Tag: ಭಾಗಮಂಡಲ

  • ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

    ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

    – ಹಾರಂಗಿ ಡ್ಯಾಂನಿಂದ ಕಾವೇರಿ ನದಿಗೆ 18,000 ಕ್ಯೂಸೆಕ್‌ ನೀರು ರಿಲೀಸ್‌

    ಮಡಿಕೇರಿ: ವರುಣನ ಆರ್ಭಟಕ್ಕೆ ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ (Triveni Sangam) ಸಂಪೂರ್ಣವಾಗಿ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಳದಿಂದ ಹಾರಂಗಿ ಡ್ಯಾಂನಿಂದ (Harangai Dam) ಸುಮಾರು 18,000 ಕ್ಯೂಸೆಕ್ ನೀರು ಕಾವೇರಿ ನದಿಗೆ (Cauvery River) ಹರಿಸಲಾಗುತ್ತಿದೆ.

    ಕೊಡಗು ಜಿಲ್ಲೆಯಲ್ಲಿ ಮೃಗಶಿರ ಮಳೆಯ (Mrigashira Rain) ಅಬ್ಬರ ಮುಂದುವರೆದಿದೆ. ಕಳೆದ 3-4 ದಿನಗಳಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಮಳೆಯಾಗುತ್ತಿವೆ. ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಭಂಗಡೇಶ್ಚರ ದೇವಾಲಯ ಆವರಣಕ್ಕೂ ನೀರು ಪ್ರವೇಶ ಮಾಡಿದೆ. ಭಂಗಡೇಶ್ವರ ದೇವಾಲಯ ಆವರಣದ ಅಂಗಡಿ ಮುಂಗಟ್ಟುಗಳಿಗೆ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ನಾಪೋಕ್ಲು- ಅಯ್ಯಂಗೇರಿ -ಸಣ್ಣಪುಲಿಕೊಟ್ಟು ರಸ್ತೆ ಮೇಲೆ ಸುಮಾರು 4 ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರುಪಾಲು

    ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದ ಭದ್ರತೆ ದೃಷ್ಟಿಯಿಂದ ಈಗಾಗಲೇ 4 ಕ್ರಸ್ಟ್‌ಗೇಟ್‌ಗಳ ಮೂಲಕ 18 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ. ನದಿಪಾತ್ರದ ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!

    ಕೊಡಗಿನಲ್ಲಿ ನದಿಗಳೆಲ್ಲವೂ ತುಂಬಿ ಹರಿಯುತ್ತಿವೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆಗೆ ಕಾವೇರಿ ನದಿ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

  • ಕೊಡಿಗಿನ ಅಭಿವೃದ್ಧಿಗೆ ಅನುದಾನ ಖಚಿತ – ಸಿದ್ದರಾಮಯ್ಯ ಭರವಸೆ

    ಕೊಡಿಗಿನ ಅಭಿವೃದ್ಧಿಗೆ ಅನುದಾನ ಖಚಿತ – ಸಿದ್ದರಾಮಯ್ಯ ಭರವಸೆ

    – ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದ ಸಿಎಂ

    ಮಡಿಕೇರಿ: ಭಾಗಮಂಡಲ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ (Kodagu Development) ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.

    ಭಾಗಮಂಡಲ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಮೇಲ್ಸೆತುವೆ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನ ಅಭಿವೃದ್ಧಿಗೆ ಈ ಬಾರಿಯೂ ಅನುದಾನ ನೀಡುವುದಾಗಿ ಹೇಳಿದರು. ಇದನ್ನೂ ಓದಿ: ಟಿಕ್‌ಟಾಕ್ ವೀಡಿಯೋ ಮಾಡಿದ್ದಕ್ಕೆ ಪಾಕಿಸ್ತಾನದಲ್ಲಿ 15 ವರ್ಷದ ಪುತ್ರಿಯನ್ನೇ ಗುಂಡಿಕ್ಕಿ ಕೊಂದ ಅಪ್ಪ

    ಮುಂದುವರಿದು.. ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಚಿತ್ರದುರ್ಗದಿಂದ ತೆರಳಿದ್ದ ನಾಗ ಸಾಧು ಸಾವು

