Tag: ಮಂಡ್ಯ ಬಂದ್‌

  • ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೇ ಬದುಕಿದ್ದೂ ಸತ್ತಂತೆ: ಸಿ.ಟಿ ರವಿ ಆಕ್ರೋಶ

    ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೇ ಬದುಕಿದ್ದೂ ಸತ್ತಂತೆ: ಸಿ.ಟಿ ರವಿ ಆಕ್ರೋಶ

    ಮಂಡ್ಯ: ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧನಿ ಎತ್ತದಿದ್ದರೇ ಬದುಕಿದ್ದೂ ಸತ್ತಂತೆ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi) ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಪ್ರತಿಭಟನೆಯಲ್ಲಿ (Cauvery Protest) ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೇ ಬದುಕಿದ್ದೂ ಸತ್ತಂತೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    `ನನ್ನ ನೀರು-ನನ್ನ ಹಕ್ಕು’ ಅಂತ ಪ್ರತಿಭಟನೆ ಮಾಡಿದವರಿಂದ ನಮಗೆ ಅನ್ಯಾಯವಾಗಲ್ಲ ಅಂದುಕೊಂಡಿದ್ದೇವು. ತಮಿಳುನಾಡು ಕೇಳುವ ಮುನ್ನವೇ ನೀರು ಯಾಕೆ ಬಿಟ್ಟರು? ವಾಸ್ತವ ಸ್ಥಿತಿಯನ್ನ ಸರಿಯಾಗಿ ಮನವರಿಕೆ ಮಾಡಿಕೊಡಲಿಲ್ಲ. ಹೋರಾಟ ಮಾಡಬೇಕಾದವರು ಮಂಡ್ಯದ ಜನ ಮಾತ್ರವಲ್ಲ. ಬೆಂಗಳೂರಿನ ಜನ (Bengaluru People) ಏನು ಮಾಡುತ್ತಿದ್ದಾರೆ? ಇದು ಸರ್ಕಾರದ ಅಸಹಾಯಕತೆಯೋ ಅಥವಾ ತಮಿಳುನಾಡು ಜೊತೆ ಸೇರಿ ಬೆಂಗಳೂರು ಜನರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದೋ ಗೊತ್ತಿಲ್ಲ. ಆದ್ರೆ ರಾಜಕೀಯ ಸಂಬಂಧಕ್ಕೆ ರೈತರನ್ನು ಸರ್ಕಾರ ಬಲಿ ಕೊಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಅಧಿಕಾರದಲ್ಲಿ ಇದ್ದಾಗಲೂ ಗೂಂಡಾ, ದಾಷ್ಟ್ಯ ಪ್ರದರ್ಶಿಸಬಾರದು. ದಾಷ್ಯ ಪ್ರದರ್ಶನ ಅಧಿಕಾರದಲ್ಲಿ ಇದ್ದವರಿಗೆ ಇರಬಾರದು. ಗೂಂಡಾತನ, ದಾಷ್ಟ್ಯತನ ಪ್ರದರ್ಶಿಸುವವರಿಗೆ ಈ ನಾಡಿನ ಜನ ಮದ್ದು ಅರೆದಿದ್ದಾರೆ ಅದು ನೆನಪಿರಲಿ. ನೀರು ಬಿಡಲ್ಲ ಅಂತಾ ಸರ್ಕಾರ ನಿರ್ಣಯ ತೆಗೆದುಕೊಳ್ಳಿ ಅದು ಏನಾಗುತ್ತದೋ ಆಗಲಿ, ನಾವು ನಿಮ್ಮ ಜೊತೆಗೆ ಇರುತ್ತೇವೆ ಎಂದು ಸರ್ಕಾರಕ್ಕೆ ಅಭಯ ನೀಡಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ

    ಇದೇ ವೇಳೆ ಜೆಡಿಎಸ್ ಮುಖಂಡ ಕೆ.ಟಿ ಶ್ರೀಕಂಠೇಗೌಡ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ತಮಿಳುನಾಡಿಗೂ ಸೂಟ್‌ಕೇಸ್ ಸಂಬಂಧವಿದೆ. ಅವರ ಚುನಾವಣೆಗೆ ಇವರು ಸೂಟ್‌ಕೇಸ್ ಕೊಟ್ಟಿದ್ದರು. ಇವರ ಚುನಾವಣೆಗೆ ಅವರು ಸೂಟ್‌ಕೇಸ್ ಕೊಟ್ಟಿದ್ದರು. ಸೂಟ್‌ಕೇಸ್ ಸಂಬಂಧದಲ್ಲೇ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಲಿ. ಪ್ರಧಾನಿಗಳು ತಮಿಳುನಾಡು ಸರ್ಕಾರಕ್ಕೆ ಬುದ್ಧಿ ಹೇಳಿದರೆ ಕೇಳುತ್ತಾರಾ? ಸೋನಿಯಾಗಾಂಧಿ ಹೇಳಿದ್ರೆ ತಮಿಳುನಾಡು ಸರ್ಕಾರ ಕೇಳುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಆರಂಭಿಸಿರುವ ರೈತರ ಹೋರಾಟದ ಕಿಚ್ಚು ಕಟ್ಟೆಯೊಡೆದಿದೆ.

    ಮಂಡ್ಯ ಬಂದ್ (Mandya Bandh) ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರು (Farmers), ಕನ್ನಡಪರ ಹಾಗೂ ಪ್ರಗತಿ ಪರ ಸಂಘನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರೂ ಸಹ ಪ್ರತಿಭಟನೆಗೆ ಧುಮುಕಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ

    ಈ ವೇಳೆ ಮಂಡ್ಯದಲ್ಲಿ ಕೆಲ ರೈತರು ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರುಬಿಟ್ಟು ರೈತರ ಬಾಯಿಗೆ ಮಣ್ಣುಹಾಕಿದೆ ಎಂದು ಹೇಳಿ ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯ, ಮದ್ದೂರ್ ಬಂದ್- ಪೊಲೀಸ್ ಬಿಗಿ ಭದ್ರತೆ

    ಸಿದ್ದರಾಮಯ್ಯ (Siddaramaiah) ಬರಗಾಲದ ಸಿಎಂ, ಬರಗಾಲದ ಮುಖ್ಯಮಂತ್ರಿ ಬಂದ್ರೆ ಬರಗಾಲವೇ ಉಂಟಾಗುತ್ತೆ. ಜಲಸಂಪನ್ಮೂಲ ಸಚಿವರು ಮಂಡ್ಯ ಬಂದ್ ಮಾಡಿದ್ರೇ ಏನೂ ಆಗಲ್ಲ ಅಂತಾರೆ ಇವರಿಗೆ ಮಾನವೀಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕಿದೆ. ನಾವು ಹೆಂಡತಿಯ ತಾಳಿ ಅಡವಿಟ್ಟು ಬೋರ್‌ವೆಲ್ ಕೊರೆಸಿದ್ದೇವೆ. ಆದ್ರೆ ನೀರು ಬಾರದೇ ಬೆಳೆಗಳು ಹಾಳಾಗುತ್ತಿವೆ. ಈ ಸರ್ಕಾರ ಇಡೀ ಮಂಡ್ಯ ಜಿಲ್ಲೆಯ ರೈತರು ಮಣ್ಣು ತಿನ್ನುವಂತೆ ಮಾಡಿದೆ. ಅದಕ್ಕಾಗಿ ನಾವೇ ಮಣ್ಣು ಹಾಕಿಕೊಳ್ತಿದ್ದೇವೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿಗಾಗಿ ಶನಿವಾರ ಮಂಡ್ಯ ಬಂದ್ – ಏನಿರುತ್ತೆ? ಏನಿರಲ್ಲ?

    ಕಾವೇರಿಗಾಗಿ ಶನಿವಾರ ಮಂಡ್ಯ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕಾವೇರಿ (Cauvery) ವಿಚಾರ ಕಾಂಗ್ರೆಸ್ ಸರ್ಕಾರದ (Congress Government) ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪ್ರಾಧಿಕಾರದ ಆದೇಶದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡದ ಕಾರಣ ರಾಜ್ಯ ಸರ್ಕಾರ ಅನಿವಾರ್ಯವಾಗಿ ತಮಿಳುನಾಡಿಗೆ (Tamil Nadu) ನೀರು ಹರಿಸತೊಡಗಿದೆ. ಸಹಜವಾಗಿಯೇ ಇದು ಕಾವೇರಿ ಕೊಳ್ಳದ ಜನರ ಆಕ್ರೋಶಕ್ಕೆ ಕಾರಣವಾಗಿದ್ದು ರೈತ ಹಿತರಕ್ಷಣಾ ಸಮಿತಿ ಶನಿವಾರ ಮಂಡ್ಯ ಬಂದ್‌ಗೆ (Mandya Bandh) ಕರೆ ನೀಡಿದೆ.

    ಈ ಬಂದ್‌ಗೆ ಎಲ್ಲಾ ಸಂಘಟನೆಗಳು ಬೆಂಬಲ ಘೋಷಿಸಿವೆ. ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಲಿದ್ದು, ವಾಹನ ಸಂಚಾರ, ಶಾಲೆ ಕಾಲೇಜು ಬಂದ್ ಆಗಲಿವೆ. ಸರ್ಕಾರಿ ಕಚೇರಿಗಳು ತೆರೆಯವುದು ಅನುಮಾನ. ತುರ್ತು ಮತ್ತು ಅಗತ್ಯ ಸೇವೆಗಳು ಮಾತ್ರ ಮಂಡ್ಯದಲ್ಲಿ ಲಭ್ಯ ಇರುತ್ತವೆ. ಇಂದು ಬೈಕ್‌ ರ‍್ಯಾಲಿ ಮೂಲಕ ಬಂದ್ ಜಾಗೃತಿ ಮೂಡಿಸಲಾಗಿದೆ. ಇದನ್ನೂ ಓದಿ: ಎನ್‌ಡಿಎ ಕೂಟ ಸೇರಿದ ಜೆಡಿಎಸ್‌ – ದೋಸ್ತಿ ಲೆಕ್ಕಾಚಾರ ಏನು? ಸೀಟ್ ಹಂಚಿಕೆ ಸೂತ್ರ ಏನು?

    ಭಾನುವಾರ ಮದ್ದೂರು (Madduru) ಕೂಡ ಸ್ತಬ್ಧ ಆಗಲಿದೆ. ಈ ಬಂದ್ ದಶಪಥದ ರಸ್ತೆಯ ಮೇಲೆ ಪರಿಣಾಮ ಬೀರುವ ಎಲ್ಲಾ ಸಾಧ್ಯತೆಗಳು ಇವೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಶನಿವಾರ ಅತ್ತಿಬೆಲೆ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈಗಾಗಲೇ ತಮಿಳುನಾಡು ಗಡಿಯಲ್ಲಿ ರಸ್ತೆ ತಡೆಗಳು ಶುರುವಾಗಿವೆ. ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲು ಕರವೇ ತೀರ್ಮಾನಿಸಿದೆ. ಕರವೇ ನಾರಾಯಣಗೌಡರ ಬಣ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಚಿಂತನೆ ನಡೆಸಿದೆ.

    ಈ ನಡುವೆ ಬಿಜೆಪಿ (BJP) ಬೆಂಗಳೂರು (Bengaluru) ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

    ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

    ಬೆಂಗಳೂರು/ಮಂಡ್ಯ: ಕಾವೇರಿಗಾಗಿ ನಾಳೆ ಮಂಡ್ಯ (Mandya) ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಮಂಡ್ಯ ಬಂದ್ (Mandya Bandh) ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್ (KSR), ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ (Police Protection) ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಬಂದ್, ಪ್ರತಿಭಟನೆ ಮಾಡೋದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ. ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡ್ತಿದ್ದಾರೆ. ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದರೆ ಅದನ್ನ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ದಾಳಿ ಮಾಡಿದ್ದ ಆರೋಪಿಯನ್ನು ಎನ್‌ಕೌಂಟರ್ ನಡೆಸಿ ಹತ್ಯೆ

    ಇನ್ನೂ ಸುಪ್ರೀಂ (Supreme Court) ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರೋ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು. ಇದನ್ನೂ ಓದಿ: ಇಸ್ಲಾಮಿಕ್‌ ಪ್ರಾರ್ಥನೆ ಬಳಿಕ ಹಂದಿ ಮಾಂಸ ಸೇವನೆ; ಟಿಕ್‌ಟಾಕ್‌ ಸ್ಟಾರ್‌ಗೆ 2 ವರ್ಷ ಜೈಲು

    ಇವತ್ತು ಕೂಡಾ ನೀರಿನ ಪ್ರಮಾಣ ಕೆಆರ್‌ಎಸ್‌ನಲ್ಲಿ ಕಡಿಮೆ ಇದೆ. ಒಳ ಹರಿವು ಕಡಿಮೆ ಇದೆ. ನೀರಿನ ಮಟ್ಟ ಹೆಚ್ಚುತ್ತಿಲ್ಲ ನಮ್ಮಲ್ಲಿ ನೀರಿಲ್ಲ ಅಂತ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ ಸುಪ್ರೀಂ ಕೋರ್ಟ್ ಬೋರ್ಡ್ ಸೂಚನೆಯಂತೆ ನೀರು ಬಿಡಲು ಹೇಳಿದೆ. ಹೀಗಾಗಿ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಚರ್ಚೆ ಬಳಿಕ ಯಾವ ತೀರ್ಮಾನ ಮಾಡೋದು ಅಂತ ನಿರ್ಧಾರ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್‌ಗೆ ಕರೆ

    ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್‌ಗೆ ಕರೆ

    ಮಂಡ್ಯ: ತಮಿಳುನಾಡಿಗೆ ನೀರು (Water For Tamil Nadu) ಬಿಡುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.

    ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ (ಇಂದು) ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್‌ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಸೆ.22) ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್‌ (Mandya Bandh) ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

    ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಜ್ಯದಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರದಲ್ಲೂ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ

    ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ರೈತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ರೈತಪರ ನಿಲುವುಗಳನ್ನ ಕೈಗೊಳ್ಳಬೇಕು, ತಮಿಳುನಾಡಿಗೆ ನೀರು ನಿಲ್ಲಿಸಲು ಬೇಕಾದ ಕ್ರಮ ಕೈಗೊಳ್ಳಿ. ಬೇಕಿದ್ದರೆ ನಿಮ್ಮ ಜೊತೆಗೆ ನಾವೂ ಜೈಲಿಗೆ ಬರ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾವೇರಿ ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ – ಜಿ ಪರಮೇಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಂಡ್ಯ ನಗರ ಬಂದ್‌ – ಕೆಎಸ್‍ಆರ್‌ಟಿಸಿ ಸಂಚಾರ ಇಳಿಮುಖ

    ಇಂದು ಮಂಡ್ಯ ನಗರ ಬಂದ್‌ – ಕೆಎಸ್‍ಆರ್‌ಟಿಸಿ ಸಂಚಾರ ಇಳಿಮುಖ

    ಮಂಡ್ಯ: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್‌ಗೆ ಕರೆ ನೀಡಿದೆ.

    ಮಂಡ್ಯ ಬಂದ್‌ಗೆ (Mandya Bandh) ಕೆಲ ದಲಿತ ಸಂಘಟನೆಗಳು, ರೈತ (Farmers) ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್‌ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದೆ.

    ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿ.25ಕ್ಕೆ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ?

    ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್‌ ಕಬ್ಬಿಗೆ ಕನಿಷ್ಠ 500 ರೂ. ಎಚ್ಚುವರಿ ಎಸ್‌ಎಪಿ ಘೋಷಣೆಯಾಗಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ.

    ಮಂಡ್ಯ ನಗರದ ಅಂಗಡಿ ಮುಗ್ಗಟುಗಳು ಬಂದ್ ಆಗಿದ್ದು, ಕೆಎಸ್‍ಆರ್‌ಟಿಸಿ ಬಸ್ ಸಂಚಾರ ಇಳಿಮುಖ ಆಗಿದೆ.  ಬೆಳಗ್ಗೆ10 ಗಂಟೆಗೆ ರೈತರು ಹೆದ್ದಾರಿ ತಡೆದು ಪ್ರತಿಭಟನೆ, ಬೈಕ್ ರ್‍ಯಾಲಿ  ನಡೆಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]