Tag: ಭೂ ಕಬಳಿಕೆ

  • ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ನಿತ್ಯಾನಂದ (Nithyananda) ವಿರುದ್ಧ ಭೂ ವಂಚನೆ (Land Scam) ಯತ್ನ ಆರೋಪ ಕೇಳಿ ಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ (Bolivia) ದೇಶದಲ್ಲಿ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಆರೋಪ ಎದುರಿಸುತ್ತಿದ್ದಾರೆ.

    ಬೊಲಿವಿಯಾದ ಅಮೇಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಅಮೆಜಾನ್ ಮಳೆ ಕಾಡು ಪ್ರದೇಶದ ಭೂಮಿಯನ್ನು ನಿತ್ಯಾನಂದ ಗ್ಯಾಂಗ್ 1 ಸಾವಿರ ವರ್ಷ ಲೀಸ್‌ಗೆ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ.


    2024ರ ಅಕ್ಟೋಬರ್- ನವೆಂಬರ್ ನಡುವೆ ಈ ಅನಧಿಕೃತ ಭೂವ್ಯವಹಾರ ನಡೆದಿದೆ. 1,08,000 ಡಾಲರ್‌ಗೆ (ವರ್ಷಕ್ಕೆ 8.96 ಲಕ್ಷ ರೂ.) ಈ ಭೂಮಿಯನ್ನು ಅಕ್ರಮವಾಗಿ ಲೀಸ್‌ಗೆ ಪಡೆದಿದೆ. ಪ್ರಕರಣ ಸಂಬಂಧ ಇದೀಗ ನಿತ್ಯಾನಂದನ 20ಕ್ಕೂ ಅಧಿಕ ಅನುಯಾಯಿಗಳನ್ನು ಬೊಲಿವಿಯಾದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌

    ಈ ಭೂಮಿಯು ದೆಹಲಿಯ ಗಾತ್ರಕ್ಕಿಂತ 2.6 ಪಟ್ಟು, ಮುಂಬೈನ ಗಾತ್ರಕ್ಕಿಂತ 6.5 ಪಟ್ಟು, ಬೆಂಗಳೂರಿನ ಗಾತ್ರಕ್ಕಿಂತ 5.3 ಪಟ್ಟು, ಕೋಲ್ಕತ್ತಾದ ಗಾತ್ರಕ್ಕಿಂತ 19 ಪಟ್ಟು ದೊಡ್ಡದಾಗಿದೆ.

    ಬಂಧಿತರ ಪೈಕಿ ಬಹುತೇಕ ಮಹಿಳೆಯರಿದ್ದಾರೆ. 122 ಚೀನಿಯರು, 7 ಜನ ಭಾರತೀಯರಿದ್ದಾರೆ. ಕೆಲವರನ್ನ ಬೊಲಿವಿಯಾದಿಂದ ಗಡೀಪಾರು ಮಾಡಲಾಗಿದೆ. ನಿತ್ಯಾನಂದ ತಂಡ ಆರೋಪ ನಿರಾಕರಿಸಿದೆ. ತಪ್ಪು ವರದಿಯಿಂದ ಹಿಂದು ಸನ್ಯಾಸಿಗಳನ್ನ ಬಂಧಿಸಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದೆ.

     

  • ಸಚಿವ ಡಿ.ಸುಧಾಕರ್ ಜಾತಿ ನಿಂದನೆ ಪ್ರಕರಣ – ತನಿಖೆ ಚುರುಕು, ಪೊಲೀಸರಿಂದ ಸ್ಥಳ ಮಹಜರು

    ಸಚಿವ ಡಿ.ಸುಧಾಕರ್ ಜಾತಿ ನಿಂದನೆ ಪ್ರಕರಣ – ತನಿಖೆ ಚುರುಕು, ಪೊಲೀಸರಿಂದ ಸ್ಥಳ ಮಹಜರು

    ಬೆಂಗಳೂರು: ಯಲಹಂಕದಲ್ಲಿ (Yelahanka) ನಡೆದಿದೆ ಎನ್ನಲಾದ ಜಾತಿ ನಿಂದನೆ ಹಾಗೂ ಭೂ ಕಬಳಿಕೆ ವಿಚಾರದಲ್ಲಿ ಸಚಿವ ಡಿ.ಸುಧಾಕರ್ (D.Sudhakar) ವಿರುದ್ಧದ ತನಿಖೆ ಚುರುಕುಗೊಂಡಿದೆ. ಈ ವಿಚಾರವಾಗಿ ಯಲಹಂಕ ಪೊಲೀಸರು (Police) ಸ್ಥಳ ಮಹಜರು ಮಾಡಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧ ಸಚಿವರು ಸೇರಿದಂತೆ ಹಲವರಿಗೆ ನೋಟಿಸ್ ನೀಡಲು ತಯಾರಿ ನಡೆಸಿದ್ದಾರೆ.

    ಮುನಿಯಮ್ಮ ಎಂಬುವವರ ಜಾಗದ ಕಬಳಿಕೆ ಮಾಡಿಕೊಂಡು ಸಚಿವ ಹಾಗೂ ಬೆಂಬಲಿಗರಿಂದ ಅವರ ಮೇಲೆ ಜಾತಿ ನಿಂದನೆ ಮಾಡಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಮಹಜರು ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಳಿಸಿದ್ದು ಅಗತ್ಯ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಇದನ್ನೂ ಓದಿ: ದಲಿತ ಕುಟುಂಬಕ್ಕೆ ಧಮ್ಕಿ ಆರೋಪ – ವೀಡಿಯೋ ಫೇಕ್ ಎಂದ ಡಿ ಸುಧಾಕರ್

    ಸಚಿವ ಸೇರಿ ಎಫ್‍ಐಆರ್‌ನಲ್ಲಿ ಉಲ್ಲೇಖಿಸಿರುವ ಹಾಗೂ ದೂರು ದಾಖಲಿಸಿದವರು ಸೇರಿದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳಿಗೂ ನೋಟಿಸ್ ನೀಡಿ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ವೀಡಿಯೋದಲ್ಲಿರುವ ವ್ಯಕ್ತಿಗಳ ಗುರುತು ಪತ್ತೆಗೆ ತನಿಕಾಧಿಕಾರಿಗಳು ಮುಂದಾಗಿದ್ದಾರೆ. ಅಲ್ಲದೇ ಜಾಗದಲ್ಲಿ ಬಾಡಿಗೆಗೆ ಇದ್ದವರನ್ನು ಸಹ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ. ಬಾಡಿಗೆ ಹಣ ಯಾರಿಗೆ ನೀಡುತ್ತಿದ್ದರು? ಯಾರ ಹೆಸರಲ್ಲಿ ಬಾಡಿಗೆ ನೀಡುತ್ತಿದ್ದರು? ಎಂದು ಮಾಹಿತಿ ಪಡೆಯಲು ಬಾಡಿಗೆದಾರರಿಗೂ ನೋಟಿಸ್ ನೀಡಲು ನಿರ್ಧರಿಸಲಾಗಿದೆ.

    ವೀಡಿಯೋದಲ್ಲಿರುವ ವ್ಯಕ್ತಿಗಳಿಗೂ ದೂರುದಾರರ ನಡುವಿನ ಗಲಾಟೆಗೆ ಕಾರಣ ಏನು? ಸಚಿವ ಮತ್ತು ವೀಡಿಯೋದಲ್ಲಿರುವ ವ್ಯಕ್ತಿಗಳ ನಡುವಿನ ಸಂಬಂಧ ಏನು? ಘಟನೆ ವೇಳೆ ಸಚಿವರು ಸ್ಥಳದಲ್ಲಿ ಇದ್ರಾ ಇಲ್ವಾ? ಸುಧಾಕರ್ ಅವರ ಕುಮ್ಮಕ್ಕಿನಿಂದ ಗಲಾಟೆ ನಡೆದಿದೆಯೇ? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಸಚಿವರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆನ್ನಲಾದ ಕುಟುಂಬವನ್ನು ಗುರುವಾರ ಬಿಜೆಪಿ ನಾಯಕರು ಭೇಟಿಯಾಗಲು ಮುಂದಾಗಿದ್ದಾರೆ. ಮಾಜಿ ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನಿಯೋಗದಿಂದ ಭೇಟಿಯಾಗಲಿದೆ. ಇದನ್ನೂ ಓದಿ: ಡಿ ಸುಧಾಕರ್ ರಾಜೀನಾಮೆ ಪಡೆದು ಬಂಧನ ಮಾಡಿ: ಹೆಚ್‌ಡಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಭೂ ಕಬಳಿಕೆ ಆರೋಪದಡಿ ನ್ಯಾಯಾಲಯದ ಆದೇಶದ ಮೇರೆಗೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಸಹೋದರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಜಮೀರ್‌ ಹಾಗೂ ಸಹೋದರರ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವರ್ಷ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾರಿಂದ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್‌ ಮಾಲೀಕರು ಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

    ಚೊಕ್ಕನಹಳ್ಳಿ ಬಡಾವಣೆಯ ಸೈಟ್ ನಂ. 5, 6 ರ ವ್ಯಾಜ್ಯ ಸಂಬಂಧ ಜಮೀರ್ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2015 ರಲ್ಲಿ ಶಾಹಿತಾ ನಾಸೀನ್, ತಸೀಮಾ ಫಾತೀಮಾ ಅವರು ಜಮೀರ್ ಕುಟುಂಬಸ್ಥರಿಂದ ಸೈಟ್ ಖರೀದಿಸಿದ್ದರಂತೆ.‌ ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

    ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್‌ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್‌ಗಳ ಕಬಳಿಕೆ ಯತ್ನಿಸಿದ್ದಾರೆ. ಅದನ್ನು ಪ್ರಶ್ನಿಸಿದ್ದಕ್ಕೆ ನಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಹೀತಾ ನಾಸೀನ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

    ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಕೋರ್ಟ್‌ ಆದೇಶಿಸಿದೆ. ಆದರೆ ಕೋರ್ಟ್‌ನಿಂದ ತಡೆಯಾಜ್ಞೆ ಬಂದರೂ ಜಮೀರ್‌ ಕುಟುಂಬಸ್ಥರು ಸೈಟ್‌ ಬಿಟ್ಟುಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ದೂರುದಾರರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

  • ಏನಾದ್ರು ಒಂದು ಗಾಳಿ ಸುದ್ದಿ ಬಿಡಬೇಕಲ್ಲ ಅಂತ ಹಾಗೆ ಮಾಡಿರ್ಬೇಕು: ಮಂಜುಗೆ ಎಚ್.ಡಿ.ರೇವಣ್ಣ ಟಾಂಗ್

    ಏನಾದ್ರು ಒಂದು ಗಾಳಿ ಸುದ್ದಿ ಬಿಡಬೇಕಲ್ಲ ಅಂತ ಹಾಗೆ ಮಾಡಿರ್ಬೇಕು: ಮಂಜುಗೆ ಎಚ್.ಡಿ.ರೇವಣ್ಣ ಟಾಂಗ್

    ಹಾಸನ: ಮಾಜಿ ಸಚಿವ ಎ.ಮಂಜುರವರಿಗೆ ಮಾಡಲು ಏನು ಕೆಲಸ ಇಲ್ಲ ಅಂತ ಕಾಣುತ್ತೆ. ಹೀಗಾಗಿ ಏನಾದರೂ ಒಂದು ಗಾಳಿ ಸುದ್ದಿ ಬಿಡಬೇಕು ಅನ್ನುವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.

    ಹಾಸನ ನಗರದ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ.ಮಂಜು ಅವರ ಹೇಳಿಕೆಗೆ ತಿರುಗೇಟು ನೀಡಿದರು.

    ಯಾವುದೇ ಸರ್ಕಾರಿ ಭೂಮಿಯನ್ನು ರೇವಣ್ಣ ಅಥವಾ ಕುಟುಂಬದ ಯಾರೇ ಮಾಡಿದ್ದರೂ ಸಹ ಅದನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ. ಈ ಹಿಂದೆ ಯಡಿಯೂರಪ್ಪನವರು ಸಹ ನಮ್ಮ ಕುಟುಂಬ ಭೂಮಿ ಕಬಳಿಸಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ. ಅಲ್ಲದೇ ಅದಕ್ಕಾಗಿ ಓರ್ವ ಮಂತ್ರಿಯನ್ನೇ ಬಿಟ್ಟಿದ್ದರು. ಆದರೆ ಏನೂ ಪ್ರಯೋಜನವಾಗಿರಲಿಲ್ಲ. ಈಗ ಮಾಜಿ ಸಚಿವರು ಶುರು ಹಚ್ಚಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರೇವಣ್ಣ ವಿರುದ್ಧವೇ ಭೂ ಕಬಳಿಕೆ ಆರೋಪ: ಎ ಮಂಜು ದಾಖಲೆ ರಿಲೀಸ್

    ಎ.ಮಂಜು ಅವರಿಗೆ ಸದ್ಯ ಮಾಡಲು ಏನೂ ಕೆಲಸವಿಲ್ಲ. ಈಗ ಅವರಿಗೆ ಬಿಡುವು ಜಾಸ್ತಿ ಇದೆ. ಹೀಗಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಮಂತ್ರಿಯಿದ್ದಾಗಲೇ ಆರೋಪ ಮಾಡಲು ಹೋಗಿದ್ದರು. ಆದರೆ ಆವಾಗ ಅವರಿಗೆ ಏನು ಸಿಕ್ಕಿರಲಿಲ್ಲ. ಈಗ ಏನಾದರೂ ಸಿಕ್ಕಿರಬೇಕು, ಏನು ಬೇಕಿದ್ದರೂ ತನಿಖೆ ಮಾಡಲಿ ನಾನೇನು ಬೇಡ ಅನ್ನುವುದಿಲ್ಲ. ಏನಾದರೂ ಗಾಳಿ ಸುದ್ದಿ ಬಿಡಬೇಕಲ್ಲ ಅಂತ ಹೀಗೆ ಹೇಳಿಕೆ ನೀಡಿರಬಹುದು ಎಂದು ಆಕ್ರೋಶ ಹೊರಹಾಕಿದರು.

    ನಿರ್ಮಲಾನಂದ ಶ್ರೀಗಳ ಕುರಿತು ಎ.ಮಂಜು ಹೇಳಿಕೆಗೆ ತೀವ್ರವಾಗಿ ವಾಗ್ದಾಳಿ ನಡೆಸಿದ ಅವರು, ನಿರ್ಮಲಾನಂದನಾಥ ಸ್ವಾಮೀಜಿಯವರು ನಮ್ಮ ಸಮಾಜದ ಆಸ್ತಿಯಾಗಿದ್ದಾರೆ. ಅವರ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ರಾಜ್ಯದಲ್ಲಿ ಯಾರಿಗಾದರೂ ಅನ್ಯಾಯವಾದರೆ ಸ್ವಾಮೀಜಿಗಳು ಮಾತನಾಡುವ ಅವಕಾಶವಿದೆ. ಯಾರೂ ಸಹ ಸ್ವಾಮೀಜಿಗಳ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೇವಣ್ಣ ವಿರುದ್ಧವೇ ಭೂ ಕಬಳಿಕೆ ಆರೋಪ: ಎ ಮಂಜು ದಾಖಲೆ ರಿಲೀಸ್

    ರೇವಣ್ಣ ವಿರುದ್ಧವೇ ಭೂ ಕಬಳಿಕೆ ಆರೋಪ: ಎ ಮಂಜು ದಾಖಲೆ ರಿಲೀಸ್

    ಹಾಸನ: ಕಾಂಗ್ರೆಸ್ – ಜೆಡಿಎಸ್ ನಾಯಕರು ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ, ಇತ್ತ ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಗುರುತಿಸಿಕೊಂಡಿರುವ ರೇವಣ್ಣ ವಿರುದ್ಧ ಮಾಜಿ ಸಚಿವ, ಕೈ ನಾಯಕ ಎ ಮಂಜು ಭೂ ಕಬಳಿಕೆಯ ಗಂಭೀರ ಆರೋಪ ಮಾಡಿದ್ದಾರೆ.

    ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ತಮ್ಮ ಪ್ರಭಾವ ಬಳಸಿ ತಮ್ಮ ಮಗನ ಹೆಸರಿಗೆ ಭೂಮಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಎ ಮಂಜು ದಾಖಲೆ ಬಿಡುಗಡೆ ಮಾಡಿದ್ದಾರೆ.

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಎ ಮಂಜು ಅವರು, ಜಿಲ್ಲೆಯ ದುದ್ದ ಹೋಬಳಿ ಸೋಮನಹಳ್ಳಿ ಕಾವಲ್ ಪ್ರದೇಶದಲ್ಲಿ ನಿಯಮ ಮೀರಿ ಭೂಮಿಯನ್ನು ಎಚ್ ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ.

    ಸರ್ಕಾರಿ ದಾಖಲೆಗಳನ್ನು ನಿಯಮಗಳ ವಿರುದ್ಧವಾಗಿ ತಿದ್ದಿ ಸುಮಾರು 54.29 ಎಕರೆ ಭೂಮಿಯನ್ನು ದುರುಪಯೋಗ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಯಾಗಿದ್ದ ವೇಳೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಭೂಮಿ ಕಬಳಿಸಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ತನಿಖೆ ನಡೆಸಬೇಕು. ಸರ್ಕಾರಿ ಭೂಮಿಯನ್ನು ತಮ್ಮ ಹೆಸರಿಗೆ ಹಾಗೂ ಬೇಕಾದವರಿಗೆ ಮಾಡಿದ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

    ಪ್ರಭಾವಿ ರಾಜಕಾರಣಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಅನುಕೂಲಕ್ಕೆ ಮಾಡಿಕೊಳ್ಳುವುದಾದರೆ ಸಾಮಾನ್ಯ ಜನರ ಸ್ಥಿತಿ ಏನು? ಸರ್ಕಾರಿ ಭೂಮಿ ಮತ್ತೆ ಸರ್ಕಾರದ ಸುಪರ್ದಿಗೆ ಬರಬೇಕು. ಭೂಮಿ ಯಾರಿಗೆ ಮಂಜೂರು ಆಗದಿದ್ದರೂ ಕೂಡ ಅದು ಹೇಗೆ ಬೇರೆಯವರಿಗೆ ಪರಭಾರೆ ಆಗಿದೆ ಎಂಬುವುದರ ಬಗ್ಗೆ ತನಿಖೆ ನಡೆಸಬೇಕು ಎಂದರು.

    ಏನಿದು ಆರೋಪ?
    ಹಾಸನ ಜಿಲ್ಲೆಯ ದುದ್ದ ಹೋಬಳಿ ಬಳಿ ಇದ್ದ ಸರ್ಕಾರದ ಭೂಮಿಯನ್ನು ಸಣ್ಣೇಗೌಡ ಎಂಬವರು ಗಿರಿಯಪ್ಪ ಎಂಬವರಿಗೆ ಮಾರಾಟ ಮಾಡಿದ್ದಾರೆ. ಆದರೆ ಅದು ಸರ್ಕಾರಿ ಭೂಮಿಯಾಗಿದ್ದು ಸಣ್ಣೇಗೌಡ ಹೆಸರಿಗೆ ಸರ್ಕಾರ ಭೂಮಿ ಮಂಜೂರು ಆಗದೇ ಇದ್ದರೂ ಆತ ಹೇಗೆ ಮಾರಾಟ ಮಾಡಿದ್ದಾನೆ ಎಂದು ಪ್ರಶ್ನಿಸಿದರು. ಬಳಿಕ ವಿವಿಧ ಹೆಸರಿಗಳಲ್ಲಿ ನೋಂದಣಿ ಮಾಡಿಸಿದ ಭೂಮಿಯನ್ನು ಅಧಿಕಾರ ಬಳಸಿ ತಮ್ಮ ಹೆಸರಿಗೆ ಮಾಡಿಸಿಕೊಳ್ಳಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಮೂಲಕ ಗಿರಿಯಪ್ಪನಿಂದ ಪ್ರಜ್ವಲ್ ರೇವಣ್ಣ ಹೆಸರಿಗೆ ಭೂಮಿ ಹಕ್ಕು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಅಧಿಕಾರಿಗಳ ಲೋಪವೂ ಇದೆ ಎಂದು ಎ ಮಂಜು ಆರೋಪಿಸಿದರು.

    ಇದೇ ವೇಳೆ ಹಾಸನ ತಾಲೂಕಿನ ಕಸಬಾ ಹೋಬಳಿಯ ರಾಂಪುರ, ದೊಡ್ಡಕುಂಡಗೋಳ, ನಿಡುಡಿ ಗ್ರಾಮಗಳಲ್ಲಿ ಸದ್ಯ ಸುಮ್ಮನೆ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಸರ್ವೆ ಮಾಡಲು ಯಾವುದೇ ಆದೇಶ ನೀಡಿಲ್ಲ. ಸುಮ್ಮನೆ ಸರ್ವೆ ಮಾಡಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಇರುವುದರಿಂದ ಈ ರೀತಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಈ ಭೂ ಅವ್ಯವಹಾರದ ಕುರಿತು ಅಂತ್ಯ ಕಾಣುವವರೆಗೂ ನಿರಂತರವಾಗಿ ಹೋರಾಡುತ್ತೇನೆ ಎಂದು ತಿಳಿಸಿದ ಎ ಮಂಜು ಅವರು, ನಾನು ಸದ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು, ಅಲ್ಲಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷದ ವಿರುದ್ಧ ನಾನು ಹೋಗುವುದಿಲ್ಲ. ಈ ರೀತಿಯ ಅನ್ಯಾಯವಾದಗ ಹೇಳುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv