Tag: ಮಂಡ್ಯ ಎಸ್ಪಿ

  • ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

    ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

    ಮಂಡ್ಯ: 9 ಕೋಟಿ ರೂ. ಚಿನ್ನ ವಂಚನೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿರುವ ಐಶ್ವರ್ಯ ಗೌಡ (Aishwarya Gowda) ವಿರುದ್ಧ ಮತ್ತೆ ಸಾಲುಸಾಲು ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ ಸ್ವತಃ ಮಂಡ್ಯ ಎಸ್ಪಿ (Mandya SP) ಮಲ್ಲಿಕಾರ್ಜುನ ಬಾಲದಂಡಿ, ಐಶ್ವರ್ಯ ಗೌಡರಿಂದ ಏನಾದರೂ ಜನರು ವಂಚನೆಗೆ ಒಳಗಾಗಿದ್ದರೆ ಧೈರ್ಯದಿಂದ ದೂರು ನೀಡವಂತೆ ಮನವಿ ಮಾಡಿದ್ದಾರೆ.

    ನಾನು ಡಿ.ಕೆ.ಸುರೇಶ್‌ಗೆ ತಂಗಿ, ನಿಖಿಲ್ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ನನಗೆ ತುಂಬಾ ಪರಿಚಯ. ನಿಮಗೆ ಏನಾದರೂ ಕೆಲಸ ಆಗಬೇಕಿದ್ದರೆ ಹೇಳಿ, ನಾನು ಅವರಿಂದ ಮಾಡಿಸಿಕೊಡುತ್ತೇನೆ. ಹೀಗೆ ಬಣ್ಣಬಣ್ಣದ ಮಾತಿನಿಂದ ಜನರನ್ನು ಯಾಮಾರಿಸಿ ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಚಾಲಾಕಿ ಐಶ್ವರ್ಯ ಗೌಡಳ ಮೇಲೆ ಬಂದಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ಮಂಡ್ಯದಲ್ಲೂ ಸಹ ಖತರ್ನಾಕ್ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ವಿರುದ್ಧ ಪ್ರಕರಣ ದಾಖಲಾಗುತ್ತಿವೆ. ಇದನ್ನೂ ಓದಿ: ಉಡುಪಿ| ಗ್ರಾಪಂ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ – ಹಿಂದೂ ಸಂಘಟನೆಗಳ ಅಸಮಾಧಾನ

    ಐಶ್ವರ್ಯಗೌಡ ವಿರುದ್ಧ ಕೆಲವರು ಈಗಾಗಲೇ ದೂರು ನೀಡಿದ್ದರೆ, ಇನ್ನೂ ಹಲವರು ಎಸ್ಪಿ ಕಚೇರಿ ಹಾಗೂ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ತೆರಳಿ ಐಶ್ವರ್ಯ ಗೌಡ ವಿರುದ್ಧ ದೂರು ನೀಡಲು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಸೂಕ್ತ ದಾಖಲೆಗಳನ್ನು ತಂದು ದೂರು ದಾಖಲಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಪೋರ್ಟ್ ರಸ್ತೆ ಸವಾರರಿಗೆ ಗುಡ್‌ನ್ಯೂಸ್ – ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜು

  • ‘ರಸ್ತೆ ಸುರಕ್ಷತಾ ನಿಯಮದ ಅರಿವಿಲ್ಲದಿರುವುದು ಒಂದು ಸಾಂಕ್ರಾಮಿಕ ರೋಗ’

    ‘ರಸ್ತೆ ಸುರಕ್ಷತಾ ನಿಯಮದ ಅರಿವಿಲ್ಲದಿರುವುದು ಒಂದು ಸಾಂಕ್ರಾಮಿಕ ರೋಗ’

    ಮಂಡ್ಯ: ಈ ಹಿಂದೆ ಸಾಂಕ್ರಾಮಿಕ ರೋಗಗಳಾದ ಕಾಲರಾ ಮತ್ತು ಪ್ಲೇಗ್‍ಗಳು ಬಂದಾಗ ಸಾವಿರಾರು ಗ್ರಾಮೀಣ ಜನರು ಸೂಕ್ತ ಚಿಕಿತ್ಸೆಯಿಲ್ಲದೇ ಅಕಾಲಿಕವಾದ ಮೃತ್ಯುವಿಗೆ ಶರಣಾಗುತ್ತಿದ್ದರು. ಆದರೆ ಈಗ ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ರಸ್ತೆ ಅಪಘಾತಗಳಲ್ಲಿ ಬೇಜವಾಬ್ದಾರಿತನದಿಂದ ಅಕಾಲಿಕವಾಗಿ ಸಾಯುವ ಜನರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಕೆ.ಆರ್.ಪೇಟೆ ಪಟ್ಟಣ್ಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅಭಿಪ್ರಾಯ ಪಟ್ಟಿದ್ದಾರೆ.

    ಕೆ.ಆರ್.ಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ನಾಗಮಂಗಲದ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ರಸ್ತೆ ಸುರಕ್ಷತಾ ನಿಯಮದ ಬಗ್ಗೆ ಅರಿವು ಮೂಡಿಸುವ ಪೋಸ್ಟರ್ ಮತ್ತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

    ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣವು ಹೋಗುತ್ತದೆ. ನಾವುಗಳು ಶಾಶ್ವತವಾಗಿ ಅಂಗವಿಕಲರಾಗುತ್ತೇವೆ ಎಂದು ತಿಳಿದಿದ್ದರೂ ಅಡ್ಡಾದಿಡ್ಡಿಯಾಗಿ ಬೇಕಾಬಿಟ್ಟಿ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಬಲಿಯಾಗಿ ನಮ್ಮನ್ನು ನಂಬಿರುವ ಕುಟುಂಬದ ಸದಸ್ಯರು, ತಂದೆ-ತಾಯಿ, ಹೆಂಡತಿ-ಮಕ್ಕಳನ್ನು ಅನಾಥರನ್ನಾಗಿ ಮಾಡುತ್ತಿದ್ದೇವೆ ಎಂದರು.

    ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳದೇ ಮೊಬೈಲ್ ಫೋನಿನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳದೇ ವಾಹನವನ್ನು ಚಾಲನೆ ಮಾಡುವುದರಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

  • ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ

    ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ

    ಶಿವಮೊಗ್ಗ: ಓರ್ವ ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೇನೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಸಿಎಂ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಬಾವುಟ ಹಿಡಿದು ಏಕಾಏಕಿ ನಾನು ಹೋಗುತ್ತಿದ್ದ ಕಾರಿಗೆ ಅಡ್ಡ ಬಂದ. ಏನಾದರೂ ಅನಾಹುತ ಆಗಿದ್ದರೆ ಎಂಬ ಕಾರಣದಿಂದ ಎಸ್ಪಿಗೆ ಹೇಳಿದ್ದೆ. ಸರ್ಕಾರದ ಮುಖ್ಯಸ್ಥನಾಗಿ ಹೇಳಿದ್ದೇನೆ ಹೊರತು ಕಪ್ಪು ಬಾವುಟ ಪ್ರದರ್ಶನಕ್ಕೆ ಅಲ್ಲ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

    ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಲು ಸಿದ್ಧವಿದೆ. ಅದರೆ, ಕೇಂದ್ರ ಸರ್ಕಾರ ಮೊದಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ರಾಷ್ಟ್ರ ಮಟ್ಟದಲ್ಲಿ ಮಹಾಮೈತ್ರಿ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಅಂತಾ ಹೇಳಿದ್ರು.

    ಸಿಎಂ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಸ್ವತಃ ಪೂರ್ವ ವಲಯ ಐಜಿ ಡಾ.ಸಲೀಂ ಉಸ್ತುವಾರಿಯ ನೇತೃತ್ವ ವಹಿಸಿದ್ದರು. ಎಸ್ಪಿ ಅಭಿನವ್ ಖರೆ ಇನ್ನಿತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮಗಳ ನಡೆಯಲಿರುವ ಸ್ಥಳಗಳ ಬಂದೋಬಸ್ತ್ ಗೆ ನಿಂತಿದ್ದರು. ಸಿವಿಲ್ ಡ್ರೆಸ್‍ನಲ್ಲೆ ಹೆಚ್ಚು ಪೊಲೀಸರು ನಿಯೋಜಿತಗೊಂಡು, ಪ್ರತಿಭಟನೆ ಹತ್ತಿಕ್ಕಲು ಸಜ್ಜುಗೊಂಡಿದ್ದರು.

    ಇದನ್ನೂ ಓದಿಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