Tag: ಮಂಜಮ್ಮ ಜೋಗತಿ

  • ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಮುಂದಾಗಿ: ಮಂಜಮ್ಮ ಜೋಗತಿ

    ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಮುಂದಾಗಿ: ಮಂಜಮ್ಮ ಜೋಗತಿ

    ಕೊಪ್ಪಳ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಮುಂದಾಗಿ ಎಂದು ಪದ್ಮಶ್ರೀ ಪುರಸ್ಕøತೆ ಮಂಜಮ್ಮ ಜೋಗತಿ ಹೇಳಿದರು.

    ಗಂಗಾವತಿ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಆರ್ಯ ವೈಶ್ಯ ಸಮಾಜದ ವಾಸವಿ ಮಹಿಳಾ ಮಂಡಳಿಯ ವತಿಯಿಂದ ಇಂದು ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಣ್ಣಿನಿಂದಲೇ ಶೋಷಣೆಗಳು ನಡೆಯುತ್ತಿರುವ ಪ್ರಸಂಗಗಳು ಕಂಡು ಬರುತ್ತಿವೆ. ಹೆಣ್ಣು ಒಂದಾಗಬೇಕು, ನಾವೆಲ್ಲರೂ ಒಂದು ಎನ್ನುವ ಮನೋಭಾವನೆಯನ್ನು ಬೆಳೆಸಿಕೊಂಡು ಪ್ರತಿಯೊಬ್ಬರು ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ: ಡಿಕೆಶಿ

    21ನೇ ಶತಮಾನದಲ್ಲಿನ ನಗರ ಪ್ರದೇಶಗಳಲ್ಲಿನ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ತಮ್ಮ ಸಾಮಥ್ರ್ಯವನ್ನು ಸಾಬಿತು ಪಡಿಸುತ್ತಿದ್ದಾರೆ. ಆದರೆ ಗ್ರಾಮೀಣ ಭಾಗಗಳಲ್ಲಿ ಇರುವ ಮಹಿಳೆಯರು ಇನ್ನೂ ನಾಲ್ಕು ಗೋಡೆಗಳ ನಡುವೆ ಜೀವನವನ್ನು ಸಾಗಿಸುತ್ತಿದ್ದಾರೆ. ಮಹಿಳೆಯರ ಮೇಲಿನ ಶೋಷಣೆಗಳು ನಿಲ್ಲಬೇಕು. ಮಹಿಳೆಯರು ಬದಲಾವಣೆ ಆಗಬೇಕು ಎಂದಾದರೆ, ಮೊದಲು ಗ್ರಾಮೀಣ ಭಾಗಗಳಲ್ಲಿ ಇರುವ ಮಹಿಳೆಯರು ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿ ಹೇಳಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಪ್ರಸ್ತಾಪಿಸಿದ ಸ್ಪೀಕರ್ ಕಾಗೇರಿ

    ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯು ಶಿಕ್ಷಣವನ್ನು ಪಡೆದುಕೊಳ್ಳಬೇಕು. ಗ್ರಾಮೀಣದಿಂದ ನಗರದವರೆಗೆ ಅವರನ್ನು ಗುರುತಿಸಿ, ಅವರ ಪ್ರತಿಭೆಗಳಿಗೆ ಪ್ರೋತ್ಸಾಹಿಸಬೇಕು. ಅಂದಾಗ ಮಾತ್ರ ಮಹಿಳಾ ಸಮಾಜ ಬದಲಾವಣೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಂತರ ಕಾರ್ಯಕ್ರಮದಲ್ಲಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

  • ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಹಲವರಿಗೆ ಮಂಗಳವಾರ 2021ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೋಗತಿ ನೃತ್ಯದ ಮೂಲಕ ಮನೆಮಾತಾಗಿರುವ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ದೃಷ್ಟಿ ತೆಗೆದು ಗಮನ ಸೆಳೆದರು.

    ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುವಾಗ ರಾಷ್ಟ್ರಪತಿಗಳು ಸಂತೋಷದಿಂದ ನಗೆ ಬೀರಿದರು. ನಂತರ ಮಂಜಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದನೆ ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪಡೆದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೂ ಮಂಜಮ್ಮ ಜೋಗತಿ ಪಾತ್ರರಾಗಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

    2021ರ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಿತು. ಕರ್ನಾಟಕದ ಖ್ಯಾತ ವೈದ್ಯ ಡಾ. ಬಿ.ಎಂ.ಹೆಗ್ಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಗಾಯಕ ದಿವಂಗತ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ನೀಡಲಾಯಿತು. ಪ್ರಶಸ್ತಿಯನ್ನು ಎಸ್‌ಪಿಬಿ ಪರವಾಗಿ ಪುತ್ರ ಚರಣ್‌ ಸ್ವೀಕರಿಸಿದರು. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಸಾಹಿತಿ ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತ್ಯ ಮತ್ತು ಸಮಾಜ ಸೇವೆಗಾಗಿ ಎಲ್‌.ಎಸ್.ಕಶ್ಯಪ್ ಅವರಿಗೂ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು.

  • ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆ ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ.

    ಕೇಂದ್ರ ಗೃಹ ಸಚಿವಾಲಯ ಇಂದು ರಾತ್ರಿ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್‌ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

    ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

    ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ.

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.