Tag: ಮಂಡ್ಯ ದುರಂತ

  • ಮಂಡ್ಯ ದುರಂತ: ಮೋದಿ, ರಾಹುಲ್ ಗಾಂಧಿ ಸಂತಾಪ

    ಮಂಡ್ಯ ದುರಂತ: ಮೋದಿ, ರಾಹುಲ್ ಗಾಂಧಿ ಸಂತಾಪ

    ಮಂಡ್ಯ: ಜಿಲ್ಲೆಯಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

    ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸುದ್ದಿ ಕೇಳಿ ದಿಗ್ಭ್ರಮೆ ಆಯ್ತು. 20ಕ್ಕೂ ಹೆಚ್ಚು ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಕುಟುಂಬಸ್ಥರಿಗೆ ದೇವರು ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

    ಕರ್ನಾಟಕದ ಮಂಡ್ಯದಲ್ಲಿ ನಡೆದ ಅಪಘಾತ ಸುದ್ದಿ ಕೇಳಿ ತುಂಬಾ ನೋವು ಆಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳ ಜೊತೆಯಲ್ಲಿದ್ದೇವೆ. ಸಾವನ್ನಪ್ಪಿದ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನ ಮಂತ್ರಿ ಕಾರ್ಯಲಯ ಟ್ವಟ್ಟರ್ ಖಾತೆಯಿಂದ ಸಂತಾಪ ಸೂಚಿಸಿ ಟ್ವೀಟ್ ಮಾಡಲಾಗಿದೆ.

    ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 30ಕ್ಕೂ ಜನರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಲೋಹಿತ್ ಮತ್ತು ಗಿರೀಶ್ ಎಂಬವರು ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಬದುಕುಳಿದ ವಿದ್ಯಾರ್ಥಿ ಕೂಡಲೇ ನೆರೆಯ ಗ್ರಾಮಸ್ಥರಿಗೆ ಮಾಹಿತಿ ತಲುಪಿಸಿದ್ದಾನೆ. ವಿಷಯ ತಿಳಿದ ಗ್ರಾಮಸ್ಥರು ತಮ್ಮ ಹಗ್ಗದ ಸಹಾಯದಿಂದ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಬಸ್ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರಿಂದ ಎಲ್ಲರು ಜಲಸಮಾಧಿ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv