Tag: ಭಾರತೀಯ ರಾಯಭಾರಿ

  • ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    – ಸಂಘರ್ಷದಲ್ಲಿ ಎರಡೂ ದೇಶಗಳಿಂದ ಮೃತರ ಸಂಖ್ಯೆ 32ಕ್ಕೆ ಏರಿಕೆ

    ನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್‌ (Thailand-Cambodia Conflict) ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ.

    ಆಗ್ನೇಯ ಏಷ್ಯಾದ ಕಾಂಬೋಡಿಯಾ-ಥೈಲ್ಯಾಂಡ್ ಗಡಿಯಲ್ಲಿ ನಡೆಯುತ್ತಿರುವ ಘರ್ಷಣೆಗಳ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳು ಗಡಿ ಪ್ರದೇಶಗಳಿಗೆ ಪ್ರಯಾಣಿಸುವುದನ್ನು ನಿಲ್ಲಿಸಲು ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅಂದು ಇಂಡಿಯಾ ಔಟ್‌ – ಇಂದು ಸೇನಾ ಕಚೇರಿಯಲ್ಲೇ ದೊಡ್ಡ ಕಟೌಟ್‌ | ಇದು ಮೋದಿ ಮ್ಯಾಜಿಕ್‌

    ಕಾಂಬೋಡಿಯಾದ ರಾಜಧಾನಿ ನೋಮ್ ಪೆನ್‌ನಲ್ಲಿರುವ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂಪರ್ಕ ಮಾಹಿತಿಯನ್ನು ಹಂಚಿಕೊಂಡಿದೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು ಭಾರತದ ರಾಯಭಾರ ಕಚೇರಿ, ನೋಮ್ ಪೆನ್ ಅನ್ನು +855 92881676 ಗೆ‌ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸೂಚಿಸಿದೆ.

    ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಘರ್ಷಣೆಗಳು ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿವೆ. ಕಾಂಬೋಡಿಯಾದ ರಕ್ಷಣಾ ಸಚಿವಾಲಯವು ಈವರೆಗೆ ಹೋರಾಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ಎಂಟು ನಾಗರಿಕರು ಮತ್ತು ಐದು ಸೈನಿಕರು ಸೇರಿದ್ದಾರೆ. 71 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!

    ಶುಕ್ರವಾರ ಐದು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಥಾಯ್ ಸೇನೆ ತಿಳಿಸಿದೆ. ಇದರಿಂದಾಗಿ 14 ನಾಗರಿಕರು ಮತ್ತು ಆರು ಸೈನಿಕರು ಸೇರಿದಂತೆ ಥೈಲ್ಯಾಂಡ್‌ನ ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ. ಎರಡೂ ದೇಶಗಳಿಂದ ಒಟ್ಟು ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

  • ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಜಭಾರಿ ಕಚೇರಿಯ ಉದ್ಯೋಗಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

    ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಮೀರತ್‌ನಲ್ಲಿ ಬಂಧಿಸಲಾಗಿದ್ದು, ಸತ್ಯೇದ್ರ ಸಿವಾಲ್, 2021 ರಿಂದ ಮಾಸ್ಕೋದಲ್ಲಿರುವ (Moscow) ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಯಾವ ಔಷಧಿ ಕಂಪನಿಯೂ ನನಗೆ ಹಣ ನೀಡಿಲ್ಲ: ಜಾಗೃತಿಗಾಗಿ ಡ್ರಾಮಾ ಮಾಡಿದೆ ಎಂದ ಪೂನಂ

    ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳನ್ನ ತಮ್ಮತ್ತ ಸೆಳೆಯುತ್ತಿದ್ದು, ಅದಕ್ಕಾಗಿ ಹಣದ ಆಮಿಷ ತೋರಿಸುತ್ತಿದ್ದಾರೆ ಎಂಬ ಸೂಕ್ಷ್ಮ ಮಾಹಿತಿ ಭಾರತೀಯ ಸೇನೆ ಹಾಗೂ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಭಯೋತ್ಪಾದನಾ ನಿಗ್ರಹ ದಳ ರಹಸ್ಯವಾಗಿಯೇ ತನ್ನ ಕಾರ್ಯಾಚರಣೆ ಮುಂದುವರಿಸಿತ್ತು.

    ಉತ್ತರ ಪ್ರದೇಶ (Uttar Pradesh) ಹಾಪುರ್‌ನ ಶಹಮಹಿಯುದ್ದೀನ್‌ಪುರ ಗ್ರಾಮದ ನಿವಾಸಿಯಾಗಿದ್ದ ಸತೇಂದ್ರ ಸಿವಾಲ್, ಬೇಹುಗಾರಿಕೆ ಜಾಲದ ಪ್ರಮುಖ ರುವಾರಿಯಾಗಿದ್ದ. ಮಾಸ್ಕೋದಲ್ಲಿರುವ ತನ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನವನ್ನು ದುರ್ಬಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನ ಹೊರ ತೆಗೆಯುತ್ತಿದ್ದ. ಹಣದ ಆಸೆಗಾಗಿ ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಸೇನೆಯ ಆಂತರಿಕೆ ಮತ್ತು ಬಾಹ್ಯ ಕಾರ್ಯಾಚರಣೆ ಚಟುವಟಿಕೆಗಳ ಬಗ್ಗೆ ಮಾಹಿತಿ ಹೊರತೆಗೆದು ಅದನ್ನು ಐಎಸ್‌ಐ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ

    ಇತ್ತೀಚಿನ ದಿನಗಳಲ್ಲಿ ಐಎಸ್‌ಐ ಉಗ್ರರು ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉದ್ಯೋಗಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ. ಇದರಿಂದ ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ದೊಡ್ಡ ಅಪಾಯ ಉಂಟುಮಾಡುವ ಆತಂಕ ಎದುರಾಗುತ್ತಿದೆ ಎಂದು ಕೆಲ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್‌ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು

  • ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್‌ ರಾಜಧಾನಿ ಕೀವ್‌ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ ಮೂಲದ ನಾಗರಿಕರಿಗೆ ರಾಯಭಾರಿ ಕಚೇರಿ ತಿಳಿಸಿದೆ.

    ಉಕ್ರೇನ್‌ ರಾಜಧಾನಿಯಲ್ಲಿರುವ ಭಾರತೀಯ ಮೂಲದವರು ಈ ಕೂಡಲೇ ಕೀವ್‌ ಅನ್ನು ತೊರೆಯಿರಿ. ರೈಲು ಅಥವಾ ಇನ್ನಿತರ ಲಭ್ಯ ಸಾರಿಗೆ ವ್ಯವಸ್ಥೆ ಮೂಲಕ ರಾಜಧಾನಿಯಿಂದ ಹೊರಡಿ ಎಂದು ಉಕ್ರೇನ್‌ನಲ್ಲಿರುವ ಭಾರತ ರಾಯಭಾರಿ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಕೀವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾ ಸೇನಾ ವಾಹನಗಳಿರುವ ಉಪಗ್ರಹ ಚಿತ್ರಗಳು ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಸಲಹೆಯನ್ನು ಪೋಸ್ಟ್ ಮಾಡಲಾಗಿದೆ. ಯುಎಸ್ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಮತ್ತು ಲಾಜಿಸ್ಟಿಕ್ ವಾಹನಗಳಿವೆ. ಕೀವ್‌ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಹೆಚ್ಚಿನ ದಾಳಿಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ.

    ಯುದ್ಧಪೀಡಿತ ರಾಷ್ಟ್ರ ಉಕ್ರೇನ್‌ನಲ್ಲಿ 16,000 ವಿದ್ಯಾರ್ಥಿಗಳು ಸಿಲುಕಿದ್ದಾರೆ. ಉಕ್ರೇನ್‌ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು, ಬಾಂಬ್‌ ಸೆಲ್ಟರ್‌ಗಳಲ್ಲಿ ಅಡಗಿರುವ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೇಡಿಕೆ ಇಡುತ್ತಿರುವ ಫೋಟೋ, ವೀಡಿಯೋಗಳನ್ನು ಶೇರ್‌ ಮಾಡುತ್ತಿದ್ದಾರೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಇದುವರೆಗೆ 8,000 ಭಾರತೀಯರನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉಕ್ರೇನ್‌ನ ಪೂರ್ವ ಭಾಗಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.