Tag: ಮಂಜುಳಾ

  • ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಆತ್ಮಹತ್ಯೆ

    ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಆತ್ಮಹತ್ಯೆ

    ಬೆಂಗಳೂರು: ಮಲ್ಲೇಶ್ವರದ ಬಿಜೆಪಿ (BJP) ಮಂಡಲ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮತ್ತಿಕೆರೆಯಲ್ಲಿ ನಡೆದಿದೆ.

    ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಂಡಲಕ್ಕೆ ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಯಗಳ ನೇಮಕವಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: `ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಮಹಿಳೆ ಕೊಲೆ ಮಾಡಿ ಸಾಕ್ಷ್ಯ ನಾಶ – 4 ತಿಂಗಳ ಬಳಿಕ ಆರೋಪಿ ಅರೆಸ್ಟ್

    ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ, ಮಾನಸಿಕವಾಗಿ ನೊಂದಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರೋಧಿಸಿ ರೈತರ ಸಭೆ – ಬೃಹತ್ ಪಾದಯಾತ್ರೆಗೆ ನಿರ್ಧಾರ

    ಇಂದು ಮಧ್ಯಾಹ್ನ 2:30ರ ಸುಮಾರಿಗೆ ಮತ್ತಿಕೆರೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮಾಜಿ ಡಿಎಸಿಂ ಡಾ.ಸಿ.ಎನ್.ಅಶ್ವಥ್‌ ನಾರಾಯಣ್‌ ತೆರಳಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗೆ ಮುಕ್ಕಾಲು ಭಾಗ ಹಣ ಖರ್ಚು ಮಾಡಿದ್ರೆ ಆಡಳಿತ ಕಷ್ಟ: ರಂಭಾಪುರಿ ಶ್ರೀ ಅಸಮಾಧಾನ

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನ ಹುಡುಕಿ ಕೊಡಿ – ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳಾ ಲೇವಡಿ

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನ ಹುಡುಕಿ ಕೊಡಿ – ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳಾ ಲೇವಡಿ

    ಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಮೇಲ್ಛಾವಣಿ ಕುಸಿದು ಅಂಗನವಾಡಿ (Anganavadi) ಮಕ್ಕಳಿಗೆ ಗಾಯವಾಗಿರೋ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರು ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ (Manjula) ಆಗ್ರಹಿಸಿದ್ದಾರೆ‌.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಚಿವರನ್ನ ಹುಡುಕಿಕೊಂಡಿ ಅಂತ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆಯಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು 7 ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ. 4 ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೇನಾ ಮುಖ್ಯಮಂತ್ರಿಗಳ ಬಡವರ ಪರ ಕಾಳಜಿ ಕಿಡಿಕಾರಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಎಲ್ಲಿದ್ದಾರೆ? ಅವರನ್ನು ಹುಡುಕಿಕೊಡಿ ಮುಖ್ಯಮಂತ್ರಿಗಳೇ (Chief Minister) ಎಂದು ಕೇಳಿದ್ದಾರೆ.

    ಇಲ್ಲಿಗೆ ಬಡವರ- ಕೂಲಿಕಾರರ ಮಕ್ಕಳು ಬರುತ್ತಾರೆ. ಅವರಿಗೆ ಯಾವ ರಕ್ಷಣೆ ಇದೆ? ಈ ಸರಕಾರವು ಯಾವ ನೈತಿಕತೆ ಮೇಲೆ ಸದಾ ವಿಪಕ್ಷವನ್ನು ಟೀಕೆ ಮಾಡುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ತಮ್ಮ ಮನೆ ಮತ್ತು ಕಚೇರಿಯಿಂದ ಹೊರಕ್ಕೆ ಬಂದು ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂದು ಗಮನಿಸಿ ಸರಿಪಡಿಸಲಿ. ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನ

    ರಾಜ್ಯದಲ್ಲಿ ಬಾಣಂತಿಯರ ಸಾವು ನಿತ್ಯೋತ್ಸವವಾಗಿ ರಾಜ್ಯ ತಲ್ಲಣಗೊಂಡ ಸಂದರ್ಭದಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಮನೆ ಮತ್ತು ಕಚೇರಿಯಿಂದ ಹೊರಗೆ ಬಂದು ಕೆಲಸ ಮಾಡುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಅವರು ಸಚಿವೆಯಾಗಿದ್ದಾರೆ. ಇದೇನಾ ಈ ಸರ್ಕಾರ ಮಹಿಳೆಯರಿಗೆ ಕೊಡುವ ಗೌರವ ಮತ್ತು ನ್ಯಾಯ ಅಂತ ಕಿಡಿಕಾರಿದರು. ಇದನ್ನೂ ಓದಿ: ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    ಗೃಹ ಸಚಿವರ ತವರು ಜಿಲ್ಲೆ ಮಧುಗಿರಿಯಲ್ಲಿ ಡಿವೈಎಸ್ಪಿಯೊಬ್ಬರು ಠಾಣೆಗೆ ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಠಾಣೆಯಲ್ಲೇ ಮಾಡಿದ್ದಾರೆ. ಇದು ರಾಜ್ಯದಲ್ಲಿ ಮಹಿಳೆಯರಿಗೆ ಪೊಲೀಸ್ ಠಾಣೆಯಲ್ಲೇ ರಕ್ಷಣೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಗೃಹ ಇಲಾಖೆಯಲ್ಲಿ ಹೊಕ್ಕಿರುವ ಹೆಗ್ಗಣಗಳನ್ನು ಹೊರಹಾಕಿ ಪೊಲೀಸ್ ಇಲಾಖೆಗೆ ಬರುವ ಮತ್ತು ರಾಜ್ಯದಲ್ಲಿ ಬದುಕುವ ಮಹಿಳೆಯರಿಗೆ ಈ ಸರ್ಕಾರ, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಸುರಕ್ಷತೆ ಕೊಡಬೇಕೆಂದು ಅವರು ಆಗ್ರಹಿಸಿದರು. ಇದನ್ನೂ ಓದಿ: ಪ್ರೀತಿಸಿದ ಯುವತಿ-ಕುಟುಂಬಸ್ಥರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ, ರೈಲಿಗೆ ತಲೆಕೊಟ್ಟು ಭಗ್ನ ಪ್ರೇಮಿ ಆತ್ಮಹತ್ಯೆ

  • Valmiki Scam| ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ

    Valmiki Scam| ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದೆ.

    ಬೆಂಗಳೂರಿನ ಡಾಲರ್ಸ್‌ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ (Manjula) ಅವರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು ಈಗ ಅವರನ್ನು ಶಾಂತಿನಗರದ ಕಚೇರಿಗೆ ಕರೆ ತಂದುವಿಚಾರಣೆ ನಡೆಸುತ್ತಿದ್ದಾರೆ.

    ವಶಕ್ಕೆ ಪಡೆದಿದ್ದು ಯಾಕೆ?
    ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್‌ ಖಾತೆಗಳಿಗೆ (Bank Account) ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್‌ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ವಿಜಯಪುರ: ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ (Social Media) ಸದುಪಯೋಗದ ಬದಲು ದುರುಪಯೋಗವೇ ಹೆಚ್ಚಾಗುತ್ತಿದೆ. ಇನ್ನು ಕೆಲವರಂತು ಇದನ್ನೇ ಬಂಡವಾಳ ಮಾಡಿಕೊಂಡು ಹೊಸ ಹೊಸ ವಿನೂತನ ಹಣ ದೋಚಿ ಪರಾರಿಯಾಗುವ ಸುದ್ದಿಗಳು ಬಂದಿವೆ. ಇಷ್ಟಾದ್ರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಬೆಳದಿಂಗಳ ಬಾಲೆಯ ಬಲೆಗೆ ಬಿದ್ದು ಅಮಾಯಕನೋರ್ವ ಲಕ್ಷ ಲಕ್ಷ ಕಳೆದುಕೊಂಡು ಕಂಗಾಲಾದಿದ್ದಾನೆ.

    ಮೂಲತಃ ವಿಜಯಪುರ ಜಿಲ್ಲೆಯ ಅಲಮೇಲ ತಾಲೂಕಿನ ಬಗಲೂರ ಗ್ರಾಮದ ಪರಮೇಶ್ವರ್ (Parameshwar) ಹಿಪ್ಪರಗಿ. ಇವರು ಸದ್ಯ ತೆಲಾಂಗಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. ತನ್ನ ಸ್ವಗ್ರಾಮದಲ್ಲಿದ್ದಾಗ ಕಳೆದ ಜೂನ್ 29 ರಂದು ಮಂಜುಳಾ ಕೆ.ಆರ್ ಎಂಬ ಫೇಸ್ ಬುಕ್ (Facebook) ಅಕೌಂಟ್‍ನಿಂದ ಫ್ರೇಂಡ್ ರಿಕ್ವೆಸ್ಟ್ ಬಂದಿದೆ. ಅದನ್ನ ಪರಮೇಶ್ವರ್ ಕನ್ ಫರ್ಮ ಮಾಡ್ತಿದಂತೆ ಆ ಕಡೆಯಿಂದ ಯುವತಿ ಮೆಸೆಂಜರ್‍ನಲ್ಲಿ ಹಾಯ್ ಅಂತಾ ಸಂದೇಶ ಕಳಿಸಿ ಪರಮೇಶ್ವರನನ್ನ ಖೆಡ್ಡಾಕ್ಕೆ ಕೆಡವಿದ್ದಾಳೆ. ನಂತರ ಪ್ರತಿ ದಿನ ಮೆಸೇಜ್ ಮಾಡುವ ಮೂಲಕ ಅಜ್ಞಾತ ಸಖಿಯೊಂದಿಗೆ ಪರಮೇಶ್ವರ್ ಸಲುಗೆ ಬೆಳಸಿಕೊಂಡಿದ್ದಾನೆ.

    BRIBE

    ಅಕ್ಟೋಬರ್ 14 ರಂದು ತಾಯಿ ಆರೋಗ್ಯ ಸರಿಯಿಲ್ಲ 700 ರೂ ಫೋನ್ ಪೇ ಮಾಡಲು ಸಂದೇಶ ಬಂದಿದೆ. ಆಗ ಪರಮೇಶ್ವರ 2000 ರೂ ಹಾಕಿದ್ದಾನೆ. ನಂತರ ಒಂದು ವಾರದ ಕಳೆದ ಮೇಲೆ ತಾಯಿ ಮೃತಳಾಗಿದ್ದಾಳೆ ಅಂತಾ 2000 ರೂ. ಕಳಿಸಲು ಸಂದೇಶ ಬಂದಿದೆ. ಆಗಲೂ ಕೂಡ ಪರಮೇಶ್ವರ್ 2000 ರೂ ಹಾಕಿದ್ದಾನೆ. ಅದೇ ರೀತಿ ಬೆಳದಿಂಗಳ ಬಾಲೆ ಕೇಳಿದಷ್ಟು, ಕೇಳಿದಾಗೆಲ್ಲ ಪರಮೇಶ್ವರ ಹಣ ಹಾಕಿದ್ದಾನೆ. ಕೆಲ ದಿನಗಳ ನಂತರ ಮಂಜುಳಾ ಕರೆ ಮಾಡಿ ಪರಮೇಶ್ವರ್‍ಗೆ ತಾನು ಐಎಎಸ್ (IAS) ಪರೀಕ್ಷೆ ಪಾಸ್ ಆಗಿದ್ದೇನೆ. ಡಿಸಿ ಪೋಸ್ಟ್ ಸಿಗುತ್ತದೆ. ಸದ್ಯ ಹಾಸನದಲ್ಲಿದ್ದೇನೆ ನನ್ನನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಬೆಂಗಳೂರಿಗೆ ಹೋಗಬೇಕಿದ್ದು, ಖರ್ಚಿಗೆ ಹಣವಿಲ್ಲ. ಹಣಕಾಸಿನ ಸಹಾಯ ಮಾಡಿದ್ರೆ ಮದುವೆ ಆಗುತ್ತೇನೆ ಅಂತಾ ಬುರುಡೆ ಬಿಟ್ಟಿದ್ದಾಳೆ. ಇದನ್ನೂ ಓದಿ: ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

    ಇದನ್ನ ನಂಬಿ ದುರಾಸೆಗೆ ಬಿದ್ದ ಪರಮೇಶ್ವರ್ 50 ಸಾವಿರ ರೂ ಹಾಕಿದ್ದಾನೆ. ಮತ್ತೆ ಕೆಲ ದಿನಗಳ ನಂತರ ಮತ್ತಷ್ಟು ಸಲುಗೆಯಿಂದ, ಪ್ರೀತಿಯಿಂದ ಮಾತನಾಡಿ ಹಂತ, ಹಂತವಾಗಿ ಅಷ್ಟಿಷ್ಟಲ್ಲ ಬರೋಬ್ಬರಿ 41.26 ಲಕ್ಷ ಪೀಕಿದ್ದಾಳೆ. ನಂತರ ತನ್ನ ಕಿಸೆ ಖಾಲಿ ಆಗಿದೆ ಅಂತಾ ಪರಮೆಶ್ವರ್ ಮಂಜುಳಾಗೆ ಹೇಳಿದ್ದಾನೆ. ಆಗ ಪಾಪ ಸ್ವಲ್ಪ ಖರ್ಚಿಗೆ ಇರ್ಲಿ ಅಂತಾ ಪರಮೇಶ್ವರ್‍ಗೆ ಮಂಜುಳಾ 2.21 ಲಕ್ಷ ರೂ ಹಾಕಿದ್ದಾಳೆ. ತದನಂತರ ಮಂಜುಳಾ ಮತ್ತೆ ಹಣಕ್ಕೆ ಪರಮೇಸ್ವರ್‍ಗೆ ಬೇಡಿಕೆ ಇಟ್ಟಿದ್ದಾಳೆ. ಈ ವೇಳೆ ಬೆಳದಿಂಗಳ ಬಾಲೆಯ ಮೇಲೆ ಸಂಶಯ ಬಂದು ಪರಮೇಶ್ವರ್ ನವೆಂಬರ್ 15ರಂದು ವಿಜಯಪುರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದಾನೆ. ಸದ್ಯ ಸಿಂದಗಿ ಪೊಲಿಸ್ ಠಾಣೆಗೆ ಕೇಸ್ ವರ್ಗಾವಣೆ ಆಗಿದ್ದು, ಮಹಾ ವಂಚಕಿ ಬೆಳದಿಂಗಳ ಬಾಲೆ ಮಂಜುಳಾಗಾಗಿ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಸರಾಂತ ನಟ ದಿ.ಎಂ.ಪಿ.ಶಂಕರ್ ಪತ್ನಿ ಮಂಜುಳ ವಿಧಿವಶ

    ಹೆಸರಾಂತ ನಟ ದಿ.ಎಂ.ಪಿ.ಶಂಕರ್ ಪತ್ನಿ ಮಂಜುಳ ವಿಧಿವಶ

    ನ್ನಡ ಸಿನಿಮಾ ರಂಗದ ಖ್ಯಾತ ಪೋಷಕ ನಟ, ನಿರ್ಮಾಪಕ ದಿ.ಎಂ.ಪಿ ಶಂಕರ್ ಪತ್ನಿ ಮಂಜುಳಾ ಶಂಕರ್ ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಕೆಲವು ದಿನಗಳ ಹಿಂದೆಯಷ್ಟೇ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆ ಕಾರಣದಿಂದಾಗಿ ಆಂಜಿಯೋಗ್ರಾಮ್ ಕೂಡ ಮಾಡಲಾಗಿತ್ತು. ದಿಢೀರ್ ಅಂತ ಮತ್ತೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಎಂ.ಪಿ.ಶಂಕರ್ ಅವರು ನಟನೆಯ ಜೊತೆಗೆ ನಿರ್ಮಾಣ ಕಾರ್ಯದಲ್ಲೂ ಬ್ಯುಸಿಯಾಗಿದ್ದಾಗ ಅವರಿಗೆ ಸಾಥ್ ನೀಡಿದವರು ಮಂಜುಳ. ಶೂಟಿಂಗ್ ಸ್ಪಾಟ್ ನಲ್ಲೂ ಶಂಕರ್ ಅವರ ಜತೆ ಮಂಜುಳಾ ಅವರು ಇರುತ್ತಿದ್ದರು. ಶಂಕರ್ ಸಿನಿಮಾವನ್ನು ನೋಡಿಕೊಳ್ಳುತ್ತಿದ್ದರೆ, ಕುಟುಂಬದ ಜವಾಬ್ದಾರಿಯನ್ನು ಮಂಜುಳಾ ಅವರು ಹೊತ್ತಿದ್ದರು. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ಕನ್ನಡದ ಹೆಸರಾಂತ ನಟ ಶಂಕರ್ ಅವರು, ನಟನಾಗಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ವೀರಬಾಹು ಪಾತ್ರದ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿದ್ದರು. ಡಾ.ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರಕ್ಕೆ ಇದೇ ಶಂಕರ್ ನಿರ್ಮಾಪಕರು ಎನ್ನುವುದು ವಿಶೇಷ.