Tag: ಭೂಪಾಲ್

  • ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

    ಭೋಪಾಲ್: ಜಮೀನು ವಿವಾದದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ (shoot) ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ (Morena) ನಡೆದಿದೆ.

    ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋದಲ್ಲಿ ಇಬ್ಬರು ರೈಫಲ್‍ಗಳನ್ನು (Rifles) ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ಘಟನೆಯ ಹಿನ್ನೆಲೆ:
    ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ 2013ರಲ್ಲಿ ತ್ಯಾಜ್ಯ ಸುರಿಯುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಧೀರ್ ಸಿಂಗ್ ತೋಮರ್ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಗಜೇಂದ್ರ ಸಿಂಗ್ ತೋಮರ್ ಕುಟುಂಬವು ಗ್ರಾಮದಿಂದ ಪಲಾಯನ ಮಾಡಿತ್ತು.

    ನಂತರ ಎರಡು ಕುಟುಂಬಗಳು ನ್ಯಾಯಾಲಯದ (Court) ಹೊರಗೆ ರಾಜಿ ಮಾಡಿಕೊಂಡಿದ್ದವು. ಶುಕ್ರವಾರ ಗಜೇಂದ್ರ ಸಿಂಗ್ ತೋಮರ್ ಕುಟುಂಬ ಗ್ರಾಮಕ್ಕೆ ಮರಳಿದೆ. ಈ ವೇಳೆ ಧೀರ್ ಸಿಂಗ್ ತೋಮರ್ ಕುಟುಂಬ ಅವರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

    ಹತ್ಯೆಯಲ್ಲಿ ಭಾಗಿಯಾಗಿರುವ ಎಂಟು ಮಂದಿಯನ್ನು ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಇಬ್ಬರು ಯೋಧರು ಸಾವು

  • ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಭೂಪಾಲ್: ತನ್ನ ಮಾಜಿ ವಿದ್ಯಾರ್ಥಿಯಿಂದ ದಾಳಿಗೊಳಗಾಗಿ ಕಳೆದ ಐದು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಮಧ್ಯಪ್ರದೇಶದ ಇಂಧೋರ್‌ನ (Indore) ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಡಾ.ವಿಮುಕ್ತ ಶರ್ಮಾ (54) ಮೃತ ದುದೈವಿ. ಮಾರ್ಕ್ಸ್‌ಕಾರ್ಡ್ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಕಾಲೇಜಿನ ಹಳೇ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ ನಂತರ ಪ್ರಾಂಶುಪಾಲರ ಮೇಲೆ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿದ್ದಾನೆ. ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹವು ಶೇ.80 ರಷ್ಟು ಸುಟ್ಟುಹೋಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

    ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಪ್ರಾಂಶುಪಾಲರ ಸಾವಿನ ನಂತರ ಕೊಲೆ ಎಂದು ಎಫ್‍ಐಆರ್‌ನಲ್ಲಿ (FIR) ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

     ವಿಚಾರಣೆ ವೇಳೆ ಆರೋಪಿ, ತಾನು ಕಳೆದ ವರ್ಷ ಜುಲೈನಲ್ಲಿ ತೇರ್ಗಡೆಯಾಗಿದ್ದ ಅಂಕಪಟ್ಟಿಯನ್ನು (Marks card) ಕಾಲೇಜಿನ ಅಧಿಕಾರಿಗಳು ನೀಡುತ್ತಿರಲಿಲ್ಲ ಎಂದು ಆರೋಪಿಸಿದ್ದಾನೆ.

    ಆರೋಪಿ ನೀಡಿದ ಹೇಳಿಕೆಯನ್ನು ತಳ್ಳಿಹಾಕಿರುವ ಕಾಲೇಜು ಆಡಳಿತ ಮಂಡಳಿ, ಆತ ಕ್ರಿಮಿನಲ್ ಹಿನ್ನೆಲೆ ಉಳ್ಳವನಾಗಿದ್ದಾನೆ. ಆತನ ಮಾರ್ಕ್ಸ್‌ಕಾರ್ಡ್ ಪಡೆದುಕೊಳ್ಳುವಂತೆ ತಿಳಿಸಲಾಗಿತ್ತು. ಆದರೆ ಆತ ತೆಗೆದುಕೊಂಡು ಹೋಗಿರಲಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಬಂದ್ಮೇಲೆ ದೇಶ ಅಭಿವೃದ್ಧಿಯಾಗಿಲ್ಲ, ನಾವು ಹುಟ್ಟುವ ಮುಂಚೆಯೇ ಆಗಿದೆ: ಹೆಚ್‌ಡಿಕೆ

  • ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ

    ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ

    ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ.

    ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ ರೀತಿ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿಶ್ವಾಸ್ ಸಾರಂಗ್ ಟೀಕಿಸಿದ್ದಾರೆ. ಇದನ್ನೂ ಓದಿ: ಯುಪಿ ಸಿಎಂ ಕಚೇರಿಯ ಟ್ವಿಟ್ಟರ್ ಖಾತೆ ಹ್ಯಾಕ್

    2021ರಲ್ಲಿ ಅಡುಗೆ ಅನಿಲದ ಬೆಲೆ ರೂ. 300 ರಿಂದ 4000 ಹಾಗೂ ಲೀಟರ್ ಪೆಟ್ರೋಲ್ ಬೆಲೆ 60 ರೂ. ಇತ್ತು. ಅಂತಹ ಸಂದರ್ಭದಲ್ಲಿ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರವನ್ನು ಟೀಕಿಸಿದ್ದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್, ವಾಹನಗಳನ್ನು ಖರೀದಿಸಬಹುದು. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಲು ಸಾಲದ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ಓದಿ:ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ

    ಅಡುಗೆ ಅನಿಲ ಬೆಲೆ 1 ಸಾವಿರ ರೂಪಾಯಿಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100 ರಿಂದ 120 ರೂ. ಆಗಿದೆ. ಆದಾಗ್ಯೂ, ಇವರಿಗೆ ಸಾಮಾನ್ಯ ಜನರ ಪರ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ಎಂಎಲ್ ಸಿ ಪಿ. ಸಿ. ಶರ್ಮಾ ಆರೋಪಿಸಿದರು.

  • ಅವಕಾಶಗಳಿಂದ ವಂಚಿತನಾಗಿ ಟೀ ಮಾರುತ್ತಿರುವ ರಾಷ್ಟ್ರೀಯ ಚೆಸ್ ಆಟಗಾರ

    ಅವಕಾಶಗಳಿಂದ ವಂಚಿತನಾಗಿ ಟೀ ಮಾರುತ್ತಿರುವ ರಾಷ್ಟ್ರೀಯ ಚೆಸ್ ಆಟಗಾರ

    – ಜೀವನ ನಡೆಸಲು ಚಹಾ ಮಾರಾಟ

    ಭೂಪಾಲ್: ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವಕಾಶಗಳ ಕೊರತೆ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಲೇಜಿನ ಎದುರು ಚಹಾ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

    ನನಗೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಸಿಗುತ್ತಿಲ್ಲ. ಮನೆಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ, ಹಾಗಾಗಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಆರ್ಥಿಕ ಪರಿಸ್ಥಿತಿಯಿಂದಾಗಿ ಇಡೀ ಜೀವನವನ್ನು ಆಟಕ್ಕಾಗಿ ಮುಡಿಪಾಗಿಡಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಕುಲದೀಪ್ ಚೌಹಾನ್ ಬೇಸರ ವ್ಯಕ್ತಪಡಿಸಿದ್ದಾರೆ.

    ಕುಲದೀಪ್ ಚೌಹಾನ್ ಮಧ್ಯಪ್ರದೇಶದ ಕಾಲೇಜ್‍ವೊಂದರ ಎದುರು ಟೀ ಮಾರಾಟ ಮಾಡುತ್ತಿರುವ ಫೆÇೀಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅವಕಾಶ ಸಿಗದ ಕಾರಣ ಇಂತಹ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

    ಭಾರತದಲ್ಲಿ ಅಸಂಖ್ಯಾತ ಪ್ರತಿಭೆಗಳು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಅವಕಾಶದಿಂದ ವಂಚಿತರಾಗುತ್ತಿದ್ದವರ ಸಾಲಿಗೆ ಮಧ್ಯಪ್ರದೇಶದ ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವರ ಹೆಸರು ಕೇಳಿ ಬಂದಿದೆ.

    ಟ್ವಿಟ್ಟರ್‌ನಲ್ಲಿ ಟೀ ಮಾರುತ್ತಿರುವ ಫೋಟೋಗಳು ಹರಿದಾಡುತ್ತಿದ್ದಂತೆ ಅನೇಕರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಟ್ಯಾಗ್ ಮಾಡಿ ಆಟಗಾರನ ಬಗ್ಗೆ ಗಮನ ಹರಿಸಿ ಸಹಾಯ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.

  • ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ – 4ನೇ ಬಾರಿ ಸಿಎಂ ಆಗಲಿದ್ದಾರೆ ಶಿವರಾಜ್ ಸಿಂಗ್ ಚೌಹಾಣ್

    ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ – 4ನೇ ಬಾರಿ ಸಿಎಂ ಆಗಲಿದ್ದಾರೆ ಶಿವರಾಜ್ ಸಿಂಗ್ ಚೌಹಾಣ್

    ಭೋಪಾಲ್: 22 ಮಂದಿ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದು ಕಾಂಗ್ರೆಸ್ ಸರ್ಕಾರ ಪತನದ ಬಳಿಕ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದು ಸ್ಪಷ್ಟವಾಗಿದೆ.

    ಇಂದು ರಾತ್ರಿ 9 ಗಂಟೆಗೆ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಲಾಲ್ಜಿ ಟಂಡನ್ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

    ಸಂಜೆ ಭೂಪಾಲ್‍ನಲ್ಲಿ ಶಾಸಕರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಆಯ್ಕೆ ಮಾಡಲಿದ್ದಾರೆ. ಆ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದು, ಇಂದು ರಾತ್ರಿ 9 ಗಂಟೆಗೆ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

    ಶಾಸಕಾಂಗ ಸಭೆಗೂ ಮುನ್ನ ದೆಹಲಿ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಾಯಕರಾದ ಧರ್ಮೇಂದ್ರ ಪ್ರಧಾನ್, ಡಾ. ವಿನಯ್ ಸಹಸ್ತ್ರಭೂಧೆ, ಜ್ಯೋತಿರಾಧಿತ್ಯ ಸಿಂಧಿಯಾ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.

    ಮಾಹಿತಿಯ ಪ್ರಕಾರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳಾಗಿದ್ದು, ಮೊದಲು ಶಿವರಾಜ್ ಸಿಂಗ್ ಚೌಹಾಣ್ ಏಕಾಂಗಿಯಾಗಿ ಪ್ರಮಾಣ ವಚನ ಪಡೆಯಲಿದ್ದಾರೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಕೇವಲ 40 ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

    ಕಾಂಗ್ರೆಸ್ 22 ಮಂದಿ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಸಿಎಂ ಆಗುವ ಮಾರ್ಗ ಸುಲಭವಾಗಿದೆ.