ನವದೆಹಲಿ: ಮಂಗನ ಕಾಯಿಲೆಗೆ (KFD) ಲಸಿಕೆ ಹಾಗೂ ಇತರ ವಿಷಯಗಳ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಮಹಾನಿರ್ದೇಶಕ ರಾಜೀವ್ ಬಹ್ಲ್ ಅವರೊಂದಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu rao) ಸಮಾಲೋಚನೆ ನಡೆಸಿದರು.ಇದನ್ನೂ ಓದಿ:ಮಾಜಿ ಸಚಿವ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿಂದ ರಿಲೀಸ್
ಈ ನಿಟ್ಟಿನಲ್ಲಿ ಐಸಿಎಂಆರ್ ಮಹಾನಿರ್ದೇಶಕರು ರಾಜ್ಯ ಸರ್ಕಾರ ಸಹಕಾರ ನೀಡಬೇಕು ಎಂದು ಕೋರಿದ್ದು, ಕೆಎಫ್‌ಡಿ ಲಸಿಕೆಯು ಮೊದಲ ಹಂತದಲ್ಲಿ ಭರವಸೆಯ ಫಲಿತಾಂಶ ನೀಡಿದೆ. ಮಂಗಗಳ ಮೇಲಿನ ಪ್ರಾಯೋಗಿಕ ಬಳಕೆ ಎರಡನೇ ಹಂತದಲ್ಲಿದೆ. 2025ರ ಏಪ್ರಿಲ್‌ನಲ್ಲಿ ಮಾನವರ ಮೇಲೆ ಈ ಲಸಿಕೆಯ ಪ್ರಯೋಗ ನಡೆಯಲಿದ್ದು, 2026ಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಜೊತೆಗೆ ಡೆಂಗ್ಯೂ (Dengue) ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಐಸಿಎಂಆರ್‌ಗೆ ಮಾಹಿತಿ ನೀಡಿದರು. ಈ ಮಾದರಿಯನ್ನು ಇತರ ರಾಜ್ಯಗಳಲ್ಲಿ ಜಾರಿ ಮಾಡಲು ಐಸಿಎಂಆರ್ ಅಧಿಕಾರಿಗಳು ಉತ್ಸುಕತೆ ತೋರಿಸಿದರು. ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ಜೊತೆಗೂಡಿ ಕೆಲಸ ಮಾಡಲು ರಾಜ್ಯ ಸರ್ಕಾರ ಹಾಗೂ ಐಸಿಎಂಆರ್ ಒಪ್ಪಿದವು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ – ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದ ಹಂತಕರು
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮಂಗನ ಕಾಯಿಲೆಗೆ (KFD) ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಕೊಪ್ಪ (Koppa) ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ (68) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನಾ ಮಣಿಪಾಲದ (Manipal) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ರತ್ನಾ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ
ಬೆಂಗಳೂರು/ಉಡುಪಿ: ಮಂಗನ ಕಾಯಿಲೆಗೆ (KFD) ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ (ICMR) ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ (Vaccine) ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಉಡುಪಿಯಲ್ಲಿ (Udupi) ಇಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್‌ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮಂಗನ ಕಾಯಿಲೆಗೆ ಎಬಿಎಆರ್‌ಕೆ ಫಂಡ್‌ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆಎಫ್‌ಡಿ ಪಾಸಿಟಿವ್ ಬಂದವರನ್ನು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್‌ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. ಇಬ್ಬರು ಸಾವಿಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ಹೇಳಿದರು. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ
ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿಕೆ ಕಾರ್ಯಕ್ರಮ ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್‌ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ
ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ ಡಿಇಪಿಎ ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 ಡಿಇಪಿಎ ಬಾಟಲ್‌ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, ಆರ್‌ಆರ್‌ಟಿ ನಿಯಮಿತವಾಗಿ ಭೇಟಿ ನೀಡುತ್ತಿದ್ದು ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಪ್ರತಿ ದಿನ ವಿ.ಸಿ. ಮುಖೇನ ಸದರಿ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದೆ. ವಿಡಿಎಲ್ ಶಿವಮೊಗ್ಗ ಮತ್ತು ಎಮ್‌ಐವಿ ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು ಕೆಎಫ್‌ಡಿ ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. ಕೆಎಫ್‌ಡಿ ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್ ಸಾಗಿಸಲು ಉಚಿತ ಅಂಬುಲೆನ್ಸ್ ಸೌಲಭ್ಯ ಒದಗಿಸಿದೆ. ರೋಗ ಪ್ರಸರಣಾ ಋತುವಿನಲ್ಲಿ ತಾಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಕೆಎಫ್‌ಡಿಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಐಸಿಯುನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ಐಸಿಯುಸೇವೆಯನ್ನು ಕೆಎಫ್‌ಡಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಗುಂಡೂರಾವ್ ವಿವರಿಸಿದರು. ಇದನ್ನೂ ಓದಿ: ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಅಮಿತ್ ಶಾ
ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- KFD) ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ-ಅಮಿತ್ ಶಾಗೆ ಕಿವಿ ಕೇಳಲ್ಲ, ನಿರ್ಮಲಾ ಸೀತಾರಾಮನ್‌ಗೆ ಕಣ್ಣು ಕಿವಿ ಎರಡೂ ಇಲ್ಲ: ರಾಮಲಿಂಗಾ ರೆಡ್ಡಿ
ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ. ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಜಿತ್ ಪವಾರ್ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ
ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್’ ಟೀಕೆಗೆ ರಾಹುಲ್ ಗಾಂಧಿ ಕಿಡಿ
ಈ ವರ್ಷ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಮನೆ ಕೊಪ್ಪದ ಯುವತಿ ಅನನ್ಯ (18) ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಧರೇಕೊಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯಗೌಡ (79) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿಯಲ್ಲಿ ರೋಗ ಕಾಣಿಸಿಕೊಂಡ ಬಗ್ಗೆ ವರದಿಗಳಿವೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು, ಶೃಂಗೇರಿ ಮತ್ತು ಕೊಪ್ಪ ಭಾಗದ ಅನೇಕ ಗ್ರಾಮಗಳಲ್ಲಿ ಒಂದೇ ದಿನಕ್ಕೆ ಹತ್ತು-ಹದಿನೈದು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡು ಭೀತಿ ಮೂಡಿಸಿದೆ. ಅರಣ್ಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಯಾರೂ ಹೊರಗೆ ಹೋಗಬೇಡಿ ಅನ್ನುತ್ತಾರೆ. ಮಲೆನಾಡಿನ ಜನ ಸೌದೆ, ಸೊಪ್ಪು, ದರಗು, ದನಕರುಗಳ ಕಾರಣಕ್ಕೆ ಕಾಡುಮೇಡು ಸುತ್ತಾಡಲೇಬೇಕು,. ಇಷ್ಟಕ್ಕೂ ಕಾಫಿ, ಅಡಕೆ ತೋಟ, ಹೊಲಗದ್ದೆಗಳಿಗೆ ಕಾಲಿಡದಿರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು
ಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್‌ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ
ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ
ರೋಗದ ಕಾಲಾವಧಿ 3 ರಿಂದ 8 ದಿನ ಆಗಿರುತ್ತದೆ. ಹೀಗಾಗಿ ರೋಗದ ಲಕ್ಷಣಗಳಾದ ವಾಕರಿಕೆ, ವಾಂತಿ, ಸ್ನಾಯು ಬಿಗಿತ, ಮಾನಸಿಕ ಅಸ್ವಸ್ಥತೆ, ನಡುಕ, ದೃಷ್ಟಿ ಮಂದವಾಗುವುದು ಹಾಗೂ ತೀವ್ರ ತಲೆನೋವು ಪೈಕಿ ಯಾವುದೇ ಲಕ್ಷಣ ಕಾಣಿಸುತ್ತಿದ್ದಂತೆ ಅವರನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು. ಅದಕ್ಕೆ ಮುಂಚೆ ಕಾಡಿನಂಚಿನ ಗ್ರಾಮಗಳಲ್ಲಿ ಅರಿವು ಮೂಡಿಸುವುದು, ಲಸಿಕೆ ಹಾಕುವುದು ಮತ್ತು ರೋಗ ತಪಾಸಣೆ ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ
ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಸ್ನಾತಕೋತ್ತರ ವೈದ್ಯ ವಿಭಾಗದ ವಿದ್ಯಾರ್ಥಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದರು. ಬೆಂಗಳೂರಿನ ಆರೋಗ್ಯ ಭವನದಲ್ಲಿ ಠಿಕಾಣಿ ಹೂಡಿರುವ ಹಿರಿಯ ಅಧಿಕಾರಿಗಳನ್ನು ತಕ್ಷಣ ನೋಡಲ್ ಅಧಿಕಾರಿಗಳಾಗಿ ಮೂರು ಜಿಲ್ಲೆಗಳಿಗೆ ನೇಮಕ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ
ಪರಿಹಾರ ಕೊಡಿ:
ಈಗಾಗಲೇ ಕೆಎಫ್‌ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ
ಶಿವಮೊಗ್ಗ: ಮಲೆನಾಡಿಗರನ್ನು ಮಂಗನ ಕಾಯಿಲೆ (Monkeypox) ಬಿಟ್ಟು ಬಿಡದೇ ಕಾಡುತ್ತಿದೆ. 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನಲ್ಲಿ ಮೊದಲ ಬಾರಿಗೆ ಈ ಮಂಗನ ಕಾಯಿಲೆ ಕಂಡುಬಂದಿತ್ತು. ಹೀಗಾಗಿಯೇ ಈ ರೋಗಕ್ಕೆ ‘ಕ್ಯಾಸನೂರು ಡಿಸೀಸ್ ಫಾರೆಸ್ಟ್’ (KFD) ಅಂತಾ ಕರೆಯುತ್ತಾರೆ. ಕೆಎಫ್‍ಡಿ ರೋಗಕ್ಕೆ ಇದುವರೆಗೆ ನೂರಾರು ಮಂದಿ ಬಲಿಯಾಗಿದ್ದಾರೆ.
2021ರ ವರ್ಷದಲ್ಲಿಯೂ ಈ ರೋಗಕ್ಕೆ 23 ಮಂದಿ ಬಲಿಯಾಗಿದ್ದರು. 2023ರಲ್ಲಿ ವರ್ಷದ ಮೊದಲ ಕೇಸ್ ಪತ್ತೆಯಾಗಿದ್ದು, ಮತ್ತೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಮೊದಲ ಪ್ರಕರಣ ಈ ವರ್ಷದಲ್ಲಿ ಪತ್ತೆಯಾಗಿದ್ದು, ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಮಹಿಳೆ ಅರೆಬೆತ್ತಲೆ ಪ್ರಕರಣ – ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಯ RTPCR ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಕಾಣಿಸಿಕೊಂಡಿರುವ ಮಹಿಳೆಯ ಆರೋಗ್ಯ (Women Health) ಸ್ಥಿರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಗ್ರಾಮವು ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಪತ್ತೆಯಾದ ಉದಾಹರಣೆಗಳಿವೆ. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್- ಕುಕ್ಕೆಯಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ
6-7 ದಶಕ ಸಮೀಪಿಸಿದೆ: ಈ ಮಂಗನ ಕಾಯಿಲೆಗೆ ಇದುವರೆಗೆ ಯಾವುದೇ ಲಸಿಕೆ ಇಲ್ಲ. ಕೇವಲ ಬೂಸ್ಟರ್ ಡೋಸ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳೇ ಇದಕ್ಕೆ ಸೂಕ್ತ ಮದ್ದು. ಈ ಕಾಯಿಲೆ ಪತ್ತೆಯಾಗಿ 6-7 ದಶಕಗಳೇ ಸಮೀಸುತ್ತಿದ್ದರೂ ಇದುವರೆಗೂ ಯಾವುದೇ ಸರ್ಕಾರಗಳು ಆಗಲಿ, ವಿಜ್ಞಾನಿಗಳಾಗಲಿ ಇದಕ್ಕೆ ಲಸಿಕೆ ಕಂಡುಹಿಡಿಯಲು ಮುಂದಾಗಿಲ್ಲ. ಈ ರೋಗ ಸಾಮಾನ್ಯವಾಗಿ ಜನವರಿಯಿಂದ ಜೂನ್‍ವರೆಗೆ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಬಚಾವ್ ಆಗಬಹುದು ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.