    ಎಲ್ಲಾ ಧರ್ಮಗಳು, ಜಾತಿಗಳೂ ಎಲ್ಲಾ ಜನರೂ ಸಹ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ, ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ʻಮನುಷ್ಯ ಹುಟ್ಟುವಾಗ ವಿಶ್ವ ಮಾನವನಾಗಿರುತ್ತಾನೆ, ಬೆಳೆಯುತ್ತಾ ಅಲ್ಪಮಾನವನಾಗುತ್ತಾನೆʼ ಎಂದು ಹೇಳಿದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಶಕ್ತಿ:
    ಇದೇ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಸಿಎಂ, ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಅನ್ನೋದನ್ನ ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 1 ವರ್ಷ 8 ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮ್ಮ ಸರ್ಕಾರ. 5 ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನವನ್ನು ನಾವು ಮಾಡಿದ್ದೇವೆ ಎಂದು ನುಡಿದರು.

  • ಮುಳುಗಿತು  ತ್ರಿವೇಣಿ ಸಂಗಮ – ಭಗಂಡೇಶ್ವರನ ಮೆಟ್ಟಿಲುವರೆಗೆ ಆವರಿಸಿದ ನೀರು

    ಮುಳುಗಿತು ತ್ರಿವೇಣಿ ಸಂಗಮ – ಭಗಂಡೇಶ್ವರನ ಮೆಟ್ಟಿಲುವರೆಗೆ ಆವರಿಸಿದ ನೀರು

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ತ್ರಿವೇಣಿ ಸಂಗಮ (Triveni Sangama) ಮುಳುಗಿದೆ.

    ಭಾಗಮಂಡಲ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ (Bhagandeshwara Temple) ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ.  ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಬಂದ್

    ಭಾಗಮಂಡಲ (Bhagamandala) ಸಂಪೂರ್ಣವಾಗಿ ಜಲಾವೃತವಾಗಿದೆ. ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ವಯನಾಡಿನ ಬೆಟ್ಟದಲ್ಲಿ ಜಲಸ್ಫೋಟ – 19 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಸಾಧ್ಯತೆ

     

  • ಹಾರಂಗಿ ಜಲಾಶಯದಿಂದ 10,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ – ಕಾವೇರಿ ದಂಡೆಯಲ್ಲಿ ಪ್ರವಾಹ ಭೀತಿ

    ಹಾರಂಗಿ ಜಲಾಶಯದಿಂದ 10,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ – ಕಾವೇರಿ ದಂಡೆಯಲ್ಲಿ ಪ್ರವಾಹ ಭೀತಿ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಭಾನುವಾರದಿಂದ ದಿನವಿಡೀ ಎಡಬಿಡದೆ ಭಾರೀ ಮಳೆ (Rain) ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ (Harangi Dam) ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ರಾತ್ರಿ 12 ಗಂಟೆ ಸುಮಾರಿಗೆ ಜಲಾಶಯದಿಂದ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ (Flood) ಭೀತಿ ಸೃಷ್ಟಿಯಾಗಿದೆ.

    ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲೂ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಮಡಿಕೇರಿ-ನಾಪೋಕ್ಲು ರಸ್ತೆ ಕಡಿತಗೊಳ್ಳುವ ಸಾಧ್ಯತೆಯೂ ಇದೆ. ಅಲ್ಲದೇ ಜಿಲ್ಲೆಯಲ್ಲಿ ವಿಪರೀತ ಗಾಳಿ ಮಳೆಯಾಗುತ್ತಿದ್ದು, ಹಲವಾರು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಇದನ್ನೂ ಓದಿ: Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

    ಕೆಲ ಗ್ರಾಮ ವಿದ್ಯುತ್ ಇಲ್ಲದೆ ಕಗತ್ತಲೆಯಲ್ಲಿ ಮುಳುಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆರೆಂಜ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

  • ಭಾಗಮಂಡಲ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ – ಗ್ರಾಮಗಳಿಗೆ ನೆರೆ ಭೀತಿ ಇಲ್ಲ

    ಭಾಗಮಂಡಲ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ – ಗ್ರಾಮಗಳಿಗೆ ನೆರೆ ಭೀತಿ ಇಲ್ಲ

    ಮಡಿಕೇರಿ: ಭಾಗಮಂಡಲದಲ್ಲಿ (Bhagamandala) ನಿರ್ಮಾಣವಾಗಿರುವ ಕೊಡಗಿನ (Kodagu) ಏಕೈಕ ಮೇಲ್ಸೇತುವೆ (Flyover) ವಾಹನ ಸಂಚಾರಕ್ಕೆ ಮುಕ್ತಗೊಂಡಿದ್ದು ಇನ್ನು ಮುಂದೆ ಪ್ರವಾಹ ಬಂದರೂ ಗ್ರಾಮಸ್ಥರು, ಕಾವೇರಿ ಭಕ್ತರು (Cauvery Devotees) ಯಾವುದೇ ಅತಂಕ ಇಲ್ಲದೇ ಮಳೆಗಾಲದಲ್ಲೂ ಓಡಾಟ ನಡೆಸಬಹುದಾಗಿದೆ.

    ಹೌದು. ಸುಮಾರು ಆರು ವರ್ಷಗಳ ಬಳಿಕ ಸೇತುವೆ ಕಾಮಗಾರಿ ಮುಕ್ತಾಯಗೊಳ್ಳುತ್ತಿದ್ದು, ಒಂದಷ್ಟು ಸಣ್ಣಪುಟ್ಟ ಕೆಲಸಗಳು ಬಾಕಿ ಇವೆ. ವಾಹನಗಳ ಸಂಚಾರಕ್ಕೆ ಈಗಾಗಲೇ ಮೇಲ್ಸೇತುವೆಯಲ್ಲಿ ಅವಕಾಶ ಮಾಡಲಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇಲ್ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಇದನ್ನೂ ಓದಿ: ವರ್ಷದಿಂದ ವರ್ಷಕ್ಕೆ ರಾಕೆಟ್‌ ವೇಗದಲ್ಲಿ ಚಿಮ್ಮುತ್ತಿದೆ ಭಾರತದ ರಕ್ಷಣಾ ರಫ್ತು!

     

    ಮಳೆಗಾಲದಲ್ಲಿ (Rain) ಭಾಗಮಂಡಲ ಜಲಾವೃತವಾಗುವುದು ಸಾಮಾನ್ಯ. ತ್ರಿವೇಣಿ ಸಂಗಮ (Triveni Sangama) ಮುಳುಗಡೆಯಾದರೆ ತಲಕಾವೇರಿ, ಕೋರಂಗಾಲ, ಅಯ್ಯಂಗೇರಿ, ನಾಪೋಕ್ಲು ಮತ್ತು ಚೇರಂಗಾಲ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತವೆ. ಇದರಿಂದ ಈ ಭಾಗದ ನಿವಾಸಿಗಳು ಮಳೆಗಾಲದಲ್ಲಿ ವಿಪರೀತ ಸಮಸ್ಯೆ ಅನುಭವಿಸುತ್ತಿದ್ದರು. ಈ ಭಾಗದ ಮಕ್ಕಳಿಗೆ ಶಾಲೆಗೆ ತೆರಳಲು ಕೂಡ ಸಮಸ್ಯೆಯಾಗುತ್ತಿತ್ತು. ಇದನ್ನೂ ಓದಿ: ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

    2019 ರಲ್ಲಿ ಕೋರಂಗಾಲದಲ್ಲಿ ಭೂಕುಸಿತವಾಗಿ ಒಂದೇ ಸ್ಥಳದಲ್ಲಿ 5 ಜನರು ಭೂಸಮಾಧಿಯಾಗಿದ್ದರು. ಈ ದುರ್ಘಟನೆ ಸಂಭವಿಸಿದ ಸ್ಥಳವನ್ನು ತಲುಪಬೇಕಾಗಿದ್ದ ರಕ್ಷಣಾ ಪಡೆಗಳು, ಸ್ಥಳೀಯರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ರಸ್ತೆ ಮುಳುಗಡೆಯಾಗಿದ್ದರಿಂದ ಯಾವುದೇ ವಾಹನಗಳ ಓಡಾಟವೂ ಸಾಧ್ಯವಾಗಿರಲಿಲ್ಲ.

    2020 ರ ಆಗಸ್ಟ್ ತಿಂಗಳಲ್ಲೂ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದುಬಿದ್ದಿತ್ತು. ಪರಿಣಾಮ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಆಚಾರ್ ಮತ್ತು ಕುಟುಂಬದ ಐವರು ಭೂ ಸಮಾಧಿಯಾಗಿದ್ದರು. ಆಗಲೂ ಕೂಡ ಬಾರಿ ಮಳೆ ಸುರಿಯುತ್ತಿದ್ದರಿಂದ ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿತ್ತು. ಭಾಗಮಂಡಲದಿಂದ ತಲಕಾವೇರಿವರೆಗೆ ಹಲವು ಕಡೆಗಳಲ್ಲಿ ಭೂಕುಸಿತವಾಗಿದ್ದರಿಂದ ಜೆಸಿಬಿ ಮತ್ತು ಇತರೇ ವಾಹನಗಳನ್ನು ತೆಗೆದುಕೊಂಡು ಹೋಗಿ ರಸ್ತೆ ತೆರವು ಮಾಡಲು ಪರದಾಡಬೇಕಾಗಿತ್ತು. ಹೀಗಾಗಿ ಭಾಗಮಂಡಲದಲ್ಲಿದ್ದ ಪ್ರವಾಹದ ನೀರನ್ನು ದಾಟಿ ಮುಂದೆ ಹೋಗಲು ಎರಡು ದಿನಗಳೇ ಕಾಯಬೇಕಾಗಿತ್ತು.

    ಹಲವಾರು ದಶಕಗಳಿಂದ ಪ್ರತಿ ಮಳೆಗಾಲದಲ್ಲಿಯೂ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದ ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಮೇಲ್ಸೇತುವೆ ಕಾಮಗಾರಿ ಮುಕ್ತವಾಗಿದ್ದು ಈಗ ಹರ್ಷದಲ್ಲಿದ್ದಾರೆ.

     

  • ಕಾವೇರಿ ಉಗಮ ಸ್ಥಾನ ತ್ರಿವೇಣಿ ಸಂಗಮದಲ್ಲೇ ಬತ್ತಿದ ಕಾವೇರಿ – ಸ್ನಾನ, ಪಿಂಡ ಪ್ರದಾನಕ್ಕೆ ಭಕ್ತರ ಪರದಾಟ

    ಕಾವೇರಿ ಉಗಮ ಸ್ಥಾನ ತ್ರಿವೇಣಿ ಸಂಗಮದಲ್ಲೇ ಬತ್ತಿದ ಕಾವೇರಿ – ಸ್ನಾನ, ಪಿಂಡ ಪ್ರದಾನಕ್ಕೆ ಭಕ್ತರ ಪರದಾಟ

