Tag: ಭಾರತೀಯ ಹವಾಮಾನ ಇಲಾಖೆ

  • ಗುಜರಾತ್‌ನಲ್ಲಿ ಮಳೆ ಅವಾಂತರ – 15 ಸಾವು, 20 ಸಾವಿರ ಮಂದಿ ಸ್ಥಳಾಂತರ

    ಗುಜರಾತ್‌ನಲ್ಲಿ ಮಳೆ ಅವಾಂತರ – 15 ಸಾವು, 20 ಸಾವಿರ ಮಂದಿ ಸ್ಥಳಾಂತರ

    ಅಹಮದಾಬಾದ್: ಗುಜರಾತ್‌ನಲ್ಲಿ (Gujarat) ಭಾರೀ ಮಳೆಯಿಂದಾಗಿ ಪ್ರವಾಹ (Flood) ಉಂಟಾಗಿದ್ದು, ಸುಮಾರು 15 ಜನ ಸಾವನ್ನಪ್ಪಿದ್ದಾರೆ. 23 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.

    ಸೋಮವಾರದಿಂದ ಗುಜರಾತ್ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಸುಮಾರು 15 ಜನ ಮೃತಪಟ್ಟಿದ್ದಾರೆ. 23,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಪ್ರವಾಹದಲ್ಲಿ ಸಿಲುಕಿರುವ 300ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.ಇದನ್ನೂ ಓದಿ: ದೀಪಿಕಾ ಪಡುಕೋಣೆ ಜೊತೆ ಕಾರು ಓಡಿಸೋ ಪೈಪೋಟಿಗಿಳಿದ ಸಾಹಸಗಳ ಬಗ್ಗೆ ವಿವರಿಸಿದ ಕಂಗನಾ

    ಗುಜರಾತ್ ಸರ್ಕಾರದ ಮಾಹಿತಿ ಪ್ರಕಾರ ಆನಂದ್ ಜಿಲ್ಲೆಯಲ್ಲಿ 6 ಜನ, ಗಾಂಧೀನಗರ ಮತ್ತು ಮಾಹಿಸಾಗರ್ ಜಿಲ್ಲೆಯಲ್ಲಿ 2 ಮತ್ತು ಮೋರ್ಬಿ, ವಡೋದರಾ, ಖೇಡಾ, ಭರುಚ್ ಮತ್ತು ಅಹಮದಾಬಾದ್ (Ahmedabad) ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದೆ ಎಂದು ತಿಳಿಸಿದೆ. ವಡೋದರಾ ಜಿಲ್ಲೆಯಿಂದ 45 ಮತ್ತು ದೇವಭೂಮಿ ದ್ವಾರಕಾ ಜಿಲ್ಲೆಯಿಂದ 30 ಗರ್ಭೀಣಿಯರಿಗೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ರಕ್ಷಣೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

    ರಾಜ್ಯದ ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೋರ್ಬಿ ಮತ್ತು ರಾಜ್‌ಕೋಟ್ ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗುವ ಲಕ್ಷಣಗಳಿದ್ದು ಜನರನ್ನು ರಕ್ಷಣೆ ಮಾಡಲು ಗುಜರಾತ್ ಸರ್ಕಾರ 6 ಭಾರತೀಯ ಸೇನಾ ತುಕಡಿಗಳನ್ನು ಕೋರಿದೆ. ಸದ್ಯಕ್ಕೆ 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು 22 ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉನ್ನತ ಮಟ್ಟದ ಸಭೆ ನಡೆಸಿ ಪ್ರವಾಹ ಮತ್ತು ಜನರ ರಕ್ಷಣೆ ಬಗ್ಗೆ ಚರ್ಚಿಸಿದ್ದಾರೆ. ಭಾರತೀಯ ಸೇನೆ, ವಾಯುಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ.ಇದನ್ನೂ ಓದಿ: ನಮ್ಮ ಆಸ್ತಿ ಬಗ್ಗೆ ದಾಖಲೆ ಇದ್ದರೆ ಬಹಿರಂಗ ಪಡಿಸಲಿ: ಛಲವಾದಿ ಮಾತಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ (CM Bhupendrabhai Patel) ಅವರಿಗೆ ಕರೆ ಮಾಡಿ ಪ್ರವಾಹ ಮತ್ತು ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

    ನರೇಂದ್ರ ಮೋದಿಯವರು ಕರೆ ಮಾಡಿ ಮಳೆ ಪ್ರವಾಹ ಮತ್ತು ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜನರ ರಕ್ಷಣೆಯ ಬಗ್ಗೆ ಕೆಲವೊಂದು ಸಲಹೆ ನೀಡಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದಿಂದ ರಕ್ಷಣೆಗೆ ಬೇಕಾಗುವ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಪ್ರಧಾನಿಯವರು ಗುಜರಾತ್ ಜನತೆಯನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಗುಜರಾತ್ ಜನರು ಪ್ರಕೃತಿ ವಿಕೋಪ ಅಥವಾ ಯಾವುದೆ ತೊಂದರೆಗೆ ಒಳಗಾದಾಗ ಅವರು ಯಾವಾಲೂ ಬೆಂಬಲ ನೀಡುತ್ತಾರೆ ಎಂದು ಸಿಎಂ ಭೂಪೇಂದ್ರ ಪಟೇಲ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಗುಜರಾತ್‌ನ ಕೆಲವೊಂದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮೀನುಗಾರರಿಗೆ ಕೆರೆ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.ಇದನ್ನೂ ಓದಿ: ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ

  • ದಶಕದ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆ ದಾಖಲು

    ದಶಕದ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆ ದಾಖಲು

    ನವದೆಹಲಿ: ಈ ವರ್ಷ ಆಗಸ್ಟ್ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗಿದೆ. ನಗರದಲ್ಲಿ ಈವರೆಗೂ 269.9 ಮಿಮೀ. ಮಳೆ ದಾಖಲಾಗಿದೆ. ಇದು ಕಳೆದ ಒಂದು ದಶಕದಲ್ಲೇ ಅತ್ಯಧಿಕ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ (Indian Meteorological Department) ಅಂಕಿ ಅಂಶಗಳು ತಿಳಿಸಿವೆ.

    ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇಲ್ಲಿಯವರೆಗೆ 269.9 ಮಿಮೀ. ಮಳೆಯಾಗಿದೆ, ಇದು ಆಗಸ್ಟ್ 2013 ರಲ್ಲಿ ದಾಖಲಾದ ಗರಿಷ್ಠವನ್ನು ಪ್ರಮಾಣವನ್ನು ಮೀರಿಸಿದೆ. ಇದರಿಂದಾಗಿ ದೆಹಲಿಯಲ್ಲಿ ನಿರೀಕ್ಷೆ ಮೀರಿದ ದಿನಗಳಿಂದ ಮಳೆಯು ಸುರಿಯುತ್ತಿದೆ.

    2.4 ಮಿ.ಮೀಗಿಂತ ಜಾಸ್ತಿ ಮಳೆಯಾದರೆ ಸಾಧಾರಣವಾಗಿ ಜಾಸ್ತಿ ಮಳೆ ಎಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಆ.11 ರಿಂದ ಆಗಸ್ಟ್ 22 ರವರೆಗೆ ಭಾರೀ ಮಳೆಯಾಗಿದೆ ಎಂದು ತಿಳಿಸಿದೆ. ಇದು ಈ ವರ್ಷದ ಮಾನ್ಸೂನ್‌ನ ಅಸಾಮಾನ್ಯ ತೀವ್ರತೆಯನ್ನು ಸೂಚಿಸುತ್ತದೆ. ಭಾರತೀಯ ಹವಾಮಾನ ಇಲಾಖೆ ದತ್ತಾಂಶದ ಪ್ರಕಾರ 2012 ಮತ್ತು 2013ರ ಆಗಸ್ಟ್ನಲ್ಲಿ ಕ್ರಮವಾಗಿ 378 ಮಿಮೀ. ಹಾಗೂ 321 ಮಿಮೀ ಮಳೆ ದಾಖಲಾಗಿತ್ತು.

    ಶುಕ್ರವಾರ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 36 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಂಡಿದೆ. ಹವಾಮಾನ ಇಲಾಖೆ ತಜ್ಞರು ಮುಂದಿನ ಏಳು ದಿನಗಳವರೆಗೆ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ (Weather Forecast) ನೀಡಿದ್ದಾರೆ.

  • ದಕ್ಷಿಣದಲ್ಲಿ ಮಳೆಯ ಅಬ್ಬರ – ಉತ್ತರ ಭಾರತದಲ್ಲಿ ನೆತ್ತಿ ಸುಡುವ ಬಿಸಿಲು; ಜನರಿಗೆ ಹೀಟ್‌ ಸ್ಟ್ರೋಕ್‌ ಆತಂಕ!

    ದಕ್ಷಿಣದಲ್ಲಿ ಮಳೆಯ ಅಬ್ಬರ – ಉತ್ತರ ಭಾರತದಲ್ಲಿ ನೆತ್ತಿ ಸುಡುವ ಬಿಸಿಲು; ಜನರಿಗೆ ಹೀಟ್‌ ಸ್ಟ್ರೋಕ್‌ ಆತಂಕ!

    ನವದೆಹಲಿ: ದಕ್ಷಿಣ ಭಾರತದಲ್ಲಿ (South India) ಎಲ್ಲೆಡೆ ಮಳೆಯ ಅಬ್ಬರ ಹೆಚ್ಚುತ್ತಿದ್ದರೆ, ಉತ್ತರ ಭಾರತದಲ್ಲಿ ಸೂರ್ಯನ ಶಾಖ ನೆತ್ತಿ ಸುಡುತ್ತಿದೆ. ಮುಂದಿನ ಐದು ದಿನಗಳ ಕಾಲ ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರೀ ಬಿಸಲು (Heatwave) ಕಂಡು ಬರಲಿದ್ದು ಗರಿಷ್ಠ ಉಷ್ಣಾಂಶ ತಲುಪಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಸಿದೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನವು 44 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು ಮೇ ತಿಂಗಳಲ್ಲಿ ಇದು ಗರಿಷ್ಠ ತಾಪಮಾನವಾಗಿದೆ. ದೆಹಲಿಯ (New Delhi) ನಜಾಫ್‌ಗಢ್ ಪ್ರದೇಶದಲ್ಲಿ 47.7 ಡಿಗ್ರಿ ತಾಪಮಾನ ವರದಿಯಾಗಿದ್ದು ಜನರನ್ನು ಹೈರಾಣಾಗಿಸಿದೆ. ಇದರ ಜೊತೆಗೆ ಮಂಗಳವಾರದಿಂದ ಶುಕ್ರವಾರದವರೆಗೆ ರಾಜಸ್ಥಾನದ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಪ್ರದೇಶದ (Uttar Pradesh) ಕೆಲವು ಪ್ರದೇಶಗಳಲ್ಲಿ ತೀವ್ರವಾದ ಶಾಖದ ವಾತಾವರಣ ಇರಲಿದೆ.

    ಈ ವಾರ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಗುಡ್ಡಗಾಡು ರಾಜ್ಯಗಳಾದ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳನ್ನು ಅಂದಾಜಿಸಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ವಿರುದ್ಧ ಕ್ರಮಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ

    ರಾಜಸ್ಥಾನದ ಶ್ರೀಗಂಗಾನಗರ ಮತ್ತು ಅಂತಾದಲ್ಲಿ 46.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದರೆ, ಹರಿಯಾಣದಲ್ಲಿ ನುಹ್ ಅತಿ ಹೆಚ್ಚು ಉಷ್ಣಾಂಶ 47.2 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಗರಿಷ್ಠ 44.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಫರೀದ್‌ಕೋಟ್ ಪಂಜಾಬ್‌ನಲ್ಲಿ 44 ಡಿಗ್ರಿ ಸೆಲ್ಸಿಯಸ್‌ನಲ್ಲಿ ಅತಿ ಹೆಚ್ಚು ಉಷ್ಣಾಂಶ ಹೊಂದಿದ್ದು, 43.9 ಡಿಗ್ರಿಗಳೊಂದಿಗೆ ಅಮೃತಸರ 2ನೇ ಸ್ಥಾನದಲ್ಲಿದೆ. ಮಧ್ಯಪ್ರದೇಶದ ದಾತಿಯಾದಲ್ಲಿ 47.5 ಡಿಗ್ರಿ, ಉತ್ತರ ಪ್ರದೇಶದ ಆಗ್ರಾದಲ್ಲಿ 47.7 ಡಿಗ್ರಿ ಮತ್ತು ಝಾನ್ಸಿಯಲ್ಲಿ 47.2 ಡಿಗ್ರಿ ದಾಖಲಾಗಿದೆ.

    ಬಿರುಸಿನ ಶಾಖದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಬಿಸಿಗಾಳಿ ಪೀಡಿತ ಪ್ರದೇಶಗಳಲ್ಲಿ ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಲು, ತಲೆಯನ್ನು ರಕ್ಷಿಸಲು ಟೋಪಿಗಳು ಮತ್ತು ಛತ್ರಿಗಳನ್ನು ಬಳಸುವಂತೆ ತಿಳಿಸಿದೆ. ಎಲ್ಲಾ ವಯಸ್ಸಿನ ಜನರಲ್ಲಿ ಹೀಟ್ ಸ್ಟ್ರೋಕ್‌ನ ಹೆಚ್ಚಿನ ಸಂಭವನೀಯತೆ ಇದ್ದು ಶಿಶುಗಳು, ವೃದ್ಧರು ಆರೋಗ್ಯ ಕಾಳಜಿವಹಿಸಲು ಹೇಳಿದೆ.

    ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಲಕ್ಷದ್ವೀಪದ ಕೆಲವು ಭಾಗಗಳಲ್ಲಿ ಮಂಗಳವಾರ (ಮೇ 21) ಭಾರೀ ಮಳೆಯಾಗಲಿದೆ ಎಂದು ಅದು ಹೇಳಿದೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂದಿನ 7 ದಿನಗಳವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದನ್ನೂ ಓದಿ: ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ! 

  • ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಈಶಾನ್ಯ ಮಾನ್ಸೂನ್ (Northeast Monsoon) ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳು ಮತ್ತು ಪುದುಚೇರಿಯ ಕಾರೈಕಲ್‌ಗೆ ಮಳೆಯ (Rain) ಎಚ್ಚರಿಕೆ ನೀಡಿದೆ.

    ತಮಿಳುನಾಡಿನ ಕಡಲೂರು, ಮೈಲಾಡುತುರೈ, ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳು ಮತ್ತು ಪುದುಚೇರಿಯ ಕಾರೈಕಲ್‌ನಲ್ಲಿ ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ತಮಿಳುನಾಡು ಮತ್ತು ಪುದುಚೇರಿಯ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ತಂಜಾವೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: 1 ಬಾರಿ ಬೀದಿ ನಾಯಿ ಕಚ್ಚಿದ್ರೆ ಕನಿಷ್ಟ 10 ಸಾವಿರ ಪರಿಹಾರ ಕೊಡಬೇಕು: ಹೈಕೋರ್ಟ್‌

    ಈ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿರಂತರ ಮಳೆಯಿಂದಾಗಿ ಚೆನ್ನೈನ ಶಾಲೆಗಳು ಮತ್ತು ತಿರುವಳ್ಳೂರು ಜಿಲ್ಲೆಯ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಮೋದಿ ವಿರುದ್ಧ ಹೇಳಿಕೆ – ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌

  • ಭಾರೀ ಮಳೆಗೆ ಹಿಮಾಚಲದಲ್ಲಿ 20 ಮಂದಿ ಬಲಿ – 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

    ಭಾರೀ ಮಳೆಗೆ ಹಿಮಾಚಲದಲ್ಲಿ 20 ಮಂದಿ ಬಲಿ – 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

    ಶಿಮ್ಲಾ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Rain) ಹಿಮಾಚಲ ಪ್ರದೇಶದಲ್ಲಿ (Himachal Pradesh) ಪ್ರವಾಹದ (Flood) ಸ್ಥಿತಿ ಉಂಟಾಗಿದೆ. ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. ಇದನ್ನೂ ಓದಿ: ಭಾರೀ ಮಳೆ.. ಹಿಮಪಾತ – ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್

    ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ನೂ ಮೂರೇ ಗಂಟೆಗಳಲ್ಲಿ ಬೆಂಗ್ಳೂರಿನಲ್ಲಿ ಭಾರೀ ಮಳೆ – ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ

    ಇನ್ನೂ ಮೂರೇ ಗಂಟೆಗಳಲ್ಲಿ ಬೆಂಗ್ಳೂರಿನಲ್ಲಿ ಭಾರೀ ಮಳೆ – ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ

    ಬೆಂಗಳೂರು: ನಗರದಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ (Heavy Rain) ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಸಿದೆ.

    ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ (Bengaluru City), ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ (Mandya) ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ. ಈಗಾಗಲೇ ಮಳೆ ಆವರಿಸಿದ್ದು, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಇದನ್ನೂ ಓದಿ: ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ

    ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದ್ದು, ಸೋಮವಾರದಿಂದ (ಮೇ 29) ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಕರಾವಳಿ, ದಕ್ಷಿಣ ಒಳನಾಡಿನ ಕೆಲವಡೆ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರ ವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಕೆಶಿ

    ಇನ್ನೂ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

  • ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ – ಯೆಲ್ಲೋ ಅಲರ್ಟ್ ಜಾರಿ

    ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ – ಯೆಲ್ಲೋ ಅಲರ್ಟ್ ಜಾರಿ

    ಶಿಮ್ಲಾ: ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಜನಪ್ರಿಯ ಪ್ರವಾಸಿ ತಾಣಗಳಾದ ಚಂಬಾ, ಸ್ಪಿತಿ, ಕುಲು, ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.

    ಕಳೆದ ವರ್ಷಕ್ಕೆ ಹೊಲೀಸಿ ನೋಡಿದರೆ ಈ ವರ್ಷ ರಾಜ್ಯದಲ್ಲಿ ಅತೀಯಾದ ಹಿಮಪಾತವಾಗಿದೆ. ಇನ್ನೂ ಮುಂಬರುವ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ನಗರದ ಐಎಮ್‍ಡಿ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಸುರೇಂದರ್ ಪಾಲ್ ಅವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ದುಬಾರಿ ಬೆಲೆಗೆ ಮನೆಯನ್ನು ಮಾರಾಟ ಮಾಡಿದ ಬಿಗ್ ಬಿ

    ಹವಾಮಾನ ಇಲಾಖೆಯು ಸೋಮವಾರ ತನ್ನ ಮುನ್ಸೂಚನೆಯಲ್ಲಿ ಭಾರೀ ಹಿಮಪಾತದಿಂದಾಗಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಶೀತದ ಅಲೆಗಳು ಬರುವ ನಿರೀಕ್ಷೆಯಿದ್ದು, ದೇಶದ ಬಹುತೇಕ ಭಾಗಗಳಲ್ಲಿ ಫೆಬ್ರವರಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಿರುತ್ತದೆ. ಆದರೆ ಪಂಜಾಬ್ ಮತ್ತು ಹರಿಯಾಣದಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ

    ಭಾರತದ ಪರ್ಯಾಯ ದ್ವೀಪದ ಪೂರ್ವ ಮತ್ತು ನೈಋತ್ಯ ಕರಾವಳಿ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ತಿಳಿಸಿದೆ.

    ಇದರ ಮಧ್ಯೆ ದೆಹಲಿಯಲ್ಲಿ ಬುಧವಾರ ಬೆಳಗ್ಗೆ ಮಂಜು ಕಾಣಿಸಿಕೊಂಡಿದ್ದು, ಕನಿಷ್ಠ ತಾಪಮಾನವು 11.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ರಾಜಧಾನಿಯ ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಅತ್ಯಂತ ಕಳಪೆ ವರ್ಗದಲ್ಲಿದೆ. ಏಕೆಂದರೆ ಬುಧವಾರ ಬೆಳಗ್ಗೆ 7.05 ಕ್ಕೆ ವಾಯು ಗುಣಮಟ್ಟ ಸೂಚ್ಯಂಕ 341 ಆಗಿತ್ತು. ಆದರೆ ದೆಹಲಿಯ ನೆರೆಯ ಪ್ರದೇಶಗಳಲ್ಲಿ ಫರಿದಾಬಾದ್ (283), ಗಾಜಿಯಾಬಾದ್ (356), ಗ್ರೇಟರ್ ನೋಯ್ಡಾ (216), ಗುರುಗ್ರಾಮ್ (274) ಮತ್ತು ನೋಯ್ಡಾ (327) ರಷ್ಟಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳು ತೋರಿಸಿವೆ.

  • ಭಾರೀ ಮಳೆಗೆ ಗೋಡೆ ಕುಸಿತ – ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವು

    ಭಾರೀ ಮಳೆಗೆ ಗೋಡೆ ಕುಸಿತ – ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವು

    ಚೆನ್ನೈ: ಭಾರೀ ಮಳೆಗೆ ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆರು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

    ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆನರ್ಂಪಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆ ಕುರಿತಂತೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೆನರ್ಂಪಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ಘಟನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಮರತಪಟ್ಟ 9 ಮಂದಿ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ

    ಕಳೆದೊಂದು ವಾರದಿಂದ ತಮಿಳುನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಶುಕ್ರವಾರವೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

  • ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ತಿರುವನಂತಪುರ: ಕೇರಳದ ಈಶಾನ್ಯ ಭಾಗದಲ್ಲಿ ಮುಂಗಾರಿನ ಚುರುಕುಗೊಂಡಿದ್ದು, ನವೆಂಬರ್ 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳದ ಆರು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಇಡುಕ್ಕಿ ಮತ್ತು ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

    ಭಾನುವಾರ ಕೂಡ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಎಂಬ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಮುಂದುವರಿದರೆ ಇಡುಕ್ಕಿ ಜಲಾಶಯದ ಚೆರುಥೋನಿ ಅಣೆಕಟ್ಟಿನ ಶೆಟರ್‌ಗಳನ್ನು ಶನಿವಾರ ಅಥವಾ ಭಾನುವಾರ ತೆರೆಯಲಾಗುವುದು ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

    ಇಡುಕ್ಕಿ ಅಣೆಕಟ್ಟಿನ ಕೆಳಭಾಗ ಮತ್ತು ಪೆರಿಯಾರ್ ನದಿಯ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಅಕ್ಟೋಬರ್ 1ರಿಂದ 12ರವರೆಗೂ ಕೇರಳದಲ್ಲಿ ಶೇಕಡಾ 86 ರಷ್ಟು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವೆಬ್ ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮದುವೆಗೆ ಆಗಮಿಸಿದ ಅತಿಥಿಗಳಿಗೆ ಊಟದ ಬಿಲ್ ಕೇಳಿದ ವಧು

  • ಕೊರೊನಾ ಭೀತಿ ಮಧ್ಯೆ ಶುಭಸುದ್ದಿ – ನೈಋತ್ಯದಲ್ಲಿ ಉತ್ತಮ ಮಳೆ

    ಕೊರೊನಾ ಭೀತಿ ಮಧ್ಯೆ ಶುಭಸುದ್ದಿ – ನೈಋತ್ಯದಲ್ಲಿ ಉತ್ತಮ ಮಳೆ

    ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಹವಾಮಾನ ಇಲಾಖೆ ಶುಭಸುದ್ದಿಯೊಂದನ್ನು ನೀಡಿದೆ. ಆಗಾಗ ಮಳೆಗೆ ಅಡ್ಡಿಪಡಿಸುತ್ತಿದ್ದ ‘ಎಲ್ ನಿನೋ’ ಪ್ರಭಾವದ ಬಗ್ಗೆ ಮಾಹಿತಿ ಲಭಿಸಿದ್ದು, ಈ ಬಾರಿ ನೈಋತ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

    ಭಾರತದಲ್ಲಿ ಸದ್ಯ ಕೊರೊನಾ ಅಟ್ಟಹಾಸಕ್ಕೆ ರೈತಾಪಿ ವರ್ಗ ನಷ್ಟ ಅನುಭವಿಸುತ್ತಿದೆ. ಭಾರತದಲ್ಲಿ ಮುಕ್ಕಾಲು ಭಾಗ ಜನರು ನೇರವಾಗಿ ಅಥವಾ ಪರೋಕ್ಷವಾಗಿ ಕೃಷಿಯನ್ನೇ ಅವಲಂಭಿಸಿದ್ದಾರೆ. ಹವಾಮಾನ ಇಲಾಖೆ ಏಪ್ರಿಲ್ ತಿಂಗಳ ಮಳೆ ಮುನ್ಸೂಚನೆ ಬಗ್ಗೆ ವರದಿ ಮಾಡಿದೆ. ಈ ಬಾರಿ ‘ಎಲ್ ನಿನೋ’ ಕಡಿಮೆ ಸಂಭವನೀಯತೆಯನ್ನು ಹೊಂದಿದೆ. ಇದು ಮಳೆಗೆ ಖಂಡಿತವಾಗಿಯೂ ಒಳ್ಳೆಯದು. ಆದರೆ ಸಂಕೀರ್ಣ ಹವಾಮಾನ ವ್ಯವಸ್ಥೆ ಇತರೆ ಹಲವು ಅಂಶಗಳ ಮೇಲೆ ಅವಲಂಭಿಸಿರುತ್ತದೆ ಎಂದು ಹವಾಮಾನಶಾಸ್ತ್ರಜ್ಞರು ಮಾಹಿತಿ ನೀಡಿದ್ದಾರೆ.

    ಒಂದು ವೇಳೆ ಜೂನ್-ಸೆಪ್ಟೆಂಬರ್ ತಿಂಗಳ ಮಳೆ ಸಾಮಾನ್ಯವಾಗಿದ್ದರೆ, ಈಗ ಲಾಕ್‍ಡೌನ್‍ನಿಂದ ಬೆಳೆ ಸರಬರಾಜು ಮಾಡಲು ಸಮಸ್ಯೆ ಎದುರಿಸುತ್ತಿರುವ ರೈತರು ಬೇಸಿಗೆ ಬಿತ್ತನೆಯಿಂದ ಉತ್ತಮ ಲಾಭವನ್ನು ನಿರೀಕ್ಷಿಸಬಹುದಾಗಿದೆ. ಇದು ಭಾರತದ ಆರ್ಥಿಕ ಮನೋಭಾವ ಮತ್ತು ದ್ವಿಚಕ್ರ ವಾಹನಗಳು, ಚಿನ್ನ, ಗ್ರಾಹಕರ ಸರಕುಗಳು, ಕಾರುಗಳು ಹಾಗೂ ಟ್ರ್ಯಾಕ್ಟರ್ ಗಳು ಸೇರಿದಂತೆ ಸರಕುಗಳ ಗ್ರಾಮೀಣ ಬೇಡಿಕೆಯನ್ನು ಹೆಚ್ಚಿಸುತ್ತದೆ.

    El Nino Southern Oscillation(ಇಎನ್‍ಎಸ್‍ಒ) ಸಮಭಾಜಕ ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರನ್ನು ಬೆಚ್ಚಗಿರಿಸುತ್ತದೆ. ಭಾರತೀಯ ಹವಾಮಾನ ಇಲಾಖೆಗೆ(ಐಎಂಡಿ) ಲಭ್ಯವಿರುವ ಮಾಹಿತಿ ಪ್ರಕಾರ, ಸದ್ಯ ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಬೆಚ್ಚಗಿದ್ದು, ಇನ್ನು ಮೂರು ತಿಂಗಳ ಅವಧಿಯಲ್ಲಿ ಅದು ತಟಸ್ಥವಾಗಲಿದೆ. ಹೀಗಾಗಿ ಮಳೆ ಉತ್ತಮವಾಗುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಕೂಡ ಈ ಬಗ್ಗೆ ವರದಿ ನೀಡಿದ್ದು, ಈ ಬಾರಿ ಇಎನ್‍ಎಸ್‍ಒ ಮಾಹಿತಿ ನಿಖರವಾಗಿದ್ದು, ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ತಟಸ್ಥವಾಗುತ್ತದೆ ಎಂದು ತಿಳಿಸಿದೆ.