ಶಿವಮೊಗ್ಗ: ಮಲೆನಾಡಿಗರನ್ನು ಮಂಗನ ಕಾಯಿಲೆ ಬಿಟ್ಟು ಬಿಡದೇ ಕಾಡುತ್ತಿದೆ. 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನಲ್ಲಿ ಮೊದಲ ಬಾರಿಗೆ ಈ ಮಂಗನ ಕಾಯಿಲೆ ಕಂಡುಬಂದಿತ್ತು. ಈಗಾಗಿಯೇ ಈ ರೋಗಕ್ಕೆ ‘ಕ್ಯಾಸನೂರು ಡಿಸೀಸ್ ಫಾರೆಸ್ಟ್'(ಕೆಎಫ್‍ಡಿ) ಅಂತಾ ಕರೆಯುತ್ತಾರೆ. ಕೆಎಫ್‍ಡಿ ರೋಗಕ್ಕೆ ಇದುವರೆಗೆ ನೂರಾರು ಮಂದಿ ಬಲಿಯಾಗಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಒಂದೇ ಗ್ರಾಮದಲ್ಲಿ 23ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದೀಗ ಮೇ 3 ರಂದು ಮಂಗನ ಕಾಯಿಲೆಗೆ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿರುವುದು ಇದೀಗ ಮತ್ತೆ ಆತಂಕ ಉಂಟು ಮಾಡಿದೆ.
23 ಮಂದಿ ಬಲಿ
ಶಿವಮೊಗ್ಗ ಜಿಲ್ಲೆಯ ಬಹುತೇಕ ಪ್ರದೇಶ ಮಲೆನಾಡಿನಿಂದ ಕೂಡಿದೆ. ಮಲೆನಾಡಿನ ಭಾಗದಲ್ಲಿಯೇ ಅತಿ ಹೆಚ್ಚು ಕಾಣಿಸಿಕೊಳ್ಳುವ ರೋಗ ಅಂದರೆ ಮಂಗನ ಕಾಯಿಲೆ. ಈ ಕಾಯಿಲೆ ಮಂಗಗಳಿಂದಲೇ ಹರಡುತ್ತದೆ ಎಂಬ ಕಾರಣದಿಂದಲೇ ಮಂಗನ ಕಾಯಿಲೆ ಎಂದು ಕರೆಯಲಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಕಳೆದ ಎರಡು ವರ್ಷದ ಹಿಂದೆ ಒಂದೇ ಗ್ರಾಮದಲ್ಲಿ ಮಂಗನ ಕಾಯಿಲೆಗೆ 23 ಮಂದಿ ಬಲಿಯಾಗಿದ್ದರು.
ಕಳೆದ ವರ್ಷ ಈ ಕಾಯಿಲೆ ಅಷ್ಟಾಗಿ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಮತ್ತೆ ಅರಳಗೋಡು ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯ ರಾಮಸ್ವಾಮಿ(55) ಮಂಗನ ಕಾಯಿಲೆಗೆ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.
ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖ
ಮಂಗಗಳು ಸತ್ತ ನಂತರ, ಮೃತ ಮಂಗಗಳ ದೇಹದಿಂದ ಉಣುಗುಗಳು ಹೊರ ಬರುತ್ತವೆ. ಹೀಗೆ ಹೊರ ಬಂದ ಉಣುಗುಗಳು ಬೇರೆ ಜೀವಿಗಳ ದೇಹ ಸೇರಿಕೊಂಡು ಬದುಕುತ್ತವೆ. ಈ ಉಣುಗುಗಳು ಕಾಡಿಗೆ ಹೋಗುವ ಜಾನುವಾರುಗಳು ಹಾಗು ಮನುಷ್ಯರ ದೇಹವನ್ನು ಸೇರಿಕೊಳ್ಳುತ್ತವೆ. ಮನುಷ್ಯನಲ್ಲಿ ಉಣುಗುಗಳು ಸೇರಿಕೊಂಡಾಗ ನಿಧಾನವಾಗಿ ಜ್ವರ, ಕೆಮ್ಮು, ಶೀತ ಕಾಣಿಸಿಕೊಳ್ಳುತ್ತದೆ. ಆರಂಭದಲ್ಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು. ಆದರೆ ನಿರ್ಲಕ್ಷಿಸಿದರೇ ಸಾವು ಕಟ್ಟಿಟ್ಟ ಬುತ್ತಿ.
6-7 ದಶಕ ಸಮೀಪಿಸಿದೆ
ಈ ಮಂಗನ ಕಾಯಿಲೆಗೆ ಇದುವರೆಗೆ ಯಾವುದೇ ಲಸಿಕೆ ಇಲ್ಲ. ಕೇವಲ ಬೂಸ್ಟರ್ ಡೋಸ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳೇ ಇದಕ್ಕೆ ಸೂಕ್ತ ಮದ್ದು. ಈ ಕಾಯಿಲೆ ಪತ್ತೆಯಾಗಿ 6-7 ದಶಕಗಳೇ ಸಮೀಸುತ್ತಿದ್ದರೂ ಇದುವರೆಗೂ ಯಾವುದೇ ಸರ್ಕಾರಗಳು ಆಗಲಿ, ವಿಜ್ಞಾನಿಗಳಾಗಲಿ ಇದಕ್ಕೆ ಲಸಿಕೆ ಕಂಡುಹಿಡಿಯಲು ಮುಂದಾಗಿಲ್ಲ. ಈ ರೋಗ ಸಾಮಾನ್ಯವಾಗಿ ಜನವರಿಯಿಂದ ಜೂನ್‍ವರೆಗೆ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಬಚಾವ್ ಆಗಬಹುದು.
ಮಲೆನಾಡಿನ ಭಾಗಗಳಾದ ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಈ ರೋಗ ಹೆಚ್ಚು ಕಾಡುತ್ತಿದ್ದರೂ, ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳುತ್ತಿಲ್ಲ. ಈ ಭಾಗದಲ್ಲಿ ವಿಶೇಷವಾದ ಆಸ್ಪತ್ರೆ ಆರಂಭಿಸಲು, ಪ್ರಯೋಗಾಲಯ ಸ್ಥಾಪಿಸಲು ಮುಂದಾಗುತ್ತಿಲ್ಲ. ಜನರ ಜೀವದ ಜೊತೆ ಚೆಲ್ಲಾಟ ಆಡುವ ಮುನ್ನ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ವಿಚಾರಿಸಿದರೆ, ಕೆಎಫ್‍ಡಿ ರೋಗಕ್ಕೆ ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬೂಸ್ಟರ್ ಡೋಸ್ ಲಸಿಕೆ ಹಾಕಲಾಗಿದೆ. ಆದರೆ ರಾಮಸ್ವಾಮಿ ಅವರಿಗೆ ಡಯಾಬಿಟಿಸ್ ರೋಗ ಇತ್ತು, ಈಗಾಗಿಯೇ ಅವರು ಮೃತಪಟ್ಟಿದ್ದಾರೆ ಹೊರತು ಕೇವಲ ಮಂಗನ ಕಾಯಿಲೆಯಿಂದಲ್ಲ ಎಂದು ಡಿಎಚ್‍ಒ ಡಾ.ರಾಜೇಶ್ ಸುರಗಿಹಳ್ಳಿ ಹೇಳುತ್ತಾರೆ.
ಒಟ್ಟಿನಲ್ಲಿ ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ರೋಗ ಮತ್ತಷ್ಟು ಉಲ್ಬಣಗೊಂಡು, ಹಲವರ ಸಾವು-ನೋವು ಸಂಭವಿಸುವ ಮೊದಲು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ದಾವಣಗೆರೆ ಮೂಲದ 40 ವರ್ಷದ ಮಹಿಳೆ ಕೆಲಸಕ್ಕೆಂದು ತೀರ್ಥಹಳ್ಳಿಗೆ ಬಂದಿದ್ದರು. ಆದರೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಮಂಗನ ಕಾಯಿಲೆ ಇರುವುದು ದೃಢವಾಗಿದೆ.
ಒಟ್ಟಾರೆಯಾಗಿ ಕಳೆದ ವರ್ಷ ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಶಿವಮೊಗ್ಗ ಜಿಲ್ಲೆಗೆ ಕಾಲಿಟ್ಟಿದೆ. ಜಿಲ್ಲೆಯ ಇಬ್ಬರು ಮಹಿಳೆಯರಲ್ಲಿ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದ ಜನರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಮೋದಿ ಸ್ಟ್ರಾಂಗ್: ಸೇನಾಬಲ ಬಳಸಿ ಪಾಕ್‍ಗೆ ತಿರುಗೇಟು ನೀಡುವ ಸಾಧ್ಯತೆ!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿನ ಸಂಖ್ಯೆಯಂತೆಯೇ ಮಂಗನಕಾಯಿಲೆಯ ಅಟ್ಟಹಾಸ ಮುಂದುವರಿದಿದ್ದು, ಸಿದ್ದಾಪುರ ತಾಲೂಕಿನಲ್ಲಿ ಇಂದು ಕೂಡ 5 ಪ್ರಕರಣ ಕಾಣಿಸಿಕೊಳ್ಳುವುದರೊಂದಿಗೆ ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ರವಿವಾರ ಒಂದೇ ದಿನ ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ 4 ಕೆ.ಎಫ್.ಡಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇದು ಮುಂದುವರಿದು ಇಂದು ಕೂಡ ಒಂದೇ ದಿನ 5 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೋರ್ಲಕೈ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲೇ ಈ 5 ಪ್ರಕರಣಗಳು ಪತ್ತೆಯಾಗಿದ್ದು ಅಲ್ಲಿನ ಜನರು ಮತ್ತಷ್ಟು ಆತಂಕ ಪಡುವಂತೆ ಮಾಡಿದೆ.
ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲೇ 32 ಕೆ.ಎಫ್.ಡಿ ಪ್ರಕರಣಗಳು ದೃಢಪಟ್ಟಿವೆ. ಕೋರ್ಲಕೈ ಆರೋಗ್ಯ ಕೇಂದ್ರಕ್ಕೆ ಬೆಳಗಾವಿ ಜಂಟಿ ನಿರ್ದೇಶಕರು ಭೇಟಿ ನೀಡಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಸಂಜೆ ರಾಜ್ಯ ಆರೋಗ್ಯ ಮಹಾನಿರ್ದೇಶಕರ ಜೊತೆ ವಿಡಿಯೋ ಸಂವಾದ ನಡೆಯಲಿದ್ದು, ಮಂಗನಕಾಯಿಲೆಯ ಪರಿಸ್ಥಿತಿಗಳ ಬಗ್ಗೆ ಜಂಟಿ ನಿರ್ದೇಶಕರು ವರದಿ ಸಲ್ಲಿಸೋ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕಾರವಾರ: ಕೊರೊನಾ ವೈರಸ್‍ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ.
ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್‍ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ ಹಲವು ಮಂಗಗಳಲ್ಲಿ ಕೆ.ಎಫ್.ಡಿ ವೈರಸ್ ಪತ್ತೆಯಾಗಿದೆ.
ಈ ವೈರಸ್ ಜನರಿಗೂ ಹಬ್ಬುತ್ತಿದ್ದು ಈ ಗ್ರಾಮದಲ್ಲಿ ಈಗಾಗಲೇ 11 ಜನರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. ಇದೇ ತಿಂಗಳಲ್ಲಿ ಮಳಗುಳಿ ಗ್ರಾಮದ ಭಾಸ್ಕರ್ ಗಣಪತಿ ಹೆಗಡೆ ಎಂಬುವವರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಕಳೆದ ವರ್ಷ ಜಿಲ್ಲೆಯಲ್ಲಿ 87 ಪ್ರಕರಣಗಳು ವರದಿಯಾಗಿದ್ದು, ಸಿದ್ದಾಪುರ ತಾಲೂಕಿನಲ್ಲಿಯೇ 15 ಜನರಿಗೆ ಮಂಗನಕಾಯಿಲೆ ಬಂದಿದ್ದು, ಇದರಲ್ಲಿ ಆರು ಜನರು ಸಾವನ್ನಪ್ಪಿದ್ದರು. ಹೀಗಾಗಿ ಸಿದ್ದಾಪುರ ತಾಲೂಕಿನ ಮಂಗನಕಾಯಿಲೆ ಪೀಡಿತ ಪ್ರದೇಶವಾದ ಬಾಳಗೋಡು ಸೇರಿದಂತೆ ಹಲವು ಗ್ರಾಮದಲ್ಲಿ ಜನರು ಮನೆ ಬಿಡುತಿದ್ದು ಊರಿನಲ್ಲಿ ಬಿಕೋ ಎನ್ನುತ್ತಿದೆ.
ಸಿದ್ದಾಪುರ ಭಾಗದಲ್ಲಿ ಚಿಕಿತ್ಸೆ ನೀಡಲು ವೈದ್ಯರ, ಸಿಬ್ಬಂದಿ ಕೊರತೆ ಎದುರಾಗಿದೆ. ಜೊತೆಗೆ ಇಲ್ಲಿ ಕೆಲಸ ಮಾಡಲು ಸಿಬ್ಬಂದಿ ಕೂಡ ಮುಂದೆ ಬರುತ್ತಿಲ್ಲ ಹೀಗಾಗಿ ಆರೋಗ್ಯ ಇಲಾಖೆ ಸಹ ತೊಂದರೆ ಅನುಭವಿಸುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲು ತೊಡಕಾಗಿದೆ ಎಂಬುದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಕಾಗೇರಿಯವರೇ ನಮ್ಮ ನೋವು ಕೇಳಿ
ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರದಲ್ಲಿಯೇ ಅತೀ ಹೆಚ್ಚು ಮಂಗನಕಾಯಿಲೆ ಪ್ರಕರಣ ಪತ್ತೆಯಾಗುತ್ತಿದ್ದು ಜನರು ಊರು ಬಿಡುತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಸಹ ಈ ಪ್ರದೇಶದಲ್ಲಿ ಕೆಲಸ ಮಾಡಲು ಹೆದರುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಗೂ ಕಳೆದ ವರ್ಷ ಮರಣ ಹೊಂದಿದ ಜನರಿಗೆ ಪರಿಹಾರ ಕೊಡಿಸಲು ಸ್ಪೀಕರ್ ಕಾಗೇರಿ ಎಡವಿದ್ದಾರೆ. ಈವರೆಗೂ ಕ್ಷೇತ್ರಕ್ಕೆ ಬರುವುದಿರಲಿ ಇದರ ಬಗ್ಗೆ ಗಮನ ಹರಿಸುವ ಗೋಜಿಗೆ ಹೋಗದೇ ತಮ್ಮ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಸಾವನ್ನಪ್ಪಿದ ಯಾವೊಬ್ಬರಿಗೂ ಈವರೆಗೂ ಪರಿಹಾರ ಬಂದಿಲ್ಲ. ಇನ್ನು ಆರೋಗ್ಯ ಇಲಾಖೆ ಹಲವು ಕಾರಣಗಳಿಗೆ ಆರು ಜನರನ್ನು ಮಾತ್ರ ದಾಖಲೆಯಲ್ಲಿ ತೋರಿಸಿದ್ದು ಉಳಿದವರನ್ನು ಮಾತ್ರ ದಾಖಲೆಗಳಲ್ಲಿ ತೋರಿಸಿಲ್ಲ. ಇದಲ್ಲದೇ ಪಕ್ಕದ ಜಿಲ್ಲೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಸತ್ತವರಿಗೆ ಪರಿಹಾರ ಬಂದಿದೆ. ಆದರೆ ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರಕ್ಕೆ ಈ ಭಾಗ್ಯ ಇಲ್ಲ. ಕೊನೆ ಪಕ್ಷ ಸ್ಪೀಕರ್ ರವರು ತಮ್ಮ ಕ್ಷೇತ್ರಕ್ಕೆ ಬಂದು ಇರುವ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳಲಿ ಎಂಬುದು ಮಂಗನಕಾಯಿಲೆಯಿಂದ ಬಳಲುತ್ತಿರುವ ಗ್ರಾಮಸ್ಥರು ಅಗ್ರಹಿಸಿದ್ದಾರೆ.
ಒಂದೆಡೆ ಸಿಬ್ಬಂದಿಗಳ ಕೊರತೆ ಮತ್ತೊಂದೆಡೆ ಈ ಹಳ್ಳಿಗಳಲ್ಲಿ ಕೆಲಸ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಮನಸ್ಸು ಮಾಡದಿರುವುದು. ಜೊತೆಯಲ್ಲಿ ಜನರಲ್ಲಿ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲು ವಿಫಲವಾಗಿರುವುದರಿಂದ ಕಾಯಿಲೆ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕಾಯಿಲೆ ಉಲ್ಭಣವಾಗುತ್ತಿದೆ. ತಕ್ಷಣ ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳದಿದ್ದರೆ ಮತ್ತಷ್ಟು ಜನರ ಬಲಿಯಾಗಲಿದ್ದು ತಕ್ಷಣ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ.
ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಎಫ್‍ಡಿ ಜನಜಾಗೃತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಬೇಸಿಗೆಯಲ್ಲಿ ಹಾಗೂ ಅದರ ಹಿಂದಿನ ವರ್ಷದ ಡಿಸೆಂಬರ್ ವೇಳೆಗೆ ಆರಂಭವಾಗಿದ್ದ ಸಾವಿನ ಸರಣಿ ಇದೀಗ ಮತ್ತೆ ಆರಂಭವಾಗಿದೆ ಎಂದು ದೂರಿದ್ದಾರೆ. ಅಲ್ಲದೆ ಕಳೆದ 50 ವರ್ಷದ ಹಿಂದೆ ಸಂಶೋಧನೆಗೊಂಡ ಚುಚ್ಚುಮದ್ದನ್ನು ಈಗಲೂ ನೀಡಲಾಗುತ್ತಿದೆ. ಆದರೆ ವೈರಸ್‍ನಲ್ಲಿ ಆದ ಬೆಳವಣಿಗೆಗೆ ತಕ್ಕಂತೆ ರೋಗನಿರೋಧಕ ಚುಚ್ಚುಮದ್ದುಗಳನ್ನು ಸಂಶೋಧನೆ ನಡೆಸದೇ ಹಳೆಯ ಮಾದರಿಯ ಚುಚ್ಚುಮದ್ದುಗಳನ್ನು ನೀಡಲಾಗುತ್ತಿದೆ. ಜನರು ಮುಂಜಾಗ್ರತೆಯಾಗಿ ಚುಚ್ಚುಮದ್ದು ಪಡೆದರೂ ಮಂಗನ ಕಾಯಿಲೆಯಿಂದ ಬಳಲುವಂತಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಾರಿಯೂ ಕೂಡ ಜಿಲ್ಲಾಡಳಿತ ಮುಂಜಾಗ್ರತಾವಾಗಿ ಚುಚ್ಚುಮದ್ದು ವಿಷಯದಲ್ಲಾಗಲಿ, ಮಂಗನ ಸಾವಿನ ಪತ್ತೆ ಕೂಂಬಿಂಗ್ ಆಗಲಿ, ಕನಿಷ್ಠ ಜನಜಾಗೃತಿಯ ಕ್ರಮವನ್ನಾಗಲಿ ಮುಂಚಿತವಾಗಿ ಕೈಗೊಂಡಿಲ್ಲ. ಲೋಪಗಳ ಫಲವಾಗಿ ಇದೀಗ ಮತ್ತೆ ನಾಲ್ಕು ಮುಗ್ಧ ಜೀವಗಳು ಬಲಿಯಾಗಿದೆ ಎಂದು ದೂರಿದ್ದಾರೆ. ಕಳೆದ ಬಾರಿ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ ಸರ್ಕಾರ ಈವರೆಗೆ ಖಾಸಗಿ ಆಸ್ಪತ್ರೆಗೆ ಹಣ ಪಾವತಿ ಮಾಡಿಲ್ಲ ಎಂದು ದೂರಿದ್ದಾರೆ.
ಈ ಕಾರಣಕ್ಕೆ ಕೆಲವು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಚಿಕಿತ್ಸಾ ವೆಚ್ಚವನ್ನು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ಹಾಗೂ ಸೋಂಕಿತರ ಚಿಕಿತ್ಸೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಆದರೆ ಈ ವಿಷಯ ಜಿಲ್ಲಾಡಳಿತ ಕಡೆಯಿಂದ ಸಾಕಷ್ಟು ಲೋಪವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳೆದ ವರ್ಷವೇ ಸಾಗರದಲ್ಲಿ ವೈರಾಣು ರೋಗ ಸಂಶೋಧನೆಗಾಗಿ ವಿಶೇಷ ಪ್ರಯೋಗಾಲಯ ಆರಂಭಿಸಲು ಸರ್ಕಾರ 5 ಕೋಟಿ ರೂ. ಬಿಡುಗಡೆ ಮಾಡಿದರು, ಇವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದ್ದಾರೆ.