Tag: ಮಂಜುನಾಥ್

  • ನಾವು ಮೋದಿಗೆ ಹೇಳಿದ್ವಿ ಇಂದು ಉತ್ತರ ಸಿಕ್ತು, ಅವ್ರು ಯಾರಿಗೆ ಹೇಳ್ತಾರೆ: ಮಂಜುನಾಥ್ ಸಂಬಂಧಿ

    ನಾವು ಮೋದಿಗೆ ಹೇಳಿದ್ವಿ ಇಂದು ಉತ್ತರ ಸಿಕ್ತು, ಅವ್ರು ಯಾರಿಗೆ ಹೇಳ್ತಾರೆ: ಮಂಜುನಾಥ್ ಸಂಬಂಧಿ

    – ಆಪರೇಷನ್ ಸಿಂಧೂರ ಪಹಲ್ಗಾಮ್ ದಾಳಿಯ ಮೃತರಾದವರಿಗೆ ಅರ್ಪಣೆ

    ಶಿವಮೊಗ್ಗ: ಪಹಲ್ಗಾಮ್‌ನಲ್ಲಿ ಉಗ್ರರರು ಪ್ರವಾಸಿಗರ ಮೇಲೆ ದಾಳಿ ಮಾಡಿ, ಮೋದಿಗೆ ಹೇಳಿ ಅಂದಿದ್ದರು. ನಾವು ಮೋದಿಗೆ ಹೇಳಿದ್ದೆವು. ಇಂದು ಉತ್ತರ ಸಿಕ್ಕಿದೆ. ಈಗ ಅವರು ಯಾರಿಗೆ ಹೇಳ್ತಾರೆ ಎಂದು ಪ್ರಶ್ನಿಸುವ ಮೂಲಕ ಪಹಲ್ಗಾಮ್ ಉಗ್ರರ ದಾಳಿಯಲ್ಲಿ(Pahalgam Terror Attack) ಮೃತಪಟ್ಟ ಮಂಜುನಾಥ್ ರಾವ್ ಅವರ ಸಂಬಂಧಿ ಡಾ.ರವಿಕಿರಣ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ಅಡಗುತಾಣಗಳಿಗೆ ದಾಳಿ ನಡೆಸಿದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಳಗ್ಗೆ ಏಳುವಾಗಲೇ ಒಳ್ಳೆಯ ಸುದ್ದಿ ಸಿಕ್ಕಿದೆ. `ಆಪರೇಷನ್ ಸಿಂಧೂರ'(Operation Sindoor) ಹೆಸರು ಕೇಳಿಯೇ ರೋಮಾಂಚನ ಆಯ್ತು. ನಾವು ಚಿಕ್ಕವರಿಂದಲೂ ಕಾಶ್ಮೀರ(Kashmir) ಭಾರತದ ಸಿಂಧೂರ ಎಂದು ಹೇಳುತ್ತಲೇ ಬಂದಿದ್ದೇವೆ. ಪಹಲ್ಗಾಮ್ ದಾಳಿಯಲ್ಲಿ ಉಗ್ರರು ಭಾರತೀಯ ಮಹಿಳೆಯರ ಸಿಂಧೂರ ಅಳಿಸುವ ಕೆಲಸ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಭಾರತ ಕೂಡ ಕೆಲಸ ಆರಂಭಿಸಿದೆ ಎಂದರು. ಇದನ್ನೂ ಓದಿ: ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ಭಾರತೀಯ ಸೇನೆಯು ಉಗ್ರರ ಮೇಲೆ ದಾಳಿ ಮಾಡಿದೆಯೇ ಹೊರತು ನಾಗರೀಕರ ಮೇಲೆ ಮಾಡಿಲ್ಲ. ಆಪರೇಷನ್ ಸಿಂಧೂರವು ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಸಲ್ಲಿಸಿದ ಗೌರವ. ಉಗ್ರರು ದಾಳಿ ಮಾಡುವಾಗ ಮೋದಿಗೆ ಹೇಳಿ ಅಂದಿದ್ದರು. ನಾವು ಮೋದಿಗೆ ಹೇಳಿದ್ದೆವು. ಇಂದು ನಮಗೆ ಉತ್ತರ ಸಿಕ್ಕಿದೆ. ಈಗ ಅವರು ಯಾರಿಗೆ ಹೇಳ್ತಾರೆ ಎಂದು ಕೇಳಲು ಬಯಸ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ಭಾರತೀಯ ಸೇನೆಗೆ(Indian Army) ಎಲ್ಲರೂ ಕೂಡ ಸಹಕಾರ ನೀಡಬೇಕು. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಾಶ ಮಾಡುವ ಕೆಲಸ ಮುಂದುವರೆಯಲಿ ಎಂದರು. ಇದನ್ನೂ ಓದಿ: ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ

    ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಇಂದು ತಡರಾತ್ರಿ 1:44ರ ಸುಮಾರಿಗೆ ಭಾರತೀಯ ಸೇನೆಯು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಕಾರ್ಯಚರಣೆಗೆ `ಆಪರೇಷನ್ ಸಿಂಧೂರ’ ಎಂದು ಹೆಸರಿಡಲಾಗಿತ್ತು. ಪಹಲ್ಗಾಮ್ ದಾಳಿಯ ಮೂಲಕ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ್ದ ಉಗ್ರರಿಗೆ ಭಾರತವು ಆಪರೇಷನ್ ಸಿಂಧೂರದ ಮೂಲಕ ತಕ್ಕ ಪ್ರತ್ಯುತ್ತರ ನೀಡಿದೆ.

  • ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮಂಜುನಾಥ್ ಅಂತ್ಯಕ್ರಿಯೆ

    ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮಂಜುನಾಥ್ ಅಂತ್ಯಕ್ರಿಯೆ

    ಶಿವಮೊಗ್ಗ: ಪಹಲ್ಗಾಮ್‌ನಲ್ಲಿ (Pahalgam) ಉಗ್ರರ ಗುಂಡೇಟಿಗೆ ಬಲಿಯಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ (Manjunath Rao) ಅವರ ಅಂತ್ಯಕ್ರಿಯೆ ತುಂಗಾ ತೀರದಲ್ಲಿರುವ ರೋಟರಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

    ಪುತ್ರ ಅಭಿಜನ್ ಬ್ರಾಹ್ಮಣ (Brahmin) ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯ ಸಂಸ್ಕಾರದ ಅಂತಿಮ ವಿಧಿವಿಧಾನವು ಗುಂಡಾ ಭಟ್ಟರ ನೇತೃತ್ವದಲ್ಲಿ ನಡೆಯಿತು. ಇದನ್ನೂ ಓದಿ: ಪಹಲ್ಗಾಮ್ ದಾಳಿ | ಕೂಡಲೇ ಪಾಕ್‌ ತೊರೆಯಿರಿ ಭಾರತೀಯರಿಗೆ ಕೇಂದ್ರ ಸೂಚನೆ

    ಮಂಜುನಾಥ್ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗದಲ್ಲಿರುವ (Shivamogga) ನಿವಾಸಕ್ಕೆ ತರಲಾಯಿತು. ಬಳಿಕ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 12:30ರ ಸುಮಾರಿಗೆ ನಿವಾಸದಲ್ಲಿ ಅಂತಿಮ ವಿಧಿಗಳನ್ನು ಪೂರೈಸಿ ಮಂಜುನಾಥ್‌ರವರ ಅಂತಿಮಯಾತ್ರೆ ಹೊರಟಿತು. ಇದನ್ನೂ ಓದಿ: ನನ್ನನ್ನೂ ಶೂಟ್ ಮಾಡು ಅಂದೆ, ಅವ್ನು ಹೋಗಿ ಮೋದಿಗೆ ಹೇಳು ಅಂದ: ಮಂಜುನಾಥ್ ಪುತ್ರ

    ಅಂತಿಮ ಮೆರವಣಿಗೆಯು ಐಬಿ ಸರ್ಕಲ್ ಮೂಲಕ ಕುವೆಂಪು ರಸ್ತೆಗೆ ಬಂದು, ಜೈಲ್ ಸರ್ಕಲ್‌ನಿಂದ ದುರ್ಗಿಗುಡಿ ಮುಖ್ಯರಸ್ತೆ ಮೂಲಕ ಸೀನಪ್ಪ ಶೆಟ್ಟಿ ಸರ್ಕಲ್‌ಗೆ ತಲುಪಿತು. ಅಲ್ಲಿಂದ ಅಮೀರ್ ಅಹಮದ್ ಸರ್ಕಲ್ ಮೂಲಕ ಬಿಹೆಚ್ ರೋಡ್ ನಲ್ಲಿ ಸಾಗಿ, ರೋಟರಿ ಚಿತಾಗಾರವನ್ನು ತಲುಪಿತು. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

    ಅಂತಿಮಯಾತ್ರೆ ವೇಳೆ ಮಾರ್ಗದುದ್ದಕ್ಕೂ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟನ್ನು ಮುಚ್ಚಿ ಅಂತಿಮ ನಮನ ಸಲ್ಲಿಸಿದರು. ರೋಟರಿ ಚಿತಾಗಾರಕ್ಕೆ ಮೃತದೇಹ ತಲುಪುತ್ತಲೇ ಶಾಸಕ ಚನ್ನಬಸಪ್ಪ ಹಾಗೂ ವಿವಿಧ ರಾಜಕೀಯ ಮುಖಂಡರು ಮೃತದೇಹಕ್ಕೆ ಹೆಗಲು ನೀಡಿದರು. ಇದನ್ನೂ ಓದಿ: ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೇವೆ: ಘರ್ಜಿಸಿದ ಮೋದಿ

    ಬಳಿಕ ಪಾರ್ಥಿವ ಶರೀರಕ್ಕೆ ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸರ್ಕಾರಿ ಗೌರವ ನೀಡಿದರು. ಗುಂಡಾಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು ನಡೆದಿದ್ದು, ಪುತ್ರ ಅಭಿಜನ್ ಕಣ್ಣೀರಿಡುತ್ತಲೇ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

    ಈ ವೇಳೆ ಪತ್ನಿ ಪಲ್ಲವಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಚಿವ ಮಧು ಬಂಗಾರಪ್ಪ ಅವರು ಸ್ಥಳದಲ್ಲಿದ್ದು ಮೃತ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

  • ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ

    ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ

    ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ (Shivamogga) ಮಂಜುನಾಥ್ ಮೃತಪಟ್ಟಿದ್ದು, ಮನೆಯಲ್ಲಿ ನೀರವ ಮೌನ ಆವರಿಸಿದೆ. ಮಂಜುನಾಥ್ ಪುತ್ರ ದ್ವಿತೀಯ ಪಿಯುಸಿಯಲ್ಲಿ 97% ಅಂಕ ಪಡೆದಿದ್ದ ಹಿನ್ನೆಲೆ ಸಂಭ್ರಮಾಚರಣೆಗೆಂದು ಮಂಜುನಾಥ್ ತಮ್ಮ ಪತ್ನಿ, ಮಗನ ಜೊತೆ ಕಾಶ್ಮೀರಕ್ಕೆ ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

    ಮೃತ ಮಂಜುನಾಥ್ ತಾಯಿ, ಪತ್ನಿ, ಪುತ್ರನೊಂದಿಗೆ ನಗರದ ವಿಜಯನಗರ ಬಡಾವಣೆಯಲ್ಲಿ ವಾಸವಾಗಿದ್ದರು. ಕಳೆದ ಐದು ದಿನಗಳ ಹಿಂದೆ ಮಂಜುನಾಥ್ ತನ್ನ ಕುಟುಂಬದೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಮೊದಲು ರಾಜಸ್ಥಾನ ಪ್ರವಾಸಕ್ಕೆ ಯೋಜಿಸಿದ್ದ ಮಂಜುನಾಥ್ ಬಳಿಕ ಪ್ಲ್ಯಾನ್ ಬದಲಾಯಿಸಿ ಕಾಶ್ಮೀರಕ್ಕೆ ತೆರಳಿದ್ದರು. ಇದನ್ನೂ ಓದಿ: ಕನ್ನಡಿಗರ ರಕ್ಷಣೆಗಾಗಿ ಜಮ್ಮುವಿನತ್ತ ಹೊರಟ ಸಚಿವ ಸಂತೋಷ ಲಾಡ್

    ದೆಹಲಿಯ ಇಂಡಿಯನ್ ಟೂರಿಸ್ಟ್ ಸಂಸ್ಥೆಯಿಂದ ಟೂರ್ ಆಯೋಜನೆಗೊಂಡಿತ್ತು. ಮಂಜುನಾಥ್ ಆನ್‌ಲೈನ್‌ನಲ್ಲಿ ಟೂರ್ ಆಯೋಜಿಸಿಕೊಂಡಿದ್ದರು. ದುರಾದೃಷ್ಟವಶಾತ್ ಮಂಜುನಾಥ್ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಹತ್ಯೆಯಾಗಿದ್ದಾರೆ. ಉಗ್ರರು ಮಂಜುನಾಥ್ ಅವರ ಧರ್ಮ ಕೇಳಿ ಹತ್ಯೆ ಮಾಡಿದ್ದಾರೆ. ಜೊತೆಗಿದ್ದ ಪತ್ನಿ ಪಲ್ಲವಿ ಹಾಗೂ ಪುತ್ರನನ್ನು ಮೂವರು ಭಯೋತ್ಪಾದಕರು ಬಿಟ್ಟು ಕಳುಹಿಸಿದ್ದು, ‘ಜಾವೋ ಮೋದಿ ಕೋ ಬೋಲೋ’ ಎಂದು  ಹೇಳಿ ಸ್ಥಳದಿಂದ ತೆರಳಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿದ ಮೋದಿ

    ಸದ್ಯ ಮೃತ ಮಂಜುನಾಥ್ ತಾಯಿ ಸುಮತಿಗೆ ಇನ್ನೂ ಕೂಡ ಮಗನ ಹತ್ಯೆಯಾಗಿರುವ ವಿಚಾರ ತಿಳಿದಿಲ್ಲ. ಮಂಜುನಾಥ್ ಉಗ್ರರಿಂದ ಹತ್ಯೆಯಾಗಿದ್ದಾನೆಂದು ಕುಟುಂಬಸ್ಥರು ತಿಳಿಸಿಲ್ಲ. ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಷ್ಟೇ ಕುಟುಂಬಸ್ಥರು ತಾಯಿಗೆ ತಿಳಿಸಿದ್ದಾರೆ. ಇದನ್ನೂ ಓದಿ: Pahalgam Attack | ಉಗ್ರರ ಗುಂಡಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಬಲಿ

  • BBK 11: ಅಕ್ಕನ ಮರೆತ ವಿಶೇಷ ಚೇತನ ಸಹೋದರ- ಮೋಕ್ಷಿತಾ ಕಣ್ಣೀರು

    BBK 11: ಅಕ್ಕನ ಮರೆತ ವಿಶೇಷ ಚೇತನ ಸಹೋದರ- ಮೋಕ್ಷಿತಾ ಕಣ್ಣೀರು

    ‘ಬಿಗ್ ಬಾಸ್ ಸೀಸನ್ 11’ರ (Bigg Boss Kannada 11) ಶೋ 94 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ವಾರ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ ಮನೆಗೆ ಬಂದು ಹೋಗುತ್ತಿದ್ದಾರೆ. ಇಂದು ಮೋಕ್ಷಿತಾ (Mokshitha Pai) ಫ್ಯಾಮಿಲಿ ಮನೆಗೆ ಎಂಟ್ರಿ ಕೊಟ್ಟಿದ್ದು, ಅಕ್ಕ ತಮ್ಮನ ಭಾವನಾತ್ಮಕ ಕ್ಷಣಗಳನ್ನು ಕಂಡು ಬಿಗ್ ಬಾಸ್ ಮನೆ ಸದಸ್ಯರು ಕಣ್ಣೀರಿಟ್ಟಿದ್ದಾರೆ.

    ಭವ್ಯಾ ಹಾಗೂ ತ್ರಿವಿಕ್ರಮ್ ಕುಟುಂಬದವರು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಇವರ ಬಳಿಕ ರಜತ್ ಅವರ ಕುಟುಂಬ ಆಗಮಿಸಿತ್ತು. ಇದರ ಬೆನ್ನಲ್ಲೇ ಇಂದು ಮನೆಗೆ ಮೋಕ್ಷಿತಾ ಅವರ ಫ್ಯಾಮಿಲಿ ಆಗಮಿಸಿದೆ. ಹೊಸ ವರ್ಷದಂದೇ ಮೋಕ್ಷಿತಾ ಫ್ಯಾಮಿಲಿ ಬಂದಿದೆ. ಪೋಷಕರ ಜೊತೆ ಸಹೋದರನ ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಸಹೋದರನನ್ನ ತಬ್ಬಿಕೊಂಡು ಮೋಕ್ಷಿತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:BBK 11: ‘ರಾಧಾ ಕೃಷ್ಣ’ರಂತೆ ಇದ್ದೀರಾ: ಭವ್ಯಾಗೆ ನೇರವಾಗಿ ಹೇಳಿದ ತ್ರಿವಿಕ್ರಮ್‌ ತಾಯಿ

    ಅಕ್ಕ ಮತ್ತು ತಮ್ಮ ಒಂದಾಗೋ ಭಾವನಾತ್ಮಕ ಘಟಳಿಗೆಯಲ್ಲಿ ಇಡೀ ಮನೆ ಸದಸ್ಯರು ಕಣ್ಣೀರಿಟ್ಟಿದ್ದಾರೆ. ವಿಶೇಷ ಚೇತನ ಸಹೋದರನನ್ನು ನೋಡಿದ ತಕ್ಷಣ ಮೋಕ್ಷಿತಾ ಅಳುತ್ತಾ ಓಡೋಡಿ ಬಂದರು. ಇಷ್ಟು ದಿನ ಬಿಟ್ಟು ಇದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ನನ್ನನ್ನು ಮರೆತು ಹೋಗಿಬಿಟ್ಟಿದ್ದಾನೆ ಎಂದು ತಮ್ಮನ ತಬ್ಬಿಕೊಂಡು ಮೋಕ್ಷಿತಾ ಕಣ್ಣೀರು ಸುರಿಸಿದ್ದಾರೆ. ಅವನು ನನ್ನಾ ನೋಡ್ತಾನೇ ಇಲ್ಲ. ನನ್ನನ್ನು ಮರೆತು ಬಿಟ್ಟಿದ್ದಾರೆ ಎಂದು ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

    ಈ ಚಿಕ್ಕ ಕುಟುಂಬವನ್ನು ನೋಡಿದ ರಜತ್, ಹನುಮಂತು, ಮಂಜು, ಚೈತ್ರಾ, ಗೌತಮಿ, ತ್ರಿವಿಕ್ರಮ್, ಭವ್ಯಾ ಎಲ್ಲರೂ ಫುಲ್ ಸೈಲೆಂಟ್ ಆಗಿದ್ದರು. ಮೋಕ್ಷಿತಾ ಅಳುವುದನ್ನು ನೋಡಿ ತಡೆಯಲಾಗದೇ ಗೌತಮಿ ಕೂಡ ಅತ್ತಿದ್ದಾರೆ. ಸಹೋದರನ ಜೊತೆಗಿನ ಭಾವನಾತ್ಮಕ ಕ್ಷಣ ನೋಡಿ ಇಡೀ ಮನೆಯೇ ದುಃಖದಲ್ಲಿ ಮುಳುಗಿದೆ. ಮೋಕ್ಷಿತಾ ಕಣ್ಣೀರಿಗೆ ಪ್ರೇಕ್ಷಕರ ಕರುಳು ಕಿವುಚಿದೆ.

  • ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್

    ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್

    – ಕೋಲಾರವನ್ನು ಬೆಂಗಳೂರು ಪೂರ್ವ ಮಾಡ್ತೀರಾ?
    – ಚಿಕ್ಕಬಳ್ಳಾಪುರವನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡ್ತೀರಾ?

    ರಾಮನಗರ: ಬೆಂಗಳೂರು ದಕ್ಷಿಣ (Bengaluru South) ಅಂತ ಹೆಸರು ಬದಲಾವಣೆಗೆ ಖಂಡತುಂಡವಾಗಿ ವಿರೋಧ ಮಾಡುತ್ತೇವೆ. ಯಾವುದೇ ಡಿಕ್ಷನರಿ ನೋಡಿದರೂ ರಾಮನಗರಕ್ಕಿಂತ (Ramanagara) ಒಳ್ಳೆಯ ಪದ ಬೇರೊಂದು ಸಿಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರದ ಬಿಜೆಪಿ ಸಂಸದ ಡಾ ಮಂಜುನಾಥ್‌ (Dr. CN Manjunath) ಹೇಳಿದ್ದಾರೆ.

    ರಾಮನಗರ ಜಿಲ್ಲೆಗೆ ಮರುನಾಮಕರಣ ವಿಚಾರ ಕುರಿತು ಮಾಗಡಿಯಲ್ಲಿ (Magadi) ಮಾತನಾಡಿದ ಅವರು, ಆ ಹೆಸರಿಗೆ ಭಾವನಾತ್ಮಕ, ಧಾರ್ಮಿಕ, ಪೌರಾಣಿಕ ಸಂಬಂಧ ಇದೆ. ಕೇವಲ ಹೆಸರು ಬದಲಾವಣೆ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ ಎಂದರು.  ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್‌ ಭಾರತ್‌ ನಿಧಿ’ – ಏನಿದು ಯೋಜನೆ?

     

    ಬೆಂಗಳೂರು ನಗರದ ಒಳಗೆ ಬೆಂಗಳೂರು ದಕ್ಷಿಣ ತಾಲೂಕು ಇದೆ. ಇನ್ನೊಂದು ಬೆಂಗಳೂರು ದಕ್ಷಿಣ ಜಿಲ್ಲೆ ಅಂದರೆ ಜನರಿಗೆ ಗೊಂದಲ ಆಗುತ್ತದೆ. ಈ ರೀತಿ ಮಾಡುವುದಾದರೆ ʼಬ್ರಾಂಡ್ ರಾಮನಗರʼ ಎಂದು ಅಭಿವೃದ್ಧಿ ಮಾಡಿ. ಮುಂದೆ ಕೋಲಾರವನ್ನು ಬೆಂಗಳೂರು ಪೂರ್ವ ಜಿಲ್ಲೆ ಮಾಡ್ತೀರಾ? ಚಿಕ್ಕಬಳ್ಳಾಪುರವನ್ನು ಬೆಂಗಳೂರು ಉತ್ತರ ಜಿಲ್ಲೆ ಅಂತ ಮಾಡ್ತೀರಾ ಎಂದು ಪ್ರಶ್ನೆ ಕೇಳಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್‌ ಕಟ್

    ಬೆಂಗಳೂರು ಬೃಹತ್‌ ಆಗಿ ಬೆಳೆದಿದ್ದು ಅಲ್ಲೇ ಸಾಕಷ್ಟು ಮೂಲಭೂತ ಸಮಸ್ಯೆಗಳಿದೆ. ಭೂಮಿಗೆ ಬೆಲೆ ಜಾಸ್ತಿ ಆದರೆ ಪ್ರಯೋಜನ ಇಲ್ಲ. ಭೂಮಿಯಲ್ಲಿ ಬೆಳೆಯುವ ಬೆಳೆಗೆ ಬೆಲೆ ಜಾಸ್ತಿ ಆಗಬೇಕು. ಯಾವ ಉದ್ದೇಶಕ್ಕೆ ಈ ರೀತಿ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದರು.

     

    ರಾಮನಗರ ಹೆಸರನ್ನು ಬದಲಾವಣೆ ಮಾಡಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದು ರೇಷ್ಮೆನಾಡಾಗಿಯೇ ಉಳಿಯಬೇಕು. ರೈತರ ಜಿಲ್ಲೆಯಾಗಿಯೇ ಉಳಿಯಬೇಕು. ಇದು ವೈಜ್ಞಾನಿಕವಾಗಿಯೂ ಸಮಂಜಸ ಅಲ್ಲ ಎಂದು ಎಂದು ಹೇಳಿದರು.

  • ಪ್ರಚೋದನೆ ಮಾಡಿ ಈ ಸ್ಥಿತಿಗೆ ತಂದಿದ್ದಾರೆ, ಒಳ್ಳೆತನ ಅವರನ್ನು ಕಾಪಾಡುತ್ತೆ: ದರ್ಶನ್ ಬಾವ ಮಂಜುನಾಥ್

    ಪ್ರಚೋದನೆ ಮಾಡಿ ಈ ಸ್ಥಿತಿಗೆ ತಂದಿದ್ದಾರೆ, ಒಳ್ಳೆತನ ಅವರನ್ನು ಕಾಪಾಡುತ್ತೆ: ದರ್ಶನ್ ಬಾವ ಮಂಜುನಾಥ್

    ಕಾರವಾರ: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಪೊಲೀಸರ ತನಿಖೆ ಎದುರಿಸುತ್ತಿದ್ದು, ದರ್ಶನ್ ಸಹೋದರಿ ದಿವ್ಯ ಅವರ ಪತಿ ಮಂಜುನಾಥ್ (Manjunath) ಮೊದಲ ಬಾರಿಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ್ದಾರೆ.

    ಅವರನ್ನು ಪ್ರವೋಕ್ ಮಾಡಿ ಈ ಸ್ಥಿತಿಗೆ ತಂದಿದ್ದಾರೆ. ಅವರ ಗುಣ ಈ ರೀತಿಯಾಗಿಲ್ಲ. ಅವರು ಖುಷಿಯಾಗಿ ಓಡಾಡಿಕೊಂಡಿದ್ದರು. ಅವರಿಗೆ ಕಿರಿ ಕಿರಿಯಾಗುವಂತೆ ಮಾಡಿದಾಗ ಈ ರೀತಿ ಆ್ಯಕ್ಷನ್ ತೆಗೆದುಕೊಳ್ಳುವ ಹಾಗೆ ಮಾಡಿ ಸಮಸ್ಯೆ ಆಗುತ್ತಿದೆ. ಅವರ ಒಳ್ಳೆತನ ಅವರನ್ನು ಕಾಪಾಡುತ್ತದೆ ಎಂದು ನೋವು ತೋಡಿಕೊಂಡರು. ಇದನ್ನೂ ಓದಿ: ಫ್ಯಾನ್ಸ್ ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ದರ್ಶನ್ ಕೃತ್ಯ ಖಂಡಿಸಿದ ರಮ್ಯಾ

    ಅವರ ಬೇಸಿಕ್ ಗುಣ ಅದಲ್ಲ. ಖುಷಿಯಾಗಿ ಜಾಲಿಯಾಗಿ ಇರುವವರು ಅವರು. ಪ್ರಾಣಿ-ಪಕ್ಷಿ ಅಂದುಕೊಂಡು ಚೆನ್ನಾಗಿದ್ದರು. ಕೋರ್ಟ್ ಎಲ್ಲಾ ತೀರ್ಮಾನ ಮಾಡುತ್ತೆ. ಅವರ ಲೈಫ್ ಅವರು ಚೆನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ನೋಡೋರು ಬೇರೆ ಥರ ತಿಳಿದುಕೊಂಡಿದ್ದಾರೆ. ಜನರೆಲ್ಲಾ ಶಾಂತರಾಗಿರಬೇಕು. ಒಳ್ಳೆಯ ತೀರ್ಮಾನ ಬಂದು ಸರಿ ಹೋಗುತ್ತದೆ. ಅಲ್ಲಿಯವರೆಗೆ ಶಾಂತಿ ಕಾಪಾಡಿಕೊಂಡು ಅಭಿಮಾನಿಗಳು ಸಂತೋಷವಾಗಿರಬೇಕು. ಡಿ ಬಾಸ್ ಮತ್ತೆ ಬರುತ್ತಾರೆ. ಅಲ್ಲಿಯವರೆಗೆ ಶಾಂತಿ ಕಾಪಾಡಿಕೊಂಡು ಖುಷಿಯಾಗಿ ಇರಬೇಕು ಎಂದರು. ಇದನ್ನೂ ಓದಿ: ತಿರುಪತಿಗೆ ತೆರಳಿ ದೇವರ ದರ್ಶನ ಪಡೆದ ಹೆಚ್‌ಡಿಕೆ

    ಅವರು ಹೊರಗೆ ಬಂದ ಮೇಲೆ ಮತ್ತೆ ಸಿನಿಮಾ ಮಾಡಿಕೊಂಡು ಇರಬೇಕು. ಜನರಿಗೆ ಸಹಾಯ ಮಾಡಿಕೊಂಡು ಖುಷಿಯಾಗಿ ಇರಬೇಕು. ಅವರು ಎಷ್ಟೋ ಜನರಿಗೆ ಸಹಾಯ ಮಾಡಿದ್ದಾರೆ. ಎಲ್ಲಾ ಒಳ್ಳೆಯದಾಗಿ ಹೊರಬರುವ ನಿರೀಕ್ಷೆ ಇದೆ. ಅವರ ಒಳ್ಳೆತನ ಅವರನ್ನು ಕಾಪಾಡುತ್ತೆ ಎಂದು ಹೇಳಿದರು. ಇದನ್ನೂ ಓದಿ: G7 Group Photo | ಮಧ್ಯದಲ್ಲಿ ನಿಂತ ಭಾರತ: ಮೋದಿ ಹೇಳಿದ್ದೇನು?

  • ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಎದುರಿಸುವ ಶಕ್ತಿಯಿದೆ: ಸಿಎನ್‌ ಮಂಜುನಾಥ್‌

    ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಎದುರಿಸುವ ಶಕ್ತಿಯಿದೆ: ಸಿಎನ್‌ ಮಂಜುನಾಥ್‌

    ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ವಿಚಾರದಲ್ಲಿ ರಾಜಕೀಯ ಜೋರಾಗಿದೆ. ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಅದನ್ನು ಎದುರಿಸುವ ಶಕ್ತಿಯಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಹೇಳಿದ್ದಾರೆ.

    ಆದಿಚುಂಚನಗಿರಿ ಶ್ರೀಗಳ ದರ್ಶನ ಮಾಡಿದ ಬಳಿಕ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಭಯದ ವಾತಾವರಣವಿದೆ ಎಂದು ವರದಿಯಾಗುತ್ತಿದೆ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

     

    ಡಿಕೆ ಸುರೇಶ್ (DK Suresh) ಏನು ಮಾಡಿಲ್ಲ ಬರೀ ಹೆದರಿಸುವ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮಂತ್ರಿ ಅಶ್ವಥ್‌ನಾರಾಯಣ್ ಆರೋಪಿಸಿದರು. ಅಷ್ಟೇ ಅಲ್ಲದೇ ಈ ಬಾರಿ ನೂರಕ್ಕೆ ನೂರು ಡಾಕ್ಟರ್ ಮಂಜುನಾಥ್‌ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಇದನ್ನೂ ಓದಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಕಾಂಗ್ರೆಸ್‌ ಬಿಟ್ಟುಕೊಟ್ಟಿದೆಯಾ?; ದ್ವೀಪ ಎಲ್ಲಿದೆ? – ಭಾರತಕ್ಕೆ ಯಾಕೆ ಮುಖ್ಯ?

    ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್‌, ಜೆಡಿಎಸ್‌ ಗೆಲ್ಲಲು ಸಾಧ್ಯವಿಲ್ಲ ಎಂದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಅಳಿಯನನ್ನು ಬಿಜೆಪಿ ಸಿಂಬಲ್‌ನಲ್ಲಿ ನಿಲ್ಲಿಸುವ ಸ್ಥಿತಿ ದೇವೇಗೌಡರಿಗೆ ಬರಬಾರದಿತ್ತು ಎಂದು ಲೇವಡಿ ಮಾಡಿದರು.

