Tag: ಭಾರತ ರತ್ನ

  • ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

    ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

    ಬೆಂಗಳೂರು: ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

    ನಗರದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಯಿತು. ರಾಷ್ಟçಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

    ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿಗಳು ಈ ಹಿಂದೆಯೇ ಮನವಿ ಮಾಡಿದ್ದರು. ಅದರಂತೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

    ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡದ ಮೇರುಕವಿ, ನಾಟಕಕಾರ ಮತ್ತು ವಿಮರ್ಶಕ. ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ‘ರಾಷ್ಟ್ರಕವಿ’ ಬಿರುದನ್ನು 1964ರಲ್ಲಿ ನೀಡಿ ಗೌರವಿಸಿತು. ಅವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಎಂಬ ಹೆಗ್ಗಳಿಕೆಗೆ ಕುವೆಂಪು ಪಾತ್ರರಾಗಿದ್ದಾರೆ.

  • ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

    ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

    ಮುಂಬೈ: ಭಾರತೀಯ ಕ್ರಿಕೆಟ್‌ ರಂಗಕ್ಕೆ ವಿರಾಟ್‌ ಕೊಹ್ಲಿ (Virat Kohli) ನೀಡಿರುವ ಅಪಾರ ಕೊಡುಗೆಗಾಗಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ (Suresh Raina) ಹೇಳಿದ್ದಾರೆ.

    ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿರುವುದರಿಂದ ಭಾರತ ಸರ್ಕಾರ ಅವರಿಗೆ ಭಾರತ ರತ್ನ (Bharat Ratna) ಪ್ರಶಸ್ತಿಯನ್ನು ನೀಡಬೇಕೆಂದು ನಾನು ಭಾವಿಸುತ್ತೇನೆ ಎಂದು ಸುರೇಶ್‌ ರೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

    ಅವರಿಗೆ ದೆಹಲಿಯಲ್ಲಿ ನಿವೃತ್ತಿ ಪಂದ್ಯವನ್ನು ನೀಡಬೇಕೆಂದು ನಾನು ಭಾವಿಸುತ್ತೇನೆ. ಅವರ ಕುಟುಂಬ ಮತ್ತು ತರಬೇತುದಾರರು ಅವರನ್ನು ಬೆಂಬಲಿಸಲು ಇರುತ್ತಿದ್ದರು. ದೇಶಕ್ಕಾಗಿ ಇಷ್ಟೆಲ್ಲಾ ಮಾಡಿದ ನಂತರ, ನೀವು ಅವರೊಂದಿಗೆ ಸಂವಹನ ನಡೆಸುತ್ತೀರಿ. ಏಕೆಂದರೆ ಅವರು ನಿವೃತ್ತಿ ಪಂದ್ಯಕ್ಕೆ ಅರ್ಹರು ಎಂದು ಬಿಸಿಸಿಐಗೆ ರೈನಾ ಮನವಿ ಮಾಡಿದ್ದಾರೆ.

    ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆದ ಐದು ದಿನಗಳ ನಂತರ, ಕಳೆದ ಸೋಮವಾರ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಣೆ ಮಾಡಿದರು. 36 ವರ್ಷ ವಯಸ್ಸಿನ ಕೊಹ್ಲಿ 123 ಪಂದ್ಯಗಳಲ್ಲಿ 9230 ರನ್ ಗಳಿಸಿ, 30 ಶತಕಗಳನ್ನು ಒಳಗೊಂಡಂತೆ ಭಾರತದ ಪರ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದವರಾಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ಕೊಟ್ಟ ವಿರಾಟ್ ಕೊಹ್ಲಿ, ಅನುಷ್ಕಾ

    ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಘೋಷಣೆಯಾಗುವ ಕೆಲವೇ ದಿನಗಳ ಮೊದಲು, ಮೇ 12 ರಂದು ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದರು.

    ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಕ್ರೀಡಾಪಟುವಾಗಿದ್ದಾರೆ. 2014 ರಲ್ಲಿ 40 ನೇ ವಯಸ್ಸಿನಲ್ಲಿ ಅವರಿಗೆ ಪ್ರಶಸ್ತಿ ಲಭಿಸಿತು. ಪ್ರಶಸ್ತಿಯನ್ನು ಪಡೆದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

  • ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ನಿಲ್ಲಿಸಿ ಎಂದಿದ್ದ ರತನ್‌ ಟಾಟಾ

    ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ನಿಲ್ಲಿಸಿ ಎಂದಿದ್ದ ರತನ್‌ ಟಾಟಾ

    ಇಂದು ಅರ್ಜಿ ಹಾಕಿ ಜನರು ಪ್ರಶಸ್ತಿ ಪಡೆಯುತ್ತಿದ್ದಾರೆ. ಪ್ರಶಸ್ತಿ ಸಿಗಬೇಕೆಂದು ರಾಜಕೀಯ ವ್ಯಕ್ತಿಗಳ ಮೂಲಕ ಲಾಬಿ ನಡೆಸುತ್ತಾರೆ.  ಹಣ ನೀಡಿ ಪ್ರಶಸ್ತಿ ತೆಗೆದುಕೊಳ್ಳುವ ಸಮಯದಲ್ಲಿ ಟಾಟಾ ಗ್ರೂಪ್‌ (Tata Group) ಮುಖ್ಯಸ್ಥರಾಗಿದ್ದ ರತನ್‌ ಟಾಟಾ (Ratan Tata) ಅವರಿಗೆ ಭಾರತ ರತ್ನ (Bharat Ratna) ಸಿಗಬೇಕೆಂದು ಅಭಿಯಾನ ನಡೆಸುತ್ತಿದ್ದಾಗ ನಾನು ಭಾರತೀಯನಾಗಿರುವುದೇ ಅದೃಷ್ಟ ಎಂದು ಹೇಳಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.

    ಭಾರತ ರತ್ನ ಗೌರವವನ್ನು ರತನ್‌ ಟಾಟಾ ಅವರಿಗೆ ನೀಡಬೇಕು. ಲಕ್ಷಾಂತರ ಜನರಿಗೆ ಟಾಟಾ ಕಂಪನಿ ಉದ್ಯೋಗ ನೀಡಿದೆ. ಸಾಮಾಜಿಕ ಕಾರ್ಯಕ್ಕೆ ಕೋಟ್ಯಂತರ ರೂ. ಹಣವನ್ನು ಟಾಟಾ ಗ್ರೂಪ್‌ ನೀಡಿದೆ. ಹೀಗಾಗಿ ಭಾರತ ರತ್ನ ಗೌರವಕ್ಕೆ ರತನ್‌ ಟಾಟಾ ಅರ್ಹ ವ್ಯಕ್ತಿ ಎಂದು ಹೇಳಿ #BharatRatnaForRatanTata ಹ್ಯಾಷ್‌ ಟ್ಯಾಗ್‌ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗಿತ್ತು.

    ಅಭಿಯಾನ ಜೋರಾಗುತ್ತಿದ್ದಂತೆ ನಾನು ಭಾರತೀಯನಾಗಿ ಹುಟ್ಟಿದ್ದಕ್ಕೆ ಅದೃಷ್ಟ ಪಡುತ್ತೇನೆ. ನನ್ನ ಪರವಾಗಿ ಪ್ರಶಸ್ತಿ ನೀಡುವಂತೆ ಅಭಿಯಾನ ನಡೆಸಬೇಡಿ ಎಂದು ರತನ್‌ ಟಾಟಾ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

    ಈ ವಿಚಾರ ತನ್ನ ಗಮನಕ್ಕೆ ಬರುತ್ತಿದ್ದಂತೆ ರತನ್‌ ಟಾಟಾ ಹೇಳಿಕೆ ಬಿಡುಗಡೆ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಒಂದು ವರ್ಗ ವ್ಯಕ್ತಪಡಿಸುತ್ತಿರುವ ಭಾವನೆಯನ್ನು ನಾನು ಗೌರವಿಸುತ್ತೇನೆ. ಹೀಗಿದ್ದರೂ ಪ್ರಶಸ್ತಿ ವಿಚಾರವಾಗಿ ನಡೆಸುತ್ತಿರುವ ಅಭಿಯಾನವನ್ನು ನಿಲ್ಲಿಸಬೇಕೆಂದು ನಾನು ವಿನಯಪೂರ್ವಕವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ನಾನು ಭಾರತೀಯನಾಗಿರುವುದು ಅದೃಷ್ಟ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಅವಮಾನಿಸಿದ್ದ ಕಂಪನಿಯನ್ನೇ ಖರೀದಿಸಿ ಮೆರೆದಿದ್ದ ಯಶಸ್ವಿ ಉದ್ಯಮಿ ರತನ್‌ ಟಾಟಾ!

    ರತನ್‌ ಟಾಟಾ ಅವರ ಈ ಟ್ವೀಟ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಟ್ವೀಟ್‌ಗೆ ಯಾರಿಗೋ ಪ್ರಶಸ್ತಿ ಕೊಡುವಾಗ ನಿಮಗೆ ಯಾಕೆ ನೀಡಬಾರದು. ನೀವು ಭಾರತ ರತ್ನಕ್ಕೆ ಅರ್ಹ ವ್ಯಕ್ತಿ. ನಿಮಗೆ ಸಿಗಲೇಬೇಕು ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು.

    ರತನ್‌ ಟಾಟಾ ಸಿಕ್ಕಿದ ಪ್ರಶಸ್ತಿಗಳು
    * ಪದ್ಮಭೂಷಣ (ಭಾರತ ಸರ್ಕಾರದ 3ನೇ ಅತ್ಯುನ್ನತ ನಾಗರಿಕ ಗೌರವ (2000)
    * ಓರಿಯಂಟಲ್ ರಿಪಬ್ಲಿಕ್ ಆಫ್ ಉರುಗ್ವೆಯ ಪದಕ (ಉರುಗ್ವೆ ಸರ್ಕಾರ (2004)
    * ಇಂಟರ್ನ್ಯಾಷನಲ್ ಡಿಸ್ಟಿಂಗ್ವಿಶ್ಡ್ ಅಚೀವ್ಮೆಂಟ್ ಅವಾರ್ಡ್ (2005)
    * ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಪೊಲಿಟಿಕಲ್ ಸೈನ್ಸ್‌ ಗೌರವ ಫೆಲೋಶಿಪ್ (2007)
    * ಪದ್ಮವಿಭೂಷಣ (ಭಾರತ ಸರ್ಕಾರದ 2ನೇ ಅತ್ಯುನ್ನತ ನಾಗರಿಕ ಗೌರವ (2008)
    * ಇಟಾಲಿಯನ್ ರಿಪಬ್ಲಿಕ್ ಆರ್ಡರ್ ಆಫ್ ಮೆರಿಟ್‌ನ ‘ಗ್ರ‍್ಯಾಂಡ್ ಆಫೀಸರ್’ ಪ್ರಶಸ್ತಿ (ಇಟಲಿ ಸರ್ಕಾರ -2009)
    * ಗೌರವ ನೈಟ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಬ್ರಿಟಿಷ್ ಎಂಪೈರ್, ಯುಕೆ (2009)
    * ಓಸ್ಲೋ ಬಿಸಿನೆಸ್ ಫಾರ್ ಪೀಸ್ ಅವಾರ್ಡ್ (ಬಿಸಿನೆಸ್ ಫಾರ್ ಪೀಸ್ ಫೌಂಡೇಶನ್ – 2010)

     

  • ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ

    ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ

    ಬೆಂಗಳೂರು : ಮಾಜಿ ಮುಖ್ಯಮಂತ್ರಿ (Former Chief Minister) ದಿವಂಗತ ದೇವರಾಜ್ ಅರಸ್ ( Late Devaraj Urs) ಅವರಿಗೆ ಮರಣೋತ್ತರ ಭಾರತ ರತ್ನ (Bharat Ratna)  ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಹುಮತ ಬಂದ್ರೆ ಬಿಜೆಪಿ ತಂದಿದ್ದ ಭೂ ಕಂದಾಯ ಕಾಯ್ದೆ ರದ್ದು ಮಾಡ್ತೀನಿ: ಸಿದ್ದರಾಮಯ್ಯ

    ವಿಧಾನಸೌಧದಲ್ಲಿ ನಡೆದ ದೇವರಾಜ್ ಅರಸ್ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ್ ಅರಸ್ ಸಾಮಾಜಿಕ ನ್ಯಾಯದ ಪರ ಇದ್ದವರು. ಬಡವರು, ದಲಿತರು, ರೈತರು, ಮಹಿಳೆಯರ ಪರ ಇದ್ದವರು. ಅವರ ಕೊಡುಗೆ ಅಪಾರವಾದದ್ದು. ಹೀಗಾಗಿ ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕು ಅಂತ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂದಿದ್ದಾರೆ.

    ಇದಲ್ಲದೆ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ್ ಅರಸ್ ಎಲೆಕ್ಟ್ರಾನಿಕ್ ಸಿಟಿ (Devaraj Urs Electronic City) ಅಂತ ನಾಮಕರಣ ಮಾಡಲು ಪ್ರಕ್ರಿಯೆ ಶುರು ಮಾಡಲಾಗಿದೆ. ಆದಷ್ಟು ಬೇಗ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ್ ಅರಸ್ ಹೆಸರು ಇಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ನವೆಂಬರ್ 1ಕ್ಕೆ ವಿಧಾನಸೌಧದಲ್ಲಿ ನಿರ್ಮಾಣ ಆಗುತ್ತಿರುವ ಭುವನೇಶ್ವರಿ ಪ್ರತಿಮೆಯನ್ನು ಉದ್ಘಾಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.ಇದನ್ನೂ ಓದಿ: ಶತಮಾನ ಕಂಡ ಸರ್ಕಾರಿ ಶಾಲೆ ಕಿಡಿಗೇಡಿಗಳಿಂದ ಧ್ವಂಸ

  • ಅಡ್ವಾಣಿ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಮೋದಿ

    ಅಡ್ವಾಣಿ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಮೋದಿ

    ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು  ಮಾಜಿ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ, ತಮ್ಮ ರಾಜಕೀಯ ಗುರು ಎಲ್‌ಕೆ ಅಡ್ವಾಣಿ (LK Advani) ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ.

    ಮಧ್ಯಾಹ್ನ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ನಂತರ ನೇರವಾಗಿ ಮೋದಿ ಅವರು ದೆಹಲಿಯಲ್ಲಿರುವ ಅಡ್ವಾಣಿ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

    ಫೆಬ್ರವರಿಯಲ್ಲಿ ಮೋದಿ ಅವರು ಅಡ್ವಾಣಿ ಅವರಿಗೆ ಈ ಬಾರಿ ಭಾರತ  ರತ್ನ (Bharat Ratna) ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ನಂತರ ಮಾರ್ಚ್‌ನಲ್ಲಿ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ನೀಡಿ ಗೌರವಿಸಲಾಗಿತ್ತು. ಇದನ್ನೂ ಓದಿ: ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ 

    ಅಡ್ವಾಣಿ ಮತ್ತು ಮೋದಿ ಅವರಿಗೆ ಮೊದಲಿನಿಂದಲೂ ಉತ್ತಮ ಸಂಬಂಧವಿದೆ. ಅಡ್ವಾಣಿ ಅವರ ರಥಯಾತ್ರೆಯ ಯಶಸ್ಸಿನ ಹಿಂದೆ ಮೋದಿ ಅವರ ಪಾತ್ರವಿದೆ. ಗುಜರಾತ್‌ನಲ್ಲಿ ಇದ್ದಾಗ ಮೋದಿ ಯಶಸ್ವಿ ಸಂಘಟಕರಾಗಿದ್ದರು. ಅಡ್ವಾಣಿ ಅವರು ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಾಗ ಮೋದಿ ಅವರು ಯಶಸ್ವಿಯಾಗಿ ಚುನಾವಣೆಯನ್ನು ಸಂಘಟಿಸುತ್ತಿದ್ದರು. ಇವರಲ್ಲಿನ ನಾಯಕತ್ವ ಕೌಶಲ್ಯವನ್ನು ನೋಡಿ ಬಿಜೆಪಿ ಹೈಕಮಾಂಡ್‌ 2001ರಲ್ಲಿ ಮೋದಿ ಅವರಿಗೆ ಸಿಎಂ ಹುದ್ದೆ ನೀಡಿತ್ತು.

     

    ಮೋದಿ ಅವರು ಈ ಹಿಂದೆ ತಮ್ಮ ರಾಜಕೀಯ ಭಾಷಣದಲ್ಲಿ ಅಡ್ವಾಣಿ ಅವರ ಕೆಲಸವನ್ನು ಸ್ಮರಿಸುತ್ತಿದ್ದರು. ವಿರೋಧಿಗಳು ಬಿಜೆಪಿಯನ್ನು ಅಸ್ಪೃಶ್ಯ ಎಂದು ಕರೆಯುತ್ತಿದ್ದರು. ಈ ಸಂದರ್ಭದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಈ ಸಿದ್ಧಾಂತವನ್ನು ಸೋಲಿಸಲು ಮತ್ತು ಪಕ್ಷವನ್ನು ದೇಶದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಹೇಳಿದ್ದರು. ಇದನ್ನೂ ಓದಿ: ಭಾರತದ ಇತಿಹಾಸದಲ್ಲಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ, ನಾವು ಸಾಧನೆ ಮಾಡಿದ್ದೇವೆ: ಎನ್‌ಡಿಎ ಕೊಂಡಾಡಿದ ಮೋದಿ

    ಒಂದು ಕುಟುಂಬದಿಂದ ದೇಶವನ್ನು ಪಾರು ಮಾಡಲು ಅಡ್ವಾಣಿ ಅವರು ರಾಷ್ಟ್ರೀಯತೆಯ ಸಿದ್ಧಾಂತದೊಂದಿಗೆ ಜನರನ್ನು ಸಂಪರ್ಕಿಸಿ ದೇಶವನ್ನು ಬಲಪಡಿಸುವ ಸವಾಲು ತೆಗೆದುಕೊಂಡಿದ್ದರು ಎಂದು ನೆನಪಿಸಿಕೊಂಡಿದ್ದರು.

  • ಎಲ್‌ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ

    ಎಲ್‌ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu) ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್‌.ಕೆ.ಅಡ್ವಾಣಿ (LK Advani) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ (Bharat Ratna) ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದರು.

    ಈ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi), ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

    ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ. ಇದನ್ನೂ ಓದಿ: ಕಚ್ಚತೀವು ಪ್ರದೇಶವನ್ನು ಕಾಂಗ್ರೆಸ್‌ ಶ್ರೀಲಂಕಾಗೆ ನೀಡಿದೆ – ತಮಿಳುನಾಡಿನಲ್ಲಿ ಬಿರುಗಾಳಿ ಎಬ್ಬಿಸಿದ RTI ಉತ್ತರ

    ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವರ್ಷದ ಫೆಬ್ರವರಿಯಲ್ಲಿ ಪ್ರಕಟಿಸಿದ್ದರು.

    ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಕೇಕ್‌ ತಿಂದು 10ರ ಬಾಲಕಿ ಸಾವು

    ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಬರೆದಿದ್ದರು.

     

  • ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

    ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

    – ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪ್ರದಾನ

    ನವದೆಹಲಿ: ಸಮಾಜವಾದಿ ನಾಯಕ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ (P.V Narasimha Rao), ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು (Bharat Ratna) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರದಾನ ಮಾಡಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನರಸಿಂಹರಾವ್ ಅವರ ಪುತ್ರ ಪಿ.ವಿ ಪ್ರಭಾಕರ್ ರಾವ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್, ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್‍ನಾಥ್ ಠಾಕೂರ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

    5ನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ ಅಡ್ವಾಣಿ (L.K Advani) ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಭಾನುವಾರ ಅವರ ನಿವಾಸದಲ್ಲೇ ಅವರಿಗೆ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

  • ತೆರಿಗೆ ಹಣ ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ: ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

    ತೆರಿಗೆ ಹಣ ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ: ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

    ತುಮಕೂರು: ಕಾಂಗ್ರೆಸ್ (Congress) ತೆರಿಗೆ ಹಣ ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ ಎಂದು ಶಾಸಕ ಮುನಿರತ್ನ  (Munirathna) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ತುಮಕೂರಿನಲ್ಲಿ (Tumakuru) ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದು ಚುನಾವಣೆಗೋಸ್ಕರ ನಾಟಕ ಮಾಡುತ್ತಿದ್ದಾರೆ. ಗ್ಯಾರಂಟಿಗಳ ರೂಪದಲ್ಲಿ 52,000 ಕೋಟಿ ರೂ. ಸಾರ್ವಜನಿಕ ತೆರಿಗೆ ಹಣವನ್ನು ಕೊಟ್ಟು ಪೋಲು ಮಾಡಿದ್ದಾರೆ. ಈಗ ಪದೇ ಪದೇ ಹಣ ಕೇಳಿಕೊಂಡು ಇವರು ಕೇಂದ್ರಕ್ಕೆ ಹೋಗ್ತಾರೆ. ತೆರಿಗೆ ಹಣವನ್ನು ದಾನ ಮಾಡೋ ಮುಂಚೆ ಯೋಚನೆ ಮಾಡಬೇಕಿತ್ತು. ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡ್ರೋನ್ ಪ್ರತಾಪ್ ವಿರುದ್ಧ ದಾಖಲಾಗಿರುವ ದೂರು ಎಫ್‌ಐಆರ್, ಹೇಳಿಕೆ ದಾಖಲಿಸಿಲ್ಲ

    ಗ್ಯಾರಂಟಿ ಯೋಜನೆ ಘೋಷಣೆ ಮಾಡೋ ಮುಂಚೆ ಯೋಚನೆ ಮಾಡಬೇಕಿತ್ತು. ಯಾವುದೇ ಯೋಚನೆ ಮಾಡದೆ ಅಧಿಕಾರದ ದಾಹಕ್ಕಾಗಿ ಐದು ಗ್ಯಾರಂಟಿ, ಆರು ಗ್ಯಾರಂಟಿ ಘೋಷಣೆ ಮಾಡಿದರು. ಇಲ್ಲಿ ದಾನ ಕೊಟ್ಟು ಅಲ್ಲಿ ಭಿಕ್ಷೆ ಬೇಡಲು ಹೋಗುತ್ತಾರೆ. ಇವರು ಕೇಂದ್ರದಿಂದ ಹಣ ಕೇಳೋದು ರಾಜ್ಯದ ಅಭಿವೃದ್ಧಿಗಲ್ಲ. ಹಣತಂದು ಲೋಕಸಭಾ ಚುನಾವಣೆಗೆ ಇನ್ನಷ್ಟು ಗ್ಯಾರಂಟಿ ಕೊಡಲು ಎಂದಿದ್ದಾರೆ. ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ನವರು ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಾಸನ, ಮಂಡ್ಯ ಲೋಕಸಭಾ ಟಿಕೆಟ್ ಬಿಜೆಪಿಗೆ ಸಿಗಲಿದೆ: ಪ್ರೀತಮ್ ಗೌಡ

    ಪ್ರತ್ಯೇಕ ರಾಷ್ಟ್ರದ ವಿಚಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್‌ನವರಿಗೆ ಬಹುಶಃ ಪ್ರತ್ಯೇಕ ದೇಶ ಮಾಡೋದಕ್ಕೆ ಉತ್ತಮವಾದ ಆಲೋಚನೆ ಬಂದಿರಬೇಕು. 1947ರಲ್ಲಿ ಜಿನ್ನಾನಿಂದ ದೇಶ ವಿಭಜನೆ ಆಯಿತು. ಈಗ ಇವರೇನಾದರು ಪಾಕಿಸ್ತಾನದಂತೆ ಬೇರೆ ಒಂದು ಸ್ಥಾನ ಮಾಡೋಕೆ ಹೊರಟಿದ್ದಾರೆ. ದೇಶದ ಅಖಂಡತೆಯ ಕುರಿತಂತೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಅದನ್ನು ಬಿಟ್ಟು ಇವರು ದೇಶವನ್ನ ಪ್ರತ್ಯೇಕ ಮಾಡಲು ಹೊರಟಿದ್ದಾರೆ ಎಂದು ಹರಿಹಾಯ್ದಿದಿದ್ದಾರೆ. ಇದನ್ನೂ ಓದಿ: ನಿಗೂಢ ಕೆಲಸಕ್ಕೆ 42 ಅಕ್ರಮ ಸಿಮ್‌ಗಳೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವಕರು ಅರೆಸ್ಟ್‌

    ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ಕೊಡುವುದರ ಬಗ್ಗೆ ಪ್ರತಿಕ್ರಿಯಿಸಿ, ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತೇವೆ. ಅಂತಹ ಮಹನೀಯರು ಮತ್ತೇ ಇಲ್ಲಿ ಹುಟ್ಟಬೇಕು. ಅವರಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಇರ್ತೀವಿ. ಅಡ್ವಾಣಿ ಅವರಿಗೆ ಭಾರತ ರತ್ನ ಲಭಿಸಿರೋದು ಬಹಳ ಸಂತೋಷ. ಅವರ ಹೋರಾಟ ಇವತ್ತಿನದಲ್ಲ. ಬಹಳಷ್ಟು ಶ್ರಮಪಟ್ಟು ದೇಶದಲ್ಲಿ ಹಿಂದೂ ಧರ್ಮ ಕಟ್ಟಿದವರು. ಮಾಜಿ ಪ್ರಧಾನಿ ವಾಜಪೇಯಿಯವರ ಜೊತೆಯಲ್ಲಿ ಕೆಲಸ ಮಾಡಿದವರು. ಅವರಿಗೆ ಭಾರತ ರತ್ನ ಕೊಟ್ಟಿರೋದು ಸೂಕ್ತ. ಸರಿಯಾದ ಸಮಯದಲ್ಲಿ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಯಿ ವಿಚಾರಕ್ಕೆ ಠಾಣೆ ಮೆಟ್ಟಿಲೇರಿದ ಮಹಿಳೆಯರು

  • ಅಡ್ವಾಣಿಯನ್ನು ಬಿಜೆಪಿಯವರೇ ಮೂಲೆಗುಂಪು ಮಾಡಿದ್ರು, ಬುದ್ಧಿ ಬಂದ ಮೇಲೆ ‘ಭಾರತ ರತ್ನ’ ಕೊಟ್ಟಿದ್ದಾರೆ: ರಾಮಲಿಂಗಾ ರೆಡ್ಡಿ

    ಅಡ್ವಾಣಿಯನ್ನು ಬಿಜೆಪಿಯವರೇ ಮೂಲೆಗುಂಪು ಮಾಡಿದ್ರು, ಬುದ್ಧಿ ಬಂದ ಮೇಲೆ ‘ಭಾರತ ರತ್ನ’ ಕೊಟ್ಟಿದ್ದಾರೆ: ರಾಮಲಿಂಗಾ ರೆಡ್ಡಿ

    ಗದಗ: ಎಲ್.ಕೆ ಅಡ್ವಾಣಿಗೆ (LK Advani) ಭಾರತ ರತ್ನ (Bharat Ratna) ಪ್ರಶಸ್ತಿ ನೀಡಿದ್ದು ಸಂತೋಷ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದ ಹೊಸ ಬಸ್ ನಿಲ್ದಾಣದಲ್ಲಿ ನೂತನ 50 ಬಸ್‌ಗಳ ಉದ್ಘಾಟನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಪಕ್ಷ ಈ ಮಟ್ಟಕ್ಕೆ ಬೆಳೆಯಲು ಅಡ್ವಾಣಿ ಸಹ ಕಾರಣ. ಅವರನ್ನು ಮೂಲೆಗುಂಪು ಮಾಡಿದ್ದರು. ಈಗಲಾದರೂ ಬಿಜೆಪಿಯವರಿಗೆ ಬುದ್ಧಿ ಬಂದು ಅವರಿಗೆ ಭಾರತ ರತ್ನ ಘೋಷಣೆ ಮಾಡಿದ್ದು ಸಂತೋಷ ಎಂದರು.

    ಪ್ರಹ್ಲಾದ್ ಜೋಷಿ ಹಾಗೂ ಸಂತೋಷ್ ಅವರು ಸೇರಿ ಯಡಿಯೂರಪ್ಪಗೆ ಏನು ಮಾಡಿದ್ರು? ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿದವರು ಯಾರು? ಇವರೆ ತಾನೇ ಇಳಿಸಿದ್ದು? ವಿಜಯೇಂದ್ರ ಏನು ಆಗಬಾರದು ಎಂದು ಮೊನ್ನೆಯೂ ಏನೋ ಪ್ರಯತ್ನ ಮಾಡಿದರು. ಆದರೂ ಏನು ನಡಿಯಲಿಲ್ಲ. ಚುನಾವಣೆ ಬಂತಲ್ವಾ, ಅದಕ್ಕೆ ಯಡಿಯೂರಪ್ಪ ಮುಖ ನೋಡಿ ಮತ ಹಾಕುತ್ತಾರೆ ಎಂದು ಸುಮ್ಮನಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಪಿತೂರಿಗೆ ಬಲಿಯಾಗಿ ನಾನು, ಪ್ರೀತಂ ವಿಷಕಂಠರಾಗಿದ್ದೇವೆ: ಸಿ.ಟಿ ರವಿ

    ಇನ್ನು ದಕ್ಷಿಣ ಭಾರತ ಪ್ರತ್ಯೇಕ ಕೂಗು ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ನಮ್ಮ ದೇಶದಲ್ಲಿ 560 ರಾಜ್ಯಗಳಿದ್ದವು. ಮೊದಲು ನಮ್ಮ ದೇಶನೇ ಇರಲಿಲ್ಲ. ಬ್ರಿಟಿಷರು ಆಳುವ ಸಂದರ್ಭದಲ್ಲಿ 560 ರಾಜ್ಯಗಳಿದ್ದವು. ಆಗ ಎಲ್ಲಾ ರಾಜ್ಯಗಳ ಭೂಪ್ರದೇಶ ಭಾರತ, ಇಂಡಿಯಾ ಎಂದು ಮಾಡಿದ್ದು ಕಾಂಗ್ರೆಸ್. ಸ್ವಾತಂತ್ರ‍್ಯ ಹೋರಾಟದಲ್ಲಿ ಕಾಂಗ್ರೆಸ್‌ನವರು (Congress) ಭಾಗವಹಿಸಿದ್ದರು. ಬಿಜೆಪಿ ಪೂರ್ವಜರು ವಿಹೆಚ್‌ಪಿ, ಆರ್‌ಎಸ್‌ಎಸ್ ನವರು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಅಖಂಡ ಭಾರತ ಕಟ್ಟಿದ್ದೇ ಕಾಂಗ್ರೆಸ್ ಪಕ್ಷ. ಭಾರತ ಒಡೆಯುವ ಪ್ರಶ್ನೆಯೇ ಇಲ್ಲ. ಡಿಕೆ ಸುರೇಶ್ (DK Suresh) ಆ ರೀತಿ ಹೇಳಬೇಕು ಅಂದರೆ ಅವರಿಗೆ ಎಷ್ಟು ಕೋಪ ಬಂದಿರಬಾರದು? ದಕ್ಷಿಣ ಭಾರತ ರಾಜ್ಯಗಳಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ? 2 ಲಕ್ಷ ಕೋಟಿ ಸಹ ಕೊಟ್ಟಿಲ್ಲ. ನಮ್ಮ ರಾಜ್ಯದಿಂದ ನಾಲ್ಕೂವರೆ ಲಕ್ಷ ಕೋಟಿ ಟ್ಯಾಕ್ಸ್ ಹೋಗುತ್ತೆ. ಅದರಲ್ಲಿ ನಮಗೆ ಕೊಡುವುದು ಕೇವಲ 50 ಸಾವಿರ ಕೋಟಿ ಮಾತ್ರ. ದೇಶ ಅಖಂಡವಾಗಿ ಇರಬೇಕು. ಆದರೆ ನಮಗೆ ಕೊಡುವಂತಹದ್ದು ಕೊಡಬೇಕಲ್ಲಾ? ನಮ್ಮ ರಾಜ್ಯಕ್ಕೆ ಅನುದಾನ ಕಡಿಮೆ ಕೊಡುತ್ತಿರುವುದರಿಂದ ಬಿಜೆಪಿಯವರಿಗೆ ಒಳಒಳಗೆ ಖುಷಿ. ರಾಜ್ಯದಲ್ಲಿ 123 ತಾಲೂಕು ಬರಗಾಲ ಎಂದು ಘೋಷಣೆ ಮಾಡಿದೆ. ಪ್ರಧಾನಿಗಳು ಬಿಡಿಗಾಸು ಸಹ ಕೊಟ್ಟಿಲ್ಲ. ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಒಂದು ರೂ. ಸಹ ಬಿಡುಗಡೆ ಮಾಡಿಲ್ಲ. ಇದು ಮಲತಾಯಿ ಧೋರಣೆ ಅಲ್ವಾ? ಈ ಕೋಪಕ್ಕೆ ಅವರು ಹೇಳಿದ್ದಾರೆ ಅಷ್ಟೇ ಎಂದು ಸಮಜಾಯಿಷಿ ಕೊಟ್ಟರು. ಇದನ್ನೂ ಓದಿ: ರಾಜ್ಯದ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಡಿಕೆ ಸುರೇಶ್

    ಬರಗಾಲ ವಿಷಯಕ್ಕೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರದ ಮಾರ್ಗದರ್ಶನ ಪ್ರಕಾರ ನಾವು ಬರಗಾಲ ಎಂದು ಘೋಷಣೆ ಮಾಡಿದ್ದೇವೆ. ನಾಲ್ಕೂವರೆ ಲಕ್ಷ ಕೋಟಿ ಹಣ ನಮ್ಮನ್ನು ಯಾಕೆ ಕೇಳುತ್ತಾರೆ? ನಾವು ಯಾಕೆ ಕೊಡಬೇಕು? ಕರ್ನಾಟಕ ರಾಜ್ಯಕ್ಕೆ ಹೆಚ್ಚೇನು ಕೊಡಬೇಕಿಲ್ಲ ಅನ್ನುವುದಾದರೆ ನಾವು ಏಕೆ ಕೊಡಬೇಕು? ನಾವು ಟ್ಯಾಕ್ಸ್ ಯಾಕೆ ಕೊಡಬೇಕು? ನಾವು ಪರಿಹಾರ ಕೊಡುತ್ತೇವೆ. ಆದರೆ ಕೇಂದ್ರದ ಕೊಡುಗೆ ಏನು ಎಂಬುದು ಮೊದಲು ಹೇಳಲಿ. ಬಿಜೆಪಿ ಅವರಿಗೆ ಬಾಯಿ ಇಲ್ಲ, ಫೆವಿಕಾಲ್ ಹಾಕಿಕೊಂಡಿದ್ದಾರೆ. ಯಡಿಯೂರಪ್ಪ, ವಿಜಯೇಂದ್ರ, ಬೊಮ್ಮಾಯಿ, ಪ್ರಹ್ಲಾದ್ ಜೋಷಿ ಇವರ ಕೊಡುಗೆ ಏನು? ರಾಜ್ಯಕ್ಕೆ ಬರ ಬಂದಿದೆ, ಹಣ ಕೊಡಿ ಎಂದು ಕೇಳುವ ತಾಕತ್ತು, ಧಮ್ಮು ಅವರಿಗಿಲ್ಲ. ಇಂಥವರನ್ನು ಕರ್ನಾಟಕದಿಂದ 25 ಜನ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಎಲ್ಲಾ ದಂಡ ಎಂದರು. ಈ ವೇಳೆ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

  • ಹಿಂದೆಯೇ ಅಡ್ವಾಣಿಗೆ ಭಾರತ ರತ್ನ ಕೊಡಬೇಕಿತ್ತು: ಸತೀಶ್‌ ಜಾರಕಿಹೊಳಿ

    ಹಿಂದೆಯೇ ಅಡ್ವಾಣಿಗೆ ಭಾರತ ರತ್ನ ಕೊಡಬೇಕಿತ್ತು: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಲಾಲ್‌ ಕೃಷ್ಣ ಅಡ್ವಾಣಿ (LK Advani) ಅವರು ಭಾರತ ರತ್ನ (Bharat Ratna) ಗೌರವಕ್ಕೆ ಭಾಜನರಾಗಿರುವದಕ್ಕೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಸಂತಸ ವ್ಯಕ್ತಪಡಿಸಿದ್ದಾರೆ.

    ಹುಕ್ಕೇರಿ ತಾಲೂಕಿನ‌ ಹೊಸೂರು ಗ್ರಾಮದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿದರೆ ಒಳ್ಳೆಯದು. ಬಹಳ ದಿನಗಳ ಹಿಂದೆಯೇ ಅವರಿಗೆ ಭಾರತ ರತ್ನ ಕೊಡಬೇಕಿತ್ತು. ಭಾರತ ರತ್ನಕ್ಕೆ ಅವರು ಅರ್ಹರಿದ್ದಾರೆ. ಅವರೊಬ್ಬರು ಒಳ್ಳೆಯ ರಾಜಕಾರಣಿ ಎಂದು ಅಡ್ವಾಣಿ ಅವರನ್ನು ಹಾಡಿ ಹೊಗಳಿದರು.  ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ

     

    ಕನಕ ಪೀಠದ ಸ್ವಾಮೀಜಿಗಳಿಗೆ ದೇವಸ್ಥಾನ (Temple) ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಈ ದೇಶದಲ್ಲಿ ಜಾತಿ ವ್ಯವಸ್ಥೆ ನಡೆಯುತ್ತಿದೆ. ಜನ ಬದಲಾವಣೆ ಆಗಬೇಕು ಸಮಾಜ ಬದಲಾವಣೆ ಆಗಬೇಕು‌.ಇದು ಹೊಸದೇನಲ್ಲ ಬಹಳ ಕಡೆ ಆಗಿದೆ. ಸಮಾನತೆ ಬಂದು 70 ವರ್ಷ ಆಯಿತು, ಈ ಬಗ್ಗೆ ಹೆಚ್ಚು ಗಮನ ಕೊಡಬೇಕು.ಜಾತಿ ವ್ಯವಸ್ಥೆಯಿಂದ ಬಿಟ್ಟು ಜನ,ಸಮಾಜ‌, ಧರ್ಮಗಳು ಹೊರಗೆ ಬರಬೇಕು ಇನ್ನೂ ಹಳೆ ಪದ್ದತಿಯಲ್ಲಿದ್ದು ಹೊಸದರಲ್ಲಿ ಬರಬೇಕು ಎಂದರು‌. ಇದನ್ನೂ ಓದಿ: ನಾನು ಬದುಕಿದ್ದೇನೆ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ

    ಲೋಕಸಭೆ ಚುನಾವಣೆ (Lok Sabha Election) ಟಿಕೆಟ್ ವಿಚಾರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಸತೀಶ ಜಾರಕಿಹೊಳಿ ನಡುವೆ ಶೀತಲ ಸಮರದ ವಿಚಾರದ ಬಗ್ಗೆ ಹೇಳಿಕೆ ಕೊಡುವ ಅವಶ್ಯಕತೆಯಿಲ್ಲ. ನಾನು ಹಾಗೂ ಲಕ್ಷ್ಮೀ ಹೆಬ್ಬಾಳಕರ್‌ ಇಬ್ಬರೂ ಚೆನ್ನಾಗಿದ್ದೇವೆ. ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸದಿದ್ದರೆ ಗ್ಯಾರಂಟಿ ಯೋಜನೆಗಳ ಸ್ಥಗಿತಗೊಳಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಆ ವಿಷಯ ಎಲ್ಲಿಯೂ ಚರ್ಚೆ ಆಗಿಲ್ಲ ಎಂದರು.