Tag: ಮಂಡ್ಯ ವಿದ್ಯಾರ್ಥಿನಿ

  • ಅಲ್ಲಾಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ತಮಿಳುನಾಡಿನಿಂದ ಪ್ರಶಸ್ತಿ ಪ್ರಕಟ

    ಅಲ್ಲಾಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ತಮಿಳುನಾಡಿನಿಂದ ಪ್ರಶಸ್ತಿ ಪ್ರಕಟ

    ಚೆನ್ನೈ: ಮಂಡ್ಯ ಕಾಲೇಜು ಹುಡುಗರ ಮುಂದೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ಪಿಇಎಸ್ ಕಾಲೇಜು ವಿದ್ಯಾರ್ಥಿನಿ ಮುಸ್ಕಾನ್ ಖಾನ್‍ಗೆ ತಮಿಳುನಾಡು ಮೂಲದ ಮುಸ್ಲಿಂ ಸಂಘಟನೆಯೊಂದು ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ.

    ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದ ಹಿಂದು ಹುಡುಗರ ತಂಡಕ್ಕೆ ಪ್ರತಿಕ್ರಿಯೆಯಾಗಿ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಭಾರೀ ಸುದ್ದಿಯಾಗಿದ್ದರು. ಇದೀಗ ಮುಸ್ಕಾನ್ ಧೈರ್ಯಕ್ಕೆ ಮೆಚ್ಚಿ ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ(ಟಿಎಂಎಂಕೆ) ಫಾತಿಮಾ ಶೇಖ್ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

    ಭಾರತೀಯ ಪ್ರಜೆಯಾಗಿ ತನಗೆ ನೀಡಿದ ಹಕ್ಕನ್ನು ಕಸಿದುಕೊಳ್ಳಲು ಯತ್ನಿಸಿದ ಕೇಸರಿ ದಳದ ಮುಂದೆ ನಿರ್ಭೀತಿಯಿಂದ ನಿಂತು ತನ್ನ ಹಕ್ಕನ್ನು ಪ್ರತಿಪಾದಿಸಿದ ಮುಸ್ಕಾನ್ ಅವರಿಗೆ ಫಾತಿಮಾ ಶೇಖ್ ಪ್ರಶಸ್ತಿಯನ್ನು ನೀಡಲು ಹೆಮ್ಮೆಪಡುತ್ತದೆ ಎಂದು ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ ಹೇಳಿದೆ. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

    ದೇಶದ ಮೊದಲ ಮುಸ್ಲಿಂ ಶಿಕ್ಷಕಿ ಎಂದು ಖ್ಯಾತಿಗಳಿಸಿದ್ದ ಫಾತಿಮಾ ಶೇಖ್‍ರ ಹೆಸರಿನ ಪ್ರಶಸ್ತಿಯನ್ನು ಮುಸ್ಕಾನ್‍ಗೆ ನೀಡಲಾಗುವುದು ಎಂದು ಟಿಎಂಎಂಕೆ ತಿಳಿಸಿದೆ.

  • ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

    ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

    ಮಂಡ್ಯ: ಕಾಲೇಜು ಹುಡುಗರ ಮುಂದೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಮನೆಗೆ ಜೆಡಿಎಸ್ ಮುಖಂಡ ಇಮ್ರಾನ್ ಪಾಷಾ ಭೇಟಿ ನೀಡಿ ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದಾರೆ.

    ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಹಿಂದು ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಇಂದು ಇಮ್ರಾನ್ ಪಾಷಾ ಆಕೆಯ ಮನೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

    ನಿನ್ನೆ ನಡೆದ ಘಟನೆ ಬಗ್ಗೆ ಬೇಸರವಾಗಿದೆ. ಹೀಗಾಗಿ ಇಂದು ಮುಸ್ಕಾನ್ ಮನೆಗೆ ಭೇಟಿ ನೀಡಿ ಮಾತನಾಡಿದ್ದೇನೆ. ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದೇನೆ. ಘಟನೆ ಬಗ್ಗೆ ಅವರು ಕಾನೂನಾತ್ಮಕವಾಗಿ ಯಾವುದೇ ಕ್ರಮ ತೆಗೆದುಕೊಂಡರೂ ಅವರೊಂದಿಗೆ ನಾನು ಇರುತ್ತೇನೆ ಎಂದು ಇಮ್ರಾನ್ ಪಾಷಾ ತಿಳಿಸಿದ್ದಾರೆ.

    ಮುಸ್ಕಾನ್ ಕುಟುಂಬಕ್ಕೆ ಯಾರಾದರೂ ಹಲ್ಲೆ ಅಥವಾ ತೊಂದರೆ ಕೊಡಲು ಬಂದರೆ ಪೊಲೀಸ್ ಠಾಣೆಗೆ ದೂರು ಕೊಡಲು ಹೇಳಿದ್ದೇನೆ. ಸರ್ಕಾರದ ಜೊತೆ ಮಾತನಾಡಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾನು ಇರುತ್ತೇನೆ. ಜೈ ಶ್ರೀರಾಮ್ ಎಂದು ಕೂಗುವುದರಲ್ಲಿ ತಪ್ಪೇನಿಲ್ಲ. ಆದರೆ ಆ ವಿದ್ಯಾರ್ಥಿಗಳನ್ನು ಯಾರೋ ಪ್ರಚೋದನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

    ಇದೇ ವೇಳೆ ಮುಸ್ಕಾನ್‍ಗೆ ಯೂತ್ ಐಕಾನ್ ಬಿರುದು ಹಾಗೂ ಕ್ಯಾಶ್ ಪ್ರೈಸ್ ಘೋಷಣೆ ವಿಚಾರವಾಗಿ ಮಾತನಾಡಿದ ಪಾಷಾ, ಒಳ್ಳೆಯ ಭಾವನೆ ಇಟ್ಟುಕೊಂಡು ಕೊಟ್ಟರೆ ಸರಿ. ಕೆಟ್ಟ ಉದ್ದೇಶದಿಂದ ಆ ರೀತಿ ಹಣ ನೀಡುವುದು ತಪ್ಪು. ಯಾರೂ ಮುಸ್ಕಾನ್‍ಗೆ ಹಣ ನೀಡಿಲ್ಲ. ಯಾರೋ ಬಂದು ಏನೋ ಕೊಟ್ಟರೆ ಅದನ್ನು ನೆಗೆಟಿವ್ ಆಗಿ ತೆಗೆದುಕೊಳ್ಳಬಾರದು. ಬಂದ ದುಡ್ಡನ್ನು ಬಡವರಿಗೆ ಕೊಡುತ್ತೇವೆ ಎಂದು ಮುಸ್ಕಾನ್ ಕುಟುಂಬ ಹೇಳಿದೆ ಎಂದು ಇಮ್ರಾನ್ ಪಾಷಾ ತಿಳಿಸಿದ್ದಾರೆ.

  • ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

    ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

    ಮಂಡ್ಯ: ಹಿಜಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಈಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಹುಡುಗುರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರೆ ಮುಸ್ಕಾನ್‌ ಎಂಬ ವಿದ್ಯಾರ್ಥಿನಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದಾಳೆ.

    ವಿದ್ಯಾರ್ಥಿನಿ ಹೇಳಿದ್ದೇನು?
    ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿತು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಉಳಿದ 90 ಪ್ರತಿಶತ ಯುವಕರು ಹೊರಗಿನಿಂದ ಬಂದವರಾಗಿದ್ದರು. ಇದನ್ನೂ ಓದಿ: ಹಿಜಬ್-ಕೇಸರಿ ಶಾಲು ವಿವಾದ ಮಕ್ಕಳಲ್ಲಿ ವಿಷ ಬೀಜ ಬಿತ್ತನೆ, ದೇಶಕ್ಕೆ ಮಾರಕ: ಸಚಿವ ಮುನಿರತ್ನ

    ಶಿಕ್ಷಣವೇ ನಮ್ಮ ಆದ್ಯತೆ. ಆದರೆ ಅವರು ಅದನ್ನೂ ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಒಂದು ತುಂಡು ಬಟ್ಟೆ ವಿಚಾರಕ್ಕೆ ನಮ್ಮ ಶಿಕ್ಷಣ ಹಾಳುಮಾಡಲು ಯತ್ನಿಸುತ್ತಿದ್ದಾರೆ. ನಾವು ಯಾವಾಗಲೂ ಬುರ್ಕಾ ಮತ್ತು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದೆವು. ಕಾಲೇಜಿಗೆ ಬಂದಾಗ ಬುರ್ಕಾ ತೆಗೆದು, ಹಿಜಬ್ ಮಾತ್ರ ಹಾಕಿಕೊಂಡು ತರಗತಿಯಲ್ಲಿ ಕೂರುತ್ತಿದ್ದೆವು. ಯಾವಾಗಲೂ ಇದಕ್ಕೆ ವಿರೋಧ ಇರಲಿಲ್ಲ. ಆದರೆ ಒಂದು ವಾರದಿಂದ ಹಿಜಬ್‌ಗೂ ವಿರೋಧ ವ್ಯಕ್ತಪಡಿಸಲಾಗುತ್ತಿದೆ.

    ಹಿಜಬ್ ನಮ್ಮ ಭಾಗವೇ ಆಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರೂ ಇದಕ್ಕೆ ಯಾವುದೇ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿಲ್ಲ. ಹೊರಗಿನವರು ಪ್ರತಿರೋಧ ವ್ಯಕ್ತಪಡಿಸಲು ಶುರು ಮಾಡಿದ್ದಾರೆ. ಬುರ್ಕಾವನ್ನು ಹಾಕಿ ಬರಬೇಡಿ ಎಂದು ನಮ್ಮ ಪ್ರಾಂಶುಪಾಲರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?

    ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಒಂದು ಭಾಗ ಹಿಜಬ್. ನಾವು ಹಿಜಬ್‌ಗಾಗಿ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ನಾವಿಲ್ಲಿ ಸುರಕ್ಷಿತವಾಗಿದ್ದೇವೆ. ನಾವು ನಿಮ್ಮೊಟ್ಟಿಗಿದ್ದೇವೆ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಘಟನೆ ಕುರಿತು ಮಾತನಾಡಿದ್ದಾರೆ.