Tag: ಭಾರತ್ ರೈಸ್

  • ಕಡಿಮೆ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

    ಕಡಿಮೆ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

    ನವದೆಹಲಿ: ಅಕ್ಕಿ, ಗೋಧಿ, ಬೇಳೆ ಸೇರಿದಂತೆ ದ್ವಿದಳ ಧಾನ್ಯಗಳ ಬೆಲೆಗಳನ್ನು ಮಾರುಕಟ್ಟೆಯಲ್ಲಿ ನಿಯಂತ್ರಣದಲ್ಲಿಡುವ ದೃಷ್ಟಿಯಿಂದ ಭಾರತ್ ಬ್ರಾಂಡ್ (Bharat Brand) ಅಡಿಯಲ್ಲಿ ಎರಡನೇ ಹಂತದಲ್ಲಿ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಲನೆ ನೀಡಿದ್ದಾರೆ.

    ದೆಹಲಿಯಲ್ಲಿರುವ ಕೃಷಿ ಭವನದಲ್ಲಿ NCCF, NAFED ಮತ್ತು ಕೇಂದ್ರೀಯ ಭಂಡಾರ್‌ನ ಮೊಬೈಲ್ ವ್ಯಾನ್‌ಗಳಿಗೆ ಚಾಲನೆ ನೀಡುವ ಮೂಲಕ ಭಾರತ್ ಗೋಧಿ ಹಿಟ್ಟು ಮತ್ತು ಭಾರತ್ ಅಕ್ಕಿ ಚಿಲ್ಲರೆ ಮಾರಾಟದ 2ನೇ ಹಂತಕ್ಕೆ ಜೋಶಿ ಚಾಲನೆ ನೀಡಿದರು. ಈ ವೇಳೆ ರಾಜ್ಯ ಖಾತೆ ಸಚಿವರಾದ ಬಿ.ಎಲ್ ವರ್ಮಾ ಉಪಸ್ಥಿತರಿದ್ದರು. ಇದನ್ನೂ ಓದಿ: ರೈತರ ಜಮೀನಿಗೆ ವಕ್ಫ್ ನೋಟಿಸ್ – ಸಿಎಂ ಮುಂದೆ 6 ಬೇಡಿಕೆಯಿಟ್ಟ ಶೋಭಾ ಕರಂದ್ಲಾಜೆ

    ಮೊದಲ ಹಂತದ ಸಮಯದಲ್ಲಿ ಸುಮಾರು 15.20 ಲಕ್ಷ ಮೆಟ್ರಿಕ್ ಟನ್ ಭಾರತ್ ಗೋಧಿ ಹಿಟ್ಟು ಮತ್ತು 14.58 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಅನ್ನು ಸಾಮಾನ್ಯ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಲಭ್ಯಗೊಳಿಸಲಾಗಿತ್ತು. ಎರಡನೇ ಹಂತದ ಆರಂಭಿಕ ಹಂತದಲ್ಲಿ 3.69 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 2.91 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಚಿಲ್ಲರೆ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

    ಅಕ್ಕಿ ಮತ್ತು ಗೋಧಿ ಹಿಟ್ಟನ್ನು NCCF, NAFED ಮತ್ತು ಇ-ಕಾಮರ್ಸ್/ಬಿಗ್ ಚೈನ್ ರಿಟೇಲರ್‌ಗಳ ಅಂಗಡಿಗಳು ಮತ್ತು ಮೊಬೈಲ್ ವ್ಯಾನ್‌ಗಳಲ್ಲಿ ಲಭ್ಯವಿರುತ್ತದೆ. 5 ಕೆಜಿ ಮತ್ತು 10 ಕೆಜಿ ಚೀಲಗಳಲ್ಲಿ ಮಾರಾಟ ಮಾಡಲಾಗುತ್ತದೆ. ಅಕ್ಕಿಯ ಬೆಲೆ ಪ್ರತಿ ಕೆಜಿಗೆ 34 ರೂ. ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ಪ್ರತಿ ಕೆಜಿಗೆ 29 ರೂ. ನಿಗದಿ ಮಾಡಿದೆ. ಇದನ್ನೂ ಓದಿ: ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್‌ ಖಾನ್‌ಗೆ ಬೆದರಿಕೆ – ತುಮಕೂರಲ್ಲಿ ಆರೋಪಿ ಅರೆಸ್ಟ್‌

    ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ಭಾರತ ಗೋಧಿ ಹಿಟ್ಟು, ಅಕ್ಕಿಯನ್ನು ಎರಡನೇ ಹಂತದಲ್ಲಿ ಕೊಡುವ ತಿರ್ಮಾನ ಮಾಡಿದೆ. ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸಲು ಇದನ್ನು ಪರಿಚಯಿಸಿದೆ. ಬೆಲೆ ನಿಯಂತ್ರಣ ಫಂಡ್ ಮೂಲಕ ಇದನ್ನು ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಯಾವ ಕ್ಷೇತ್ರವೂ ರಾಜಕಾರಣಿಗಳ ಭದ್ರಕೋಟೆ ಅಲ್ಲ, ಜನರ ಭದ್ರಕೋಟೆ: ಮಹದೇವಪ್ಪ

    ಅಗತ್ಯ ವಸ್ತುಗಳ ಬೆಲೆ 9 ವರ್ಷದಲ್ಲಿ ಬಹುತೇಕ ಸ್ಥಿರವಾಗಿದೆ. ಆದರೆ ಈ ವರ್ಷ ಬೇರೆ ಬೇರೆ ಕಾರಣಗಳಿಂದ ಬೆಲೆ ಏರಿಕೆಯಾಗುತ್ತಿದೆ. ಈಗಾಗಲೇ ಬೇಳೆ ಕಾಳುಗಳನ್ನು ಭಾರತ್ ಬ್ರ್ಯಾಂಡ್ ಮೂಲಕ ಮಾರಾಟ ಮಾಡುತ್ತಿದ್ದೇವೆ. ಅಕ್ಕಿಗೆ 34 ರೂ, ಗೋಧಿ ಹಿಟ್ಟಿಗೆ 29 ಬೆಲೆ ನಿಗದಿ ಮಾಡಿದೆ. ರೈತರಿಗೆ ತೊಂದರೆಯಾಗಬಾರದು ಎಂದು ರೈತರಿಂದ ಸರ್ಕಾರ ಖರೀದಿ ಮಾಡುತ್ತಿದೆ. ಗ್ರಾಹಕರಿಗೆ ಬೆಲೆ ಏರಿಕೆ ಸಮಸ್ಯೆ ಆಗಬಾರದು ಎಂದು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದಂಗಡಿಗಳಿಂದ ತಿಂಗಳಿಗೆ 15 ಕೋಟಿ ಲಂಚ – ಅಬಕಾರಿ ಇಲಾಖೆ ವಿರುದ್ಧ ಗಂಭೀರ ಆರೋಪ

  • ಕೇಂದ್ರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

    ಕೇಂದ್ರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

    ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

    ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

    ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

    ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ. ಇದನ್ನೂ ಓದಿ: ‘ಭಾರತ್ ರೈಸ್’ಗೆ ಮುಗಿಬಿದ್ದ ಜನ- ಅರ್ಧಗಂಟೆಯಲ್ಲಿ 1 ಟನ್ ಅಕ್ಕಿ ಸೋಲ್ಡ್ ಔಟ್

    ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ (Bharat Rice) ಮಾರಾಟ ಆರಂಭಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ (Union Government) ತಿಳಿಸಿತ್ತು. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟವಾಗುತ್ತಿತ್ತು.

    ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

    ಮೆಚ್ಚುಗೆ ವ್ಯಕ್ತವಾಗಿತ್ತು:
    ಬಿಪಿಎಲ್‌ ಕಾರ್ಡ್‌ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್‌ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

     

  • ‘ಭಾರತ್ ರೈಸ್’ಗೆ ಮುಗಿಬಿದ್ದ ಜನ- ಅರ್ಧಗಂಟೆಯಲ್ಲಿ 1 ಟನ್ ಅಕ್ಕಿ ಸೋಲ್ಡ್ ಔಟ್

    ‘ಭಾರತ್ ರೈಸ್’ಗೆ ಮುಗಿಬಿದ್ದ ಜನ- ಅರ್ಧಗಂಟೆಯಲ್ಲಿ 1 ಟನ್ ಅಕ್ಕಿ ಸೋಲ್ಡ್ ಔಟ್

    ಬೆಂಗಳೂರು: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ‘ಭಾರತ್’ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸಿದ್ದು, ಅಗ್ಗ ದರದ ಈ ಅಕ್ಕಿಯನ್ನು ಕೊಳ್ಳಲು ಬೆಂಗಳೂರಿನ ಜನರು ಮುಗಿಬಿದ್ದಿದ್ದಾರೆ.

    ಕೇಂದ್ರದಿಂದ 29 ರೂಪಾಯಿ ಕೆಜಿ ಅಕ್ಕಿಯ ಸಂಚಾರಿ ವ್ಯಾನ್ ವಿಧಾನಸೌಧ ಮುಂಭಾಗ ನಿಂತ ಕೂಡಲೇ ಅಕ್ಕಿ ಕೊಳ್ಳಲು ಜನರು ನಾ ಮುಂದು ತಾ ಮುಂದು ಎಂದು ಅಕ್ಕಿ ಕೊಳ್ಳಲು ಮುಗಿಬಿದ್ದಿದ್ದಾರೆ. ಅಕ್ಕಿ ಚೀಲ ಖರೀದಿಗೆ ಫುಲ್ ಡಿಮ್ಯಾಂಡ್ ಹಿನ್ನೆಲೆ ಕೇವಲ 30 ನಿಮಿಷಕ್ಕೆ 1 ಟನ್ ಅಕ್ಕಿ ಸೋಲ್ಡ್ ಔಟ್ ಆಗಿದೆ. ಇದನ್ನೂ ಓದಿ:‌ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸುತ್ತೇನೆ: ಪರಮಹಂಸ ಆಚಾರ್ಯ ಘೋಷಣೆ

    ಜನರಂತೂ ಅಲ್ಲೇ ಅಕ್ಕಿ ಚೀಲ ಬ್ಯಾಗ್ ಅನ್ನು ಓಪನ್ ಮಾಡಿ ಕ್ವಾಲಿಟಿ ಚೆಕ್ ಮಾಡಿದ್ದಾರೆ. ಅಲ್ಲದೇ ರಾ ರೈಸ್ ಚೆನ್ನಾಗಿದೆ, 29 ರೂ.ಗೆ ಮೋದಿ ಗಿಫ್ಟ್ ಎಂದು ಖುಷಿ ಪಟ್ಟಿದ್ದಾರೆ. ಭಾರತ್ ರೈಸ್‌ಗೆ ಆರಂಭದಲ್ಲಿಯೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಜನರಿಂದ ಫುಲ್ ಮಾರ್ಕ್ಸ್ ಸಿಕ್ಕಿದೆ. ಜನರಿಗೆ ಇನ್ನಷ್ಟು ಸುಲಭವಾಗಿ ಅಕ್ಕಿ ಸಿಕ್ಕರೇ ಇನ್ನಷ್ಟು ಸಹಾಯವಾಗಲಿದೆ. ಇದನ್ನೂ ಓದಿ: ಬೆಳಗಾವಿಯ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ ವಿರುದ್ಧ FIR

    ಈಗಾಗಲೇ ‘ಭಾರತ್ ಬ್ರ‍್ಯಾಂಡ್’ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಇದೀಗ ಅಕ್ಕಿಯೂ ಮಾರಾಟವಾಗುತ್ತಿದೆ. ಪ್ರತಿ ಕೆ.ಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್‌ಗಳಲ್ಲಿ ಅಕ್ಕಿ ದೊರೆಯುತ್ತದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬಿಜೆಪಿ ನಾಯಕರ ಹೈಡ್ರಾಮಾ- ಸಿಎಂ, ಸಚಿವರ ಕಚೇರಿಗೆ ಬೀಗ ಹಾಕಲು ಯತ್ನ