Tag: ಮಂಡಿ ಕ್ಷೇತ್ರ

  • ನನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ತನ್ನಿ: ಕಂಗನಾ ರಣಾವತ್‌!

    ನನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ತನ್ನಿ: ಕಂಗನಾ ರಣಾವತ್‌!

    ನವದೆಹಲಿ: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆಯೂ ಆಗಿರುವ ನಟಿ ಕಂಗನಾ ರಣಾವತ್‌ (Kangana Ranaut) ತಮ್ಮನ್ನು ಭೇಟಿ ಮಾಡಲು ಬಯಸುವವರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ (Aadhaar Card) ತನ್ನಿ ಎಂದು ಹೇಳಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಹೆಚ್ಚಿನ ಸಂಖ್ಯೆಯ ಪ್ರವಾಸಿಗರು (Tourists) ಹಾಗೂ ಹೊರಗಿನವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೊಳಿಸುತ್ತಿರುವುದಾಗಿ ಕಂಗನಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮಂಡಿ ಕ್ಷೇತ್ರದಲ್ಲಿದ್ದರೆ ನಿಯೋಜಿತವಾದ ಸಂವಾದ ಕೇಂದ್ರದಲ್ಲಿ ಸಂದರ್ಶಕರನ್ನ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

    ಹಿಮಾಚಲ ಪ್ರದೇಶದ (Himachal Pradesh) ದೊಡ್ಡ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹೆಚ್ಚಿನ ಪ್ರವಾಸಿಗರು ಬರುವುದರಿಂದ ಕ್ಷೇತ್ರದ ಜನರಿಗೆ ಅನಾನುಕೂಲ ಆಗಬಹುದು. ಹಾಗಾಗಿ ಕ್ಷೇತ್ರದ ಜನ ಆಧಾರ್‌ ಕಾರ್ಡ್‌ ಹೊಂದುವುದು ಕಡ್ಡಾಯವಾಗಿದೆ. ಕ್ಷೇತ್ರದ ಯಾವುದೇ ಕೆಲಸಕ್ಕೆ ಸಂಬಂಧಿಸಿದ ವಿವರವನ್ನು ಒಂದು ಪತ್ರದಲ್ಲಿ ಬರೆದುಕೊಡಬೇಕು. ಇದರಿಂದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವುದು ಸುಲಭವೂ ಆಗುತ್ತದೆ. ಜೊತೆಗೆ ಅನಾನುಕೂಲವಾಗದಂತೆ ಎಚ್ಚರ ವಹಿಸಬಹುದು ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ: ಅಪರ್ಣಾಗೆ ಇಷ್ಟು ಬೇಗ ಸಾವು ಪಟ್ ಅಂತ ಬರುತ್ತೆ ಎಂದು ಗೊತ್ತಿರಲಿಲ್ಲ: ಮಂಡ್ಯ ರಮೇಶ್

    ಕಾಂಗ್ರೆಸ್‌ ಕಿಡಿ:
    ಕಂಗನಾ ರಣಾವತ್‌ ಅವರ ಈ ಹೇಳಿಕೆಗೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ. ಕಂಗನಾ ವಿರುದ್ಧ 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್, ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಮಗೆ ಕುರಾನೇ ಮೊದಲ ಸಂವಿಧಾನ: ಸುಪ್ರೀಂ ತೀರ್ಪಿನ ಬಗ್ಗೆ ಮುಸ್ಲಿಂ ಮಹಿಳೆ ಪ್ರತಿಕ್ರಿಯೆ

    ಜನರು ಜನಪ್ರತಿನಿಧಿಗಳನ್ನು ಭೇಟಿಯಾಗಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ. ಜನಪ್ರತಿನಿಧಿಗಳು ರಾಜ್ಯದ ಪ್ರತಿಯೊಂದು ವರ್ಗದ ಜನರನ್ನೂ ಭೇಟಿ ಮಾಡುವುದು ನಮ್ಮ ಜವಾಬ್ದಾರಿ. ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ, ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ – ಸಿಐಎಸ್‌ಎಫ್‌ ಅಧಿಕಾರಿಗೆ ಸ್ಪೈಸ್‌ಜೆಟ್‌ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ 

  • ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್‌ಗೆ ಗುಡ್‌ಬೈ – ಕಂಗನಾ

    ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್‌ಗೆ ಗುಡ್‌ಬೈ – ಕಂಗನಾ

    – ವರ್ಷದ ಸಂಸದೆ ಪ್ರಶಸ್ತಿ ಪಡೆದರೆ, ಅದೇ ಸಾರ್ಥಕ ಎಂದ ನಟಿ

    ಶಿಮ್ಲಾ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ನಟಿ ಕಂಗನಾ ರಣಾವತ್‌ (Kangana Ranaut) ಘೋಷಣೆ ಮಾಡಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳ ಚಿತ್ರೀಕರಣ ಮುಕ್ತಾಯಗೊಳಿಸುತ್ತೇನೆ. ಅನಂತರ ಹಂತ-ಹಂತವಾಗಿ ಬಾಲಿವುಡ್‌ಗೆ (Bollywood) ವಿದಾಯ ಹೇಳುತ್ತೇನೆ. ಬಹಳ ಜನ ನಿರ್ಮಾಪಕರು ಹೇಳ್ತಾರೆ ನಿಮ್ಮಲ್ಲಿ ಒಳ್ಳೆಯ ನಾಯಕಿ ಇದ್ದಾರೆ. ದಯವಿಟ್ಟು ನಟನೆ ಬಿಡಬೇಡಿ ಎಂದು ಕೇಳಿಕೊಂಡಿದ್ದಾರೆಂಬುದಾಗಿಯೂ ತಿಳಿಸಿದ್ದಾರೆ.

    ಮುಂದುವರಿದು ಮಾತನಾಡಿ, ನನಗೆ ಈವರೆಗೆ ಹಲವಾರು ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ಸಿಕ್ಕಿವೆ. ಆದ್ರೆ ಮುಂಬರುವ ಸಮಯದಲ್ಲಿ ವರ್ಷದ ಸಂಸದ ಪ್ರಶಸ್ತಿ ಪಡೆದರೆ, ಅದೇ ನನಗೆ ಸಾರ್ಥಕ. ನಮ್ಮ ಪಕ್ಷದಲ್ಲಿ ನಮ್ಮ ಭರವಸೆಗಳು, ಮೋದಿಯವರ ಗ್ಯಾರಂಟಿಗಳನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಆದ್ರೆ ಇತರ ಪಕ್ಷಗಳಲ್ಲಿ ನಮ್ಮಷ್ಟು ಕಟ್ಟುನಿಟ್ಟಾದ ಶಿಷ್ಟಾಚಾರ ಹೊಂದಿರುವುದನ್ನು ನಾನು ನೋಡಿಲ್ಲ. ಆದ್ದರಿಂದ ರಾಜಕೀಯ ರಂಗದಲ್ಲಿ ಸೇವೆ ಮಾಡಬೇಕು ಅನ್ನೋದು ನನ್ನ ಮುಂದಿನ ಗುರಿಯಾಗಿದೆ ಎಂದು ಕಂಗನಾ ಹೇಳಿಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಮಂಡಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಂಗನಾ, ತಮ್ಮ ಆಸ್ತಿ ಮೌಲ್ಯವನ್ನೂ ಘೋಷಿಸಿಕೊಂಡಿದ್ದರು. ಚಿನ್ನಾಭರಣ, ಕಾರು, ಸ್ಥಿರಾಸ್ತಿ ಸೇರಿದಂತೆ 91 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಅಲ್ಲದೇ 17 ಕೋಟಿ ರೂ. ಸಾಲ ಹೊಂದಿರುವುದಾಗಿ ಘೋಷಿಸಿಕೊಂಡಿದ್ದರು.