Tag: ಭಾರತೀಯ ಪ್ರಜೆ

  • ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ಹತ್ಯೆ ಕೇಸ್‌ – ಕೆನಡಾದಲ್ಲಿ 4ನೇ ಭಾರತೀಯ ಪ್ರಜೆ ಬಂಧನ

    ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ಹತ್ಯೆ ಕೇಸ್‌ – ಕೆನಡಾದಲ್ಲಿ 4ನೇ ಭಾರತೀಯ ಪ್ರಜೆ ಬಂಧನ

    ಒಟ್ಟಾವಾ: ಖಲಿಸ್ತಾನ್‌ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯಲ್ಲಿ ಪಾತ್ರವಹಿಸಿದ್ದ ನಾಲ್ಕನೇ ಭಾರತೀಯನನ್ನು ಕೆನಡಾ (Canada) ಅಧಿಕಾರಿಗಳು ಬಂಧಿಸಿದ್ದಾರೆ.

    ಕೆನಡಾದ ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್‌ಫೋರ್ಡ್ ಪ್ರದೇಶಗಳ ನಿವಾಸಿ ಅಮರ್‌ದೀಪ್ ಸಿಂಗ್ (22) ವಿರುದ್ಧ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ – 330 ಜನರ ದುರ್ಮರಣ

    ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿನ ಪಾತ್ರಕ್ಕಾಗಿ ಅಮರದೀಪ್ ಸಿಂಗ್‌ನನ್ನು ಮೇ 11 ರಂದು ಬಂಧಿಸಲಾಯಿತು ಎಂದು IHIT ತಿಳಿಸಿದೆ. ದಾಖಲೆ ಇಲ್ಲದ ಬಂದೂಕು ಹೊಂದಿದ್ದ ಆರೋಪಕ್ಕಾಗಿ ಆತ ಈಗಾಗಲೇ ಪೀಲ್ ಪ್ರಾದೇಶಿಕ ಪೊಲೀಸರ ವಶದಲ್ಲಿದ್ದ.

    2023 ರ ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಹೊರಗೆ ಹರ್ದೀಪ್ ನಿಜ್ಜರ್ (45) ಹತ್ಯೆಯಾಗಿತ್ತು. IHIT ತನಿಖಾಧಿಕಾರಿಗಳು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ಮೇ 3 ರಂದು ಬಂಧಿಸಿದ್ದಾರೆ. ಇದನ್ನೂ ಓದಿ: ಪಿಒಕೆ ನಿವಾಸಿಗಳ ಮೇಲೆ ಪಾಕ್ ದಬ್ಬಾಳಿಕೆ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ

    ಕರಣ್ ಬ್ರಾರ್ (22), ಕಮಲಪ್ರೀತ್ ಸಿಂಗ್ (22) ಮತ್ತು 28 ವರ್ಷದ ಕರಣ್‌ಪ್ರೀತ್ ಸಿಂಗ್ ಬಂಧಿತರು. ಎಲ್ಲಾ ಮೂರು ಆರೋಪಿಗಳು ಎಡ್ಮಂಟನ್‌ನಲ್ಲಿ ವಾಸಿಸುವ ಭಾರತೀಯ ಪ್ರಜೆಗಳಾಗಿದ್ದು, ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪ ಹೊತ್ತಿದ್ದಾರೆ.

  • ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿದ್ದ 250 ಭಾರತೀಯ ಪ್ರಜೆಗಳನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಏರ್ ಇಂಡಿಯಾದ ಎರಡನೇ ವಿಮಾನವು ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

    ಏರ್ ಇಂಡಿಯಾ (ಎಐ)-192 ವಿಶೇಷ ವಿಮಾನವು ಬೆಳಗ್ಗೆ 3 ಗಂಟೆಗೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ.  ಇದನ್ನೂ ಓದಿ:  ರಷ್ಯಾ ಜಾಗತಿಕ ಪಾವತಿ ವ್ಯವಸ್ಥೆ ಕಡಿತ – ಯುಎಸ್, ಮಿತ್ರರಾಷ್ಟ್ರಗಳ ಒಪ್ಪಿಗೆ

    ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು, ಉಕ್ರೇನ್‍ನಿಂದ ಬುಚಾರೆಸ್ಟ್ ಮೂಲಕ ಸುರಕ್ಷಿತವಾಗಿ ಬಂದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

    ಈ ವಿಮಾನದಲ್ಲಿ ಬಂದ ಭಾರತೀಯ ವಿದ್ಯಾರ್ಥಿಯೊಬ್ಬರು ಮಾಧ್ಯಮದೊಂದಿಗೆ ಮಾತನಾಡಿ, ಕೈವ್‍ನ ಹಲವಾರು ಸ್ಥಳಗಳಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ನಾಗರಿಕರು ತಮ್ಮ ದೇಶವನ್ನು ಉಳಿಸಲು ಶಸ್ತ್ರಾಸ್ತ್ರಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

    ಶನಿವಾರ ರಾತ್ರಿ ಉಕ್ರೇನ್‍ನಿಂದ 219 ಭಾರತೀಯ ವಿದ್ಯಾರ್ಥಿಗಳು ಏರ್ ಇಂಡಿಯಾ ವಿಮಾನ ಮೂಲಕ ಮುಂಬೈಗೆ ಬಂದಿಳಿದಿದ್ದರು. ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‍ನಿಂದ ಮಧ್ಯಾಹ್ನ ಭಾರತದ ಪ್ರಜೆಗಳನ್ನು ಹೊತ್ತು ವಿಮಾನ ಟೇಕಾಫ್ ಆಗಿತ್ತು. ಉಕ್ರೇನ್‍ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲ್ಪಟ್ಟ ಭಾರತೀಯರನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿತ್ತು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದರು.