೆ: ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಸಾಮಾಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದಲ್ಲಿ ನಡೆದಿದೆ.

    ಷಡಕ್ಷರಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅಡುಗೆ ಮಾಡಲು ಒಲೆ ಹೊತ್ತಿಸುವಾಗ ಈ ಘಟನೆ ಸಂಭವಿಸಿದ್ದು ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿದೆ. ಸಿಲಿಂಡರ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಆಗಿಲ್ಲ.

    ಇನ್ನೆರಡು ದಿನಗಳಲ್ಲಿ ಷಡಕ್ಷರಪ್ಪ ಅವರ ಮನೆಯಲ್ಲಿ ಮದುವೆ ಸಮಾರಂಭವಿತ್ತು. ಆದ್ದರಿಂದ ಮನೆಯಲ್ಲಿ ಮದುವೆ ಬೇಕಾದ ಸಾಮಾಗ್ರಿಗಳನ್ನು ತಂದಿಡಲಾಗಿತ್ತು. ದುರದೃಷ್ಟವೆನ್ನುವಂತೆ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮದುವೆ ಸಾಮಾಗ್ರಿಗಳೆಲ್ಲ ಬೆಂಕಿಗಾಹುತಿಯಾಗಿದೆ.

    ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಣ ಮಾಡಿದ್ದಾರೆ. ಅಲ್ಲದೆ ಘಟನೆ ಕುರಿತು ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗದಿದ್ದರೂ ಮದುವೆ ಸಂಭ್ರಮದಲ್ಲಿದ್ದ ಮನೆಮಂದಿ ಮುಂದೇನು ಮಾಡುವುದು ಎನ್ನುವ ಚಿಂತೆಯಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ- ಚಿನ್ನಾಭರಣ, ಧಾನ್ಯದ ರಾಶಿ ಜೊತೆಗೆ 50 ಸಾವಿರ ಬೆಂಕಿಗಾಹುತಿ

    ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ- ಚಿನ್ನಾಭರಣ, ಧಾನ್ಯದ ರಾಶಿ ಜೊತೆಗೆ 50 ಸಾವಿರ ಬೆಂಕಿಗಾಹುತಿ

    ವಿಜಯಪುರ: ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ತೋಟದವೊಂದರ ಗುಡಿಸಲಿನಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ಸಂಗಣ್ಣ ಬಿಸ್ತಾಳ ಅವರಿಗೆ ಸೇರಿದ ತೋಟದ ಗುಡಿಸಲು ಬೆಂಕಿಗಾಹುತಿಯಾಗಿದೆ. ಗುಡಿಸಲಿನಲ್ಲಿದ್ದ 15 ಗ್ರಾಂ ಚಿನ್ನಾಭರಣ, 50 ಸಾವಿರ ರೂ. ನಗದು, 3 ಚೀಲ ಜೋಳ, 2 ಚೀಲ ಮೆಕ್ಕೇ ಜೋಳ, 2 ಚೀಲ ಕಡಲೆ, 3 ಚೀಲ ಗೋಧಿ ಹಾಗೂ ಬಟ್ಟೆ ಇತ್ಯಾದಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.

    ಈ ಘಟನೆ ಕುರಿತು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ- ಹೊತ್ತಿ ಉರಿದ ಇಂಡಿಕಾ!

    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ- ಹೊತ್ತಿ ಉರಿದ ಇಂಡಿಕಾ!

    ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ವಿಜಯಪುರದ ಹಡಗಲಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.

    ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅವಘಡದಲ್ಲಿ ಇಂಡಿಕಾ ಕಾರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ವಿಜಯಪುರ ನಗರದ ನಿವಾಸಿ ಸುರೇಶ ಶಿವಣಗಿ ಎಂಬವರಿಗೆ ಸೇರಿದ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಶಿವಣಗಿ ಗ್ರಾಮದಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡುಬಂದಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನದ ತಾಂತ್ರಿಕ ದೋಷದಿಂದ ಈ ದುರ್ಘಟನೆ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ.

    ಈ ಬಗ್ಗೆ ವಿಜಯಪುರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=gQTeUnNjua4&feature=youtu.be