    ಗಿಫ್ಟ್ ವೋಚರ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ ಗೆದ್ದೇ ಗೆಲ್ಲುತ್ತೇವೆ ನೋಡುತ್ತಿರಿ ಎಂದು ಸವಾಲು ಹಾಕಿದರು.

    ಇದಕ್ಕೆ ಕುಮಾರಸ್ವಾಮಿ, ನಾವು ನಾಲ್ಕು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಡಿಕೆಶಿ ಬಾಯಿತಪ್ಪಿ 28 ಎಂದು ಹೇಳುವ ಬದಲು 4 ಅಂತ ಹೇಳಿರಬೇಕು ಎಂದು ವ್ಯಂಗ್ಯವಾಡಿದರು.

  • ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ.

    ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಜೆಡಿಎಸ್‌ ಮತಗಳು ಸುರೇಶ್‌ ಅವರಿಗೆ ಬಿದ್ದ ಕಾರಣ ಲೀಡ್‌ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಲೇಬೇಕೆಂದು ಹೆಚ್‌ಡಿಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

    ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು ಯಾಕೆ?
    ಬಾವಾ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಲು ಒಪ್ಪಿಸಿದ್ದೇ ಕುಮಾರಸ್ವಾಮಿ. ಒಂದು ವೇಳೆ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಕುಮಾರಸ್ವಾಮಿ ಮೇಲೆ ಆರೋಪಗಳು ಹೆಚ್ಚಾಗುತ್ತದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಅಲ್‌ ಜಜೀರಾ ನಿಷೇಧ – ಇದು ಉಗ್ರರ ವಾಹಿನಿ ಎಂದ ನೆತನ್ಯಾಹು

    ಮಂಜುನಾಥ್ ಅವರ ಚುನಾವಣೆ ಸ್ಪರ್ಧೆಗೆ ಅವರ ಪತ್ನಿ ಅನಸೂಯ ಮತ್ತು ಪುತ್ರ ಅಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ವಿರೋಧ ಇತ್ತು. ಮಾತುಕತೆಯ ವೇಳೆ ಬಾವನನ್ನು ಗೆಲ್ಲಿಸಿಕೊಂಡು ಬರುವುದು ನನ್ನ ಜವಾಬ್ದಾರಿ ಎಂದು ಹೆಚ್‌ಡಿಕೆ ಮನವೊಲಿಕೆ ಮಾಡಿದ್ದರು. ಕುಮಾರಸ್ವಾಮಿ ಮಾತಿಗೆ ಒಪ್ಪಿ ಬಿಜೆಪಿಯಿಂದ ಸ್ಪರ್ಧೆಗೆ ಸಹೋದರಿ ಒಪ್ಪಿಗೆ ನೀಡಿದ್ದಾರೆ. ಈಗ ಹೆಚ್‌ಡಿಕೆ ಕೊಟ್ಟ ಮಾತು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

    ಡಿಕೆ ಶಿವಕುಮಾರ್‌, ಡಿಕೆ ಸುರೇಶ್‌ ಚುನಾವಣೆ ಗೆಲ್ಲಲು ದೊಡ್ಡ ದೊಡ್ಡ ತಂತ್ರಗಾರಿಕೆ ಮಾಡುತ್ತಾರೆ. ರಾಜಕೀಯದಲ್ಲಿ ಅನುಭವ ಇಲ್ಲದ ಡಾ. ಮಂಜುನಾಥ್ ಅವರಿಗೆ ಇದನ್ನು ಸಹಿಸುವುದು ಕಷ್ಟ. ಹೀಗಾಗಿ ಕುಮಾರಸ್ವಾಮಿ ಬೆಂಗಾವಲು ನಿಂತು ಕೆಲಸ ಮಾಡಲು ಮುಂದಾಗಿದ್ದಾರೆ. ಒಂದು ವೇಳೆ ಡಾ.ಮಂಜುನಾಥ್ ಫಲಿತಾಂಶ ವ್ಯತಿರಿಕ್ತವಾದರೆ ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬ ಇಮೇಜ್‌ಗೂ ಧಕ್ಕೆ ಬೀಳುವ ಆತಂಕವಿದೆ.  ಇದನ್ನೂ ಓದಿ: ಮುಂದಿನ 3 ತಿಂಗಳು ಕಾಡಲಿದೆ ರಣಬಿಸಿಲು – ಉತ್ತರ ಒಳನಾಡಿಗೆ ಉಷ್ಣಗಾಳಿಯ ಕೆಟ್ಟ ಪರಿಣಾಮ

    ಗೆದ್ದರೆ ಹ್ಯಾಟ್ರಿಕ್‌ ಸಾಧನೆ:
    2014, 2019ರ ಚುನಾವಣೆಗಳಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿರುವ ಡಿ.ಕೆ ಸುರೇಶ್‌ ಇದೀಗ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದ್ದಾರೆ. 2014ರಲ್ಲಿ ಡಿಕೆ ಸುರೇಶ್‌ 14,55,244 ಮತಗಳನ್ನು ಪಡೆದು, 2,31,480 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರಲ್ಲಿ 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹಾಗಾಗಿ ಹೈಕಮಾಂಡ್‌ ಸತತ 3ನೇ ಬಾರಿಗೆ ಬೆಂಗಳೂರು ಗ್ರಾಮಾಂತರದ ಟಿಕೆಟ್‌ ನೀಡಿದೆ.

     

  • ಡಿಕೆ ಬ್ರದರ್ಸ್ ಕೋಟೆಗೆ ಅಮಿತ್ ಶಾ ಎಂಟ್ರಿ – ಚನ್ನಪಟ್ಟಣದಲ್ಲಿ ರೋಡ್ ಶೋ

    ಡಿಕೆ ಬ್ರದರ್ಸ್ ಕೋಟೆಗೆ ಅಮಿತ್ ಶಾ ಎಂಟ್ರಿ – ಚನ್ನಪಟ್ಟಣದಲ್ಲಿ ರೋಡ್ ಶೋ

    ರಾಮನಗರ: ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್‌ (Dr Manjunath) ಅವರನ್ನು ಗೆಲ್ಲಿಸಲು ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಖುದ್ದು ಅಖಾಡಕ್ಕಿಳಿಯುತ್ತಿದ್ದಾರೆ. ಡಿ.ಕೆ.ಬ್ರದರ್ಸ್‌ಗೆ ಠಕ್ಕರ್ ನೀಡಲು ಬಿಜೆಪಿ (BJP) ರಣತಂತ್ರ ಹಣೆದಿದ್ದು, ಮೈತ್ರಿ ನಾಯಕರು ಬೃಹತ್ ರೋಡ್ ಶೋ (Road Show) ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ಆರಂಭಿಸಿದ್ದಾರೆ.

    ಹೌದು. ಬೆಂಗಳೂರು ಗ್ರಾಮಾಂತರ (Bengaluru Rural) ಹೈವೋಲ್ಟೇಜ್ ಕ್ಷೇತ್ರದಲ್ಲಿ ಲೋಕಸಮರ (Lok Sabha Election) ತೀವ್ರಗೊಳ್ಳುತ್ತಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆ ಮೂಲಕ ಬೃಹತ್ ರ‍್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಖುದ್ದು ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.  ಇದನ್ನೂ ಓದಿ: ಜ್ಯೂಸ್ ಜಾಕಿಂಗ್ ಎಂದರೇನು? – ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್‌ ಚಾರ್ಜಿಂಗ್‌ ಮಾಡದಂತೆ ಕೇಂದ್ರ ಎಚ್ಚರಿಕೆ ನೀಡಿದ್ದು ಏಕೆ?

    ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ಮಾಡಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4ಗಂಟೆವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಮಾಡಲಿದ್ದಾರೆ.

    ಬೆಂಗಳೂರಿನಲ್ಲಿ ಸಮಾವೇಶದ ಬಳಿಕ ಸಂಜೆ 6ಗಂಟೆಗೆ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಪರವಾಗಿ ಮತಯಾಚನೆ ಮಾಡಲಿರುವ ಅಮಿತ್ ಶಾಗೆ ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ, ಜೆಡಿಎಸ್ ಸ್ಥಳೀಯ ನಾಯಕರು ಸಾಥ್ ನೀಡಲಿದ್ದಾರೆ. ಇದನ್ನೂ ಓದಿ: ನಾರಿಶಕ್ತಿ ಅಪಮಾನಗೊಳಿಸುವ ʻಸ್ತ್ರೀ ದ್ವೇಷಿʼಗಳಿರುವುದು ಬೇಸರ – ಶಾಮನೂರು ಶಿವಶಂಕರಪ್ಪ ವಿರುದ್ಧ ಸೈನಾ ನೆಹ್ವಾಲ್‌ ಕಿಡಿ

     

  • ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

    ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

    ನವದೆಹಲಿ: ಸೋಮವಾರ ಬೆಂಗಳೂರಲ್ಲಿ ಅಧಿಕೃತವಾಗಿ ಬಿಜೆಪಿ (BJP) ಸೇರುತ್ತಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರದ (Bengaluru Rural) ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್‌ (Dr. Manjunath) ಹೇಳಿದ್ದಾರೆ.

    ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದುವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಚುನಾವಣೆಗೆ ಸಹಕಾರ ಕೇಳಿ ಧನ್ಯವಾದ ಹೇಳಿದ್ದೇನೆ ಎಂದರು.  ಇದನ್ನೂ ಓದಿ: WPL 2024: ಅಂಪೈರ್‌ ಎಡವಟ್ಟು – ಫಿಕ್ಸಿಂಗ್‌ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್‌

     

    ವೈಯಕ್ತಿಕವಾಗಿ ಯಾರನ್ನು ಟೀಕೆ ಮಾಡಬಾರದು. ಇದೊಂದು ಧರ್ಮ ಯುದ್ಧ. ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡಲು ಅಲ್ಲ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿದ್ದಾರೆ ಒಟ್ಟು 5.42 ಕೋಟಿ ಮತದಾರರು – ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರು?

    ಕಾಂಗ್ರೆಸ್‌ನ ಡಿಕೆ ಸುರೇಶ್‌ (DK Suresh) ಅವರನ್ನು ಮಣಿಸಲು ಬಿಜೆಪಿ, ಜೆಡಿಎಸ್‌ (BJP, JDS) ಒಂದಾಗಿ ಡಾ. ಮಂಜುನಾಥ್‌ ಅವರನ್ನು ಕಣಕ್ಕೆ ಇಳಿಸಿದೆ.