Tag: ಮಂಡ್ಯ

  • ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಮಂಡ್ಯ: ಮಂಡ್ಯದ (Mandya) ಮಳವಳ್ಳಿ (Malavalli) ತಾಲೂಕಿನ ಗಗನಚುಕ್ಕಿ ಜಲಪಾತೋತ್ಸವ (Gaganachukki Jalapathotsava) ವೈಭವೋಪೇವಾಗಿ ನಡೆಯಿತು. ಒಂದೆಡೆ ಜಗಮಗಿಸೋ ಲೈಟಿಂಗ್‌ನಲ್ಲಿ ಧುಮ್ಮಿಕ್ಕುತ್ತಿದ್ದ ಕಾವೇರಿ ಮಾತೆ ಕಂಗೊಳಿಸುತ್ತಿದ್ರೆ, ಮತ್ತೊಂದೆಡೆ ಗಾಯಕರ ಗಾನಸುಧೆ ಹಾಗೂ ನಟಿಯರ ನೃತ್ಯಕ್ಕೆ ಜನರು ಹುಚ್ಚೆದ್ದು ಕುಣಿದರು.

    ಎರಡು ದಿನಗಳ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ವಿದ್ಯುತ್ ಬೆಳಕಿನಲ್ಲಿ ಕಂಗೊಳಿಸುತ್ತಿದ್ದ ಕಾವೇರಿ ಮಾತೆಯನ್ನ ಕಣ್ತುಂಬಿಕೊಂಡರು. ಇನ್ನು 300 ಅಡಿ ಎತ್ತರದಿಂದ ಧುಮ್ಮುಕ್ಕುವ ಗಗನಚುಕ್ಕಿ ಜಲಪಾತಕ್ಕೆ ವಿವಿಧ ಬಗೆಯ ದೀಪಾಲಂಕಾರಗಳಿಂದ ಶೃಂಗಾರಿಸಲಾಗಿತ್ತು. ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದ ಕಾವೇರಿ, ಬಣ್ಣಬಣ್ಣದ ಲೈಟಿಂಗ್ಸ್‌ನಿಂದಾಗಿ ಮತ್ತಷ್ಟು ವರ್ಣರಂಜಿತವಾಗಿತ್ತು. ಈ ದೃಶ್ಯ ಕಂಡು ಪ್ರವಾಸಿಗರು ಫಿದಾ ಆದರು. ಇದನ್ನೂ ಓದಿ: ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಮೊಹಾಂತಿ ಪ್ರಗತಿ ಪರಿಶೀಲನೆ ಸಭೆ – ತನಿಖೆಯ ವೇಗ ಹೆಚ್ಚಿಸುವಂತೆ ಸೂಚನೆ

    ಮತ್ತೊಂದೆಡೆ ಜಲಪಾತೋತ್ಸವದ ಎರಡನೇ ದಿನವೂ ವೇದಿಕೆ ಕಾರ್ಯಕ್ರಮದಲ್ಲಿ ನಡೆದ ಸಂಗೀತ ರಸಸಂಜೆ ಪ್ರೇಕ್ಷಕರನ್ನ ಹುಚ್ಚೆದ್ದು ಕುಣಿಸಿತು. ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗಾನಸುಧೆಗೆ ಜನರು ಶಿಳ್ಳೆ, ಚಪ್ಪಾಳೆಯೊಂದಿಗೆ ಹುಚ್ಚೆದ್ದು ಕುಣಿದರೆ, ನಟಿಯರಾದ ಹರ್ಷಿಕಾ ಪೂಣಚ್ಚ, ಭಾವನ ರಾವ್ ನೃತ್ಯನೋಡಿ ಫುಲ್ ಖುಷಿಪಟ್ಟರು. ಇದಕ್ಕೂ ಮೊದಲು ಗಂಗಾವತಿ ಪ್ರಾಣೇಶ್ ಕಾಮಿಡಿ ಜನರನ್ನ ಮತ್ತಷ್ಟು ರಂಜಿಸಿತು. ಇದನ್ನೂ ಓದಿ: ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ; ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

    ಇನ್ನು ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದರು. ಅಲ್ಲದೇ ಸಚಿವ ಚಲುವರಾಯಸ್ವಾಮಿ, ಶಾಸಕರಾದ ನರೇಂದ್ರಸ್ವಾಮಿ, ಗಣಿಗ ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಲಿಗೌಡ, ಕೆ.ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾವೇರಿ ಆರತಿ ಮಾಡಲು ನಿರ್ಧಾರ ಮಾಡಿದ್ದೇವೆ. ಆದರೆ ಕೆಲವರು ಕೋರ್ಟ್ಗೆ ಹೋಗಿರುವುದರಿಂದ ತಡವಾಗಿದೆ. ಪ್ರಾರ್ಥನೆ, ಪೂಜೆ ಮಾಡಲು ಯಾರು ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: India vs Pakistan: ಟಾಸ್‌ ಬಳಿಕ ಪಾಕ್‌ ನಾಯಕನಿಗೆ ಹ್ಯಾಂಡ್‌ಶೇಕ್‌ ಮಾಡದ ಸೂರ್ಯಕುಮಾರ್‌ ಯಾದವ್‌

    ಒಟ್ಟಿನಲ್ಲಿ ಎರಡು ದಿನಗಳಲ್ಲಿ ಅದ್ಧೂರಿಯಾಗಿ ನಡೆದ ಜಲಪಾತೋತ್ಸವಕ್ಕೆ ವರ್ಣರಂಜಿತ ತೆರೆಬಿತ್ತು. ಸಾಗರೋಪಾದಿಯಲ್ಲಿ ಬಂದಿದ್ದ ಜನರು ಫುಲ್ ಎಂಜಾಯ್ ಮಾಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಮನೆಗೆ ನುಗ್ಗಿ ಹೊಡಿತೀವಿ: ಪ್ರಮೋದ್ ಮುತಾಲಿಕ್

  • ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

    ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

    ಮೈಶುಗರ್ ಸಕ್ಕರೆ ಕಾರ್ಖಾನೆಗೆ ಬಾಯ್ಲರ್ ಹೌಸ್: ಸಿದ್ದರಾಮಯ್ಯ

    ಮಂಡ್ಯ: ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದಾರೆ.

    ಮೇಕೆದಾಟು ಯೋಜನೆಗೆ ಅನಗತ್ಯವಾಗಿ ತಕರಾರು ಮಾಡಬೇಡಿ. ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು. ಯೋಜನೆ ನಿರ್ಮಾಣವಾದರೆ ತಮಿಳುನಾಡು ಹಾಗೂ ಕರ್ನಾಟಕ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ. ಮೇಕೆದಾಟು ಯೋಜನೆ ಜಾರಿಯಾದರೆ, 66 ಟಿಎಂಸಿ ನೀರನ್ನು ನಾವು ಶೇಖರಣೆ ಮಾಡಿಕೊಳ್ಳಬಹುದು. ಅಗತ್ಯ ಬಿದ್ದಾಗ ಈ ನೀರನ್ನು ನಾವು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

    ಒಪ್ಪಂದದ ಪ್ರಕಾರ ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು. ಪ್ರಸಕ್ತ ಸಾಲಿನಲ್ಲಿ ಈವರೆಗೆ 98 ಟಿಎಂಸಿ ನೀರು ಹರಿಸಬೇಕಿತ್ತು. ಉತ್ತಮ ಮಳೆಯಾಗಿರುವುದರಿಂದ 221 ಟಿಎಂಸಿ ನೀರನ್ನು ಹರಿಸಿದ್ದೇವೆ. ಹೆಚ್ಚುವರಿಯಾಗಿ 122 ಟಿಎಂಸಿ ನೀರು ಹರಿಸಿದ್ದೇವೆ. ಹಾಗಾಗಿ, ನೀರಿನ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

    ಮೈಶುಗರ್‌ ಕಾರ್ಖಾನೆ ಬಗ್ಗೆ ಮಾತನಾಡಿ, ರೈತರ ಜಿಲ್ಲೆಯಾಗಿರುವ ಮಂಡ್ಯದಲ್ಲಿ ಸರ್ಕಾರ ಸ್ವಾಮ್ಯದಲ್ಲಿ ನಡೆಯುತ್ತಿರುವ ಸಕ್ಕರೆ ಕಾರ್ಖಾನೆ ಲಾಭದಾಯಕವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ಮೈಶುಗರ್ ಕಾರ್ಖಾನೆಗೆ ಬಾಯ್ಲರ್ ಹೌಸ್ ನೀಡಲಾಗುವುದು. ಈಗಾಗಲೇ ಮೈಶುಗರ್ ಕಾರ್ಖಾನೆಯ ಅಭಿವೃದ್ಧಿಗಾಗಿ 112 ಕೋಟಿ ರೂ. ಅನುದಾನ ನೀಡಲಾಗಿದೆ. ಸಚಿವರು ಹಾಗೂ ಶಾಸಕರು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಲಾಭದಾಯಕವಾಗಿ ನಡೆಯುವ ರೀತಿ ಯೋಜಿಸಬೇಕು ಎಂದಿದ್ದಾರೆ.

  • ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌

    ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌

    ಮಂಡ್ಯ: ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸಿಎಂ ಹಾಗೂ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆ ಶಿವಪುರ ನಿವಾಸಿ ಜ್ಯೋತಿ ಅವರ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮದ್ದೂರು‌ ಠಾಣೆಯ ಇನ್‌ಸ್ಪೆಕ್ಟರ್‌ ಶಿವಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ವಿಚಾರವಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವಕ್ಕೆ ಉತ್ತೇಜನ ನೀಡುವ ಆರೋಪದಲ್ಲಿ ಎಫ್‌ಐಆರ್‌ ಆಗಿದೆ.

    ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿತ್ತು. ಈ ಘಟನೆ ಉದ್ವಿಗ್ನತೆಗೆ ಕಾರಣವಾಗಿತ್ತು. ಮಾರನೇ ದಿನ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು. ಆಗ ಮಹಿಳೆ ಜ್ಯೋತಿ ಕೂಡ ಲಾಠಿ ಏಟು ತಿಂದಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

  • ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬೆಂಗಳೂರು: ಮದ್ದೂರು (Maddur) ಈಗ ಶಾಂತವಾಗಿದೆ. ಬಿಜೆಪಿ (BJP) ಅವರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಮದ್ದೂರು ಗಲಾಟೆ (Maddur Stone Pelting) ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗ ಎಲ್ಲವೂ ಶಾಂತವಾಗಿದೆ. ಆರಂಭದಲ್ಲಿ ಆದ ಘಟನೆ ಬಗ್ಗೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೂ ಬಿಜೆಪಿಯವರು ಬಂದ್ ಮಾಡಿದ್ದಾರೆ. ಅವರು ವಾತಾವರಣವನ್ನು ಕಲುಷಿತ ಮಾಡಲು ಹೀಗೆ ಮಾಡಿದ್ರಾ? ಇವರ ಉದ್ದೇಶ ಕೋಮು ಸಂಘರ್ಷ ಸೃಷ್ಟಿ ಮಾಡೋಕೆ ಮಾಡಿದ್ರಾ ಅಂತಾ ಅವರೇ ಯೋಚನೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

    ನಾವು ಕ್ರಮ ತೆಗೆದುಕೊಳ್ಳಲು ನಿಧಾನ ಮಾಡಿದ್ರೆ ಅವರು ಮಾಡಿದ್ದರಲ್ಲಿ ಅರ್ಥ ಇದೆ. ಕ್ರಮ ತೆಗೆದುಕೊಂಡ ಮೇಲೂ ಬಾಯಿಗೆ ಬಂದ ಹಾಗೆ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದಾರೆ ಅಂದ್ರೆ ಮಂಡ್ಯ ಜಿಲ್ಲೆಯ ಶಾಂತಿ ಕದಡಲು ತಾನೇ?ಮಳವಳ್ಳಿ ಬಂದ್ ಏನಾಗಿದೆ? ಒಂದು ಅಂಗಡಿ ಮುಚ್ಚಿಲ್ಲ. ಬಿಜೆಪಿ ಅವರು ಮಂಡ್ಯಗೆ ಇಂತಹ ವಿಷಯಕ್ಕೆ ಬರಬೇಡಿ. ಇಂತಹ ವಿಷಯಗಳನ್ನ ಇಟ್ಟುಕೊಂಡು ಅಶಾಂತಿ ನಿರ್ಮಾಣ ಮಾಡೋಕೆ ಬರಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

    ಸಿ.ಟಿ ರವಿ ಮೇಲೆ ಎಫ್‌ಐಆರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಮಂತ್ರಿ ಆಗಿದ್ದವರು. ಕಾಲು ಮುರಿಯುತ್ತೀವಿ, ಕೈ ಮುರಿತೀವಿ ಅಂದರೆ ಹೇಗೆ? ಸಿ.ಟಿ ರವಿ ಇನ್ನು ಕಲಿಯೋ ಹಾಗೇ ಕಾಣುತ್ತಿಲ್ಲ. ಕಾನೂನು ಇರೋದು ಕ್ರಮ ತೆಗೆದುಕೊಳ್ಳೋಕೆ. ಘಟನೆ ಆಗಿರೋದು ಸತ್ಯ, ಕ್ರಮ ಆಗಿದೆ. ಇದು ಪೂರ್ವ ನಿಯೋಜನೆನಾ ಅಲ್ಲವಾ ಎಂದು ತನಿಖೆ ಆಗಬೇಕು. ನಮ್ಮ ಹುಡುಗರ ಮೇಲೆ ಕ್ರಮ ಆಗಲಿ ಅಂತ ಆ ಸಮುದಾಯದವರು ಹೇಳಿದ್ದಾರೆ. ಬುಧವಾರ ಗಣೇಶ ವಿಸರ್ಜನೆಯಲ್ಲಿ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಮಸೀದಿ ಮುಂದೆಯೇ ಹೋಗಿದ್ದಾರೆ ಎಂದರು. ಇದನ್ನೂ ಓದಿ: Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

  • ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

    ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

    ಮಂಡ್ಯ: ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟವಾದ ಮೂರು ದಿನಗಳ ಬಳಿಕ ಮದ್ದೂರು (Maddur) ಪಟ್ಟಣ ಸಹಜ ಸ್ಥಿತಿಯತ್ತ ಮರಳುತ್ತಿದೆ.

    ಭಾನುವಾರ (ಸೆ.7) ರಾತ್ರಿ ಗಣೇಶ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಕಳೆದ ಮೂರು ದಿನಗಳಿಂದ ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.ಇದನ್ನೂ ಓದಿ: ಮದ್ದೂರಿನಲ್ಲಿ ʼಕೇಸರಿʼ ಘರ್ಜನೆ; ಬಿಜೆಪಿ-ಜೆಡಿಎಸ್ ಒಗ್ಗೂಡಿ ಗಣೇಶ ಮೆರವಣಿಗೆ – ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ

    ಸೋಮವಾರ (ಸೆ.8) ಕಲ್ಲು ತೂರಾಟ ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಅದಾದ ಬಳಿಕ ಈ ಘಟನೆಯನ್ನು ಖಂಡಿಸಿ ಮಂಗಳವಾರ (ಸೆ.9) ಮದ್ದೂರು ಬಂದ್‌ಗೆ ಕರೆ ನೀಡಲಾಗಿತ್ತು. ವರ್ತಕರು ಬೆಂಬಲ ಸೂಚಿಸಿದ ಪರಿಣಾಮ ಬಂದ್ ಯಶಸ್ವಿಯಾಗಿತ್ತು. ಬುಧವಾರ (ಸೆ.11) ಮದ್ದೂರು ಪಟ್ಟಣದಲ್ಲಿ ಬಿಗಿಭದ್ರತೆಯೊಂದಿಗೆ ಸಾಮೂಹಿಕ ಬೃಹತ್ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯಿತು. ಹೀಗಾಗಿ ಮೂರು ದಿನಗಳ ಕಾಲ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳು ತೆರದಿರಲಿಲ್ಲ.

    ಗುರುವಾರ (ಸೆ.11) ಮೂರು ದಿನಗಳ ಬಳಿಕ ಮದ್ದೂರು ಪಟ್ಟಣದಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಇನ್ನೂ ಎಂದಿನಂತೆ ವಾಹನ ಸಂಚಾರ ಕೂಡ ಆರಂಭವಾಗಿದೆ. ಭದ್ರತಾ ದೃಷ್ಟಿಯಿಂದ ಮದ್ದೂರು ಪಟ್ಟಣದಲ್ಲಿ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಇದನ್ನೂ ಓದಿ: ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

  • ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

    ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

    ಮಂಡ್ಯ: ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ ರವಿ (CT Ravi) ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.

    ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದ್ದೂರಿನಲ್ಲಿ ʼಕೇಸರಿʼ ಘರ್ಜನೆ; ಬಿಜೆಪಿ-ಜೆಡಿಎಸ್ ಒಗ್ಗೂಡಿ ಗಣೇಶ ಮೆರವಣಿಗೆ – ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ

    ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.

    ಸಿಟಿ ರವಿ ಹೇಳಿದ್ದೇನು?
    ಅವರು 5% ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ. ಇನ್ನೂ 50% ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ? ಸಮಾಜ ಒಡೆಯುತ್ತಾರೆ. ಕೆಲವು ಕುತಂತ್ರಿಗಳು ವೋಟಿನ ಆಸೆಗಾಗಿ ಹಿಂದೂ ಸಮಾಜವನ್ನು ಒಡೆಯುತ್ತಾರೆ. ಮುಸಲ್ಮಾನರು ಪಾಕಿಸ್ತಾನ ಜಿಂದಾಬಾದ್, ಬಾಂಬ್ ಹಾಕಿದರೂ ಕೂಡ ಎಸ್‌ಎಸ್ ಅಂತಾರೆ. ಮುಸಲ್ಮಾನರು ರಾಮಮಂದಿರದಲ್ಲಿ ಪೆಟ್ರೋಲ್ ಬಾಂಬ್ ಹಾಕಿದ್ದಾಗಲೇ ಇವರಿಗೆ ಬುದ್ಧಿ ಕಲಿಸಬೇಕಾಗಿತ್ತು. ಈಗ ಈ ರೀತಿ ಆಗುತ್ತಿರಲಿಲ್ಲ.

    ನೀವು ಹೊರಗಡೆಯಿಂದ ಬಂದವರು, ನಾವು ಇಲ್ಲೇ ಇರುವವರು, ತೊಡೆ ತಟ್ಟೋಕೆಲಸ ಮಾಡಬೇಡಿ. ತೊಡೆ ಮುರಿತೀವಿ. ತಲೆನೂ ತೆಗಿತೀವಿ, ನಮಗೆ ತೊಡೆ ಮುರಿಯೋದು ಗೊತ್ತು. ಕಲ್ಲು ಹೊಡೆಯುವವರನ್ನು ಕಲ್ಲಿನ ಒಳಗಡೆ ಸಮಾಧಿ ಮಾಡೋ ತಾಕತ್ತು ಹಿಂದೂ ಸಮಾಜಕ್ಕಿದೆ ಎಂದು ಹೇಳಿದ್ದರು.ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ

  • ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ

    ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ

    ಮಂಡ್ಯ: ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ (Mandya) ಸಂಸದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮದ್ದೂರಿಗೆ (Maddur) ಭೇಟಿ ನೀಡಲಿದ್ದಾರೆ.

    ಸದ್ಯ ಹೆಚ್‌ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ (Vice President) ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕ್ರಮ ಮುಗಿಸಿಕೊಂಡು ಸೆ.12ರಂದೇ ಬೆಂಗಳೂರಿಗೆ (Bengaluru) ವಾಪಸ್ ಆಗಲಿದ್ದಾರೆ. ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

    ಮದ್ದೂರಿನಲ್ಲಿ ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಎಸ್ಪಿ, ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.

    ಮದ್ದೂರಿನಲ್ಲಿ ಆಗಿದ್ದೇನು?
    ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯ ನಿವಾಸಿಗಳು ಭಾನುವಾರ (ಸೆ.7) ರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

  • ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

    ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

    – ಬೆಳಗ್ಗೆ 10:30 ರಿಂದ ಮೆರವಣಿಗೆ ಆರಂಭ
    – ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ಮಂಡ್ಯ: ಮದ್ದೂರಿನಲ್ಲಿಂದು (Madduru) ಸಾಮೂಹಿಕ ಗಣೇಶ ವಿಸರ್ಜನಾ (Ganesh Procession) ಮೆರವಣಿಗೆ ನಡೆಯಲಿದೆ. 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆ ನಡೆಯಲಿದ್ದು 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ.

    ಬೆಳಗ್ಗೆ 10:30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಈ ಕಾರಣಕ್ಕೆ ಮದ್ದೂರು, ಮಳವಳ್ಳಿ, ಮಂಡ್ಯ ತಾಲೂಕಿನಲ್ಲಿ ಇಂದು ಮದ್ಯ ಮಾರಾಟ, ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ.

    ಮದ್ದೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಗಳನ್ನು ಗ್ರಾಮಕ್ಕೆ ತರುವಂತೆ ಕರೆ ನೀಡಲಾಗಿದೆ. ನಂತರ ಕಾಶಿ ವಿಶ್ವಾನಾಥ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಲಿದೆ.

    ಈ ಮೆರವಣಿಗೆ ಹೊಳೆಬೀದಿ, ಪೇಟೇಬೀದಿ , ಟಿಬಿ ಸರ್ಕಲ್, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚರಿಸಿ ಕೊಲ್ಲಿ ಸರ್ಕಲ್‌ನಲ್ಲಿ ಅಂತ್ಯವಾಗಲಿದೆ. ಬಳಿಕ ಹೊಳೆ ಆಂಜನೇಯ ದೇವಾಲಯ ಬಳಿಯ ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಇದನ್ನೂ ಓದಿ: ಇದನ್ನೂಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

     

    ಮದ್ದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲು ಸಂಘಟನೆಗಳು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 5 ಮಂದಿ ಎಸ್ಪಿ, 4 ಮಂದಿ ಎಎಸ್ಪಿ ಸೇರಿದಂತೆ ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನ ನಡೆಯದೇ ಇರಲು ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಹಾಸನ ಸೇರಿ ಹಲವು ಜಿಲ್ಲೆ ಪೊಲೀಸರು ಮದ್ದೂರಿಗೆ ಆಗಮಿಸಿದ್ದಾರೆ. ಕೆಎಸ್ಆರ್‌ಪಿ, ಡಿಎಆರ್ ತುಕಡಿ, ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಸಹ ನಗರಕ್ಕೆ ಬಂದಿದೆ. ಇದನ್ನೂ ಓದಿ: ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು: `ಕೈ’ ಶಾಸಕ ಸಂಗಮೇಶ್

    ಮದ್ದೂರಿಗೆ ಬಿಜೆಪಿ ನಾಯಕರು
    ಇಂದು ಮದ್ದೂರಿಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ, ಛಲವಾದಿ ನಾರಾಯಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ನಾಯಕರು ಆಗಮಿಸಲಿದ್ದಾರೆ.

    ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ‌ ಭಾಗಿಯಾಗುವುದಕ್ಕೂ ಮೊದಲು ಕಲ್ಲೆಸೆತದಲ್ಲಿ ಗಾಯಗೊಂಡವರ ಮನೆಗೆ ಭೇಟಿ ನೀಡಿ ಸ್ಥಳೀಯರಿಗೆ ಧೈರ್ಯ ತುಂಬಲಿದ್ದಾರೆ. ನಂತರ ಲಾಠಿ ಚಾರ್ಜ್ ವೇಳೆ ಗಾಯಗೊಂಡವರ ಮನೆಗಳಿಗೂ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ.

  • ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

    ಮಂಡ್ಯ: ಗಣೇಶ ಮೆರವಣಿಗೆ (Ganesha Procession) ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ (Stone Pelting) ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು (Maddur) ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಟ್ಣದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.

    ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳ ಕಲ್ಲುತೂರಾಟ ಖಂಡಿಸಿ ಮದ್ದೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಂದ್‌ಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸ್ವಯಂಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಬಾಗಿಲು ಮುಚ್ಚಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮೆಡಿಕಲ್ ಸ್ಟೋರ್, ಹಾಲಿನ ಬೂತ್ ಹಾಗೂ ತರಕಾರಿ ಅಂಗಡಿಗಳ ಹೊರತುಪಡಿಸಿದರೆ ಉಳಿದೆಲ್ಲಾ ವ್ಯಾಪಾರ-ವಹಿವಾಟು ನಿಲ್ಲಿಸಿ ಮದ್ದೂರು ಜನತೆ ಬಂದ್‌ಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಇನ್ನೂ ಮದ್ದೂರು ಬಂದ್ ಹಿನ್ನೆಲೆ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಟೌನ್ ರೌಂಡ್ಸ್ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶಗಳಾದ ರಾಮ್ ರಹೀಮ್ ನಗರ, ಸಿದ್ಧಾರ್ಥನಗರ, ಚನ್ನೇಗೌಡ ಬಡಾವಣೆಯಲ್ಲೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 4 ಎಸ್ಪಿ, 4 ಅಡಿಷನಲ್ ಎಸ್ಪಿ, 15 ಡಿವೈಎಸ್‌ಪಿ, 35 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್, 10 ಡಿಆರ್, 15 ಕೆಎಸ್‌ಆರ್‌ಪಿ ತುಕಡಿ ಸೇರಿ ಒಟ್ಟು 1500 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆ, ರ‍್ಯಾಲಿ ನಡೆಸದಂತೆ ಸೂಚನೆ ನೀಡಲಾಗಿದ್ದು, ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

    ಈ ವೇಳೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಭಾನುವಾರ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ನಿನ್ನೆ ಹಲವು ಸಂಘಟನೆಗಳು ಪ್ರತಿಭಟನೆ ಮಾಡಿವೆ. ಇಂದು ಮದ್ದೂರು ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿದ್ದೇವೆ. ನಿಷೇಧಾಜ್ಞೆ ಸಹ ಜಾರಿ ಮಾಡಿದ್ದೇವೆ. ಬಂದ್ ಬಳಸಿಕೊಂಡು ಕಿಡಿಗೇಡಿಗಳು ಬಂಧಿತರ ಬಗ್ಗೆ ನಾವು ಇನ್ನೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ. 26 ಜನರನ್ನು ನಾವು ಲಿಸ್ಟ್ ಮಾಡಿದ್ದೇವೆ. ಈ ಪೈಕಿ 22 ಮಂದಿಯನ್ನು ಬಂಧನ ಮಾಡಿದ್ದೇವೆ. ಇನ್ನೂ 4 ಜನರನ್ನು ಬಂಧಿಸಬೇಕಾಗಿದೆ. ನಾಲ್ವರು ತಲೆಮರಿಸಿಕೊಂಡಿದ್ದಾರೆ, ಅವರ ಹುಡುಕಾಟ ನಡೆಯುತ್ತಿದೆ. ಇನ್ನೂ ಹಲವು ಸಿಸಿ ಕ್ಯಾಮರಾ ದೃಶ್ಯ ವೀಕ್ಷಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

    ಒಟ್ಟಾರೆ ಮೊನ್ನೆ ನಡೆದ ಘಟನೆಯಿಂದಾಗಿ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಸರ್ಕಾರ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸದಿದ್ದರೇ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಮದ್ದೂರು ಗಲಾಟೆ | ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ: ಸಿದ್ದರಾಮಯ್ಯ

  • ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೊಲೀಸರು ಪೌರುಷ ತೋರಿಸಲಿ – ಅಶ್ವಥ್ ನಾರಾಯಣ

    ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೊಲೀಸರು ಪೌರುಷ ತೋರಿಸಲಿ – ಅಶ್ವಥ್ ನಾರಾಯಣ

    ಮಂಡ್ಯ: ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ (Ashwath Narayana) ಆಗ್ರಹಿಸಿದರು.

    ಮದ್ದೂರು (Maddur) ಕಲ್ಲು ತೂರಾಟ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಕ್ಕಾಗಿ ಪ್ರತಿಭಟಿಸಿದ ಹಿಂದೂಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ. ಪೊಲೀಸ್ ಇಲಾಖೆ ಸರ್ಕಾರದ ಓಲೈಕೆಗಷ್ಟೇ ಸೀಮಿತವಾಗಿದೆ. ಪೋಸ್ಟಿಂಗ್ ಸಲುವಾಗಿ ಪೊಲೀಸ್ ಇಲಾಖೆ ಓಲೈಕೆಗಿಳಿದಿದೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಈ ವ್ಯವಸ್ಥೆ ಮೇಲೆ ಜನರು ವಿಶ್ವಾಸ ಕಳ್ಕೊಂಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸತ್ತು ಹೋಗಿದೆ, ಅಮಾಯಕರು ಬಲಿಯಾಗ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ: ಬಸವರಾಜ ಬೊಮ್ಮಾಯಿ ಕಿಡಿ

    ಇನ್ನೂ ಅನ್ಯಧರ್ಮದ ವ್ಯಕ್ತಿಗಳು ಮತ್ತು ಸಮುದಾಯದವರು ಗಣೇಶೋತ್ಸವದ ಮೆರವಣಿಗೆ, ಹಿಂದೂ ಸಂಸ್ಕೃತಿ ಅರ್ಥ ಮಾಡಿಕೊಳ್ಳಬೇಕು. ಇತರ ಧರ್ಮದ ಆಚರಣೆಗೆ ಗೌರವ ಕೊಡಬೇಕು, ಒಪ್ಕೋಬೇಕು. ನಾವು ಇರಾನ್, ಪಾಕಿಸ್ತಾನ, ಸೌದಿಯಲ್ಲಿಲ್ಲ. ಭಾರತದಲ್ಲಿದ್ದೇವೆ. ಭಾರತದ ಸಂಸ್ಕೃತಿ, ಆಚರಣೆಗೆ ಅವಕಾಶವೇ ಇಲ್ಲದಂತಾಗಿದೆ. ಇದು ಪದೇ ಪದೇ ಅತಿರೇಕಕ್ಕೆ ಹೋಗ್ತಿದೆ. ಮೊನ್ನೆ ಇದೇ ಸ್ಥಳದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಆಗ ಹಿಂದೂಗಳು ಕಲ್ಲೆಸೆದಿದ್ರಾ ಎಂದು ಆಕ್ರೋಶ ಹೊರಹಾಕಿದರು.

    ಇದೇ ವೇಳೆ ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನು ಕುಮ್ಮಕ್ಕು ಕೊಟ್ಟಿದ್ದೀವಿ? ನಿಮಗೆ ಬುದ್ಧಿ ಕೆಟ್ಟಿದೆಯಾ? ನೀವು ಹೇಗೆ ಈ ಥರ ಮಾತಾಡ್ತೀರಿ? ಗಣೇಶ ಹಬ್ಬಕ್ಕೆ ನಮ್ಮ ಕುಮ್ಮಕ್ಕೇನಿರುತ್ತೆ? ಚಲುವರಾಯಸ್ವಾಮಿ ದುರಹಂಕಾರದ ಮಾತುಗಳನ್ನು ಬಿಡಲಿ. ಮೂಲೆಗೆ ಸೇರಿದ್ರು ಈಗ ಮತ್ತೆ ಮೂಲೆಗೆ ಸೇರುತ್ತೀರಾ? ಈ ರೀತಿ ಅಹಂಕಾರದ ಮಾತು ಬಿಟ್ಟು ಜವಾಬ್ದಾರಿ ನಿಭಾಯಿಸಿ ಎಂದರು.ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