– 5 ವರ್ಷ ಜೈಲು, 12 ಬೆತ್ತದ ಏಟಿನ ಶಿಕ್ಷೆ ವಿಧಿಸಿದ ಕೋರ್ಟ್
ಸಿಂಗಾಪುರ: ರಜೆ ಮೂಡ್‌ನಲ್ಲಿದ್ದ ಇಬ್ಬರು ಭಾರತೀಯರು, ಸೆಕ್ಸ್ ವರ್ಕರ್ಸ್ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಇಬ್ಬರು ಲೈಂಗಿಕ ಕಾರ್ಯಕರ್ತೆಯರನ್ನು ಹೋಟೆಲ್‌ಗೆ ಕರೆಸಿ ದರೋಡೆ ಮಾಡಲಾಗಿದೆ. ಅವರ ಮೇಲೆ ಇಬ್ಬರು ಭಾರತೀಯ ಪುರುಷರು ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ಈ ಆರೋಪದಲ್ಲಿ ಭಾರತೀಯರಿಗೆ ತಲಾ 5 ವರ್ಷ, 1 ತಿಂಗಳು ಜೈಲು ಹಾಗೂ 12 ಬೆತ್ತದ ಏಟುಗಳ ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
ಅರೋಕ್ಕಿಯಸಾಮಿ ಡೈಸನ್ (23) ಮತ್ತು ರಾಜೇಂದ್ರನ್ ಮಾಯಿಲರಸನ್ (27) ಬಂಧಿತ ಆರೋಪಿಗಳು. ಇವರಿಬ್ಬರೂ ರಜೆ ದಿನ ಕಳೆಯಲು ಭಾರತದಿಂದ ಸಿಂಗಾಪುರಕ್ಕೆ ಬಂದಿದ್ದರು. ಲಿಟಲ್ ಇಂಡಿಯಾ ಪ್ರದೇಶದಲ್ಲಿ ಇಬ್ಬರೂ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು, ಲೈಂಗಿಕ ಸೇವೆಗಳಿಗಾಗಿ ವೇಶ್ಯೆಯರನ್ನು ನೇಮಿಸಿಕೊಳ್ಳಲು ಆಸಕ್ತಿ ಇದೆಯೇ ಎಂದು ಕೇಳುತ್ತಾರೆ. ಬಳಿಕ ಇಬ್ಬರು ಸೆಕ್ಸ್ ವರ್ಕರ್ಸ್ ನಂಬರ್ ಕೊಟ್ಟು ಹೋಗುತ್ತಾರೆ.
ಆರೋಕ್ಕಿಯಾ ತನಗೆ ಹಣದ ಅವಶ್ಯಕತೆ ಇದೆ ಅಂತ ರಾಜೇಂದ್ರನ್ ಬಳಿ ಹೇಳಿಕೊಳ್ಳುತ್ತಾನೆ. ಈ ಮಹಿಳೆಯರನ್ನು ಸಂಪರ್ಕಿಸಿ ಹೋಟೆಲ್ ಕೋಣೆಯಲ್ಲಿ ದರೋಡೆ ಮಾಡಲು ಇಬ್ಬರು ಪ್ಲ್ಯಾನ್ ಮಾಡುತ್ತಾರೆ. ಆ ದಿನ ಸಂಜೆ 6 ಗಂಟೆ ಸುಮಾರಿಗೆ ಹೋಟೆಲ್ ಕೋಣೆಯಲ್ಲಿ ಒಬ್ಬ ಮಹಿಳೆಯನ್ನು ಭೇಟಿಯಾಗಲು ಇಬ್ಬರೂ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಇದನ್ನೂ ಓದಿ: ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ: ಡೊನಾಲ್ಡ್ ಟ್ರಂಪ್ ಆದೇಶ
ಸೆಕ್ಸ್ ವರ್ಕರ್ ರೂಮಿನೊಳಗೆ ಬರುತ್ತಿದ್ದಂತೆ ಆಕೆಯ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಿ ಆಭರಣ, 2,000 ಸಿಂಗಾಪುರ ಡಾಲರ್ ನಗದು, ಪಾಸ್‌ಪೋರ್ಟ್ ಮತ್ತು ಬ್ಯಾಂಕ್ ಕಾರ್ಡ್‌ಗಳನ್ನು ದೋಚುತ್ತಾರೆ. ಮತ್ತೆ 2ನೇ ಸೆಕ್ಸ್ ವರ್ಕರ್ ಸಂಪರ್ಕಿಸಿ ಹೋಟೆಲ್‌ಗೆ ಕರೆಸಿಕೊಳ್ಳುತ್ತಾರೆ. ಆಕೆ ಮೇಲೂ ಹಲ್ಲೆ ನಡೆಸಿ ಹಣ, ಮೊಬೈಲ್ ದರೋಡೆ ಮಾಡುತ್ತಾರೆ. ಕೊನೆಗೆ ಇಬ್ಬರನ್ನೂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ.
ಬರ್ಲಿನ್: ಅಮೆರಿಕದ H-1B ವೀಸಾ (H-1B Visa) ಶುಲ್ಕ ಹೆಚ್ಚಳ ವಿವಾದದ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಬಿಗ್ ಆಫರ್ ನೀಡಿದೆ. ವೃತ್ತಿಪರ ಪರಿಣತ ಭಾರತೀಯರಿಗೆ ಜರ್ಮನಿಗೆ ಬರಬಹುದು ಎಂದು ರಾಯಭಾರಿ ಸ್ವಾಗತ ಕೋರಿದ್ದಾರೆ.
ಹೆಚ್-1ಬಿ ವೀಸಾ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಹೆಚ್ಚಿಸಿ ಅಮೆರಿಕ ಸರ್ಕಾರ ಆದೇಶ ಹೊರಡಿಸಿದೆ. ಅಮೆರಿಕದ ಸ್ಥಳೀಯರಿಗೆ ಮಣೆ ಹಾಕುವ ಉದ್ದೇಶದಿಂದ ಟ್ರಂಪ್ ಅವರು ಈ ಕ್ರಮಕೈಗೊಂಡಿದ್ದಾರೆ. ಇದರಿಂದ ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತ ಸೇರಿದಂತೆ ಇತರೆ ದೇಶಗಳ ಪರಿಣತ ಉದ್ಯೋಗಿಗಳಿಗೆ ತೊಂದರೆ ಆಗಲಿದೆ. ಇಷ್ಟು ಪ್ರಮಾಣದ ಹಣವನ್ನು ಅಮೆರಿಕ ಕಂಪನಿಗಳು ಭರಿಸಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಅಮೆರಿಕ ಕಂಪನಿಗಳು ಹಿಂದೇಟು ಹಾಕುವ ಸಾಧ್ಯತೆ ಹೆಚ್ಚಿದೆ. ಅಮೆರಿಕದಲ್ಲಿ ವಿದೇಶಿಯರಿಗೆ ಉದ್ಯೋಗಾವಕಾಶ ಕಡಿಮೆಯಾಗುವ ಸಾಧ್ಯತೆ ಇದೆ.
ಹೊರದೇಶದಲ್ಲಿ ನಿರಂತರ ದುಡಿಮೆ.. ಅಪರೂಪಕ್ಕೆ ಸ್ವದೇಶಕ್ಕೆ ಬಂದು ಕುಟುಂಬಸ್ಥರನ್ನು ಕಾಣಲು ವಿಮಾನ ಏರಿದ್ದರು.. ಎಷ್ಟೋ ಮಂದಿ ತವರಿಗೆ ಬಂದು ಹಬ್ಬ-ಹರಿದಿನಗಳಲ್ಲಿ ಭಾಗವಹಿಸಿ ಖುಷಿಯಲ್ಲಿದ್ದರು.. ಮನೆಯಲ್ಲಿ ಮದುವೆ ಸಂಭ್ರಮದಲ್ಲಿದ್ದರು.. ಈ ಎಲ್ಲರಿಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಘೋಷಣೆಯೊಂದು ಬರಸಿಡಿಲಿನಂತೆ ಭಾಸವಾಯಿತು. ಅಮೆರಿಕದ ಐಟಿ ವಲಯದ ಕಂಪನಿಗಳಲ್ಲಿ ದುಡಿಯುತ್ತಿದ್ದ ಲಕ್ಷಾಂತರ ವಿದೇಶಿ ಉದ್ಯೋಗಿಗಳಲ್ಲಿ ಅರೆಕ್ಷಣ ದಿಗಿಲುಟ್ಟಿಸಿತು. ಇವರನ್ನೆಲ್ಲ ಕೆಲಸಕ್ಕಿಟ್ಟುಕೊಂಡಿದ್ದ ಕಂಪನಿಗಳು ಸಹ ಶಾಕ್ ಆಗಿದ್ದುಂಟು. ‘ಸ್ವದೇಶಕ್ಕೆ ಹೊರಟಿರುವವರು, ಈಗಾಗಲೇ ಹೋಗಿರುವವರು ತಕ್ಷಣ ಅಮೆರಿಕಗೆ ವಾಪಸ್ ಬನ್ನಿ’ ಅಂತ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟವು. ಊರಿಗೆ ಹೊರಟಿದ್ದವರು ವಾಪಸ್ ಆದರು. ಬಂದಿದ್ದವರು ಬೇಸರದಿಂದಲೇ ಗಂಟುಮೂಟೆ ಕಟ್ಟಿದರು. ಸಂಭ್ರಮದಲ್ಲಿದ್ದವರು ಮದುವೆ ರದ್ದುಗೊಳಿಸಿ ಕಣ್ಣೀರಿಟ್ಟರು. ಇದಕ್ಕೆಲ್ಲ ಕಾರಣ, ಹೆಚ್-1ಬಿ ವೀಸಾ.
ಹೌದು, ಹೆಚ್-1ಬಿ ವೀಸಾ (H-1B Visa) ವಾರ್ಷಿಕ ಶುಲ್ಕವನ್ನು ದಿಢೀರ್ 1 ಲಕ್ಷ ಡಾಲರ್‌ಗೆ (ಅಂದಾಜು 88 ಲಕ್ಷ ರೂ.) ಹೆಚ್ಚಿಸಿ ಟ್ರಂಪ್ ಆದೇಶ ಹೊರಡಿಸಿದ್ದೇ ಇದಕ್ಕೆಲ್ಲ ಕಾರಣ. ‘ಅಮೆರಿಕವೇ ಮೊದಲು’ ಎಂಬುದು ಟ್ರಂಪ್ ಸರ್ಕಾರದ ಧ್ಯೇಯ. ಈ ವೀಸಾ ನೀತಿಯಲ್ಲೂ ಅದನ್ನು ಪ್ರತಿಪಾದಿಸಲು ಹೊರಟಿದ್ದಾರೆ. ಇತ್ತೀಚಿನ ದಿನಮಾನಗಳಲ್ಲಿ ಟ್ರಂಪ್ ಭಾರತವನ್ನು ಒಂದಲ್ಲ ಒಂದು ರೀತಿಯಲ್ಲಿ ಟಾರ್ಗೆಟ್ ಮಾಡಿದಂತೆ ಕಾಣುತ್ತಿದೆ. ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಟ್ಯಾರಿಫ್ ಅಸ್ತ್ರ ಪ್ರಯೋಗಿಸಿದರು. ಜಗತ್ತಿನಲ್ಲಿ ಹೆಚ್ಚಿನ ಪ್ರಮಾಣದ ಟ್ಯಾರಿಫ್ (ಶೇ.50) ದೇಶಗಳ ಸಾಲಿನಲ್ಲಿ ಭಾರತವೂ ಇದೆ. ಅದರ ಬೆನ್ನಲ್ಲೇ ಈಗ ಹೆಚ್-1ಬಿ ವೀಸಾ ಶುಲ್ಕ ಹೆಚ್ಚಳ ಮೂಲಕ ಭಾರತದ ವಿರುದ್ಧ ಟ್ರಂಪ್ ಅಸ್ತ್ರ ಪ್ರಯೋಗಿಸಿದ್ದಾರೆ. ಏಕೆಂದರೆ, ಈ ವೀಸಾದಡಿ ಅಮೆರಿಕದಲ್ಲಿ ನೆಲೆಸಿರುವ ವಿದೇಶಿ ಉದ್ಯೋಗಿಗಳಲ್ಲಿ ಭಾರತೀಯರ ಸಂಖ್ಯೆ ಹೆಚ್ಚಿದೆ. ಪ್ರತಿ ವರ್ಷ ಈ ವೀಸಾದಡಿ ಅಮೆರಿಕಗೆ ಹೋಗುವವರ ಸಂಖ್ಯೆಯಲ್ಲೂ ಭಾರತೀಯರದ್ದೇ ಸಿಂಹಪಾಲು. ಈಗ ಶುಲ್ಕ ಹೆಚ್ಚಿಸಿರುವುದು ಉಜ್ವಲ ಭವಿಷ್ಯದ ನಿರೀಕ್ಷೆಯಲ್ಲಿ ಅಮೆರಿಕಗೆ ಹೋಗ ಬಯಸುವ ಯುವಸಮೂಹದ ಕನಸನ್ನು ನುಚ್ಚು ನೂರು ಮಾಡಿದಂತಿದೆ. ಇದನ್ನೂ ಓದಿ: H1B ವೀಸಾಕ್ಕೆ ಮೊದಲು ಎಷ್ಟು ಶುಲ್ಕ ಇತ್ತು? ಟ್ರಂಪ್ ನಿರ್ಧಾರ ಭಾರತಕ್ಕೆ ಲಾಭವೋ? ನಷ್ಟವೋ?
ಅಷ್ಟಕ್ಕೂ ಏನಿದು ಹೆಚ್-1ಬಿ ವೀಸಾ? ಇದರ ಉದ್ದೇಶ ಏನು? ಅಮೆರಿಕ ಕಂಪನಿಗಳಿಗೆ ಇದು ಏಕೆ ಮುಖ್ಯ? ಭಾರತೀಯ ವೃತ್ತಿಪರ ಪರಿಣಿತರಿಗೆ ಇದರಿಂದ ಪ್ರಯೋಜನ ಎಷ್ಟು? ಶುಲ್ಕ ಹೆಚ್ಚಿಸಿದ್ಯಾಕೆ? ಇದರಿಂದಾಗುವ ಪರಿಣಾಮಗಳೇನು?
ಹೆಚ್-1ಬಿ ವೀಸಾ ಎಂದರೇನು?
ಹೆಚ್-1ಬಿ ವಲಸೆಯೇತರ ವೀಸಾ.
ಜಾರಿಗೆ ಬಂದಿದ್ದು ಯಾವಾಗ?
ಹೆಚ್-1ಬಿ ವೀಸಾ ಕಾರ್ಯಕ್ರಮವು 1990 ರ ವಲಸೆ ಕಾಯ್ದೆಯೊಂದಿಗೆ (IMMACT90) ಪ್ರಾರಂಭವಾಯಿತು.
ಆಗಿನ ಅಧ್ಯಕ್ಷರು ಯಾರು?
ಈ ನೀತಿಗೆ ಆಗಿನ ಅಧ್ಯಕ್ಷ ಜಾರ್ಜ್ ಹೆಚ್.ಡಬ್ಲ್ಯೂ. ಬುಷ್ ಅವರು 1990ರ ನವೆಂಬರ್ 20 ರಂದು ಸಹಿ ಹಾಕಿದರು. ಹೆಚ್-1 ವೀಸಾವನ್ನು ಎರಡು ಭಾಗಗಳಾಗಿ ವಿಭಜಿಸಲಾಯಿತು. ಹೆಚ್-1ಎ ವೀಸಾ ನರ್ಸ್‌ಗಳಿಗೆ.
ಹೆಚ್-1ಬಿ ವೀಸಾ ಯಾರಿಗೆ ಸಿಗುತ್ತೆ?
ಹೊರದೇಶಗಳ ಪರಿಣತ ವೃತ್ತಿಪರರಿಗೆ ಅಮೆರಿಕದಲ್ಲಿ ಉದ್ಯೋಗ ನೀಡಲು ಅಲ್ಲಿನ ಕಂಪನಿಗಳಿಗೆ ಈ ವೀಸಾ ಅವಕಾಶ ನೀಡುತ್ತದೆ. ಎಂಜಿನಿಯರಿಂಗ್, ತಂತ್ರಜ್ಞಾನ, ವೈದ್ಯಕೀಯ, ವ್ಯವಹಾರದಂತಹ ಕ್ಷೇತ್ರಗಳಲ್ಲಿ ಪರಿಗಣತರಿಗೆ ಈ ವೀಸಾ ಸೌಲಭ್ಯ ಸಿಗುತ್ತದೆ.
ವೀಸಾ ಅವಧಿ ಎಷ್ಟು?
ಇದು ತಾತ್ಕಾಲಿಕ ವೀಸಾ. ಇದಕ್ಕೆ 3 ರಿಂದ 6 ವರ್ಷಗಳ ಅವಧಿ ಇರುತ್ತದೆ. ಅವಧಿ ಮುಗಿದ ಮೇಲೆ ಮತ್ತೆ ವೀಸಾ ನವೀಕರಿಸಬಹುದು.
ಅರ್ಹತೆ, ನಿಯಮಗಳೇನು?
ವಿದೇಶಗಳ ಕೌಶಲಯುಕ್ತ ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪನಿಗಳು ಈ ವೀಸಾಕ್ಕಾಗಿ ಅರ್ಜಿ ಸಲ್ಲಿಸುತ್ತವೆ. ಅಭ್ಯರ್ಥಿಯು ವಿಶೇಷತೆಯ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಉದ್ಯೋಗ ನೀಡುವ ಕಂಪನಿಗಳೇ ತನ್ನ ಉದ್ಯೋಗಿಯ ವೀಸಾ ಅರ್ಜಿ ಶುಲ್ಕವನ್ನು ಭರಿಸಬೇಕು. ಕಂಪನಿ ಕಾರ್ಮಿಕ ಇಲಾಖೆಯಲ್ಲಿ ಎಲ್‌ಎಸಿ ಸಲ್ಲಿಸುತ್ತದೆ. ವೇತನ ಮತ್ತು ಕೆಲಸದ ಪರಿಸ್ಥಿತಿಗಳನ್ನು ದೃಢೀಕರಿಸುತ್ತದೆ. ನಂತರ ಅಭ್ಯರ್ಥಿ ಪರವಾಗಿ USCIS ಗೆ ಅರ್ಜಿ ಸಲ್ಲಿಸುತ್ತದೆ. ಕೆಲಸಕ್ಕೆ ವಿಶೇಷ ಪರಿಣತಿ ಮತ್ತು ಪದವಿ, ಅನುಭವದ ಅಗತ್ಯವಿರುತ್ತದೆ. ಅದನ್ನು ಅಭ್ಯರ್ಥಿ ಪೂರೈಸಬೇಕು. ಇದನ್ನೂ ಓದಿ: H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ
ವರ್ಷಕ್ಕೆ ಎಷ್ಟು ವೀಸಾ ಹಂಚಿಕೆ?
ಪ್ರತಿ ವರ್ಷ 65,000 ವೀಸಾಗಳನ್ನು ಹಂಚಲಾಗುತ್ತದೆ. ಅಮೆರಿಕ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಹೊಂದಿದವರಿಗೆ 20,000 ಹೆಚ್ಚುವರಿ ವೀಸಾಗಳನ್ನು ನೀಡಲಾಗುತ್ತದೆ.
ಶುಲ್ಕ ಎಷ್ಟಿತ್ತು?
ಈ ವೀಸಾ ಪಡೆಯಲು 2,000 ದಿಂದ 8,000 ಡಾಲರ್ ವರೆಗೆ ಶುಲ್ಕ ಇತ್ತು.
ಹೊಸ ಶುಲ್ಕ ಎಷ್ಟು?
ಟ್ರಂಪ್ ಹೊಸ ಶುಲ್ಕ ಘೋಷಿಸಿದ್ದು, ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಹೆಚ್ಚಿಸಿದ್ದಾರೆ. ಇದು ಪೂರ್ಣಾವಧಿ ಶುಲ್ಕವಾಗಿರುತ್ತದೆ.
ಶುಲ್ಕ ಹೆಚ್ಚಿಸಿದ್ದು ಯಾಕೆ?
ಕಂಪನಿಗಳು ಈ ವೀಸಾ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸ್ಥಳೀಯರಿಗೆ ಹೆಚ್ಚಿನ ಸಂಬಳ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ನೀಡದೇ, ಹೊರದೇಶಗಳಿಂದ ಕಡಿಮೆ ಸಂಬಳಕ್ಕೆ ವೃತ್ತಿಪರರನ್ನು ಕರೆಸಿಕೊಂಡು ಉದ್ಯೋಗ ನೀಡುತ್ತಿವೆ ಎಂದು ಟ್ರಂಪ್ ತಿಳಿಸಿದ್ದಾರೆ.
ಯಾವ ದೇಶದ ಜನತೆ ಹೆಚ್ಚು ವೀಸಾ ಪಡೆದಿದ್ದಾರೆ?
ಹೆಚ್-1ಬಿ ವೀಸಾವನ್ನು ಪಡೆದ ದೇಶಗಳಲ್ಲಿ ಭಾರತವೇ ನಂ.1. ಈ ದೇಶವೇ ಶೇ.71 ರಷ್ಟು ಪಾಲನ್ನು ಹೊಂದಿದೆ. ಶೇ.12 ರಷ್ಟನ್ನು ಚೀನಾ ಹೊಂದಿದೆ. ಶೇ.17 ರಷ್ಟನ್ನು ಜಗತ್ತಿನ ಇತರೆ ದೇಶಗಳು ಹೊಂದಿವೆ.
ವೀಸಾಕ್ಕಾಗಿ ಎಷ್ಟು ಅರ್ಜಿ ಸಲ್ಲಿಕೆ?
ಕಳೆದ ವರ್ಷ ಮಾರ್ಚ್ನಲ್ಲಿ ನೋಂದಣಿ ಮುಕ್ತಾಯಗೊಂಡ ಕೊನೆಯ ಹೆಚ್-1ಬಿ ಲಾಟರಿ ಸುತ್ತಿಗೆ ಸುಮಾರು 3,39,000 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದು ವಾರ್ಷಿಕ ಮಿತಿಯನ್ನು ಮೀರಿದೆ. ಯುಎಸ್‌ಸಿಐಎಸ್ ದತ್ತಾಂಶದ ಪ್ರಕಾರ, ಆ ಪೈಕಿ 1,20,141 ಅರ್ಜಿಗಳನ್ನು ಲಾಟರಿಗೆ ಆಯ್ಕೆ ಮಾಡಲಾಗಿದೆ. (ಹೊಸ ಶುಲ್ಕವು ಆ ಅರ್ಜಿದಾರರ ಮೇಲೂ ಪರಿಣಾಮ ಬೀರಲ್ಲ).
ಹೆಚ್ಚು ವೀಸಾ ಹೊಂದಿರುವ ಕಂಪನಿಗಳು ಯಾವುವು?
ಅಮೆಜಾನ್: 10,044
ಟಿಸಿಎಸ್: 5,505
ಮೈಕ್ರೋಸಾಫ್ಟ್: 5,189
ಮೆಟಾ: 5,123
ಆ್ಯಪಲ್: 4,202
ಗೂಗಲ್: 4,181
ಜೆಪಿಮಾರ್ಗನ್: 2,440
ಅಮೆಜಾನ್ ವೆಬ್ ಸರ್ವಿಸಸ್: 2,347
ಇನ್ಫೊಸಿಸ್: 2,004
ಮೈಂಡ್‌ಟ್ರೀ: 1,807
ಹೊಸ ಶುಲ್ಕ ಯಾರಿಗೆ ಅನ್ವಯ?
ಹೊಸ ಶುಲ್ಕವು ಹೊಸ ಅರ್ಜಿಗಳಿಗಷ್ಟೇ ಅನ್ವಯವಾಗುತ್ತದೆ (ಮುಂದಿನ ಲಾಟರಿ ಸೈಕಲ್‌ಗೆ).
ಈಗಾಗಲೇ ಈ ವೀಸಾ ಹೊಂದಿರುವವರ ಕಥೆ ಏನು?
ಹೆಚ್-1ಬಿ ವೀಸಾದಡಿ ಈಗಾಗಲೇ ಕೆಲಸ ಮಾಡುತ್ತಿರುವವರು ಹೊಸ ಶುಲ್ಕ ಪಾವತಿಸಬೇಕಿಲ್ಲ. ವೀಸಾ ಅವಧಿ ಮುಕ್ತಾಯಗೊಂಡ ಬಳಿಕ ಸಲ್ಲಿಸುವ ನವೀಕರಣ ಅರ್ಜಿಗೂ ಇದು ಅನ್ವಯಿಸಲ್ಲ.
ಯಾರ ಮೇಲೆ ಹೆಚ್ಚು ಎಫೆಕ್ಟ್?
ಈ ವೀಸಾದಡಿ ಅಮೆರಿಕಗೆ ತೆರಳುವವರಲ್ಲಿ ಭಾರತೀಯರೇ ಹೆಚ್ಚಿದ್ದಾರೆ. ನಂತರದ ಸ್ಥಾನದಲ್ಲಿ ಚೀನೀಯರು ಬರುತ್ತಾರೆ. ಅಮೆರಿಕದಲ್ಲಿ ಕಂಪ್ಯೂಟರ್ ಸಂಬಂಧಿತ ಉದ್ಯೋಗಗಳಲ್ಲಿ ಈ ಎರಡು ದೇಶಗಳ ಜನರೇ ಹೆಚ್ಚು. ಒಂದು ದಶಕಕ್ಕೂ ಹೆಚ್ಚು ಕಾಲ ಪ್ರತಿವರ್ಷ ಅನುಮೋದಿಸಲಾದ ಹೆಚ್-1ಬಿ ವೀಸಾದಡಿ ಹೋಗುತ್ತಿರುವವರಲ್ಲಿ ಶೇ.60 ರಷ್ಟು ಮಂದಿ ಕಂಪ್ಯೂಟರ್ ಸಂಬಂಧಿತ ಉದ್ಯೋಗಗಳನ್ನೇ ಹೊಂದಿದ್ದಾರೆ. 2010 ರಿಂದ ಹೆಚ್ಚಿನ ಹೆಚ್-1ಬಿ ವೀಸಾ ಅನುಮೋದನೆಗಳು ಭಾರತೀಯರಿಗೆ ಸಿಕ್ಕಿವೆ ಎಂದು ಪ್ಯೂ ರಿಸರ್ಚ್ ತಿಳಿಸಿದೆ. ಇದನ್ನೂ ಓದಿ: H-1B Visa ಹೊಂದಿರುವವರು 24 ಗಂಟೆಯೊಳಗೆ ಅಮೆರಿಕಗೆ ವಾಪಸ್ ಬನ್ನಿ: ಮೆಟಾ, ಮೈಕ್ರೋಸಾಫ್ಟ್ ಸೂಚನೆ
ತಜ್ಞರು ಹೇಳೋದೇನು?
ಹೊಸ ಶುಲ್ಕ ಕ್ರಮದಿಂದ ಅಮೆರಿಕಗೆ ತುಂಬಾ ನಷ್ಟ. ಯುಎಸ್‌ನಲ್ಲಿರುವ ಭಾರತದ ಐಟಿ ಕಂಪನಿಗಳು ಸುಮಾರು ಶೇ.50ರಿಂದ ಶೇ.80 ರಷ್ಟು ಸ್ಥಳೀಯರನ್ನೇ ನೇಮಿಸಿಕೊಂಡಿವೆ. ಹೊಸ ಶುಲ್ಕ ನೀತಿಯಿಂದ ಭಾರತೀಯರನ್ನು ನೇಮಿಸಿಕೊಳ್ಳಲು ಕಂಪನಿಗಳು ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಈ ಹೊರೆಯನ್ನು ತಪ್ಪಿಸಲು ಕಂಪನಿಗಳು ಹೊರದೇಶಗಳಿಂದಲೇ ತಮ್ಮ ಕಂಪನಿಗಳ ಕಾರ್ಯಾಚರಣೆಯನ್ನು ಹೆಚ್ಚಿಸಬಹುದು. ಇದರಿಂದ ಅಮೆರಿಕಗೆ ತುಂಬಾ ನಷ್ಟವಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಭವಿಷ್ಯದ ಯುವಜನರ ಕನಸು ಭಗ್ನ
ಅಮೆರಿಕದಲ್ಲಿ ದುಡಿದು ಹಣ ಸಂಪಾದಿಸಬೇಕೆಂದು ಪ್ರತಿಭಾವಂತ ಯುವಸಮುದಾಯ ಕನಸು ಕಾಣುತ್ತದೆ. ಅಂತಹವರಿಗೆ ಹೆಚ್-1ಬಿ ವೀಸಾ ಸಂಪರ್ಕ ಸೇತುವೆಯಂತೆ ಇದೆ. ಈ ವೀಸಾ ಮೂಲಕ ಯುಎಸ್‌ಗೆ ತೆರಳಿ ಒಂದಷ್ಟು ವರ್ಷ ಕೆಲಸ ಮಾಡಿ, ಹೆಚ್ಚಿನ ಸಂಪಾದನೆ ಮಾಡಿ ನಂತರ ಪೌರತ್ವ ಪಡೆದು ಅಲ್ಲಿಯೇ ನೆಲೆಸಿರುವವರ ಸಂಖ್ಯೆಯೂ ಹೆಚ್ಚಿದೆ. ಅದೇ ರೀತಿಯ ಕನಸನ್ನು ಈಗಿನ ಯುವಸಮುದಾಯವೂ ಕಾಣುತ್ತಿರುತ್ತದೆ. ಆದರೆ, ಟ್ರಂಪ್ ನೀತಿಯು ಅಂತಹ ಲಕ್ಷಾಂತರ ಕೌಶಲ್ಯಯುಕ್ತ ಯುವಕ-ಯುವತಿಯರ ಕನಸಿಗೆ ತಣ್ಣೀರೆರಚಿದೆ.
ನವದೆಹಲಿ: ಉಕ್ರೇನ್ (Ukraine) ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದ್ರೆ ಇದು ತುಂಬಾ ಅಪಾಯಕಾರಿ ಕೋರ್ಸ್ ಎಂದು ವಿದೇಶಾಂಗ ಸಚಿವಾಲಯ (Ministry of External Affairs) ಹೇಳಿದೆ.
ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ (Russian Army) ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ. ಇದೀಗ ಮತ್ತೆ ಭಾರತೀಯರಿಗೆ (Indians) ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ರಷ್ಯಾ ಪರ ಹೋರಾಡ್ತಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ
ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ (Russia) ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇವೆ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ಹೇಳಿದೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದಲ್ಲಿ ನೆಲೆಸಿರುವ ಇಬ್ಬರು ಭಾರತೀಯರು ಆರೋಪಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಉದ್ಯೋಗದ ಆಮಿಷವೊಡ್ಡಿ ನಮ್ಮನ್ನು ರಷ್ಯಾಕ್ಕೆ ಕರೆತಂದು ಉಕ್ರೇನ್ ವಿರುದ್ಧ ಯುದ್ಧದಲ್ಲಿ ಹೋರಾಡಲು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದರು.
ವರದಿಗಳ ಪ್ರಕಾರ, ಇಬ್ಬರು ನೇಮಕಾತಿದಾರರು ಕಳೆದ 6 ತಿಂಗಳ ಹಿಂದೆ ವಿದ್ಯಾರ್ಥಿ ಅಥವಾ ಸಂದರ್ಶಕ ವೀಸಾದಲ್ಲಿ ರಷ್ಯಾಕ್ಕೆ ಪ್ರಯಾಣಿಸಿದ್ದರು. ಉದ್ಯೋಗ ಕೊಡಿಸುವುದಾಗಿ ಹೇಳಿ ಭರವಸೆ ನೀಡಿದ ಏಜೆಂಟ್ ತಮ್ಮನ್ನು ಯುದ್ಧಭೂಮಿಗೆ ಕಳುಹಿಸಿದ್ದಾರೆ ಅಂತ ಹೇಳಿಕೊಂಡಿದ್ದರು. ಇದನ್ನೂ ಓದಿ: ಪುಟಿನ್ ಜೊತೆ ಮೋದಿ ಚರ್ಚೆ – ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು
ಸೇನೆಯಲ್ಲಿ ಸಿಲುಕಿದ್ದ ಕಲಬುರಗಿ ಯುವಕ
ಕಳೆದ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಜಮ್ಮು ಮತ್ತು ಕಾಶ್ಮೀರದ ಯುವಕ, ತೆಲಂಗಾಣದ 22 ವರ್ಷದ ಯುವಕ ಮತ್ತು ಕಲಬುರಗಿಯ ಮೂವರು ವ್ಯಾಗ್ನರ್ ಪಡೆಯಲ್ಲಿ ಕೆಲಸ ಮಾಡುತ್ತಿದ್ದು ರಷ್ಯಾ ಗಡಿಯಲ್ಲಿ ಸಿಲುಕಿದ್ದರು. ನಮ್ಮನ್ನು ನಕಲಿ ಸೇನಾ ಉದ್ಯೋಗ ದಂಧೆಯಿಂದ ತಕ್ಷಣವೇ ರಕ್ಷಿಸಬೇಕು ಎಂದು ಮೊರೆಯಿಟ್ಟಿದ್ದರು. ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮೊಹಮ್ಮದ್ ಸುಫಿಯಾನ್ ತನ್ನ ಕುಟುಂಬಕ್ಕೆ ಕಳುಹಿಸಿದ ವಿಡಿಯೋದಲ್ಲಿ ದಯವಿಟ್ಟು ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದ್ದರು.
ನಾವು ಹೈಟೆಕ್ ವಂಚನೆಗೆ ಬಲಿಯಾಗಿದ್ದೇವೆ. ನಮ್ಮ ಇಚ್ಛೆಗೆ ವಿರುದ್ಧವಾಗಿ ಉಕ್ರೇನ್‌ನೊಂದಿಗೆ ರಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸಲಾಗುತ್ತಿದೆ. ಸೇನೆಯ ಭದ್ರತಾ ಸಹಾಯಕ ಕೆಲಸದ ಭರವಸೆಯೊಂದಿಗೆ ನಾವು ಕಳೆದ ವರ್ಷದ ಡಿಸೆಂಬರ್‌ನಲ್ಲಿ ರಷ್ಯಾಕ್ಕೆ ಬಂದಿದ್ದೇವೆ. ನಂತರ ನಾವು ವಂಚನೆಗೆ ಒಳಗಾದ ವಿಚಾರ ತಿಳಿಯಿತು ಎಂದು ಹೇಳಿಕೊಂಡಿದ್ದರು.
ಆಲ್ಬನಿ: ನಯಾಗರಾ ಫಾಲ್ಸ್ (Niagara Falls) ವೀಕ್ಷಿಸಿ ನ್ಯೂಯಾರ್ಕ್‌ಗೆ (New York) ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು (Indians) ಸೇರಿ ಐದು ಜನರು ಸಾವನ್ನಪ್ಪಿರುವ ಘಟನೆ ಪೆಂಬ್ರೋಕ್‌ನಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರೆಲ್ಲರು ವಯಸ್ಕರಾಗಿದ್ದಾರೆ. ಬಸ್ ಪಲ್ಟಿಯಾದಾಗ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಹೆಲಿಕಾಪ್ಟರ್ ಹಾಗೂ ಆಂಬ್ಯುಲೆನ್ಸ್ ಮೂಲಕ 40ಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ನ್ಯೂಯಾರ್ಕ್ ಪೊಲೀಸರು ತಿಳಿಸಿದ್ದಾರೆ.
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಅತಿದೊಡ್ಡ ವಲಸಿಗ ಸಮುದಾಯಗಳಲ್ಲಿ ಒಂದಾಗಿರುವ ಭಾರತೀಯ ಪ್ರಜೆಗಳಿಗೆ ಗುಡ್ ನ್ಯೂಸ್ ನೀಡಿದೆ.
ನಾಮನಿರ್ದೇಶನದ ಆಧಾರದ ಮೇಲೆ ಕೆಲವು ಷರತ್ತುಗಳೊಂದಿಗೆ ಹೊಸ ರೀತಿಯ ಗೋಲ್ಡನ್ ವೀಸಾ ಪರಿಚಯಿಸಿದೆ. ‘ಹೊಸ ನಾಮನಿರ್ದೇಶನ ಆಧಾರಿತ ವೀಸಾ ನೀತಿ’ ಅಡಿಯಲ್ಲಿ, ಭಾರತೀಯರು AED 1,00,000 (ಸುಮಾರು 23.30 ಲಕ್ಷ ರೂ.) ಶುಲ್ಕ ಪಾವತಿಸಿ ಯುಎಇ ಗೋಲ್ಡನ್ ವೀಸಾ ಪಡೆಯಬಹುದು.
ಇದು ಜೀವಿತಾವಧಿ ವರೆಗಿನ ವೀಸಾ ಆಗಿದೆ. ಸುಮಾರು 5,000 ಕ್ಕೂ ಹೆಚ್ಚು ಭಾರತೀಯರು ನಾಮನಿರ್ದೇಶನ ಆಧಾರಿತ ವೀಸಾಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಯುಎಇ ಆಡಳಿತ ತಿಳಿಸಿದೆ.
ಗೋಲ್ಡನ್ ವೀಸಾದ ಪ್ರಯೋಜನ ಏನು?
ಈ ವೀಸಾ ಪಡೆದ ನಂತರ ಒಬ್ಬರು ತಮ್ಮ ಕುಟುಂಬ ಸದಸ್ಯರನ್ನು ದುಬೈಗೆ ಕರೆತರುವ ಸ್ವಾತಂತ್ರ್ಯವನ್ನು ಪಡೆಯುತ್ತಾರೆ. ವೀಸಾ ಆಧರಿಸಿ ಸೇವಕರು ಮತ್ತು ಚಾಲಕರನ್ನು ನೇಮಿಸಿಕೊಳ್ಳಬಹುದು. ಯುಎಇಯಲ್ಲಿ ಯಾವುದೇ ವ್ಯವಹಾರ ಅಥವಾ ವೃತ್ತಿಪರ ಕೆಲಸವನ್ನು ಮಾಡಬಹುದು. ಆದರೆ, ಆಸ್ತಿ ಮಾರಾಟ ಅಥವಾ ವಿಭಜನೆಯ ಸಂದರ್ಭದಲ್ಲಿ ನಾಮನಿರ್ದೇಶಿತ ಆಧಾರಿತ ವೀಸಾ ಶಾಶ್ವತವಾಗಿ ಉಳಿಯುತ್ತದೆ.
ಅಮೆರಿಕದ ಗೋಲ್ಡನ್ ವೀಸಾ ದುಬಾರಿಯಾಗಿದ್ದು, ಇದಕ್ಕೆ ಹೋಲಿಸಿದರೆ ಯುಎಇ ಗೋಲ್ಡನ್ ವೀಸಾ ಕೈಗೆಟುಕುವ ದರದಲ್ಲಿದೆ.
– ಒತ್ತೆಯಾಳಾಗಿರಿಸಿಕೊಂಡಿದ್ದ ಭಾರತೀಯರಿಂದ ದಿನಕ್ಕೆ 15 ಗಂಟೆ ಕೆಲಸ
ನವದೆಹಲಿ: ಉದ್ಯೋಗ (Job) ಅರಸಿ ವಿದೇಶಕ್ಕೆ ತೆರಳಿ ವಂಚನೆಗೆ ಒಳಗಾಗಿದ್ದ ನಾಲ್ವರು ಮಹಿಳೆಯರು ಸೇರಿ 28 ಮಂದಿ ಕನ್ನಡಿಗರನ್ನು ವಿದೇಶಾಂಗ ಸಚಿವಾಲಯ (Ministry of External Affairs) ರಕ್ಷಣೆ ಮಾಡಿದೆ. ರಕ್ಷಣೆಗೊಳಗಾದವರನ್ನು ದೆಹಲಿಯ ಕರ್ನಾಟಕ ಭವನದ ಅಧಿಕಾರಗಳ ನೆರವಿನೊಂದಿಗೆ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಉದ್ಯೋಗ ನೀಡುವ ಭರವಸೆ ನೀಡಿ 283 ಭಾರತೀಯರನ್ನು ಥೈಲ್ಯಾಂಡ್‌ಗೆ ಕರೆಸಿಕೊಳ್ಳಲಾಗಿತ್ತು. ಥೈಲ್ಯಾಂಡ್‌ಗೆ (Thailand) ತೆರಳಿದ್ದ ಭಾರತೀಯರನ್ನ (Indians) ರಸ್ತೆ ಮಾರ್ಗದ ಮೂಲಕ ಮಯನ್ಮಾರ್‌ಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪಾಸ್‌ಪೊರ್ಟ್ ಕಿತ್ತುಕೊಂಡು ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು.
ಒತ್ತೆಯಾಳಾಗಿಟ್ಟುಕೊಂಡಿದ್ದ ಭಾರತೀಯರನ್ನು ದಿನಕ್ಕೆ 15 ಗಂಟೆಗೂ ಅಧಿಕ ಕೆಲಸ ಮಾಡಿಸಲಾಗುತ್ತಿತ್ತು. ಈ ವಿಷಯ ವಿದೇಶಾಂಗ ಸಚಿವಾಲಯ ಗಮನಕ್ಕೆ ಬಂದ ಬಳಿಕ ವಂಚನೆಗೊಳಾದವರನ್ನು ಗುರುತಿಸಿ ಮಯನ್ಮಾರ್, ಥೈಲ್ಯಾಂಡ್ ರಾಯಭಾರ ಕಚೇರಿಗಳ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಯಿತು.
ಭಾರತಕ್ಕೆ ಬಂದ 28 ಕನ್ನಡಿಗರನ್ನು ಕರ್ನಾಟಕ ಭವನದ ಅಧಿಕಾರಿಗಳು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಯಿತು.
ನವದೆಹಲಿ: 2009ರಿಂದ ಇಲ್ಲಿಯವರೆಗೆ ಅಮೆರಿಕದಿಂದ ಒಟ್ಟು 15,000 ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ಗಡಿಪಾರುಗೊಂಡು (Deportation) ಭಾರತಕ್ಕೆ ಮರಳುತ್ತಿರುವ ಭಾರತೀಯರ (Indians) ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಲು ನಾವು ಅಮೆರಿಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಹೇಳಿಕೆ ನೀಡಿದ್ದಾರೆ.
ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ನಾಗರಿಕರ ಕುರಿತು ಮಾತನಾಡಿದ ಅವರು, ತಮ್ಮ ನಾಗರಿಕರು ವಿದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆದುಕೊಂಡು ಹೋಗುವುದು ಎಲ್ಲಾ ದೇಶಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತರಬೇತಿ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್ ಸೇಫ್
ಅಕ್ರಮ ವಲಸೆ ಉದ್ಯಮದ ವಿರುದ್ಧ ಬಲವಾದ ಕ್ರಮ ಕೈಗೊಳ್ಳುವತ್ತ ನಮ್ಮ ಗಮನ ಕೇಂದ್ರೀಕರಿಸಿರುವುದನ್ನು ಸದನವು ಪ್ರಶಂಸಿಸುತ್ತದೆ. ಗಡಿಪಾರು ಮಾಡಿದವರು ಒದಗಿಸಿದ ಮಾಹಿತಿಯ ಆಧಾರದ ಮೇಲೆ ಕಾನೂನು ಜಾರಿ ಸಂಸ್ಥೆಗಳು ಏಜೆಂಟರು ಮತ್ತು ಅಂತಹ ಏಜೆನ್ಸಿಗಳ ವಿರುದ್ಧ ಅಗತ್ಯ, ತಡೆಗಟ್ಟುವ ಮತ್ತು ಅನುಕರಣೀಯ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದರು. ಇದನ್ನೂ ಓದಿ: ಹಿಂದೂ ಪದ ತಂದಿದ್ದೇ ಕಾಂಗ್ರೆಸ್: ಸಂತೋಷ್ ಲಾಡ್
ಅಮೆರಿಕದಿಂದ ಹಿಂದಿರುಗುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ಅಧಿಕಾರಿಗಳು ಕುಳಿತು ಚರ್ಚಿಸಲು ಸೂಚಿಸಿದೆ. ಅವರು ಅಮೆರಿಕಕ್ಕೆ ಹೇಗೆ ಹೋದರು, ಯಾರು ಏಜೆಂಟ್ ಮತ್ತು ಇದು ಮತ್ತೆ ಸಂಭವಿಸದಂತೆ ನಾವು ಹೇಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಕಂಡುಹಿಡಿಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇವೇಗೌಡರು ಕರ್ನಾಟಕಕ್ಕೆ ಕೇಂದ್ರ ಮಾಡಿರೋ ಅನ್ಯಾಯದ ಬಗ್ಗೆ ಮಾತಾಡಲಿ: ಕೃಷ್ಣ ಬೈರೇಗೌಡ
ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಪ್ರಶ್ನೆಗೆ ಉತ್ತರಿಸಿ, ಬುಧವಾರ 104 ಜನರು ಹಿಂತಿರುಗಿದ್ದಾರೆಂದು ನಮಗೆ ತಿಳಿದಿದೆ. ನಾವು ಅವರ ರಾಷ್ಟ್ರೀಯತೆಯನ್ನು ದೃಢಪಡಿಸಿದ್ದೇವೆ. ಇದು ಹೊಸ ಸಮಸ್ಯೆ ಎಂದು ನಾವು ಭಾವಿಸಬಾರದು. ಇದು ಈ ಹಿಂದೆಯೂ ನಡೆದಿರುವ ಸಮಸ್ಯೆ. ಕಾನೂನು ಚಲನಶೀಲತೆಯನ್ನು ಉತ್ತೇಜಿಸುವುದು ಮತ್ತು ಅಕ್ರಮ ಸಂಚಾರವನ್ನು ನಿರುತ್ಸಾಹಗೊಳಿಸುವುದು ನಮ್ಮ ಸಾಮೂಹಿಕ ಹಿತಾಸಕ್ತಿಯಾಗಿದೆ. ಎಲ್ಲಾ ದೇಶಗಳು ತಮ್ಮ ನಾಗರಿಕರು ವಿದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಹೊಂದಿವೆ. ಗಡಿಪಾರು ಪ್ರಕ್ರಿಯೆ ಹೊಸದೇನಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿರೋದು ದಪ್ಪ ಎಮ್ಮೆ ಚರ್ಮದ ಸರ್ಕಾರ: ಸುನೀಲ್ ಕುಮಾರ್
ಅಮೆರಿಕದಿಂದ ಭಾರತಕ್ಕೆ ಇಲ್ಲಿಯವರೆಗೆ ಗಡಿಪಾರು ಮಾಡಲಾದ ಜನರ ಅಂಕಿಅಂಶಗಳನ್ನು ಜೈಶಂಕರ್ ಸದನದ ಮುಂದೆ ಮಂಡಿಸಿದರು. 2009 ರಲ್ಲಿ 734 ಭಾರತೀಯರನ್ನು, 2010ರಲ್ಲಿ 799 ಭಾರತೀಯರನ್ನು, 2011ರಲ್ಲಿ 597 ಭಾರತೀಯರನ್ನು ಮತ್ತು 2012ರಲ್ಲಿ 530 ಭಾರತೀಯರನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿ 2024ರವರೆಗಿನ ಮಾಹಿತಿಯನ್ನು ಹಂಚಿಕೊಂಡರು.
ಯಾವ ವರ್ಷದಲ್ಲಿ ಎಷ್ಟು ಭಾರತೀಯರ ಗಡಿಪಾರು?
2009-734
2010-799
2011-597
2012-530
2013-550
2014-591
2015-708
2016-1303
2017-1024
2018-1180
2019-2042
2020-1889
2021-805
2022-862
2023-617
2024-1368
2025-104
ಚಂಡೀಗಢ: ಅಮೆರಿಕದಿಂದ (America) ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳನ್ನು ಹೊತ್ತ ಅಮೆರಿಕದ ಮಿಲಿಟರಿ ಸಿ -17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ (Amritsir) ವಿಮಾನ ನಿಲ್ದಾಣಕ್ಕೆ ಬಂದು ಇಳಿಯಿತು.
ಮಂಗಳವಾರ ಮಧ್ಯಾಹ್ನ ಟೆಕ್ಸಾಸ್‌ನ (Texas) ಸ್ಯಾನ್ ಆಂಟೋನಿಯೊದಿಂದ ಹೊರಟ ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು 45 ಅಮೆರಿಕದ ಅಧಿಕಾರಿಗಳು ಇದ್ದರು. ಮೂಲಗಳ ಪ್ರಕಾರ ಗುಜರಾತ್ ಮತ್ತು ಹರಿಯಾಣ ಮೂಲದವರು ತಲಾ 33 ಜನರಿದ್ದಾರೆ. 30 ಜನರು ಪಂಜಾಬ್, ತಲಾ ಇಬ್ಬರು ಪ್ರಯಾಣಿಕರು ಉತ್ತರ ಪ್ರದೇಶ ಮತ್ತು ಚಂಡೀಗಢದವರು, ಮೂವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್ – ನಲಪಾಡ್ ಎಸ್‌ಐಟಿ ನೋಟಿಸ್
ಇದರಲ್ಲಿ 25 ಮಹಿಳೆಯರು ಮತ್ತು 12 ಅಪ್ರಾಪ್ತ ವಯಸ್ಕರು ಸೇರಿದ್ದಾರೆ. 48 ಮಂದಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎನ್ನಲಾಗಿದೆ. ಪಂಜಾಬ್‌ನ 30 ಜನರಲ್ಲಿ ಹೆಚ್ಚಿನವರು ಗುರುದಾಸ್ಪುರ್, ಅಮೃತಸರ ಮತ್ತು ತರಣ್ ಸೇರಿದಂತೆ ಗಾಝಾ ಪಟ್ಟಿಯಿಂದ ಬಂದವರು, ಇತರರು ಜಲಂಧರ್, ನವನ್‌ಶಹರ್, ಪಟಿಯಾಲ, ಮೊಹಾಲಿ ಮತ್ತು ಸಂಗ್ರೂರ್‌ನವರು ಎಂದು ಪಂಜಾಬ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಹುತೇಕ ಮಂದಿ ವೀಸಾ ಅವಧಿ ಅಂತ್ಯವಾದ ಬಳಿಕವೂ ಅಕ್ರಮವಾಗಿ ನೆಲೆಸಿದ್ದರು. ಇದನ್ನೂ ಓದಿ: ರಾಜ್ಯದ ಮೊದಲ ಕ್ಯಾನ್ಸರ್ ಡೇ ಕೇರ್ ಕೀಮೋಥೇರಪಿ ಸೆಂಟರ್ ರಾಯಚೂರಿನಲ್ಲಿ ಆರಂಭ
ಅಮೆರಿಕಾದಿಂದ ಬರುವ ಭಾರತೀಯರಿಗಾಗಿ ಪಂಜಾಬ್ ಪೊಲೀಸರು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಪಂಜಾಬ್ ಡಿಜಿಪಿ ಗೌರವ್ ಯಾದವ್, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವು ಇದರ ಬಗ್ಗೆ ಚರ್ಚಿಸಿದ್ದೇವೆ. ಪಂಜಾಬ್ ಸರ್ಕಾರ ಅವರನ್ನು ಸ್ನೇಹಪರ ರೀತಿಯಲ್ಲಿ ಸ್ವೀಕರಿಸಬೇಕೆಂದು ಅವರು ನಮ್ಮನ್ನು ಕೇಳಿಕೊಂಡಿದ್ದಾರೆ. ಇದಕ್ಕಾಗಿ ವಿಮಾನ ನಿಲ್ದಾಣದಲ್ಲಿ ನಮ್ಮ ಕೌಂಟರ್‌ಗಳನ್ನು ಸ್ಥಾಪಿಸಿದ್ದೇವೆ. ನಾವು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ನಮಗೆ ಯಾವುದೇ ಹೆಚ್ಚಿನ ಮಾಹಿತಿ ಸಿಕ್ಕಾಗಲೆಲ್ಲಾ ನಾವು ಅದನ್ನು ಹಂಚಿಕೊಳ್ಳುತ್ತೇವೆ. ಹೆಚ್ಚಿನ ಸಂಖ್ಯೆಯ ಜನರನ್ನು ಗಡಿಪಾರು ಮಾಡುವ ಸಾಧ್ಯತೆಯಿದೆ ಎಂಬ ದೃಢೀಕರಿಸದ ವರದಿಗಳು ಇನ್ನೂ ನಮ್ಮಲ್ಲಿವೆ ಎಂದು ಹೇಳಿದರು. ಪಂಜಾಬ್ ಸಿಎಂ ಭಗವಂತ್ ಮಾನ್ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ವಿಜಯೇಂದ್ರರನ್ನ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಬರಲ್ಲ: ರೇಣುಕಾಚಾರ್ಯ
ವಾಷಿಂಗ್ಟನ್: ಅಮೆರಿಕ (America) ಅಧ್ಯಕ್ಷರಾದ ತಕ್ಷಣ ಟ್ರಂಪ್ (Donald Trump) ತೆಗೆದುಕೊಂಡ ನಿರ್ಣಯಗಳು ನಿರೀಕ್ಷೆಯಂತೆ ವಿವಾದ ಹುಟ್ಟು ಹಾಕಿವೆ. ಜನ್ಮತಃ ಪೌರತ್ವ ಕಾಯ್ದೆ (Birthright Citizenship) ರದ್ದು ಮಾಡಿದ ಟ್ರಂಪ್ ವಿರುದ್ಧ ಅಮೆರಿಕದಲ್ಲೇ ಭಾರೀ ಆಕ್ರೋಶ ವ್ಯಕ್ತವಾಗಿದೆ..
ಡೆಮಾಕ್ರೆಟಿಕ್ ಆಡಳಿತ ಇರುವ 22 ರಾಜ್ಯಗಳು ಕಾನೂನು ಸಮರಕ್ಕೆ ಮುಂದಾಗಿವೆ. ಅಧ್ಯಕ್ಷ ಟ್ರಂಪ್ ನಿರ್ಣಯ ಸಂವಿಧಾನ ವಿರೋಧಿ ಎನ್ನುತ್ತಾ ಪ್ರತ್ಯೇಕವಾಗಿ ಕೋರ್ಟ್ ಮೆಟ್ಟಿಲೇರಿವೆ. ಟ್ರಂಪ್ ಆದೇಶ ಜಾರಿಯಾಗುವ ಮುನ್ನವೇ ತಡೆಯಬೇಕು ಎಂದು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಕೋರ್ಟನ್ನು ಕೋರಿದ್ದಾರೆ. ಸರಿಯಾದ ದಾಖಲೆ ಪತ್ರಗಳು ಇಲ್ಲದೇ ಅಮೆರಿಕದಲ್ಲಿ 1.40 ಕೋಟಿ ಮಂದಿ ನೆಲೆಸಿದ್ದು, ಇದರಲ್ಲಿ ಭಾರತೀಯರ ಸಂಖ್ಯೆ 7.25 ಲಕ್ಷ ಇದೆ. ಈ ಪೈಕಿ 18,000 ಭಾರತೀಯರನ್ನು ಗಡಿಪಾರು ಮಾಡಲು ಅಮೆರಿಕ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇದನ್ನೂ ಓದಿ: Champions Trophy: ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಹೋಗಲ್ಲ – ಬಿಸಿಸಿಐ ಸ್ಪಷ್ಟ ಸಂದೇಶ
ಈ ಮಧ್ಯೆ, ಮೆಕ್ಸಿಕೋ ಕೆನಡಾ ಬೆನ್ನಲ್ಲೇ ಚೀನಾದಿಂದ ಆಮದಾಗುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲು ಟ್ರಂಪ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 1ರಿಂದ ಚೀನಾ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ಸುಂಕ ವಿಧಿಸುವ ಸಾಧ್ಯತೆ ಇದೆ. ಇದು ಚೀನಾ ಆತಂಕಕ್ಕೆ ಕಾರಣವಾಗಿದೆ. ಪುಟಿನ್ ಚರ್ಚೆಗೆ ಬಂದಿಲ್ಲ ಅಂದರೆ ರಷ್ಯಾ ಮೇಲೆ ದಿಗ್ಬಂಧನ ವಿಧಿಸುವ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ. ಇದನ್ನೂ ಓದಿ: ಮೀಸಲಾತಿ ಹೆಸರಲ್ಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ – ರಾಜಕೀಯಕ್ಕೆ ಧುಮುಕ್ತಾರಾ ಕೂಡಲಸಂಗಮ ಸ್ವಾಮೀಜಿ?