ಬೀದರ್: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಬುಧವಾರ ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರು ಸೇರಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ.
ನಗರದ ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ವಿವಿಧ ಚಾಲಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಕಾರ್ಮಿಕರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಈ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಇದನ್ನೂ ಓದಿ: ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್
ಸಾವಿರಾರು ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು, ಧರಣಿ ಬಳಿಕ ಡಿಸಿಗೆ ಮನವಿ ಸಲ್ಲಿಸಲಿದ್ದಾರೆ.
ಬೇಡಿಕೆಗಳೇನು?
* ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
* ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
* ಕನಿಷ್ಠ ವೇತನ ಜಾರಿಗೊಳಿಸಬೇಕು
* ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
* ಇದನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು
* ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
* ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
* ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!
ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಇಂದು (ಬುಧವಾರ) ಭಾರತ್ ಬಂದ್‌ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್ ಏವಿಯೇಷನ್ ಸ್ಪಷ್ಟನೆ
ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳಿವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್‌ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕೆರೆ
ಇನ್ನೂ ದೇಶವ್ಯಾಪಿ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲೂ AITUC, CITU, HMS, INTUC, SEWA ಸೇರಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಲಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಕಾರ್ಮಿಕರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಬಿಹಾರದಲ್ಲಿ ಆರ್‌ಜೆಡಿ ಕಾರ್ಯಕರ್ತರಿಂದ ರೈಲು ತಡೆ
ಬಿಹಾರ ಮತ್ತು ಬಂಗಾಳದಲ್ಲಿ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಆರ್‌ಜೆಡಿ ವಿದ್ಯಾರ್ಥಿ ಸಂಘಟನೆಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಬಂಗಾಳದಲ್ಲಿ ರಸ್ತೆ ತಡೆ, ಅಂಗಡಿ ಮುಂಗಟ್ಟುಗಳನ್ನ ಹಲವೆಡೆ ಬಂದ್ ಮಾಡಲಾಗಿದ್ದು, ಸಾರ್ವಜನಿಕ ಸೇವೆಗಳಲ್ಲಿ ಭಾರೀ ವ್ಯತ್ಯಯ ಕಂಡುಬಂದಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ
ಬೇಡಿಕೆಗಳೇನು?
* ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
* ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
* ಕನಿಷ್ಠ ವೇತನ ಜಾರಿಗೊಳಿಸಬೇಕು
* ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
* ಇದನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಬೇಕು
* ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
* ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
* ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು
ಏನಿರುತ್ತೆ? ಏನಿರಲ್ಲ?
– ಕೈಗಾರಿಕೆಗಳು ಬಹುತೇಕ ಬಂದ್ .
– ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ
– ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
– ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
– ವಿಮೆ ಕಚೇರಿ ಬಂದ್ ಸಾಧ್ಯತೆ.
– ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
– ಪೋಸ್ಟ್ ಆಫೀಸ್ ಇರಲಿದೆ.
ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ನಾಳೆ (ಬುಧವಾರ) ಭಾರತ್ ಬಂದ್‌ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳುತ್ತವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್‌ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಭಾರತ ಬಂದ್ ಎಫೆಕ್ಟ್ ಇಲ್ಲದಿದ್ದರೂ ಉತ್ತರ ಭಾರತದ ಹಲವೆಡೆ ಬಂದ್ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಳೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಏನಿರುತ್ತೆ? ಏನಿರಲ್ಲ?
– ನಾಳೆ ಕೈಗಾರಿಕೆಗಳು ಬಹುತೇಕ ಬಂದ್ .
– ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ ಆಗಬಹುದು.
– ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
– ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
– ವಿಮೆ ಕಚೇರಿ ಬಂದ್ ಸಾಧ್ಯತೆ.
– ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
– ಪೋಸ್ಟ್ ಆಫೀಸ್ ಇರಲಿದೆ.
ಪಾಟ್ನಾ: ಭಾರತ್ ಬಂದ್ (Bharat Bandh) ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ (School Bus) ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ (Bihar) ಗೋಪಾಲ್‌ಗಂಜ್‌ನಲ್ಲಿ ನಡೆದಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಬಂದ್ ವೇಳೆ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮಕ್ಕಳಿದ್ದ ಶಾಲಾ ಬಸ್ ರಸ್ತೆಯಲ್ಲಿ ಬಂದಿದೆ.
ಶಾಲಾ ಬಸ್ಸನ್ನು ನೋಡಿದ ಕೂಡಲೇ ಸುತ್ತುವರೆದ ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಬೆಂಕಿಯನ್ನು ತೆಗೆದಿದ್ದಾರೆ. ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡ್ರೋನ್ ಕ್ಯಾಮೆರಾಗಳ ಮೂಲಕ ತೊಂದರೆ ಸೃಷ್ಟಿಸುತ್ತಿದ್ದ ಕೆಲ ವ್ಯಕ್ತಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಯ್ ಶಾ ಮುಂದಿನ ಐಸಿಸಿ ಅಧ್ಯಕ್ಷ? – ಆಸೀಸ್, ಇಂಗ್ಲೆಂಡ್ ಬೆಂಬಲ
ಬಿಹಾರದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲು ಹಳಿಗಳಲ್ಲಿ ಕುಳಿತು ಪ್ರತಿಭಟಿಸಿದ್ದರಿಂದ ಕೆಲವೆಡೆ ರಸ್ತೆ ಮತ್ತು ರೈಲು ಸಂಚಾರದಲ್ಲಿ ಸಮಸ್ಯೆಯಾಗಿತ್ತು.
ಶಿವಮೊಗ್ಗ: ಹೊಸ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲವೇ ಹೊರತು, ನಷ್ಟವಿಲ್ಲ. ಭಾರತ್ ಬಂದ್ ಆಚರಣೆ ರೈತರು ಮಾಡುತ್ತಿರುವುದಲ್ಲ, ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಬಂದ್‍ಗೆ ಮುಂದಾಗಿದ್ದಾರೆ ಎಂದು ಕ್ರೀಡಾ ಹಾಗು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದರು.
ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಜೊತೆ ಸಂವಾದ ನಡೆಸಿದೆ. ಈ ಸಂದರ್ಭದಲ್ಲಿ ರೇಷ್ಮೆ ಹೊಲಕ್ಕೆ ರೈತರೊಂದಿಗೆ ಭೇಟಿ ನೀಡಿ ಪರಿಶೀಲಿಸಿದೆ.@CMofKarnataka
1/3 pic.twitter.com/umEyJjGI4V
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) September 27, 2021
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ನೀಡಿದ್ದಾರೆ. ಮೋದಿಯವರ ಆಡಳಿತಾವಧಿಯಲ್ಲಿ ರೈತರ ಬೆಳೆಗಳಿಗೆ ಬೆಲೆ ಏರಿಕೆ ಸಹ ಆಗಿದೆ. ಆದರೆ ರಾಜಕಾರಣ ಮಾಡುವ ಸಲುವಾಗಿ ದೆಹಲಿಯಲ್ಲಿ ಕಳೆದ 10 ತಿಂಗಳಿನಿಂದ ರೈತರ ಹೆಸರಿನಲ್ಲಿ ಕೆಲವರು ಧರಣಿ ನಡೆಸುತ್ತಿದ್ದಾರೆ. ವರ್ಷಗಳ ಕಾಲ ಧರಣಿ, ಪ್ರತಿಭಟನೆ ನಡೆಸಲು ರೈತರಿಂದ ಸಾಧ್ಯನಾ..? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನಿರುವಾಗ ಪೊಲೀಸರು, ಕೋರ್ಟ್‍ಗೆ ಹೆದರಬೇಡಿ: ತ್ರಿಪುರಾ ಸಿಎಂ
ನೂತನ ಎಪಿಎಂಸಿ ಕಾಯ್ದೆಯಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಧಾರಣೆ ಆಗಿದೆ. ಎಪಿಎಂಸಿ ಕಾಯ್ದೆಯಿಂದ ಮಧ್ಯವರ್ತಿಗಳಿಗೆ ತೊಂದರೆ ಆಗುತ್ತಿದ್ದು, ಆದರೆ ರೈತರಿಗೆ ಲಾಭವಾಗುತ್ತಿದೆ. ಈ ಮೊದಲು ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಮಾಡಬೇಕಿತ್ತು. ಆದರೆ ಈ ಹೊಸ ಕಾಯ್ದೆಯಿಂದ ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ. ಆದರೆ ಈ ಹಿಂದೆ ಇಂತಹ ವ್ಯವಸ್ಥೆ ಇರಲಿಲ್ಲ. ಬಿಜೆಪಿ ಸರ್ಕಾರ ರೈತರ ಪರವಾದ ಸರಕಾರವಾಗಿದ್ದು, ರೈತರಿಗೆ ಯಾವುದೇ ಕಾರಣಕ್ಕು ತೊಂದರೆ ಆಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದರು.
ಬೀದರ್: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರು ಏಕಾಏಕಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಯತ್ನಿಸಿದ ಘಟನೆ ಜನವಾಡ ಬಳಿ ನಡೆದಿದೆ.
ತಾಲೂಕಿನ ಜನವಾಡ ಗ್ರಾಮದ ಬಳಿ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಹಾಗೂ ತಮಟೆ ಬಾರಿಸುತ್ತಾ ರೈತರು ಪ್ರತಿಭಟನೆ ಮಾಡುತ್ತಿದ್ದರು. ಇದೇ ವೇಳೆ ಕಬ್ಬಿಗೆ ಬೆಂಬಲ ನೀಡುವಂತೆ ಆಗ್ರಹಿಸಿ ನೂರಾರು ರೈತರು, ದಿಢೀರ್ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಬೀಗ ಹಾಕಲು ಯತ್ನಿಸಿದ್ದಾರೆ. ಈ ವೇಳೆ ರೈತರ ಕೈಯಲ್ಲಿದ್ದ ಬೀಗವನ್ನು ಸ್ಥಳದಲ್ಲಿದ್ದ ಪೆÇಲೀಸರು ಕಸಿದುಕೊಂಡು ಬೀಗ ಹಾಕುವುದನ್ನು ತಡೆದಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ
ಮೂರು ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾನಿರತ ರೈತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ನಿದ್ರೆ – ಉಳಿದವರು ಮೊಬೈಲ್‍ನಲ್ಲಿ ಮಗ್ನ
ನಂತರ ಕೃಷಿ ಕಾಯ್ದೆ ವಿರೋಧಿ ರೈತ ಪರ, ದಲಿತ ಪರ, ಕನ್ನಡ ಪರ ಹಾಗೂ ಕಾರ್ಮಿಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಾರವಾರ: ಬಿಜೆಪಿಯವರು ಹಿಟ್ಲರ್ ಸಂಸ್ಕೃತಿಯವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವರಾಮ್ ಹೆಬ್ಬಾರ್ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂಬ ಹುಮ್ಮಸ್ಸಿಗೆ ಡಿಕೆ ಶಿವಕುಮಾರ್ ಅಡ್ಡಿಯಾದ ಕಾರಣ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಏನೂ ಆಗಲ್ಲ. ಅವರು ವಿಧಾನಸಭೆಯಲ್ಲೂ ಇದನ್ನೇ ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿಯವರು ಅಲ್ಲಿ ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೂ ಅವರಿಗೆ ಸಮಾಧಾನವಾದಂತೆ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಲೇಹ್‍ನಿಂದ ಮನಾಲಿಗೆ ಸೈಕ್ಲಿಂಗ್ ಮಾಡಿ ಭಾರತೀಯ ಸೇನಾಧಿಕಾರಿ ಗಿನ್ನೆಸ್ ದಾಖಲೆ
ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ಕರ್ನಾಟಕದಲ್ಲಿ ಯಶಸ್ವಿಯಾಗಿಲ್ಲ. ಅನೇಕ ಸ್ವಯಂಘೋಷಿತ ನಾಯಕರು ಭಾರತ್ ಬಂದ್‍ಗೆ ಕರೆಕೊಟ್ಟು ಸಂಪೂರ್ಣ ವಿಫಲತೆ ಕಂಡಿದ್ದಾರೆ. ಭಾರತ್ ಬಂದ್‍ನಿಂದ ಯಾವ ಸಾಧನೆಯೂ ಆಗಿಲ್ಲ. ಕಳೆದ ಒಂದು ವರ್ಷದಿಂದ ಭಾರತ ಬಂದಾಗಿಯೇ ಇದೆ. ಮತ್ತೆ ಭಾರತ್ ಬಂದ್ ಮಾಡುವುದರಿಂದ ಶಿಕ್ಷಣ, ವ್ಯಾಪಾರ – ಉದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ರಾಜ್ಯದ ಹಾಗೂ ದೇಶದ ಜನ ಈ ಭಾರತ್ ಬಂದ್ ಅನ್ನು ಒಪ್ಪಿಕೊಂಡಿಲ್ಲ. ಪ್ರಬಲವಾಗಿ ವಿರೋಧಿಸಿದ್ದಾರೆ ಎಂದು ನುಡಿದಿದ್ದಾರೆ.
ಕೆಲವರು ನೈತಿಕವಾಗಿ ಬೆಂಬಲವನ್ನಷ್ಟೇ ನೀಡಿದ್ದಾರೆ. ಯಾವ ಉದ್ದೇಶಕ್ಕೆ ಭಾರತ್ ಬಂದ್ ಮಾಡಿದ್ದಾರೋ ಈ ಬಗ್ಗೆ ಸರ್ಕಾರ ವಿಧಾನಸಭೆಯ ಒಳಗೆ ಹಾಗೂ ಹೊರಗೆ ತನ್ನ ಪ್ರತಿಕ್ರಿಯೆ ನೀಡಿದೆ. ಒಟ್ಟಾರೆ ದೇಶದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ನಿಶ್ಚಿತ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ
ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್ ಬೆಂಬಲಿಸಲು ಬಂದಿದ್ದ 100ಕ್ಕೂ ಹೆಚ್ಚು ರೈತರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ.
ಮೌರ್ಯ ಸರ್ಕಲ್‍ನಲ್ಲಿ ಒಂದುಗೂಡಿ ವಿನೂತನ ರೀತಿಯ ಮೆರವಣಿಗೆ ನಡೆಸಲು ರೈತರು ಯತ್ನಿಸಿದ್ದಾರೆ. ಈ ವೇಳೆ ರೈತ ಮುಖಂಡರನ್ನು ಬಂಧಿಸಲು ಯತ್ನಿಸಿದಾಗ ಪೊಲೀಸರು ಹಾಗೂ ರೈತರ ನಡುವೆ ಭಾರಿ ವಾಗ್ವಾದ ನಡೆಯಿತು. ಏಕೆ ಬಂಧನ ಮಾಡುತ್ತೀರಿ, ನಾವು ಮೆರವಣಿಗೆಯನ್ನೇ ಆರಂಭಿಸಿಲ್ಲ, ನಮ್ಮ ರೈತರು ಬರುತ್ತಿದ್ದಾರೆ. ಅಲ್ಲಿ ತನಕ ಊರಿನಿಂದ ತಂದಿರುವ ತಿಂಡಿಯನ್ನು ತಿಂದು ಮುಂದೆ ಸಾಗುತ್ತೇವೆ ಎಂದು ರೈತರು ಪೊಲೀಸರ ಬಳಿ ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ
ಇದಕ್ಕೆ ಅವಕಾಶ ನೀಡದ ಪೊಲೀಸರು, ಯಾವುದೇ ಪ್ರತಿ ಉತ್ತರ ನೀಡದೆ ರೈತರನ್ನು ಬಂಧಿಸಿದರು. ಪೊಲೀಸರ ಈ ನಡೆಯನ್ನು ಖಂಡಿಸಿದ ಕುರುಬೂರು ಶಾಂತಕುಮಾರ್, ಕಾನೂನುಬಾಹಿರ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಪೊಲೀಸರ ಸರ್ವಾಧಿಕಾರಿ ಧೋರಣೆಯಾಗಿದೆ. ಇದನ್ನು ನಾವು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ. ಕೇಂದ್ರದ ಕೆಲವು ಮಂತ್ರಿಗಳು ರೈತ ಚಳುವಳಿಯ ಬಗ್ಗೆ ಹಗುರವಾಗಿ ಕೋಲೆ ಬಸವನ ರೀತಿ ಮಾತನಾಡುತ್ತಿದ್ದಾರೆ. ಇವರಿಗೆ ಕೃಷಿ ಕಾಯ್ದೆಗಳ ದುಷ್ಪರಿಣಾಮಗಳ ಬಗ್ಗೆ ಅರಿವೇ ಇಲ್ಲ ಬೇಕಿದ್ದರೆ ರೈತ ಮುಖಂಡರ ಸಭೆ ಕರೆದು ಚರ್ಚಿಸಲಿ ಎಂದು ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ
ರೈತರು ಉತ್ಪನ್ನಗಳನ್ನ ಎಲ್ಲಿ ಬೇಕಾದರೂ ಯಾರಿಗಾದರೂ ಮಾರಾಟ ಮಾಡಬಹುದು ಎನ್ನುತ್ತಾರೆ. ನಾವು ವಿಧಾನಸೌಧಕ್ಕೆ ಹಣ್ಣು ತರಕಾರಿಗಳನ್ನ ಮಾರಲು ಹೋಗುತ್ತಿದ್ದರೆ ಪೊಲೀಸರೇ ತಡೆಯುತ್ತಿದ್ದಾರೆ. ಇಂತಹ ನಡೆ ರೈತರ ಕಣ್ಣಿಗೆ ಮಣ್ಣೆರಚುವ ಕೇಂದ್ರ ಸರ್ಕಾರದ ಕುತಂತ್ರವಲ್ಲವೇ ಎಂದು ಕಿಡಿಕಾರಿದರು. ವಿಧಾನಸೌಧ ಬಳಿ ಎತ್ತಿನಗಾಡಿ ಕುದುರೆಗಾಡಿ ಪ್ರತಿಭಟನೆ ನಡೆಸುವಾಗ ಯಾವುದನ್ನೂ ಕೇಳದ ಪೊಲೀಸರು, ನಮ್ಮನ್ನ ಮಾತ್ರ ಅನುಮತಿ ಪಡೆಯಲಾಗಿದೆಯೇ ಎಂದು ಕೇಳುತ್ತಾರೆ. ಇದು ಪೊಲೀಸರ ಕಾರ್ಯವೈಖರಿ ಎಂದು ವ್ಯಂಗ್ಯವಾಡಿದರು.
ಕೇಂದ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ನವೆಂಬರ್ 26ಕ್ಕೆ ಹೋರಾಟಕ್ಕೆ ಒಂದು ವರ್ಷ ತುಂಬುತ್ತದೆ. ಆಗ ದೇಶದ ಎಲ್ಲಾ ರಾಜ್ಯಗಳಿಂದ 5 ಕೋಟಿಗೂ ಹೆಚ್ಚು ರೈತರು ದೆಹಲಿ ಪ್ರವೇಶ ಮಾಡುತ್ತಾರೆ. ಸರ್ಕಾರದ ಯಾವುದೇ ಕುತಂತ್ರದ ಕಾರ್ಯತಂತ್ರಗಳಿಗೂ ನಾವು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ರೈತರು ಕರೆ ನೀಡಿರುವ ಭಾರತ್ ಬಂದ್ ವಿಫಲಗೊಳಿಸಲು ಸರ್ಕಾರ ಪೊಲೀಸ್ ಬಲದ ಮೂಲಕ ಯತ್ನಿಸುತ್ತಿದೆ. ಪೊಲೀಸರು ಕಾನೂನು ಪಾಲಕರಾಗದೇ ಮಂತ್ರಿಗಳ ಗುಲಾಮರ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದರು.
ನೂರಕ್ಕೂ ಹೆಚ್ಚು ರೈತರನ್ನು ಪೊಲೀಸರು ಆಡುಗೋಡಿ ಪೊಲೀಸ್ ಮೈದಾನಕ್ಕೆ ಕರೆದೊಯ್ದಾಗ ಅಲ್ಲಿ ರೈತರು 1 ಗಂಟೆ ಕಾಲ ಬಸ್ಸಿನಿಂದ ಕೆಳಗೆ ಇಳಿಯದೆ ಪೊಲೀಸರ ಕಾನೂನುಬಾಹಿರ ವರ್ತನೆಯನ್ನ ಖಂಡಿಸಿದ್ದಾರೆ. 3 ಗಂಟೆ ನಂತರ ಬಂಧಿತ ರೈತರು, ರೈತ ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳನ್ನು ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಅಂದಪ್ಪ ಕೊಳೂರ, ಬೆಂಗಳೂರು ನಗರಾಧ್ಯಕ್ಷೆ ಶಿವಮ್ಮ, ಚನ್ನರಾಯಪಟ್ಟಣದ ಪ್ರೇಮ, ಮೈಸೂರು ಜಿಲ್ಲೆಯ ನಾಗರಾಜ್, ಪ್ರಜಾ ಪರಿವರ್ತನಾ ವೇದಿಕೆಯ ಗೋವಿಂದರಾಜು ಹೆಸರಘಟ್ಟ, ಶಿವರುದ್ರಪ್ಪ ಇನ್ನು ಮುಂತಾದವರಿದ್ದರು.
ಹುಬ್ಬಳ್ಳಿ: ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೇ ಕೊರೊನಾ ಹೊಡೆತದಿಂದ ಚೇತರಿಸಿ ಕೊಳ್ಳುತ್ತಿದ್ದಾರೆ. ಬಂದ್‍ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಕೆಎಲ್‍ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ. ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿಯಾಗಿದೆ. ಅಲ್ಲದೇ ಬಿಜೆಪಿ ಆಡಳಿತ ನೋಡಿ ಮಾಜಿ ಸಿಎಂ ಸಿದ್ಧರಾಮಯ್ಯನವರು ಹತಾಶರಾಗಿದ್ದಾರೆ. ಅವರು ಈ ಹಿಂದೆ ನಿಭಾಯಿಸಿದ ಸ್ಥಾನಕ್ಕೂ ಈಗ ನಡೆದುಕೊಳ್ಳದ್ದಕ್ಕೂ ತಕ್ಕದಲ್ಲ ಎಂದು ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತರಕಾರಿ ಸುರಿದು ರೈತರ ಆಕ್ರೋಶ – ಜಿಲ್ಲೆಗಳಲ್ಲಿ ಪ್ರತಿಭಟನೆ
ಭಾರತ ಬಂದ್ ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದರು.
ಚಿಕ್ಕಬಳ್ಳಾಪುರ: ಭಾರತ್ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಗ್ಗೆ ರೈತರು ಪ್ರತಿಭಟನೆ ಧರಣಿ ಪಂಜಿನ ಮೆರವಣಿಗೆ ನಡೆಸುತ್ತಿದ್ರೂ ಸಹ ಕೆಎಸ್‌ಆರ್‌ಟಿಸಿ ಬಸ್ಸುಗಳು ಮಾತ್ರ ಎಂದಿನಂತೆ ಸಂಚಾರ ಆರಂಭಿಸಿವೆ.
ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ಎಂದಿನಂತೆ ಬಂದು ತಮ್ಮ ಪ್ರಯಾಣವನ್ನು ಮಾಡುತ್ತಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಗಳಿಗೆ ಬಂದ್ ನ ಬಿಸಿ ಇಲ್ಲವಾಗಿದೆ. ಇದನ್ನೂ ಓದಿ: ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ
ಬೆಳಗ್ಗೆ 07 ಗಂಟೆಯವರೆಗೆ ಆರಂಭವಾಗಬೇಕಾದ 18 ಮಾರ್ಗಗಳ ಬಸ್ ಸಂಚಾರ ಎಂದಿನಂತೆ ಆರಂಭವಾಗಿದೆ. ಯಾವುದೇ ವ್ಯತ್ಯಾಸವಿಲ್ಲ ಎಂದು ಕೆಎಸ್‌ಆರ್‌ಟಿಸಿ ಡಿ.ಸಿ ಹಿಮವರ್ಧನ್ ನಾಯ್ಡು ಪಬ್ಲಿಕ್ ಟಿವಿ ಗೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಎಂದಿನಂತೆ ಸಾರ್ವಜನಿಕರಿಗೆ ಸೇವೆ ಒದಗಿಸುವ ಸಲುವಾಗಿ ಬಸ್ ಸಂಚಾರ ಆರಂಭಿಸಲಾಗಿದೆ. ಆದರೆ ಬಂದ್ ಹಿನ್ನೆಲೆ ಪ್ರಯಾಣಿಕರ ಕೊರತೆ ಕಾಣುತ್ತಿದೆ. ಬಂದ್ ಎಂಬ ಕಾರಣಕ್ಕೆ ಎಂದಿನಂತೆ ಬಸ್ ನಿಲ್ದಾಣಗಳತ್ತ ಪ್ರಯಾಣಿಕರು ಬರ್ತಿಲ್ಲ. ಆದರೂ ನಾವು ಎಂದಿನಂತೆ ಬಸ್ ಸಂಚಾರ ಆರಂಭಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ತರಕಾರಿ ಸುರಿದು ರೈತರ ಆಕ್ರೋಶ – ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ
ಮುಂಜಾಗ್ರತ ಕ್ರಮವಾಗಿ ಬಸ್ ನಿಲ್ದಾಣದ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬಸ್ ಗಳಿಗೆ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಸಹ ಮಾಡಲಾಗಿದೆ.