Tag: ಭಾರತ್‌ ಬ್ರ್ಯಾಂಡ್‌ ಅಕ್ಕಿ

  • ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಗ್ರಾಹಕರಿಗೆ ಆನ್‌ಲೈನ್‌ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ

    ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು. ಇದನ್ನೂ ಓದಿ: ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ

    ಇದೀಗ ಭಾರತ್ ಬ್ರ‍್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ.ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ

    ಪ್ರಮುಕವಾಗಿ ಭಾರತ್ ಬ್ರಾಂಡ್‌ನ ಅಕ್ಕಿ ಅಮೇಜಾನ್, ಫ್ಲಿಪ್ ಕಾರ್ಟ್ ನಂತಹ ಆನ್‌ಲೈನ್ ಶಾಪಿಂಗ್ ಆಪ್ಲಿಕೇಶನಲ್ಲೂ ಸಹ ಖರೀದಿಸಬಹುದು. ಇದರಿಂದ ಜನ ಸಾಮಾನ್ಯರಿಗೆ ಇನಷ್ಟು ಸುಲಭವಾಗಲಿದೆ. ಇದನ್ನೂ ಓದಿ:KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್‌ಗಳ ಬಲ – 100 ಬಸ್‌ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ

    ನಗರದ ಯಾವ ಪ್ರಮುಖ ಪ್ರದೇಶಗಳಲ್ಲಿ ಅಕ್ಕಿ ಸಿಗಲ್ಲಿದೆ ಎಂಬುದರ ಪಟ್ಟಿ ಹೀಗಿದೆ.
    ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಜೆ.ಸಿ. ನಗರ, ಡೈರಿ ಸರ್ಕಲ್, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತೆ.  ಇದನ್ನೂ ಓದಿ:ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದಾಂಧಲೆ

  • 29 ರೂ.ಗೆ ಸಿಗಲಿದೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

    29 ರೂ.ಗೆ ಸಿಗಲಿದೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

    ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ (Bharat Rice) ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ (Union Governmen) ತಿಳಿಸಿದೆ.

    ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಬಿಜೆಪಿಯಿಂದ ಕೋಟಿ ಕೋಟಿ ಆಫರ್‌ – ಆರೋಪ ಮಾಡಿದ್ದ ಕೇಜ್ರಿವಾಲ್‌ಗೆ ಕಂಟಕ – ದೆಹಲಿ ಕ್ರೈಂಬ್ರ್ಯಾಂಚ್‌ ನೋಟಿಸ್‌

    ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ (Sanjeev Chopra) ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಈಗಾಗಲೇ ʻಭಾರತ್‌ ಬ್ರ್ಯಾಂಡ್‌ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

    ಎಲ್ಲಿ ಮಾರಾಟ?
    ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‌ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ಕಾಂಗ್ರೆಸ್‌ 40 ಸೀಟು ಗೆಲ್ಲೋದು ಡೌಟ್‌ – ಬಿಜೆಪಿ ಪರ ದೀದಿ ಬ್ಯಾಟಿಂಗ್‌