Tag: ಭಾರತೀಯ ಹವಾಮಾನ ಇಲಾಖೆ

  • ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

    ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

    – ಗುಜರಾತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

    ನವದೆಹಲಿ: ರಾಜಸ್ಥಾನ, ಒಡಿಶಾ, ಗುಜರಾತ್‌ (Gujarat) ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಈಗಾಗಲೇ ಗುಜರಾತ್‌ಗೆ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ ಮತ್ತು ಕಚ್‌ ಪ್ರದೇಶದಲ್ಲಿ ಸೆಪ್ಟೆಂಬರ್ 6 ಮತ್ತು 7ರ ವರೆಗೆ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು

    ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ದೌಸಾ ಜಿಲ್ಲೆಯ ಸಿಕ್ರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 104 ಮಿ.ಮೀ ಮಳೆಯಾಗಿದೆ. ಅಲ್ಲದೇ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

    ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಯಾವುದೇ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಆದ್ರೆ ಗುರುಗ್ರಾಮ್ ಮತ್ತು ಫರಿದಾಬಾದ್‌ಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ನಗರಗಳಲ್ಲಿ ಹಗುರ ಮಳೆಯಾಗುವ ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲೂ ಸ್ವಲ್ಪ ಪ್ರಮಾಣದ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಗೋವಾ | ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

  • ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

    ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

    ದೇಶದ ಹಲವು ರಾಜ್ಯಗಳಲ್ಲಿ ಅವಧಿಗೂ ಮುನ್ನವೇ ಮುಂಗಾರು ಆರಂಭವಾಗಿದ್ದು, ದಕ್ಷಿಣದ ಕೇರಳದಿಂದ (Kerala) ಈಶಾನ್ಯ ರಾಜ್ಯಗಳವರೆಗೂ (Northeast States) ವರುಣ ಅಬ್ಬರಿಸುತ್ತಿದ್ದಾನೆ.

    ಈಶಾನ್ಯ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಲ್ಲೋಲ ಕಲ್ಲೋಲವಾಗಿದ್ದು, ಅವಧಿಪೂರ್ವ ಮುಂಗಾರು ಹೊಡೆತಕ್ಕೆ ಅಸ್ಸಾಂ, ಸಿಕ್ಕಿಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಅರುಣಾಚಲ ಪ್ರದೇಶ ರಾಜ್ಯಗಳು ಕಂಗಾಲಾಗಿವೆ.ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

    ಕಳೆದೆರೆಡು ದಿನಗಳಲ್ಲಿ ಮಳೆಯಾರ್ಭಟಕ್ಕೆ ಭೂಕುಸಿತ, ಹಠಾತ್ ಪ್ರವಾಹ ಉಂಟಾಗಿ ಜಲಪ್ರಳಯವೇ ಸಂಭವಿಸಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಅಸ್ಸಾಂನಲ್ಲಿ 9, ಅರುಣಾಚಲ ಪ್ರದೇಶದಲ್ಲಿ 9, ಮೇಘಾಲಯದಲ್ಲಿ 7 ಮತ್ತು ಮಿಜೋರಾಂನಲ್ಲಿ 6 ಸಾವನ್ನಪ್ಪಿದ್ದು, ನಾಗಾಲ್ಯಾಂಡ್‌ನಲ್ಲಿ ಒಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ.

    ರಸ್ತೆಗಳು ಹಾಳಾಗಿ, ಮನೆಗಳು ಕುಸಿದು ಜನರಿಗೆ ದಿಕ್ಕು ತೋಚದಂತಾಗಿದೆ. ನದಿಗಳು ಅಪಾಯಮಟ್ಟ ಮೀರಿ ಭೋರ್ಗರೆಯುತ್ತಿವೆ. ಅಸ್ಸಾಂನ 12 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 78,000ಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಎನ್‌ಡಿಆರ್‌ಎಫ್‌ನಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಅರುಣಾಚಲ ಪ್ರದೇಶದಲ್ಲಿ ಮಳೆರಾಯ ನರಕವನ್ನೇ ಸೃಷ್ಟಿಸಿದ್ದು, ಗುಡ್ಡಕುಸಿತದಿಂದ ಕೆಸರಿನಲ್ಲಿಯೇ ಮೃತದೇಹಗಳು ಹುದುಗಿವೆ. ಸಿಕ್ಕಿಂನಲ್ಲಿ ಮಳೆ, ಪ್ರವಾಹದಿಂದ ರಸ್ತೆ ಸಂಪರ್ಕ ಬಂದ್ ಆಗಿದ್ದು, 1,500 ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಈ ಕುರಿತು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದ್ದು, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ. ಇನ್ನೂ ಕೇರಳಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕಾಸರಗೋಡಿನಲ್ಲಿ ಮಳೆ ಹೆಚ್ಚಾಗುತ್ತಿದೆ. ಇದರಿಂದಾಗಿ ಮಧೂರು (Madhur) ಶ್ರೀಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.ಇದನ್ನೂ ಓದಿ: ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

  • ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ

    ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದ್ದು, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು

  • ಏನಿದು ಮಿಷನ್ ಮೌಸಮ್? ಇದು ಹೇಗೆ ಕಾರ್ಯನಿವಹಿಸುತ್ತದೆ?

    ಏನಿದು ಮಿಷನ್ ಮೌಸಮ್? ಇದು ಹೇಗೆ ಕಾರ್ಯನಿವಹಿಸುತ್ತದೆ?

    ವಾಮಾನದಿಂದಾಗಿ ಪ್ರಪಂಚದಾದ್ಯಂತ ಅನಿರೀಕ್ಷಿತವಾದ ಹಲವಾರು ಬದಲಾವಣೆಗಳನ್ನು ಉಂಟುಮಾಡುತ್ತದೆ. ಹೀಗಾಗಿ ನಿಖರವಾದ ಹವಾಮಾನ ಮುನ್ಸೂಚನೆಗಾಗಿ ಕೃತಕ ಬುದ್ಧಿಮತ್ತೆಯಂತಹ ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಂಡು ಕೇಂದ್ರ ಸರ್ಕಾರ `ಮಿಷನ್ ಮೌಸಮ್’ ಎಂಬ ಸಾಧನವನ್ನು ತರಲು ಸಿದ್ಧವಾಗಿದೆ.

    ಭಾರತೀಯ ಹವಾಮಾನ ಇಲಾಖೆ 1875 ಜ.15 ರಂದು ಪ್ರಾರಂಭವಾಯಿತು. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಐಎಂಡಿಯ 150ನೇ ಸಂಭ್ರಮಾಚರಣೆಯಲ್ಲಿ `ಮಿಷನ್ ಮೌಸಮ್’ ಅನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಐದು ವರ್ಷಗಳಲ್ಲಿ 2 ಸಾವಿರ ಕೋಟಿ ರೂ.ಗಳಿಂದ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ.

    ಹವಾಮಾನ ಪರಿಸ್ಥಿತಿ, ಪ್ರವಾಹ, ಚಂಡಮಾರುತ, ಅತೀವೃಷ್ಠಿ, ಅನಾವೃಷ್ಠಿ, ಗುಡುಗು ಸೇರಿದಂತೆ ಇನ್ನಿತರ ಮುನ್ಸೂಚನೆ ನೀಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಮೂಲಕ ಕಳೆದ 10 ದಿನಗಳ ಹಾಗೂ ಮುಂದಿನ ಹತ್ತು ದಿನಗಳ ಹವಾಮಾನ ಹೇಗಿರಲಿದೆ ಎಂದು ತಿಳಿಯಬಹುದು. ಜೊತೆಗೆ ಭಾರತವನ್ನು ಕ್ಲೈಮೇಟ್ ಸ್ಮಾರ್ಟ್ ರಾಷ್ಟ್ರವಾಗಿಸಲು ಇದನ್ನು ಜಾರಿಗೆ ತರಲಾಗಿದೆ.

    ಮೀನುಗಾರರು, ರೈತರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದೆ. ಮುಂಚೆ ಶೇ.10 ರಷ್ಟು ರೈತರು ಹಾಗೂ ಮೀನುಗಾರರು ಹವಾಮಾನಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯುತ್ತಿದ್ದರು. ಆದರೆ ಸದ್ಯ ಈ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು, ಶೇ.50 ರಷ್ಟು ಜನ ಸ್ಮಾರ್ಟ್ಫೋನ್, ವಾಟ್ಸಪ್‌ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ.

    ಇದರ ಸ್ಥಾಪನೆ ಹೇಗೆ?
    ಮೊದಲ ಹಂತದ ಭಾಗವಾಗಿ ಸುಮಾರು 70 ಡಾಪ್ಲರ್ ರಾಡಾರ್‌ಗಳು, ಸೂಪರ್ ಕಂಪ್ಯೂಟರ್‌ಗಳು, 10 ವಿಂಡ್ ಪ್ರೊಫೈಲರ್‌ಗಳು ಮತ್ತು 10 ರೇಡಿಯೊಮೀಟರ್‌ಗಳನ್ನು ಮಾರ್ಚ್ 2026ರವರೆಗೆ ಅಳವಡಿಸಲಾಗುವುದು. ಇಲ್ಲಿಯವರೆಗೆ ಭಾರತೀಯ ಹವಾಮಾನ ಇಲಾಖೆಯು 39 ಡಾಪ್ಲರ್ ರಾಡಾರ್‌ಗಳನ್ನು ಸ್ಥಾಪಿಸಿದೆ. ಡಾಪ್ಲರ್ ರಾಡಾರ್‌ಗಳು ಎಂದರೆ ದೂರದಲ್ಲಿನ ಹವಾಮಾನ ಕುರಿತು ದತ್ತಾಂಶ ನೀಡುತ್ತದೆ. ಇದು ಹವಾಮಾನದ ಚಲನೆಯ ಮಾಹಿತಿಯನ್ನು ಒದಗಿಸುತ್ತದೆ.

    ಇನ್ನೂ ಎರಡನೇ ಹಂತದಲ್ಲಿ, ವೀಕ್ಷಣಾಲಯಗಳನ್ನು ಮತ್ತಷ್ಟು ಬಲಪಡಿಸಲು ಉಪಗ್ರಹಗಳು ಮತ್ತು ವಿಮಾನಗಳನ್ನು ಬಳಸಲಾಗುತ್ತದೆ. ತಾಪಮಾನ ಹೆಚ್ಚಾದಂತೆ ಮೋಡಗಳಲ್ಲಿ ನಡೆಯುವ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಲು ಪುಣೆಯ ಭಾರತೀಯ ಹವಾಮಾನ ಸಂಸ್ಥೆಯಲ್ಲಿ ಕ್ಲೌಡ್ ಚೇಂಬರ್ ಸ್ಥಾಪಿಸಲಾಗುವುದು. ಇದು ಮುಂದಿನ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಐದು ವರ್ಷಗಳಲ್ಲಿ ಎರಡು ಹಂತಗಳಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

    ಒಟ್ಟಾರೆಯಾಗಿ ಮಧ್ಯಮ ವ್ಯಾಪ್ತಿಯ ಹವಾಮಾನ ಮುನ್ಸೂಚನೆಗಳ ನಿಖರತೆಯನ್ನು ಶೇ.5 ರಿಂದ 10ಕ್ಕೆ ಹೆಚ್ಚಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಜೊತೆಗೆ ಇದು ಗ್ರಾಮೀಣ ಪ್ರದೇಶಗಳಿಗೆ ಹವಾಮಾನ ಮುನ್ಸೂಚನೆಯನ್ನು ನೀಡುತ್ತದೆ. ಕೃಷಿಗೆ ಅಗತ್ಯವಾದ, ನಿಖರವಾದ ಮುನ್ಸೂಚನೆಗಳನ್ನು ಒದಗಿಸುವ ನಿರೀಕ್ಷೆಯಿದೆ.

    ಇನ್‌ಸ್ಟಂಟ್ ಎಸ್ಟಿಮೇಟ್ಸ್ ಪ್ರಕಾರ ಸದ್ಯ ಮೂರು ಗಂಟೆಗಳ ಮೊದಲಿನ ಹವಾಮಾನ ಪರಿಸ್ಥಿತಿಯನ್ನು ತಿಳಿಸುತ್ತದೆ. ಈ ಯೋಜನೆಯ ಮೂಲಕ ಒಂದು ಗಂಟೆಗೆ ಇಳಿಸುವ ನಿರೀಕ್ಷೆಯನ್ನು ಹೊಂದಿದೆ. ಭಾರತೀಯ ಹವಾಮಾನ ಇಲಾಖೆ, ಉಷ್ಣವಲಯದ ಹವಾಮಾನ ಶಾಸ್ತ್ರದ ಕೇಂದ್ರ ಮತ್ತು ಮಧ್ಯಮ ಶ್ರೇಣಿಯ ಹವಾಮಾನ ಮುನ್ಸೂಚನೆಯ ಕೇಂದ್ರ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತವೆ.

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ

    – ರಾಜ್ಯದ ಕೆಲವು ಜಿಲ್ಲೆಗಳಿಗೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳ ಕೊಲ್ಲಿಯ (Bay Of Bengal) ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಸಿಲಿಕಾನ್ ಸಿಟಿಯಲ್ಲಿ (Silicon City) ಬೆಳ್ಳಂಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Indian Meteorological Department) ನೀಡಿದೆ.

    ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 13-11-2024

    ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಇಂದು (ನ.13) ಯೆಲ್ಲೋ ಅಲರ್ಟ್ ಘೋಷಿಸಿದೆ ಹಾಗೂ ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ (ನ.14) ಅಲರ್ಟ್ ಘೋಷಿಸಿದೆ.

    ಇನ್ನೂ ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ದಿನ ಭವಿಷ್ಯ: 13-11-2024

  • ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಬೆಂಗಳೂರು: ಶನಿವಾರ ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು (Bengaluru) ತತ್ತರಿಸಿ ಹೋಗಿದ್ದು, ಅತೀ ಹೆಚ್ಚು ಮಳೆ ದಾಖಲಾಗಿದೆ.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣ ಅಬ್ಬರಿಸಿದ್ದು, ಒಳಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಜೊತೆಗೆ ಇಂದು (ಅ.6) ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological Department) ನೀಡಿದೆ.ಇದನ್ನೂ ಓದಿ: Bengaluru Rains | 49 ಪ್ರದೇಶಗಳಲ್ಲಿ ಮಳೆ ಆರ್ಭಟ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್!

    ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.

    ಜಿಲ್ಲಾವಾರು ಗರಿಷ್ಠ ಮಳೆ:
    ಬೆಂಗಳೂರು ನಗರ – 113 ಮಿ.ಮೀ
    ಬೆಂಗಳೂರು ಗ್ರಾಮಾಂತರ – 74 ಮಿ.ಮೀ
    ರಾಮನಗರ – 110 ಮಿ.ಮೀ
    ಮಂಡ್ಯ – 87 ಮಿ.ಮೀ
    ಕೋಲಾರ – 84 ಮಿ.ಮೀ
    ಉಡುಪಿ – 69 ಮಿ.ಮೀ
    ಧಾರವಾಡ – 67 ಮಿ.ಮೀ
    ದಕ್ಷಿಣ ಕನ್ನಡ – 66 ಮಿ.ಮೀ
    ಚಾಮರಾಜನಗರ – 66 ಮಿ.ಮೀ
    ತುಮಕೂರು – 65 ಮಿ.ಮೀ
    ಗದಗ- 63 ಮಿ.ಮೀ
    ಹಾಸನ – 64 ಮಿ.ಮೀ
    ಕೊಡಗು – 77 ಮಿ.ಮೀ
    ಬೆಳಗಾವಿ – 59 ಮಿ.ಮೀ
    ಹಾವೇರಿ- 52 ಮಿ.ಮೀ
    ಉತ್ತರ ಕನ್ನಡ – 47 ಮಿ.ಮೀ
    ಮೈಸೂರು – 44 ಮಿ.ಮೀ
    ವಿಜಯನಗರ – 40 ಮಿ.ಮೀ
    ಚಿಕ್ಕಮಗಳೂರು- 33 ಮಿ.ಮೀ
    ಬೀದರ್ – 30 ಮಿ.ಮೀ
    ಕೊಪ್ಪಳ – 24 ಮಿ.ಮೀ
    ವಿಜಯಪುರ – 20 ಮಿ.ಮೀ
    ವಿಜಯನಗರ – 20 ಮಿ.ಮೀ
    ಚಿತ್ರದುರ್ಗ – 20 ಮಿ.ಮೀ ಇದನ್ನೂ ಓದಿ: ಇಂದು ಸಹ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ

    ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ

    ಪುಣೆ: ಮುಂಬೈನಲ್ಲಿ (Mumbai) ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ.

    ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಯಾಣಿಕರು ರಸ್ತೆಗಳಲ್ಲಿ, ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಸಿಕ್ಕಿಹಾಕಿಕೊಂಡರು. ಭಾರೀ ಮಳೆಗೆ ಬಲಿಯಾದವರಲ್ಲಿ 45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ನುಲ್ಲಾದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣ್‌ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ (Khopoli) ಜೆನಿತ್ ಜಲಪಾತದ (Zenith Waterfall) ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕ್ಯಾಂಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

    ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಇದನ್ನೂ ಓದಿ: ಮುಡಾ ಹಗರಣ ಸಂಕಷ್ಟ; ಹೈಕಮಾಂಡ್‌ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ

    ಪುಣೆಯ (Pune) ಶಿವಾಜಿನಗರದಲ್ಲಿ ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ ದಾಖಲಾಗಿತ್ತು. ಇದರಿಂದಾಗಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿ, ಮುಂದಿನ 24 ಗಂಟೆಗಳಲ್ಲಿ ತ್ರೀವ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿತ್ತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಮಳೆಯ ತೀವ್ರತೆ ಹೆಚ್ಚಾಗಿದ್ದರಿಂದಾಗಿ ಪುಣೆ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಥೈಲ್ಯಾಂಡ್‌ ಗ್ರೀನ್‌ ಸಿಗ್ನಲ್‌ – ಸಲಿಂಗ ವಿವಾಹ ಮಸೂದೆಗೆ ಸಹಿ ಹಾಕಿದ ರಾಜ

  • ಪುಣೆ ನಗರದಲ್ಲಿ ವರುಣಾರ್ಭಟ, ರಸ್ತೆಗಳು ಜಲಾವೃತ – ಜನಜೀವನ ಅಸ್ತವ್ಯಸ್ತ

    ಪುಣೆ ನಗರದಲ್ಲಿ ವರುಣಾರ್ಭಟ, ರಸ್ತೆಗಳು ಜಲಾವೃತ – ಜನಜೀವನ ಅಸ್ತವ್ಯಸ್ತ

    ಮುಂಬೈ: ಪುಣೆ (Pune) ನಗರದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (Indian Meteorological Department) ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.

    20 ದಿನಗಳಿಂದ ಶುಷ್ಕ ಹವಾಮಾನದ ವಾತಾವರಣದಿಂದ ಕೂಡಿದ್ದ ಪುಣೆ ನಗರವು ಮೂರು ದಿನಗಳಿಂದ ದಿಢೀರ್ ಮಳೆಯಿಂದ ಕೂಡಿದೆ. ನಗರ ಸೇರಿದಂತೆ ಘಾಟ್ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದೆ.ಇದನ್ನೂ ಓದಿ: ನಮ್ರತಾ ಗೌಡ ಜೊತೆ ಕಿಶನ್ `ನವಿಲೇ’ ಡ್ಯಾನ್ಸ್

    ಪುಣೆಯ ಶಿವಾಜಿನಗರದಲ್ಲಿ (Shivaji Nagar) ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ ದಾಖಲಾಗಿತ್ತು. ಇದರಿಂದಾಗಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿ, ಮುಂದಿನ 24 ಗಂಟೆಗಳಲ್ಲಿ ತ್ರೀವ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿತ್ತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಮಳೆಯ ತೀವ್ರತೆ ಹೆಚ್ಚಾಗಿದ್ದರಿಂದಾಗಿ ಪುಣೆ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ.

    ಪುಣೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇದೀಗ ಸೆ.26 ರಂದು ಮಹಾರಾಷ್ಟ್ರ (Maharashtra)  ರಾಜ್ಯಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಲ್ಲಿನ ರಾಯಗಡ್ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

  • ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

    ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

    – ಮತ್ತಷ್ಟು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

    ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ (Orange Alert) ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಮೂನ್ಸೂಚನೆ ನೀಡಿದೆ.

    ಈಗಾಗಲೇ ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮುಂದಿನ ಕೆಲವು ಗಂಟೆಗಳ ಕಾಲ ರಾಷ್ಟ್ರರಾಜಧಾನಿಯ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ತಿಳಿಸಿದೆ.ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ನಗರದ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಸೂಚಿಸಿದೆ. ಮೋಡ ಕವಿದ ವಾತಾವರಣವಿರುವ ಕಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

    ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಲ್ ದಾಖಲಾಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: ನಾಗ್ಪುರ ಆಡಿ ಕಾರು ಅಪಘಾತ – ಬಾರ್‌ನಲ್ಲಿದ್ದ ಬಿಜೆಪಿ ಮುಖಂಡನ ಪುತ್ರನ ವೀಡಿಯೋ ಮಿಸ್ಸಿಂಗ್

    ದೆಹಲಿ ಸೇರಿದಂತೆ ಉತ್ತರಾಖಂಡ, ಉತ್ತರಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಮಿಜೋರಾಮ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    – ಉತ್ತರಪ್ರದೇಶ, ಉತ್ತರಾಖಂಡಕ್ಕೂ ಅಲರ್ಟ್

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

    ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಇದನ್ನೂ ಓದಿ: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

    ಹವಾಮಾನ ಇಲಾಖೆಯ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಭಾರೀ ಮಳೆಯಿಂದಾಗಿ ಮಥುರಾದ (Mathura) ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ.

    ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh)  ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD)  ತಿಳಿಸಿದೆ.ಇದನ್ನೂ ಓದಿ: ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಧ್ಯಪ್ರದೇಶ ವಾಯುವ್ಯ ಹಾಗೂ ಉತ್ತರ ಪ್ರದೇಶದ ನೈಋತ್ಯ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.