Tag: ಮಂಚೇನಹಳ್ಳಿ

  • ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    – ತಾನು ರೇಪ್ ಮಾಡಿ, ಬಳಿಕ ಸ್ನೇಹಿತನ ಕರೆತಂದು ಕೃತ್ಯ ಎಸಗಿದ್ದ ಆರೋಪಿಗಳು

    ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿಗೆ (Manchenahalli) ಹೋಗುವ ಮಾರ್ಗದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸದ್ಯ ಸಂತ್ರಸ್ತ ಯುವತಿಗೆ ಮಹಿಳಾ ಸ್ವಾಧಾರ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ.ಇದನ್ನೂ ಓದಿ: ಚಿಕ್ಕಮಗಳೂರು | 5 ತಿಂಗಳ ಹಿಂದಷ್ಟೇ ಮದುವೆ – ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

    ಘಟನೆ ನಡೆದ ದಿನ ಸಂತ್ರಸ್ತ ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ್ದರು. ಬಳಿಕ ವಾಪಸ್ ನಡೆದುಕೊಂಡು ಮಂಚೇನಹಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಆರೋಪಿ ಸಿಕಂದರ್ ಬಂದು, ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ ಹತ್ತಿಸಿಕೊಂಡಿದ್ದ. ಬಳಿಕ ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಆನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ತನ್ನ ಸ್ನೇಹಿತ ಜನಾರ್ಧನ್‌ ಅನ್ನು ಅದೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇಬ್ಬರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

    ಕೃತ್ಯದ ಬಳಿಕ ಆಕೆಯ ಕಿವಿಯಲ್ಲಿದ್ದ ಬಂಗಾರದ ಓಲೆ ಕಸಿದುಕೊಂಡು ಮಾರಾಟ ಮಾಡಿದ್ದಾರೆ. ಸಂತ್ರಸ್ತ ಯುವತಿಯನ್ನು ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗಿದ್ದಾರೆ. ಬಳಿಕ ಗಾಬರಿಯಿಂದ ಕೂತಿದ್ದ ಯುವತಿಯನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಸದ್ಯ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ತನಿಖೆಗಿಳಿದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಂಗ್ಳೂರಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್‌ ಸ್ಫೋಟ

  • Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    ಚಿಕ್ಕಬಳ್ಳಾಪುರ: ಜ್ಯೂಸ್ ಬಾಟಲಿಯೊಳಗೆ ವಿಷ ಮಿಶ್ರಣ ಮಾಡಿಕೊಂಡು ಸೇವಿಸಿ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಮಕ್ಕಳ ತಾಯಿ ಪ್ಲಾನ್ ಮಾಡಿಕೊಂಡಿದ್ದು, ಅದೃಷ್ಟವಶಾತ್ ಇಬ್ಬರು ಹೆಣ್ಣು ಮಕ್ಕಳು ಪಾರಾಗಿ, ತಾಯಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ (Manchenahalli) ತಾಲೂಕಿನ ಮಿಣಕನಗುರ್ಕಿ ಗ್ರಾಮದ ಬಳಿ ನಡೆದಿದೆ.

    36 ವರ್ಷದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 8 ವರ್ಷ ಹಾಗೂ 15 ವರ್ಷದ ಹೆಣ್ಣುಮಕ್ಕಳು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಅಂದಹಾಗೆ ಮೂಲತಃ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ಲಕ್ಷ್ಮೀ ಎಂಬಾಕೆ ನಾರಾಯಣ ಎಂಬವರ ಜೊತೆ ಎರಡನೇ ವಿವಾಹವಾಗಿ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಆದರೆ ಅದೇನು ಸಮಸ್ಯೆಯೋ ಏನೋ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಂಡಿದ್ದಳು. ಇದನ್ನೂ ಓದಿ: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

    ಸೀದಾ ಸಿಂಗನಾಯಕನಹಳ್ಳಿಯಿಂದ ಹಿರಿಯ ಮಗಳು ವ್ಯಾಸಂಗ ಮಾಡುತ್ತಿರುವ ಮಂಚೇನಹಳ್ಳಿ ತಾಲೂಕಿನ ಹನುಮಂತಪುರ ಗ್ರಾಮದ ಬಳಿಯ ವಸತಿ ಶಾಲೆಗೆ ಬಂದು ಮಗಳನ್ನ ಕಳುಹಿಸುವಂತೆ ಶಿಕ್ಷಕರ ಬಳಿ ಕೇಳಿಕೊಂಡಿದ್ದಾಳೆ. ಆದರೆ ಪರೀಕ್ಷೆಗಳು ಸಮೀಪ ಇದೆ, ಮಗಳನ್ನ ಕಳುಹಿಸಲು ಆಗಲ್ಲ ಎಂದು ಶಿಕ್ಷಕರು ಹೇಳಿದ್ದು, ಮಗಳಿಗೆ ಬಿರಿಯಾನಿ ತಿನ್ನಿಸಿ ಚೆನ್ನಾಗಿ ಒದಿಕೊಳ್ಳುವಂತೆ ಹೇಳಿ ಅಲ್ಲಿಂದ ಕಿರಿಯ ಮಗಳ ಜೊತೆ ವಾಪಸ್ ಆಗಿದ್ದಾಳೆ. ದಾರಿ ಮಧ್ಯೆ ಮಿಣಕನಗುರ್ಕಿ ಬಳಿ ಜ್ಯೂಸ್ ಬಾಟಲಿಗೆ ವಿಷ ಬೆರೆಸಿ ತಾನೂ ಕುಡಿದು ಕಿರಿಯ ಮಗಳಿಗೂ ಕೊಟ್ಟಿದ್ದಾಳೆ. ಆದರೆ ಮಗಳು ಕುಡಿದಿಲ್ಲ. ಇನ್ನೂ ವಿಷ ಸೇವನೆಗೂ ಮುನ್ನ ತನ್ನ ಅಕ್ಕನಿಗೆ ಕರೆ ಮಾಡಿ ಹಿರಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹೇಳಿದ್ದಾಳೆ. ಗಂಡ ನಾರಾಯಣ್‌ಗೆ ಮಗಳು ಹಾಗೂ ಆಕೆ ಬಾಯ್ ಮಾಡುವ ವೀಡಿಯೋ ಮಾಡಿ ಕೊನೆಯ ಸಂದೇಶ ಕಳುಹಿಸಿದ್ದಾಳೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್

    ಇನ್ನೂ ವಿಷ ಕುಡಿದು ವಿಲವಿಲ ಒದ್ದಾಡುತ್ತಿದ್ದ ತಾಯಿಯನ್ನ ಕಂಡು ಮಗು ರಸ್ತೆಗೆ ಬಂದು ರಕ್ಷಣೆ ಮಾಡುವಂತೆ ಅಂಗಲಾಚಿಕೊಂಡಿದ್ದಾಳೆ, ರಸ್ತೆಗೆ ಅಡ್ಡ ಬಂದು ಗಾಡಿಗಳನ್ನು ಅಡ್ಡ ಹಾಕಲು ಪ್ರಯತ್ನಿಸಿ ಕೊನೆಗೆ ಆಟೋಗೆ ಅಡ್ಡಲಾಗಿ ನಿಂತು ತಾಯಿಯನ್ನ ಆಸ್ಪತ್ರೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಆದರೆ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀ ಸಾವನ್ನಪ್ಪಿದ್ದಾಳೆ. ಇಬ್ಬರು ಮಕ್ಕಳು ತಾಯಿಯಿಲ್ಲದ ತಬ್ಬಲಿಗಳಾಗದ್ದಾರೆ. ಮತ್ತೊಂದೆಡೆ ಗಂಡ ದಿನೇಶ್ ಮೊದಲನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಳಂತೆ. ಈಗ ಎರಡನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಾಳೆ. ಸಂಬಂಧಿಕರು ಹೊಟ್ಟೆನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

  • ಮುಂಬೈನಿಂದ ಬಂದಿದ್ದ ಬಾಲಕಿಯರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವು

    ಮುಂಬೈನಿಂದ ಬಂದಿದ್ದ ಬಾಲಕಿಯರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವು

    ಚಿಕ್ಕಬಳ್ಳಾಪುರ: ಈಜಲು (Swimming) ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚೇನಹಳ್ಳಿ (Manchenahalli) ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ.

    ಮಹಾರಾಷ್ಟ್ರದ (Maharashtra) ಮುಂಬೈ (Mumbai) ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಆಗಲಿದ್ದರು. ದಂಡಿಗಾನಹಳ್ಳಿ ಜಲಾಶಯವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್

    ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ. ಮೃತರ ಸಂಬಂಧಿಕರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿಸದೆ ಮನೆಗೆ ತೆಗೆದುಕೊಂಡು ಹೋಗಿದ್ದರು. ಕೊನೆಗೆ ಪೊಲೀಸರು ಮನೆಗೆ ತೆರಳಿ ಸಂಬಂಧಿಕರ ಮನವೊಲಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೆರಡು ದಿನಗಳಲ್ಲಿ ಜೀವಂತವಾಗಿ ಮುಂಬೈಗೆ ತೆರಳಬೇಕಿದ್ದ ಇಬ್ಬರು ಬಾಲಕಿಯರು ಸದ್ಯ ಶವವಾಗಿ ಮುಂಬೈಗೆ ತೆರಳಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

  • ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

    ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

    ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ (Electrocution) ಬಾಲಕನೊಬ್ಬ (Boy) ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿಯಲ್ಲಿ (Manchenahalli) ನಡೆದಿದೆ.

    ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ (Transformer) ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ:‌ ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

    ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್‌ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್‌ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಗುಡ್ ಬೈ ಎಂದು ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ

  • ಮಂಚೇನಹಳ್ಳಿ ತಾಲೂಕಿಗೆ ತೂಬಗೆರೆಹೋಬಳಿ ಸೇರ್ಪಡೆಗೆ ವಿರೋಧ

    ಮಂಚೇನಹಳ್ಳಿ ತಾಲೂಕಿಗೆ ತೂಬಗೆರೆಹೋಬಳಿ ಸೇರ್ಪಡೆಗೆ ವಿರೋಧ

    ಚಿಕ್ಕಬಳ್ಳಾಪುರ: ಉಪಚುನಾವಣೆಗೆ ಮುನ್ನ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಡಾ.ಕೆ ಸುಧಾಕರ್ ಮನವಿಗೆ ಮಣಿದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದ ನೂತನ ಮಂಚೇನಹಳ್ಳಿ ತಾಲೂಕಿಗೆ ತೂಬಗೆರೆ ಹೋಬಳಿ ಸೇರ್ಪಡೆಗೆ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯ ವಿರೋಧ ವ್ಯಕ್ತಪಡಿಸಿ ಹೋರಾಟಕ್ಕಿಳಿದಿದ್ದಾರೆ.

    ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿ ಕೇಂದ್ರವನ್ನು ಸಿಎಂ ಯಡಿಯೂರಪ್ಪ ನೂತನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರು. ಈ ನೂತನ ಮಂಚೇನಹಳ್ಳಿ ತಾಲೂಕಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯನ್ನು ಸೇರ್ಪಡೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಸರ್ಕಾರದ ನಡೆಯನ್ನು ಖಂಡಿಸಿರುವ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಉಪಚುನಾವಣೆ ಮುಗಿದ ಬೆನ್ನಲ್ಲೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.

    ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ತಾಲೂಕು ಚಪ್ಪರದಕಲ್ಲು ಬಳಿಯ ನೂತನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ವೆಂಕಟರಮಣಯ್ಯ ಪ್ರತಿಭಟನಾ ಧರಣಿ ನಡೆಸಿದರು. ಧರಣಿಯಲ್ಲಿ ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿಯ ಸದಸ್ಯರು ಸೇರಿ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಿದರು. ಪ್ರತಿಭಟನೆಯಲ್ಲಿ ಯಾವುದೇ ಕಾರಣಕ್ಕೂ ತೂಬಗೆರೆ ಹೋಬಳಿಯನ್ನು ಮಂಚೇನಹಳ್ಳಿ ತಾಲೂಕಿಗೆ ಸೇರ್ಪಡೆ ಮಾಡಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

    ಮಂಚೇನಹಳ್ಳಿ ನೂತನ ತಾಲೂಕು ಘೋಷಣೆ ವಿಚಾರ ಉಪಚುನಾವಣಾ ಕಣದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಸುಧಾಕರ್ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಮಂಚೇನಹಳ್ಳಿ ತಾಲೂಕು ಘೋಷಣೆ ಮಾಡಿದರು. ಆದರೆ ಇದಕ್ಕೆ ಚುನಾವಣೆಗೆ ಮುನ್ನವೇ ಘೋಷಣೆಯಾದ ದಿನದಿಂದಲೇ ಗೌರಿಬಿದನೂರು ಶಾಸಕ ಹಾಗೂ ಮಾಜಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ವಿರೋಧ ವ್ಯಕ್ತಪಡಸಿದುರು.

    ಮಂಚೇನಹಳ್ಳಿ ತಾಲೂಕಿಗೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಸೇರಿದಂತೆ ಗೌರಿಬಿದನೂರಿನ ಯಾವುದೇ ಹಳ್ಳಿಗಳನ್ನು ಸೇರ್ಪಡೆ ಮಾಡಬಾರದು ಎಂದು ಹೋರಾಟ ನಡೆಸಿದ್ದರು. ಮಂಚೇನಹಳ್ಳಿ ನೂತನ ತಾಲೂಕಿಗೆ ಗೌರಿಬಿದನೂರಿನ ಹಳ್ಳಿಗಳನ್ನು ಸೇರಿಸಿದ್ದೇ ಆದರೆ ಕೈ ಕತ್ತರಿಸುವ ಕೆಲಸ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದರು. ಪಾಕಿಸ್ತಾನ-ಇಂಡಿಯಾ ವಿಭಜನೆಯ ಸಮಯದಲ್ಲಾದ ರೀತಿಯಲ್ಲೇ ರಕ್ತಪಾತ ಆಗುವ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಚುನಾವಣೆಗೂ ಮುನ್ನ ಶಿವಶಂಕರರೆಡ್ಡಿ ಹೋರಾಟ ನಡೆಸಿದರೆ ಈಗ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಸರದಿ ಎಂಬಂತಾಗಿದೆ.

  • ತಾಲೂಕಾಗಿ ಘೋಷಣೆ ಆಯ್ತು ಮಂಚೇನಹಳ್ಳಿ – ಬಿಎಸ್‍ವೈಗೆ ಅಭಿನಂದನೆ ತಿಳಿಸಿದ ಸುಧಾಕರ್

    ತಾಲೂಕಾಗಿ ಘೋಷಣೆ ಆಯ್ತು ಮಂಚೇನಹಳ್ಳಿ – ಬಿಎಸ್‍ವೈಗೆ ಅಭಿನಂದನೆ ತಿಳಿಸಿದ ಸುಧಾಕರ್

    ಬೆಂಗಳೂರು: ಹಲವು ವರ್ಷಗಳಿಂದ ಮಂಚೇನಹಳ್ಳಿ ಗ್ರಾಮವನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಹೋರಾಡುತ್ತಿದ್ದ ಗೌರಿಬಿದನೂರು ತಾಲೂಕಿನ ಜನತೆ ಇಂದು ಜಯ ಸಿಕ್ಕಿದ್ದು, ಮಂಚೇನಹಳ್ಳಿನ್ನು ಹೊಸ ತಾಲೂಕಾಗಿ ಸರ್ಕಾರ ಘೋಷಣೆ ಮಾಡಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅತೀ ದೊಡ್ಡ ಹೋಬಳಿಯಾದ ಮಂಚೇನಹಳ್ಳಿಯನ್ನು ಪ್ರತ್ಯೇಕ ಒಂದು ತಾಲೂಕಾಗಿ ಘೋಷಣೆ ಮಾಡಬೇಕು ಎಂದು ಅಲ್ಲಿನ ಜನ ಹೋರಾಟ ಮಾಡುತ್ತಲೇ ಬಂದಿದ್ದರು. ಹಲವಾರು ಬಾರಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಬಂದ್‍ಗಳನ್ನು ಕೂಡ ಮಾಡಿದ್ದರು. ಈಗ ಆ ಜನರ ಹೋರಾಟಕ್ಕೆ ಜಯ ಸಿಕ್ಕಿದ್ದು, ಮಂಚೇನಹಳ್ಳಿಯನ್ನು ಬಿಎಸ್‍ವೈ ಸರ್ಕಾರ ಹೊಸ ತಾಲೂಕಾಗಿ ಘೋಷಣೆ ಮಾಡಿದೆ.