    ಮಡಿಕೇರಿ: ಕೊಡಗಿನಲ್ಲಿ (Kodagu) ಕಳೆದ ವರ್ಷ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಕೇವಲ ಜಲಾಶಯಗಳು (Dam) ಹಾಗೂ ನದಿಗಳ ಮೇಲೆ ಮಾತ್ರವೇ ಪರಿಣಾಮ ಬೀರಿಲ್ಲ. ಕಾವೇರಿ (Cauvery) ಉಗಮ ಸ್ಥಾನ ತಲಕಾವೇರಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿಯೂ ಕಾವೇರಿ ಒಡಲು ಬತ್ತಿಹೋಗುತ್ತಿದೆ. ಭಕ್ತರ ಸ್ನಾನಕ್ಕೂ ನೀರು ಇಲ್ಲದೇ ದೇವಾಲಯಕ್ಕೆ ತೆರಳಬೇಕಾದ್ರೆ ಕೈ, ಕಾಲು ತೊಳೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೊಡಗಿನಲ್ಲಿ ಹುಟ್ಟಿ ನಾಲ್ಕು ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳ ಜೀವ ಜಲವಾಗಿರುವ ಕಾವೇರಿ ನದಿ ಬೇಸಿಗೆ ಆರಂಭವಾಗುವ ಮೊದಲೇ ಬಹುತೇಕ ಬತ್ತುತ್ತಿದೆ. ದಕ್ಷಿಣ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ವರ್ಷದ ನಾಲ್ಕೈದು ತಿಂಗಳು ನಿರಂತರ ಮಳೆ (Rain) ಸುರಿಯುತ್ತದೆ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಕಳೆದ 50 ರಿಂದ 60 ವರ್ಷಗಳಲ್ಲೇ ಎಂದೂ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ ನದಿ ಬತ್ತಿ ಹೋಗಿದೆ. ಅಷ್ಟೇ ಅಲ್ಲದೇ ಕಾವೇರಿ ಉಗಮ ಸ್ಥಾನ ತಲಕಾವೇರಿಯ (Talacauvery) ಸನಿಹದ ಭಾಗಮಂಡಲದ (Bhagamandala) ತ್ರಿವೇಣಿ ಸಂಗಮದಲ್ಲಿಯೂ ಕಾವೇರಿ ಒಡಲು ಬತ್ತಿ ಹೋಗಿರುವುದರಿಂದ ಪುಣ್ಯ ಕ್ಷೇತ್ರ ಭಗಂಡೇಶ್ವರ ಹಾಗೂ ತಲಕಾವೇರಿಗೆ ತೆರಳುವ ಭಕ್ತರ ಸ್ನಾನಕ್ಕೆ ಮತ್ತು ಪಿಂಡ ಪ್ರದಾನಕ್ಕೂ ನೀರು ಇಲ್ಲದೇ ಪರದಾಟ ನಡೆಸುವಂತಹ ಪರಿಸ್ಥಿತಿ ಎದುರಾಗಿದೆ‌.  ಇದನ್ನೂ ಓದಿ: ಕುತೂಹಲ ಘಟ್ಟದಲ್ಲಿ ರಾಜ್ಯಸಭಾ ಚುನಾವಣೆ – ನಂಬರ್‌ ಗೇಮ್‌ ಹೇಗಿದೆ? ಕಾಂಗ್ರೆಸ್‌, ದೋಸ್ತಿಗಳ ಲೆಕ್ಕಾಚಾರ ಏನು?

    ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿಯ ನೀರು ಅಲ್ಲಲ್ಲೇ ತಗ್ಗು ಪ್ರದೇಶಗಳಲ್ಲಿ ಮಾತ್ರವೇ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿರುವುದನ್ನು ಬಿಟ್ಟರೆ ಉಳಿದೆಡೆ ನದಿಯ ಒಡಲು ಬರಿದಾಗಿದೆ. ಸಾಕಷ್ಟು ಕಡೆಗಳಲ್ಲಿ ಮರಳು ಕಾಣುತ್ತಿವೆ. ಭಾಗಮಂಡಲದ ಸಾರ್ವಜನಿಕರು ಬಾವಿಗಳು ಇರುವಂತಹ ಮನೆಗಳಿಗೆ ತೆರಳಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಭಾಗಮಂಡಲ ಪಂಚಾಯತ್‌ ವ್ಯವಸ್ಥೆ ಮಾಡಿದೆ. ನಗರ ಪ್ರದೇಶದಲ್ಲಿ ಕಾಣುತ್ತಿದ್ದ ನೀರಿನ ಟ್ಯಾಂಕರ್‌ಗಳು ಈಗ ಕಾವೇರಿ ಮಡಿಲಿನಲ್ಲೇ ಕಾಣುತ್ತಿದ್ದು ಜಿಲ್ಲೆಯ ಜನತೆ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ನೀಲಗಿರಿ ತೋಪಿನಲ್ಲಿ ಬಿ.ಟೆಕ್ ವಿದ್ಯಾರ್ಥಿಯ ಬರ್ಬರ ಹತ್ಯೆ – ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆ

    ಸಾಧಾರಣವಾಗಿ ಏಪ್ರಿಲ್‌ ಕೊನೆ, ಮೇ ತಿಂಗಳಿನಲ್ಲಿ ನೀರಿಗೆ ಸಮಸ್ಯೆಯಾಗುವುದು ಸಹಜ ಆದರೆ ಈ ಬಾರಿ ಬೇಸಿಗೆ ಆರಂಭಕ್ಕೆ ಮೊದಲೇ ಭಾಗಮಂಡಲದಲ್ಲಿ ನೀರು ಬತ್ತಿ ಹೋಗಿದೆ. ಒಂದು ವೇಳೆ ಮಳೆ ಸುರಿದರೆ ಸ್ವಲ್ಪ ನೀರಿನ ಸಮಸ್ಯೆ ಸುಧಾರಣೆಯಾಗಬಹುದು. ಇಲ್ಲದಿದ್ದರೆ ಜನತೆಗೆ ಕಷ್ಟ ಕಟ್ಟಿಟ್ಟ ಬುತ್ತಿ.

  • ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

    ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

    ಮಡಿಕೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಕಾವೇರಿ (Cauvery) ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ.

    ಮಂಗಳವಾರ ರಾತ್ರಿ 11 ಗಂಟೆಯಿಂದಲೇ ತಲಕಾವೇರಿಯ (Talacauvery) ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನಡೆಯಿತು. ತೀರ್ಥೋದ್ಭವದ ಸಮಯ ಹತ್ತಿರವಾಗುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಹೆಚ್ಚುತ್ತಲೇ ಇತ್ತು.   ಇದನ್ನೂ ಓದಿ: ಬ್ಯಾಟರಿ ಉತ್ಪಾದನಾ ಹಬ್ ಆಗಿ ಕರ್ನಾಟಕ – ಎನ್‌ಶ್ಯೂರ್‌ನಿಂದ 1,050 ಕೋಟಿ ರೂ. ಹೂಡಿಕೆ

    “ಉಕ್ಕಿ ಬಾ ತಾಯಿ” ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು. ನಿಗದಿತ ಸಮಯದ ಒಂದು ನಿಮಿಷದ ಮೊದಲೇ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ (Brahma Kundike) ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ತೀರ್ಥೋದ್ಭವಾಗುತ್ತಿದ್ದಂತೆ ತೀರ್ಥರೂಪಿಣಿಯಾದ ಕಾವೇರಿ ಮಾತೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸ್ಥಳದಲ್ಲಿದ್ದ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥವನ್ನು ಪ್ರೋಕ್ಷಣೆ ಮಾಡಿದರು.

    ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿ.ಮೀ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ ತಲುಪಿದರು. ಕೊಡಗು ಅಷ್ಟೇ ಅಲ್ಲದೇ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು ತಲಕಾವೇರಿಗೆ ಆಗಮಿಸಿದ್ದರು.

    ಕೊಡಗು ಉಸ್ತುವಾರಿ ಸಚಿವ ಬೋಸರಾಜ್, ಮಡಿಕೇರಿ ಶಾಸಕ ಮಂಥರ್ ಗೌಡ, ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ ಈ ವೇಳೆ ಭಾಗಿಯಾಗಿ ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವ ಬೋಸರಾಜ್, ‌ ಕಾವೇರಿ ಮಾತೆ ಕೊಡಗು ಕರ್ನಾಟಕಕ್ಕೆ ಅಷ್ಟೇ ಅಲ್ಲ. ತಮಿಳುನಾಡಿಗೂ ಅನ್ನ ನೀರು ಒದಗಿಸುತ್ತಿದ್ದಾಳೆ. ಈ ಬಾರಿ ರಾಜ್ಯಕ್ಕೆ ಸಮೃದ್ಧಿ ನೀಡಲೆಂದು ಪ್ರಾರ್ಥಿಸಲಾಗಿದೆ ಎಂದರು.

    ಪ್ರತಾಪ್ ಸಿಂಹ ಮಾತಾನಾಡಿ, ಕಾವೇರಿ ಮಾತೆ ನಿಗದಿತ ಸಮಯದಲ್ಲಿ ತೀರ್ಥ ರೂಪಿಣಿಯಾಗಿ ಹರಿದ್ದಾಳೆ. ಕಾವೇರಿ ಮಾತೆ ಮತ್ತೊಂದು ಬಾರಿ ಉಕ್ಕಿ ಹರಿಯಬೇಕು. ಆಗ ಮಾತ್ರ ರಾಜ್ಯ ಸಮೃದ್ಧಿಯಾಗಿ ಇರುತ್ತದೆ ಎಂದು ತಿಳಿಸಿದರು.

    ಚಿತ್ರನಟಿ ಹರ್ಷಿಕಾ ಪೂಣಚ್ಚ, ಭುವನ್ ಪೋನ್ನಣ್ಣ ,ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಭಾಗಮಂಡಲದಿಂದ ಕಾಲ್ನಡಿಗೆಯಲ್ಲಿ ತಲಕಾವೇರಿ ಗೆ ಅಗಮಿಸಿ ಕಾವೇರಿ ಮಾತೆಯ ದರ್ಶನ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲು ಜಾರಿ ತೊಡಿಕಾನ ಜಲಪಾತಕ್ಕೆ ಬಿದ್ದು ಅರಣ್ಯ ವೀಕ್ಷಕ ಸಾವು

    ಕಾಲು ಜಾರಿ ತೊಡಿಕಾನ ಜಲಪಾತಕ್ಕೆ ಬಿದ್ದು ಅರಣ್ಯ ವೀಕ್ಷಕ ಸಾವು

    ಮಡಿಕೇರಿ: ಅರಣ್ಯ ವೀಕ್ಷಣೆ ಮಾಡಲು ಹೋದ ಸಂದರ್ಭ ಕಾಲು ಜಾರಿ ನೀರಿಗೆ ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತೊಡಿಕಾನ‌(Thodikana) ಅರಣ್ಯ ಪ್ರದೇಶದಲ್ಲಿ‌‌ ನಡದಿದೆ.

    ಭಾಗಮಂಡಲ(Bhagamandala) ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಘಟನೆ ನಡೆದಿದ್ದು, ಅರಣ್ಯ ವೀಕ್ಷಕ ಚಿನ್ನಪ್ಪ ಎಂ ಹೆಚ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ

    ಮಂಗಳವಾರ ಸಂಜೆ ಅರಣ್ಯದಲ್ಲಿ ಬೀಟ್‌ಗೆ ಹೋದ ಸಂದರ್ಭದಲ್ಲಿ ನೀರು ಕುಡಿಯಲು ಜಲಪಾತದ ಕಡೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಝರಿಯ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

    ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಭಾಗಮಂಡಲ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ರಸ್ತೆಯ ಮೇಲೆ ಹರಿಯುತ್ತಿದೆ ನೀರು

    ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ರಸ್ತೆಯ ಮೇಲೆ ಹರಿಯುತ್ತಿದೆ ನೀರು

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ.

    ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.

    ಮಳೆ ಮುಂದುವರಿದರೆ ಇನ್ನಷ್ಟು ನೀರಿನ ಮಟ್ಟ ಹೆಚ್ಚಳವಾಗಲಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ

    ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ ಶಾಸಕ ಅಪ್ಪಚ್ಚು ರಂಜನ್‌ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.

    Live Tv

  • ಭಗಂಡೇಶ್ವರ, ತಲಕಾವೇರಿ ಪುಣ್ಯಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ವಿಶೇಷ ಪೂಜೆ

    ಭಗಂಡೇಶ್ವರ, ತಲಕಾವೇರಿ ಪುಣ್ಯಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ವಿಶೇಷ ಪೂಜೆ

    ಮಡಿಕೇರಿ: ತಾಲೂಕಿನ ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶೇಷ ಪೂಜೆ ಸಲ್ಲಿಸಿದರು.

    ಭಾಗಮಂಡಲದ ಭಗಂಡೇಶ್ವರ, ಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಾಡಿಗೆ ಉತ್ತಮ ಮಳೆ, ಬೆಳೆಯಾಗಿ ಸುಭಿಕ್ಷೆ ತರುವಂತಾಗಲಿ ಎಂದು ಅವರು ಪ್ರಾರ್ಥಿಸಿದರು.

    ಭಾಗಮಂಡಲ ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಅಪ್ಪಾಜಿ ಮತ್ತು ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ದೇವಾಲಯದ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ರಾಜ್ಯಾಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಸೇರಿದಂತೆ ಭಾಗಮಂಡಲ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಇದ್ದರು.