Tag: ಭಾರತ್ ಬಂದ್

  • ನಾಲ್ಕೂವರೆ ವರ್ಷ ಕಾಂಗ್ರೆಸ್ಸಿಗರು ಎಲ್ಲಿದ್ರು?- ಶ್ರೀನಿವಾಸ್ ಪೂಜಾರಿ ಲೇವಡಿ

    ನಾಲ್ಕೂವರೆ ವರ್ಷ ಕಾಂಗ್ರೆಸ್ಸಿಗರು ಎಲ್ಲಿದ್ರು?- ಶ್ರೀನಿವಾಸ್ ಪೂಜಾರಿ ಲೇವಡಿ

    ಉಡುಪಿ: ಕಾಂಗ್ರೆಸ್ ಪಕ್ಷ ಕರೆ ನೀಡಿರುವ ರಾಜಕೀಯ ಪ್ರೇರಿತ ಬಂದ್ ನಿರ್ಲಕ್ಷ್ಯ ಮಾಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಬೇಕು ಎಂಬದು ಜನರ ಆಶಯ. ಇದನ್ನು ಕಂಡು ಕಾಂಗ್ರೆಸ್ ಮುಂಖಡರಿಗೆ ಗಾಬರಿಯಾಗಿದೆ. ನಾಲ್ಕೂವರೆ ವರ್ಷ ಏನೂ ಸಿಗದೆ, ಸದ್ಯ ತೈಲ ದರ ಏರಿಕೆಗೆ ಕುರಿತು ಗಲಾಟೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

    ಕಾಂಗ್ರೆಸ್‍ನ ಜನರ ಮುಂದಿಟ್ಟಿರುವ ವಾದವನ್ನು ಎಲ್ಲರು ನಿರ್ಲಕ್ಷ್ಯ ಮಾಡಲಿದ್ದು, ಬಂದ್ ಕರೆ ನೀಡಿದರೆ ಜನ ತಿರಸ್ಕಾರ ಮಾಡುತ್ತಾರೆ. ಪ್ರಧಾನಿ ಮೋದಿ ಅವರ ಕೆಲಸ ಪಾರದರ್ಶಕವಾಗಿದೆ. ಮೋದಿ ಕೆಲಸಗಾರ ಅನ್ನುವ ಭಾವನೆ ಜನರಿಗೆ ಇದೆ. ಅಲ್ಲದೇ ಯುಪಿಎ ಅಧಿಕಾರ ಅವಧಿಯಲ್ಲಿ ಎಷ್ಟು ಬಾರಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿಲ್ಲ ಎಂದು ಇದೇ ವೇಳೆ ಪೂಜಾರಿ ಪ್ರಶ್ನೆ ಮಾಡಿದರು.

    ಸಂವಿಧಾನ ಬದ್ಧವಾಗಿ ಬಂದ್ ಮಾಡುವುದು ಸರಿಯಲ್ಲ ಎಂದ ಅವರು, ತೈಲ ಬೆಲೆ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ ಅಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಅಗುವುದು ಸ್ವಾಭಾವಿಕ. ಇದರ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಆಗಿದೆ. ಮೋದಿ ಸರ್ಕಾರದ ನಾಲ್ಕೂವರೆ ವರ್ಷದ ಆಡಳಿತದಲ್ಲಿ ಚಳುವಳಿ ಮಾಡಲು ಕಾಂಗ್ರೆಸ್ ಗೆ ಏನೂ ಸಿಕ್ಕಿಲ್ಲ. ಈಗ ಬೆಲೆ ಏರಿಕೆ ಎಂದು ಬೀದಿಗಿಳಿದಿದ್ದಾರೆ. ರಾಜ್ಯದ ಜನ ಇದಕ್ಕೆ ಸೊಪ್ಪು ಹಾಕಲ್ಲ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಮೋದಿಯ ಅಚ್ಚೇ ದಿನ್‍ಗೆ ಕಾದರೆ ದೇಶ ಬರ್ಬಾದ್- ಉಡುಪಿ ಕಾಂಗ್ರೆಸ್ ಅಧ್ಯಕ್ಷ

    ಮೋದಿಯ ಅಚ್ಚೇ ದಿನ್‍ಗೆ ಕಾದರೆ ದೇಶ ಬರ್ಬಾದ್- ಉಡುಪಿ ಕಾಂಗ್ರೆಸ್ ಅಧ್ಯಕ್ಷ

    ಉಡುಪಿ: ಭಾರತ್ ಬಂದ್ ಗೆ ಕಾಂಗ್ರೆಸ್ ಕರೆ ಕೊಟ್ಟಿದೆ. ಅಚ್ಚೇ ದಿನ್ ಬರುತ್ತೆ ಅಂತ ಮೋದಿಯ ಮಾತಿಗೆ ಕಾದರೆ ದೇಶ ಬರ್ಬಾದ್ ಆಗುತ್ತದೆ ಅಂತ ಉಡುಪಿ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಬೆಲೆ ಏರಿಕೆ ಆಗೋದು ಸಾಮಾನ್ಯ. ಆದರೆ ಕೇಂದ್ರ ಬಿಜೆಪಿ ಸರ್ಕಾರದ್ದು ಯಾಕೋ ವಿಪರೀತವಾಯಿತು. ಇದನ್ನು ಎಲ್ಲರೂ ಒಕ್ಕೂರಲಿನಿಂದ ಖಂಡಿಸಬೇಕು ಅಂತ ಬಂದ್ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಪರವಾಗಿ ಕರೆ ನೀಡಿದರು. ಸೋಮವಾರ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾವು ಬಿಜೆಪಿಯವರಂತೆ ಬೆಂಕಿ ಹಾಕಿ ಪ್ರತಿಭಟನೆ ಮಾಡೋದಿಲ್ಲ. ಅಂಗಡಿಗಳ ಶಟರ್ ಎಳೆದು ಸಮಸ್ಯೆ ಕೊಡುವುದಿಲ್ಲ. ಜನತೆಯ ಮೇಲೆ ಯಾವುದೇ ಒತ್ತಡ ಹಾಕುವುದಿಲ್ಲ ಅಂತ ಹೇಳಿದರು. ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್ ಗೆ ಜಿಲ್ಲೆಯ ಮಟ್ಟಿಗೆ ಭಾರೀ ಬೆಂಬಲ ಸಿಕ್ಕಿದೆ ಎಂದರು. ಇದನ್ನು ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ

    ಪೆಟ್ರೋಲ್, ಡೀಸೆಲ್ ಗ್ಯಾಸ್ ಜನರ ಕಿಸೆ ಸುಡುತ್ತಿದೆ. ಮೋದಿಯ ಅಚ್ಚೇ ದಿನ್ ಗೆ ಕಾದರೆ ದೇಶ ಬರ್ಬಾದ್ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಡುಪಿಯ ಎಲ್ಲಾ ಸಂಸ್ಥೆಗಳು ಕೈಜೋಡಿಸಿದೆ. ಬಂದ್ ಗೆ ಖಾಸಗಿ ಬಸ್ ಮಾಲೀಕರು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ ಎಂದರು.

    ಟ್ಯಾಕ್ಸಿ, ಆಟೋ ಚಾಲಕ ಮಾಲೀಕರಿಂದಲೂ ಬೆಂಬಲ ಬಂದಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಡಳಿತಕ್ಕೆ ಕಾಂಗ್ರೆಸ್ ಮನವಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಮವಾರದ ಭಾರತ್ ಬಂದ್‍ಗೆ ಸಂಪೂರ್ಣ ಬೆಂಬಲ: ಎಚ್‍ಡಿಡಿ

    ಸೋಮವಾರದ ಭಾರತ್ ಬಂದ್‍ಗೆ ಸಂಪೂರ್ಣ ಬೆಂಬಲ: ಎಚ್‍ಡಿಡಿ

    ಹಾಸನ: ತೈಲ ದರಗಳ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸೋಮವಾರದ ಭಾರತ್ ಬಂದ್‍ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಭಾರತ್ ಬಂದ್‍ಗೆ ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡುತ್ತಿದ್ದು, ನಮ್ಮ ಪಕ್ಷದ ಬೆಂಬಲವೂ ಇದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಯಾವುದೇ ಅಡೆ-ತಡೆ ಇಲ್ಲದೆ ಏರಿಕೆಯಾಗುತ್ತಿವೆ. ಇದರಿಂದಾಗ ಜನಸಾಮಾನ್ಯನ ಮೇಲೆ ಹೊರೆ ಹೆಚ್ಚುತ್ತಿದೆ. ಹೀಗಾಗಿ ನಾವು ಬಂದ್‍ಗೆ ಬೆಂಬಲ ನೀಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಸೋಮವಾರ ನಾನು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತೇವೆ. ಭೇಟಿ ವೇಳೆ ನೆರೆ ಹಾವಳಿಯಿದಾಗಿ ಆಗಿರುವ ಹಾನಿ ಕುರಿತು ಅಂಕಿ-ಅಂಶಗಳನ್ನು ನೀಡಿ, ಪರಿಹಾರಕ್ಕಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ

    ಸೋಮವಾರದ ಭಾರತ್ ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಹಾಗೂ ಲಾರಿ ಮಾಲೀಕರ ಸಂಘವೂ ಬೆಂಬಲ ನೀಡಿದೆ. ಹೀಗಾಗಿ ನಾಳೆ ಸಾರಿಗೆ ಬಸ್ ಹಾಗೂ ಲಾರಿ ಸಂಚಾರ ಸ್ಥಗಿತವಾಗಲಿದೆ. ಶಾಲಾ-ಕಾಲೇಜುಗಳೀಗೆ ರಜೆ ಘೋಷಣೆ ಇನ್ನೂ ನಿಗದಿಯಾಗಿಲ್ಲ. ನಾಳಿನ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಮವಾರ ಭಾರತ ಬಂದ್-ಸ್ತಬ್ಧವಾಗುತ್ತಾ ಕರ್ನಾಟಕ..?

    ಸೋಮವಾರ ಭಾರತ ಬಂದ್-ಸ್ತಬ್ಧವಾಗುತ್ತಾ ಕರ್ನಾಟಕ..?

    ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿರುವ ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಇರೋದ್ರಿಂದ ವ್ಯಾಪಕ ಬೆಂಬಲ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಅಂತಾ ಹೇಳಿದ್ದು ಸಾರಿಗೆ ನಿಗಮಗಳು ಕೂಡ ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಸರ್ಕಾರವೇ ಬಂದ್ ಗೆ ಬೆಂಬಲ ಕೊಡೋದ್ರಿಂದ ಬೆಂಗಳೂರಿನಲ್ಲಿ ಬಂದ್ ಬಿಸಿ ಹೇಗಿರಲಿದೆ? ಭಾರತ್ ಬಂದ್ ದಿನ ಏನಿರುತ್ತೆ? ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.

    ಬಂದ್‍ಗೆ ಬೆಂಬಲ ಕೊಟ್ಟ ಸಂಘಟನೆಗಳು:
    1. ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳಿಂದಲೂ ಬೆಂಬಲ. ಬಂದ್ ದಿನ ಬಸ್ ಇರಲ್ಲ.
    2. ಕೆಲ ಆಟೋ ಯೂನಿಯನ್ ನಿಂದ ಬೆಂಬಲ
    3. ಓಲಾ ಉಬರ್ ಸಂಘದಿಂದ ಸಂಪೂರ್ಣ ಬೆಂಬಲ
    4. ಚಿತ್ರ ಪ್ರದರ್ಶನ ಬಂದ್ ಸಾಧ್ಯತೆ.
    5. ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಬೆಂಬಲ (ಕೇಂದ್ರ ಸರ್ಕಾರ ಸ್ವಾಮ್ಯದ ಕಚೇರಿಯ ಮುಂದೆ ಪ್ರತಿಭಟನೆ)
    6. ಕನ್ನಡ ಒಕ್ಕೂಟ ವಾಟಾಳ್ ನಾಗರಾಜ್ ರಿಂದ ಬೆಂಬಲ
    7. ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಯಾಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟ.

    ಬಂದ್‍ಗೆ ‘ಕೈ’ ಕೊಟ್ಟ ಸಂಘಟನೆಗಳು:
    1. ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡದ ಕ್ಯಾಮ್ಸ್. (ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟ ಸಾಧ್ಯತೆ)
    2. ಲಾರಿ ಸಂಘದ ಬೆಂಬಲ ಇಲ್ಲ.
    3. ಖಾಸಗಿ ಟ್ಯಾಕ್ಸಿಗಳ ಬೆಂಬಲ ಇಲ್ಲ.
    4. ಕೆಲ ಆಟೋ ಯೂನಿಯನ್ ಬೆಂಬಲ ಇಲ್ಲ.
    5. ಮೆಟ್ರೋ ಸಂಚಾರ.
    6. ಬ್ಯಾಂಕ್ ಗಳು ಕಾರ್ಯನಿರ್ವಹಿಸುವ ಸಾಧ್ಯತೆ.

    ಗೊಂದಲದಲ್ಲಿರುವವರು:
    1. ಹೋಟೆಲ್ ಮಾಲೀಕರ ಸಂಘದಿಂದ ಬಂದ್‍ಗೆ ಬೆಂಬಲ ಕೊಡಬೇಕೋ? ಬೇಡೆವೋ? ಎಂಬುದರ ಬಗ್ಗೆ ಭಾನುವಾರ ಸಂಜೆ ಅಂತಿಮ ನಿರ್ಧಾರ
    2. ಖಾಸಗಿ ಬಸ್ ಗಳಿಂದ ಇನ್ನು ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.

    ಈ ಮಧ್ಯೆ ಇಂದು ಕಾಂಗ್ರೆಸ್ ಯುವ ಮೋರ್ಚದಿಂದ ಮೌರ್ಯ ಸರ್ಕಲ್ ನಲ್ಲಿ ತೈಲ ದರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಕೂಡ ಪ್ರತಿಭಟನೆ ಯಲ್ಲಿ ಪಾಲ್ಗೊಂಡು, ಬೆಲೆ ಏರಿಕೆ ತಡೆಯುವಲ್ಲಿ ಕೇಂದ್ರ ವಿಫಲವಾಗಿದೆ ಅಂತಾ ಕಿಡಿಕಾರಿದರು. ಇದೇ ವೇಳೆ ಸೋಮವಾರ ನಡೆಯುವ ಬಂದ್‍ಗೆ ಬೆಂಬಲ ಕೊಡುವಂತೆ ವಾಹನ ಸವಾರರಿಗೆ ಮನವಿ ಮಾಡಿದರು. ಕನ್ನಡ ಒಕ್ಕೂಟ ನಾಗೇಶ್ ಬಣದಿಂದ ಬನ್ನಪ್ಪ ಪಾರ್ಕ್ ನಲ್ಲಿ ತೈಲ ಬೆಲೆ ವಿರೋಧಿಸಿ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ನ್ನು ತಲೆಯ ಮೇಲೆ ಹೊತ್ತುಕೊಂಡು ಪ್ರತಿಭಟನೆ ಮಾಡಿದರು.

    ಸೋಮವಾರ ಭಾರತ್ ಬಂದ್ ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ಸಕ್ಸಸ್ ಆಗೋದು ಬಹುತೇಕ ಖಚಿತವಾಗಿದೆ. ಬಂದ್ ದಿನ ಮೋದಿ ಸರ್ಕಾರದ ವಿರುದ್ಧ ಪುರಭವನದ ಮುಂದೆ ಬೃಹತ್ ಹೋರಾಟಕ್ಕೆ ಸಮ್ಮಿಶ್ರ ಸರ್ಕಾರ ರೆಡಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=u9AYRhmlwlo

  • ಸೋಮವಾರ ರಸ್ತೆಗೆ ಇಳಿಯಲ್ಲ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ಸುಗಳು

    ಸೋಮವಾರ ರಸ್ತೆಗೆ ಇಳಿಯಲ್ಲ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ಸುಗಳು

    ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ ಸ್ತಬ್ಧವಾಗಲಿದೆ.

    ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರೆ ರಂದೀಪ್ ಸುರ್ಜೆವಾಲಾ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.

    ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು.

    ಕೇಂದ್ರ ಸರ್ಕಾರವು 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸುವಂತೆ ಆಗ್ರಹಿಸುತ್ತೇವೆ. ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕು. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಕಡಿಮೆಯಾಗುತ್ತದೆ. ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಳ್ಳುತ್ತೇನೆಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಕೇಂದ್ರ ಸರ್ಕಾರ ತೈಲ ದರ ಏರಿಕೆ ಮಾಡುವ ಮೂಲಕ 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಹೀಗಾಗಿ ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿಕೊಂಡರು.

    ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಆಶೋಕ್ ಗೆಹ್ಲೋಟ್ ಮಾತನಾಡಿ, ನಾವು ಭಾರತ್ ಬಂದ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್ಚರಿಸಬೇಕಾಗಿದೆ. ಇಂಧನ ಬೆಲೆಗಳು ಗಗನಕ್ಕೇರಿದ್ದರೂ ಅವರನ್ನು ಸುಮ್ಮನೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ಭಾರತ್ ಬಂದ್ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಗಗನಕ್ಕೆ ಏರಿಕೆಯಾಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೃದಯ ಇಲ್ಲದಂತೆ, ಕರುಣೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆರೆ ಏರಿಕೆ ಖಂಡಿಸಿ ಇದೇ ಸೆಪ್ಟೆಂಬರ್ 10ಕ್ಕೆ ಕಾಂಗ್ರೆಸ್ ವತಿಯಿಂದ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ತೀರ್ಮಾಸಿದ್ದೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

    ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

    ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ವಿವಾದಿತ ‘ಪದ್ಮಾವತ್’ ಚಿತ್ರ ಜನವರಿ 25 ರಂದು ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ರಜಪೂತ ಕರ್ಣಿಸೇನಾ ವಿರೋಧ ವ್ಯಕ್ತಪಡಿಸಿ ಪದ್ಮಾವತ್ ಬಿಡುಗಡೆ ದಿನದಂದು ಭಾರತ್ ಬಂದ್ ಗೆ ಕರೆ ನೀಡಿದೆ.

    ಪ್ರಸ್ತುತ ಸಿನಿಮಾ ಬಿಡುಗಡೆಗೆ ನಿರ್ಧರಿಸಿದ್ದ ಜನವರಿ 25 ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಲು ಕರ್ಣಿ ಸೇನಾ ನಿರ್ಧರಿಸದೆ. ಬಂದ್ ಯಶಸ್ವಿ ಮಾಡುವುದಾಗಿ ಕರ್ಣಿಸೇನಾ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ರಾಜಪೂತ ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ನಡುವಿನ ಪ್ರೇಮ ಪ್ರಸಂಗವಿದ್ದು, ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿವೆ.

    ಚಿತ್ರದ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ್ದು, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯ ಸರ್ಕಾರಗಳ ನಿಷೇಧಕ್ಕೆ ತಡೆ ನೀಡಿತ್ತು. ಅಲ್ಲದೇ ಚಿತ್ರದ ಬಿಡುಗಡೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ತಿಳಿಸಿತ್ತು. ಕೋರ್ಟ್ ಆದೇಶ ನಂತರವೂ ಕರ್ಣಿಸೇನಾ ಮಾತ್ರ ಚಿತ್ರ ಬಿಡುಗಡೆಯಾದರೆ ಹಿಂಸಾತ್ಮಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

    ಚಿತ್ರವನ್ನು ಪ್ರದರ್ಶಿಸುವ ಚಿತ್ರ ಮಂದಿರ ಮಾಲೀಕರಿಗೂ ಸಿನಿಮಾವನ್ನು ಬಿಡುಗಡೆ ಮಾಡದಂತೆ ಕರ್ಣಿಸೇನಾ ಎಚ್ಚರಿಕೆ ನೀಡಿದೆ. ಇದರಿಂದ ಚಿತ್ರಮಂದಿರ ಮಾಲೀಕರು ಸಿನಿಮಾ ಬಿಡುಗಡೆ ಮಾಡಲು ಹೆದರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಎಎನ್‍ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಗುಜರಾತ್ ಚಿತ್ರಮಂದಿರ ಮಾಲೀಕ ಸಂಘದ ಅಧ್ಯಕ್ಷ ರಾಕೇಶ್ ಪಟೇಲ್, ಸಿನಿಮಾ ಬಿಡುಗಡೆ ಮಾಡದಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಯಾವುದೇ ಮಾಲ್ಟಿಪ್ಲೆಕ್ಸ್ ಮಾಲೀಕರು ಚಿತ್ರದ ಪ್ರದರ್ಶನದ ವೇಳೆ ಉಂಟಾಗಬಹುದಾದ ನಷ್ಟವನ್ನು ಬರಿಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.

    ಚಿತ್ರ ನಿರ್ದೇಶಕರು ಸಿನಿಮಾವನ್ನು ವಿರೋಧಿಸುತ್ತಿರುವ ಸಂಘಟನೆಗಳ ಆರೋಪಗಳನ್ನು ತಿರಸ್ಕರಿಸಿದ್ದು, ಚಿತ್ರದಲ್ಲಿ ಅಂತಹ ಯಾವುದೇ ದೃಶ್ಯಗಳು ಇಲ್ಲ ಎಂದು ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಹಲವು ನಟರಿಗೆ ಜೀವ ಬೆದರಿಕೆಗಳ ಬಂದಿರುವ ಪರಿಣಾಮ ಚಿತ್ರದ ಪ್ರಚಾರ ಕಾರ್ಯದಿಂದ ಎಲ್ಲಾ ನಟರು ದೂರವಿದ್ದಾರೆ.

    ಚಿತ್ರೀಕರಣ ಆರಂಭವಾದ ಸಮಯದಿಂದಲೂ ಸಾಕಷ್ಟು ವಿವಾದಗಳಿಗೆ `ಪದ್ಮಾವತ್’ ಚಿತ್ರ ಕಾರಣವಾಗಿತ್ತು. ಹಲವು ಬಾರಿ ಕತ್ತರಿ ಪ್ರಯೋಗಿಸಿ ಬಳಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ನಿದೇರ್ಶಕ ಸಂಜಯ್ ಲೀಲಾ ಭನ್ಸಾಲಿ ಚಿತ್ರವನ್ನು ಜನವರಿ 25 ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

  • ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

    ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

     

    ಬೆಂಗಳೂರು: ನಾವು ಸಣ್ಣ ಸಣ್ಣ ವಿಚಾರಗಳಿಗೆ ಬಂದ್ ಮಾಡುತ್ತೇವೆ. ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ.

    ಟ್ಟಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಉಪೇಂದ್ರ, ನಾವು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಳ್ಳುತ್ತಿದ್ದೇವೆ. ಅತ್ತ ಸಿಕ್ಕಿಂನಲ್ಲಿ ನಮ್ಮ ಸೈನಿಕರು ಯುದ್ಧದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ನಾವ್ಯಾಕೆ ಒಂದಾಗಿ ಸೈನಿಕರನ್ನು ಬೆಂಬಲಿಸಿ ಬೀದಿಗಿಳಿದು ಚೀನಾಕ್ಕೆ ಯಾಕೆ ಎಚ್ಚರಿಕೆ ನೀಡುತ್ತಿಲ್ಲ ಎಂದು ಕೇಳಿದ್ದಾರೆ.

    ನಾವು ಆಳಬೇಕಾದವರು, ಆಳಿಸಿಕೊಳ್ಳುವವರು ನಾವಲ್ಲ. ನಾವು ಇಸ್ರೇಲಿನಿಂದ ಪಾಠ ಕಲಿಯಬೇಕಿದೆ ಎಂದು ಅವರು ಮತ್ತೊಂದು ಟ್ವೀಟ್ ಮಾಡಿ ಚೀನಾ ಆಕ್ರೋಶವನ್ನು ಹೊರ ಹಾಕಿದ್ದಾರೆ.