    ಈಗ ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅನರ್ಹ ಶಾಸಕ ಸುಧಾಕರ್ ಅವರು, ಮಂಚೇನಹಳ್ಳಿ ಜನರ ವನವಾಸ ಇಂದಿಗೆ ಕೊನೆಯಾಗಿದೆ. ಹಲವು ವರ್ಷಗಳ ಹೋರಾಟದ ಬೆನ್ನಲ್ಲೇ ಇಂದು ಮಂಚೇನಹಳ್ಳಿ ತಾಲೂಕು ಆಗಿ ಘೋಷಣೆಯಾಗಿದೆ. ನನ್ನ ಜನರಿಗೆ ನಾನು ನೀಡಿದ ಭರವಸೆ ಈಡೇರಿಸಿರುವ ನೆಮ್ಮದಿ ಇಂದು ನನಗಿದೆ ಎಂದು ಬರೆದುಕೊಂಡಿದ್ದಾರೆ.

    ಇಂದು ನನಗೆ ದೀಪಾವಳಿ ಹಬ್ಬ, ವರ್ಷಗಳ ನಮ್ಮ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ನಮ್ಮ ಜಿಲ್ಲೆಯ ಬಹುದಿನಗಳ ಕನಸಾಗಿದ್ದ ಮೆಡಿಕಲ್ ಕಾಲೇಜು ಹಾಗೂ ಮಂಚೇನಹಳ್ಳಿ ತಾಲೂಕು ಘೋಷಣೆ ಮಾಡಿರುವ ಯಡಿಯೂರಪ್ಪ ಹಾಗೂ ರಾಜ್ಯ ಸಚಿವ ಸಂಪುಟಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹಾಗೂ ಹೊಸ ತಾಲೂಕಿಗಾಗಿ ಸುದೀರ್ಘಾವಧಿಯ ಹೋರಾಟ ನಡೆಸಿದ ನನ್ನ ಮಂಚೇನಹಳ್ಳಿಯ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಯಾಕೆ ಪ್ರತ್ಯೇಕ ತಾಲೂಕು?
    ಮಂಚೇನಹಳ್ಳಿ ಗ್ರಾಮ ಗೌರಿಬಿದನೂರು ತಾಲೂಕಿನಲ್ಲೇ ಅತ್ಯಂತ ದೊಡ್ಡ ಹೋಬಳಿಯಾಗಿದ್ದು, 64 ಗ್ರಾಮಗಳನ್ನು ಒಳಗೊಂಡಿದೆ. ಸುಮಾರು 60 ಸಾವಿರ ಜನಸಂಖ್ಯೆ ಹೊಂದಿದೆ. ಆದರೆ ಅಭಿವೃದ್ಧಿ ಈ ಹೋಬಳಿಯಲ್ಲಿ ಮರೀಚಿಕೆಯಾಗಿದೆ. ಹದಗೆಟ್ಟ ರಸ್ತೆಗಳು, ಒಳಚರಂಡಿ ಅವ್ಯವಸ್ಥೆ, ಶುಚಿತ್ವದ ಸಮಸ್ಯೆ, ಅವ್ಯವಸ್ಥೆ ತಾಣವಾಗಿರುವ ಬಸ್ ತಂಗುದಾಣ, ಆಸ್ಪತ್ರೆಯಲ್ಲಿ ಕನಿಷ್ಠ ಪ್ರಥಮ ಚಿಕಿತ್ಸೆಗೂ ಇಲ್ಲದ ಸೌಲಭ್ಯ. ಅತ್ತ ಗೌರಿಬಿದನೂರು ಇದ್ದರೂ ಚಿಕ್ಕಬಳ್ಳಾಪುರಕ್ಕೆ ಬರಲೇಬೇಕಾದ ಅನಿವಾರ್ಯತೆ. ಹೀಗೆ ಮಂಚೇನಹಳ್ಳಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಸದಾ ಕಾಡುವುದರಿಂದ ಇಲ್ಲಿನ ಜನ ಪ್ರತ್ಯೇಕ ತಾಲೂಕಿಗೆ ಆಗ್ರಹಿಸಿ ಸಮಿತಿ ರಚಿಸಿಕೊಂಡು ಹೋರಾಟ ಮಾಡುತ್ತಿದ್ದರು.