Tag: ಭಾರತ್ ಜೋಡೋ ಯಾತ್ರಾ

  • ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ತಿರುವನಂತಪುರಂ: ಸಾವರ್ಕರ್ (Savarkar) ಅವರನ್ನು ಸ್ವಾತಂತ್ರ್ಯ ಹೋರಾಟಗಾರ (Freedom Fighter) ಎಂದು ಪರಿಗಣಿಸದ ಕಾಂಗ್ರೆಸ್ (Congress) ಇಂದು ಒಂದು ನಿರೀಕ್ಷೆಯೇ ಮಾಡಿರದ ಪ್ರಮಾದವನ್ನು ಎದುರಿಸಿದೆ. ಕಾಂಗ್ರೆಸ್ ಜೋಡೋ ಯಾತ್ರೆಯ (Bharat Jodo Yatra) ಹಿನ್ನೆಲೆ ಮಾಡಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಪೋಸ್ಟರ್‌ನಲ್ಲಿ (Poster) ಸಾವರ್ಕರ್ ಅವರ ಚಿತ್ರವೂ ಕಂಡುಬಂದಿದೆ. ಆದರೆ ಕಾಂಗ್ರೆಸ್ ಇದನ್ನು ಪ್ರಿಂಟಿಂಗ್ ಮಿಸ್ಟೇಕ್ (Printing Mistake) ಎಂದು ಸಮರ್ಥಿಸಿಕೊಂಡಿದೆ.

    ಕಾಂಗ್ರೆಸ್‌ನ ಮಹಾತ್ವಾಕಾಂಕ್ಷೆಯ ರ‍್ಯಾಲಿ ಭಾರತ್ ಜೋಡೋ ಯಾತ್ರೆ ಕೇರಳದ (Kerala) ಎರ್ನಾಕುಲಂ ಜಿಲ್ಲೆ ತಲುಪಿದಾಗ ಸ್ವಾತಂತ್ರ್ಯ ಹೋರಾಟಗಾರರ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ ಬಳಸಿರುವುದು ಕಂಡುಬಂದಿದೆ. ಆದರೆ ಕಾಂಗ್ರೆಸ್ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, ಅವರು ಬ್ರಿಟಿಷರ ವಿರುದ್ಧ ಹೋರಾಡುವ ಬದಲು ಅವರಿಗೆ ಕ್ಷಮೆ ಯಾಚಿಸಿದವರು ಎಂದು ವಾದಿಸಿದ್ದಾರೆ.

    ಕೇರಳದ ಸ್ವತಂತ್ರ ಶಾಸಕ ಪಿ.ವಿ ಅನ್ವರ್ ಅವರು ಈ ಪೋಸ್ಟರ್ ಅನ್ನು ಗಮನಿಸಿ, ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಚೆಂಗಮನಾಡಿನಲ್ಲಿ ಇರಿಸಲಾದ ಪೋಸ್ಟರ್‌ನಲ್ಲಿ ಸಾವರ್ಕರ್ ಅವರ ಫೋಟೋವನ್ನು ಹಾಕಲಾಗಿದೆ. ಈ ವಿಚಾರ ಕಾರ್ಯಕರ್ತರ ಗಮನಕ್ಕೆ ಬರುತ್ತಿದ್ದಂತೆ ಸಾವರ್ಕರ್ ಅವರ ಫೋಟೋ ಮೇಲೆ ಮಹಾತ್ಮ ಗಾಂಧೀಜಿಯವರ ಚಿತ್ರವನ್ನು ಅಂಟಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೃದಯ ಸಮಸ್ಯೆ- ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

    ತಕ್ಷಣವೇ ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್, ಇದು ಪ್ರಿಂಟಿಂಗ್ ಮಿಸ್ಟೇಕ್‌ನಿಂದ ಆಗಿದೆ. ನಾವು ಮುದ್ರಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳಿರುವ ಪೋಸ್ಟರ್ ತಯಾರಿಸಲು ಹೇಳಿದಾಗ ಅವರು ಕ್ರಾಸ್ ಚೆಕ್ ಮಾಡದೇ ಆನ್‌ಲೈನ್‌ನಲ್ಲಿ ಲಭ್ಯವಿದ್ದ ಎಲ್ಲಾ ಫೋಟೋಗಳನ್ನೂ ಹಾಕಿ ಪೋಸ್ಟರ್ ಮಾಡಿದ್ದಾರೆ. ಬಳಿಕ ಸಾವರ್ಕರ್ ಫೋಟೋ ಮೇಲೆ ಗಾಂಧೀಜಿಯವರ ಚಿತ್ರವನ್ನು ಹಾಕುವ ಮೂಲಕ ತಪ್ಪನ್ನು ಸರಿಪಡಿಸಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ

    ನವದೆಹಲಿ: ಎಲ್ಲೆಡೆ ಸೋಲುಗಳಿಂದ ಬಸವಳಿದಿರುವ ಕಾಂಗ್ರೆಸ್ ಪಕ್ಷಕ್ಕೆ ಪುನರ್‌ವೈಭವ ತಂದುಕೊಡಲು ಉದಯಪುರದಲ್ಲಿ ಮೂರು ದಿನಗಳ ಕಾಲ ನಡೆದ ನವಸಂಕಲ್ಪ ಚಿಂತನಾ ಶಿಬಿರದಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

    ಮೋದಿ ಸರ್ಕಾರದ ಹುಳುಕು ಬಯಲು ಮಾಡುವ ಜೊತೆಗೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲು ‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್ ಜೋಡೋ’ ಯಾತ್ರೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ: ರಾಹುಲ್ ಗಾಂಧಿ

    ಗಾಂಧಿ ಜಯಂತಿಯಂದು ಅಂದರೆ ಅಕ್ಟೋಬರ್ 2ರಂದು ಪಾದಯಾತ್ರೆಗೆ ಚಾಲನೆ ಸಿಗಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಅಕ್ಟೋಬರ್‌ನಿಂದ ಒಂದು ವರ್ಷದಷ್ಟು ಸುದೀರ್ಘ ಮತ್ತು ಬೃಹತ್ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಅಗತ್ಯ ಪ್ರದೇಶಗಳಲ್ಲಿ ಜನತಾ ದರ್ಬಾರ್ ಹೆಸರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ.

    ಮತ್ತೆ ಪುಟಿದೇಳ್ತೀವಿ ಎಂದು ಸೋನಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಶತಮಾನದ ಹಳೆಯ ಪಕ್ಷ ಜನರೊಂದಿಗೆ ಸಂಪರ್ಕ ಕಡಿತಗೊಂಡಿರೋದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ‘ಜನರೊಂದಿಗೆ ನಮ್ಮ ಸಂಪರ್ಕದ ಕೊಂಡಿ ಕಳಚಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅದನ್ನು ನಾವು ಪುನಶ್ಚೇತನಗೊಳಿಸಿ, ಬಲಪಡಿಸಬೇಕು. ಇದಕ್ಕೆ ಯಾವುದೇ ಅಡ್ಡದಾರಿಯಿಲ್ಲ. ಕಠಿಣ ಪರಿಶ್ರಮವೊಂದೇ ಮಾರ್ಗ. ಪಕ್ಷವನ್ನು ತಳಮಟ್ಟದಿಂದ ಆಕ್ರಮಣಕಾರಿಯಾಗಿ ಬದಲಿಸಿದಾಗ ಮಾತ್ರ ಆರ್‌ಎಸ್‌ಎಸ್ ಎದುರಿಸಲು ಸಾಧ್ಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ

    ಬಿಜೆಪಿಯ ದ್ವೇಷ ಸಿದ್ಧಾಂತದ ವಿರುದ್ಧ ಪ್ರಾದೇಶಿಕ ಪಕ್ಷಗಳಿಗೆ ಕಾಂಗ್ರೆಸ್ ಪಕ್ಷದಂತೆ ಹೋರಾಡುವುದು ಸಾಧ್ಯವಿಲ್ಲ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಪಕ್ಷ `ಒಂದು ಕುಟುಂಬ, ಒಂದು ಟಿಕೆಟ್’ ನಿರ್ಣಯದ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ. ಆ ಪಕ್ಷದ್ದು ಧೃತರಾಷ್ಟç ಮೋಹ. ಉತ್ತರ ಪ್ರದೇಶ ಚುನಾವಣೆಯಲ್ಲಿ ವಂಶವಾದದ ವಿರುದ್ಧ ಮೋದಿ ಗಟ್ಟಿಯಾಗಿ ನಿಂತರು. ಆ ರೀತಿಯ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆಯಾ ಎಂದು ಬಿಜೆಪಿ ಪ್ರಶ್ನಿಸಿದೆ. ತಾಕತ್ತಿದ್ರೆ ಆಂತರಿಕ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದೆ.