Tag: ಭೂಗತಪಾತಕಿ

  • ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.

    ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.

    ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ ಈ ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಉಳಿದಂತೆ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.  ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.

  • ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ

    ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ

    ನವದೆಹಲಿ: ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಬರೋಬ್ಬರಿ 15 ವರ್ಷಗಳಿಂದ ಬೇರೆ ಬೇರೆ ದೇಶಗಳಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಇಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಭೂಗತವಾಗಿದ್ದುಕೊಂಡೆ ಕ್ರಿಮಿನಲ್ ಚಟುವಟಿಕೆ ನಡೆಸುತ್ತಿದ್ದ ರವಿ ಪೂಜಾರಿ ಮೇಲೆ ದೇಶದ ವಿವಿಧ ರಾಜ್ಯದಲ್ಲಿ ಪ್ರಕರಣಗಳು ದಾಖಲಾಗಿದೆ.

    ರವಿ ಪೂಜಾರಿ ಬಂಧನಕ್ಕೆ ಭಾರತ ಸರ್ಕಾರ ಪಶ್ಚಿಮ ಆಫ್ರಿಕಾ ದೇಶದವಾದ ಸೆನೆಗಲ್ ನೊಂದಿಗೆ ಸಂಪರ್ಕದಲ್ಲಿತ್ತು ಎನ್ನಲಾಗಿದ್ದು, ಸಿಸಿಬಿಯ ಹಿಟ್ ಲಿಸ್ಟ್ ನಲ್ಲಿದ್ದ. ಈ ಕುರಿತು ಭಾರತದ ಸರ್ಕಾರಕ್ಕೆ ಸೆನೆಗಲ್ ಸರ್ಕಾರ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಆದರೆ ಅಧಿಕೃತ ಆಗಬೇಕಿದೆ. ಸದ್ಯ ಪೊಲೀಸ್ ವಶದಲ್ಲಿ ಇರುವ ರವಿ ಪೂಜಾರಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಓದಿ: ‘ನಿನ್ನನ್ನು ಗುಂಡಿಕ್ಕಿ ಕೊಲ್ತೀನಿ’ – ಮಾಜಿ ಶಾಸಕ ಅನಿಲ್ ಲಾಡ್‍ಗೆ ರವಿ ಪೂಜಾರಿ ಬೆದರಿಕೆ

    ರವಿ ಪೂಜಾರಿಯ ಬಂಧನ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರು, ಯಾವ ಕಾರಣಕ್ಕಾಗಿ ಬಂಧನ ಮಾಡಲಾಗಿದೆ ಹಾಗೂ ವಿಚಾರಣೆ ಕುರಿತು ಹೆಚ್ಚಿನ ಮಾಹಿತಿ ಲಭಿಸಬೇಕಿದೆ. ಪೊಲೀಸ್ ಬಂಧನ ಮಾಡಿ ವಿಚಾರಣೆ ನಡೆಸಿದ ಬಳಿಕ ಭಾರತಕ್ಕೆ ಹಸ್ತಾಂತರ ಮಾಡಲಿದ್ದರಾ ಎಂಬ ಬಗ್ಗೆಯೂ ಮಾಹಿತಿ ಲಭಿಸಬೇಕಿದೆ. ಈ ಹಿಂದೆ ಕರ್ನಾಟಕದ ಮಾಜಿ ಶಾಸಕ ಅನಿಲ್ ಲಾಡ್ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್, ಸಂಸದ ಡಿಕೆ ಸುರೇಶ್, ಶಿವಸೇನಾ ಸಂಸದರು ಸೇರಿದಂತೆ ಹಲವು ಉದ್ಯಮಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದನ್ನು ಓದಿ: ಹೌದು, ಸಚಿವ ತನ್ವೀರ್ ಸೇಠ್‍ಗೆ ಬೆದರಿಕೆ ಹಾಕಿದ್ದು ನಾನೇ: ರವಿ ಪೂಜಾರಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv