Tag: ಮಂಜಮ್ಮ

  • ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

    ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

    ತುಮಕೂರು: ತಮ್ಮ ಸುಮಧುರ ಕಂಠದಿಂದ ಸರಿಗಮಪ (Saregamapa) ಕಾರ್ಯಕ್ರಮದಲ್ಲಿ ಭಾಗವಹಿಸಿ, ಇಡೀ ರಾಜ್ಯದ ಜನರ ಮನೆಮಾತಾಗಿದ್ದ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ (Manjamma) ಇಂದು (ಜ.28) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hosi ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

    ;

    ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ ಹಾಗೂ ತಂಗಿ ರತ್ನಮ್ಮ ಹುಟ್ಟು ಅಂಧರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಹಾಡು ಹಾಡಿ ಭಕ್ತಾದಿಗಳು ಕೊಟ್ಟ ಹಣದಿಂದ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಇವರ ಪ್ರತಿಭೆ ಗುರುತಿಸಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿತ್ತು. ಆ ಮುಖೇನ ಕರ್ನಾಟಕದ ಜನರ ಮನೆ ಮಾತಾಗಿದ್ದರು.

    2019ರಲ್ಲಿ ನಟ ಜಗ್ಗೇಶ್ ತಮ್ಮ ಸ್ವಂತ ಹಣದಿಂದ ಅವರಿಗಾಗಿ ಮನೆಯ ನಿರ್ಮಾಣ ಮಾಡಿಕೊಟ್ಟಿದ್ದರು. ಇನ್ನೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಮಂಜಮ್ಮ ಹಾಗೂ ರತ್ನಮ್ಮ ಅವರಿಗೆ ಪ್ರತಿ ತಿಂಗಳು ಆಹಾರ ಪದಾರ್ಥಗಳನ್ನು ಕಳುಹಿಸಿಕೊಡುವ ಮೂಲಕ ನೆರವಾಗಿದ್ದರು.ಇದನ್ನೂ ಓದಿ: PUBLiC TV Impact | ಹಾಲಿಗೆ ನೀರು ಕಲಬೆರಕೆ ಮಾಡಿರೋದು ತನಿಖೆಯಲ್ಲಿ ಧೃಢ – ಸಿಬ್ಬಂದಿ, ಅಧಿಕಾರಿಗಳು ವಜಾ

  • ಕನ್ನಡದ ಶಿವಲೀಲಾ ಚಿತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ನಟನೆ

    ಕನ್ನಡದ ಶಿವಲೀಲಾ ಚಿತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ನಟನೆ

    ಬಳ್ಳಾರಿ/ ವಿಜಯನಗರ: ಹೊಸಪೇಟೆ (Hosapete) ತಾಲೂಕಿನ ಮರಿಯಮ್ಮನ ಹಳ್ಳಿ ನಿವಾಸಿ ಮಂಜಮ್ಮ ಜೋಗತಿ (Manjamma Jogathi) ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ.

    ಕನ್ನಡದ ಶಿವಲೀಲಾ (Shivaleela) ಚಿತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ನಟನೆ ಮಾಡಿದ್ದು, ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶಿವಲೀಲಾ ಕನ್ನಡದ ಮಂಗಳಮುಖಿಯರ ಕಷ್ಟ ಸುಖಗಳ ಜೀವನಾಧಾರಿತ ಚಿತ್ರ, ಇದಾಗಿದ್ದು ಮಂಜಮ್ಮ ಜೋಗತಿಯವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಶಿವಲೀಲಾ ಸಿನಿಮಾ ಕನ್ನಡ, ಹಿಂದಿ, ಮಲಯಾಳಂ ತೆಲಗು ಮತ್ತು ತಮಿಳು ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಮಂಗಳಮುಖಿಯರೇ ನಟನೆ ಮಾಡಿದ್ದು ಮತ್ತೊಂದು ವಿಶೇಷ. ಇದನ್ನೂ ಓದಿ: ಮೂರೂವರೆ ವರ್ಷಗಳ ಬಳಿಕ ಜೆಡಿಎಸ್ ಕಚೇರಿಗೆ ಬಂದ ಜಿ.ಟಿ ದೇವೇಗೌಡ- ಸಿಹಿ ತಿನ್ನಿಸಿ ಸ್ವಾಗತಿಸಿದ ಹೆಚ್‌ಡಿಕೆ

    ಶಿವಲೀಲಾ ಚಿತ್ರವನ್ನು ಅಶೋಕ್ ಜಯರಾಮ್ ನಿರ್ದೇಶನ ಮಾಡಿದ್ದು, ಶಿವಲೀಲಾ ಚಿತ್ರದಲ್ಲಿ ನಿರ್ಮಾಪಕರಾಗಿ ಮತ್ತು ನಟರಾಗಿ ಅಶೋಕ್ ಜಯರಾಮ್ ನಟನೆ ಮಾಡಿದ್ದಾರೆ. ನಾಯಕ ನಟರಾಗಿ ಆರ್ಯನ್, ಕಲಾ ನಿರ್ದೇಶಕ ಕನಕ ವಾಲ್ಮೀಕಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಮಂಜಮ್ಮ ಜೋಗತಿ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದು, ಸಂತೋಷ ತಂದಿದೆ. ಮೇಲಾಗಿ ಈ ಚಿತ್ರದಲ್ಲಿ ಮಂಗಳಮುಖಿ ಅವರ ಜೀವನ, ಅವರು ಎದುರಿಸುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಿದೆ ಎಂದಿದ್ದಾರೆ. ಇದನ್ನೂ ಓದಿ: ದೈವ ನರ್ತಕರಿಗೆ ಮಾಸಾಶನ – ವೀರಗಾಸೆ ಕುಣಿತ ಮಾಡುವ ನಮಗೂ ಕೊಡಿ ಪುರವಂತರು ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಅಜಯ್ ರಾವ್, ಮಂಜಮ್ಮ ಜೋಗತಿ ಗೆಸ್ಟ್

    ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಅಜಯ್ ರಾವ್, ಮಂಜಮ್ಮ ಜೋಗತಿ ಗೆಸ್ಟ್

    ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಭಾರತವೇ ಸಿದ್ಧತೆ ನಡೆಸಿದೆ. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಮೈಸೂರು, ಬೆಂಗಳೂರು, ಹಂಪಿ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲೂ ಯೋಗ ದಿನವನ್ನು ಆಚರಿಸಲು ನಿರ್ಧಾರಿಸಲಾಗಿದೆ. ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಆಗಮಿಸುತ್ತಿದ್ದಾರೆ. ಹಾಗೆಯೇ ದೊಡ್ಡ ಪ್ರಮಾಣದಲ್ಲಿ ವಿಶ್ವಪಾರಂಪರಿಕ ತಾಣ ಹಂಪಿಯಲ್ಲೂ ಬೃಹತ್ ಯೋಗ ದಿನ ಆಚರಣೆಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದೆ.

    ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಮುಂದಿರುವ ವಿಶಾಲವಾದ ಆವರಣದಲ್ಲಿ ಈ ಯೋಗ ದಿನಾಚರಣೆ ಆಚರಿಸಲು ಸಿದ್ಧತೆ ನಡೆದಿದ್ದು, ಐದು ಸಾವಿರಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ನಟ ಅಜಯ್ ರಾವ್ ಮುಖ್ಯ ಆಕರ್ಷಣೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪದ್ಮಶ್ರೀ ಮಂಜಮ್ಮ ಜೋಗತಿ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್

    ಜೂ.21 ರಂದು ಬೆಳಗ್ಗೆ 6 ಗಂಟೆಗೆ ಯೋಗ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ನಲವತ್ತು ನಿಮಿಷಗಳ ಕಾಲ ಯೋಗ ಕಾರ್ಯಕ್ರಮ ನಡೆಯುತ್ತವೆ. ಆನಂತರ ಮೈಸೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಯೋಗ ದಿನದ ನೇರ ಪ್ರಸಾರಕ್ಕೂ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಲವು ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಹೀಗೆ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾಗಲಿದ್ದಾರೆ.

  • ಅಂಧ ಸಹೋದರಿಯರ ಕಷ್ಟಕ್ಕೆ ಮಿಡಿದ ‘ಕಾಮಿಡಿ ಕಿಲಾಡಿಗಳು 3’ರ ದಾನಪ್ಪ

    ಅಂಧ ಸಹೋದರಿಯರ ಕಷ್ಟಕ್ಕೆ ಮಿಡಿದ ‘ಕಾಮಿಡಿ ಕಿಲಾಡಿಗಳು 3’ರ ದಾನಪ್ಪ

    ಬೆಂಗಳೂರು: ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ರಿಯಾಲಿಟಿ ಶೋಗೆ ಶನಿವಾರ ಅದ್ಧೂರಿ ತೆರೆಬಿದ್ದಿದೆ. ಈ ಶೋನ ಎರಡನೇ ರನ್ನರ್ ಅಪ್ ಆದ ದಾನಪ್ಪ ಅವರು ಸರಿಗಮಪ ಸ್ಪರ್ಧಿಗಳಾದ ಅಂಧ ಸಹೋದರಿಯರು ರತ್ನಮ್ಮ ಮತ್ತು ಮಂಜಮ್ಮ ಅವರ ನೆರವಿಗೆ ನಿಂತಿದ್ದಾರೆ.

    ಹೌದು. ದಾನಪ್ಪ ಅವರು ತಮಗೆ ಸಿಕ್ಕ ನಗದು ಬಹುಮಾನದಲ್ಲಿ 10 ಸಾವಿರ ರೂಪಾಯಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡುವುದಾಗಿ ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ ಘೋಷಿಸಿದ್ದಾರೆ. ದಾನಪ್ಪ ಅವರು ಅಂಧ ಸಹೋದರಿಯರ ಸಹಾಯಕ್ಕೆ ಮುಂದಾಗಿರೋದು ಎಲ್ಲರ ಮನಗೆದ್ದಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್ – ಅಂಧ ಸೋದರಿಯರಿಗೆ ಮನೆ ರೆಡಿ

    ಉಡುಪಿಯ ರಾಕೇಶ್ ‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ಪಟ್ಟ ತಮ್ಮದಾಗಿಸಿಕೊಂಡಿದ್ದು, ಹಾಸನದ ಸಂತೋಷ್ ರನ್ನರ್ ಅಪ್ ಆಗಿದ್ದಾರೆ. ಇತ್ತ ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿನ್ನರ್‍ಗೆ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್‍ಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ಇತ್ತ ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡ ಮನೋಹರ್ ಹಾಗೂ ದಾನಪ್ಪ ಇಬ್ಬರಿಗೂ ಸೇರಿ 2 ಲಕ್ಷ ರೂ. ನಗದು ಬಹುಮಾನ ಹಾಗೂ ಟ್ರೋಪಿ ನೀಡಿ ಅಭಿನಂದಿಸಲಾಗಿದೆ. ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ಸರಿಗಪಮ ಶೋಗೆ ತುಮಕೂರಿನ ಮಧುಗಿರಿ ತಾಲೂಕಿನ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಹೋದರಿಯರು ಬಂದಿದ್ದರು. ಈ ವೇಳೆ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸಹೋದರಿಯ ನೋವಿನ ಕಥೆ ಕೇಳಿದ ಜಗ್ಗೇಶ್ ಅವರ ಕಷ್ಟಕ್ಕೆ ಸಹಾಯದ ಹಸ್ತ ಚಾಚಿದ್ದರು.

    ಅಲ್ಲದೇ ಸಹೋದರಿಯರ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದರು. ಕೊಟ್ಟ ಮಾತಿನಂತೆ ಮನೆ ಕಟ್ಟಿಕೊಟ್ಟ ಜಗ್ಗೇಶ್ ಅವರು, ತಮ್ಮ ಪತ್ನಿ ಪರಿಮಳ ಅವರ ಜೊತೆ ಮಾರ್ಚ್ 12ರಂದು ಗೃಹಪ್ರವೇಶ ಮಾಡಿ ಮನೆಯ ಕೀಲಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡಲಿದ್ದಾರೆ. ಈ ಬಗ್ಗೆ ಸ್ವತಃ ಜಗ್ಗೇಶ್ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಸಹೋದರಿಯರಿಗೆ ಹುಟ್ಟಿನಿಂದ ಕಣ್ಣಿಲ್ಲ. ಇವರು ಒಟ್ಟು ನಾಲ್ಕು ಜನ ಮಕ್ಕಳು, ಅವರಲ್ಲಿ ಇಬ್ಬರಿಗೆ ಕಣ್ಣಿಲ್ಲ. ಗಂಡು ಮಗ ಇದ್ದನು. ಆತನೂ ಕೂಡ ಕಾಯಿಲೆಯಿಂದ ಮೃತಪಟ್ಟಿದ್ದಾನೆ. ತಾಯಿಯೂ ಕೂಡ ಸಾವನ್ನಪ್ಪಿದ್ದು, ಅಜ್ಜಿ ಜೊತೆ ವಾಸವಾಗಿದ್ದಾರೆ. ತಂದೆಯೂ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಷ್ಟದಲ್ಲೂ ಅಂಧ ಸಹೋದರಿಯರು ಸಂಸಾರದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಊಟಕ್ಕಾಗಿ ರತ್ಮಮ್ಮ ಮತ್ತು ಮಂಜಮ್ಮ ಊರಿನ ದಂಡಿನ ಮಾರಮ್ಮ ದೇವಾಲಯದ ಮುಂದೆ ಹಾಡು ಹೇಳಲು ಶುರು ಮಾಡಿದ್ದರು. ಅಲ್ಲಿಗೆ ಬರುವ ಭಕ್ತರು ನೀಡುವ ಹಣದಿಂದ ಸಂಸಾರವನ್ನು ನಡೆಸುತ್ತಿದ್ದಾರೆ.

    https://www.instagram.com/p/B88YTrMpH2C/