Tag: ಭಾರತ-ಅಮೆರಿಕ

  • ಅಮೆರಿಕ ಪ್ರವಾಸ – ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಭೇಟಿಯಾದ ಮೋದಿ

    ಅಮೆರಿಕ ಪ್ರವಾಸ – ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಭೇಟಿಯಾದ ಮೋದಿ

    ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್‌ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್‌ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ (Tulsi Gabbard) ಅವರನ್ನು ಭೇಟಿಯಾಗಿದ್ದಾರೆ.

    ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ ಮೋದಿ, ತುಳಸಿ ಅವರೊಂದಿಗೆ ಭಾರತ-ಯುಎಸ್ ಸ್ನೇಹದ ಬಗ್ಗೆ ಚರ್ಚಿಸಿದೆ. ಟ್ರಂಪ್ ಅವರ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಮೋದಿ ಅವರನ್ನು ಭಾರತೀಯ ಅನಿವಾಸಿಗಳ ಬೃಹತ್ ಜನಸಮೂಹ ಸ್ವಾಗತಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿತು.

    ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ! ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ವಲಸಿಗರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದು ಮೋದಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

  • ಭಾರತಕ್ಕೆ ವಾಪಸ್‌ ಹೋಗಿ; ಭಾರತ-ಅಮೆರಿಕ ಮೂಲದ ಸಂಸದೆಗೆ ನಿಂದನೆ, ಬೆದರಿಕೆ

    ಭಾರತಕ್ಕೆ ವಾಪಸ್‌ ಹೋಗಿ; ಭಾರತ-ಅಮೆರಿಕ ಮೂಲದ ಸಂಸದೆಗೆ ನಿಂದನೆ, ಬೆದರಿಕೆ

    ವಾಷಿಂಗ್ಟನ್‌: ಭಾರತೀಯ-ಅಮೆರಿಕನ್‌ ಸಂಸದೆ ಪ್ರಮಿಳಾ ಜಯಪಾಲ್‌ ಅವರಿಗೆ ವ್ಯಕ್ತಿಯೊಬ್ಬ ʼಭಾರತಕ್ಕೆ ವಾಪಸ್‌ ಹೋಗಿʼ ಎಂದು ಬೆದರಿಕೆ ಒಡ್ಡಿದ್ದಾನೆ. ಚೆನ್ನೈ ಮೂಲದ ಜಯಪಾಲ್ ಅವರನ್ನು ನಿಂದಿಸಿ ಆ ವ್ಯಕ್ತಿ ಐದು ಆಡಿಯೋ ಸಂದೇಶಗಳ ಕಳುಹಿಸಿದ್ದಾನೆ.

    ಸಂದೇಶಗಳಲ್ಲಿ ಅಶ್ಲೀಲ ಪದಗಳನ್ನು ಸಹ ಬಳಸಲಾಗಿದೆ. ಸಂಸದೆ ಪ್ರಮಿಳಾಗೆ ಬೆದರಿಕೆ ಒಡ್ಡಲಾಗಿದೆ. ಅಲ್ಲದೇ ತವರು ದೇಶ ಭಾರತಕ್ಕೆ ವಾಪಸ್‌ ಹೋಗುವಂತೆ ಸಂದೇಶದಲ್ಲಿ ಒತ್ತಾಯಿಸಿದ್ದಾನೆ. ಆ ಆಡಿಯೋ ಸಂದೇಶವನ್ನು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಪರಾವಲಂಬಿ, ಆಕ್ರಮಣಕಾರಿ, ಮನೆಗೆ ವಾಪಸ್ ಹೋಗು – ಪೋಲೆಂಡ್‍ನಲ್ಲಿ ಭಾರತೀಯನಿಗೆ ಜನಾಂಗೀಯ ನಿಂದನೆ

    ಜಯಪಾಲ್ (55) US ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಸಿಯಾಟಲ್ ಅನ್ನು ಪ್ರತಿನಿಧಿಸುವ ಮೊದಲ ಭಾರತೀಯ-ಅಮೆರಿಕನ್ ಕಾಂಗ್ರೆಸ್ ಮಹಿಳೆಯಾಗಿದ್ದಾರೆ.

    ತಮಗೆ ಎದುರಾಗಿರುವ ನಿಂದನೆ ಹಾಗೂ ಬೆದರಿಕೆ ಕುರಿತು ಪ್ರತಿಕ್ರಿಯಿಸಿರುವ ಜಯಪಾಲ್‌, ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳು ತಮ್ಮ ದುರ್ಬಲತೆಯನ್ನು ತೋರಿಸಿಕೊಳ್ಳುವುದಿಲ್ಲ. ಹಿಂಸಾಚಾರವನ್ನು ನಮ್ಮ ಹೊಸ ರೂಢಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲದ ಕಾರಣ ನಾನು ಇಲ್ಲಿ ಹಾಗೆ ಮಾಡಲು ನಿರ್ಧರಿಸಿದೆ. ಈ ಹಿಂಸಾಚಾರಕ್ಕೆ ಆಧಾರವಾಗಿರುವ ಮತ್ತು ಪ್ರೇರೇಪಿಸುವ ವರ್ಣಭೇದ ನೀತಿ ಮತ್ತು ಲಿಂಗಭೇದವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಜಯಪಾಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

    ಬೇಸಿಗೆಯ ಆರಂಭದಲ್ಲಿ ಸಿಯಾಟಲ್‌ನಲ್ಲಿರುವ ಕಾಂಗ್ರೆಸ್ ಮಹಿಳೆಯ ಮನೆಯ ಹೊರಗೆ ಪಿಸ್ತೂಲ್‌ನೊಂದಿಗೆ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದ. ಬ್ರೆಟ್ ಫೋರ್ಸೆಲ್ (49) ಎಂದು ವ್ಯಕ್ತಿಯನ್ನು ಗುರುತಿಸಿದ ಪೊಲೀಸರು ಆತನನ್ನು ಬಂಧಿಸಿದ್ದರು.

    ಸೆಪ್ಟೆಂಬರ್ 1 ರಂದು ಕ್ಯಾಲಿಫೋರ್ನಿಯಾದಲ್ಲಿ ಒಬ್ಬ ಭಾರತೀಯ-ಅಮೆರಿಕನ್ ವ್ಯಕ್ತಿಗೆ ಜನಾಂಗೀಯ ನಿಂದನೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]