Tag: ಭಾರತೀಯ ಕಿಸಾನ್ ಸಂಘ

  • Chitradurga| ರೈತರ ತಂಟೆಗೆ ಬಂದ್ರೆ ಸುಮ್ಮನೆ ಕೂರಲ್ಲ – ವಕ್ಫ್ ವಿರುದ್ಧ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ

    Chitradurga| ರೈತರ ತಂಟೆಗೆ ಬಂದ್ರೆ ಸುಮ್ಮನೆ ಕೂರಲ್ಲ – ವಕ್ಫ್ ವಿರುದ್ಧ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ

    ಚಿತ್ರದುರ್ಗ: ವಕ್ಫ್ (Waqf Board) ನಡೆ ಖಂಡಿಸಿ ಭಾರತೀಯ ಕಿಸಾನ್ ಸಂಘ (Bharatiya Kisan Sangh) ಹಾಗೂ ವಿವಿಧ ಸಂಘಟನೆಗಳು ಚಿತ್ರದುರ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

    ಕಿಸಾನ್ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರೈತರು, ಮಠಾಧೀಶರ ಭೂಮಿ ಕಬಳಿಸುತ್ತಿರುವ ವಕ್ಫ್ ವಿರುದ್ಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ತುಮಕೂರು| ಗುರಾಯಿಸುತ್ತೀಯಾ ಎಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

    ವಕ್ಫ್ ಬೋರ್ಡ್ ರೈತರ ತಂಟೆಗೆ ಬಂದರೆ ಸುಮ್ಮನೆ ಕೂರಲ್ಲ ಎಂದು ಸಂಘಟನೆಗಳು ಆಕ್ರೋಶ ಹೊರಹಾಕಿದೆ. ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಎಂಎಲ್‌ಸಿ ಕೆ.ಎಸ್ ನವೀನ್, ಅಡ್ಡಂಡ ಕಾರ್ಯಪ್ಪ ಸೇರಿದಂತೆ ಸ್ಥಳೀಯ ಹೋರಾಟಗಾರರು ಭಾಗಿಯಾಗಿದ್ದರು. ಇದನ್ನೂ ಓದಿ: ವಕ್ಫ್ ಆಸ್ತಿ ಭೂಕಬಳಿಕೆ ಹೆಚ್ಚಿದ್ದಕ್ಕೆ ಬಿಜೆಪಿಯಿಂದ ಹೆಚ್ಚು ನೋಟಿಸ್ ನೀಡಲಾಗಿದೆ – ಕುಮಾರ್ ಬಂಗಾರಪ್ಪ

  • ಪಾನಮತ್ತನಾಗಿ ಕಚೇರಿಗೆ ಬಂದ ತಹಶೀಲ್ದಾರ್: ರೈತರಿಂದ ತರಾಟೆ

    ಪಾನಮತ್ತನಾಗಿ ಕಚೇರಿಗೆ ಬಂದ ತಹಶೀಲ್ದಾರ್: ರೈತರಿಂದ ತರಾಟೆ

    ವಿಜಯಪುರ: ಪಾನಮತ್ತನಾಗಿ ಕಚೇರಿಗೆ ಬಂದು, ಕೆಲಸ ಮಾಡುತ್ತಿದ್ದ ತಹಶೀಲ್ದಾರ್ ಒಬ್ಬರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಚಡಚಣದಲ್ಲಿ ನಡೆದಿದೆ.

    ಬುಧವಾರ ತಹಶೀಲ್ದಾರ್ ಸಂಗಮೇಶ ಮೆಳ್ಳಿಗೇರಿ ಮದ್ಯ ಸೇವನೆ ಮಾಡಿ ಕಚೇರಿಗೆ ಆಗಮಿಸಿದ್ದರು. ವಿವಿಧ ಬೇಡಿಕೆಗೆ ಈಡೇರಿಸುವಂತೆ ಆಗ್ರಹಿಸಿ ಮನವಿ ಕೊಡಲು ಚಡಚಣ ತಾಲೂಕಾ ವಲಯ ಭಾರತೀಯ ಕಿಸಾನ್ ಸಂಘದ ಸದಸ್ಯರು ತಾಲೂಕು ಆಡಳಿತ ಕೇಂದ್ರಕ್ಕೆ ಬಂದಿದ್ದರು. ಮದ್ಯದ ಮತ್ತಿನಲ್ಲಿದ್ದ ಸಂಗಮೇಶ್ ರೈತರೊಂದಿಗೆ ಅನುಚಿತ ವರ್ತನೆ ಮಾಡಿದ್ದರು. ಇದರಿಂದ ರೋಸಿ ಹೋದ ರೈತ ಸಂಘಟನೆ ಮುಖಂಡರು, ಸಂಗಮೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು. ವರ್ತನೆ ಸರಿಪಡಿಸಿಕೊಳ್ಳದಿದ್ದಲ್ಲಿ ತಹಶೀಲ್ದಾರ್ ಹಠಾವೋ ಚಳುವಳಿ ನಡೆಸುವ ಎಚ್ಚರಿಕೆಯನ್ನು ರೈತರು ನೀಡಿದರು.

    ನಾನು ನಿಮ್ಮ ತಾಲೂಕಿಗೆ ಒಳ್ಳೆಯ ಕೆಲಸ ಮಾಡಿ ಹೋಗುತ್ತೇನೆ. ರಾತ್ರಿ 2 ಗಂಟೆಯವರೆಗೆ ಕೆಲಸ ಮಾಡಿದ್ದೆ. ಹೀಗಾಗಿ ಕುಡಿದು ಕಚೇರಿಗೆ ಬಂದಿರುವೆ. ತಪ್ಪಾಗಿದೆ ಇದೇ ಕೊನೆ. ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಮದ್ಯದ ಅಮಲಿನಲ್ಲಿಯೇ ರೈತ ಮುಖಂಡರಿಗೆ ಸಂಗಮೇಶ್ ಮನವಿ ಮಾಡಿಕೊಂಡರು.

    ಸಂಗಮೇಶ್ ಈ ಹಿಂದೆಯೂ ಅನೇಕ ಬಾರಿ ಮದ್ಯ ಸೇವನೆ ಮಾಡಿಯೇ ಕಚೇರಿಗೆ ಬಂದಿದ್ದರು. ಅಷ್ಟೇ ಅಲ್ಲದೆ ಹಿಂದಿನ ಜಿಲ್ಲಾಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಅಮಾನತುಗೊಂಡಿದ್ದರು. ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗಠಾಣ ಶಾಸಕ ದೇವಾನಂದ ಚವ್ಹಾಣ್ ಗೆ ರೈತರು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಶಾಸಕರು ಸ್ಥಳೀಯ ಜನರಿಂದ ಲಿಖಿತ ದೂರು ಬಂದಲ್ಲಿ, ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.