Tag: ಭಾರತೀಯ ರಾಯಭಾರ ಕಚೇರಿ

  • ಅಮೆರಿಕದ ಭಾರತೀಯ ರಾಯಭಾರ ಕಚೇರಿಯಲ್ಲಿ ಅಧಿಕಾರಿ ನಿಗೂಢ ಸಾವು

    ಅಮೆರಿಕದ ಭಾರತೀಯ ರಾಯಭಾರ ಕಚೇರಿಯಲ್ಲಿ ಅಧಿಕಾರಿ ನಿಗೂಢ ಸಾವು

    ವಾಷಿಂಗ್ಟನ್: ಭಾರತೀಯ ರಾಯಭಾರ ಕಚೇರಿಯ (Indian embassy) ಅಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಬುಧವಾರ ಅಧಿಕಾರಿಯ ಶವ ಪತ್ತೆಯಾಗಿದ್ದು, ರಾಯಭಾರ ಕಚೇರಿಯು ಶುಕ್ರವಾರ ಅಧಿಕೃತ ಹೇಳಿಕೆಯಲ್ಲಿ ಸಾವನ್ನು ದೃಢಪಡಿಸಿದೆ.

    ಆತ್ಮಹತ್ಯೆಯ ಸಾಧ್ಯತೆ ಸೇರಿದಂತೆ, ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಇದನ್ನೂ ಓದಿ: ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

    ರಾಯಭಾರ ಕಚೇರಿ ನೀಡಿರುವ ಮಾಹಿತಿಯಲ್ಲಿ, ಸೆಪ್ಟೆಂಬರ್ 18ರಂದು ಕಚೇರಿಯ ಸದಸ್ಯರೊಬ್ಬರು ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದೆ.

    ಕುಟುಂಬದ ಗೌಪ್ಯತೆಯ ಸಲುವಾಗಿ ಮೃತರ ಬಗ್ಗೆ ಹೆಚ್ಚುವರಿ ವಿವರಗಳನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದರೋಡೆ ಗ್ಯಾಂಗ್ ಜೊತೆ ಕೈಜೋಡಿಸಿ 9 ಲಕ್ಷ ಪಡೆದಿದ್ದ ಪೊಲೀಸ್‌ – ಹೆಡ್ ಕಾನ್ಸ್‌ಟೇಬಲ್ ಸೇರಿ 7 ಮಂದಿ ಅರೆಸ್ಟ್‌

  • ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    – ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌

    ನವದೆಹಲಿ/ನಾಮ್ ಪೆನ್: ಉದ್ಯೋಗ ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ (Cambodia) ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಇಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

    ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ರಕ್ಷಣೆ ಭಾರತೀಯರನ್ನ (Indians Rescued) ಮಾಡಿದ್ದಾರೆ. ಅಲ್ಲದೇ ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ.

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ (Job Scam )ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅವರಿಂದು ಸ್ವದೇಶಕ್ಕೆ ಮರಳಿದ್ದಾರೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದೆ.

    ಜೊತೆಗೆ ಅವರು ಕಾಂಬೋಡಿಯಾದ ಸಿಹಾನೌಕ್ವಿಲ್ಲೆಯಿಂದ ನೋಮ್ ಪೆನ್‌ಗೆ ಕಳುಹಿಸಲು ಅಗತ್ಯ ದಾಖಲೆಗಳು ಹಾಗೂ ಇತರೇ ವ್ಯವಸ್ಥೆಗಳ ಸಹಾಯವನ್ನೂ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಉದ್ಯೋಗ ಪಡೆಯುವ ಆಸೆಯಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದವರನ್ನ ರಕ್ಷಿಸಿ ಸಿಹಾನೌಕ್ವಿಲ್ಲೆ ನಿಂದ ನೋಮ್‌ಪೆನ್‌ಗೆ ಕಳುಹಿಸಲಾಗಿತ್ತು. ಬಳಿಕ ಪ್ರಯಾಣದ ದಾಖಲೆಗಳು ಸೇರಿದಂತೆ ಎಲ್ಲ ಸಹಾಯವನ್ನೂ ಒದಗಿಸಿಕೊಟ್ಟಿದೆ ಎಂದು ಕಚೇರಿ ತಿಳಿಸಿದೆ.

    ಇದೇ ವೇಳೆ ಕಾಂಬೋಡಿಯಾದಲ್ಲಿ ಉದ್ಯೋಗ ಹುಡುಕುತ್ತಿರುವ ಭಾರತೀಯರು ಅನಧಿಕೃತ ಏಜೆಂಟ್‌ಗಳಿಗೆ ಬಲಿಯಾಗದಂತೆ ರಾಯಬಾರಿ ಕಚೇರಿ ಎಚ್ಚರಿಕೆ ನೀಡಿದೆ.

  • ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಮಾಸ್ಕೋ: ವಂಚನೆಯ ಜಾಲಕ್ಕೆ ಸಿಕ್ಕಿ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ (Wagner Army) ಸಿಲುಕಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾನೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ಅಧಿಕಾರಿಗಳು ದೃಢಪಡಿಸಿದ್ದಾರೆ.

    ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ (Ukraine War) ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ್ದಾನೆ‌ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

    ಯುವಕನನ್ನು ಮೊಹಮ್ಮದ್‌ ಅಸ್ಫಾನ್‌ (Mohammed Afsan )ಎಂದು ಗುರುತಿಸಲಾಗಿದೆ. ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

    ಕುಟುಂಬದೊಂದಿಗೆ ಸಂಪರ್ಕ ಸಾಧಿಸುತ್ತಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಲು ಸಕಲ ತಯಾರಿ ನಡೆಸುತ್ತಿದ್ದೇವೆ. ಅಸ್ಫಾನ್‌ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯ (Russia Army) ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇನ್ನುಳಿದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಅಸ್ಫಾನ್‌ ಡೇಂಜರ್‌ ಸೇನೆಯಲ್ಲಿ ಸಿಲುಕಿದ್ದು ಹೇಗೆ?
    ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಹೈದರಾಬಾದಿನ ಮೂಲದ ಯುವಕ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ ಸಿಲುಕಿದ್ದರು. ತೆಲಂಗಾಣ, ಗುಜರಾತ್, ಕರ್ನಾಟಕ (ಕಲಬುರಗಿ ಜಿಲ್ಲೆಯ ಮೂವರು), ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ 20ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿ ಸಿಲುಕಿದ್ದಾರೆ. ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೋವೊಂದರಲ್ಲಿ ಹೇಳಿಕೊಂಡಿದ್ದರು. ಈ ವೀಡಿಯೋ ಬೆಳಕಿಗೆ ಬರ್ತಿದ್ದಂತೆ ಓವೈಸಿ (Asaduddin Owaisi) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಯುವಕರನ್ನು ರಕ್ಷಿಸುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಗಗನಯಾನ ಸಾಹಸಿಗರಿಗೆ ಪೌಷ್ಠಿಕ ಆಹಾರ; ಇದು ಎಲ್ಲಿಂದ – ಹೇಗೆ ತಯಾರಾಗುತ್ತೆ ಗೊತ್ತಾ?

  • ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ – 5 ತಿಂಗಳಲ್ಲಿ ಖಲಿಸ್ತಾನಿ ಬೆಂಬಲಿಗರ 2ನೇ ದಾಳಿ

    ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ – 5 ತಿಂಗಳಲ್ಲಿ ಖಲಿಸ್ತಾನಿ ಬೆಂಬಲಿಗರ 2ನೇ ದಾಳಿ

    ವಾಷಿಂಗ್ಟನ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ (San Francisco) ಭಾರತೀಯ ರಾಯಭಾರ ಕಚೇರಿಗೆ (Indian Consulate) ಖಲಿಸ್ತಾನಿ ಬೆಂಬಲಿಗರು (Khalistani Supporters) ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಭಾನುವಾರ ಬೆಳಗ್ಗಿನ ಜಾವ 1:30-2:30 ರ ನಡುವೆ ಬೆಂಕಿ ಹಚ್ಚಲಾಗಿದೆ. ಕೇವಲ 5 ತಿಂಗಳ ಅವಧಿಯಲ್ಲಿ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಬೆಂಬಲಿಗರು ನಡೆಸಿರುವ 2ನೇ ದಾಳಿಯಾಗಿದೆ.

    ಸ್ಥಳೀಯ ಮಾಧ್ಯಮಗಳು ಹಂಚಿಕೊಂಡಿರುವ ವೀಡಿಯೋದಲ್ಲಿ ರಾಯಭಾರ ಕಚೇರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಈ ವೀಡಿಯೋವನ್ನು ಖಲಿಸ್ತಾನಿ ಬೆಂಬಲಿಗರು ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದೆ. ಇದನ್ನೂ ಓದಿ: ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸಿ – ತಾಲಿಬಾನ್‌ ಸರ್ಕಾರ

    ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್, ವಿಧ್ವಂಸಕತೆ ಹಾಗೂ ಬೆಂಕಿ ಹಚ್ಚುವ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ. ಅಮೆರಿಕದಲ್ಲಿ ರಾಜತಾಂತ್ರಿಕ ಸೌಲಭ್ಯ ಹಾಗೂ ವಿದೇಶೀ ರಾಜತಾಂತ್ರಿಕರ ವಿರುದ್ಧ ಇಂತಹ ವಿಧ್ವಂಸಕತೆ ಹಾಗೂ ಹಿಂಸಾಚಾರ ಎಸಗುವುದು ಕ್ರಿಮಿನಲ್ ಅಪರಾಧ ಎಂದು ಹೇಳಿದ್ದಾರೆ.

    ಈ ಹಿಂದೆ ಮಾರ್ಚ್‌ನಲ್ಲಿ ಪಂಜಾಬ್ ಪೊಲೀಸರು ಭಾರತದಲ್ಲಿ ಅಮೃತ್‌ಪಾಲ್ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದಾಗ ಖಲಿಸ್ತಾನಿ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ರಾತ್ರಿ ಕನ್ನಡಿಗರ ಮೃತದೇಹ ಬೆಂಗಳೂರಿಗೆ – ಕನ್ನಡಿಗರ ಗುರುತು ಹಚ್ಚಿದ್ದ ಯುವಕರು ವಾಪಸ್

    ಇಂದು ರಾತ್ರಿ ಕನ್ನಡಿಗರ ಮೃತದೇಹ ಬೆಂಗಳೂರಿಗೆ – ಕನ್ನಡಿಗರ ಗುರುತು ಹಚ್ಚಿದ್ದ ಯುವಕರು ವಾಪಸ್

    ಬೆಂಗಳೂರು: ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಕನ್ನಡಿಗರ ಮೃತದೇಹ ಇಂದು ಮಧ್ಯರಾತ್ರಿ ಬೆಂಗಳೂರಿಗೆ ರವಾನೆಯಾಗುವ ಸಂಭವವಿದ್ದು, ವಿಶೇಷ ವಿಮಾನದಲ್ಲಿ ಕೊಲಂಬೋದಿಂದ ಮೃತದೇಹಗಳನ್ನು ತರಲಾಗುತ್ತಿದೆ. ಈ ಬಗ್ಗೆ ಕೊಲಂಬೋದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

    ಇತ್ತ ಶ್ರೀಲಂಕಾದ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಕಂಗಾಲಾಗಿದ್ದ ಕನ್ನಡಿಗರು ಒಬ್ಬೊಬ್ಬರಾಗಿ ತಾಯ್ನಾಡಿನತ್ತ ಆಗಮಿಸುತ್ತಿದ್ದಾರೆ. ಶ್ರೀಲಂಕಾ ಬಾಂಬ್ ಬ್ಲಾಸ್ಟ್ ನಂತರ ಘಟನೆಯಲ್ಲಿ ಮೃತರಾಗಿದ್ದ ಕನ್ನಡಿಗರ ಮೃತದೇಹದ ಗುರುತು ಹಚ್ಚಲು ಬೆಂಗಳೂರಿನ ಯುವಕರು ನೆರವಾಗಿದ್ದರು. ಇಂಡಿಗೋ ವಿಮಾನದಲ್ಲಿ ಕೊಲಂಬೋದಿಂದ ಸುಮಾರು 15 ಕ್ಕೂ ಹೆಚ್ಚು ಮಂದಿ ಕನ್ನಡಿಗರು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

    ಬೆಂಗಳೂರಿನ ಬಗಲಗುಂಟೆ ನಿವಾಸಿಗಳಾದ ನವೀನ್, ಪ್ರವೀಣ್, ಕಿಟ್ಟಿ ಸೇರಿ ಮೂವರು ಸ್ನೇಹಿತರು ಕೂಡ ರಾಜ್ಯಕ್ಕೆ ವಾಪಸ್ಸಾಗಿದ್ದು, ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಫೋಟದ ಸಂದರ್ಭದಲ್ಲಿ ಶಾಂಗ್ರಿಲಾ ಹೋಟೆಲ್ ಪಕ್ಕದಲ್ಲೇ ಉಳಿದುಕೊಂಡಿದ್ದ ಇವರು ಸ್ಫೋಟಕ್ಕೆ 20 ನಿಮಿಷ ಮೊದಲು ಹೊರಗೆ ತಿರುಗಾಡಲು ತೆರಳಿದ್ದರಂತೆ. ತುಸು ದೂರ ಸಾಗುತ್ತಿದ್ದಂತೆ ಡ್ರೈವರ್ ಗೆ ಕರೆ ಬಂದು ಮಾಹಿತಿ ಸಿಕ್ಕಿದ್ದು ಹಿಂದಿರುಗಿ ಬರುವಷ್ಟರಲ್ಲಿ ಎಲ್ಲೆಡೆ ಸ್ಫೋಟದ ದೃಶ್ಯ ಕಂಡು ಆತಂಕ ಮನೆ ಮಾಡಿತ್ತು ಎಂದು ಕರಾಳ ನೆನಪನ್ನು ಹಂಚಿಕೊಂಡಿದ್ದಾರೆ.

    ಭಾರತ ರಾಯಭಾರ ಕಚೇರಿಯ ಸಹಾಯದೊಂದಿಗೆ ಮರಳಿ ಹೋಟೆಲ್ ಗೆ ಬಂದಿದ್ದು, ಘಟನೆ ಬಳಿಕ ಸಾಕಷ್ಟು ಭಯವಾಗಿತ್ತು. ಭಾರತಕ್ಕೆ ಮರಳಿದರೆ ಸಾಕು ಎನ್ನುವಂತೆ ಆಗಿತ್ತು. ಮನೆಯವರೂ ಸಾಕಷ್ಟು ಭಯಗೊಂಡಿದ್ದರು ಎಂದು ಸ್ಫೋಟದ ತೀವ್ರತೆಯ ಬಗ್ಗೆ ಮಾಹಿತಿ ನೀಡಿದರು.