Tag: ಮಂಗಳೂರು ಸ್ಫೋಟ

  • ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಪ್ರಕರಣದ ಪ್ರಮುಖ ಆರೋಪಿ ಉಗ್ರ ಶಾರೀಕ್ (Mohammed Shariq) ಎರಡೂವರೆ ತಿಂಗಳ ಸತತ ಚಿಕಿತ್ಸೆ ನಂತರ  ಸೋಮವಾರ ಬಿಡುಗಡೆಯಾಗಿದ್ದಾನೆ.

    ಗಂಭೀರವಾಗಿ ಗಾಯಗೊಂಡಿದ್ದ ಉಗ್ರ ಶಾರೀಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಆದರೆ ಸ್ಫೋಟದ ವೇಳೆ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ

    ಸತತ ಎರಡೂವರೆ ತಿಂಗಳು ಚಿಕಿತ್ಸೆ ಪಡೆದ ಶಾರೀಕ್, ಇಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖವಾಗಿ ಡಿಸಾರ್ಜ್‌ ಆಗಿದ್ದಾನೆ. ಆಸ್ಪತ್ರೆಯಿಂದ ನೇರವಾಗಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಹತ್ತು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದ್ದಾರೆ.

    ಮಂಗಳವಾರದಿಂದ ಅಧಿಕೃತವಾಗಿ ಸ್ಫೋಟದ ಬಗ್ಗೆ ಎನ್‌ಐಎ ಅಧಿಕಾರಿಗಳು ವಿಚಾರಣೆ ಶುರು ಮಾಡಲಿದ್ದಾರೆ. ವಿಚಾರಣೆ ನಂತರ ಮಂಗಳೂರು ಸೇರಿದಂತೆ ವಿವಿಧ ಜಾಗಗಳಲ್ಲಿ ಸ್ಥಳ ಮಹಜರು ಮಾಡಿ ಮತ್ತಷ್ಟು ತನಿಖೆ ಚುರುಕುಗೊಳಿಸಲು ಸಿದ್ಧತೆ ನಡೆದಿದೆ.

  • ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಬೆಂಗಳೂರು: ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು ʼಭಯೋತ್ಪಾದಕ ಕೃತ್ಯʼ ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ ಡಿಕೆ ಶಿವಕುಮಾರ್‌(DK Shivakumar) ಕೆಂಡಾಮಂಡಲವಾಗಿದ್ದಾರೆ. ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್(Congress) ಉಗ್ರರ ಪರ ನಿಲ್ಲುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

    ತನಿಖೆ ನಡೆಸದೇ ಮಂಗಳೂರು ಕುಕ್ಕರ್‌ ಸ್ಫೋಟದ ಆರೋಪಿ ಶಾರೀಕ್‌ನನ್ನು ಉಗ್ರ ಎಂದು ಕರೆದಿದ್ದು ಹೇಗೆ ಎಂಬ ಡಿಕೆ ಶಿವಕುಮಾರ್‌ ಪ್ರಶ್ನೆಗೆ ಬಿಜೆಪಿ(BJP) ಸರಣಿ ಟ್ವೀಟ್‌ ಮಾಡುವ ಮೂಲಕ ಕಿಡಿಕಾರಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸ್ಫೋಟದ ಬಳಿಕ ಎನ್‌ಐಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ ‘ಬ್ರದರ್’‌ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ ‘ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ’ ಎಂದು ಹೇಳಿಕೆ‌ ನೀಡಿತ್ತು.

    ಉಗ್ರಗಾಮಿಗಳೇ‌ “ಉಗ್ರ ನಮ್ಮವನು” ಎಂದು ಅಬ್ಬರಿಸಿದರು ಡಿಕೆಶಿ ಒಪ್ಪಿಕೊಳ್ಳದಿರುವುದು ಯಾಕಾಗಿ? ಒಂದು ಸಮುದಾಯದಿಂದ ಸಿಗುವ ನಾಲ್ಕು ಮತಗಳಿಗಾಗಿ ಉಗ್ರನನ್ನೇ‌ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ‌ಇದೆ ಎಂದರೆ,‌ ಇವರಿಗೆ ಅಧಿಕಾರ ಕೊಟ್ಟರೆ ಉಗ್ರರ ಟೆಕ್ ಪಾರ್ಕ್‌ನ್ನೇ ನಿರ್ಮಿಸಿದರೂ ಅಚ್ಚರಿಯಿಲ್ಲ. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ, ಸೀತಾ ಮಾತೆಯನ್ನು ಅವಮಾನಿಸುತ್ತಿದೆ: ರಾಹುಲ್ ಗಾಂಧಿ

    ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ‌ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು?

    ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ.

    ಮಂಗಳೂರು ಕುಕ್ಕರ್ ಸ್ಫೋಟವನ್ನು ಇಡೀ ಸಮಾಜ ಖಂಡಿಸಿದೆ. ಮುಸಲ್ಮಾನ ಸಮಾಜವೂ ಅದನ್ನು ಖಂಡಿಸಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಅದನ್ನು ಸಮರ್ಥಿಸಿಕೊಳ್ಳುತ್ತಾರೆ. ಆ ಮೂಲಕ ತಾವು ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂಬುದರ ಮುನ್ಸೂಚನೆಯನ್ನು ನೀಡಿದ್ದಾರೆ.

    ಸರ್ಜಿಕಲ್ ಸ್ಟ್ರೈಕನ್ನು ಅಲ್ಲಗೆಳೆದರು, ಏರ್ ಸ್ಟ್ರೈಕನ್ನು ಅಲ್ಲಗೆಳೆದರು, ಪುಲ್ವಾಮಾ ದಾಳಿಯನ್ನು ಪಾಕಿಸ್ಥಾನದಲ್ಲ ಎಂದು ಸಮರ್ಥಿಸಿಕೊಂಡರು. ದೇಶದಲ್ಲಿ ನಡೆದ ಬಹುತೇಕ ಭಯೋತ್ಪಾದನಾ ಘಟನೆಗಳನ್ನೂ ಸಮರ್ಥಿಸಿಕೊಂಡರು. ಕಾಂಗ್ರೆಸ್ ಏನನ್ನು ಹೇಳಲು ಹೊರಟಿದೆ? ಭಯೋತ್ಪಾದಕರನ್ನು ಭಯೋತ್ಪಾದಕೆನ್ನಲು ಕಾಂಗ್ರೇಸಿಗೇಕೆ ಭಯ?

    ಕಾಂಗ್ರೆಸ್ ಆಡಳಿತಾವಧಿಯಲ್ಲಿ ಉಗ್ರ ಯಾಸಿನ್ ಮಲಿಕ್‌ಗೆ ಪ್ರಧಾನಿಗಳ ಕಚೇರಿಯವರೆಗೂ ಸಂಪರ್ಕ-ಸಂಬಂಧ-ಬಾಂಧವ್ಯವಿತ್ತು‌. ಕಾಂಗ್ರೆಸ್ ಸರ್ಕಾರವಿಲ್ಲದಿರುವ ಈಗ ಪೊಲೀಸರು ಉಗ್ರರು ಯಾರು ಎಂದು ಡಿಕೆ ಶಿವಕುಮಾರ್‌ರನ್ನು ಕೇಳಿ ನಿರ್ಧರಿಸಬೇಕೆಂದರೆ, ಅಧಿಕಾರವಿದ್ದಾಗ ಎಷ್ಟು ಉಗ್ರರನ್ನು ಧರ್ಮ ಪ್ರಚಾರಕರನ್ನಾಗಿಸಿರಬಹುದು?

    ಓಲೈಕೆ ರಾಜಕಾರಣದ ಕುಳಿಗೆ ಬಿದ್ದ ಕಾಂಗ್ರೆಸಿಗೆ ಸ್ವತಃ ತಾನೇ ಕುಳಿಗೆ ಬಿದ್ದಿದೆ ಕುಕ್ಕರ್ ಬಾಂಬ್ ಸ್ಪೋಟವನ್ನು ಸಮರ್ಥಿಸುವ ಮೂಲಕ ಕರ್ನಾಟಕವನ್ನು ಭಯೋತ್ಪಾದಕರ ಸ್ವರ್ಗ ಮಾಡಲುಹೊರಟಿದೆ. ಮುಂದಿನ ಚುನಾವಣೆಯಲ್ಲಿ “ಸ್ಪೋಟಕ್ಕೆ ಬೆಂಬಲ”, “ಸ್ಪೋಟಕ್ಕೆ ಸಮರ್ಥನೆ” ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದರೂ ಆಶ್ಚರ್ಯವಿಲ್ಲ!

    Live Tv
    [brid partner=56869869 player=32851 video=960834 autoplay=true]

  • ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    – 10ಕ್ಕೂ ಹೆಚ್ಚು ಫೋನ್‌ ಬಳಸಿ, ಮಾರಾಟ
    – ಮೊಬೈಲ್‌ನಲ್ಲಿ 500ಕ್ಕೂ ಹೆಚ್ಚು ಸೆಕ್ಸ್‌ ವೀಡಿಯೋ

    ಮಂಗಳೂರು: ಉಗ್ರ ಶಾರೀಕ್‌ನ(Shariq) ಮುಖವಾಡಗಳು ಪೊಲೀಸ್ ತನಿಖೆಯಿಂದ ಕಳಚಿ ಬೀಳುತ್ತಿದೆ. ಇದೀಗ ಆತನ ಟೆರರ್ ಚಟುವಟಿಕೆಗಳಿಗೆ(Terror Activity) ಮುಸ್ಲಿಂ ಯುವಕರನ್ನು ಸೆಳೆಯಲು ಸೆಕ್ಸ್ ವೀಡಿಯೋವನ್ನು ಕಳುಹಿಸುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಸೆಕ್ಸ್ ವಿಡಿಯೋಗಳಿಂದಲೇ ಕರಾವಳಿಯ 40 ಕ್ಕೂ ಹೆಚ್ಚು ಮುಸ್ಲಿಂ(Muslim) ಯುವಕರನ್ನು ಉಗ್ರ ಚಟುವಟಿಕೆಗೆ ಸೇರಿಸಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಿಂದ ಹೊರ ಬಿದ್ದಿದೆ. ಈತನ ಮೊಬೈಲ್ ನಲ್ಲಿ ಬರೋಬ್ಬರಿ 500 ಕ್ಕೂ ಹೆಚ್ಚು ಸೆಕ್ಸ್ ವೀಡಿಯೋಗಳು ಪತ್ತೆಯಾಗಿದ್ದು ಇದನ್ನೇ ಅಸ್ತ್ರವನ್ನಾಗಿಸಿ ನೂರಾರು ಮುಸ್ಲಿಂ ಯುವಕರ ತಲೆ ಕೆಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಂಗ್ಳೂರಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ – ಪ್ರಸಿದ್ಧ ವೈದ್ಯೆ, ಯುವಕನ ವಿರುದ್ಧ ದೂರು ದಾಖಲು

    ಶಾರೀಕ್ ಹತ್ತಕ್ಕೂ ಹೆಚ್ಚು ಪೋನ್‌ಗಳನ್ನು ಹೊಂದಿದ್ದು, ಅದನ್ನು ಬಳಕೆ ಮಾಡಿದ ನಂತರ ಮೊಬೈಲನ್ನು ಮಾರಾಟ ಮಾಡುತ್ತಿದ್ದ. ಹೀಗಾಗಿ ಯಾವುದೂ ಬೆಳಕಿಗೆ ಬರುತ್ತಿರಲಿಲ್ಲ. ಜೊತೆಗೆ ಮೊಬೈಲ್ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಾಗ ಸಾಕಷ್ಟು ಮೊಬೈಲ್ ಸಂಖ್ಯೆಗಳು ಆತನಿಗೆ ಸಿಗುತ್ತಿತ್ತು. ಹೀಗೆ ಬೇರೆ ಬೇರೆ ಕಡೆಗಳಲ್ಲಿ ಸಿಕ್ಕ ನಂಬರ್ ನಲ್ಲಿ ಮುಸ್ಲಿಂ ಯುವಕರ ನಂಬರ್‌ಗಳನ್ನು ಖಚಿತಪಡಿಸಿ ಬಳಿಕ ಹಾಯ್ ಬಾಯ್ ಸಂದೇಶ ಕಳಿಸುತ್ತಿದ್ದ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ.  ಇದನ್ನೂ ಓದಿ: ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಉತ್ತಮ ಪ್ರತಿಕ್ರಿಯೆ ಬಂದ ಯುವಕರಿಗೆ ಸೆಕ್ಸ್ ವೀಡಿಯೋಗಳನ್ನೂ ಕಳುಹಿಸುತ್ತಿದ್ದ. ಈ ರೀತಿ ಸಲುಗೆ ಬೆಳೆದ ನಂತರ ಅವರನ್ನು ತನ್ನ ಉಗ್ರ ಚಟುವಟಿಕೆಗಳಿಗೆ ತಲೆ ಕೆಡಿಸಿ ಭಯೋತ್ಪಾದನೆಯ ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈತನ ಮಾತಿಗೆ ಮರುಳಾದ ಯುವಕರನ್ನು ಖುದ್ದು ಭೇಟಿಯಾಗಿ ಬಳಿಕ ಅವರಿಗೆ ತರಬೇತಿಯನ್ನು ನೀಡಿರುವುದು ಬೆಳಕಿಗೆ ಬಂದಿದೆ. ಕರಾವಳಿಯಲ್ಲೇ ಈತನಿಂದ 40 ಕ್ಕೂ ಹೆಚ್ಚು ಮುಸ್ಲಿಂ ಯುವಕರು ಐಸಿಸ್ ಮಾದರಿಯ ತರಬೇತಿ ಪಡೆದಿದ್ದಾರೆ ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದೆ.

