Tag: ಭಾರತ ತಂಡ

  • ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನವದೆಹಲಿ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದ್ದರೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾತ್ರ ಪದೇ ಪದೇ ಒತ್ತಾಯ ಮಾಡುತ್ತಲೇ ಇದೆ. ಈ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ತನ್ನ ನೆಲದಲ್ಲೇ ನಡೆಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB), ಬಿಸಿಸಿಐ ಮುಂದೆ ಹೊಸ ಪ್ರಸ್ತಾಪ ಇಟ್ಟಿದೆ.

    ಚಾಂಪಿಯನ್ಸ್‌ ಟ್ರೋಫಿ ವೇಳೆ ಭಾರತ ತಂಡಕ್ಕೆ (Team India) ಪಾಕಿಸ್ತಾನ ಸಂಪೂರ್ಣ ಭದ್ರತೆ ಒದಗಿಸಲಿದೆ. ಭಾರತ ತಂಡಕ್ಕೆ ಸುಲಭವಾಗಲೆಂದೇ ತಂಡದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಭಾರತೀಯ ಅಭಿಮಾನಿಗಳಿಗೂ ಇದು ಅನುಕೂಲವಾಗಲಿದೆ. ಭಾರತ ತಂಡದ ಗುಂಪು ಹಂತದ ಪಂದ್ಯಗಳಿಗೆ ಅಂತರ ಇರುವುದರಿಂದ ಪ್ರತಿ ಪಂದ್ಯ ಮುಗಿದ ಬಳಿಕ ಸ್ವದೇಶಕ್ಕೆ ಮರಳಬಹುದು ಎಂದು ಬಿಸಿಸಿಐಗೆ (BCCI) ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪತ್ರ ಬರೆದಿದೆ. ಇದನ್ನೂ ಓದಿ: ಟೀಕೆಗಳಿಗೆ ತಕ್ಕ ಉತ್ತರ – 1,338 ದಿನಗಳ ಬಳಿಕ ತವರಿನಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಪಾಕ್‌

    ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ಆಯೋಜಿಸಲಾಗಿದ್ದು, ಪಂಜಾಬ್‌ನ ಚಂಡೀಗಢ ಇದಕ್ಕೆ ಹತ್ತಿರದಲ್ಲಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಉಳಿಯಲು ಇಚ್ಛಿಸದಿದ್ದರೆ, ಭದ್ರತೆ ಕೊರತೆ ಅನ್ನಿಸಿದರೆ, ಪ್ರತಿ ಪಂದ್ಯ ಮುಗಿದ ಬಳಿಕ ಚಂಡೀಗಢ ಅಥವಾ ದೆಹಲಿಗೆ ಟೀಂ ಇಂಡಿಯಾ ವಾಪಸ್‌ ಬರಬಹುದು ಎಂದು ಪತ್ರದಲ್ಲಿ ತಿಳಿಸಿದೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: ಜಿಯೋದಲ್ಲಿ ಐಪಿಎಲ್‌ ಬರಲ್ಲ, ಇನ್ನು ಮುಂದೆ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ!

    ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ, ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಟ್ಟು ಹಿಡಿದಿದ್ದ ಪಾಕ್‌ ಇದೀಗ ಹೊಸ ಪ್ರಸ್ತಾಪವನ್ನ ಬಿಸಿಸಿಐ ಮುಂದಿಟ್ಟಿದೆ. ಅಲ್ಲದೇ ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವೇಳೆ, ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವಂತೆ ಅಲ್ಲಿನ ಸರ್ಕಾರ ಹಾಗೂ ಪಿಸಿಬಿ ಮನವಿ ಸಹ ಸಲ್ಲಿಸಿದೆ ಎಂದು ಹೇಳಲಾಗಿದೆ.

    ಭಾರತದ ಪಂದ್ಯಗಳು ಹೇಗಿವೆ?
    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ಮೂರು ಗುಂಪು ಹಂತದ ಪಂದ್ಯಗಳನ್ನಾಡಲಿದೆ. ಸದ್ಯದ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 20 ರಂದು ಬಾಂಗ್ಲಾದೇಶದ ವಿರುದ್ಧ, ಫೆಬ್ರವರಿ 23 ರಂದು ಪಾಕಿಸ್ತಾನದ ವಿರುದ್ಧ, ಮಾರ್ಚ್ 2 ಎಂದು ನ್ಯೂಜಿಲೆಂಡ್ ವಿರುದ್ಧ ನಿಗದಿಯಾಗಿದೆ. ಈ ನಡುವೆ ಭಾರತ ಮತ್ತು ಕಿವೀಸ್‌ ನಡುವಿನ ಪಂದ್ಯವನ್ನು ಲಾಹೋರ್‌ನಿಂದ ರಾವಲ್ಪಿಂಡಿಗೆ ವರ್ಗಾಯಿಸುವ ಚರ್ಚೆಗಳೂ ನಡೆದಿವೆ.

    ಭಾರತ ಪಾಕ್‌ ತಂಡ ಪ್ರವೇಶಿಸುವ ಯಾವುದೇ ಸಾಧ್ಯತೆಗಳೂ ಇಲ್ಲದ ಕಾರಣ ಭಾರತದ ಲೀಗ್‌ ಪಂದ್ಯಗಳನ್ನ ಪಾಕ್‌ನಿಂದ ಹೊರಗೆ ನಡೆಸಬೇಕಾಗುತ್ತದೆ. ಒಂದು ವೇಳೆ ಭಾರತ ಫೈನಲ್‌ ತಲುಪಿದರೆ ದುಬೈನಲ್ಲಿ ನಡೆಯಲಿದೆ, ಅದರ ಖರ್ಚು ವೆಚ್ಚವನ್ನೂ ಐಸಿಸಿ ಬರಿಸಲಿದೆ ಎಂದು ಹೇಳಿದೆ.

  • Asia Cup 2023: ಭಾರತ ತಂಡ ಪ್ರಕಟ – ಕೆ.ಎಲ್‌.ರಾಹುಲ್‌, ಅಯ್ಯರ್‌ ವಾಪಸ್‌

    Asia Cup 2023: ಭಾರತ ತಂಡ ಪ್ರಕಟ – ಕೆ.ಎಲ್‌.ರಾಹುಲ್‌, ಅಯ್ಯರ್‌ ವಾಪಸ್‌

    ನವದೆಹಲಿ: ಏಷ್ಯಾ ಕಪ್‌ 2023ಕ್ಕೆ ಭಾರತ ಕೊನೆಗೂ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್‌ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಸೋಮವಾರ ಪ್ರಕಟಿಸಿತು.

    ವೇಗಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲದೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.

    ವೆಸ್ಟ್ ಇಂಡೀಸ್ ವಿರುದ್ಧದ T20I ನಲ್ಲಿ ವೀರೋಚಿತ ಪ್ರದರ್ಶನ ನೀಡಿದ ನಂತರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಸ್ಪಿನ್ನರ್ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದು, ಯುಜುವೇಂದ್ರ ಚಹಾಲ್ ಅವರನ್ನು ಕೈಬಿಡಲಾಗಿದೆ. ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಸೇರಿಸಲಾಗಿದೆ.

    ತಂಡದಲ್ಲಿ ಯಾರಿದ್ದಾರೆ?
    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ.

    ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ‌ ಹೈಬ್ರಿಡ್‌ ಮಾದರಿಯಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಭಾಗವಹಿಸುತ್ತಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿ- ಭಾರತ ತಂಡಕ್ಕೆ ಕೊಡಗಿನ ನವನೀತಾ ಆಯ್ಕೆ

    ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿ- ಭಾರತ ತಂಡಕ್ಕೆ ಕೊಡಗಿನ ನವನೀತಾ ಆಯ್ಕೆ

    ಮಡಿಕೇರಿ: ಸುಂಟಿಕೊಪ್ಪದ ಬಾಸ್ಕೆಟ್ ಬಾಲ್ ಆಟಗಾರ್ತಿಯೊಬ್ಬರು ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಚಿತ್ತವನ್ನು ಮತ್ತೊಮ್ಮೆ ಕೊಡಗಿನತ್ತ ಹರಿಯುವಂತೆ ಮಾಡಿದ್ದಾರೆ.

    ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗದ್ದೆಹಳ್ಳದ ಕೃಷಿಕರಾಗಿರುವ ಉದಯಕುಮಾರ್ ಮತ್ತು ಗಿರಿಜ ದಂಪತಿಯ ಪುತ್ರಿ, ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನವನೀತಾ ಅವರು ಫಿಬಾ ಏಷ್ಯಾ ಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದವರಾಗಿದ್ದಾರೆ. ಸೆಪ್ಟಂಬರ್ 27 ರಿಂದ ಅಕ್ಟೋಬರ್ 30 ರವರೆಗೆ ಜೋರ್ಡಾನ್ ನ ಅಮ್ಮಾನ್ ನಲ್ಲಿ ಈ ಟೂರ್ನಿ ನಡೆಯಲಿದೆ. ಸೆಪ್ಟಂಬರ್ 27 ರಂದು ನಡೆಯುವ ಮೊದಲ ಹಣಾಹಣಿಯಲ್ಲಿ ಭಾರತ ತಂಡವು ಜಪಾನ್ ಎದುರು ಹಾಗೂ 29 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಇದನ್ನೂ ಓದಿ: ಐಪಿಎಲ್ ನಿಯಮಿತ ಪ್ರೇಕ್ಷಕರಿಗೆ ಗ್ಯಾಲರಿ ಪ್ರವೇಶ ಪಡೆಯಲು ಅನುಮತಿ

    ರಾಷ್ಟ್ರೀಯ ಟೂರ್ನಿಗಳಲ್ಲಿ ರೈಲ್ವೇಸ್ ತಂಡವನ್ನು ಪ್ರತಿನಿಧಿಸುತ್ತಿರುವ ನವನೀತಾ ಅವರು, ಪ್ರಾಥಮಿಕ ಶಿಕ್ಷಣವನ್ನು ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರೈಸಿದ್ದಾರೆ. ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರಿಂದ ಬೆಂಗಳೂರಿನ ದೇವನಹಳ್ಳಿ ವಿದ್ಯಾನಗರದ ಡಿವೈಇಎಸ್ ಕ್ರೀಡಾ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ಮೈಸೂರು ಕ್ರೀಡಾ ಹಾಸ್ಟೆಲ್ ಗೆ ಸೇರಿ ಬೇರೆ ರಾಜ್ಯಗಳಲ್ಲಿ ತರಬೇತಿ ಪಡೆದರು. ಮೈಸೂರು ಟೆರಿಷನ್ ಕಾಲೇಜಿನಲ್ಲಿ ಪದವಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ್ದಾರೆ. ಬಾಸ್ಕೆಟ್ ಬಾಲ್ ನಲ್ಲಿನ ಇವರ ಕ್ರೀಡಾ ಸಾಧನೆಗಾಗಿ 2015ರಲ್ಲಿ ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಅರಸಿಕೊಂಡು ಬಂದಿದೆ. ಇದನ್ನೂ ಓದಿ: ಎಬಿಡಿ ಸಿಡಿಲಬ್ಬರದ ಶತಕಕ್ಕೆ ಬೆಚ್ಚಿಬಿದ್ದ ಆರ್​ಸಿಬಿ ಬೌಲರ್ಸ್

    ಗೆದ್ದು ಬನ್ನಿ: ನವನೀತಾ ಅವರು ಆಯ್ಕೆಗೊಂಡಿರುವ ಭಾರತ ಮಹಿಳಾ ಬಾಸ್ಕೆಟ್ ಬಾಲ್ ತಂಡವು ಫಿಬಾ ಏಷ್ಯಾಕಪ್ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಲಿ. ವಿಜಯಮಾಲೆ ಧರಿಸಿ ಬರಲೆಂದು ಕೊಡಗಿನ ಜನರು ಹಾಗೂ ಸುಂಟಿಕೋಪ್ಪ ಗ್ರಾಮಸ್ಥರು ಹಾರೈಸಿದ್ದಾರೆ.

    ಇತ್ತೀಚೆಗೆ ಮುಕ್ತಾಯಗೊಂಡ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಆಗಿ ಇದೇ ಸುಂಟಿಕೊಪ್ಪದ ಕಂಬಿಬಾಣೆಯ ಅಂಕಿತಾ ಸುರೇಶ್ ಅವರು ಕಾರ್ಯ ನಿರ್ವಹಿಸಿದ್ದರು. ಈ ಮೂಲಕ ದೇಶದ ಗಮನ ಸೆಳೆದಿದ್ದರು. ಇದೀಗ ನವನೀತಾ ಅವರು ಸಹ ಬಾಸ್ಕೆಟ್ ಬಾಲ್ ನಲ್ಲಿ ಮತ್ತೊಂದು ಸಾಧನೆಗೆ ಮುಂದಾಗಿದ್ದಾರೆ.