Tag: ಮಂಜುನಾಥ ಗೌಡ

  • ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

    ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

    ಬೆಂಗಳೂರು: ಕಾಂಗ್ರೆಸ್ (Congress) ಮುಖಂಡ ಮಂಜುನಾಥ ಗೌಡ (Manjunath Gowda) ಜಾರಿ ನಿರ್ದೇಶನಾಲಯ (ED) ಬಿಗ್‌ ಶಾಕ್‌ ನೀಡಿದ್ದು 13.91 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ತಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

    ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (Shivamogga DCC Bank Scam) ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಳೆದ ಏಪ್ರಿಲ್ ನಲ್ಲಿ ಶಿವಮೊಗ್ಗದಲ್ಲಿ ಮಂಜುನಾಥ ಗೌಡ ಅವರ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿತ್ತು.  ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

     

    ಸ್ಥಿರ ಮತ್ತು ಚರ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

    ಶಿವಮೊಗ್ಗದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡ ಪರಪ್ಪನ ಅಗ್ರಹಾರದಲ್ಲಿ (Parappana Agrahara) ನ್ಯಾಯಾಂಗ ಬಂಧನದಲ್ಲಿದ್ದಾರೆ.

  • ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ

    ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ

    ಬೆಂಗಳೂರು/ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga)  ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

    ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ (Manjunath Gowda) ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್‌ ಗೆಸ್ಟ್‌ಹೌಸ್‌ ಮೇಲೂ ದಾಳಿ ನಡೆದಿದೆ.  ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

    ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ಅಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.

    ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇಡಿ  ಕಾನೂನು ಹೋರಾಟದ ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು.

  • ಒಂದು ಕಾಲದ ಯಡಿಯೂರಪ್ಪ ಆಪ್ತ ಸದ್ದಿಲ್ಲದೇ ಜೆಡಿಎಸ್ ಸೇರ್ಪಡೆ

    ಒಂದು ಕಾಲದ ಯಡಿಯೂರಪ್ಪ ಆಪ್ತ ಸದ್ದಿಲ್ಲದೇ ಜೆಡಿಎಸ್ ಸೇರ್ಪಡೆ

    ಬೆಂಗಳೂರು: ಒಂದು ಕಾಲದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಮಂಜುನಾಥ ಗೌಡ ಇಂದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಎದುರು 1,793 ಮತಗಳಿಂದ ಸೋತಿದ್ದರು. ಬಿ.ಎಸ್.ಯಡಿಯೂರಪ್ಪರ ಆಪ್ತ ಎಂದು ಕರೆಸಿಕೊಳ್ಳುತ್ತಿದ್ದ ಮಂಜುನಾಥ ಗೌಡ ಬಿಜೆಪಿಯನ್ನು ತೊರೆದಿದ್ದಾರೆ.

    ಮಾತೃ ಪಕ್ಷಕ್ಕೆ ವಾಪಾಸ್ಸಾಗುತ್ತಿರುವುದು ಖುಷಿ ತಂದಿದೆ. 1986-96 ರ ವರೆಗೆ ಜೆಡಿಎಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ತೀರ್ಥಹಳ್ಳಿಯಲ್ಲಿ ಜನವರಿ 09ರಂದು ಬೃಹತ್ ಸಭೆ ನಡೆಸಿದಾಗ ಕಾರ್ಯಕರ್ತರ ಇಚ್ಚೆಯನುಸಾರವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಕಟ್ಟಲು ಬದ್ಧವಾಗಿರುತ್ತೇನೆ ಅಂತಾ ದೇವೆಗೌಡರಿಗೆ ವಾಗ್ದಾನ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲಿವೆ ಅಂತಾ ಮಂಜುನಾಥ ಗೌಡ ತಿಳಿಸಿದ್ದಾರೆ.