Tag: ಭಾರತೀಯ ಪ್ರಜೆಗಳು

  • ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆಯೇ ದೆಹಲಿಗೆ ವಾಪಸ್ ಆಗಿದೆ.

    ಈಗಾಗಲೇ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಚರಣೆ ನಡೆಸುತ್ತಿದೆ. ಇದರ ಮಧ್ಯೆ ಉಕ್ರೇನ್ ತನ್ನ ಭದ್ರತೆಗಾಗಿ ವಾಯುಪ್ರದೇಶವನ್ನು ಮುಚ್ಚಿದೆ. ಇದರಿಂದಾಗಿ ಸಾವಿರಾರು ಭಾರತೀಯರು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದು, ಸ್ವದೇಶಕ್ಕೆ ಬರಲು ಕಾಯುತ್ತಿದ್ದಾರೆ.

    ಆದರೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್ ಸೂಚನೆ ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗಿ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ಮಿಲಿಟರಿ ಕಾರ್ಯಚರಣೆ ನಡೆಯುತ್ತಿರುವುದರಿಂದ, ಎಲ್ಲಾ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿವೆ. ಈ ಹಿನ್ನೆಲೆಯಲ್ಲಿ ಆದರೆ ಉಕ್ರೇನ್‍ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್‌ಮೆನ್‍ಗಳಿಗೆ ಸರ್ಕಾರ ಸೂಚನೆಯನ್ನು ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸಾಗಲು ನಿರ್ಧರಿಸಿತು. ಇದನ್ನೂ ಓದಿ: ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಈಗಾಗಲೇ ಉಕ್ರೇನ್‍ನಲ್ಲಿರುವ ಪ್ರಜೆಗಳಿಗೆ ಭಾರತವು 24 ಗಂಟೆಗಳ ಕಾಲ ಸಹಾಯವಾಣಿಯನ್ನು ತೆರೆದಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಜುಲೈ 2014ರಲ್ಲಿ ಮಲೇಷ್ಯಾ ಏರ್‍ಲೈನ್ಸ್ ವಿಮಾನವನ್ನು ಹೊಡೆದುರುಳಿಸಲಾಯಿತು. ಉಕ್ರೇನ್‍ನ ಸಶಸ್ತ್ರ ಪಡೆಗಳು ಮತ್ತು ರಷ್ಯಾದ ಪರ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧದಲ್ಲಿ ವಿಮಾನದಲ್ಲಿದ್ದ ಎಲ್ಲಾ 298 ಜನರು ಸಾವನ್ನಪ್ಪಿದರು.

  • ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನ

    ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನ

    ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣದ ಭೀತಿ ಹೆಚ್ಚಿದೆ. ಹೀಗಾಗಿ ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಸ್‌ ಕರೆಸಿಕೊಳ್ಳಲು ಟಾಟಾ ಒಡೆತನದ ಏರ್‌ ಇಂಡಿಯಾ ಇಂದು ರಾತ್ರಿ ಉಕ್ರೇನ್‌ ತಲುಪಲಿದೆ.

    ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ವಾಪಸ್‌ ಕರೆಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ. ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತವಾಗಿ ಹಿಂದಿರುಗಲು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಇದನ್ನೂ ಓದಿ: ಹಿಜಬ್ ಹೆಸರಿನಲ್ಲಿ ಮಕ್ಕಳಿಗೆ ವಿಭಜನೆ ವಿಷವನ್ನು ತಿನ್ನಿಸಬಾರದು: ಸದ್ಗುರು ಜಗ್ಗಿ ವಾಸುದೇವ್

    ಏರ್‌ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ ತವರು ದೇಶಕ್ಕೆ ಮರಳಲಿದ್ದಾರೆ ಎಂದು ಏರ್‌ಲೈನ್‌ ಮೂಲಗಳು ತಿಳಿಸಿವೆ. ಏರ್‌ ಇಂಡಿಯಾ ಫೆರ್ರಿ ವಿಮಾನವು ಸೋಮವಾರ ಉಕ್ರೇನ್‌ನಿಂದ ಭಾರತೀಯರನ್ನು ವಾಪಸ್‌ ಕರೆತಂದಿತ್ತು. ಏರ್‌ ಇಂಡಿಯಾದ ಮೂರು ವಿಮಾನಗಳು ಈ ಕಾರ್ಯಾಚರಣೆಯಲ್ಲಿವೆ.

    ಏರ್‌ ಇಂಡಿಯಾದ ಮೂರು ವಿಮಾನಗಳು ಫೆ.22, 24 ಮತ್ತು 26ರಂದು ಭಾರತ ಮತ್ತು ಉಕ್ರೇನ್‌ ನಡುವೆ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಲಾಗಿದೆ. ಉಕ್ರೇನ್‌ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್‌ ಡ್ರೀಮ್‌ಲೈನರ್‌ ಎಐ-1947 ವಿಮಾನವು ಟೇಕ್‌ ಆಫ್‌ ಆಗಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಹಿಜಬ್ ಬಗ್ಗೆ ಕೊನೆಗೂ ಮೌನ ಮುರಿದ ಅಮಿತ್ ಶಾ

    ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿತ್ತು.