    ಉಗ್ರ ಚಟುವಟಿಕೆಗಳಿಗೆ ಮರುಳಾದ ಯುವಕರಿಗೆ ಅರಣ್ಯ ಪ್ರದೇಶ, ನದಿ ತೀರದ ನಿರ್ಜನ ಪ್ರದೇಶಗಳಲ್ಲಿ ಟ್ರಯಲ್ ಬ್ಲಾಸ್ಟ್, ಬಾಂಬ್ ತಯಾರಿಕೆ, ಬಾಂಬ್ ಇಡುವ ಸ್ಥಳದ ಆಯ್ಕೆ, ಕೃತ್ಯ ನಡೆಸಿ ಪರಾರಿಯಾಗುವ ಪ್ಲಾನ್ ಸೇರಿದಂತೆ ಎಲ್ಲವನ್ನೂ ಐಸಿಸ್ ಉಗ್ರರಂತೆಯೇ ತರಬೇತಿ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಐಆರ್‌ಸಿ ಮೂಲ ಪತ್ತೆ: ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಮೂಲವನ್ನು ಎನ್‍ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸೌದಿ ಅರೇಬಿಯಾದಿಂದಲೇ ಡಾರ್ಕ್ ವೆಬ್ ಬಳಸಿ ಐಆರ್‌ಸಿ ಪತ್ರ ಅಪ್‍ಲೋಡ್ ಆಗಿದ್ದು, ಎಲ್ಲದಕ್ಕೂ ಅರಾಫತ್ ಆಲಿಯೇ ಮೂಲ ಕಾರಣ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್

    ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್

    – ಉರುಸ್‌ಗಳಲ್ಲಿ ಹಿಂದೂಗಳಿಗೆ ಅವಕಾಶವಿಲ್ಲ
    – ಹಿಂದೂ ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅನುಮತಿ ಯಾಕೆ?

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟದ(Mangaluru Bomb Blast) ಬಳಿಕ ರಾಜ್ಯದಲ್ಲಿ ವ್ಯಾಪಾರ ದಂಗಲ್ ಮತ್ತೆ ಆರಂಭವಾಗಿದ್ದು ಬೆಂಗಳೂರಿಗೂ(Bengaluru) ಕಾಲಿಟ್ಟಿದೆ.

    ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿಯಿರುವ ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ(Subramanya Swamy Temple) ಬೆಳ್ಳಿ ತೇರು ಜಾತ್ರೆಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಬಿಬಿಎಂಪಿ ಕಮೀಷನರ್ ಹಾಗೂ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ. ಇದನ್ನೂ ಓದಿ: ಮತ್ತೆ ಧರ್ಮ ದಂಗಲ್ ಶುರು- ಕುಕ್ಕೆಯಲ್ಲಿ ಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

    ದೂರಿನಲ್ಲಿ ಏನಿದೆ?
    ಮುಸ್ಲಿಮರ ಉರುಸ್‌ಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲ. ಹಿಂದೂಗಳ ಧಾರ್ಮಿಕ ಭಾವನೆಗೆ ಬೆಲೆ ನೀಡದೇ ವ್ಯಾಪಾರದ ಹೆಸರಿನಲ್ಲಿ ಜಿಹಾದ್ ಮಾಡಲಾಗುತ್ತಿದೆ.

    ಮೂರ್ತಿ ಪೂಜೆಯನ್ನು ಇವರು ನಂಬುತ್ತಿಲ್ಲ. ಹಿಂದೂ ದೇವರನ್ನು ವಿಕೃತಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಾರೆ.  ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ನಾವು ಪೂಜಿಸುವ ಗೋವನ್ನು ಕಡಿದು ತಿನ್ನುವವರಿಗೆ ಪದೇಪದೇ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ನಮ್ಮ ಆಚರಣೆಗಳಲ್ಲಿ ನಂಬಿಕೆ ಇಲ್ಲದವರಿಗೆ ಹಿಂದೂ ಹಬ್ಬದಲ್ಲಿ ವ್ಯಾಪಾರ ಮಾಡಲು ಯಾವ ಅರ್ಹತೆ ಕೂಡ ಇಲ್ಲ. ಇವುಗಳನ್ನು ಪರಿಗಣಿಸಿ ಹಿಂದುಯೇತರರಿಗೆ ಬೆಳ್ಳಿ ತೇರಿನ ಜಾತ್ರೆಯ ಸಂದರ್ಭದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು  ಮನವಿ ಮಾಡಿವೆ.

    kukke subramanya

    ಕುಕ್ಕೆ ಸುಬ್ರಹ್ಮಣ್ಯ (Kukke Sri Subrahmanya Swami Temple) ದೇವಸ್ಥಾನದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ (Hindu Jagaran Vedike) ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಮಾತ್ರವಲ್ಲ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗ (Subrahmanya Police Station) ದೂರು ನೀಡಿದ್ದು ಕ್ಷೇತ್ರದ ಪಾವಿತ್ರ್ಯತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಮಂಗಳೂರು: ಬಾಂಬರ್‌ ಶಾರೀಕ್‌(Shariq) ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ.

    ಮಂಗಳೂರು ಸ್ಫೋಟದ(Mangaluru Blast) ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಾರೀಕ್‌ ಮೊಬೈಲ್‌ ನೋಡಿ ದಂಗಾಗಿದ್ದಾರೆ. ಐಸಿಸ್‌ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ಶಾರೀಕ್ ಮೊಬೈಲ್‌ನಲ್ಲಿ ಬಾಂಬ್ ತಯಾರಿಯ ವಿಡಿಯೋ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೂಲಭೂತವಾದಿ ಭಾಷಣಕಾರ ಝಾಕೀರ್ ನಾಯ್ಕ್‌(Zakir Naik) ಭಾಷಣದಿಂದ ಪ್ರಭಾವಿತನಾಗಿದ್ದ ಈತ ಝಾಕೀರ್‌ ನಾಯ್ಕ್‌ನನ್ನು ʼದಿ ರಿಯಲ್ ಇನ್ಸ್ಪಿರೇಶನ್ʼ ಎಂದು ಸಂಬೋಧಿಸಿದ್ದ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಯೂಟ್ಯೂಬ್‌ನಿಂದ ಝಾಕೀರ್ ನಾಯ್ಕ್ ವೀಡಿಯೋ ಡೌನ್‌ಲೋಡ್‌ ಮಾಡಿದ್ದು ಶಾರೀಕ್ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಭಾಷಣಗಳು ಸಿಕ್ಕಿವೆ. ಟೋರ್ ಬ್ರೌಸರ್ ಮೂಲಕ ಡಾರ್ಕ್ ವೆಬ್ ಬಳಸುತಿದ್ದ ವಿಚಾರವೂ ಲಭ್ಯವಾಗಿದೆ.

    ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ ಪೀಸ್‌ ಟಿವಿಗೆ ಭಾರತ ನಿರ್ಬಂಧ ಹೇರಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾಕ್ಕೆ ಹೋಗಿದ್ದ.

    ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರೋತ್ಸಾಹ, ಭಯೋತ್ಪಾದಕರನ್ನು ಹೊಗಳುವುದು, ಆತ್ಮಹತ್ಯಾ ಬಾಂಬ್ ದಾಳಿ ಸಮರ್ಥನೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌, ಇತರ ಧರ್ಮಗಳಿಗೆ ಅವಮಾನ ಈ ಎಲ್ಲಾ ಆರೋಪಗಳು ಝಾಕೀರ್‌ ನಾಯ್ಕ್‌ ಮೇಲಿದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೊಂದು ಉಗ್ರ ಸಂಘಟನೆಯ ಸ್ಥಾಪನೆಗೆ ವೇದಿಕೆಯಾಯ್ತಾ ಕರ್ನಾಟಕ?

    ಮತ್ತೊಂದು ಉಗ್ರ ಸಂಘಟನೆಯ ಸ್ಥಾಪನೆಗೆ ವೇದಿಕೆಯಾಯ್ತಾ ಕರ್ನಾಟಕ?

    ಬೆಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ(Cooker Bomb Blast) ನಡೆದ ಬೆನ್ನಲ್ಲೇ ಮತ್ತೊಂದು ಉಗ್ರ ಸಂಘಟನೆಯ ಸ್ಥಾಪನೆಗೆ ಕರ್ನಾಟಕ(Karnataka) ವೇದಿಕೆಯಾಯ್ತಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

    ಮಂಗಳೂರು ಕೃತ್ಯದ ಹೊಣೆಯನ್ನು ಹೊತ್ತುಕೊಂಡ ಬಳಿಕ Islamic Resistance Council(IRC) ಹೊಸ ಉಗ್ರ ಸಂಘಟನೆಯೇ ಎಂಬ ಪ್ರಶ್ನೆಗೆ ತನಿಖಾ ಸಂಸ್ಥೆಗಳ ಉನ್ನತ ಮೂಲಗಳು ಹೌದು ಎನ್ನುತ್ತಿವೆ.

    ಈ ಹಿಂದೆ ಭಟ್ಕಳದ ಯಾಸಿನ್‌(Yasin Bhatkal) ಹಾಗೂ ರಿಯಾಜ್ ಭಟ್ಕಳ (Riyaz Bhatkal) ಇಂಡಿಯನ್ ಮುಜಾಹಿದ್ದೀನ್(Indian Mujahideen) ಸಹ ಸಂಸ್ಥಾಪಕರಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಸಂಘಟನೆ ಭೀತಿ ಹುಟ್ಟಿಸಿತ್ತು. ಈಗ ಅದೇ ಸಾಲಿಗೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸೇರ್ಪಡೆಯಾಗುವತ್ತಾ ಸಾಗಿದೆ.

    ಇದೇ ಮೊದಲ ಬಾರಿಗೆ ಬಹಿರಂಗವಾಗಿ ಈ ಸಂಘಟನೆಯ ಹೆಸರು ಪ್ರಕಟವಾಗಿದ್ದುಇದಕ್ಕಾಗಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ಇದರ ಮೂಲ ಹುಡುಕಲು ಆರಂಭಿಸಿದ್ದಾರೆ.

    ತೀರ್ಥಹಳ್ಳಿ ಮೂಲದವರಿಂದ ಈ ಸಂಘಟನೆ ಶುರುವಾಗಿದೆ ಎಂಬ ಅನುಮಾನ ಬಂದಿದ್ದು ಅರಾಫತ್ ಅಲಿ, ಮತೀನ್ ಶಾರೀಕ್‌, ಎಲ್ಲರೂ ಇದರಲ್ಲಿ ಸಕ್ರಿಯರಾಗಿದ್ದಾರೆ. ಇವರಲ್ಲದೇ ಈಗಾಗಲೇ ಇನ್ನು ಹಲವರನ್ನು ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನೇಮಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಇದರ ಜಾಡು ರಾಷ್ಟ್ರೀಯ ತನಿಖಾದಳ ತನಿಖೆ ಆರಂಭಿಸಿದೆ. ಇದನ್ನೂ ಓದಿ: ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ಐಆರ್‌ಸಿ ಹೇಳಿದ್ದು ಏನು?
    ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಮಿಕ್‌ ರೆಸಿಸ್ಟೆನ್ಸ್ ಕೌನ್ಸಿಲ್ ಸಂಘಟನೆ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ(Kadri Temple) ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್‌ ಸ್ಫೋಟಗೊಂಡಿದೆ. ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿಕೊಂಡಿತ್ತು.

    ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಬೆದರಿಕೆ ಹಾಕಲಾಗುತ್ತಿದೆ.

  • ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ  ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ(Mangaluru Blast Case) ಮುನ್ನ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ (Satellite Phone) ರಿಂಗಣಿಸಿದ ವಿಚಾರ ಈಗ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಹೌದು. ನವೆಂಬರ್‌ 19 ಶನಿವಾರ ಸಂಜೆ  ಸ್ಫೋಟ ನಡೆದಿದ್ದರೆ ನ.18ರಂದು ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ(Kakkinje) ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ.

    ಅರಣ್ಯ ಪ್ರದೇಶದಲ್ಲಿ ನಿಷೇಧಿತ ತುರಾಯ (Thuraya) ಕಂಪನಿಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಈಗ ಸಿಕ್ಕಿದೆ. ಸ್ಯಾಟಲೈಟ್ ಫೋನ್ ಜಾಗವನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿದ್ದು ಪೊಲೀಸರು ಈಗ ಈ ಕೋನದಲ್ಲೂ ತನಿಖೆ ಆರಂಭಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಎರಡು, ಉಡುಪಿ ಒಂದು ಕಡೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ. ಸುಮಾರು 5 ವರ್ಷಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ ಸದ್ದು ಮಾಡುತ್ತಿವೆ.

    ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಮೂಲದ ತುರಾಯ ಕಂಪನಿ ಯುರೋಪ್, ಮಧ್ಯಪ್ರಾಚ್ಯ, ಉತ್ತರ, ಮಧ್ಯ ಮತ್ತು ಪೂರ್ವ ಆಫ್ರಿಕಾ, ಏಷ್ಯಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 161 ದೇಶಗಳಿಗೆ ಧ್ವನಿ ಸೇವೆಗಳನ್ನು ನೀಡುತ್ತಿದೆ. ಇದನ್ನೂ ಓದಿ: ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ಸ್ಯಾಟಲೈಟ್‌ ಫೋನ್‌ ಬಳಕೆಗೆ ನಿಷೇಧ:
    ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ಕಾರಣಕ್ಕೆ ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

    ವೈರ್‌ಲೆಸ್ ಕಾಯ್ದೆಯ ಸೆಕ್ಷನ್ 6 ಮತ್ತು ಇಂಡಿಯನ್ ಟೆಲಿಗ್ರಾಫ್ ಆಕ್ಟ್‌ನ ಸೆಕ್ಷನ್ 20ರ ಅಡಿಯಲ್ಲಿ ಭಾರತದಲ್ಲಿ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಕಾನೂನುಬಾಹಿರ ಎಂದು ಘೋಷಿಸಿದೆ

    ಭಾರತಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳಿಗೆ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಲಹೆ ನೀಡಲಾಗುತ್ತದೆ. ವಿದೇಶಿಯರು ಭಾರತಕ್ಕೆ ಉಪಗ್ರಹ ಫೋನ್‌ಗಳನ್ನು ತರುವುದಕ್ಕೂ ನಿಷೇಧ ಹೇರಲಾಗಿದೆ. ಭಾರತಕ್ಕೆ ಬರುವಾಗ ಉಪಗ್ರಹ ಫೋನ್‌ಗಳಿದ್ದರೆ ಪ್ರಯಾಣಿಕರನ್ನು ಬಂಧಿಸಲಾಗುತ್ತದೆ. ಅಷ್ಟೇ ಅಲ್ಲದೇ ಟೆಲಿಗ್ರಾಫ್ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಬೆಂಗಳೂರು: ಮಂಗಳೂರಿನಲ್ಲಿ(Mangaluru) ಬಾಂಬ್‌ ಸ್ಫೋಟ ಮಾಡಿದ ವ್ಯಕ್ತಿ ಮೈಸೂರಿನಲ್ಲಿ(Mysuru) ರೂಮ್‌ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಬಾಂಬ್‌ ಸ್ಫೋಟ ಮಾಡಿದ ವ್ಯಕ್ತಿಯ ಮೂಲವನ್ನು ಪತ್ತೆ ಹಚ್ಚಲು ಪೊಲೀಸರು ಆರಂಭಿಸಿದ್ದಾರೆ. ಮೈಸೂರಿನ ಲೋಕನಾಯಕ ನಗರ, ಮೇಟಗಳ್ಳಿಯಲ್ಲಿರುವ ಸಿಂಗಲ್‌ ರೂಮ್‌ನಲ್ಲಿ ಶಂಕಿತ ವಾಸವಿದ್ದ. ಪೊಲೀಸರು ಗಾಯಗೊಂಡ ವ್ಯಕ್ತಿಯ ಚಿತ್ರವನ್ನು ಮಾಲೀಕ ಮೋಹನ್‌ ಕುಮಾರ್‌ ಅವರಿಗೆ ತೋರಿಸಿದಾಗ ಅವರು, ನಾವು ನೀಡಿದ್ದ ರೂಮಿನಲ್ಲಿ ವಾಸವಿದ್ದ ವ್ಯಕ್ತಿಯೇ ಈತ ಎಂಬುದನ್ನು ಖಚಿತ ಪಡಿಸಿದ್ದಾರೆ.

    ತಿಂಗಳಿಗೆ 1,800 ಬಾಡಿಗೆ ಪಾವತಿಸುತ್ತಿದ್ದ ವ್ಯಕ್ತಿ, ಒಪ್ಪಂದ ಪ್ರತಿಯಲ್ಲಿ ಪ್ರೇಮ್‌ರಾಜ್‌ S/o ಮಾರುತಿ ಮತ್ತು ಹುಬ್ಬಳ್ಳಿಯ ವಿಳಾಸವನ್ನು ನೀಡಿದ್ದ. ಆದರೆ ಈತನಿಗೂ ವಿಳಾಸಕ್ಕೂ ಯಾವುದೇ ಸಂಬಂಧವಿಲ್ಲ. ಆತ ನಕಲಿ ದಾಖಲೆ ನೀಡಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಈತನ ಕೊಠಡಿಯಲ್ಲಿ ತನಿಖಾ ತಂಡ ಪರಿಶೀಲಿಸಿದಾಗ, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಸಲ್ಫ್ಯೂರಿಕ್ ಆಸಿಡ್, ಇತರ ಕೆಲವು ರಾಸಾಯನಿಕಗಳು, ಸಣ್ಣ ಬೋಲ್ಟ್‌ಗಳು, ಬ್ಯಾಟರಿಗಳು, ಮೊಬೈಲ್ ಡಿಸ್ಪ್ಲೇಗಳು, ಮರದ ಪುಡಿ, ಅಲ್ಯೂಮಿನಿಯಂ ಫಾಯಿಲ್, ಮಲ್ಟಿಮೀಟರ್, ವೈರ್‌ಗಳು, ಮಿಕ್ಸರ್ ಜಾರ್‌ಗಳು, ಪ್ರೆಶರ್ ಕುಕ್ಕರ್ ಸೀಟಿಗಳು ಇತ್ಯಾದಿಗಳು ಪತ್ತೆಯಾಗಿವೆ.

    ಅಷ್ಟೇ ಅಲ್ಲದೇ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಡೆಬಿಟ್ ಕಾರ್ಡ್, ಬಳಕೆಯಾಗದ ಸಿಮ್ ಮತ್ತು ನೋಟ್ ಬುಕ್, ಸರ್ಕ್ಯೂಟ್ ಡ್ರಾಯಿಂಗ್‌ಗಳು ಪತ್ತೆಯಾಗಿವೆ.

    ಇಂದು ಬೆಳಗ್ಗೆ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿವೆ. ಮನೆಯ ಮಾಲೀಕರು ಏಜೆನ್ಸಿಯ ಜೊತೆ ತನಿಖೆಗೆ ಸಹಕರಿಸುತ್ತಿದ್ದಾರೆ.  ಇದನ್ನೂ ಓದಿ: ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ – ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ

    ಕುಕ್ಕರ್‌ ಬಾಂಬ್‌ ಸ್ಫೋಟದಿಂದ(Cooker Bomb Blast) ಶಂಕಿತನ ಶೇ.50ರಷ್ಟು ದೇಹದ ಭಾಗಗಳು ಸುಟ್ಟು ಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮಂಗಳೂರಿನಲ್ಲಿ ಸಿಕ್ಕಿದ್ದು ಏನು?
    ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ. ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ.

    [brid partner=56869869 player=32851 video=960834 autoplay=true]