Tag: ಮಂಗನಕಾಯಿಲೆ

  • ಮಂಗನಕಾಯಿಲೆಗೆ 9 ಮಂದಿ ಸಾವು- ಶೀಘ್ರ ಪರಿಹಾರಕ್ಕಾಗಿ ಮಂಕಾಳು ವೈದ್ಯ ತಾಕೀತು

    ಮಂಗನಕಾಯಿಲೆಗೆ 9 ಮಂದಿ ಸಾವು- ಶೀಘ್ರ ಪರಿಹಾರಕ್ಕಾಗಿ ಮಂಕಾಳು ವೈದ್ಯ ತಾಕೀತು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ (Kyasanur Forest Disease (KFD) 9 ಜನ ಸಾವನ್ನಪ್ಪಿದ್ದು, ಶೀಘ್ರವೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಆಗ್ರಹಿಸಿದ್ದಾರೆ.

    ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಮಂಗನಕಾಯಿಲೆಯಿಂದ ಮೃತರಾದವರಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.

    ಒಟ್ಟು 112 ಜನ ಅನಾರೋಗ್ಯಕ್ಕೊಳಗಾಗಿದ್ದರು. ಈ ಹಿಂದೆ ಸಾವು ಕಂಡವರಿಗೆ ಸರ್ಕಾರ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಾದವರಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಈ ಬಾರಿ ಕೂಡ 9 ಮಂದಿ ಬಲಿಯಾಗಿದ್ದಾರೆ. ಹೀಗಿದ್ದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

  • ಮಂಗನಕಾಯಿಲೆಗೆ ಐದು ವರ್ಷದ ಮಗು ಬಲಿ

    ಮಂಗನಕಾಯಿಲೆಗೆ ಐದು ವರ್ಷದ ಮಗು ಬಲಿ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (KFD) ಮತ್ತೆ ಉಲ್ಬಣಗೊಂಡಿದೆ. ಇಂದು ಜಿಲ್ಲೆಯ ಸಿದ್ದಾಪುರ (Siddapura) ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದೆ.

    ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಒಂಬತ್ತು ಜನ ಸಾವು ಕಂಡಿದ್ದಾರೆ. ಕೆಲವು ದಿನದಿಂದ ಜ್ವರದಿಂದ ನರಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೆಣ್ಣುಮಗು ಅಸುನೀಗಿದೆ. ಇದನ್ನೂ ಓದಿ: ಹೆಚ್‌.ಡಿ.ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ

    ಸಿದ್ದಾಪುರ ತಾಲೂಕಿನೊಂದರಲ್ಲೇ 90 ಮಂಗನಕಾಯಿಲೆ ಪ್ರಕರಣ ಪತ್ತೆಯಾದರೇ ಇತರೆ ತಾಲೂಕುಗಳು ಸೇರಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ. ಇದನ್ನೂ ಓದಿ: ಇದೊಂದು ರಾಜಕೀಯ ಷಡ್ಯಂತ್ರ: ಬಂಧನ ಬಳಿಕ ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

  • ಕಾರವಾರದಲ್ಲಿ ಒಂದೇ ದಿನ 8 ಮಂದಿಯಲ್ಲಿ ಮಂಗನಕಾಯಿಲೆ ಪತ್ತೆ

    ಕಾರವಾರದಲ್ಲಿ ಒಂದೇ ದಿನ 8 ಮಂದಿಯಲ್ಲಿ ಮಂಗನಕಾಯಿಲೆ ಪತ್ತೆ

    ಕಾರವಾರ: ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿಯಲ್ಲಿ ಮಂಗನ ಕಾಯಿಲೆ (Kyasanur forest disease) ಇರುವುದು ಪತ್ತೆಯಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ ಪತ್ತೆಯಾಗಿದ್ದು, ಈ ಮೂಲಕ ಕಳೆದ 10 ದಿನದಲ್ಲಿ ಕೆಎಫ್‍ಡಿ ಪ್ರಕರಣ 16ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಘೋಷಣೆಗಳು ಬೋಗಸ್ ಭರವಸೆ: ರೇಣುಕಾಚಾರ್ಯ

    10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿ 7 ಪ್ರಕರಣ ಉಳಿದಂತೆ ಇತರೆ ಭಾಗದಲ್ಲಿ 9 ಒಟ್ಟು ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

    ಹೇಗೆ ಹರಡುತ್ತದೆ?: ಕ್ಯಾಸನೂರ ಕಾಯಿಲೆ ಮೂಲತಃ ಪ್ರಾಣಿಗಳ ರೋಗವಾಗಿದ್ದು, ಮುಖ್ಯವಾಗಿ KFDV ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್‍ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ. ಆದರೆ ಮಾನವನಿಂದ ಮಾನವನಿಗೆ ಈ ಸೋಂಕು ಹರಡುವುದಿಲ್ಲ.

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಮರುಕಳಿಸಿದ ಮಂಗನಕಾಯಿಲೆ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಮರುಕಳಿಸಿದ ಮಂಗನಕಾಯಿಲೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮತ್ತೆ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಜಿಲ್ಲೆಯ ಸಿದ್ದಾಪುರದ ಇಬ್ಬರಲ್ಲಿ ಕಾಣಿಸಿಕೊಂಡಿದೆ.

    ಸಿದ್ದಾಪುರದ (Siddapura) ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವರಲ್ಲಿ ಹಾಗೂ ಕೊರ್ಲಕೈ ಗ್ರಾಮದ 10 ವರ್ಷದ ಬಾಲಕನಲ್ಲಿ ಕೆ.ಎಫ್.ಡಿ ಪತ್ತೆಯಾಗಿದೆ. ತೀವ್ರ ಅನಾರೋಗ್ಯಕ್ಕೊಳಗಾದ 40 ವರ್ಷದ ವ್ಯಕ್ತಿಯನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಹಾಗೂ ಬಾಲಕನನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಹಿಂದೆ ಸಿದ್ದಾಪುರ ಭಾಗದಲ್ಲಿ ಮಂಗನಕಾಯಿಲೆ ಉಲ್ಭಣಗೊಂಡು ಸಾವು ಸಹ ಸಂಭವಿಸಿತ್ತು. ಇದೀಗ ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದ್ದು, ಹೊನ್ನಾವರ ಗಟ್ಟ ಭಾಗಕ್ಕೂ ಆತಂಕ ಪಡುವಂತಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

    ಹೇಗೆ ಹರಡುತ್ತದೆ?: ಕ್ಯಾಸನೂರ ಕಾಯಿಲೆ ಮೂಲತಃ ಪ್ರಾಣಿಗಳ ರೋಗವಾಗಿದ್ದು, ಮುಖ್ಯವಾಗಿ ಏಈಆಗಿ ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್‍ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ. ಆದರೆ ಮಾನವನಿಂದ ಮಾನವನಿಗೆ ಈ ಸೋಂಕು ಹರಡುವುದಿಲ್ಲ.

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮಂಗನಕಾಯಿಲೆ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮಂಗನಕಾಯಿಲೆ

    ಕಾರವಾರ: ಕಳೆದ ವರ್ಷ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವರ ಸಾವಿಗೆ ಕಾರಣವಾಗಿದ್ದ ಮಂಗನಕಾಯಿಲೆ, ಇದೀಗ ಮತ್ತೆ ಜಿಲ್ಲೆಯಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

    ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಸಿದ್ದಾಪುರ ತಾಲೂಕಿನ ಕುಳಿಬೀಡಿನ 51 ವರ್ಷದ ಮಹಿಳೆಯಲ್ಲಿ ಜ್ವರ ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದ್ದು, ರಕ್ತ ಪರೀಕ್ಷೆ ನಂತರ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. ಇದನ್ನು ಓದಿ. ಏನಿದು ಮಂಗನ ಕಾಯಿಲೆ-ಹೇಗೆ ಬರುತ್ತೆ..?

    ಸೋಂಕಿತೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸದ್ಯ ಈ ಭಾಗದಲ್ಲಿ ಮಂಗಗಳು ಸತ್ತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ. ಆದರೂ ಈ ವರ್ಷ ಮರಳಿ ಮಂಗನಕಾಯಿಲೆ ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ವರ್ಷ ಸಿದ್ದಾಪುರದ ಬಾಳಗೋಡು, ಇಟಗಿ, ಹೊನ್ನೆಗಟಗಿ, ತ್ಯಾಗಲಿ, ಮನಮನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು 9 ಜನ ಸಾವನ್ನಪ್ಪಿದ್ದರು.

  • ಚಿಕ್ಕಮಗಳೂರಿನಲ್ಲಿ ಕೆಎಫ್‍ಡಿ ವೈರಸ್ ಪತ್ತೆ

    ಚಿಕ್ಕಮಗಳೂರಿನಲ್ಲಿ ಕೆಎಫ್‍ಡಿ ವೈರಸ್ ಪತ್ತೆ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಎಫ್‍ಡಿ ವೈರಸ್ ಪತ್ತೆಯಾಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಶಾಂತಿಗ್ರಾಮದಲ್ಲಿ ವೈರಸ್ ಪತ್ತೆಯಾಗಿದ್ದು ಮಂಗನ ಕಾಯಿಲೆ ಭೀತಿಯಲ್ಲಿ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ.

    ಜನವರಿ 9ರಂದು ಪ್ರಾಣಿಗಳ ಉಣ್ಣೆಯಲ್ಲಿ ಪಾಸಿಟಿವ್ ಅಂಶ ಇರುವುದನ್ನು ಶಿವಮೊಗ್ಗ ಪ್ರಯೋಗಾಲಯ ಪತ್ತೆಹಚ್ಚಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 35 ಮಂಗಗಳು ಸಾವನ್ನಪ್ಪಿದ್ದವು, ಅದರಲ್ಲಿ 18 ಮಂಗಗಳ ಅಂಗಾಂಗ ಪರೀಕ್ಷೆ ನಡೆಸಲಾಗಿತ್ತು. ಆ ವೇಳೆ ಒಂದು ಮಂಗದ ದೇಹದಲ್ಲಿ ಪಾಸಿಟಿವ್ ವೈರಸ್ ಪತ್ತೆಯಾಗಿತ್ತು. ಅಲ್ಲದೆ ಕೊಪ್ಪ ತಾಲೂಕಿನ ಜಯಪುರದ ವ್ಯಕ್ತಿಯೊಬ್ಬರ ದೇಹದಲ್ಲೂ ಕೂಡ ಪಾಸಿಟಿವ್ ಅಂಶ ಪತ್ತೆಯಾಗಿತ್ತು. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

    ಇದೀಗ ಕೆಎಫ್‍ಡಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನರಿಗೆ ಔಷಧಿ ನೀಡಲು ವೈದ್ಯರ ತಂಡ ಮುಂದಾಗಿದೆ. ಜಿಲ್ಲಾ ವಿಚಕ್ಷಣ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡದಿಂದ ತರೀಕೆರೆ ಮೂಡಿಗೆರೆ ಕೊಪ್ಪ ತಾಲೂಕಿನ ನೂರಾರು ಜನರಿಗೆ ಔಷಧಿ ನೀಡಲಾಗುತ್ತಿದೆ. ಅಲ್ಲದೆ ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ.