Tag: ಭಾರತ್‌ ಜೋಡೊ ನ್ಯಾಯ ಯಾತ್ರೆ

  • ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್‌’ ಟೀಕೆಗೆ ರಾಹುಲ್‌ ಗಾಂಧಿ ಕಿಡಿ

    ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್‌’ ಟೀಕೆಗೆ ರಾಹುಲ್‌ ಗಾಂಧಿ ಕಿಡಿ

    ನವದೆಹಲಿ: ನಾಯಿ ಬಿಸ್ಕೆಟ್‌ (Dog Biscuit) ವಿಚಾರವಾಗಿ ತಮ್ಮ ವಿರುದ್ಧ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಕಿಡಿಕಾರಿದ್ದಾರೆ.

    ನಾಯಿ ಬಿಸ್ಕೆಟ್‌ ಕುರಿತು ಸ್ಪಷ್ಟನೆ ನೀಡಿರುವ ರಾಹುಲ್‌ ಗಾಂಧಿ, ನಾಯಿಗೆ ನಾನು ಬಿಸ್ಕೆಟ್‌ ತಿನ್ನಿಸಲು ಪ್ರಯತ್ನಿಸಿದೆ. ಆದರೆ ಅದು ಸ್ವೀಕರಿಸಲಿಲ್ಲ, ನಡುಗುತ್ತಿತ್ತು. ಹೀಗಾಗಿ ಅದರ ಮಾಲೀಕರಿಗೆ ನಾನು ಬಿಸ್ಕೆಟ್‌ ನೀಡಿದೆ. ಮಾಲೀಕನ ಕೈ ಸೇರುತ್ತಿದ್ದಂತೆ ನಾಯಿ ಬಿಸ್ಕೆಟ್‌ಗಳನ್ನು ತಿಂದಿತು. ಅದರಲ್ಲಿ ಏನು ಸಮಸ್ಯೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ನಾಯಿ ತಿರಸ್ಕರಿಸಿದ ಬಿಸ್ಕೆಟ್ ಅನ್ನು ರಾಹುಲ್‌ ಗಾಂಧಿ ವ್ಯಕ್ತಿಯೊಬ್ಬರಿಗೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಟೀಕೆ ಕೂಡ ವ್ಯಕ್ತವಾಗಿತ್ತು. ರಾಹುಲ್‌ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಈ ರೀತಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದರು. ಇದನ್ನೂ ಓದಿ: ನಾಯಿ ತಿನ್ನದ ಬಿಸ್ಕತ್ತನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ – ವಿಡಿಯೋ ವೈರಲ್

    ಭಾರತ್ ಜೋಡೊ ನ್ಯಾಯ ಯಾತ್ರಾ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ರಾಹುಲ್‌ ಗಾಂಧಿ, ನಾಯಿಗೆ ಬಿಸ್ಕೆಟ್ ನೀಡಿದ್ದಾರೆ. ಆದರೆ ನಾಯಿ ಅದನ್ನು ತಿನ್ನಲು ನಿರಾಕರಿಸಿದೆ. ನಂತರ ಅದರ ಮಾಲೀಕನಿಗೆ ಬಿಸ್ಕೆಟ್‌ನ್ನು ರಾಹುಲ್‌ ಗಾಂಧಿ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ.

    ನಾಯಿ ತಿನ್ನಲು ನಿರಾಕರಿಸಿದ ಬಿಸ್ಕೆಟ್‌ ಅನ್ನು ಕಾರ್ಯಕರ್ತನಿಗೆ ರಾಹುಲ್‌ ಗಾಂಧಿ ನೀಡಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. ಇದಕ್ಕೆ ಪ್ರತಿಯಾಗಿ ರಾಹುಲ್‌ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

  • ಭಾರತ್‌ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್‌ ಗಾಂಧಿ ಕಾರಿನ ಗಾಜು ಪುಡಿಪುಡಿ

    ಭಾರತ್‌ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್‌ ಗಾಂಧಿ ಕಾರಿನ ಗಾಜು ಪುಡಿಪುಡಿ

    ಕೋಲ್ಕತ್ತ: ಭಾರತ್‌ ಜೋಡೊ ನ್ಯಾಯ ಯಾತ್ರೆಯು (Bharat Jodo Nyay Yatra) ಬಿಹಾರದಿಂದ ಪಶ್ಚಿಮ ಬಂಗಾಳ ಪ್ರವೇಶಿಸುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಗದ್ದಲ ಸೃಷ್ಟಿಯಾದ್ದರಿಂದ ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಕಾರಿನ ಹಿಂಬದಿಯ ಗಾಜು ಪುಡಿಯಾಗಿರುವ ಘಟನೆ ನಡೆದಿದೆ.

    ರಾಹುಲ್‌ ಗಾಂಧಿ ನೇತೃತ್ವದ ಯಾತ್ರೆಯನ್ನು ವೀಕ್ಷಿಸಲು, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಲಾಭಾ ಸೇತುವೆಗೆ ಸಾವಿರಾರು ಜನರು ಸೇರಿದ್ದರು. ಈ ವೇಳೆ ರಾಹುಲ್‌ ಗಾಂಧಿ ಇದ್ದ ಕಾರಿನ ಗಾಜು ಒಡೆದಿದೆ. ಘಟನೆ ನಡೆದಾಗ ಕಾಂಗ್ರೆಸ್‌ ನಾಯಕ ಬಸ್ಸಿನಲ್ಲಿದ್ದರು ಎನ್ನಲಾಗಿದೆ. ಇದು ಭದ್ರತಾ ಲೋಪ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಅಡ್ಡಿಪಡಿಸುವವರನ್ನು ಯಾರೂ ನೆನಪಿಸಿಕೊಳ್ಳಲ್ಲ: ಅಧಿವೇಶನಕ್ಕೂ ಮುನ್ನ ಸಂಸದರಿಗೆ ಮೋದಿ ಸಲಹೆ

    ಮಾಲ್ಡಾದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಹೆಚ್ಚಿನ ಭದ್ರತೆಗೆ ಗಮನ ಕೇಂದ್ರೀಕರಿಸಲಾಗಿದೆ. ಈ ಸಮಾರಂಭಕ್ಕೆ ಕೆಲವೇ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಟೀಕಿಸಿದ್ದಾರೆ.

    ರಾಹುಲ್ ಗಾಂಧಿಯವರ ಯಾತ್ರೆ ಹೊರಟಿರುವ ಮಣಿಪುರ, ಅಸ್ಸಾಂ, ಮೇಘಾಲಯ, ಬಿಹಾರ, ಪಶ್ಚಿಮ ಬಂಗಾಳದಂತಹ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರವಿಲ್ಲ. ಕೆಲವೆಡೆ ರಾಹುಲ್ ಪೋಸ್ಟರ್ ಹರಿದಿದೆ. ಮತ್ತೊಂದು ಕಡೆ ಅವರ ಕಾರಿನ ಗಾಜು ಒಡೆದಿದೆ. ಒಂದಂತೂ ಸ್ಪಷ್ಟ. ಏನೇ ಆಗಲಿ ಯಾತ್ರೆ ನಿಲ್ಲುವುದಿಲ್ಲ. ಇದು ಮುಂದುವರಿಯಲಿದೆ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಹೇಳಿದ್ದಾರೆ. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಆಡಳಿತವು ರಾಹುಲ್ ಗಾಂಧಿಗೆ ಮಾಲ್ಡಾ ಜಿಲ್ಲೆಯ ಭಾಲುಕಾ ನೀರಾವರಿ ಬಂಗಲೆಯಲ್ಲಿ ತಂಗಲು ಅನುಮತಿ ನಿರಾಕರಿಸಿತ್ತು. ನಂತರ ಕಾಂಗ್ರೆಸ್ ಯಾತ್ರೆಯ ವೇಳಾಪಟ್ಟಿಯನ್ನು ಬದಲಾಯಿಸಲಾಯಿತು.

  • ನಮಗೆ ನಿತೀಶ್‌ ಕುಮಾರ್‌ ಅಗತ್ಯವಿಲ್ಲ: ಮೈತ್ರಿ ಮುರಿದ ಬಳಿಕ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

    ನಮಗೆ ನಿತೀಶ್‌ ಕುಮಾರ್‌ ಅಗತ್ಯವಿಲ್ಲ: ಮೈತ್ರಿ ಮುರಿದ ಬಳಿಕ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

    ನವದೆಹಲಿ: ಮಹಾಘಟಬಂಧನ್‌ ಮೈತ್ರಿಕೂಟ ತೊರೆದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಬಳಿಕ ಬಿಹಾರ ಸಿಎಂ ನಿತೀಶ್‌ ಕುಮಾರ್‌ (Nitish Kumar) ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೌನ ಮುರಿದಿದ್ದಾರೆ. ನಮಗೆ ನಿತೀಶ್‌ ಕುಮಾರ್‌ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

    ಭಾರತ್‌ ಜೋಡೊ ನ್ಯಾಯ ಯಾತ್ರೆ (Bharat Jodo Nyay Yatra) ಕೈಗೊಂಡಿರುವ ರಾಹುಲ್‌ ಗಾಂಧಿ ಅವರು, ಬಿಹಾರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಮಗೆ ನಿತೀಶ್‌ ಕುಮಾರ್‌ ಅಗತ್ಯವಿಲ್ಲ. ಒತ್ತಡಕ್ಕೆ ಒಳಗಾಗಿ ಅವರು ಯೂ-ಟರ್ನ್‌ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿತೀಶ್ ಸಿಎಂ ಆದ ಬಳಿಕ ಮೊದಲ ಬಾರಿ ಭಾರತ್ ಜೋಡೋ ಯಾತ್ರೆ ಬಿಹಾರಕ್ಕೆ ಎಂಟ್ರಿ

    ರಾಜ್ಯಪಾಲರಿಗೆ ಬಹಳ ಆಶ್ಚರ್ಯವಾಯಿತು. ‘ಏನು ನಿತೀಶ್-ಜಿ ನೀವು ಇಷ್ಟು ಬೇಗ ಹಿಂತಿರುಗಿದ್ದೀರಿ?’ ಅವರು ಕೇಳಿದ್ದರು. ನಿತೀಶ್‌ ಕುಮಾರ್‌ ಅವರು ಹಾಗೆಯೇ ಎಂದು ರಾಹುಲ್‌ ಗಾಂಧಿ ಚಾಟಿ ಬೀಸಿದ್ದಾರೆ.

    ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದಿಂದ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಈಚೆಗೆ ನಿರ್ಗಮಿಸಿದರು. ಬಳಿಕ ಆರ್‌ಜೆಡಿ ಜೊತೆಗಿನ ಮಹಾಘಟಬಂಧನ್‌ ಮೈತ್ರಿ ಮುರಿದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರು. ಇದನ್ನೂ ಓದಿ: 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

    ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜ.28 ರಂದು 9 ನೇ ಬಾರಿಗೆ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ಇದರ ಜೊತೆ ಬಿಹಾರದ ಸಂಪುಟ ದರ್ಜೆಯ ಸಚಿವರಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್‌ ಕುಮಾರ್‌ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದರು.