ಪಡ್ಡೆಹುಡುಗರ ಕ್ರಶ್ ರುಕ್ಮಿಣಿ ವಸಂತ್ (Rukmini Vasanth) ಅವರು ಕಾಲಿವುಡ್‌ನತ್ತ (Kollywood) ಮುಖ ಮಾಡಿದ್ದಾರೆ. ಕೆಲ ತಿಂಗಳುಗಳ ಹಿಂದೆಯೇ ವಿಜಯ್ ಸೇತುಪತಿಗೆ ರುಕ್ಮಿಣಿ ನಾಯಕಿಯಾಗಿರುವ ವಿಚಾರ ಅನೌನ್ಸ್ ಆಗಿದೆ. ಇದೀಗ ರುಕ್ಮಿಣಿ ಹುಟ್ಟುಹಬ್ಬದ ಹಿನ್ನೆಲೆ ಅವರ ಪಾತ್ರದ ಗ್ಲಿಂಪ್ಸ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.
ವಿಜಯ್ ಸೇತುಪತಿಗೆ (Vijay Sethupathi) ಜೋಡಿಯಾಗಿ ACE ಸಿನಿಮಾದಲ್ಲಿ ರುಕ್ಕು ಎಂಬ ಪಾತ್ರದಲ್ಲಿ ರುಕ್ಮಿಣಿ ನಟಿಸಿದ್ದಾರೆ. ಚಿತ್ರದ ಗ್ಲಿಂಪ್ಸ್ನಲ್ಲೂ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಸದ್ಯ ಹುಟ್ಟುಹಬ್ಬಕ್ಕೆ ನಟಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ:ಮದುವೆಯ ಬಳಿಕ ಕಾಕ್‌ಟೈಲ್ ಪಾರ್ಟಿಯಲ್ಲಿ ಮಿಂಚಿದ ನಾಗಚೈತನ್ಯ ಪತ್ನಿ
ಶಿವಮೊಗ್ಗ: ಸದ್ಯ ಆರೋಗ್ಯ ಸುಧಾರಣೆ ಆಗಿದೆ. ಮುಂದಿನ ತಿಂಗಳು ಆಪರೇಷನ್ ಇದೆ. ಯುಎಸ್‌ಎಗೆ ಹೋಗುತ್ತಿದ್ದೇನೆ ಎಂದು ನಟ ಶಿವರಾಜ್ ಕುಮಾರ್ (Dr Shiva Rajkumar) ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಭೈರತಿ ರಣಗಲ್ ಸಿನಿಮಾದ ಗ್ರಾಂಡ್ ಸಕ್ಸಸ್‌ನಲ್ಲಿರುವ ನಟ ಶಿವರಾಜ್ ಕುಮಾರ್ ಇಂದು ಪತ್ನಿ ಸಮೇತ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿರುವ ಮಲ್ಲಿಕಾರ್ಜುನ್ ಚಿತ್ರಮಂದಿರಕ್ಕೆ ಆಗಮಿಸಿದ ಶಿವಣ್ಣ ಅಭಿಮಾನಿಗಳ ಜೊತೆಗೆ ಭೈರತಿ ರಣಗಲ್ ಸಿನಿಮಾದ ಸಕ್ಸಸ್ ಅನ್ನು ಹಂಚಿಕೊಂಡರು. ಇದನ್ನೂ ಓದಿ: ಡಿಕೆಶಿ ತಂದಿಕ್ಕುವ ಕೆಲಸ ಮಾಡ್ತಿದ್ದಾರೆ: ಅಶೋಕ್ ಕಿಡಿ
ಶಿವರಾಜ್ ಕುಮಾರ್ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂಬ ವಿಷಯ ತಿಳಿದ ಅಭಿಮಾನಿಗಳು ಚಿತ್ರಮಂದಿರ ಬಳಿ ಬೆಳಗ್ಗೆಯಿಂದಲೂ ಕಾಯುತ್ತಿದ್ದರು. ಬೈರತಿ ರಣಗಲ್ ಸ್ಟೈಲ್‌ನಲ್ಲಿ ಕ್ಯಾಸ್ಟ್ಯೂಮ್ ಹಾಕಿಕೊಂಡು ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಆಗಮನಕ್ಕಾಗಿ ಕಾಯುತ್ತಿದ್ದ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಾ ಸಂಭ್ರಮಿಸಿದರು. ಇದನ್ನೂ ಓದಿ: ರಕ್ತದಲ್ಲಿ ಪತ್ರ ಬರೆದು ನಿಖಿಲ್‍ಗೆ ಧೈರ್ಯ ತುಂಬಿದ ಅಭಿಮಾನಿ!
ಇನ್ನೂ ಅಭಿಮಾನಿಗಳನ್ನ ಭೇಟಿ ಮಾಡಿ ಮಾತನಾಡಿದ ಶಿವರಾಜ್ ಕುಮಾರ್, ಎಲ್ಲಾ ಕಡೆಗಳಲ್ಲಿ ಬೈರತಿ ರಣಗಲ್ ಒಳ್ಳೆಯ ರೆಸ್ಪಾನ್ಸ್ ಬರುತ್ತಿದೆ. ಕಲೆಕ್ಷನ್ ಸಹ ಚೆನ್ನಾಗಿದೆ ಎಂದರು. ಸದ್ಯ 45 ಸಿನಿಮಾ ರೆಡಿಯಾಗುತ್ತಿದೆ. ತೆಲುಗಿನಲ್ಲಿ ರಾಮ್ ಚರಣ್ ಜೊತೆ ಒಂದು ಸಿನಿಮಾ ಮಾಡುತ್ತಿದ್ದೇನೆ. ಈಸೂರು ದಂಗೆ ಬಗ್ಗೆ ಚಿತ್ರ ಮಾಡಬೇಕು ಎಂದು ನಿರ್ದೇಶಕರ ಜೊತೆ ಮಾತನಾಡಿದ್ದೇನೆ. ಆ ಸಿನಿಮಾವನ್ನು ಮಾಡೇ ಮಾಡಲಾಗುತ್ತೆ ಎಂದರು. ಇದನ್ನೂ ಓದಿ: ಅಂಬರೀಶ್ ಪುಣ್ಯಸ್ಮರಣೆ – ಎಲ್ಲೆಲ್ಲಿಯೂ ನೀನೆ.. ಎಂದೆಂದಿಗೂ ನೀನೆ ಎಂದ ಸುಮಲತಾ
ಶಿವರಾಜ್ ಕುಮಾರ್ (Shivaraj Kumar) ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ. ‘ಮಾಯದಿರೋ ಮನದ ಗಾಯಕೆ, ಮಮತೆ ಮದ್ದು ಹಚ್ಚೊ ಸೇವಕ’ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಇತ್ತೀಚೆಗಷ್ಟೇ (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿತ್ತು.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರತಿ ರಣಗಲ್” (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿದೆ.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಬಗ್ಗೆ ಇದೀಗ ಬಿಗ್ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಜು.12ರಂದು ಶಿವರಾಜ್‌ಕುಮಾರ್ ಅವರ (Shivarajkumar) ಹುಟ್ಟುಹಬ್ಬವಾಗಿದ್ದು, ಅಂದೇ ‘ಭೈರತಿ ರಣಗಲ್’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.
ಗೀತಾ ಪಿಕ್ಚರ್ಸ್ ಅಡಿಯಲ್ಲಿ ‘ಭೈರತಿ ರಣಗಲ್’ ಸಿನಿಮಾವನ್ನು ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.’ವೇದ’ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದಾಗಿದೆ.
ಅಂದಹಾಗೆ, ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ. ಕಥೆ ಮತ್ತು ಪಾತ್ರ ಎರಡು ವಿಭಿನ್ನವಾಗಿದ್ದು, ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್
ಆನಂದ್ ಆಡಿಯೋ ಸಂಸ್ಥೆ ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.
ಕೆಲ ಮೂಲಗಳ ಪ್ರಕಾರ, ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಕೈಯಲ್ಲಿ ಕೈತುಂಬಾ ಸಿನಿಮಾಗಳಿವೆ. ಜು.12ರಂದು ಶಿವಣ್ಣನ ಹುಟ್ಟುಹಬ್ಬದಂದು ಚಿತ್ರಗಳ ವಿಶೇಷ ಅಪ್‌ಡೇಟ್ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಡಲಿದೆ ಚಿತ್ರತಂಡ. ನಟನ ಸಿನಿಮಾಗಳಿಗೆ ಎದುರು ನೋಡ್ತಿರುವವರಿಗೆ ಇದು ಗುಡ್ ನ್ಯೂಸ್.
ಇತ್ತೀಚೆಗೆ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಚಿತ್ರೀಕರಣ ಕೆಲವು ದಿನಗಳ ಹಿಂದಷ್ಟೆ ಮುಗಿದಿದೆ. ನಟನ ಹುಟ್ಟುಹಬ್ಬದಂದು ಸಿನಿಮಾದ ಟೀಸರ್ ಬಿಡುಗಡೆ ಮಾಡಲಿದೆ. ಇದರ ಕುರಿತು ಜು.7ರಂದು ಅಪ್‌ಡೇಟ್ ಸಿಗಲಿದೆ. ‘ಉತ್ತರಕಾಂಡ’ (Uttarakanda) ಚಿತ್ರದ ಶಿವಣ್ಣನ ಕ್ಯಾರೆಕ್ಟರ್‌ನ ಟೀಸರ್ ಸಹ ಬಿಡುಗಡೆ ಆಗುವ ಸಾಧ್ಯತೆಯಿದೆ.
ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡಿರುವ ‘ಫೈರ್ ಪ್ಲೈ’ ಸಿನಿಮಾದಲ್ಲಿ ಶಿವಣ್ಣ ಗೆಸ್ಟ್ ರೋಲ್ ಮಾಡಿದ್ದಾರೆ. ಇವರ ಪಾತ್ರದ ಲುಕ್ ರಿವೀಲ್ ಆಗಲಿದೆ. ರಾಜ್ ಬಿ ಶೆಟ್ಟಿ, ಉಪೇಂದ್ರ ಒಟ್ಟಿಗೆ ಶಿವಣ್ಣ ನಟಿಸುತ್ತಿರುವ ’45’ ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ:ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ: ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ
ಇನ್ನೂ ಹೇಮಂತ್ ರಾವ್ ಜೊತೆಗಿನ ‘ಭೈರವನ ಕೊನೆ ಪಾಠ’ ಸಿನಿಮಾದ ಪೋಸ್ಟರ್ ಜು.12 ರಂದು ರಿವೀಲ್ ಆಗಲಿದೆ. ರಾಮ್ ಚರಣ್ (Ramcharan) ಜೊತೆಗೆ ಹೊಸ ಸಿನಿಮಾದಲ್ಲಿ ನಟಿಸಲು ಶಿವಣ್ಣ ಓಕೆ ಎಂದಿದ್ದಾರೆ. ಈ ಚಿತ್ರದ ಅಧಿಕೃತ ಪೋಸ್ಟರ್ ಹೊರಬೀಳಲಿದೆ ಎಂಬ ಸುದ್ದಿ ಇದೆ. ಕನ್ನಡದ ಜೊತೆ ಪರಭಾಷೆಗಳಲ್ಲೂ ನಟನಿಗೆ ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ನಂತರ ಹೊಸ ಚಿತ್ರಗಳ ಆಫರ್ ಸಿಕ್ತಿದೆ. ಒಟ್ನಲ್ಲಿ ಈ ವರ್ಷ ಶಿವಣ್ಣ ಫ್ಯಾನ್ಸ್‌ಗೆ ಸಿನಿಮಾಗಳ ಹಬ್ಬವೋ ಹಬ್ಬ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ (Bhairathi Rangal) ಸಿನಿಮಾದಲ್ಲಿ 70%ರಷ್ಟು ಚಿತ್ರೀಕರಣ ಮುಗಿದ್ದು, ಇದೇ ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ. ಇದರ ನಡುವೆ ಮಫ್ತಿ ಪ್ರೀಕ್ವೇಲ್ ‘ಭೈರತಿ ರಣಗಲ್’ ಸಿನಿಮಾದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಇರುತ್ತಾರಾ ಎಂಬ ಪ್ರಶ್ನೆಗೆ ನಟ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗಕ್ಕೆ ಕಾರ್ಯಕ್ರಮವೊಂದಕ್ಕಾಗಿ ಶ್ರೀಮುರಳಿ ಭೇಟಿ ನೀಡಿದ್ದರು. ‘ಬಘೀರ’ ಸಿನಿಮಾ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಶ್ರೀಮುರಳಿ ಮಾಹಿತಿ ಹಂಚಿಕೊಂಡರು. ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರಾ? ಎಂಬುದರ ಸ್ವತಃ ಶ್ರೀಮುರಳಿ ಉತ್ತರಿಸಿದ್ದರು. ಈ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದು ಕ್ಲ್ಯಾರಿಟಿ ನೀಡಿದ್ದರು. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೇಲ್‌ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.ಎನ್‌ಟಿಆರ್
ಭೈರತಿ ರಣಗಲ್ ಚಿತ್ರದಲ್ಲಿ ನಾನು ನಟನೆ ಮಾಡ್ತಿಲ್ಲ. ಅದು ಶಿವಣ್ಣ ಮಾಮನ ಮೂವಿ ಮಾತ್ರ ಅದ್ರಲ್ಲಿ ನಾನಿಲ್ಲ. `ಮಫ್ತಿ’ ಚಿತ್ರದ ಪ್ರೀಕ್ವೆಲ್ ಕಥೆ ಅದಾಗಿದೆ, ಅದ್ರಲ್ಲಿ ನಾನಿಲ್ಲ ಎಂದು ಶ್ರೀಮುರಳಿ ಸ್ಪಷ್ಟನೆ ನೀಡಿದ್ದಾರೆ. ‘ಭೈರತಿ ರಣಗಲ್’ ಸೀಕ್ವೆಲ್ ಬಗ್ಗೆ ಕೇಳಿದಕ್ಕೆ ನೋ ಕಾಮೆಂಟ್ಸ್ ಎಂದಿದ್ದಾರೆ. ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಶ್ರೀಮುರುಳಿ ವಿಶ್ ಮಾಡಿದ್ದಾರೆ.
ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್ (Rukmini Vasanth), ರಾಹುಲ್ ಬೋಸ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ‘ಭೈರತಿ ರಣಗಲ್’ ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ. ನರ್ತನ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಭೈರತಿ ರಣಗಲ್ (Bhairati Rangal) ಚಿತ್ರ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಎಂದು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಆದರೆ, ‘ಮಫ್ತಿ’ ಚಿತ್ರ ಮಾಡುವಾಗ ಈ ಚಿತ್ರದಲ್ಲಿ ನಟಿಸಬೇಕಾ? ಎಂಬ ಗೊಂದಲ ನನ್ನಗಿತ್ತು. ‘ಏಕೆಂದರೆ, ಆ ಚಿತ್ರದಲ್ಲಿ ನನ್ನ ಪಾತ್ರ ಬರುವುದೇ ಇಂಟರ್ ವೆಲ್ ನಂತರ. ಶ್ರೀಮುರಳಿ ಈ ಚಿತ್ರದಲ್ಲಿ ಇನ್ನೊಂದು ಪಾತ್ರವನ್ನು ಮಾಡುತ್ತಿದ್ದರು. ಮುರಳಿ ನನ್ನ ಮಾವನ ಮಗ. ಇಲ್ಲ ಎನ್ನುವಂತೆಯೂ ಇರಲಿಲ್ಲ. ಹಾಗಿರುವಾಗ, ಏನು ಮಾಡುವುದು ಎಂಬ ಪ್ರಶ್ನೆ ಇದ್ದೇ ಇತ್ತು. ಅಂತಹ ಸಂದರ್ಭದಲ್ಲಿ ನಿರ್ದೇಶಕ ನರ್ತನ್ (Narthan) ಬಂದು ನೀವು ಈ ಪಾತ್ರ ಮಾಡಿ ಎಂದರು. ನನಗೊಂದು ಧೈರ್ಯ ಬಂತು. ಆನಂತರ “ಮಫ್ತಿ” ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಅಭಿನಯಿಸುವಾಗಲೇ ಅದೇನೋ ಆ ಪಾತ್ರವನ್ನು ಇಷ್ಟಪಡತೊಡಗಿದೆ. ಅದಕ್ಕೆ ಆ ಹೆಸರು ಸಹ ಕಾರಣ. ಈ ತರಹದ ಹೆಸರು ಕೇಳೋಕೆ ಸಾಧ್ಯ ಇಲ್ಲ. ಇನ್ನು, ಸಂಭಾಷಣೆ ಚೆನ್ನಾಗಿತ್ತು. ಅಲ್ಲಿದ್ದ ಭೈರತಿ ರಣಗಲ್‍ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್ ಆಗುತ್ತಾನೆ. ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ಬಹಳ ಚೆನ್ನಾಗಿದೆ ಕಥೆ ಮಾಡಿಕೊಂಡಿದ್ದಾರೆ ನಿರ್ದೇಶಕ ನರ್ತನ್’ ಎಂದರು ಶಿವಣ್ಣ.
ಶಿವಣ್ಣ (Shivaraj Kumar) ಈ ಚಿತ್ರದಲ್ಲಿ ಆ ಡ್ರೆಸ್ ಯಾಕೆ ಹಾಕುತ್ತಾರೆ? ಎನ್ನುವುದೇ ಚಿತ್ರದ ಕಥೆ ಎಂದು ಮಾತನಾಡಿದ ನಿರ್ದೇಶಕ ನರ್ತನ್, ‘‘ಮಫ್ತಿ’ ಚಿತ್ರ ಮಾಡುವಾಗಲೇ, ಆ ಪಾತ್ರದ ತೂಕ ಹೆಚ್ಚಿತ್ತು. ಚಿತ್ರ ನೋಡಿದಾಗ ಜನರಿಗೆ ಸಾಕಾಗಲಿಲ್ಲ. ಏಕೆಂದರೆ, ಶಿವಣ್ಣ ಅವರ ಪಾತ್ರ ಇಂಟರ್‍ವೆಲ್ ನಂತರ ಬರುತ್ತದೆ. ಈ ಪಾತ್ರವನ್ನು ಇಷ್ಟಕ್ಕೇ ಮುಗಿಸಬಾರದು, ಇದರ ಹಿನ್ನೆಲೆ ಏನಾದರೂ ಬರೆಯಬೇಕು ಎಂದಾಗ ರಣಗಲ್ ಹಿಂದಿನ ಕಥೆ ಸೃಷ್ಟಿಯಾಯಿತು. ಪೆನ್ ಹಿಡಿದಾಗ ಬಹಳ ಸಲೀಸಾಗಿ ಕಥೆ ಸೃಷ್ಟಿಯಾಯಿತು. “ಭೈರತಿ ರಣಗಲ್” ಗ್ಯಾಂಗ್‍ಸ್ಟರ್ ಆಗಿದ್ದು ಹೇಗೆ? ಆ ಬ್ಲಾಕ್ ಡ್ರೆಸ್ ಯಾಕೆ ಹಾಕುತ್ತಾರೆ ಎನ್ನುವುದೇ ಚಿತ್ರದ ಕಥೆ. ಈ ಸಿನಿಮಾ ಬರೆದುಕೊಂಡು ಕಥೆ ಹೇಳಿದಾಗ, ಶಿವಣ್ಣ ಹಾಗೂ ಗೀತಕ್ಕ ಅವರು ಬೇರೇನೂ ಕೇಳಲಿಲ್ಲ. ಮಾಡು ಎಂದು ಹುರಿದುಂಬಿಸಿದರು.ಈಗಾಗಲೇ 70 ರಷ್ಟು ಚಿತ್ರ ಮುಗಿದಿದೆ. ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.
ನಮ್ಮ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರುತ್ತಿದೆ. ಆಗಸ್ಟ್ ನಲ್ಲಿ ಸಾಲುಸಾಲು ರಜೆಗಳಿದೆ. ಸಾಮಾನ್ಯವಾಗಿ ಸತತವಾಗಿ ರಜೆ ಸಿಕ್ಕರೆ, ಜನ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ದೃಷ್ಟಿಯಿಂದ ಆಗಸ್ಟ್ 15 ರಂದು ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ನಿರ್ಮಾಪಕಿ ಗೀತಾ ಶಿವರಾಜಕುಮಾರ್ ತಿಳಿಸಿದರು.
ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್ , ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. “ಭೈರತಿ ರಣಗಲ್” ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.
ಮಫ್ತಿ ಸಿನಿಮಾದ ಪಾತ್ರವೊಂದರ ಹೆಸರನ್ನು ಇಟ್ಟುಕೊಂಡು ನಿರ್ದೇಶಕ ನರ್ತನ್ (Narthan) ‘ಭೈರತಿ ರಣಗಲ್’ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮುಹೂರ್ತ ಕೂಡ ನೆಡೆದಿತ್ತು. ಇಂದಿನಿಂದ ಚಿತ್ರೀಕರಣ (Shooting) ಆರಂಭಿಸಿದ್ದಾರೆ ನರ್ತನ್. ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ (Shivaraj Kumar) ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.
ಮಫ್ತಿ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಭೈರತಿ ರಣಗಲ್ (Bhairati Rangal) ಹೆಸರಿನ ಪಾತ್ರ ಮಾಡಿದ್ದರು. ಮಫ್ತಿ ಸಿನಿಮಾ ಹಿಟ್ ಕೂಡ ಆಗಿತ್ತು. ಇದೀಗ ಆ ಪಾತ್ರವನ್ನಿಟ್ಟುಕೊಂಡು ನರ್ತನ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಸ್ವತಃ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್
ಈ ನಡುವೆ ಶಿವರಾಜ್ ಕುಮಾರ್ ಮತ್ತು ರಜನಿಕಾಂತ್ ಕಾಂಬಿನೇಷನ್ ನ ಜೈಲರ್ ಸಿನಿಮಾ ರಿಲೀಸ್ ಆಗುತ್ತಿದ್ದು, ದಕ್ಷಿಣದ ಹೆಸರಾಂತ ಸ್ಟಾರ್ ನಟರೇ ಈ ಸಿನಿಮಾದಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಟ್ಟು ಹತ್ತು ನಿಮಿಷಗಳ ಕಾಲ ತೆರೆಯ ಮೇಲೆ ಕಾಣಲಿದ್ದಾರಂತೆ. ಹತ್ತು ನಿಮಿಷವಿದ್ದರೂ ಕಥೆಗೆ ಮತ್ತೊಂದು ತೂಕವನ್ನು ಕೊಡುವಂತ ಪಾತ್ರ ಅದಾಗಿದೆಯಂತೆ. ಅಷ್ಟರ ಮಟ್ಟಿಗೆ ಪಾತ್ರ ಪವರ್ ಫುಲ್ ಆಗಿದೆ ಎನ್ನುವುದು ಶಿವಣ್ಣ ಮಾತು.
‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.
ಸ್ಯಾಂಡಲ್ವುಡ್ ಚಿಟ್ಟೆ ಛಾಯಾ ಸಿಂಗ್ (Chaya Singh) ಅವರು ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಪ್ರಸ್ತುತ ‘ಅಮೃತಧಾರೆ’ (Amruthadaare) ಸೀರಿಯಲ್ ನಾಯಕಿಯಾಗಿ ಕಿರುತೆರೆಯಲ್ಲಿ ಹೊಸ ಪರ್ವ ಆರಂಭಿಸಿದ್ದಾರೆ. ಈ ನಡುವೆ ‘ಭೈರತಿ ರಣಗಲ್’ (Bhairathi Rangal) ಚಿತ್ರದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ಶಿವಣ್ಣ ಜೊತೆ ಮತ್ತೆ ಕಾಣಿಸಿಕೊಳ್ತಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ನಟಿ ಛಾಯಾ ಸಿಂಗ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.
2017ರಲ್ಲಿ ‘ಮಫ್ತಿ’ (Mufti) ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನರ್ತನ್ ನಿರ್ದೇಶನದಲ್ಲಿ ಶಿವಣ್ಣ ಅಬ್ಬರಿಸಿದ್ದರು. ಇದೇ ಸಿನಿಮಾದಲ್ಲಿ ಶಿವಣ್ಣಗೆ ತಂಗಿಯಾಗಿ ಛಾಯಾ ಜೀವತುಂಬಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ಬ್ಯುಸಿಯಿದ್ದ ನಟಿ ಈ ಹಿಂದೆ ರೌಡಿ ಅಳಿಯ ಚಿತ್ರದಲ್ಲಿ ಶಿವಣ್ಣ ಜೊತೆ ನಟಿಸಿದ್ದರು. ಇದಾದ ನಂತರ 10 ವರ್ಷ ಕನ್ನಡ ಸಿನಿಮಾಗಳಿಂದ ದೂರವಿದ್ದರು. ಇದನ್ನೂ ಓದಿ:ಸುದೀಪ್ ನಟನೆಯ 46ನೇ ಸಿನಿಮಾ: ಇನ್ನಷ್ಟು, ಮತ್ತಷ್ಟು ಸುದ್ದಿ
ಬಳಿಕ ಶಿವಣ್ಣ ಅವರ ಒತ್ತಾಯಕ್ಕೆ ಮಣಿದು 10 ವರ್ಷಗಳ ನಂತರ ಮಫ್ತಿ ಚಿತ್ರದಲ್ಲಿ ಶಿವರಾಜ್‌ಕುಮಾರ್ ಛಾಯಾ ಸಿಂಗ್ ಕೂಡ ಪ್ರಮುಖ ಪಾತ್ರ ಮಾಡ್ತಾರೆ. ಇದೀಗ ‘ಮಫ್ತಿ’ ಪ್ರೀಕ್ವೆಲ್ ಆಗಿರೋ ‘ಭೈರತಿ ರಣಗಲ್’ (Bharathi Rangal) ಸಿನಿಮಾಗೆ ಈಗ ಚಾಲನೆ ಸಿಕ್ಕಿದೆ. ಈ ಭಾಗದಲ್ಲೂ ನಟಿ ಛಾಯಾ ಸಿಂಗ್ ಆಕ್ಟ್ ಮಾಡ್ತಿದ್ದಾರೆ. ಈ ಕುರಿತು ನಟಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಶಿವಣ್ಣ ಜೊತೆ ಮತ್ತೆ ಸ್ಕ್ರೀನ್ ಶೇರ್ ಮಾಡೋದಾಗಿ ಖುಷಿಯಿಂದ ಹೇಳಿಕೊಂಡಿದ್ದಾರೆ.
‘ಭೈರತಿ ರಣಗಲ್’ ಚಿತ್ರದಲ್ಲಿ ಶಿವಣ್ಣಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ತಿದ್ದಾರೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದೆ. ಛಾಯಾ ಸಿಂಗ್ ಅವರ ಭಾಗದ ಚಿತ್ರೀಕರಣ ಮುಂದಿನ ತಿಂಗಳು ಜುಲೈನಿಂದ ಶುರುವಾಗಲಿದೆ ಎಂದು ತಿಳಿಸಿದ್ದಾರೆ.