Tag: ಭಾರತ-ಪಾಕಿಸ್ತಾನ ಪಂದ್ಯ

  • ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಅಹಮದಾಬಾದ್‌: ಏಕದಿನ ವಿಶ್ವಕಪ್‌ (World Cup 2023) ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ – ಪಾಕಿಸ್ತಾನ ಪಂದ್ಯಕ್ಕೆ (Ind vs Pak) ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಟ್ವಿಟ್ಟರ್‌ನಲ್ಲೂ ಟ್ರೆಂಡ್ ಅಲೆ ಎದ್ದಿದೆ.

    ಹೌದು. ಇದೇ ಅಕ್ಟೋಬರ್‌ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium)  ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 2008ರ ನವೆಂಬರ್‌ 26ರಂದು ನಡೆದ ಮುಂಬೈ ದಾಳಿಯಲ್ಲಿ ಪಾಕ್‌ ಉಗ್ರರನ್ನು ಮಟ್ಟ ಹಾಕಿದ್ದ NSG ಕಮಾಂಡೋಗಳನ್ನು ಈ ಪಂದ್ಯಕ್ಕೆ ಭದ್ರತೆಗಾಗಿ ನಿಯೋಜಿಸಲಾಗಿದೆ.

    ಗುಜರಾತ್ ಪೊಲೀಸ್, ಎನ್​ಎಸ್​​ಜಿ, ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌ (RAF) ಮತ್ತು ಗೃಹರಕ್ಷರು ಸೇರಿದಂತೆ ವಿವಿಧ ಏಜೆನ್ಸಿಗಳ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಕಾಂಗ್ರೆಸ್‌ನವರು ಬೈದಿದ್ದಕ್ಕೆ ಪ್ರದೀಪ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋದು: ಸುಧಾಕರ್  

    ಕಳೆದ 20 ವರ್ಷಗಳಲ್ಲಿ ಅಹಮದಾಬಾದ್ ನಗರದಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಗುಜರಾತ್ ಸಿಎಂ ಭೂಪೇಂದ್ರಬಾಯ್‌ ಪಟೇಲ್ ಅವರು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ರಾಜ್ಯ ಡಿಜಿಪಿ ವಿಕಾಸ್ ಸಹಾಯ್, ಜಿ.ಎಸ್ ಮಲಿಕ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗಾಂಧಿನಗರದಲ್ಲಿ ಸಭೆ ನಡೆಸಿ ಪೊಲೀಸರ ಪ್ಲ್ಯಾನ್‌ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಇಂಡೋ ಪಾಕ್‌ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಮೋದಿ ಕ್ರೀಡಾಂಗಣದಲ್ಲಿ 1.32 ಲಕ್ಷ ಆಸನಗಳ ವ್ಯವಸ್ಥೆಯಿದ್ದು, ಪ್ರತಿಯೊಬ್ಬ ಪ್ರೇಕ್ಷಕರ ಚಲನವಲನಗಳ ಮೇಲೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೇ ಇತ್ತೀಚೆಗೆ ಮುಂಬೈ ಪೊಲೀಸರಿಗೆ ಬಂದಿದ್ದ ಇಮೇಲ್‌ ಬೆದರಿಕೆ ಸಂದೇಶಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನ‌ ನಿಯೋಜನೆ ಮಾಡಿರುವುದಾಗಿ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರಿದ್ದ ಕಾರನ್ನು ಬೆನ್ನಟ್ಟಿ ಬೈಕ್‌ ಓಡಿಸುತ್ತಲೇ ಗುಂಡು ಹಾರಿಸಿದ ಇಸ್ರೇಲ್‌ ಪೊಲೀಸ್‌ – ರೋಚಕ ದೃಶ್ಯದ ವೀಡಿಯೋ ವೈರಲ್‌

    7,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯೊಂದಿಗೆ, ಕ್ರೀಡಾಂಗಣದ ಭದ್ರತೆಗಾಗಿ ಮತ್ತು ಪಂದ್ಯದ ಸಮಯದಲ್ಲಿ ನಗರದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸುಮಾರು 4,000 ಗೃಹರಕ್ಷಕರನ್ನು ನಿಯೋಜಿಸಲಾಗುವುದು. ಈ ಸಿಬ್ಬಂದಿಯ ಜೊತೆಗೆ ನಾವು ಮೂರು ‘ಹಿಟ್ ತಂಡಗಳು’ ಮತ್ತು ಎನ್ಎಸ್​ಜಿಯು ಒಂದು ಡ್ರೋನ್ ತಡೆ ತಂಡವನ್ನು ನಿಯೋಜಿಸುತ್ತೇವೆ. ನಮ್ಮ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ 9 ತಂಡಗಳನ್ನು ಸಹ ಬಳಸಿಕೊಳ್ಳಲಾಗುತ್ತದೆ. ಅಷ್ಟೇ ಅಲ್ಲದೇ ಇನ್ಸ್‌ಪೆಕ್ಟರ್‌ ಜನರಲ್ ಮತ್ತು ಡೆಪ್ಯೂಟಿ ಇನ್ಸ್‌ಪೆಕ್ಟರ್‌ ಜನರಲ್ ಶ್ರೇಣಿಯ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ಮತ್ತು 21 ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಶ್ರೇಣಿಯ ಅಧಿಕಾರಿಗಳು ಪಂದ್ಯದ ದಿನದಂದು ಸಿಬ್ಬಂದಿ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದೂ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    “ರಾಜ್ಯ ಮೀಸಲು ಪೊಲೀಸ್ (SRP) ಯ 13 ತುಕಡಿಗಳಲ್ಲದೆ, ನಮ್ಮ ಭದ್ರತಾ ವ್ಯವಸ್ಥೆಯ ಭಾಗವಾಗಿ ನಾವು ಕ್ಷಿಪ್ರ ಕ್ರಿಯಾ ಪಡೆಯ ಮೂರು ತುಕಡಿಗಳನ್ನು ನಿಯೋಜಿಸುತ್ತೇವೆ. ಆರ್ ಎಎಫ್ ನಗರದ ಕೋಮು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಿದೆ. ಕಾಲ್ತುಳಿತದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು, ನಾವು ಈಗಾಗಲೇ ಸ್ಥಳಾಂತರಿಸುವ ಯೋಜನೆಯನ್ನು ಸಿದ್ಧಪಡಿಸಿದ್ದೇವೆ ಮತ್ತು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸವೂ ನಡೆಯುತ್ತಿದೆ ಎಂದು ಮಲಿಕ್ ಮಾಹಿತಿ ನೀಡಿದ್ದಾರೆ.

    ಇತ್ತೀಚೆಗಷ್ಟೇ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನ ಬಿಡುಗಡೆ ಮಾಡಬೇಕು, ಜೊತೆಗೆ 500 ಕೋಟಿ ರೂ. ನೀಡಬೇಕು. ಇಲ್ಲವಾದರೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲಾಗುವುದು. ಅಷ್ಟೇ ಅಲ್ಲದೇ ಅಹಮದಾಬಾದ್‌ನ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಮುಂಬೈ ಪೊಲೀಸರಿಗೆ ಇಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

    ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

    ನವದೆಹಲಿ: ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ (Asia Cup 2023) ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.

    ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ರಾಷ್ಟ್ರಗಳು ಭಾಗವಹಿಸಲಿವೆ. ಇದನ್ನೂ ಓದಿ: RCB ಏಕೆ ಐಪಿಎಲ್‌ ಟ್ರೋಫಿ ಗೆದ್ದಿಲ್ಲ – ತಂಡದಿಂದ ಕೈಬಿಟ್ಟ ಮೇಲೆ ಪ್ರಾಮಾಣಿಕ ಉತ್ತರ ಕೊಟ್ಟ ಚಾಹಲ್‌

    ಈ ಕುರಿತು ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಜಯ್‌ ಶಾ ಟ್ವೀಟ್‌ ಮಾಡಿ, ಬಹು ನಿರೀಕ್ಷಿತ ಪುರುಷರ ODI Asia Cup 2023 ವೇಳಾಪಟ್ಟಿಯನ್ನು ಪ್ರಕಟಿಸಲು ನನಗೆ ಸಂತೋಷವಾಗಿದೆ. ಇದು ವೈವಿಧ್ಯಮಯ ರಾಷ್ಟ್ರಗಳನ್ನು ಒಟ್ಟಿಗೆ ಬೆಸೆಯುವ ಏಕತೆ ಮತ್ತು ಒಗ್ಗಟ್ಟಿನ ಸಂಕೇತವಾಗಿದೆ. ಕ್ರಿಕೆಟ್ ಶ್ರೇಷ್ಠತೆಯ ಸಂಭ್ರಮದಲ್ಲಿ ಕೈಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.

    ಪಾಕ್‌-ಭಾರತ ಹೈವೋಲ್ಟೇಜ್‌ ಪಂದ್ಯ
    ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (India – Pakistan Match) ನಡುವಣ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಇದನ್ನೂ ಓದಿ: Test Cricketː ನಂ.1 ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

    ಏಷ್ಯಾ ಕಪ್‌ 2023 ಟೂರ್ನಿಯು ಸಂಪೂರ್ಣವಾಗಿ ಪಾಕಿಸ್ತಾನದ ಆತಿಥ್ಯದಲ್ಲಿ ಆಯೋಜನೆ ಆಗಬೇಕಿತ್ತು. ಪಾಕಿಸ್ತಾನದಲ್ಲಿ ನಡೆದರೆ ಟೀಮ್‌ ಇಂಡಿಯಾ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಹೇಳಿತ್ತು. ಹೀಗಾಗಿ ಎಸಿಸಿ ಕೂಡ ತನ್ನ ನಿಲುವು ಬದಲಾಯಿಸಿತ್ತು. ಹೈಬ್ರಿಡ್‌ ನಿಯಮದೊಂದಿಗೆ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳನ್ನು ನಡೆಸಲು ಮುಂದಾಗಿದೆ.

    ಭಾರತ, ಪಾಕಿಸ್ತಾನ, ನೇಪಾಳ ತಂಡಗಳು ‘ಎ’ ಗುಂಪಿನಲ್ಲಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಪೈಪೋಟಿ ನಡೆಸಲಿವೆ. ಗ್ರೂಪ್‌ ಹಂತದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆಯುವ ತಂಡಗಳು ಸೂಪರ್‌ 4 ಹಂತಕ್ಕೆ ತೇರ್ಗಡೆ ಆಗಲಿವೆ. ಸೂಪರ್‌ 4 ಹಂತದಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳ ನಡುವೆ ಫೈನಲ್‌ ನಡೆಯಲಿದೆ. ಇದನ್ನೂ ಓದಿ: ಅಂದು ಭಾರತಕ್ಕೆ ವಿಶ್ವಕಪ್‌ ಗೆದ್ದುಕೊಟ್ಟ ಹೀರೋ, ಈಗ ನೆರೆ ಸಂತ್ರಸ್ತರ ಪಾಲಿನ ಆಪದ್ಬಾಂಧವ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡೋ-ಪಾಕ್ ಕೇವಲ ಪಂದ್ಯವಲ್ಲ, ಭಾವನೆ, ನಿರೀಕ್ಷೆಗಳ ಸೆಣಸಾಟ: ಪಾಂಡ್ಯ

    ಇಂಡೋ-ಪಾಕ್ ಕೇವಲ ಪಂದ್ಯವಲ್ಲ, ಭಾವನೆ, ನಿರೀಕ್ಷೆಗಳ ಸೆಣಸಾಟ: ಪಾಂಡ್ಯ

    ನವದೆಹಲಿ: ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮ್ಯಾಂಚೆಸ್ಟರ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣ ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಭಾರತದ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸೇರಿ ಕೆಲವು ನಾಯಕರು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

    ಈ ಕುರಿತ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಸಂಜಯ್ ಮಂಜ್ರೇಕರ್ ಮನದಾಳದ ಮಾತನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಜನ ಇದನ್ನು ಒಂದು ಆಟವನ್ನಾಗಿ ಮಾತ್ರ ನೋಡುತ್ತಾರೆ. ಆದರೆ ನಾನು ಇದನ್ನು ಒಂದು ಆಟವನ್ನಾಗಿ ಮಾತ್ರ ನೋಡುವುದಿಲ್ಲ. ಇದು ಒಂದು ಸವಾಲು. ಅಲ್ಲದೆ, ಭಾವನೆಗಳು, ನೀರೀಕ್ಷೆಗಳು ಸೇರಿದಂತೆ ಎಲ್ಲವೂ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಅಡಗಿದೆ ಎಂದು ಹಾರ್ದಿಕ್ ಪಾಂಡ್ಯ ವಿಡಿಯೋದಲ್ಲಿ ಹೇಳಿದ್ದಾರೆ.

    ಈ ಕುತೂಹಲಕಾರಿ ಪಂದ್ಯ ವೀಕ್ಷಿಸಲು ಒಂದು ಆಸನ ಮಾತ್ರವಲ್ಲ, ಒಂದು ಇಂಚು ಕೂಡ ಜಾಗ ಇರದಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಾರೆ. ನಾನು ಆಟ ಆಡುವ ಮೂಲಕ ಪಂದ್ಯವನ್ನು ಆನಂದಿಸುತ್ತೇನೆ ಎಂದು ವಿಡಿಯೊದಲ್ಲಿ ಪಾಂಡ್ಯ ಹೇಳಿದ್ದಾರೆ.

    ಭಾರತ-ಪಾಕಿಸ್ತಾನದ ಪಂದ್ಯದ ಕುರಿತು ರವೀಂದ್ರ ಜಡೇಜಾ ಸಹ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಭಾರತ-ಪಾಕಿಸ್ತಾನದ ಎಲ್ಲ ಪಂದ್ಯಗಳು ಹೆಚ್ಚು ತೀವ್ರತೆಯಿಂದ ಕೂಡಿರುತ್ತವೆ. ಇದು ಕೇವಲ ಗೆಲುವು ಸೋಲಿನ ಪ್ರಶ್ನೆಯಲ್ಲ, ಇವುಗಳನ್ನು ಮೀರಿದ ಭಾವನೆ. ಪಾಕಿಸ್ತಾನದ ವಿರುದ್ಧ ಆಟವಾಡುವಾಗ ಒತ್ತಡ ತುಂಬಾ ಹೆಚ್ಚಿರುತ್ತದೆ. ಜನರಿಗೆ ಏನಾಗಿದೆ ಎಂಬುದು ಬೇಕಿಲ್ಲ ಆದರೆ ಪಾಕಿಸ್ತಾನದ ವಿರುದ್ಧ ಗೆಲ್ಲಬೇಕಷ್ಟೆ. ಹೀಗಾಗಿ ಒತ್ತಡ ಹೆಚ್ಚಿರುತ್ತದೆ ಎಂದು ಐಸಿಸಿ ಟ್ವಿಟರ್‍ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

    ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೀ ಇಂಡಿಯಾ ಬ್ಯಾಟಿಂಗ್ ನಡೆಸಲಿದೆ. ಟೀಂ ಇಂಡಿಯಾ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಕೀಪರ್ ಎಂ.ಎಸ್.ಧೋನಿ, ಕೆ.ಎಲ್.ರಾಹುಲ್, ವಿಜಯ್ ಶಂಕರ್, ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ, ಕೇದಾರ್ ಜಾಧವ್, ಬೌಲರ್ ಗಳಾದ ಜಸ್ಪ್ರೀತ್ ಬುರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್ ತಂಡದಲ್ಲಿದ್ದಾರೆ.

    ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಸ್ಥಾನವನ್ನು ಅನುಭವಿ ಆಟಗಾರ ಕೆ.ಎಲ್.ರಾಹುಲ್ ತುಂಬುತ್ತಿದ್ದಾರೆ. ಇತ್ತ ವಿಜಯ್ ಶಂಕರ್ ನಾಲ್ಕನೇ ಸ್ಥಾನದಲ್ಲಿ ಆಡಲಿದ್ದಾರೆ.