    ಏನಿದು ಎಲ್ ನಿನೋ?
    ಎಲ್ ನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ಪೆರು ಮತ್ತು ಈಕ್ವೆಡಾರ್ ಬಳಿ ಪ್ರಾರಂಭವಾಗುವ ಒಂದು ಹವಾಮಾನ ವೈಪರಿತ್ಯದ ವಿದ್ಯಮಾನವಾಗಿದೆ. ಇದರ ಪ್ರಾರಂಭದ ಸೂಚನೆಯಾಗಿ ಈ ಭಾಗದ ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನದ ಸರಾಸರಿಗಿಂತ ಹೆಚ್ಚಾಗಲು ಆರಂಭವಾಗುತ್ತದೆ. ಪೆಸಿಫಿಕ್ ಸಾಗರದ ಮೇಲ್ಮೈ ತಾಪ ಸರಾಸರಿ ಸಹಜ ತಾಪಕ್ಕಿಂತ 0.5-0.9 ಡಿಗ್ರಿ ಸೆಲ್ಸಿಯಸ್ ಇದ್ದರೆ ಅದನ್ನು ದುರ್ಬಲ ಎನ್ ನಿನೋ ಎಂದು ಕರೆಯಲಾಗುತ್ತದೆ. ಎಲ್‍ನಿನೋ 1.5 ಡಿಗ್ರಿಗಿಂತ ಹೆಚ್ಚಿರಬೇಕು ಆಗ ಉತ್ತಮ ಮಳೆ ಆಗುತ್ತದೆ.

    ಒಂದು ವೇಳೆ ಪೆಸಿಫಿಕ್ ಮೇಲ್ಮೈ ನೀರು ಬೆಚ್ಚಗಿದ್ದರೆ ಅದು ಶುಷ್ಕ ಹವಾಮಾನಕ್ಕೆ ಕಾರಣವಾಗುತ್ತದೆ. ಇದರಿಂದ ಮಳೆ ಕಡಿಮೆಗೊಳ್ಳುತ್ತದೆ. ಭಾರತದ ಬಹುತೇಕ ಭಾಗದಲ್ಲಿ ಸರಾಸರಿ ತಾಪಮಾನ 0.5 ಡಿಗ್ರಿ ಸೆಲ್ಸಿಯಸ್ ಅಥವಾ 1 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಇತ್ತ ಹಿಂದೂ ಮಹಾಸಾಗರದ ದ್ವಿಧ್ರುವಿ (ಐಓಡಿ)ಎಂದು ಕರೆಯಲ್ಪಡುವ ಮತ್ತೊಂದು ವಿದ್ಯಮಾನವು ತಟಸ್ಥವಾಗಿದೆ. ಈ ವಿದ್ಯಮಾನವು ಹಿಂದೂ ಮಹಾಸಾಗರದ ವಿವಿಧ ಭಾಗಗಳ ನಡುವಿನ ತಾಪಮಾನದಲ್ಲಿನ ವ್ಯತ್ಯಾಸವನ್ನು ತಿಳಿಸುತ್ತದೆ. ಭಾರತೀಯ ಮಾನ್ಸೂನ್‍ಗೆ ಸಕಾರಾತ್ಮಕ ಐಒಡಿ ರೇಟಿಂಗ್ ಸಹಾಯ ಮಾಡುತ್ತದೆ ಎಂದು ಐಎಂಡಿ ಹೇಳಿದೆ. ಕಳೆದ ಬಾರಿ ಐಒಡಿ ರೇಟಿಂಗ್ ಪಾಸಿಟಿವ್ ಇದ್ದ ಕಾರಣಕ್ಕೆ ಜೂನ್ ತಿಂಗಳ ಮೊದಲ ವಾರದಲ್ಲೇ ದಾಖಲೆ ಪ್ರಮಾಣದ ಮಳೆ ಭಾರತದಲ್ಲಿ ಸುರಿದಿತ್ತು.